Tag: Police Commissioner

  • ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ನೇಮಕ

    ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ ನೇಮಕ

    ಬೆಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರನ್ನಾಗಿ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಇದುವರೆಗೂ ಕಮಿಷನರ್‌ ಸ್ಥಾನದಲ್ಲಿದ್ದ ಕಮಲ್‌ ಪಂತ್‌ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಬಸವೇಶ್ವರ ಮೂರ್ತಿಗೆ ಮುಸ್ಲಿಂರಿಂದ ಸ್ವಾಗತ

    1991 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು. ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

    ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಕುಮಾರ್‌ ನಿಯುಕ್ತಿಗೊಂಡಿದ್ದಾರೆ. ಕೆಎಸ್‌ಆರ್‌ಪಿ ಎಡಿಜಿಪಿಯಾಗಿ ಆರ್‌.ಹಿತೇಂದ್ರ ಹಾಗೂ ಸಿಐಡಿ ಎಸ್‌ಪಿಯಾಗಿ ಎಂ.ಎನ್.ಅನುಚೇತ್‌ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಸಭಾಪತಿ ಸ್ಥಾನ, ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

    ಅಷ್ಟೇ ಅಲ್ಲದೆ ರಾಜ್ಯದಲ್ಲಿ 37 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಾಂಜಾ ಕೇಸ್‌ಗೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಅಶ್ವಥ್ ಗೌಡರನ್ನು ತೀರ್ಥಹಳ್ಳಿ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್‌ ಆಗಿ ವರ್ಗಾಯಿಸಲಾಗಿದೆ.

  • ದಾಳಿ ನೆಪದಲ್ಲಿ ಪೊಲೀಸರಿಂದಲೇ 6 ಕೋಟಿ ಲೂಟಿ –  10 ಮಂದಿ ಪೊಲೀಸರ ಅಮಾನತು

    ದಾಳಿ ನೆಪದಲ್ಲಿ ಪೊಲೀಸರಿಂದಲೇ 6 ಕೋಟಿ ಲೂಟಿ – 10 ಮಂದಿ ಪೊಲೀಸರ ಅಮಾನತು

    ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ 6 ಕೋಟಿ ರೂಪಾಯಿ ದರೋಡೆ ಮಾಡಿದ ಆರೋಪದಡಿ ಮೂವರು ಅಧಿಕಾರಿಗಳು ಸೇರಿದಂತೆ 10 ಮಂದಿ ಪೊಲೀಸರನ್ನು ಬುಧವಾರ ಅಮಾನತುಗೊಳಿಸಲಾಗಿದೆ.

    ಆರೋಪಿಗಳನ್ನು ಮುಂಬ್ರಾ ಪೊಲೀಸ್ ಠಾಣೆಯ ಪೊಲೀಸ್ ಇನ್‍ಸ್ಪೆಕ್ಟರ್ ಗೀತಾರಾಮ್ ಶೆವಾಲೆ ಮತ್ತು ಅವರ ಕಿರಿಯ ಅಧಿಕಾರಿಗಳು, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಪಿಎಸ್‍ಐ) ರವಿ ಮದ್ನೆ ಮತ್ತು ಪಿಎಸ್‍ಐ ಹರ್ಷಲ್ ಕಾಳೆ ಎಂದು ಗುರುತಿಸಲಾಗಿದೆ.

    ಥಾಣೆ ನಿವಾಸಿಯೊಬ್ಬರ ಮನೆಯಲ್ಲಿ ಪೊಲೀಸ್ ಅಧಿಕಾರಿಗಳೇ ದರೋಡೆ ನಡೆಸಿದ್ದಾರೆ ಎಂದು ಮಹಾರಾಷ್ಟ್ರದ ಗೃಹ ಸಚಿವರಿಗೆ ಪತ್ರದ ಮೂಲಕ ದೂರು ಸಲ್ಲಿಸಿರುವುದು ಥಾಣೆ ಪೊಲೀಸ್ ಕಮಿಷನರ್ ಜೈ ಜೀತ್ ಸಿಂಗ್ ಅವರ ಗಮನಕ್ಕೆ ಬಂದಿದೆ. ಮುಂಬೈ ಪೊಲೀಸ್ ಇನ್ಸ್‍ಪೆಕ್ಟರ್ ಇಬ್ಬರು ಸಬ್ ಇನ್‍ಸ್ಪೆಕ್ಟರ್‌ಗಳು, ಸಿಬ್ಬಂದಿ ಮತ್ತು ಸಮವಸ್ತ್ರ ಧರಿಸದ ಇತರೆ ವ್ಯಕ್ತಿಗಳು ಏಪ್ರಿಲ್ 12ರ ಮಂಗಳವಾರ ಮುಂಜಾನೆ ಫೈಝಲ್ ಮೆಮನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳು ತಲಾ 1 ಕೋಟಿ ರೂಪಾಯಿಗಳ ಮೂವತ್ತು ಬಾಕ್ಸ್ ಎಲ್ಲವನ್ನು ಕ್ಯಾಬಿನ್‍ನಲ್ಲಿ ಮುಂಬ್ರಾ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    police (1)

    ಈ ವಿಚಾರವಾಗಿ ಇನ್‍ಸ್ಪೆಕ್ಟರ್ ಗೀತಾರಾಮ್ ಶೆವಾಲೆ ಅವರು ಅಷ್ಟೊಂದು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿದಾಗ, ಫೈಝಲ್ ಮೆಮನ್ ಅವರು ಎಲ್ಲ ಹಣವನ್ನು ಕಷ್ಟಪಟ್ಟು ದುಡಿದಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರ ಮಾತನ್ನು ಯಾರು ಕೂಡ ನಂಬದೇ, ಹಲ್ಲೆ ನಡೆಸಿದ್ದಾರೆ. ನಂತರ ಇರುವ ಹಣದಲ್ಲಿ ಅರ್ಧದಷ್ಟು ಮೊತ್ತವನ್ನು ನೀಡುವಂತೆ ಗೀತಾರಾಮ್ ಶೆವಾಲೆ ಬೇಡಿಕೆ ಇಟ್ಟಿದ್ದು, ಕೊನೆಗೆ 2 ಕೋಟಿ ಒಪ್ಪಿಕೊಂಡಿದ್ದಾರೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ 4 ಕೋಟಿ ಹಣವನ್ನು ಹಂಚಿದ್ದಾರೆ. ಉಳಿದ 24 ಕೋಟಿಯನ್ನು ಮೆಮನ್ ಅವರಿಗೆ ಹಿಂತಿರುಗಿಸಿದ್ದಾರೆ. ಇನ್ನೂ ಗೀತಾರಾಮ್ ಶೆವಾಲೆ ಅವರು ಹಣ ಪಡೆಯುತ್ತಿರುವ ದೃಶ್ಯ ಇನ್‍ಸ್ಪೆಕ್ಟರ್ ಕ್ಯಾಬಿನ್‍ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕ್ಯಾಮೆರಾ ಪರಿಶೀಲಿಸಿ, ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ಇದೀಗ ಈ ಸಂಬಂಧ ಪೊಲೀಸ್ ಆಯುಕ್ತ ಜೈ ಜೀತ್ ಸಿಂಗ್ ಅವರು ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದು, ಹತ್ತು ಮಂದಿಯನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ- ಹೊಸ ಮೊಬೈಲ್ ಬಿಸಾಕಿದ ದಿವ್ಯಾ ಹಾಗರಗಿ

  • ಬೆಂಗ್ಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ

    ಬೆಂಗ್ಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ

    ಬೆಂಗಳೂರು: PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣವು ಭಾರೀ ಸದ್ದು ಮಾಡುತ್ತಿದ್ದು, ಸಿಐಡಿ ಅಧಿಕಾರಿಗಳು ಬೆಂಗಳೂರಿನ ಪರೀಕ್ಷಾ ಕೇಂದ್ರಗಳತ್ತ ಹದ್ದಿನ ಕಣ್ಣು ಹಾಯಿಸಿದ್ದಾರೆ. ಈ ಹೊತ್ತಿನಲ್ಲಿ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬ ಸಿಕ್ಕಿಬಿದ್ದಿದ್ದಾನೆ.

    PoliceCommissioner (1)

    ಪೇದೆ ಗಜೇಂದ್ರನನ್ನು ಸಿಐಡಿ ಬಂಧಿಸಿದೆ. ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಕದ್ದು ಕದ್ದು ಎಕ್ಸಾಂ ಬರೆದು ಪಾಸಾಗಿದ್ದ. ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ‍್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರೋದಕ್ಕೂ ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

    ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿದ್ದಾರೆ.

  • ಜಹಾಂಗೀರ್‌ಪುರಿ ಗಲಭೆ ಪ್ರಕರಣಕ್ಕೆ ಟ್ವಿಸ್ಟ್ – ಇಡಿಗೆ ಪತ್ರ ಬರೆದ ದೆಹಲಿ ಪೊಲೀಸ್ ಆಯುಕ್ತ

    ಜಹಾಂಗೀರ್‌ಪುರಿ ಗಲಭೆ ಪ್ರಕರಣಕ್ಕೆ ಟ್ವಿಸ್ಟ್ – ಇಡಿಗೆ ಪತ್ರ ಬರೆದ ದೆಹಲಿ ಪೊಲೀಸ್ ಆಯುಕ್ತ

    ನವದೆಹಲಿ: ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಮುಖ ಆರೋಪಿ ಅನ್ಸಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಆಸ್ತಾನಾ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಅನ್ಸಾರ್‌ಗೆ ಬೇರೆ ಬೇರೆ ಮೂಲಗಳಿಂದ ಹಣಕಾಸಿನ ನೆರವು ಸಿಕ್ಕಿರುವಂತೆ ಭಾಸವಾಗುತ್ತಿದ್ದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಕೇಶ್ ಅಸ್ತಾನಾ ಮನವಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರವನ್ನು ಪರಿಶೀಲಿಸುತ್ತಿದ್ದು ಶೀಘ್ರ ಕ್ರಮ ಕೈಗೊಳ್ಳುವ ಸಾಧ್ಯತೆಗಳಿದೆ.

    ಈ ನಡುವೆ ದೇಶದ ಹಲವು ಭಾಗಗಳಲ್ಲಿ ಕೋಮು ಘರ್ಷಣೆ ನಡೆಯುತ್ತಿದ್ದು ಅದರ ಭಾಗವಾಗಿ ಜಹಾಂಗೀರ್‌ಪುರಿಯಲ್ಲೂ ಕಲ್ಲು ತೂರಾಟ ನಡೆದಿತ್ತು. ರಾಕೇಶ್ ಅಸ್ತಾನಾ ಬರೆದಿರುವ ಪತ್ರ ಈಗ ಮಹತ್ವ ಪಡೆದುಕೊಂಡಿದ್ದು ಘಟನೆಯ ಹಿಂದೆ ದೊಡ್ಡ ಹಣಕಾಸಿನ ನೆರವು ಇರಬಹುದು ಎನ್ನಲಾಗುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತಿದೆ.

    ಕಳೆದ ಶನಿವಾರ ಹನುಮಾನ್ ಜಯಂತಿ ದಿನ ಶೋಭಾಯಾತ್ರೆ ನಡೆಸಲಾಗುತ್ತಿತ್ತು. ಮಸೀದಿಯ ಬಳಿ ತೆರಳುವ ವೇಳೆ ಬೆಂಬಲಿಗರೊಂದಿಗೆ ಬಂದಿದ್ದು ಅನ್ಸಾರ್ ರಂಜಾನ್ ಇಫ್ತಾರ್ ಸಮಯ ನಡೆಯುತ್ತಿದ್ದು ಮುಂದೆ ಸಾಗುವಂತೆ ಕೇಳಿಕೊಂಡಿದ್ದರು. ಇದು ಪರಿಸ್ಪರ ವಾಗ್ವಾದಕ್ಕೆ ಕಾರಣವಾಗಿ ಕಲ್ಲು ತೂರಾಟ ನಡೆದು ಸ್ಥಳದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ಎಂಟು ಮಂದಿ ಪೋಲೀಸರು ಗಾಯಗೊಂಡಿದ್ದರು.

    ಪ್ರಕರಣ ಸಂಬಂಧ 26 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ಅನ್ಸಾರ್ ಪ್ರಮುಖ ಆರೋಪಿಯಾಗಿದ್ದಾನೆ. ಅನ್ಸಾರ್ ಹಿಂದೆ ಎರಡು ಹಲ್ಲೆ ಪ್ರಕರಣ, ಜೂಜು ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಲ್ಲಿ ಬಂಧಿಯಾಗಿದ್ದ. ಹಿಂಸಾಚಾರ ಘಟನೆಯೂ ಪೂರ್ವ ನಿಯೋಜಿತ ಎಂದು ದೆಹಲಿ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

  • ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

    ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ

    night curfew

    ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಎನ್ ಡಿಎಂಎ ಆಕ್ಟ್ ಅಡಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

  • ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಬೆಂಗಳೂರು : ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಆದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಶೀತ, ಜ್ವರ ಜನರನ್ನು ಕಾಡುತ್ತಿದೆ.

    ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್ ಅವರು, ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ.   ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದಿದ್ದಾರೆ. ಇದನ್ನೂ ಓದಿ:  ಪಾಕ್ ಪ್ರಧಾನಿ ಅಂತರಾಷ್ಟ್ರೀಯ ಭಿಕ್ಷುಕ: ಸಿರಾಜುಲ್ ಹಕ್

    ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು 

  • ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಕಮಿಷನರೇಟ್ ಖಡಕ್ ಎಚ್ಚರಿಕೆ

    ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಕಮಿಷನರೇಟ್ ಖಡಕ್ ಎಚ್ಚರಿಕೆ

    ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್ ಲಾಬೂರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ್ ಕುಲಕರ್ಣಿ (ಪಿಐಎಲ್) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ

    ನಗರದ ಕಿಮ್ಸ್ ಸೇರಿ ಎಲ್ಲಾ ಆಸ್ಪತ್ರೆಗಳಲ್ಲಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ, ಕಂಟ್ರೋಲ್ ರೂಮ್ ನಂಬರ್ ಕಡ್ಡಾಯವಾಗಿ ಪ್ರಚಾರ ಪಡಿಸುವಂತೆ ನ್ಯಾಯಾಲಯ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್, ಡಾ. ವಿನೋದ ಕುಲಕರ್ಣಿ ಅವರಿಗೆ ಪತ್ರ ಬರೆದು ವೈದ್ಯರಿಗೆ ತೊಂದರೆಯಾದಲ್ಲಿ ದೂರವಾಣಿ ಸಂಖ್ಯೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದರೆ ಕೂಡಲೇ ಸ್ಥಳಕ್ಕೆ ಆಗಮಿಸಿ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ತೀರ್ಥದಲ್ಲಿ ಕೈ ತೊಳೆದ ಕೇರಳದ ದೇವಸ್ವಂ ಸಚಿವ

  • ಪೊಲೀಸ್ ಇಲಾಖೆಗೆ ಸೇರಲು ಮಂಗಳೂರಿಗರ ಹಿಂದೇಟು – ಹೊಸ ಆಫರ್ ನೀಡಿದ್ರು ಎನ್. ಶಶಿಕುಮಾರ್

    ಪೊಲೀಸ್ ಇಲಾಖೆಗೆ ಸೇರಲು ಮಂಗಳೂರಿಗರ ಹಿಂದೇಟು – ಹೊಸ ಆಫರ್ ನೀಡಿದ್ರು ಎನ್. ಶಶಿಕುಮಾರ್

    ಮಂಗಳೂರು: ದೈಹಿಕವಾಗಿ ಮತ್ತು ಬುದ್ಧಿವಂತಿಕೆಯಲ್ಲಿ ಇತರ ಜಿಲ್ಲೆಯ ಜನರಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯವರು ಒಂದು ಹೆಜ್ಜೆ ಮುಂದೆ ಎಂಬ ಅಭಿಪ್ರಾಯವಿದೆ. ಆದರೆ ಇಲ್ಲಿನ ಜನ ಪೊಲೀಸ್ ಸೇವೆಗೆ ಬರುವುದು ಮಾತ್ರ ಅತ್ಯಂತ ಕಡಿಮೆ. ಹೀಗಾಗಿ ಜಿಲ್ಲೆಯ ಜನರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಪರ್ ಆಫರ್ ನೀಡಿದ್ದಾರೆ. ಈ ಆಫರ್ ಗೆ ಇದಿಗ ಉತ್ತಮ ಬೆಂಬಲ ಸಿಕ್ಕಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಯುವಕರು ಪೊಲೀಸ್ ಇಲಾಖೆಗೆ ಸೇರ ಬಯಸುತ್ತಿದ್ದರು. ಆದರೆ ಈಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸೇರುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹಾಗೂ ಕಾನ್‍ಸ್ಟೇಬಲ್ ಆಗಲು ಬಯಸುವ ಜಿಲ್ಲೆಯ ಯುವಜನತೆಗೆ ಎನ್.ಶಶಿಕುಮಾರ್ ಉತ್ತಮ ಅವಕಾಶವೊಂದನ್ನು ನೀಡಿದ್ದಾರೆ. ಈಗಾಗಲೇ ಪಿ.ಸಿ ಮತ್ತು ಪಿ.ಎಸ್.ಐ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಒಂದು ತಿಂಗಳ ಕಾರ್ಯಾಗಾರ ನಡೆಸಲು ನಿರ್ಧರಿಸಿ ಅರ್ಜಿ ಆಹ್ವಾನಿಸಿದ್ದರು. ಕಮಿಷನರ್ ಕರೆಗೆ 710ಕ್ಕೂ ಅಧಿಕ ಮಂದಿ ರೆಸ್ಪಾನ್ಸ್ ಮಾಡಿದ್ದು, ಇದೀಗ ಅದರಲ್ಲಿ ಫಿಲ್ಟರ್ ಮಾಡಿ 200 ಅಭ್ಯರ್ಥಿಗಳನ್ನು ಸೆಲೆಕ್ಟ್ ಮಾಡಿ ತರಬೇತಿ ನೀಡಲಾಗುತ್ತಿದೆ.

    ಪ್ರಾರಂಭದಲ್ಲಿ 100 ಮಂದಿಗೆ ಈ ತರಬೇತಿ ಕಾರ್ಯಗಾರ ಮಾಡುವ ನಿರ್ಧಾರ ಮಾಡಲಾಗಿತ್ತು. ಆದರೆ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾದರಿಂದ ಸ್ಕ್ರೀನಿಂಗ್ ಟೆಸ್ಟ್ ಮಾಡಿ 200 ಮಂದಿಯನ್ನು ಸೆಲೆಕ್ಟ್ ಮಾಡಲಾಗಿದೆ. ಇವರಿಗೆ ನಗರದ ಸೈಂಟ್ ಅಲೋಸಿಯಸ್ ವಿದ್ಯಾಸಂಸ್ಥೆಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಇದರಲ್ಲಿ 100 ಅಭ್ಯರ್ಥಿಗಳಿಗೆ ಹಾಸ್ಟೆಲ್‍ಗಳಲ್ಲೇ ಇದ್ದು ತರಬೇತಿ ಪಡೆಯುವ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಊಟದ ಸೌಲಭ್ಯದೊಂದಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಲಿಖಿತ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಯುವ ಪೊಲೀಸರಿಂದಲೇ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಕಳೆದ 11 ವರ್ಷಗಳಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನೇಮಕಾತಿಯಾದವರು 68 ಮಂದಿ ಮಾತ್ರ. ಹೀಗಾಗಿ ಆಯಾ ಜಿಲ್ಲೆಯವರನ್ನೇ ಪೊಲೀಸ್ ಸೇವೆಗೆ ನೇಮಕಾತಿ ಮಾಡಲು ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

  • ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಘೋಷಿಸಿದ್ದು, ಆದರೂ ಜನ ಅಡ್ಡಾಡುತ್ತಿದ್ದಾರೆ. ಅಂತೆಯೇ ಯುವಕನೊಬ್ಬನನ್ನು ತಡೆದಾಗ ಆತ ಪೊಲೀಸ್ ಕಮಿಷನರ್ ಗೆ ಅವಾಜ್ ಹಾಕಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಈ ಘಟನೆ ಹೆಬ್ಬಾಳದ ಸಿಬಿಐ ಬಳಿ ನಡೆದಿದ್ದು, ಇಲ್ಲಿ ಪೊಲಿಸರು ಯುವಕನನ್ನು ತಡೆದಿದ್ದಾರೆ. ಈ ವೇಳೆ ಆತ, ಇದು ಪೊಲೀಸರ ಕ್ರಮ ಸರಿ ಅಲ್ಲ, ನಾನು ಸಿಎಂ ಆಪ್ತ. ನಾನು ಫೈನ್ ಕಟ್ಟಲ್ಲ. ನಾನು ಮನೆಗೆ ಹೋಗ್ಬೇಕು ಬಿಡಿ. ನಾನು ಮನಸ್ಸು ಮಾಡಿದ್ರೆ ಏನಾಗುತ್ತೆ ಗೊತ್ತಾ ..? ಎಂದು ಪೊಲೀಸ್ ಕಮೀಷನರ್ ಕಮಲ್ ಪಂಥ್ ಮುಂದೆ ಹೈಡ್ರಾಮ ಮಾಡಿದ್ದಾನೆ.

    ಯುವಕನ ಮಾತಿನಿಂದ ಸಿಟ್ಟಿಗೆದ್ದ ಕಮಿಷನರ್ ಮುಲಾಜಿಲ್ಲದೇ ಆತನ ವಾಹನ ಸೀಜ್ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

    ಒಟ್ಟಿನಲ್ಲಿ ಕೊರೊನಾ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಹೇರಿದ್ರೆ ಜನ ಸುಳ್ಳು ಕಥೆಗಳನ್ನು ಹೇಳಿ ರಸ್ತೆಗೆ ಇಳಿಯುತ್ತಿದ್ದಾರೆ. ಇವರನ್ನು ನಿಯಂತ್ರಿಸಲು ಪೊಲಿಸರು ಹರಸಾಹಸ ಪಡುವಂತಾಗಿದೆ.

  • ಪ್ರಕರಣದಲ್ಲಿ ನಾನು ಆರೋಪಿಯೋ? ಸಂತ್ರಸ್ತೆಯೋ? – ಆಯುಕ್ತರಿಗೆ ಸಿಡಿ ಲೇಡಿ ಪತ್ರ

    ಪ್ರಕರಣದಲ್ಲಿ ನಾನು ಆರೋಪಿಯೋ? ಸಂತ್ರಸ್ತೆಯೋ? – ಆಯುಕ್ತರಿಗೆ ಸಿಡಿ ಲೇಡಿ ಪತ್ರ

    – ನಾನು ಆರೋಪಿ ಅಲ್ಲದಿದ್ರೂ ಪ್ರತಿದಿನ ವಿಚಾರಣೆ
    – ನ್ಯಾಯ ಸಮ್ಮತವಾಗಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ

    ಬೆಂಗಳೂರು: ಪ್ರಕರಣದಲ್ಲಿ ನಾನು ಆರೋಪಿಯೋ? ಸಂತ್ರಸ್ತೆಯೋ ಎಂದು ಪ್ರಶ್ನಿಸಿ ಸಿಡಿ ಪ್ರಕರಣದ ಲೇಡಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾಳೆ.

    ನಾನು ಆರೋಪಿಯಿಲ್ಲ ಅದರೂ ಪ್ರತಿದಿನ ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡಲಾಗುತ್ತಿದೆ. ಆರೋಪಿಯನ್ನ ಕೇವಲ ಎರಡು ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿ ಬಿಟ್ಟು ಕಳಿಸ್ತಾರೆ. ಆದರೆ ನನ್ನನ್ನು ಇಡೀ ದಿನ ವಿಚಾರಣೆ ಮಾಡ್ತಾರೆ ಎಂದು ಆರೋಪಿಸಿ ಸಂತ್ರಸ್ತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾಳೆ.

    ಪತ್ರದಲ್ಲಿ ಏನಿದೆ?
    ನನ್ನನ್ನ ಇಡೀ ದಿನ ವಿಚಾರಣೆ ಮಾಡುತ್ತಾರೆ. ಪ್ರತಿದಿನ ವಿಚಾರಣೆ ನೆಪದಲ್ಲಿ ಕರೆದು ಕಿರುಕುಳ ನೀಡಲಾಗುತ್ತಿದೆ. ಗೃಹ ಇಲಾಖೆ ನನ್ನ ಬಳಿ ವಿಚಾರಿಸದೇ ಎಸ್‍ಪಿಪಿಗಳನ್ನ ನೇಮಕ ಮಾಡಿದೆ. ಆರೋಪಿಯನ್ನ ಕೇವಲ ಎರಡು ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿ ಬಿಟ್ಟು ಕಳಿಸ್ತಾರೆ. ಇದಕ್ಕೆ ನನ್ನ ಆಕ್ಷೇಪವಿದೆ. ಆರೋಪಿ ವಿರುದ್ಧ ಗಂಭೀರವಾದ ವಿಚಾರಣೆ ಮಾಡ್ತಿದ್ದಾರೆ ಅನ್ನೊ ನಂಬಿಕೆ ನನಗೆ ಇಲ್ಲ. ನಾನು ಆರೋಪಿ ಅಲ್ಲದಿದ್ರೂ ಪ್ರತಿದಿನ ವಿಚಾರಣೆ ಮಾಡುತ್ತಿದ್ದಾರೆ.

    ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರಲಿ ಅಂದಿದ್ದಾರೆ. ಇದು ನನಗೆ ಆಘಾತವನ್ನ ಉಂಟು ಮಾಡಿದೆ. ಆರೋಪಿ ವಿರುದ್ಧ ಗಂಭೀರವಾದ ವಿಚಾರಣೆ ಮಾಡ್ತಿದ್ದಾರೆ ಅನ್ನೊ ನಂಬಿಕೆಯಿಲ್ಲ. ನಾನು ಆರೋಪಿ ಅಲ್ಲದಿದ್ದರೂ ಆರ್ ಟಿ ನಗರದ ನನ್ನ ಪಿಜಿ ಮೇಲೆ ದಾಳಿ ಮಾಡಿ ಸಾಕ್ಷಿ ನಾಶ ಮಾಡುವ ಕೆಲಸ ಮಾಡಿದ್ದಾರೆ. ಎಸ್‍ಐಟಿ ರಮೇಶ್ ಜಾರಕಿಹೊಳಿಯನ್ನು ಓಡಾಡಿಕೊಂಡಿರಲು ಬಿಟ್ಟು ಪ್ರತಿ ದಿನ ನನ್ನ ವಿಚಾರಣೆ ಮಾಡುತ್ತಿದ್ದಾರೆ. ನ್ಯಾಯ ಸಮ್ಮತವಾಗಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ ಅಂತಾ ನನಗೆ ಅನ್ನಿಸ್ತಿದೆ ಎಂದು ಸಂತ್ರಸ್ತೆ ಆರೋಪಿಸಿ ಪೊಲೀಸ್ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾಳೆ.