Tag: Police Constable

  • ಫ್ಲೈಟ್‌ನಲ್ಲಿ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಕಾನ್ಸ್‌ಟೇಬಲ್‌

    ಫ್ಲೈಟ್‌ನಲ್ಲಿ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಕಾನ್ಸ್‌ಟೇಬಲ್‌

    ಹಾವೇರಿ: ಸಾಮಾನ್ಯವಾಗಿ ಸ್ನೇಹಿತರೊಂದಿಗೆ ಬರ್ತ್‌ಡೇ ಆಚರಣೆ ಮಾಡುವುದು ಕಾಮನ್. ಆದರೆ ಪೊಲೀಸ್‌ ಕಾನ್ಸ್‌ಟೇಬಲ್‌ವೊಬ್ಬರು (Police Constable) ತಮ್ಮ ತಾಯಿಯ (Mother) 63ನೇ ಜನ್ಮದಿನವನ್ನು ವಿಮಾನದಲ್ಲಿ (Flight) ಆಚರಿಸಿ ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ.

    ಬ್ಯಾಡಗಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹನುಮಂತಪ್ಪ ಸುಂಕದ ತಮ್ಮ ತಾಯಿ ಪಾರ್ವತವ್ವರ 63ನೇ ಹುಟ್ಟುಹಬ್ಬವನ್ನು (Birth Day) ಅದ್ಧೂರಿಯಾಗಿ ಆಚರಿಸಿದ್ದಾರೆ. ತಾಯಿಯ ಬರ್ತ್‌ಡೇ ಪ್ರಯುಕ್ತ ಇದೇ ಮೊದಲ ಬಾರಿ ತಂದೆ, ತಾಯಿ ಮತ್ತು ಮಗಳೊಂದಿಗೆ ಕಾನ್ಸ್‌ಟೇಬಲ್ ಹನುಮಂತಪ್ಪ, ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿಸಿದ್ದಾರೆ. ಇದನ್ನೂ ಓದಿ: ಶಾಸಕರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಾಗಿ ಬಂದು 1 ಲಕ್ಷ ರೂ. ಲಪಟಾಯಿಸಿದ ಕಳ್ಳರು

    ಸದಾ ಕೃಷಿ ಕೆಲಸದಲ್ಲೇ ನಿರತರಾಗಿರುತ್ತಿದ್ದ ತಾಯಿ, ತಂದೆಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ 2 ಕೆ.ಜಿ ಕೇಕ್‌ ಅನ್ನು ಖರೀದಿಸಿ, ತನ್ನ ತಾಯಿ ಪಾರ್ವತವ್ವ, ತಂದೆ ಲಕ್ಷ್ಮಣ ಮತ್ತು ಮಗಳು ಚಂದನಾಳೊಂದಿಗೆ ವಿಮಾನವನ್ನು ಏರಿದ್ದಾರೆ. ಆ ಬಳಿಕ ಕಾನ್ಸ್‌ಟೇಬಲ್ ಹನುಮಂತಪ್ಪ ವಿಮಾನದಲ್ಲೇ ಕೇಕ್ ಕತ್ತರಿಸಿ ತನ್ನ ತಾಯಿಯ ಹುಟ್ಟುಹಬ್ಬ ಆಚರಿಸುವ ಮೂಲಕ ಸಂಭ್ರಮ ಆಚರಿಸಿದರು. ಇದನ್ನೂ ಓದಿ: ಉಪ್ಪಿನಂಗಡಿಯ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ – ಕಾರ್ಮಿಕ ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಭೀಕರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗಿದೆ. ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹೊಸದೊಂದು ಫೋಟೋಗಳು ಹರಿದಾಡಿವೆ. ಬರೋಬ್ಬರು 32 ಸಾವಿರ ದ್ಯೋಗ ಆಕಾಂಕ್ಷಿಗಳು ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಯ ನೇಮಕಾತಿಗಾಗಿ ಲಿಖಿತ ಪರೀಕ್ಷೆ (Recruitment Test) ಬರೆಯಲು ಕ್ರೀಡಾಂಗಣದಲ್ಲಿ (Stadium) ಪೆನ್ನು, ಪೇಪರ್ ಹಿಡಿದು ಕುಳಿತಿರುವುದು ಕಂಡುಬಂದಿದೆ.

    ಶನಿವಾರ ಇಸ್ಲಾಮಾಬಾದ್‌ನ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ನಡೆದಿದ್ದು, ಸುಮಾರು 32 ಸಾವಿರ ಅಭ್ಯರ್ಥಿಗಳು ಸ್ಟೇಡಿಯಂನ ನೆಲದ ಮೇಲೆ ಕುಳಿತು ಪರೀಕ್ಷೆ ಬರೆದಿದ್ದಾರೆ.

    ವರದಿಗಳ ಪ್ರಕಾರ ಪಾಕಿಸ್ತಾನದಾದ್ಯಂತ 1,667 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಖಾಲಿಯಿದೆ. ಇದಕ್ಕಾಗಿ ಲಿಖಿತ ಪರೀಕ್ಷೆ ನೀಡಲು ಜಾಹೀರಾತು ನೀಡಲಾಗಿತ್ತು. ಈ ಹಿನ್ನೆಲೆ 30 ಸಾವಿರಕ್ಕೂ ಹೆಚ್ಚಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳು ಖಾಲಿ ಉಳಿದಿವೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವು – ಶವ ತರಿಸಿಕೊಳ್ಳಲು ಸಹಾಯ ಕೋರಿದ ಕುಟುಂಬಸ್ಥರು

    ಪಾಕಿಸ್ತಾನದಲ್ಲಿ ನಿರುದ್ಯೋಗ ಸಮಸ್ಯೆ ಉತ್ತುಂಗಕ್ಕೇರಿದೆ. ಸರ್ಕಾರಿ ಉದ್ಯೋಗಕ್ಕೆ ಅತ್ಯಂತ ಕಡಿಮೆ ನೇಮಕಾತಿ ಮಾಡಿಕೊಳ್ಳುವುದರಿಂದ ನಿರುದ್ಯೋಗಿಳ ಸಂಖ್ಯೆಯೂ ಹೆಚ್ಚಾಗಿದೆ. ಸರ್ಕಾರಿ ವಲಯದಲ್ಲಿ ಖಾಲಿಯಿರುವ ಕೆಲವೇ ಕೆಲವು ಹುದ್ದೆಗೆ ಲಕ್ಷಾಂತರ ಆಕಾಂಕ್ಷಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

  • ಗಾಂಜಾ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಿರಾತಕರ ಗ್ಯಾಂಗ್‌

    ಗಾಂಜಾ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಿರಾತಕರ ಗ್ಯಾಂಗ್‌

    ಬೆಂಗಳೂರು: ರಾತ್ರಿ ಸಮಯದಲ್ಲಿ ಗಾಂಜಾ (Marijuana) ಮತ್ತಿನಲ್ಲಿ ಹಲ್ಲೆ, ದರೋಡೆ, ಕಳ್ಳತನ ಮಾಡುತ್ತಿದ್ದ ಕದೀಮರನ್ನು ಹಿಡಿಯಲು ಹೋದ ಪೊಲೀಸ್ ಪೇದೆ (Police Constable) ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆದರೂ ಸಹ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಲಾಖೆಯಲ್ಲಿಯೇ ಅಪಸ್ವರ ಕೇಳಿ ಬಂದಿದೆ.

    ಪೊಲೀಸ್‌ ಪೇದೆ ರಂಗನಾಥ್ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸಂಜೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಪಟ್ಟಣದ ದೇವರಕೊಂಡಪ್ಪ ವ್ರತದಲ್ಲಿ ರಸ್ತೆಯ ಮಧ್ಯದಲ್ಲಿ ಗಾಂಜಾ ಮತ್ತಿನಲ್ಲಿ ಯುವಕರ ತಂಡ ತೂರಾಡುತ್ತಿದ್ದರು. ಇದನ್ನು ಪ್ರಶ್ನೆ ಮಾಡಲು ರಂಗನಾಥ್‌ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪುಂಡರು, ದಿನ್ನೂರು ರಸ್ತೆಯ ನೀಲಗಿರಿ ತೋಪಿನತ್ತ ಎಸ್ಕೇಪ್ ಆಗಿದ್ದಾರೆ. ಈ ಸಂದರ್ಭದಲ್ಲಿ ಕಿರಾತಕರ ಬೆನ್ನು ಹತ್ತಿದ್ದ ರಂಗನಾಥ್ ನೀಲಗಿರಿ ತೋಪಿನ ಒಳಗೆ ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಆನ್‌ಲೈನ್ ಕ್ಯಾಸಿನೋ ಹುಚ್ಚು – ಬ್ಯಾಂಕ್‌ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದ ಮ್ಯಾನೇಜರ್ ಜೈಲುಪಾಲು

    ಈ ವೇಳೆ ರೌಡಿ ವರುಣ್ ಅಲಿಯಾಸ್ ಕೆಂಚಾ ಹಾಗೂ ಡ್ಯಾನಿ ಎಂಬ ಇಬ್ಬರು, ಪೊಲೀಸ್ ಪೇದೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ರಂಗನಾಥ್ ಮರ್ಮಾಂಗ ಹಾಗೂ ದೇಹದ ಹಲವಾರು ಕಡೆ ಗಾಯಗೊಳಿಸಿ ಅಲ್ಲಿಂದ ಎರಡು ದ್ವಿಚಕ್ರ ಬೈಕಿನಲ್ಲಿ ನಾಲ್ವರ ತಂಡ ಎಸ್ಕೇಪ್ ಆಗಿದೆ. ಬೈಕ್‌ಗಳಲ್ಲಿ ಎಸ್ಕೇಪ್ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇತ್ತೀಚಿಗೆ ಆನೇಕಲ್ ಉಪ ವಿಭಾಗದ ವ್ಯಾಪ್ತಿಯಲ್ಲಿ ನಿರಂತರವಾಗಿ ಕಳ್ಳತನ, ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜಾರೋಷವಾಗಿ ಹಾಡುಹಗಲಿನಲ್ಲಿ ಕೃತ್ಯಗಳು ನಡೆಯುತ್ತಿವೆ. ನಿನ್ನೆ ಸಂಜೆ ಘಟನೆ ನಡೆದರೂ ಸಹ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿರಲಿಲ್ಲ. ಇಂದು ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಂಗನಾಥ ಆರೋಗ್ಯವನ್ನು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್‌ಪಿ ಪುರುಷೋತ್ತಮ್ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಂದ ಹಾಕಿ ವಿಶ್ವಕಪ್ ಟ್ರೋಫಿ-2023 ಅನಾವರಣ

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆ ಭದ್ರತೆಗೆ ನೇಮಿಸಿದ್ದ ಮಹಿಳಾ ಪೊಲೀಸರ ಸಖತ್ ಡಾನ್ಸ್ – ನಾಲ್ವರು ಅಮಾನತು

    ಅಯೋಧ್ಯೆ ಭದ್ರತೆಗೆ ನೇಮಿಸಿದ್ದ ಮಹಿಳಾ ಪೊಲೀಸರ ಸಖತ್ ಡಾನ್ಸ್ – ನಾಲ್ವರು ಅಮಾನತು

    ಲಕ್ನೋ: ನೃತ್ಯ (Dance) ಮನಸ್ಸಿಗೆ ಆಹ್ಲಾದ ನೀಡುವ ಕಲಾಪ್ರಕಾರ. ದೇಹದ ಚೈತನ್ಯ ಹೆಚ್ಚಿಸುವ ಜೊತೆಗೆ ಮನಸ್ಸಿನ ಉಲ್ಲಾಸವನ್ನೂ ಇಮ್ಮಡಿಯಾಗಿಸುತ್ತದೆ. ಹೀಗಾಗಿ, ಸಾಕಷ್ಟು ಮಂದಿ ಕುಣಿಯಲು ಖುಷಿಪಡುತ್ತಾರೆ. ಆದ್ರೆ ಕರ್ತವ್ಯ ನಿರತ ಪೊಲೀಸರು (Police) ವಿರಾಮದ ಸಮಯದಲ್ಲಿ ವಿಭಿನ್ನ ನೃತ್ಯಕ್ಕೆ ಹೆಜ್ಜೆಹಾಕಿದ್ದು, ಇದೀಗ ಮೆನೆಯಲ್ಲಿ ಕೂರುವಂತೆ ಮಾಡಿದೆ.

    ಹೌದು. ಉತ್ತರಪ್ರದೇಶದ (UttarPradesh) ಅಯೋಧ್ಯೆಯ ರಾಮಜನ್ಮಭೂಮಿ ಸ್ಥಳದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್ ಪೇದೆಗಳು (Women Police Constable) ಡಾನ್ಸ್ ಮಾಡಿದ್ದಕ್ಕೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಟ್ರಬಲ್ ಶೂಟರ್‌ಗೆ ಈಗ ಟ್ರಬಲ್ – `ಕುಕ್ಕರ್ ಬ್ಲಾಸ್ಟ್’ ವಿವಾದದಲ್ಲಿ ಡಿಕೆಶಿ ಏಕಾಂಗಿ?

    ಪೇದೆಗಳು ಭೋಜ್‌ಪುರಿ ಹಾಡಿಗೆ ಸಖತ್ ಡಾನ್ಸ್ ಮಾಡಿರುವ ವೀಡಿಯೋ ಜಾಲತಾಣದಲ್ಲಿ ಸದ್ದು (Video Viral) ಮಾಡ್ತಿದ್ದಂತೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ಆದ್ರೆ ಅಮಾನತುಗೊಂಡಿರುವ ಪೇದೆಗಳು ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ದಾಸ್‌ಗೆ ಚಿನ್ನದ ಚೈನ್, ಮನಸ್ಸು ಆಫರ್ ಮಾಡಿದ ಗುರೂಜಿ

    ASP (ಭದ್ರತೆ) ಪಂಕಜ್ ಪಾಂಡೆ ಸಲ್ಲಿಸಿದ ತನಿಖಾ ವರದಿಯನ್ನು ಆಧರಿಸಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಜಿ.ಮುನಿರಾಜ್ ಅವರು ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ, ಕಾಶಿಶ್ ಸಾಹ್ನಿ ಹಾಗೂ ಸಂಧ್ಯಾ ಸಿಂಗ್ ಮಹಿಳಾ ಪೇದೆಗಳನ್ನು ಅಮಾನತು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಟ್ರಕ್‌ ಹತ್ತಿಸಿ ಕೊಲೆ – 24 ಗಂಟೆಯಲ್ಲಿ 3ನೇ ದುರ್ಘಟನೆ

    ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಟ್ರಕ್‌ ಹತ್ತಿಸಿ ಕೊಲೆ – 24 ಗಂಟೆಯಲ್ಲಿ 3ನೇ ದುರ್ಘಟನೆ

    ಗಾಂಧೀನಗರ: ತಡೆಯಲು ಮುಂದಾದ ಗುಜರಾತ್‌ ಪೊಲೀಸ್‌ಗೆ ಟ್ರಕ್‌ ಹತ್ತಿಸಿ ಕೊಲೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕಳೆದ 24 ಗಂಟೆಯಲ್ಲಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆ ಮಾಡಿದ ಮೂರನೇ ಘಟನೆ ಇದಾಗಿದೆ.

    ಪೊಲೀಸ್‌ ಕಾನ್‌ಸ್ಟೇಬಲ್‌ ಕಿರಣ್‌ ರಾಜ್‌ ಹತ್ಯೆಯಾದವರು. ಗುಜರಾತ್‌ನ ಬೋರ್ಸಾದ್‌ನಲ್ಲಿ ಪೊಲೀಸ್ ಪೇದೆ ಮೇಲೆ ಟ್ರಕ್‌ ಹತ್ತಿಸಿ ಕೊಲೆ ಮಾಡಲಾಯಿತು. ಇದನ್ನೂ ಓದಿ: DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    ವಾಹನದಲ್ಲಿ ರಾಜಸ್ಥಾನದ ನಂಬರ್‌ ಪ್ಲೇಟ್‌ ಹೊಂದಿದ್ದ ಅನುಮಾನಾಸ್ಪದ ಟ್ರಕ್ ಅನ್ನು ನಿಲ್ಲಿಸಲು ಕಾನ್‌ಸ್ಟೇಬಲ್‌ ಪ್ರಯತ್ನಿಸಿದ್ದಾರೆ. ಆದರೆ ಟ್ರಕ್ ಚಾಲಕ ನಿಲ್ಲಿಸುವ ಬದಲು ವೇಗವನ್ನು ಹೆಚ್ಚಿಸಿ ಅವರ ಮೇಲೆ ಹತ್ತಿಸಿದ್ದಾರೆ. ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಕಾನ್‌ಸ್ಟೇಬಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಟ್ರಕ್ ಚಾಲಕನನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ- ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

    ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಬ್ಬರು ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ಈಚೆಗೆ ನಡೆದಿತ್ತು. ಅಂತೆಯೇ ಜಾರ್ಖಂಡ್‌ನಲ್ಲಿ ತಪಾಸಣೆಗೆ ಮುಂದಾದ ಮಹಿಳಾ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗೆ ವಾಹನದಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವ ಘಟನೆಯೂ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್

    ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್

    ನವದೆಹಲಿ: ಪೊಲೀಸ್‌ ಅಧಿಕಾರಿಯೊಬ್ಬರು ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿಗಳನ್ನು ಉಡುಗೊರೆಯಾಗಿ ನೀಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.

    ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿ ಶಿವಂಗ್ ಶೇಖರ್ ಗೋಸ್ವಾಮಿ ಈ ಕ್ಲಿಪ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ, ಬಂಡಿ ಎಳೆಯುವವನು ರಸ್ತೆಯಲ್ಲಿ ಬರಿಗಾಲಿನಲ್ಲಿ ನಡೆಯುತ್ತಿರುತ್ತಾನೆ. ಕೆಲವು ಸೆಕೆಂಡುಗಳ ನಂತರ, ಪೊಲೀಸ್ ಅಧಿಕಾರಿಯೊಬ್ಬರು ಆ ವ್ಯಕ್ತಿಗೆ ಹೊಸ ಚಪ್ಪಲಿಗಳನ್ನು ಉಡುಗೊರೆಯಾಗಿ ನೀಡುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದು. ಇದನ್ನೂ ಓದಿ: ಟ್ರೈನಿ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – IAS ಅಧಿಕಾರಿ ವಶ 

    ವೀಡಿಯೋ ಕೊನೆಯಲ್ಲಿ, ಬಂಡಿ ಎಳೆಯುವವನು ಚಪ್ಪಲಿಯನ್ನು ಹಾಕಿಕೊಂಡು ಪೊಲೀಸ್‍ಗೆ ಧನ್ಯವಾದ ಹೇಳುತ್ತಾನೆ. ಈ ಪೋಸ್ಟ್ ನೋಡಿದ ನೆಟ್ಟಿಗರು, ‘ತುಂಬಾ ಒಳ್ಳೆಯ ಕೆಲಸ,’ ‘ಪೊಲೀಸ್‍ಗೆ ವಂದನೆಗಳು’, ‘ಮಾನುಕುಲಕ್ಕೆ ಸೇವೆ ಸಲ್ಲಿಸುವುದು ಶ್ರೇಷ್ಠವಾಗಿದೆ’, ‘ಗ್ರೇಟ್ ಹ್ಯುಮಾನಿಟಿ ಸರ್. ನಿನಗೆ ನಮಸ್ಕಾರ’ ಎಂದು ಕಾಮೆಂಟ್‍ಗಳ ಸುರಿಮಳೆಯೇ ಬರುತ್ತಿದೆ. ಇನ್ನೂ ಕೆಲವರು ಹಾರ್ಟ್ ಎಮೋಜಿಗಳನ್ನು ಕಾಮೆಂಟ್ ಮಾಡಿದ್ದು, ಪೊಲೀಸ್ ಅಧಿಕಾರಿಯ ಔದಾರ್ಯಯನ್ನು ಹೊಗಳಿದ್ದಾರೆ.

    ಈ ವೀಡಿಯೋ ಟ್ವಿಟ್ಟರ್‌ನಲ್ಲಿ 2,57,000ಕ್ಕೂ ಹೆಚ್ಚು ವ್ಯೂ ಮತ್ತು 17,000ಕ್ಕೂ ಹೆಚ್ಚು ಲೈಕ್‌ಗಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್‌ ಕಾನ್ಸ್‌ಟೇಬಲ್ ವರ್ಗಾವಣೆ ಅವಧಿಯಲ್ಲಿ ಕಡಿತ

    ಪೊಲೀಸ್‌ ಕಾನ್ಸ್‌ಟೇಬಲ್ ವರ್ಗಾವಣೆ ಅವಧಿಯಲ್ಲಿ ಕಡಿತ

    ಬೆಂಗಳೂರು: ಸಿಪಿಸಿ ಹಾಗೂ ಸಿಹೆಚ್‌ಸಿ ಹುದ್ದೆಗಳಿಗೆ ಸಾಮಾನ್ಯ ವರ್ಗಾವಣೆಗೆ ನಿಗದಿಪಡಿಸಲಾಗಿದ್ದ ಕನಿಷ್ಠ ಸೇವಾ ಅವಧಿಯನ್ನು 6 ವರ್ಷಗಳ ಬದಲಿಗೆ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ಬೆಂಗಳೂರಿನ ಕಮಿಷನರ್ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಇದು ಅನ್ವಯವಾಗಲಿದೆ. ಒಂದೇ ಕಡೆ ಹಲವು ಠಾಣೆಗಳಲ್ಲಿ ಪೊಲೀಸ್‌ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಒಂದೇ ಕಡೆ ಇದ್ದು ಹಲವು ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಅವಧಿಗೆ ತಿದ್ದುಪಡಿ ತರಲಾಗಿದೆ. ಇದನ್ನೂ ಓದಿ: ಹಿಂದಿನಂತೆ 5 ರೂಪಾಯಿ ಚಿಕಿತ್ಸೆ ಮುಂದುವರಿಸುತ್ತೇನೆ – ಸಂಪೂರ್ಣ ಚೇತರಿಕೆ ಕಂಡ ಡಾ.ಶಂಕರೇಗೌಡ

    ರೌಡಿಶೀಟರ್, ಆರೋಪಿಗಳ ಜೊತೆ ಪೊಲೀಸರು ಕೈ ಜೋಡಿಸುತ್ತಿರುವುದು ಬೆಳಕಿಗೆ ಬಂದಿದೆ. ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ವರ್ಗಾವಣೆ ಮಾಡುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.

    Live Tv

  • ಬೆಂಗ್ಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ

    ಬೆಂಗ್ಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ

    ಬೆಂಗಳೂರು: PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣವು ಭಾರೀ ಸದ್ದು ಮಾಡುತ್ತಿದ್ದು, ಸಿಐಡಿ ಅಧಿಕಾರಿಗಳು ಬೆಂಗಳೂರಿನ ಪರೀಕ್ಷಾ ಕೇಂದ್ರಗಳತ್ತ ಹದ್ದಿನ ಕಣ್ಣು ಹಾಯಿಸಿದ್ದಾರೆ. ಈ ಹೊತ್ತಿನಲ್ಲಿ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬ ಸಿಕ್ಕಿಬಿದ್ದಿದ್ದಾನೆ.

    PoliceCommissioner (1)

    ಪೇದೆ ಗಜೇಂದ್ರನನ್ನು ಸಿಐಡಿ ಬಂಧಿಸಿದೆ. ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಕದ್ದು ಕದ್ದು ಎಕ್ಸಾಂ ಬರೆದು ಪಾಸಾಗಿದ್ದ. ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ‍್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರೋದಕ್ಕೂ ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

    ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿದ್ದಾರೆ.

  • ಪೊಲೀಸ್ ಇಲಾಖೆಯಲ್ಲಿರುವ ಬ್ರಿಟಿಷ್ ಪದ್ಧತಿ ಕೊನೆಯಾಗಬೇಕು: ನಿವೃತ್ತ ಪೊಲೀಸ್ ಸಂದೀಪ್

    ಪೊಲೀಸ್ ಇಲಾಖೆಯಲ್ಲಿರುವ ಬ್ರಿಟಿಷ್ ಪದ್ಧತಿ ಕೊನೆಯಾಗಬೇಕು: ನಿವೃತ್ತ ಪೊಲೀಸ್ ಸಂದೀಪ್

    ಉಡುಪಿ: ಪೊಲೀಸ್ ಇಲಾಖೆಯಲ್ಲಿ ಇನ್ನೂ ಬ್ರಿಟಿಷ್ ಸಿಸ್ಟಮ್ ಇದೆ. ಪೊಲೀಸ್ ಇಲಾಖೆಯಲ್ಲಿ ಆತ್ಮಹತ್ಯೆಗಳು ಹೆಚ್ಚಾಗುತ್ತಿದೆ. ಆರೋಗ್ಯ, ಆರ್ಥಿಕ ಸಮಸ್ಯೆ ಜೊತೆ ಆರ್ಡರ್ ಸಿಸ್ಟಮ್ ಮತ್ತು ಪೊಲೀಸ್ ಕಿರುಕುಳ ಇದಕ್ಕೆ ಕಾರಣ ಎಂದು ನಿವೃತ್ತ ಪೊಲೀಸ್ ಸಂದೀಪ್ ಆರೋಪಿಸಿದ್ದಾರೆ.

    ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್‍ಸ್ಟೇಬಲ್ ರಾಜೇಶ್ ಕುಂದರ್ ತನ್ನ ಕರ್ತವ್ಯಕ್ಕೆ ಕೊಟ್ಟ 303 ರೈಫಲ್‍ನಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಗಳ ಕೊಠಡಿಗೆ ಬೆಂಗಾವಲಾಗಿದ್ದ ರಾಜೇಶ್ ಕುಂದರ್ ಬೆಳಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಮೃತದೇಹದ ಅಂತಿಮ ದರ್ಶನ ಪಡೆದ ಸಂದೀಪ್ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮೇಲಿಂದ ಮೇಲೆ ಅವಘಡಗಳು ನಡೆಯುತ್ತಿದ್ದರೂ ಗೃಹ ಸಚಿವರು, ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

    75 ವರ್ಷದ ಹಿಂದೆ ಬ್ರಿಟಿಷರು ಭಾರತ ಬಿಟ್ಟು ಹೋದರೂ, ಪೊಲೀಸ್ ಅಧಿಕಾರಿಗಳು ಬ್ರಿಟಿಷರ ಮನಸ್ಥಿತಿಯಲ್ಲಿದ್ದಾರೆ. ರಾಜ್ಯದಲ್ಲಿ 250ಕ್ಕಿಂತ ಹೆಚ್ಚು  ಪೊಲೀಸರ ಆತ್ಮಹತ್ಯೆಗಳು ನಡೆದಿದೆ. ಇಷ್ಟೆಲ್ಲ ಬೆಳವಣಿಗೆಗಳು ಆದರೂ ಯಾರೂ ಕೂಡ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಂಬಳ ಜಾಸ್ತಿ ಆಗಲಿಲ್ಲ ಎಂದಾಗ ನಾವು ಭತ್ಯೆ ಜಾಸ್ತಿ ಮಾಡುತ್ತೇವೆ ಎಂಬ ಉತ್ತರ ಕೊಡುತ್ತಾರೆ. ಆತ್ಮಹತ್ಯೆಗಳು ಸಾವುಗಳು ಆದರೆ ಮಾತ್ರ ಅದರ ಬಗ್ಗೆ ಚಿಂತನೆ ನಡೆಸಬೇಕಾಗಿರುವುದು ದುರ್ದೈವ. ಹಿರಿಯ ಅಧಿಕಾರಿಗಳ ಆರ್ಡರ್ ಕೆಲಸ ಕೊಟ್ಟು ಮಾನಸಿಕ ಹಿಂಸೆ ಕೊಡುವುದು ನಿಲ್ಲಬೇಕು. ಪೊಲೀಸ್ ಇಲಾಖೆಯ ಸಮಸ್ಯೆಗಳನ್ನು ಹೇಳುವುದು ಬೋರು ಕಲ್ಲಿನ ಮೇಲೆ ನೀರು ಸುರಿದಂತೆ ಎಂದು ಸಂದೀಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವರ ಅನಕ್ಷರಸ್ಥನೆಂದು ಮಂಟಪದಲ್ಲೇ ಮದುವೆ ನಿಲ್ಲಿಸಿದ ವಧು!

    ಸಣ್ಣಪುಟ್ಟ ವಿಚಾರಕ್ಕೆ ರಾಜೇಶ್ ಅವರನ್ನು ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ. ಆರ್ಥಿಕವಾಗಿ ರಾಜೇಶ್‍ಗೆ ಸಮಸ್ಯೆ ಇರಲಿಲ್ಲ. ಮಾನಸಿಕವಾಗಿ ಕರ್ತವ್ಯ ವಿಚಾರದಲ್ಲಿ ಬಹಳ ಖಿನ್ನರಾಗಿದ್ದರು. ಸಸ್ಪೆಂಡ್ ಮಾಡುವುದು, ರಜೆ ಕೊಡದೆ, ಪೊಲೀಸ್ ಕೆಲಸ ಹೊರತಾದ ಕೆಲಸಗಳನ್ನು ನಿಗದಿ ಮಾಡುವ ಬೆಳವಣಿಗೆಗಳ ಕುರಿತಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

  • ರಕ್ಷಿಸಬೇಕಾದ ಆರಕ್ಷಕನೇ ಕಳ್ಳನಾದ – ಬೈಕ್ ಕಳ್ಳತನ ಮಾಡಿಸ್ತಿದ್ದ ಕಾನ್‍ಸ್ಟೇಬಲ್ ಅರೆಸ್ಟ್

    ರಕ್ಷಿಸಬೇಕಾದ ಆರಕ್ಷಕನೇ ಕಳ್ಳನಾದ – ಬೈಕ್ ಕಳ್ಳತನ ಮಾಡಿಸ್ತಿದ್ದ ಕಾನ್‍ಸ್ಟೇಬಲ್ ಅರೆಸ್ಟ್

    ಬೆಂಗಳೂರು: ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್‍ಸ್ಟೇಬಲ್‍ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ.

    ಪೊಲೀಸ್ ಕಾನ್‍ಸ್ಟೇಬಲ್ ಹೊನ್ನಪ್ಪ ರವಿ ಬಂಧಿತ ಆರೋಪಿ. ಈತ ಅಪ್ರಾಪ್ತರನ್ನು ಬಳಸಿಕೊಂಡು ಬೆಂಗಳೂರು, ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದ. ಈವರೆಗೂ ಹೊನ್ನಪ್ಪ ರವಿ ಮಾರಾಟ ಮಾಡಿದ್ದ 53 ಬೈಕ್‍ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊನ್ನಪ್ಪ, ರಾಜಸ್ಥಾನದ ರಮೇಶ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮೀಟರ್ ಬಡ್ಡಿ ದಂಧೆಗೆ ಮಹಿಳೆ ಬಲಿ – ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ

    2016ರ ಬ್ಯಾಚ್‍ನ ಸಿವಿಲ್ ಕಾನ್‍ಸ್ಟೇಬಲ್ ಆಗಿರುವ ಹೊನ್ನಪ್ಪ ರವಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಆಗಿ ಕಾರ್ಯನಿರ್ವಹಿಸುತ್ತಿದ್ದ. ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿರುವ ಹೊನ್ನಪ್ಪ ಮಾರಾಟ ಮಾಡಿದ ಬೈಕ್‍ನಿಂದ ಬಂದ ಹಣದಲ್ಲಿ ಐದರಿಂದ ಆರು ಸಾವಿರ ಹಣವನ್ನು ಹುಡುಗರಿಗೆ ನೀಡುತ್ತಿದ್ದ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಹಿಳಾ ಸಿಬ್ಬಂದಿ ದರ್ಪ

    ಸದ್ಯ ಕಾನ್‍ಸ್ಟೇಬಲ್‍ನನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದಿರುವ ಮಾಗಡಿ ರೋಡ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧಗಳನ್ನು ನಿಯಂತ್ರಿಸಬೇಕಾದ ಆರಕ್ಷಕನೇ ಕಳ್ಳನಾಗಿರುವುದು ವಿಪರ್ಯಾಸ.