Tag: Police custody

  • ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ

    ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ

    – 4 ದಿನ ಪೊಲೀಸ್ ಕಸ್ಟಡಿಗೆ ವೀರೇಂದ್ರ ಪಪ್ಪಿ

    ಚಿತ್ರದುರ್ಗ: ಜನಪ್ರತಿನಿಧಿ ಅಂದ್ರೆ ಜನಸಾಮಾನ್ಯರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ (KC Veerendra Puppy) ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ (Online Betting) ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬ ಮಾಹಿತಿ ಇಡಿ (ED) ದಾಳಿ ವೇಳೆ ಬಯಲಾಗಿದೆ.

    ಚಿತ್ರದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿನಿಮಾ ನಟ ದೊಡ್ಡಣ್ಣನ ಅಳಿಯ ಕೆಸಿ ವೀರೇಂದ್ರ ಪಪ್ಪಿ ಹಿಂದಿನಿಂದಲೂ ಕ್ಯಾಸಿನೋ ದೊರೆ ಅಂತಾನೇ ಫೇಮಸ್. ಗೋವಾ, ಶ್ರೀಲಂಕಾ ಸೇರಿದಂತೆ ವಿವಿದೆಡೆಗಳಲ್ಲಿ ಕ್ಯಾಸಿನೋ ನಡೆಸುತ್ತಿರುವ ಕೆಸಿ ವೀರೇಂದ್ರ, ನಾವು ಹಿಂದಿನಿಂದಲೂ ಕೋಟ್ಯಾಧೀಶ್ವರರು, ನಮಗೆ ಜನಸಾಮಾನ್ಯರು ಹಾಗೂ ಸರ್ಕಾರದ ಹಣ ಬೇಕಿಲ್ಲ, ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆಂದು 2023ರ ವಿಧಾನಸಭೆ ಚುನಾವಣೆ ವೇಳೆ ಭರ್ಜರಿ ಪ್ರಚಾರ ಗಿಟ್ಟಿಸಿದ್ದರು. ಚಿತ್ರದುರ್ಗ ಕ್ಷೇತ್ರದಲ್ಲಿ ಹಣದಹೊಳೆ ಹರಿಸಿ ಕಾಂಗ್ರೆಸ್ ಶಾಸಕರಾಗಿ ಗೆದ್ದಿದ್ದಾರೆ. ಆದರೆ ಶಾಸಕ ವೀರೇಂದ್ರ ಹೇಗೆ ಕೋಟ್ಯಾಧಿಪತಿ ಆದ ಎನ್ನೋದನ್ನ ಶಾಸಕರ ತವರೂರಾದ ಚಳ್ಳಕೆರೆ, ಬೆಂಗಳೂರು, ಪಣಜಿ, ಗ್ಯಾಂಗ್ಟಾಕ್, ಜೋಧಪುರ, ಹುಬ್ಬಳ್ಳಿ ಮತ್ತು ಮುಂಬೈ ಸೇರಿದಂತೆ 31 ಕಡೆಗಳಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಶಾಸಕರ ಅಸಲಿ ಬಂಡವಾಳವನ್ನು ಬಯಲುಮಾಡಿದ್ದಾರೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ

    ಶಾಸಕ ವೀರೇಂದ್ರನ ಅಸಲಿ ಬಂಡವಾಳದ ಬೆನ್ನತ್ತಿರುವ ಇಡಿ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಕಿಂಗ್ 567, ರಾಜಾ 567, ಲಯನ್ 567 ಸೇರಿದಂತೆ ಇತ್ಯಾದಿಗಳ ಹೆಸರಿನಲ್ಲಿ ನಡೆಸುತ್ತಿರುವ ಆನ್‌ಲೈನ್ ಬೆಟ್ಟಿಂಗ್ ತಾಣಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಹಣ ವರ್ಗಾವಣೆಗೆ ವೆಬ್‌ಸೈಟ್, ರೂಟಿಂಗ್ ಮಾಡಲು ಹಲವು ಗೇಟ್‌ವೇಗಳನ್ನು ಬಳಕೆ ಮಾಡಿದ್ದು, ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿರುವ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ದಂಧೆಗೆ ಶಾಸಕವೀರೇಂದ್ರ ಪಪ್ಪಿಯ ಸಹೋದರ ಕೆಸಿ ತಿಪ್ಪೆಸ್ವಾಮಿ ಪ್ರಮುಖ ಕಿಂಗ್‌ಪಿನ್ ಆಗಿದ್ದು, ದುಬೈನಿಂದ 3 ವ್ಯಾಪಾರ ಘಟಕಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಹೆಸರಲ್ಲಿ ಶಾಸಕ ಕೆಸಿ ವೀರೇಂದ್ರ ಸಹೋದರನಾದ ಕೆಸಿ ತಿಪ್ಪೆಸ್ವಾಮಿ ಹಾಗೂ ಕೆಸಿ ನಾಗರಾಜ್ ಪುತ್ರ ಪೃಥ್ವಿ ಎನ್ ರಾಜ್, ಅನಿಲ್ ಗೌಡ ಸೇರಿದಂತೆ ಇತರರ ಸಹಭಾಗಿತ್ವದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದಾರೆ. ಜೊತೆಗೆ ಈ ವಹಿವಾಟುಗಳಲ್ಲಿ ಗೇಟ್‌ವೇಗಳು ಮತ್ತು ಟಿಎಸ್‌ಪಿಗಳ ಎಸ್ಕ್ರೊ ಖಾತೆಗಳ ಮೂಲಕವೂ ಆಟಗಾರರ ಹಣದ ಠೇವಣಿ ಮಾಡುತ್ತಿದ್ದು, ಈ ಹಣವನ್ನು ಹವಾಲಾ ವಹಿವಾಟುಗಳು ಸೇರಿದಂತೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡಿದ್ದಾರೆಂದು ಇಡಿ ಶೋಧಕಾರ್ಯದಲ್ಲಿ ಬಹಿರಂಗಪಡಿಸಿದೆ. ಇದನ್ನೂ ಓದಿ: ‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ

    ಇನ್ನು ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ

    ಒಟ್ಟಾರೆ ಹಾಸಿಗೆ ಇದ್ದಷ್ಟು ಕಾಲು ಚಾಚಬೇಕೆಂಬ ಮಾತಿದೆ. ಆದರೆ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಅಲ್ಪಾವಧಿಯಲ್ಲೇ 2,000 ಕೋಟಿ ರೂ. ಲಾಭಗಳಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹವಾಲದಲ್ಲು ತನ್ನ ವಹಿವಾಟು ನಡೆಸಿರುವ ಪರಿಣಾಮ ಇಡಿ ಕಸ್ಟಡಿಯಲ್ಲಿರುವ ವೀರೇಂದ್ರಗೆ ದಿನದಿಂದ ದಿನಕ್ಕೆ ಮತ್ತಷ್ಟು ಸಂಕಷ್ಟ ಎದುರಾಗೋದು ಗ್ಯಾರಂಟಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ

    ಇನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು 4 ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಇಡಿ ಕಸ್ಟಡಿ ಅವಧಿ ಅಂತ್ಯಗೊಂಡ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಲು ಕೋರ್ಟ್ ಸೂಚನೆ ಕೊಟ್ಟಿದೆ. ರಾತ್ರಿ 9 ಗಂಟೆವರೆಗೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿದೆ. ಉತ್ತಮ ಆಹಾರ, ವೈದ್ಯಕೀಯ ಸೇವೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆದೇಶ ಕೊಟ್ಟಿದೆ. ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಕೋರ್ಟ್ ಮುಂದೆ ವೀರೇಂದ್ರ ಪಪ್ಪಿಯನ್ನು ಹಾಜರುಪಡಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು

  • ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್

    – ಮಾ.15ರವರಗೆ ಪೊಲೀಸ್ ಕಸ್ಟಡಿಗೆ ರನ್ಯಾ ಗೆಳೆಯ

    ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ (Gold Smuggling) ಕೇಸ್‌ಗೆ ಸಂಬಂಧಿಸಿದಂತೆ ಸ್ಟಾರ್ ಮಾಲೀಕನ ಮೊಮ್ಮಗನನ್ನು ಡಿಆರ್‌ಐ (DRI) ಅಧಿಕಾರಿಗಳು ಬಂಧಿಸಿದ್ದಾರೆ.

    ರನ್ಯಾ ರಾವ್ ಗೆಳೆಯನಾಗಿರುವ ತರುಣ್ ರಾಜ್‌ನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈನಲ್ಲಿ ರನ್ಯಾ ಜೊತೆ ತರುಣ್ ರಾಜ್ ಇದ್ದ ಬಗ್ಗೆ ಡಿಆರ್‌ಐಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸ್ಮಗ್ಲಿಂಗ್ ಬಗ್ಗೆ ತರುಣ್‌ರಾಜ್‌ನನ್ನು ಡಿಆರ್‌ಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ತರುಣ್ ರಾಜ್‌ಗೆ ಫುಲ್ ಡ್ರಿಲ್ ಮಾಡಿದ್ದಾರೆ. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಹಿಂದಿರುವ ಸಚಿವರ ಮಾಹಿತಿ ಬಹಿರಂಗಪಡಿಸಿ: ಬಿವೈವಿ

    ತರುಣ್ ರಾಜ್ ದುಬೈ ಅಲ್ಲಿ ಕೂಡ ಆರ್ಥಿಕ ವ್ಯವಹಾರ ಹೊಂದಿದ್ದ. ರನ್ಯಾ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ತರುಣ್ ರಾಜ್‌ನನ್ನು ಬಂಧಿಸಿದ ಡಿಆರ್‌ಐ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ತರುಣ್ ರಾಜ್‌ನನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಮಾ.15ರವರಗೆ ತರುಣ್ ರಾಜ್‌ನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದನ್ನೂ ಓದಿ: ತೂಕ ಹೆಚ್ಚಾಗೋ ಭಯ, ಐದಾರು ತಿಂಗಳು ಊಟವಿಲ್ಲ, ಬರೀ ನೀರು – ಯೂಟ್ಯೂಬ್‌ ನೋಡಿ ಡಯಟ್‌ ಮಾಡ್ತಿದ್ದ ಕೇರಳ ಯುವತಿ ಸಾವು!

  • ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ಬೆಂಗಳೂರು: ಗುತ್ತಿಗೆದಾರರಿಗೆ ಜೀವಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಪಟ್ಟಿರುವ ಶಾಸಕ ಮುನಿರತ್ನ (Munirathna) ಪೊಲೀಸ್ ಕಸ್ಟಡಿ (Police Custody) ಅಂತ್ಯವಾಗಲಿದ್ದು ಮಂಗಳವಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

    ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಖುದ್ದು ವಿಚಾರಣೆಯ ನೇತೃತ್ವ ವಹಿಸಿದ್ದಾರೆ. ವಿಚಾರಣೆಯಲ್ಲಿ ಇದು ನನ್ನ ಆಡಿಯೋ ಅಲ್ಲ ಅಂತ ಮುನಿರತ್ನ ಪುನರುಚ್ಛರಿಸಿದ್ದಾರೆ.

     

    ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ. ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ನನ್ನನ್ನು ಬಲಿಪಶು ಮಾಡುತ್ತಿದ್ದಾರೆ ಎಂಬುದಾಗಿ ದೂರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ

    ಇಂದು ಸಂಜೆ ಹೊತ್ತಿಗೆ ಮುನಿರತ್ನ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಲಾಯಿತು.

     

  • ಸಲಿಂಗಕಾಮ ಪ್ರಕರಣ – ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

    ಸಲಿಂಗಕಾಮ ಪ್ರಕರಣ – ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

    ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನಕ್ಕೆ ಒಳಗಾದ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನು ಕೋರ್ಟ್‌ (Court) 8 ದಿನ  ಸಿಐಡಿ ಕಸ್ಟಡಿಗೆ ನೀಡಿದೆ.

    ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ (CID) ವಹಿಸಿ ಭಾನುವಾರ ಆದೇಶಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

    ಇಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಜನಪ್ರತಿನಿಧಿಗಳ  ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 8 ದಿನ ಪೊಲೀಸ್‌ ಕಸ್ಟಡಿಗೆ ನೀಡಿದರು. ಜುಲೈ 1 ಸಂಜೆ 4 ಗಂಟೆಗೆ ಸೂರಜ್‌ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.

    ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗೆ ಸೂರಜ್‌ರನ್ನು ಅಧಿಕೃತವಾಗಿ ಬಂಧಿಸಿದರು.

    ಲೈಂಗಿಕ ದೌರ್ಜನ್ಯಕ್ಕೆಒಳಪಟ್ಟಿದ್ದಾರೆ ಎನ್ನಲಾದ ಸಂತ್ರಸ್ತನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

  • ದರ್ಶನ್‌ ಪೊಲೀಸ್‌ ಕಸ್ಟಡಿಗೆ,  ಪವಿತ್ರಾ ಗೌಡ ಜೈಲಿಗೆ

    ದರ್ಶನ್‌ ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಜೈಲಿಗೆ

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder Case) ದರ್ಶನ್‌ (Darshan) ಸೇರಿದಂತೆ  ನಾಲ್ವರು ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ  (Pavithra Gowda) ಮತ್ತು ಇತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿತು.

    ಇಂದು ಕಸ್ಟಡಿ (Police Custody) ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಎಸಿಎಂಎಂ ಕೋರ್ಟ್‌ಗೆ (ACMM) ಹಾಜರು ಪಡಿಸಿದರು.

    ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಈ ವಾರ ಮತ್ತು ಕಳೆದ ವಾರ ನಡೆದಿತ್ತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್‌ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್‌ ಮತ್ತೆ ಶನಿವಾರದವರೆಗೆ ದರ್ಶನ್‌ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತು.

    ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಇಂದೇ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಪರಪ್ಪನ ಅಗ್ರಹಾರ ಸೇರಲಿದ್ದಾರೆ.

  • ಮೂರನೇ ರೇಪ್ ಕೇಸ್‍ನಲ್ಲಿ ಪ್ರಜ್ವಲ್‍ಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

    ಮೂರನೇ ರೇಪ್ ಕೇಸ್‍ನಲ್ಲಿ ಪ್ರಜ್ವಲ್‍ಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

    ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲು ಪಾಲಾಗಿದ್ದಾರೆ. ಆದರೆ ಪ್ರಜ್ವಲ್ ವಿರುದ್ಧದ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

    ಈಗಾಗಲೇ ಎರಡು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಎಸ್‍ಐಟಿ (SIT) ಇದೀಗ ಮೂರನೇ ಪ್ರಕರಣದಲ್ಲಿ ಕಸ್ಟಡಿಗೆ ಪಡೆದುಕೊಂಡಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

    ನಿನ್ನೆಯಷ್ಟೆ 2ನೇ ಕೇಸ್‍ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ಕೋರ್ಟ್‍ನ ನ್ಯಾ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು. ಅದರಂತೆ ಪ್ರಜ್ವಲ್‍ರನ್ನು ಜೈಲಿಗೆ ಕಳಿಸಲಾಗಿತ್ತು. ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದು ಜೂನ್ 24ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಈ ಮಧ್ಯೆ ಇಂದು ಎಸ್‍ಐಟಿ ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಕೇಸ್‍ನಲ್ಲಿ ಕಸ್ಟಡಿಗೆ ಪಡೆದಿದೆ. ಇದನ್ನೂ ಓದಿ: ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ

  • ಲೈಂಗಿಕ ಕಿರುಕುಳ ಕೇಸ್‌ – ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

    ಲೈಂಗಿಕ ಕಿರುಕುಳ ಕೇಸ್‌ – ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

    ಬೆಂಗಳೂರು: ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್‌ ಕಸ್ಟಡಿ (Police Custody) ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 42ನೇ ಎಸಿಎಂಎಂ ನ್ಯಾಯಾಲಯವು (ACMM Court) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ನನಗೆ ಯಾರೂ ಹಿತಶತ್ರುಗಳಿಲ್ಲ, ನನಗೆ ನಾನೇ ಶತ್ರು, ಸೋಲಿಗೆ ನಾನೇ ಹೊಣೆ: ಡಿಕೆ ಸುರೇಶ್

    ಪ್ರಜ್ವಲ್ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‌ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿತ್ತು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ 14 ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಸಲಾಗಿತ್ತು.

    ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿತ್ತು. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿತ್ತು. ಒಂದು ಪ್ರಕರಣದ ತನಿಖೆಯನ್ನ ಎಸ್‌ಐಟಿ ಬಹುತೇಕ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಸಂಬಂಧ ಪ್ರತ್ಯೇಕವಾಗಿ ತನಿಖೆ ಶುರು ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿತ್ತು. ಆದರೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ‘ಎ ಮಾಸ್ಟರ್ ಪೀಸ್’ ನಿರ್ದೇಶಕನ ಜೊತೆ ಮದುವೆ ಆಗಿದೆ ಎಂದ ಜ್ಯೋತಿ ರೈ

  • ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ

    ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ

    ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ.

    ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣಕ್ಕೆ ತಲೆದಂಡ – ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

    ಎಸ್‍ಐಟಿ ಪರ ವಕೀಲರು ತನಿಖೆಗೆ ಸಮಯ ಸಾಕಾಗಿಲ್ಲ. ಮೊಬೈಲ್ ವಿಚಾರವಾಗಿ ಮಾಹಿತಿ ಇನ್ನೂ ಕೂಡ ಸಿಕ್ಕಿಲ್ಲ. ಮುಖ್ಯವಾಗಿ ಟೈಂ ಶಾರ್ಟೆಜ್ ಆಗಿದೆ. ವಿದೇಶದಲ್ಲಿ ಇದ್ದಾಗ ಹಣ ಹೇಗೆ ಸಂದಾಯ ಆಗಿದೆ ಗೊತ್ತಾಗಿಲ್ಲ. ಇವರು ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಇವರಿಗೆ ಹಣ ನೀಡಿದವರು ಯಾರು ಗೊತ್ತಾಗಬೇಕು. ಕೆಲವು ಸಂತ್ರಸ್ತೆಯರು, ಸಾಕ್ಷಿಗಳನ್ನು ಮುಖಾಮುಖಿ ಮಾಡಬೇಕಾಗಿದೆ. ಏನು ಕೇಳಿದ್ರೂ ಸರಿಯಾದ ಉತ್ತರವನ್ನು ನೀಡಿಲ್ಲ. ನಾನು ಏನು ಮಾಡಿಲ್ಲ ಅಂತ ಪ್ರಜ್ವಲ್ ಹೇಳುತ್ತಾ ಇದ್ದಾರೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋಗಿದ್ದರು ಹೀಗಾಗಿ ಜೂನ್ 10 ರ ತನಕ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

  • ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಮುಂಬೈ: ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಶೆ (Porsche Car Accident) ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ 17 ವರ್ಷದ ಬಾಲಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್‌ವಾಲ್ ಅವರನ್ನು ಬಂಧಿಸಿದ್ದ ಪೊಲೀಸರು ಇಂದು ನ್ಯಾಯಲಯದ ಮುಂದೆ ಹಾಜರುಪಡಿಸಿ ಎರಡು ದಿನಗಳ ಕಸ್ಟಡಿಗೆ (Police Custody) ಪಡೆದಿದ್ದಾರೆ.

    ಘಟನೆಗೆ ಅಪ್ರಾಪ್ತ ಬಾಲಕನಿಗೆ ಐಷಾರಾಮಿ ಕಾರ್ ನೀಡಿದ್ದು, ಬಾಲಕನ ತಂದೆಯ ನಿರ್ಲಕ್ಷವೂ ಕಾರಣವಾಗಿದ್ದು, ತನಿಖೆ ನಡೆಸಲು ಕಸ್ಟಡಿಗೆ ಬೇಕು ಎಂದು ಪೊಲೀಸರು ಮನವಿ ಮಾಡಿದರು. ವಾದ ಆಲಿಸಿದ ಕೋರ್ಟ್ ಎರಡು ದಿನಗಳ ಕಾಲ ವಿಶಾಲ್ ಅಗರ್‌ವಾಲ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    ಈ ನಡುವೆ ಬೆಂಗಳೂರಿನಲ್ಲಿ ಖರೀದಿಸಿದ್ದ ಕಾರಿಗೆ ಶಾಶ್ವತ ನೋಂದಣಿ ಮಾಡಿಸಿರಲಿಲ್ಲ. 1,758 ರೂ. ಶುಲ್ಕ ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದ ಹಿನ್ನೆಲೆ ಕಾರಿನ ನೋಂದಣಿಯನ್ನು ಶಾಶ್ವತವಾಗಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ದೇಶದಾದ್ಯಂತ ಈ ಪ್ರಕರಣದ ಬಗ್ಗೆ ವಿರೋಧ ವ್ಯಕ್ತವಾದ ಬಳಿಕ ಎಚ್ಚೆತ್ತಿರುವ ಅಧಿಕಾರಿಗಳು ಆರೋಪಿ ಬಾಲಕನಿಗೆ 17 ವರ್ಷ ತುಂಬಿದ್ದು ಆತನಿಗೆ 25 ವರ್ಷ ತುಂಬವವರೆಗೆ ಡ್ರೈವಿಂಗ್ ಲೈಸೆನ್ಸ್ ನೀಡಲಾಗುವುದಿಲ್ಲ ಎಂದು ಪುಣೆ ಆರ್‌ಟಿಓ ತಿಳಿಸಿದೆ. ಇದನ್ನೂ ಓದಿ: ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

    ತನಿಖೆ ಸದ್ಯ ಮುಂದುವರಿದಿದ್ದು, ಅಪ್ರಾಪ್ತ ಮದ್ಯಪಾನ ಮಾಡಲು ಹೋಗಿದ್ದ ಬಾರ್‌ನಿಂದ 48,000 ರೂ ಹಣದ ಬಿಲ್ ಅನ್ನು ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ – ಒಂದೇ ಕುಟುಂಬದ ನಾಲ್ವರು ದುರ್ಮರಣ

  • ಮೋದಿಗೆ ಚೊಂಬು ತೋರಿಸಲು ಬಂದ ನಲಪಾಡ್ ಪೊಲೀಸರ ವಶಕ್ಕೆ!

    ಮೋದಿಗೆ ಚೊಂಬು ತೋರಿಸಲು ಬಂದ ನಲಪಾಡ್ ಪೊಲೀಸರ ವಶಕ್ಕೆ!

    – ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಅರ್ಧಗಂಟೆ ಮುಂಚೆಯೇ ಬಂದು ಕುಳಿತಿದ್ದ ನಲಪಾಡ್‌ & ಗ್ಯಾಂಗ್‌

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ (Mohammed Nalapa) ಅವರನ್ನು ಪೊಲೀಸರು (Bengaluru Police) ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

    ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 28 ಸ್ಥಾನ ಗೆಲ್ಲಿಸೋಣ, ಆಮೇಲೆ ಕಾವೇರಿ, ಕೃಷ್ಣ ನೀರು ಕೊಡಿ ಅಂತ ಮೋದಿಯನ್ನ ಕೇಳೋಣ: ದೇವೇಗೌಡ

    ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು. ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್‌ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು.

    ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಕುಳಿತಿದ್ದ ನಲಪಾಡ್‌ & ಗ್ಯಾಂಗ್‌:
    ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ (ಮೇಖ್ರಿ ಸರ್ಕಲ್‌) ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್‌ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು. ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್‌ ಜೊತೆಗೆ 8 ಜನ ಇದ್ದರು. ಮೋದಿ ತೆರಳುವ ಸಂದರ್ಭದಲ್ಲೇ ಚೊಂಬು ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ