Tag: police department

  • ಬ್ರಿಟಿಷರ ಕಾಲದ `ಐಪಿಸಿ’ಗೆ ತಿಲಾಂಜಲಿ – ಇದು ಭಾರತೀಯರೇ ರೂಪಿಸಿದ ಪಕ್ಕಾ ದೇಸಿ ಕಾನೂನು!

    ಬ್ರಿಟಿಷರ ಕಾಲದ `ಐಪಿಸಿ’ಗೆ ತಿಲಾಂಜಲಿ – ಇದು ಭಾರತೀಯರೇ ರೂಪಿಸಿದ ಪಕ್ಕಾ ದೇಸಿ ಕಾನೂನು!

    ಬ್ರಿಟಿಷರ ಕಾಲದ ಕ್ರಿಮಿನಲ್‌ ಅಪರಾಧಗಳಿಗೆ ಸಂಬಂಧಿಸಿದ ಕಾನೂನಿನ ಬದಲಿಗೆ ರೂಪಿಸಲಾಗಿರುವ ಹೊಸ ಕಾನೂನು ಇಂದಿನಿಂದ ಜಾರಿಗೆ ಬಂದಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BNS), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು ಸಾಕ್ಷ್ಯ ಕಾಯ್ದೆಯು ಭಾರತೀಯ ಸಾಕ್ಷ್ಯ ಕಾಯ್ದೆಯಾಗಿ ಜಾರಿಗೆ ಬಂದಿದೆ. ಈ ಮೂಲಕ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ವಸಾಹತು ಕಾಲದ ಜಡತ್ವದಿಂದ ಹೊರತರುತ್ತದೆ ಎಂಬುದು ಕೇಂದ್ರ ಸರ್ಕಾರದ ಪ್ರತಿಪಾದನೆ. ಹೊಸ ಕಾನೂನು ಪ್ರಯೋಗಕ್ಕೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಇನ್ಪೆಕ್ಟರ್‌ಗಳಿಗೆ ತರಬೇತಿ ನೀಡಲಾಗಿದೆ. ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು, ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳು ಹಾಗೂ ಹಿರಿಯ ವಕೀಲರಿಂದ ತರಬೇತಿ ಕೊಡಿಸಲಾಗಿದೆ. ಸಿವಿಲ್‌ ಪೊಲೀಸ್‌ ಅಧಿಕಾರಿಗಳು (Civil Police Officers) ಹಾಗೂ ಸಿಬ್ಬಂದಿ ಆದ್ಯತೆ ಮೇರೆಗೆ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ 126 ವರ್ಷಗಳ ಹಿಂದಿನ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳಲ್ಲಿ 20 ಹೊಸ ಅಪರಾಧಗಳ ಸೇರ್ಪಡೆಯಾಗಿದೆ. 33 ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. 83 ಅಪರಾಧಗಳಿಗೆ ಅಧಿಕ ದಂಡ ವಿಧಿಸುವ ಜೊತೆಗೆ 23 ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

    ಅಷ್ಟಕ್ಕೂ ಏನಿದು ಕ್ರಿಮಿನಲ್‌ ಕಾನೂನು? ಹೊಸ ಕಾನೂನಿನಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಯಾವ ಅಪರಾಧಗಳಿಗೆ ಯಾವ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    2020ರಲ್ಲಿ ಕಾನೂನು ಪರಿಣತರ ಸಮಿತಿ ರಚನೆ:

    ಕೇಂದ್ರ ಸರ್ಕಾರವು (Central Government) 2020ರ ಮಾರ್ಚ್‌ನಲ್ಲಿ ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್‌ ಅನ್ನು ಪರಿಷ್ಕರಿಸಲು ಅಪರಾಧ ಕಾನೂನು ಸುಧಾರಣಾ ಸಮಿತಿ ರಚಿಸಿತ್ತು. ದೆಹಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಆಗಿನ ಉಪ ಕುಲಪತಿ ಪ್ರೊಫೆಸರ್ ಡಾ.ರಣಬೀರ್ ಸಿಂಗ್ ನೇತೃತ್ವದ ಸಮಿತಿಯು, ಎನ್‌ಎಲ್‌ಯು-ಡಿಯ ಹಿಂದಿನ ರಿಜಿಸ್ಟ್ರಾರ್ ಪ್ರೊ ಡಾ ಜಿ.ಎಸ್ ಬಾಜಪಾಯಿ, ಡಿಎನ್‌ಎಲ್‌ಯುದ ಉಪ ಕುಲಪತಿ ಪ್ರೊ.ಡಾ.ಬಾಲರಾಜ್ ಚೌಹಾಣ್, ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, ದೆಹಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನಿವೃತ್ತ ಜಡ್ಜ್ ಜಿ.ಪಿ ಥರೇಜಾ ಅವರನ್ನ ಒಳಗೊಂಡಿತ್ತು. 2022ರ ಫೆಬ್ರವರಿಯಲ್ಲಿ ಸಮಿತಿಯು ಸಾರ್ವಜನಿಕರ ಸಲಹೆಗಳನ್ನು ಪಡೆದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಅಪರಾಧ ಕಾನೂನುಗಳ ಸಮಗ್ರ ಪರಾಮರ್ಶೆಗೆ ಪ್ರಕ್ರಿಯೆ ಆರಂಭಿಸಿರುವುದಾಗಿ ರಾಜ್ಯಸಭೆಗೆ ಕಾನೂನು ಸಚಿವಾಲಯ 2022ರ ಏಪ್ರಿಲ್‌ನಲ್ಲಿ ತಿಳಿಸಿತ್ತು.

    ಭಯೋತ್ಪಾದನೆಗೆ ಹೊಸ ವ್ಯಾಖ್ಯಾನ:

    ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಅಲ್ಲದೇ ಹೊಸ ಕಾಯ್ದೆಗಳಲ್ಲಿ ಸಂಘಟಿತ ಭಯೋತ್ಪಾದನೆಯನ್ನು ವ್ಯಾಖ್ಯಾನ ಮಾಡಲಾಗಿದೆ. ದೇಶದ್ರೋಹ ಪದವನ್ನು ಬದಲಿಸಿ, ವಿಶ್ವಾಸದದ್ರೋಹ ಪದ ಬಳಸಲಾಗಿದೆ.

    ಅತ್ಯಾಚಾರಕ್ಕೆ ಮರಣ ದಂಡನೆ ಶಿಕ್ಷೆ:

    ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತದೆ. ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಕನಿಷ್ಠ 20 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಸಾಮೂಹಿಕ ಅತ್ಯಾಚಾರಕ್ಕೂ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

    ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ:

    ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯ್ದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆ ವಿಧಿಸಲು ಬಯಸುತ್ತದೆ.

    ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ:

    ʻಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆʼ ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ. ಅಕ್ರಮ ಚಟುವಟಿಕೆಗಳು ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕೃತ್ಯದಲ್ಲಿ ತೊಡಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಹಾಗೂ ಗರಿಷ್ಠ ಪ್ರಮಾಣದ ದಂಡ ವಿಧಿಸಬಹುದು.

    45 ದಿನಗಳ ಒಳಗೆ ಕೋರ್ಟ್‌ ತೀರ್ಪು:

    ಹೊಸ ಕಾಯ್ದೆಗಳ ಪ್ರಕಾರ ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಚಾರಣೆ ಮುಗಿದು, 45 ದಿನಗಳ ಒಳಗೆ ಕೋರ್ಟ್‌ ತೀರ್ಪು ನೀಡಬೇಕು. ಕೋರ್ಟ್‌ನಲ್ಲಿ ಮೊದಲ ವಿಚಾರಣೆ ನಡೆದು 60 ದಿನಗಳ ಒಳಗೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಬೇಕು. ಅತ್ಯಾಚಾರ ಪ್ರಕರಣಗಳ ಸಂತ್ರಸ್ತರ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯೇ ದಾಖಲಿಸಬೇಕು. ವೈದ್ಯಕೀಯ ವರದಿ 7 ದಿನಗಳ ಒಳಗೆ ಬರಬೇಕು. ಜೊತೆಗೆ 3 ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದಾಗಿದೆ.

    ಭಾರತೀಯರೇ ರೂಪಿಸಿದ ಕಾನೂನು:

    ಹೊಸ ಕಾನೂನುಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ʻಈ ಕಾನೂನುಗಳು ಭಾರತೀಯರೇ ಭಾರತೀಯರಿಗಾಗಿ ರೂಪಿಸಿದ ಕಾನೂನು, ಭಾರತೀಯ ಸಂಸತ್ತು ಇವುಗಳನ್ನು ಅಂಗೀಕರಿಸಿದೆ. ತನ್ಮೂಲಕ ಬ್ರಿಟಿಷ್‌ ಕಾಲದ ಕ್ರಿಮಿನಲ್‌ ಕಾಯ್ದೆಗಳಿಗೆ ವಿದಾಯ ಹೇಳಲಾಗಿದೆ. ಇದರೊಂದಿಗೆ ಎಲ್ಲವೂ ಭಾರತೀಯವೇ ಆಗಿದೆ ಎಂದು ಶ್ಲಾಘಿಸಿದ್ದಾರೆ.

    420 ಅಲ್ಲ 318 ಎಂದು ಹೇಳಬೇಕು: ಯಾವ ಸೆಕ್ಷನ್‌ ಏನು ಹೇಳುತ್ತೆ?

    420 – ಹಣಕಾಸು ಅಥವಾ ಬೇರೆ ಯಾವುದೇ ಆಮಿಷ ಒಡ್ಡಿ ವಂಚಿಸಿದ ಆರೋಪದ ಅಡಿ ಐಪಿಸಿ ಸೆಕ್ಷನ್‌ 420ರ ಅಡಿ ಕೇಸ್‌ ದಾಖಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ ಸೆಕ್ಷನ್‌ 318 ಆಗಿದೆ.
    302 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಪ್ರಕರಣಕ್ಕೆ ಈ ಸೆಕ್ಷನ್‌ ಬಳಸಲಾಗುತ್ತಿತ್ತು. ಇದೀಗ ಭಾರತೀಯ ನ್ಯಾಯ ಸಂಹಿತೆಯಲ್ಲಿ 103 ಆಗಿದೆ.
    307 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಯತ್ನಕ್ಕೆ ಬಳಸಲಾಗುತ್ತಿತ್ತು. ಇದೀಗ ಸೆಕ್ಷನ್‌ 103 ಆಗಿದೆ.
    376 – ಭಾರತೀಯ ದಂಡ ಸಂಹಿತೆಯಲ್ಲಿ ಅತ್ಯಾಚಾರ ಪ್ರಕಣಗಳಿಗೆ ಈ ಸೆಕ್ಷನ್‌ ಬಲಸಲಾಗುತ್ತಿತ್ತು. ಇದೀಗ 64 ಆಗಿದೆ.
    304(ಬಿ) – ಐಪಿಸಿ ನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಬಳಸುತ್ತಿದ್ದ ಸೆಕ್ಷನ್‌ ಈಗ ಬಿಎನ್‌ಎಸ್‌ನಲ್ಲಿ 80 ಆಗಿದೆ.
    304(ಎ) – ಐಪಿಸಿ ನಲ್ಲಿ ನಿರ್ಲಕ್ಷ್ಯದಿಂದ ಮರಣ (ರಸ್ತೆ ಅಪಘಾತ ಅಥವಾ ಇತರೇ ಸಂದರ್ಭ) ವೇಳೆ ಬಳಸಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ 106 ಆಗಿದೆ.
    359 – ವ್ಯಕ್ತಿ ಅಪಹರಣ ಪ್ರಕರಣದಲ್ಲಿ ಐಪಿಸಿ ನಲ್ಲಿ ಈ ಸೆಕ್ಷನ್‌ ಬಳಕೆಯಾಗುತ್ತಿತ್ತು. ಈಗ ಸೆಕ್ಷನ್‌ 137 ಆಗಿದೆ.
    309 – ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದರೆ ಆತನ ವಿರುದ್ಧ ಐಪಿಸಿ ಅಡಿ ಈ ಸೆಕ್ಷನ್‌ ವಿಧಿಸಲಾಗುತ್ತಿತ್ತು. ಈಗ ಬಿಎನ್‌ಎಸ್‌ ಅಡಿ 226 ಆಗಿದೆ.

  • ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

    ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

    ನವದೆಹಲಿ: ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್‌ಬೈ ಹೇಳಲಾಗ್ತಿದೆ.

    ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯ್ದೆ (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯ್ದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆ ಎಂದು ಬದಲಿಸಲಾಗಿದೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದ್ದು, 177 ಕಲಂಗಳನ್ನ ಬದಲಿಸಲಾಗಿದೆ. ಇನ್ನೂ ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಹೊಸ ಕಾನೂನುಗಳ ಬಗ್ಗೆ ವಕೀಲರ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗ್ತಿದೆ. ಇದರ ನಡುವೆಯೇ ಹೊಸ ಕಾನೂನು ಜಾರಿಗೆ ಪೊಲೀಸ್ ಇಲಾಖೆ ಸನ್ನದ್ಧವಾಗ್ತಿದೆ. ಈಗಾಗಲೇ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾನೂನು ತಜ್ಞರು, ಹಿರಿಯ ವಕೀಲರಿಂದ ಪೊಲೀಸರಿಗೆ ತರಬೇತಿ ಸಹ ನೀಡಲಾಗಿದೆ. ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಲೆ, ಕಾಲೇಜು ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶುಭಂ ಗೋಲ್ಡ್ ನಂದಿನಿ ಹಾಲಿನ ದರ 2 ರೂ. ಅಲ್ಲ, ಲೀಟರ್‌ಗೆ 4 ರೂ. ಹೆಚ್ಚಳ!

    ಹೊಸ ಕಾನೂನು.. ಏನೆಲ್ಲಾ ಬದಲಾವಣೆ..?
    * ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14 ದಿನದಿಂದ 60 ದಿನಗಳವರೆಗೂ ಹೆಚ್ಚಳ
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
    * 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
    * 7 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ
    * ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
    * ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಕೇಸ್.. 2 ತಿಂಗಳಲ್ಲಿ ತನಿಖೆ ಮುಗಿಸಬೇಕು
    * ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಡಿಯೋ, ವೀಡಿಯೋ ಮೂಲಕ ದಾಖಲು
    * ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
    * ಕ್ರಿಮಿನಲ್ ಕೇಸ್ ವಿಚಾರಣೆ.. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು
    * ತನಿಖೆ, ಕೋರ್ಟ್ ಸನ್ಸ್‌ಗಳನ್ನು ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
    * ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ
    * ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ, 48 ಗಂಟೆಯಲ್ಲಿ ಕೋರ್ಟ್‌ಗೆ ವರದಿ ಸಲ್ಲಿಕೆ
    * ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು
    * ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ
    * ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು
    * ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು
    * ಝೀರೋ ಎಫ್‌ಐಆರ್, ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು
    * ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು
    * ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
    * ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದು.

  • ಕಳ್ಳಕಾಕರಿಗೆ ಸಿಎಂ ಚಿನ್ನದ ಪದಕ ಭಾಗ್ಯ – ಜೆಡಿಎಸ್ ತೀವ್ರ ವಾಗ್ದಾಳಿ

    ಕಳ್ಳಕಾಕರಿಗೆ ಸಿಎಂ ಚಿನ್ನದ ಪದಕ ಭಾಗ್ಯ – ಜೆಡಿಎಸ್ ತೀವ್ರ ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ನಿಷ್ಠಾವಂತ ಅಧಿಕಾರಿಗಳಿಗೆ ಕಿರುಕುಳ ಹಾಗೂ ವರ್ಗಾವಣೆ ಭಾಗ್ಯ ನೀಡಿ, ಕಳ್ಳಕಾಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕದ ಭಾಗ್ಯ ನೀಡುತ್ತಿದೆ ಎಂದು ಜೆಡಿಎಸ್ (JDS) ಗಂಭೀರ ಆರೋಪ ಮಾಡಿದೆ.

    ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್, ಸುರಪುರ ಉಪ ವಿಭಾಗದ ಡಿವೈಎಸ್ಪಿ ಜಾವೀದ್ ಇನಾಂದಾರ್ ಹೆಸರನ್ನು 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಶಿಫಾರಸ್ಸು ಮಾಡಿರುವ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾವೀದ್ ವಿರುದ್ಧ ತೀವ್ರ ಆರೋಪಗಳಿವೆ. ಆದರೂ ಅವರನ್ನು ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ

    ಪೊಲೀಸ್ ಇಲಾಖೆ (Police Department) ಜಪ್ತಿ ಮಾಡಿದ್ದ 4.9 ಕೆಜಿ ಚಿನ್ನವನ್ನು ಕಳವು ಮಾಡಿರುವ ಆರೋಪಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಕೊಡಲು ಸರ್ಕಾರ ಮುಂದಾಗಿದೆ. ಅಲ್ಲದೇ ಈತನ ವಿರುದ್ಧ ಈಗಾಗಲೇ ಪಡಿತರ ಅಕ್ಕಿ ಕಳ್ಳತನ ಸೇರಿದಂತೆ ಅನೇಕ ಆರೋಪಗಳಿವೆ. ಅಂಥವರಿಗೆ ಚಿನ್ನದ ಪದಕ ನೀಡಿ, ನಿಷ್ಠಾವಂತರಿಗೆ ಕಿರುಕುಳ ಹಾಗೂ ವರ್ಗಾವಣೆ ಭಾಗ್ಯ ನೀಡುತ್ತಿದೆ ಎಂದು ಟೀಕಿಸಿದೆ.

    ಮುಖ್ಯಮಂತ್ರಿಗಳ ಚಿನ್ನದ ಪದಕ ಕೊಡಲು ಮುಂದಾಗಿರುವುದು ನೋಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪದಕಗಳೂ ಮಾರಾಟಕ್ಕೆ ಇದೆಯೇ? ಎಂಬ ಅನುಮಾನ ಮೂಡುತ್ತಿದೆ ಎಂದು ಜೆಡಿಎಸ್ ಕುಟುಕಿದೆ. ಈ ವಿಚಾರವಾಗಿ ಗುರುಮಿಠಕಲ್ ಶಾಸಕ ಶ್ರೀ ಶರಣಗೌಡ ಕಂದಕೂರು ಅವರು ಸರ್ಕಾರಕ್ಕೆ ಪತ್ರ ಬರೆದು, ತನಿಖೆ ನಡೆಸಲು ಆಗ್ರಹಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್‌ ಕೈವಾಡ – ರಹಸ್ಯ ಬಯಲು!

  • ಕ್ರಿಮಿನಲ್‍ಗಳಿಗೆ ಇಲಾಖೆ ಮಾಹಿತಿ ರವಾನೆ – ಐವರು ಪೊಲೀಸ್ ಸಿಬ್ಬಂದಿ ಅಮಾನತು

    ಕ್ರಿಮಿನಲ್‍ಗಳಿಗೆ ಇಲಾಖೆ ಮಾಹಿತಿ ರವಾನೆ – ಐವರು ಪೊಲೀಸ್ ಸಿಬ್ಬಂದಿ ಅಮಾನತು

    – ಮೊಬೈಲ್ ಪರಿಶೀಲನೆ ವೇಳೆ ಕೃತ್ಯ ಬೆಳಕಿಗೆ

    ತುಮಕೂರು: ಕ್ರಿಮಿನಲ್‍ಗಳಿಗೆ ಪೊಲೀಸ್ ಇಲಾಖೆಯ (Police Department) ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತುಮಕೂರು (Tumakuru) ಎಸ್ಪಿ ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.

    ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್ಪಿ ಕಚೇರಿಯ ಸುರೇಶ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇದನ್ನೂ ಓದಿ: ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಬಂಡೆ ಮೇಲಿಂದ ಜಾರಿ ಬಿದ್ದು ಯುವಕ ಸಾವು!

    ಇವರು ಕ್ರಿಮಿನಲ್‍ಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹಮೂರ್ತಿ ಎಂಬವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಚು, ಹಲ್ಲೆ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ವಾಟ್ಸಪ್ ಮೂಲಕ ಪೊಲೀಸರೇ ಆರೋಪಿಗಳಿಗೆ ಮಾಹಿತಿ ರವಾನಿಸಿದ್ದರು. ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಸ್ಟಡಿ ಅವಧಿ ಅಂತ್ಯ – ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ಶಿಫ್ಟ್!

  • ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ- ರಾಯಚೂರಿನಲ್ಲೂ ಅಲರ್ಟ್

    ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ- ರಾಯಚೂರಿನಲ್ಲೂ ಅಲರ್ಟ್

    ರಾಯಚೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ‌ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ಅಧಿಕಾರಿಗಳು ಕಲಬುರಗಿಯಲ್ಲಿ ಬೀಡುಬಟ್ಟಿದ್ದು, ಇತ್ತ ರಾಯಚೂರಿನಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

    ಪೊಲೀಸ್ ಇಲಾಖೆ 50 ವರ್ಷ ಪೂರೈಸುತ್ತಿರುವ ಹಿನ್ನೆಲೆ ಆಯೋಜಿಸಿದ್ದ ವಾಕಾಥಾನ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಅಕ್ಕಪಕ್ಕದ ಜಿಲ್ಲೆಯಲ್ಲಿ ಶಂಕಿತ ಬಾಂಬರ್ ಓಡಾಟದ ಸುಳಿವು ಹಿನ್ನೆಲೆ ಜನರಲ್ಲಿ ಭದ್ರತೆ ಭಾವನೆ ಮೂಡಿಸಲು ಜಾಗ್ರತೆ ಜಾಥ ನಡೆಸಲಾಯಿತು.

    ನಗರದ ಪೊಲೀಸ್‌ ಪರೇಡ್ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ವಾಕಾಥಾನ್‌ನಲ್ಲಿ ಸುಮಾರು 250 ಪೊಲೀಸ್ ಸಿಬ್ಬಂದಿ ಹಾಗೂ ಎನ್‌ಜಿಓ ಸದಸ್ಯರು ಭಾಗವಹಿಸಿದ್ದರು. 50 ವರ್ಷದ ಸಂಭ್ರಮಾಚರಣೆ ಜೊತೆಗೆ ಜಿಲ್ಲಾ ಪೊಲೀಸ್ ಅಲರ್ಟ್ ಆಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಕಲಬುರಗಿಯಲ್ಲೇ ಬೀಡುಬಿಟ್ಟಿರೋ NIA

    ಜನರಿಗೆ ನಿರ್ಭೀತಿಯಿಂದ ಇರಲು ಜಾಗೃತಿ ಮೂಡಿಸುತ್ತಿದ್ದೇವೆ. ಪೂರ್ವ ನಿಯೋಜಿತ ಸಿದ್ಧತೆಗಳನ್ನ ಮಾಡಿಕೊಂಡಿದ್ದೇವೆ. ಮೇಲಾಧಿಕಾರಿಗಳಿಂದ ಯಾವುದೇ ವಿಶೇಷ ಸಂದೇಶವಿಲ್ಲದಿದ್ದರೂ ಹೈಅಲರ್ಟ್‌ ಆಗಿದ್ದೇವೆ ಅಂತ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹೇಳಿದ್ದಾರೆ.

  • ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ

    ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪಿಜಿಗಳು (PG) ಇನ್ಮುಂದೆ ಮತ್ತಷ್ಟು ಸ್ಮಾರ್ಟ್ ಆಗಲಿವೆ. ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟಿಸುತ್ತಿದ್ದಂತೆ ಪಿಜಿ ಅಸೋಸಿಯೇಷನ್ ಹೊಸ ನಿರ್ಧಾರಕ್ಕೆ ಬಂದಿದೆ. ಪೊಲೀಸರಿಗೆ ನೆರವಾಗಲು ಹಾಗೂ ಪಿಜಿಯಲ್ಲಿದ್ದವರ ಸುರಕ್ಷತೆಗೆ ಐಡಿ ಕಾರ್ಡ್ ವ್ಯವಸ್ಥೆಯನ್ನು ಜಾರಿ ಮಾಡಲು ಮುಂದಾಗಿದೆ.

    ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಪಿಜಿ ನಿವಾಸಿಗಳ ಸುರಕ್ಷತೆ, ಭದ್ರತೆಯ ವಿಚಾರಕ್ಕೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ ಮಾಡಲಾಗಿತ್ತು. ಇದೀಗ ಪೊಲೀಸರಿಗೆ ಸಹಾಯಕಾರಿಯಾಗಲು ಪಿಜಿ ಅಸೋಸಿಯೇಷನ್ ಮತ್ತಷ್ಟು ಸ್ಮಾರ್ಟ್ ಪ್ಲ್ಯಾನ್ ಮಾಡಿದೆ. ಪಿಜಿಯಲ್ಲಿ ವಾಸ ಮಾಡುವವರಿಗೆ ಇನ್ಮುಂದೆ ಪಿಜಿ ಅಡ್ಮಿಶನ್‌ನ ಐಡಿ ಕಾರ್ಡ್‌ ನೀಡಲು ಚಿಂತನೆ ನಡೆಸುತ್ತಿದೆ. ಜೊತೆಗೆ ಫ್ಯಾಮಿಲಿ ಹಾಗೂ ಸ್ನೇಹಿತರ ಫೋನ್ ನಂಬರ್‌ಗಳನ್ನು ಸಂಗ್ರಹಿಸಿಕೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ – ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ದಾಳಿ

    ನಗರದಲ್ಲಿ 25 ಸಾವಿರಕ್ಕೂ ಅಧಿಕ ಪಿಜಿಗಳಿವೆ. ಪಾಲಿಕೆ, ಬೆಸ್ಕಾಂ, ಜಲಮಂಡಳಿ ಪ್ರಕಾರ 50 ಸಾವಿರಕ್ಕೂ ಅಧಿಕ ಪಿಜಿಗಳಿವೆ. ಪೊಲೀಸರ ತನಿಖೆ ಹಾಗೂ ಪಿಜಿ ವಾಸಿಗಳ ಸುರಕ್ಷತೆಯ ನಿಟ್ಟಿನಲ್ಲಿ ಆಯಾ ಪಿಜಿಗಳಲ್ಲಿ ಅಡ್ಮಿಷನ್ ಐಡಿ ಕಾರ್ಡ್ ವಿತರಿಸಿ ಅದನ್ನು ಪ್ರತಿ ತಿಂಗಳಿಗೊಮ್ಮೆ ರಿನಿವಲ್ ಮಾಡೋಕೆ ಪಿಜಿ ಅಸೋಸಿಯೇಷನ್ ನಿರ್ಧರಿಸಿದೆ. ನ್ನು ಪಿಜಿ ಅಸೋಸಿಯೇಷನ್ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಈ ಪ್ಲ್ಯಾನ್ ಅನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಪಿಜಿ ಮಾಲೀಕರ ಐಡಿ ಕಾರ್ಡ್ ಪ್ಲ್ಯಾನ್, ಪೊಲೀಸರ ತನಿಖೆಗಳಿಗೆ ಮತ್ತಷ್ಟು ಸಹಾಯಕಾರಿಯಾಗಲಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

  • ಹೊಸ ವರ್ಷಕ್ಕೆ ಗೈಡ್‌ಲೈನ್ಸ್ ಬಿಡುಗಡೆ – ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ಧತೆ

    ಹೊಸ ವರ್ಷಕ್ಕೆ ಗೈಡ್‌ಲೈನ್ಸ್ ಬಿಡುಗಡೆ – ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ಧತೆ

    ಬೆಂಗಳೂರು: ಹೊಸ ವರ್ಷಾಚರಣೆಗೆ (New Year) 5 ದಿನ ಮಾತ್ರ ಬಾಕಿ ಇವೆ. ಈ ಬಾರಿಯ ಹೊಸ ವರ್ಷ ಆಚರಣೆಗೆ ವಿವಿಧ ಇಲಾಖೆಗಳು ಸಭೆ ನಡೆಸಿ ಒಂದಷ್ಟು ನಿಯಮಗಳನ್ನು ಜಾರಿಗೆ ತಂದಿವೆ. 2024ರ ಹೊಸ ವರ್ಷ ಹೇಗಿರುತ್ತದೆ? ಏನೆಲ್ಲಾ ತಯಾರಿಗಳು ನಡೆದಿವೆ ಎಂಬ ಬಗ್ಗೆ ಇಲ್ಲಿ ತಿಳಿಸಲಾಗಿದೆ.

    ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿಯ ಜನರು ತುದಿಕಾಲಲ್ಲಿ ನಿಂತಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ವಿವಿಧ ಇಲಾಖೆಗಳು ಸಭೆ ನಡೆಸಿ ಕೆಲವೊಂದು ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ (B Dayanand) ಈ ಬಾರಿಯ ಹೊಸ ವರ್ಷಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಗೈಡ್‌ಲೈನ್ಸ್‌ಗಳನ್ನು (Guidelines) ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:‌ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಸಿಪಿಎಂ

    ಹೊಸ ವರ್ಷಾಚರಣೆಗೆ ಇರುವ ಗೈಡ್‌ಲೈನ್ಸ್ ಏನು?
    * ನಗರದ ಎಂಜಿ ರೋಡ್, ಬ್ರಿಗೆಡ್ ರೋಡ್, ರೆಸಿಡೆನ್ಸಿ ರೋಡ್, ಟ್ರಿನಿಟಿ ಸರ್ಕಲ್, ಫಿನಿಕ್ಸ್ ಮಾಲ್, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ, ಸ್ಟಾರ್ ಹೋಟೆಲ್‌ಗಳು ಸೇರಿದಂತೆ ಪಬ್ ಕ್ಲಬ್‌ಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ.
    * ಕೇಂದ್ರ ವಿಭಾಗದ ವಿವಿಧ ರಸ್ತೆಗಳಲ್ಲಿ ಮೂರು ಸಾವಿರ ಪೊಲೀಸರ ನಿಯೋಜನೆ.
    * ಮಹಿಳೆಯರ ಸುರಕ್ಷೆತೆಗಾಗಿ ಮಹಿಳಾ ಅಧಿಕಾರಿಗಳ ಜೊತೆಗೆ ಆಯಾಕಟ್ಟಿನ ಸ್ಥಳಗಳಲ್ಲಿ ವುಮೆನ್ ಸೇಫ್ಟಿ ಐಸ್‌ಲ್ಯಾಂಡ್‌ಗಳ ನಿರ್ಮಾಣ.
    * ಮಕ್ಕಳು, ಮಹಿಳೆಯರು, ಕಳುವಾದ ವಸ್ತುಗಳ ರಕ್ಷಣೆಗಾಗಿ ಪೊಲೀಸ್ ಕಿಯೋಸ್ಕ್‌ಗಳ ನಿರ್ಮಾಣ.
    * ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ವಾಚ್ ಟವರ್‌ಗಳ ನಿರ್ಮಾಣ, ಬೈನಾಕ್ಯುಲರ್‌ಗಳ ಮೂಲಕ ನಿಗಾ.

    * ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಬ್ರಿಗೆಡ್ ರೋಡ್, ಮೇಯೋ ಹಾಲ್ ಜಂಕ್ಷನ್, ಒಪೇರಾ ಜಂಕ್ಷನ್‌ವರಗೆ ಏಕಮುಖ ಸಂಚಾರ.
    * ಎಂಜಿ ರೋಡ್ ಮೆಟ್ರೋ ಸ್ಟೇಷನ್‌ನಲ್ಲಿ ಜನಸಂದಣಿ ಹಿನ್ನೆಲೆ ರಾತ್ರಿ 11 ಗಂಟೆಯಿಂದ 2 ಗಂಟೆವರೆಗೆ ನಿರ್ಗಮನಕ್ಕೆ ಮಾತ್ರ ಅವಕಾಶ. ಟ್ರಿನಿಟಿ ಸರ್ಕಲ್ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಬಳಸಲು ಮನವಿ.
    * ಕೋರಮಂಗಲ, ಇಂದಿರಾನಗರ, ಮಾರತ್ತಹಳ್ಳಿ, ಏರ್ಪೋಟ್ ರಸ್ತೆ, ವೈಟ್ ಫೀಲ್ಡ್‌ನಲ್ಲಿ 2500 ಪೊಲೀಸರ ನಿಯೋಜನೆ.
    * ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ, ಡ್ರೋನ್ ಕ್ಯಾಮೆರಾಗಳ ಮೂಲಕ ನಿಗಾ.
    * ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಶ್ವಾನದಳ ಸೇರಿದಂತೆ ವಿವಿಧ ತಂಡಗಳಿಂದ ತಪಾಸಣೆ.
    * ಹೊಸ ವರ್ಷಕ್ಕೆ ನಗರಾದ್ಯಂತ ಸುಮಾರು 10,000 ಪೊಲೀಸರ ನಿಯೋಜನೆ.

    * ಡ್ರಗ್ಸ್ ಪಾರ್ಟಿಗಳ ಕಡಿವಾಣ ಸಂಬಂಧ ಪೊಲೀಸರ ಸ್ಪೆಷಲ್ ಡ್ರೈವ್, ಕಳೆದ ಒಂದು ತಿಂಗಳಲ್ಲಿ 40 ಪ್ರಕರಣಗಳು ದಾಖಲು, 56 ಜನ ಪೆಡ್ಲರ್‌ಗಳ ಬಂಧನ.
    * ಕ್ಲಬ್‌ಗಳು, ರೆಸ್ಟೋರೆಂಟ್‌ಗಳು ಪಾರ್ಟಿಗಳು ನಿಗದಿತ ಸಮಯಕ್ಕೆ ಮುಗಿಸುವಂತೆ ನೋಟಿಸ್ ಜಾರಿ.
    * ಮಧ್ಯರಾತ್ರಿ ಒಂದು ಗಂಟೆಯವರೆಗೆ ಮಾತ್ರ ಕ್ಲಬ್‌ಗಳು, ರೆಸ್ಟೋರೆಂಟ್‌ಗಳಿಗೆ ಅನುಮತಿ. ಆ ಸಮಯ ಮೀರದಂತೆ ಎಚ್ಚರಿಕೆ.
    * ಸುರಕ್ಷತಾ ದೃಷ್ಟಿಯಿಂದ ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿಷೇಧ.
    * ಯಾವುದೇ ಅಹಿತರಕರ ಘಟನೆಗಳು, ಡ್ರಗ್ಸ್ ಪಾರ್ಟಿಗಳು ಗಮನಕ್ಕೆ ಬಂದರೆ 112ಕ್ಕೆ ಕರೆ ಮಾಡಲು ಸಾರ್ವಜನಿಕರಿಗೆ ಮನವಿ. ಇದನ್ನೂ ಓದಿ: ಕೋವಿಡ್ ಬಂದವರಿಗೆ 7 ದಿನ ಕಡ್ಡಾಯ ರಜೆ, ಹೋಮ್ ಐಸೊಲೇಷನ್

  • 530 ಜನರಿಗೆ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ನೀಡಿದ ಹು-ಧಾ ಪೊಲೀಸ್ ಇಲಾಖೆ

    530 ಜನರಿಗೆ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ನೀಡಿದ ಹು-ಧಾ ಪೊಲೀಸ್ ಇಲಾಖೆ

    ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಗಳಿಗೆ ಕಾರಣವಾಗುವ ರೌಡಿ ಶೀಟರ್‌ಗಳನ್ನು (Rowdy Sheeter) ಸನ್ನಡತೆ ಸೇರಿ ಇತರ ಆಧಾರದ ಮೇಲೆ ಪಟ್ಟಿಯಿಂದ ಕೈಬಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ (Hubballi – Dharwad Police Department) ವ್ಯಾಪ್ತಿಯಲ್ಲಿ ಒಟ್ಟು 530 ಮಂದಿಯ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ಹೊರಹಾಕಲಾಗಿದೆ.

    ಕೆಲ ಮಾಹಿತಿಗಳನ್ನು ಆಧರಿಸಿ ರೌಡಿಗಳ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ. ಹು-ಧಾ ವ್ಯಾಪ್ತಿಯಲ್ಲಿ 2018ರಿಂದ 2023ರವರೆಗೆ ಬಹಳಷ್ಟು ರೌಡಿಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿಗಳಿದ್ದಾರೆ. ಪ್ರತಿ ರೌಡಿ ಪಟ್ಟಿಯಲ್ಲಿ ಹಲವರ ಹೆಸರು ಸೇರ್ಪಡೆಯಾಗುತ್ತ ಹೋಗುತ್ತದೆ. ಕೊಲೆ, ಸುಲಿಗೆ, ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾದವರು ರೌಡಿ ಶೀಟರ್‌ಗೆ ಸರ್ಪಡೆಯಾಗುತ್ತಾರೆ. ಅದೂ ಒಬ್ಬರ ಮೇಲೆ ಒಂದಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾದರೆ ಮಾತ್ರ. ಇದನ್ನೂ ಓದಿ: ತಳ್ಳಾಟ ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ – ಆಸ್ಪತ್ರೆಗೆ ರವಾನೆ

    ಇದೇ ಆಧಾರದಲ್ಲಿ ಪ್ರತಿ ರೌಡಿಗಳ ಹೊಸ ಪಟ್ಟಿ ಸನ್ನಡತೆ ಆಧರಿಸಿ ಬಿಡುಗಡೆ ಪ್ರಕ್ರಿಯೆ ನಡೆಯುತ್ತದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2018ರಲ್ಲಿ 13, 2019ರಲ್ಲಿ 20, 2020ರಲ್ಲಿ 11, 2021ರಲ್ಲಿ 17, 2022ರಲ್ಲಿ 9 ಹಾಗೂ 2023ರಲ್ಲಿ 480 ರೌಡಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಎಲ್ಲ ವರ್ಷಗಳಿಗಿಂತ 2023ರಲ್ಲಿಯೇ ಅತಿ ಹೆಚ್ಚು ರೌಡಿಗಳನ್ನು ಪಟ್ಟಿಯಿಂದ ವಿಮುಕ್ತಗೊಳಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕೊನೆಗೂ ಚಾಲನೆ – ಆ್ಯಪ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

    ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್, ಒದೆನೂ ಸಿಗುತ್ತೆ, ಗುಂಡು ಹಾರಿಸೋದು ಇರುತ್ತೆ: ಜಿ ಪರಮೇಶ್ವರ್

    ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದ ಗೃಹ ಸಚಿವ

    ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಸೆಲ್ಯೂಟ್ ಇರುತ್ತೆ, ಒದೆನೂ ಇರುತ್ತೆ, ಮುಂದುವರೆದು ಗುಂಡು ಹಾರಿಸೋದು ಇರುತ್ತೆ. ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದು ಗೃಹಸಚಿವ ಜಿ. ಪರಮೇಶ್ವರ್ (G.Parameshwara) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಕೊಠಡಿ ಪೂಜೆ ಮಾಡಿದ ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಇಲಾಖೆಯಲ್ಲಿ ಸೆಲ್ಯೂಟ್ ಸಿಗುತ್ತದೆ. ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ. ಲಾಠಿ ಏಟು ತಿನ್ನಬೇಕೋ ಅಥವಾ ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು. ಇದನ್ನೂ ಓದಿ: ಮಕ್ಕಳ ಜೊತೆ ಕ್ರಿಕೆಟ್ ಆಡಿದ ರೇಣುಕಾಚಾರ್ಯ

    ಬಜರಂಗದಳ (Bajarang Dal) ನಿಷೇಧ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಯಾರು ಶಾಂತಿ ಕದಡುತ್ತಾರೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಅವರು ಯಾರೂ ಅದನ್ನು ಮಾಡಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ. ಮಾಡುತ್ತೇವೆ ಎಂದರೆ ಅವರಿಗೆ ಭಯ ಆಗುತ್ತದೆ. ಕಾನೂನು ಮುರಿಯಲ್ಲ ಎಂದರೆ ಭಯ ಯಾಕೆ? ಅದು ಅವರಿಗೆ ಅರ್ಥ ಆದರೆ ಸಾಕು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಂಥರ್ ಗೌಡ ಗೆಲುವು – 135 ಕಿಮೀ ದೂರದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ

    ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ. ಅನೇಕ ಜನ ಟೀಕೆ ಟಿಪ್ಪಣಿ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು. ರಾಜ್ಯದ ಕಾನೂನು ವ್ಯವಸ್ಥೆಯನ್ನು ಕಾಪಾಡಬೇಕು. ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ. ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡುತ್ತೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಚಟುವಟಿಕೆ ಮಾದರಿಯ ಕೇಕ್ ಮಾಡಿ ಚೆಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ

  • ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ

    ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ

    ಬೀದರ್: ಪೊಲೀಸ್ ಇಲಾಖೆಯ (Police Department) ಹೆಸರಿನಲ್ಲಿ ನಕಲಿ ಫೇಸ್‍ಬುಕ್ (Facebook) ಅಕೌಂಟ್ ಓಪನ್ ಮಾಡಿರುವ ಪ್ರಕರಣ ಬೀದರ್‌ನಲ್ಲಿ (Bidar) ಸೋಮವಾರ ಬೆಳಕಿಗೆ ಬಂದಿದೆ.

    ಸೈಬರ್ ವಂಚಕರು (Cyber Crime), ಬೀದರ್ ಎಸ್‍ಪಿ (SP) ಎಂಬ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್‍ನ್ನು ಸೃಷ್ಠಿಸಿದ್ದಾರೆ. ಅಲ್ಲದೆ ಜಲ್ಲೆಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಇರುವ ಇಲಾಖೆಯ ಅಕೌಂಟ್‍ನಲ್ಲಿ ಇರುವ ಸ್ನೇಹಿತರನ್ನು ಗುರಿಯಾಗಿಸಿ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

    ಈ ಬಗ್ಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಅನಧಿಕೃತ ಫೇಸ್‍ಬುಕ್ ಅಕೌಂಟ್‍ನಿಂದ ಬರುತ್ತಿರುವ ರಿಕ್ವೆಸ್ಟ್‌ಗೆ ಸ್ಪಂದಿಸದಂತೆ ತಿಳಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಇಲಾಖೆ, ಸಾರ್ವಜನಿಕರು ಮೋಸ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದಿದೆ. ಅಲ್ಲದೆ ಈ ರೀತಿ ಫೇಕ್ ಅಕೌಂಟ್ ಸೃಷ್ಠಿಸಿದವರ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಇದನ್ನೂ ಓದಿ: 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌