Tag: Police Commissioner

  • ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ – ಬಂಧಿತರು ದರ್ಶನ್‌ ಅಭಿಮಾನಿಗಳೇ‌ ಅಂತ ಪರಿಶೀಲಿಸ್ತಿದ್ದೇವೆ: ಸೀಮಂತ್‌ ಕುಮಾರ್‌ ಸಿಂಗ್‌

    ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ – ಬಂಧಿತರು ದರ್ಶನ್‌ ಅಭಿಮಾನಿಗಳೇ‌ ಅಂತ ಪರಿಶೀಲಿಸ್ತಿದ್ದೇವೆ: ಸೀಮಂತ್‌ ಕುಮಾರ್‌ ಸಿಂಗ್‌

    ಬೆಂಗಳೂರು: ನಟಿ ರಮ್ಯಾ ಕುರಿತು ಅಶ್ಲೀಲ ಕಾಮೆಂಟ್ಸ್‌ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನ ಬಂಧಿಸಿರುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ (Seemanth Kumar Singh) ತಿಳಿಸಿದ್ದಾರೆ.

    ಮಾತನಾಡಿದ ಅವರು, ನಟಿ ರಮ್ಯಾ (Actress Ramya) ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ (Social Media) ಅಶ್ಲೀಲ ಕಾಮೆಂಟ್‌ ಮಾಡಿದ ಇಬ್ಬರು ಕಿಡಿಗೇಡಿಗಳನ್ನ ಬಂಧಿಸಲಾಗಿದೆ. 11 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    ಸೋಷಿಯಲ್‌ ಮೀಡಿಯಾ ಕಾಮೆಂಟ್ಸ್‌ ವೆರಿಫೈ ಮಾಡಿದ್ದೇವೆ
    ರಮ್ಯಾ ದೂರಿನನ್ವಯ ಸಿಸಿಬಿಯವರು ಹಲವರನ್ನ ಗುರುತಿಸಿದ್ದಾರೆ. ಕೆಲವರ ಸ್ಪಷ್ಟ ಮಾಹಿತಿ ಸಿಕ್ಕಿದೆ, ಇಬ್ಬರನ್ನ ಅರೆಸ್ಟ್ ಮಾಡಿದ್ದೇವೆ. ಇನ್ನೂ ಹನ್ನೊಂದು ಜನರ ಮಾಹಿತಿ ಸಿಕ್ಕಿದ್ದು ತನಿಖೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಲಾಗಿದ್ದ ಕಾಮೆಂಟ್‌ಗಳನ್ನೂ ವೆರಿಫೈ ಮಾಡಿದ್ದೇವೆ. 13 ಜನರ ಪೈಕಿ ಇಬ್ಬರನ್ನ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾಗೆ ಅವಹೇಳನ – ಮೂವರು ಕಿಡಿಗೇಡಿಗಳು ಅರೆಸ್ಟ್‌

    ಸೈಬರ್‌ ಪೊಲೀಸರಿಗೆ ವಿಶೇಷ ತರಬೇತಿ
    ಅಲ್ಲದೇ ಬಂಧಿತರು ಯಾರ ಅಭಿಮಾನಿ ಅನ್ನೊದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾರೇ ಆಗಿರಲಿ ಅಶ್ಲೀಲ ಸಂದೇಶ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ತೀವಿ. ಈ ಬಗ್ಗೆ ಸೈಬರ್ ಪೊಲೀಸರಿಗೆ ವಿಶೇಷ ತರಬೇತಿ ನೀಡಿದ್ದೇವೆ. ಅವಹೇಳನಕಾರಿಯಾಗಿ ಯಾರೇ ಸಂದೇಶ ಹಾಕಿದ್ರೂ ಕ್ರಮ ಕೈಗೊಳ್ತೀವಿ ಅಂತ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.  ಇದನ್ನೂ ಓದಿ: `ವೇದ’ ಸಿನಿಮಾ ನೋಡಿ ಅಪ್ಪಾಜಿ ತರ ಕಾಣ್ತೀಯಾ ಅಂದಿದ್ರು – ಅತ್ತೆ ನಾಗಮ್ಮನ ನೆನೆದು ಶಿವಣ್ಣ ಭಾವುಕ

  • ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಹುಬ್ಬಳ್ಳಿ/ಧಾರವಾಡ: ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಪತ್ರ ಬರೆದಿದ್ದಾರೆ.

    ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

    ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ (ಜನ್ನತ್ ನಗರ ಧಾರವಾಡ ಸೇರಿದಂತೆ) ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 8 ಮಂದಿ ಸಜೀವ ದಹನ

    ಅವಳಿ ನಗರದಲ್ಲಿರುವ ಅಪರಿಚಿತ, ಹೊಸಮುಖದ ವ್ಯಕ್ತಿಗಳನ್ನು ವಿಚಾರಿಸಿ ಸೂಕ್ತ ಕ್ರಮ ಜರುಗಿಸಬೇಕು. ಇದರಿಂದ ಮಹಾನಗರದಲ್ಲಿ ಅಹಿತಕರ ಘಟನೆ ಆಗದಂತೆ ತಡೆಯುವ ಕೆಲಸ ಮಾಡಬೇಕೆಂದು ಶಾಸಕ ಬೆಲ್ಲದ್ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ

  • ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಬೆಂಗಳೂರು: ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು (Renukaswamy Case) ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ (Bengaluru Police Commissioner) ಬಿ.ದಯಾನಂದ್‌ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್‌ಗೆ (Speical Court) ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬಹುಪಾಲು ರಿಪೋರ್ಟ್‌ಗಳು ಚಾರ್ಜ್‌ಶೀಟ್‌ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ. ಮತ್ತಷ್ಟು ರಿಪೋರ್ಟ್‌ ಬರಬೇಕಿದೆ, ಆ ಬಳಿಕ ಕೋರ್ಟ್‌ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಇದೇ ವೇಳೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯಿ, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಅಶೋಕ್ ಆಗ್ರಹ

    ಇನ್ನೂ ನಟ ಧ್ರುವ ಸರ್ಜಾ ಮ್ಯಾನೇಜರ್ ಬಂಧನ ಪ್ರಕರಣದ ಕುರಿತು ಮಾತನಾಡಿ, ಧ್ರುವ ಸರ್ಜಾಗೆ ಹತ್ತಿರವಾಗುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಹಾಗಾಗಿ ಸರ್ಜಾ ಮ್ಯಾನೇಜರ್ ಅಶ್ವಿನ್‌ನನ್ನ ಬಂಧನ ಮಾಡಲಾಗಿತ್ತು. ಬನಶಂಕರಿ ಪೊಲೀಸರು ಬಂಧನ ಮಾಡಿದ್ದರು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

  • ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಬೆಂಗಳೂರು: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ (Puneeth Kerehalli) ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಯಿತು.

    ಹಿಂದೂ ಸಂಘಟನೆಗಳ ಒಕ್ಕೂಟದ (Federation of Hindu Organizations) ಮೋಹನ್ ಗೌಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಶುಕ್ರವಾರ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ (Mejestic Railway Station) ಟನ್‌ಗಟ್ಟಲೆ ಅಕ್ರಮವಾಗಿ ಮಾಂಸ ಬಂದಿದೆ. ಅವರ ಬಳಿ ಲೈಸೆನ್ಸ್ ಇಲ್ಲ ಎಂದು ಫುಡ್ ಕಮಿಷನರ್ ಹೇಳಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪುನೀತ್ ಕೆರೆಹಳ್ಳಿ ಮೇಲೆ 3 ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಕರ್ತವ್ಯ ಮೆರೆದವರ ಮೇಲೆ ದೂರು ದಾಖಲಾಗಿದೆ. ಹಿಂದೂಗಳ ವಾಕ್ ಸ್ವಾತಂತ್ರ್ಯವನ್ನು ಸರ್ಕಾರ ಹರಣ ಮಾಡುತ್ತಿದೆ. ದೂರುದಾರರಿಂದ ರಕ್ಷಣೆ ಇಲ್ಲದಂತಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!

    ಪ್ರಕರಣ ಏನು?
    ರಾಜಸ್ಥಾನದಿಂದ ಬೆಂಗಳೂರಿಗೆ ಮೇಕೆ, ಕುರಿ ಮಾಂಸದ ಹೆಸರಿನಲ್ಲಿ ಅಕ್ರಮವಾಗಿ ನಾಯಿ ಮಾಂಸ ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶುಕ್ರವಾರ ರೈಲಿನಲ್ಲಿ ಬಂದ 90 ಬಾಕ್ಸ್ ಮಾಂಸವನ್ನು ತಡೆಯಲಾಗಿತ್ತು. ಇದರ ಉಸ್ತುವಾರಿ ಪುನೀತ್ ಕೆರೆಹಳ್ಳಿ ವಹಿಸಿಕೊಂಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನಡುವೆ ವಾಗ್ವಾದ ಕೂಡ ನಡೆದಿತ್ತು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸರ ವಶದಲ್ಲಿದ್ದ ಪುನೀತ್ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

  • ಕೇವಲ 5 ತಿಂಗಳಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಟ್ರಾನ್ಸ್‌ಫರ್

    ಕೇವಲ 5 ತಿಂಗಳಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಟ್ರಾನ್ಸ್‌ಫರ್

    ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಕುಲ್‍ದೀಪ್ ಜೈನ್ (Kuldeep Kumar Jain Transfer) ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

    ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ (Anupam Agarwal) ಅವರನ್ನು ನೇಮಿಸಲಾಗಿದೆ. ಕೇವಲ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಡ್ರಗ್ಸ್ ಫ್ರೀ ಸಿಟಿ ಎಂಬ ಟಾಸ್ಕ್ ಹೊಂದಿದ್ದರು.

    ಡ್ರಗ್ಸ್ ವಿರುದ್ಧ ಸಮರ ಸಾರಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದರು. ಮಟ್ಕಾ, ಜೂಜು ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಿದ್ದರು. ಇದೀಗ ಅವರ ವರ್ಗಾವಣೆ ಆದೇಶದಿಂದ ಡ್ರಗ್ಸ್ ಮಾಫಿಯಾ ಹಿಂದೆ ಬಿದ್ದಿದ್ದೇ ಮುಳುವಾಯಿತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ರೆ ರೌಡಿಶೀಟ್ ಓಪನ್ – ಪೊಲೀಸ್ ಕಮಿಷನರ್ ಎಚ್ಚರಿಕೆ

    ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ರೆ ರೌಡಿಶೀಟ್ ಓಪನ್ – ಪೊಲೀಸ್ ಕಮಿಷನರ್ ಎಚ್ಚರಿಕೆ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಾಹನ ಅಡ್ಡಗಟ್ಟಿ ಗಲಾಟೆ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಕಮಿಷನರ್ (Police Commissioner) ದಯಾನಂದ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.

    ರಸ್ತೆಯಲ್ಲಿ ಕಾರು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡುತ್ತಿರುವ ಪುಂಡರ ರೌಡಿಶೀಟ್ ಓಪನ್ ಮಾಡಿ ಕಠಿಣ ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆಯನ್ನು ಕಮಿಷನರ್ ದಯಾನಂದ್ ನೀಡಿದ್ದಾರೆ. ಇದನ್ನೂ ಓದಿ: PFIಗೆ ಫಾರಿನ್ ಫಂಡಿಂಗ್ – ಮಂಗಳೂರಿನ ಮೂರು ಕಡೆ NIA ದಾಳಿ

    ಇತ್ತೀಚೆಗಷ್ಟೇ ವೈಟ್‌ಫೀಲ್ಡ್ನ ಸಿದ್ದಾಪುರದಲ್ಲಿ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಗಲಾಟೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಕಾರನ್ನು ಹಿಂಬಾಲಿಸಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದ ವೀಡಿಯೋ ವೈರಲ್ ಆಗಿತ್ತು.

    ಈ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದಲ್ಕೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿತ್ತು. ಪದೇ ಪದೆ ಇಂತಹ ಕೃತ್ಯಗಳು ಬೆಳಕಿಗೆ ಬರುತ್ತಿರುವುದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ತಡೆಯಾಜ್ಞೆ – ಗಲಭೆಗೆ ಯತ್ನಿಸಿದ 30 ಜನರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಚಕ್ಕೆ ಬೇಡಿಕೆ – ಇಬ್ಬರು ಕಾನ್ಸ್‌ಟೇಬಲ್ ಕೆಲಸದಿಂದ ವಜಾ

    ಲಂಚಕ್ಕೆ ಬೇಡಿಕೆ – ಇಬ್ಬರು ಕಾನ್ಸ್‌ಟೇಬಲ್ ಕೆಲಸದಿಂದ ವಜಾ

    ಬೆಂಗಳೂರು: ಪೊಲೀಸರಿಂದ ಸಾರ್ವಜನಿಕರ ಸುಲಿಗೆ ಪ್ರಕರಣದಲ್ಲಿ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು (Constable) ಸೇವೆಯಿಂದ ವಜಾ ಮಾಡಿ ಕಮಿಷನರ್ (Police Commissioner) ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಆಡುಗೋಡಿ ಠಾಣೆ ಕಾನ್ಸ್‌ಟೇಬಲ್ ಅರವಿಂದ್ ಹಾಗೂ ಮಾಳಪ್ಪ ಬಿ.ವಾಲಿಕಾರ್ ಲಂಚಕ್ಕೆ ಬೇಡಿಕೆ ಇಟ್ಟು ಸೇವೆಯಿಂದ ವಜಾಗೊಂಡವರು. ಚೈತ್ರ ರತ್ನಾಕರ್ ಹಾಗೂ ಚೀರಾಸ್ ಎಂಬುವವರು ಕೋರಮಂಗಲದ ನೆಕ್ಸಾಸ್ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕಾನ್ಸ್‌ಟೇಬಲ್‌ಗಳು  50 ಸಾವಿರ ರೂ. ದಂಡ ಹಾಗೂ ಎಫ್‍ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ನಂತರ ತಮಗೆ ಪರಿಚಯದ ಟೀ ಅಂಗಡಿ ಒಂದಕ್ಕೆ ಪೋನ್‍ಪೇ ಮೂಲಕ ನಾಲ್ಕು ಸಾವಿರ ರೂ.ಗಳನ್ನು ಲಂಚವಾಗಿ (Bribe) ವರ್ಗಾಯಿಸಿಕೊಂಡಿದ್ದರು. ಇದನ್ನೂ ಓದಿ: ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

    ಈ ಬಗ್ಗೆ ಚೈತ್ರ ರತ್ನಾಕರ್ ಹಾಗೂ ಚೀರಾಸ್ ಟ್ವಿಟ್ಟರ್‌ನಲ್ಲಿ ಡಿಜಿ ಹಾಗೂ ಐಜಿಪಿಗೆ ದೂರು ನೀಡಿದ್ದರು. ಡಿಸಿಪಿ (DCP) ಮಡಿವಾಳ ಅವರು ಎಸಿಪಿ (ACP) ತನಿಖೆಗೆ ಆದೇಶಿಸಿದ್ದರು. ಲಂಚ ಪಡೆದಿರುವುದು ವಿಚಾರಣೆ ವೇಳೆ ಸಾಭೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಹೆಣ್ಣಿನ ರೂಪವಷ್ಟೇ, ಅವರ ಗುಣಗಳೇ ಬೇರೆ: ರಮೇಶ್ ಜಾರಕಿಹೊಳಿ

  • ಹೊಸ ವರ್ಷಕ್ಕೆ ಬೆಂಗ್ಳೂರಲ್ಲಿ ಪೊಲೀಸ್ ರೂಲ್ಸ್ ಜಾರಿ- ಕಿರಿಕ್, ಕಿತಾಪತಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ

    ಹೊಸ ವರ್ಷಕ್ಕೆ ಬೆಂಗ್ಳೂರಲ್ಲಿ ಪೊಲೀಸ್ ರೂಲ್ಸ್ ಜಾರಿ- ಕಿರಿಕ್, ಕಿತಾಪತಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ

    ಬೆಂಗಳೂರು: ಇನ್ನೇನು ಎರಡು ದಿನದಲ್ಲಿ ನಾವು ಮತ್ತೆ ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಈ ಬಾರಿಯ ನ್ಯೂ ಇಯರ್ (New Year Celebration) ಆಚರಣೆಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲವೊಂದು ಪೊಲೀಸ್ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ರೂಲ್ಸ್ ಗಳನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

    ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy), ಈಗ ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8 ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ ಎಂದರು.

     

     

    ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ (CCTV Camera) ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.

    ವೈದ್ಯ ಇಲಾಖೆಯ ಜೊತೆ ಮಾತನಾಡಲಾಗಿದೆ. ಕೆಲವೊಂದು ಬೆಡ್ ಗಳನ್ನು ಮೀಸಲು ಮಾಡಲಾಗಿದೆ. ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಡ್ರಗ್ಸ್ ಬಗ್ಗೆಯೂ ಎಚ್ಚರಿಕೆಯನ್ನು ವಹಿಸಲಾಗಿದೆ. ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

    ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.

    ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಿ. ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ. ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು. ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.

    ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿ: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಗಳಿಗೆ (President of India) ಪೌರ ಸನ್ಮಾನ ಮಾಡುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದ ಹುಬ್ಬಳ್ಳಿ (Hubballi) ಧಾರವಾಡ ಮಹಾನಗರ ಪಾಲಿಕೆ (City Corporation) ಮೇಲಿಗ ಗಂಭೀರ ಆರೋಪ ಕೇಳಿ ಬಂದಿದೆ.

    ರಾಷ್ಟ್ರಪತಿಗಳ (President Of India) ಕಾರ್ಯಕ್ರಮಕ್ಕೆ ಹಾಕಿದ್ದ ವೇದಿಕೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೆಲ ಕಾಂಗ್ರೆಸ್ ಕಾರ್ಯಕರ್ತರು, ಪೇ ಸಿಎಂ (PayCM) ಅಭಿಯಾನದ ಮಾದರಿಯಲ್ಲಿ ಪೇ ಮೆಯರ್ (Pay Mayor) ಅಭಿಯಾನ ಆರಂಭಿಸಿದ್ದಾರೆ. ಈ ಪರಿಣಾಮ ಹುಬ್ಬಳ್ಳಿ ಪ್ರಮುಖ ವೃತ್ತಗಳಲ್ಲಿ ಪೇ ಮೇಯರ್ ಅಂತ ಈರೇಶ್ ಅಂಚಟಗೇರಿ ಅವರ ಪೋಸ್ಟರ್ ಹಾಕಲಾಗಿದೆ. ಇದನ್ನೂ ಓದಿ: ದಸರಾ ಸಂಭ್ರಮ – ಲಾರ್ಡ್ಸ್ ಪೆವಿಲಿಯನ್‌ನಲ್ಲಿ ನಿಂತು ತ್ರಿವರ್ಣ ಧ್ವಜ ಹಾರಿಸಿದ ಗಂಗೂಲಿ

    ಇದೇ ಸೆಪ್ಟೆಂಬರ್ 26ರಂದು ನಡೆದ ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮಕ್ಕಾಗಿ ದೇಶಪಾಂಡೆ ನಗರದ ಜೀಮ್ ಖಾನ್ ಮೈದಾನದಲ್ಲಿ 5 ಸಾವಿರ ಜನಕ್ಕೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಈ ವೇದಿಕೆ ಮತ್ತು ರಾಷ್ಟ್ರಪತಿಗಳ ಪೌರಸನ್ಮಾನಕ್ಕೆ ಬರೊಬ್ಬರಿ 1.5 ಕೋಟಿ ಖರ್ಚಾಗಿದೆ. ಈ ಖರ್ಚು ಮಾಡುವುದರಲ್ಲಿ ಪಾಲಿಕೆ ನಿಯಮ ಪಾಲನೆ ಮಾಡಿಲ್ಲ ಹಾಗೂ ಪೆಂಡಾಲ್ ಹಾಕಿಸಿದ ಬಳಿಕ ಕೊಟೇಶನ್ ಆಹ್ವಾನ ಮಾಡಲಾಗಿದೆ. ಇದರಿಂದಾಗಿ ಕಾರ್ಯಕ್ರಮದ ನಿರ್ವಹಣೆ ಖರ್ಚಿನಲ್ಲಿ ಬ್ರಹ್ಮಾಂಡದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಮೇಯರ್ ಕೈವಾಡಯಿದೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪವಾಗಿದೆ. ಆದ್ದರಿಂದ ಹುಬ್ಬಳ್ಳಿ ನಗರದ ಕೆಲವಡೆ ಪೇ ಮೇಯರ್ ಪೋಸ್ಟರ್ ಅಂಟಿಸಿ ಕಾಂಗ್ರೆಸ್ (Congress) ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಕಾಂಗ್ರೆಸ್ ಕಾರ್ಯಕರ್ತರ ಈ ಅಭಿಯಾನಕ್ಕೆ ಮೇಯರ್ ಈರೇಶ್ ಅಂಚಟಗೇರಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮದ ಖರ್ಚಿನಲ್ಲಿ ಒಂದು ರೂಪಾಯಿ ಸಹ ಭ್ರಷ್ಟಾಚಾರವಾಗಿಲ್ಲ. ಇನ್ನೂ ಕಾರ್ಯಕ್ರಮದ ನಿರ್ವಹಣೆಯಲ್ಲಿ ಮೇಯರ್ ಪಾತ್ರವೇ ಬರುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದರಿಂದ ಒಂದು ಕಡೆ ರಾಷ್ಟ್ರಪತಿಗಳಿಗೆ ಅಪಮಾನ ಮಾಡಿದಂತಾದ್ರೆ ಮತ್ತೊಂದು ಕಡೆ ಮೇಯರ್ ಸ್ಥಾನ ಘನತೆಯನ್ನು ಹಾಳು ಮಾಡುವ ಹುನ್ನಾರ ಇದಾಗಿದೆ. ಹೀಗಾಗಿ ಪೋಸ್ಟರ್ ಅನ್ನು ಸಾಮಾಜಿಕ ತಾಣದಲ್ಲಿ ಶೇರ್ ಮಾಡಿದವರ ಮತ್ತು ಪೊಸ್ಟ್ ಅಂಟಿಸಿದವರ ವಿರುದ್ಧ ಪೊಲೀಸ್ ಕಮಿಷನರ್‌ (Police Commissioner Hubballi) ಗೆ ದೂರು ನೀಡಿರುವುದಾಗಿ ಮೇಯರ್ ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    – ಸುಳ್ಳು ಸುದ್ದಿ ಹರಡಿಸದಂತೆ ಕಮಿಷನರ್ ಮನವಿ

    ಮಂಗಳೂರು: ಸುರತ್ಕಲ್‍ನಲ್ಲಿ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಯ ವೇಳೆ ಇದ್ದ ಕಾರ್ ಮಾಲೀಕ ಅಜಿತ್ ಡಿಸೋಜನನ್ನು ಬಂಧಿಸಿದ್ದೇವೆ. ಅಜಿತ್‍ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

    ಮಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿದೆ. 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಿದ್ದೇವೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಹಲವು ಮಾಹಿತಿಗಳು ಸಿಕ್ಕಿದೆ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ

    ಇಯಾನ್ ಕಾರ್ ಮಾಲೀಕನನ್ನು ಕೋರ್ಟ್‍ಗೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನಿಂದ ಯಾರು ಕಾರ್ ಬಾಡಿಗೆ ಪಡೆದಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದರೆ ಕೊಲೆಗೆ ಬಳಸಿದ ಕಾರು ಸಿಕ್ಕಿಲ್ಲ. ಅದು ಆರೋಪಿಗಳ ಬಳಿಯೇ ಇರಬಹುದು. ಆರೋಪಿಗಳು ಅಜಿತ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದರು. ಫಾಜಿಲ್ ತಂದೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?

    ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಬಗ್ಗೆ ಹರಡುತ್ತಿರುವ ವದಂತಿಗೆ ಕಿವಿ ಕೊಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್‌ಗಳನ್ನು ಹಾಕಿರುವವರ ವಿರುದ್ಧ 5 ಕೇಸ್ ದಾಖಲಾಗಿದೆ. 8 ಜನರ ತಂಡದಿಂದ ಸಾಮಾಜಿಕ ಜಾಲತಾಣಗಳನ್ನು ವಾಚ್ ಮಾಡಲಾಗುತ್ತಿದೆ. ಪೋಸ್ಟ್‌ ಹಾಕುವವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕೋಮುಗಳ ನಡುವೆ ಘರ್ಷಣೆ ಉಂಟು ಮಾಡುವಂತಹ ಪೋಸ್ಟ್‌ಗಳನ್ನು ಹಾಕುತ್ತಿದ್ದೀರಿ. ಈ ತರ ಪೋಸ್ಟ್‌ಗಳನ್ನು ಹಾಕವವರ ಮೇಲೆ ಕೇಸ್ ದಾಖಲಾಗುತ್ತದೆ. ಇದರಿಂದ ವರ್ಷಾನುಗಟ್ಟಲೆ ಕೋರ್ಟ್‌ಗೆ ಅಲೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    Live Tv
    [brid partner=56869869 player=32851 video=960834 autoplay=true]