Tag: police department

  • ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಡಿಕೆಶಿ

    ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಡಿಕೆಶಿ

    ಬೆಂಗಳೂರು: ಪೊಲೀಸ್ ಇಲಾಖೆಯನ್ನು (Police Department) ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ (Vidhana Soudha) ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಪೊಲೀಸರು ಬಿಜೆಪಿ ಪರ ಕೆಲಸ ಮಾಡಿದ್ದು ಗೊತ್ತಿದೆ. ನಾಲ್ಕು ವರ್ಷಗಳ ನಿಮ್ಮ ವರ್ತನೆಗಳು ನಮಗೆ ತಿಳಿದಿದೆ. ಇನ್ನಾದರೂ ಉತ್ತಮ ಕೆಲಸ ಮಾಡಿ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಎಂ.ಬಿ ಪಾಟೀಲ್‌ಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಸುರೇಶ್

    ಸಿದ್ದರಾಮಯ್ಯರ ಜೊತೆ ಪೊಲೀಸರು ನಡೆದುಕೊಂಡ ರೀತಿ ತಿಳಿದಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದರೂ ಕೇಸ್ ಹಾಕಿಲ್ಲ. ನಿಮ್ಮ ಕೆಲಸಗಳನ್ನು ಚೆನ್ನಾಗಿ ಗಮನಿಸಿದ್ದೇವೆ ಇನ್ನೂ ಇದೆಲ್ಲ ನಡೆಯುವುದಿಲ್ಲ ಎಂದಿದ್ದಾರೆ.

    ಮಂಗಳೂರಿನಲ್ಲಿ ಪೊಲೀಸರು ಕೇಸರಿ ಶಾಲು ಹಾಕುತ್ತಾರೆ ಎಂದರೆ ಅರ್ಥ ಏನು? ಈಗ ಕೇಸರಿ ಶಾಲು ಹಾಕಿ ನೋಡೋಣ? ನಮ್ಮ ಸರ್ಕಾರದಲ್ಲಿ ಈ ರೀತಿಯಾಗಲು ಅವಕಾಶ ಕೊಡುವುದಿಲ್ಲ. ಎಂದು ಗುಡುಗಿದ್ದಾರೆ.

    ಆಯುಧ ಪೂಜೆ ವೇಳೆ ಉಡುಪಿಯ ಕಾಪು (Kapu) ಪೊಲೀಸ್ ಠಾಣಾ ಪೊಲೀಸರು ಕೇಸರಿ ಶಾಲು ಧರಿಸಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಯುಪಿಎಸ್‍ಸಿ ಫಲಿತಾಂಶ ಪ್ರಕಟ – ಲೇಡಿಸ್‍ಗೆ ಫಸ್ಟ್ 4 ರ‍್ಯಾಂಕ್

  • ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್‍ಲೈನ್ಸ್

    ಬೆಂಗಳೂರು: ಪ್ರತಿಷ್ಠಿತ ಕಾಲೇಜು ಅವರಣ (College Campus) ದಲ್ಲಿ ನಡೆದ ವಿದ್ಯಾರ್ಥಿನಿ ಲಯಸ್ಮಿತಾ ಕೊಲೆ ಇಡೀ ಬೆಂಗಳೂರನ್ನೆ ನಡುಗಿಸಿತ್ತು. ಕಾಲೇಜಿಗೆ ತಮ್ಮ ಮಕ್ಕಳನ್ನ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು. ಇದರಿಂದ ಎಚ್ಚೆತ್ತಿರುವ ಪೊಲೀಸರು ಇಲಾಖೆ ಬೆಂಗಳೂರು ಗ್ರಾಮಾಂತರದ ಠಾಣಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಹೊಸ ಗೈಡ್ ಲೈನ್ (New Guidelines For College) ಹೊರಡಿಸಿದೆ. ಕಾಲೇಜು ಆಡಳಿತ ಮಂಡಳಿಗಳು ಇನ್ಮುಂದೆ ಈ ಹೊಸ ಗೈಡ್ ಲೈನ್ಸ್ ಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪೊಲೀಸರು ತಾಕೀತು ಮಾಡಿದ್ದಾರೆ.

    ಲಯಸ್ಮಿತಾ (Layasmitha) ಕೊಲೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡು ಬಂದಿದ್ದರಿಂದ ಪೊಲೀಸರು ಒಂದಷ್ಟು ಅಂಶಗಳನ್ನ ಫೈಂಡೌಟ್ ಮಾಡಿ ಪಬ್ಲಿಕ್ ಸೇಪ್ಟಿ ಆಕ್ಟ್ ಅಡಿಯಲ್ಲಿ ಹೊಸ ಗೈಡ್ ಲೈನ್ ಹೊರಡಿಸಿದ್ದಾರೆ. ಇದನ್ನೂ ಓದಿ: ನಗರ ಭಾಗದಲ್ಲೂ ಕಂಬಳ ಕಹಳೆ- ಕಾಂತಾರದಿಂದ ಮತ್ತಷ್ಟು ರಂಗೇರಿದ ಹವಾ

    ಕಾಲೇಜುಗಳಿಗೆ ನಯಾ ಗೈಡ್‍ಲೈನ್ಸ್: ಕಾಲೇಜು ಅವರಣದಲ್ಲಿ, ಪಾರ್ಕಿಂಗ್ ಲಾಟ್‍ನಲ್ಲಿ ಸಿಸಿಟಿವಿ ಕಡ್ಡಾಯವಾಗಿರಬೇಕು. ಹೊರಗಡೆಯಿಂದ ಬೈಕ್‍ನಲ್ಲಿ ಬರುವವರನ್ನ ಪರಿಶೀಲಿಸಬೇಕು. ಎಂಟ್ರಿ-ಎಕ್ಸಿಟ್ ಗೇಟ್‍ನಲ್ಲಿ ಭದ್ರತೆಯನ್ನ ಹೆಚ್ಚಿಸಿ ಕೊಡಬೇಕು. ಐಡಿ ಕಾರ್ಡ್ ಇರದೇ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಾರದು. ಗಲಾಟೆ ಸಂದರ್ಭ ಎದುರಾದರೆ ಪೊಲೀಸರಿಗೆ ತಿಳಿಸಬೇಕು. ಇಷ್ಟಲ್ಲದೇ ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸರು ಕೂಡ ಪಬ್ಲಿಕ್ ಸೆಪ್ಟಿ ಆಕ್ಟ್ ಅಡಿಯಲ್ಲಿ ಸೂಕ್ತ ಭದ್ರತೆಗೆ ಸಿದ್ಧಮಾಡಿಕೊಂಡಿದ್ದಾರೆ.

    ಹೀಗೆ ಲಯಸ್ಮಿತಾ ಕೊಲೆಯ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಖಾಕಿ ಪಡೆ ಹೊಸ ಗೈಡ್ ಲೈನ್ಸ್ ಹೊರಡಿಸಿದೆ. ಹಾಗೆ ಕಡ್ಡಾಯವಾಗಿ ಎಲ್ಲಾ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಗೈಡ್‍ಲೈನ್ಸ್ ಪಾಲನೆ ಮಾಡಬೇಕು. ಒಂದು ವೇಳೆ ಗೈಡ್‍ಲೈನ್ಸ್ ಉಲ್ಲಂಘನೆ ಮಾಡುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನ ಪೊಲೀಸರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್‍ಡೌನ್- ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್

    ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್‍ಡೌನ್- ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್

    ಬೆಂಗಳೂರು: ಹೊಸ ವರ್ಷದ ಸಂಭ್ರಮೋತ್ಸವ (New Year Celebration) ಕ್ಕೆ ಬೆಂಗಳೂರು ನಗರ ಸಜ್ಜಾಗಿದೆ. ಕೊರೊನಾ (Corona Virus) ದಿಂದ ಲಾಕ್ ಡೌನ್ (Lockdown) ಬಳಿಕ ಬಂದಿರುವ ಹೊಸ ವರ್ಷಕ್ಕೆ ಬ್ರಿಗೇಡ್ ರೋಡ್ (Brigade Road) ಸೇರಿದಂತೆ ಪಾರ್ಟಿ ಸ್ಥಳಗಳು ಝಗಮಗಿಸ್ತಿದ್ದು, ಪೊಲೀಸರು ಇಡೀ ಬೆಂಗಳೂರನ್ನ ಸುಪರ್ದಿಗೆ ಪಡೆದಿದ್ದಾರೆ.

    ಹೊಸ ವರ್ಷಕ್ಕಿದ್ದ ಆತಂಕ ದೂರಾಗಿದ್ದು, ಸೆಲೆಬ್ರೇಷನ್‍ಗೆ ಕೌಂಟ್‍ಡೌನ್ ಶುರುವಾಗಿದೆ. ಇಂದು ಸಂಜೆಯಿಂದಲೇ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ಭಾಗಗಳಲ್ಲಿ ಬಿಗ್ ಸೆಲೆಬ್ರೇಷನ್‍ಗೆ ಯುವ ಸಮೂಹದ ದಂಡೇ ಸೇರುತ್ತೆ. ಸಾವಿರಾರು ಜನ ಬರುವ ನಿರೀಕ್ಷೆ ಹಿನ್ನೆಲೆ, ಪೊಲೀಸ್ ಇಲಾಖೆ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಅದ್ಧೂರಿ ಸಂಭ್ರಮಾಚರಣೆಗೆ ನಮ್ಮ ಬೆಂಗಳೂರು ಸಜ್ಜಾಗಿದ್ದು, ಬ್ರಿಗೇಡ್ ರೋಡ್ ಅಂತೂ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರೂಲ್ಸ್ & ರೆಗ್ಯುಲೇಷನ್ ಬಿಡುಗಡೆ ಮಾಡಿದ್ದು, ಪೊಲೀಸರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: JDS ಜೊತೆ ಒಳ ಮೈತ್ರಿ, ಸಾಫ್ಟ್ ಕಾರ್ನರ್ ಬೇಡ – ಬಿಜೆಪಿ ನಾಯಕರಿಗೆ ಅಮಿತ್ ಶಾ ತಾಕೀತು

    ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ: ಇಂದು ಸಂಜೆಯಿಂದಲೇ ನಗರದಾದ್ಯಂತ 8500 ಪೊಲೀಸರ ನಿಯೋಜನೆ ಮಾಡಲಾಗಿದೆ. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ನಗರದೆಲ್ಲೆಡೆ 4,000 ಸಿಸಿಟಿವಿ (CCTV) ಅಳವಡಿಸಲಾಗಿದೆ. ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ವಾಚ್ ಟವರ್‍ಗಳ ನಿರ್ಮಾಣ ಮಾಡಲಾಗಿದೆ. ರಾತ್ರಿ 9ರ ನಂತ್ರ ಏರ್‌ಪೋರ್ಟ್ ಫ್ಲೈ ಓವರ್ ಹೊರತುಪಡಿಸಿ ಎಲ್ಲಾ ಫ್ಲೈಓವರ್‍ಗಳು ಬಂದ್ ಆಗಲಿದೆ. ರಾತ್ರಿ 9ರ ಬಳಿಕ ನೈಸ್ ರೋಡ್‍ನಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ ಬಗ್ಗೆ ನಿಗಾ ವಹಿಸಲಾಗಿದೆ.

    ರಾತ್ರಿ 1 ಗಂಟೆಯವರೆಗೆ ಸೆಲೆಬ್ರೇಷನ್‍ಗೆ ಅವಕಾಶ ನೀಡಲಾಗಿದ್ದು, ಇಡೀ ರಾತ್ರಿ ಡ್ರಿಂಕ್ & ಡ್ರೈವ್ ತಪಾಸಣೆ ನಡೆಸಲಾಗುತ್ತಿದೆ. ಬ್ರಿಗೇಡ್ ರಸ್ತೆ, ಎಂ.ಜಿ. ರಸ್ತೆಯಲ್ಲಿ ವಾಹನಗಳ ಓಡಾಟ ಬಂದ್ ಆಗಲಿದೆ. ಇನ್ನು ಪಬ್‍ಗಳಲ್ಲಿ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಹೊಸ ವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದ್ದು 2023 ಸ್ವಾಗತಿಸಲು ಇಡೀ ಬೆಂಗಳೂರೇ ಸಜ್ಜಾಗಿದೆ. ಸಿಲಿಕಾನ್ ಸಿಟಿಯ ಪಬ್‍ಗಳು ಗ್ರಾಹಕರನ್ನ ಆಕರ್ಷಿಸುತ್ತಿವೆ. ಕಳೆದೆರಡು ವರ್ಷವೂ ಕೋವಿಡ್ ವರ್ಷಾಚರಣೆಗೆ ಹೊಡೆತ ಕೊಟ್ಟಿತ್ತು. ಈ ಬಾರಿಯೂ ಮತ್ತೆ ಕೊರೋನಾ ಕಾಟ ಶುರುವಾಗಿದ್ರೂ ವ್ಯಾಪಾರ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಪೊಲೀಸ್ ಇಲಾಖೆ ಪಬ್-ಬಾರ್ & ರೆಸ್ಟೊರೆಂಟ್‍ಗಳಿಗೆ ಪ್ರತ್ಯೇಕ ನಿಯಮಗಳನ್ನ ಜಾರಿಗೊಳಿಸಿದೆ.

    ಹೀಗೆ ಪೊಲೀಸ್ ಇಲಾಖೆ ರೂಲ್ಸ್ ರೆಗ್ಯುಲೇಶನ್ ಜಾರಿಗೊಳಿಸಿ ಹೊಸ ವರ್ಷ ಆಚರಿಸಿ ಅಂತಿದೆ. ಪಬ್, ಬಾರ್, ರೆಸ್ಟೋರೆಂಟ್‍ಗಳೂ ಕೊರೋನಾ ನಿಯಮ ಪಾಲಿಸಿ ಹೊಸ ವರ್ಷವನ್ನ ಸ್ವಾಗತಿಸಲು ಸಜ್ಜಾಗಿವೆ.

    Live Tv
    [brid partner=56869869 player=32851 video=960834 autoplay=true]

  • IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

    IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

    ಸೂರಜ್‌ಕುಂಡ್: ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಗ್ರವೇ ಸದನದಲ್ಲಿ ಹೊಸ ಕರಡನ್ನು ಮಂಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಚಿಂತನ ಶಿಬಿರದಲ್ಲಿ ಮಾತನಾಡಿದ ಅವರು, ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸ್ವೀಕರಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎರಡೂ ಶಾಸನಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸದನದಲ್ಲಿ ಹೊಸದಾಗಿ ಕರಡು ಮಂಡಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

    ಐಪಿಸಿ, ಸಿಆರ್‌ಪಿಸಿ ಸುಧಾರಣೆಗಳಿಗಾಗಿ ಸಾಕಷ್ಟು ಸಮಯ ವಿನಿಯೋಗಿಸಿದ್ದು, ಆಳವಾಗಿ ಅಧ್ಯಯನ ಮಾಡಲಾಗುತ್ತಿದೆ. ಭಾರತದಲ್ಲಿ ಕ್ರಿಮಿನಲ್ ಕಾನೂನು (Law) ಸುಧಾರಣೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರು 2020ರ ಮೇನಲ್ಲಿ ಐವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿಯ ಕಾನೂನು ವಿಶ್ವವಿದ್ಯಾಲಯದ (Delhi Law University) ಕುಲಪತಿ ಪ್ರೊ. ರಣಬೀರ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು

    ಸಮಿತಿ ರಚಿಸಿದಾಗ ವೈವಿಧ್ಯತೆ ಮತ್ತು ಪಾರದರ್ಶಕತೆ ಕೊರತೆಯ ಹಿನ್ನೆಲೆಯಲ್ಲಿ ವಕೀಲರು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ಸಮಿತಿಯು ಎಲ್ಲಾ ರೀತಿಯ ಅಭಿಪ್ರಾಯ ಮತ್ತು ಸಲಹೆಗಳನ್ನು ಗೌರವಿಸುವುದಾಗಿ ಹೇಳಿತ್ತು. ಪಾರದರ್ಶಕತೆಯ ದೃಷ್ಟಿಯಿಂದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಹೇಳಿತ್ತು. ಹಾಗಾಗಿ ಸೂಕ್ತ ಸಲಹೆಗಳನ್ನು ಸ್ವೀಕರಿಸಿದ್ದು, ಶೀಘ್ರದಲ್ಲೇ ಕರಡು ಮಂಡಿಸುವುದಾಗಿ ಅವರು ಘೋಷಿಸಿದ್ದಾರೆ.

    ಪ್ರತಿ ರಾಜ್ಯದಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಆರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಮಟ್ಕಾದಂಧೆ, ಅಕ್ರಮ ಪಬ್‌ಗಳಿಗೆ ಪೊಲೀಸ್ ಇಲಾಖೆಯಿಂದಲೇ ಸಹಕಾರ – HDK ಕಿಡಿ

    ರಾಜ್ಯದಲ್ಲಿ ಮಟ್ಕಾದಂಧೆ, ಅಕ್ರಮ ಪಬ್‌ಗಳಿಗೆ ಪೊಲೀಸ್ ಇಲಾಖೆಯಿಂದಲೇ ಸಹಕಾರ – HDK ಕಿಡಿ

    ಬೆಂಗಳೂರು: ರಾಜ್ಯದಲ್ಲಿ ಮಟ್ಕಾ ದಂಧೆ, ಅಕ್ರಮ ಪಬ್‌ (Pub) ಗಳು  ನಡೆಯುತ್ತಿವೆ. ಇದಕ್ಕೆ ಪೊಲೀಸ್ ಇಲಾಖೆಯೂ (Police Department) ಸಹಕಾರ ನೀಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

    ಇಲ್ಲಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಿ `ಪಂಚರತ್ನ ರಥಯಾತ್ರೆ’ಗೆ (Pancharatna Rathayatra) ಚಾಲನೆ ನೀಡಿದರು. ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ನಿನ್ನೆ ಹೃದಯಾಘಾತದಿಂದ (Heart Attack) ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮಾನಸಿಕವಾಗಿ ಕುಗ್ಗಿದ್ದರಿಂದ ಆ ರೀತಿ ಹೃದಯಾಘಾತವಾಗಿದೆ. ಈ ಬಗ್ಗೆ ಮೃತ ಅಧಿಕಾರಿ ನಂದೀಶ್ ಅವರ ಪತ್ನಿ ಮಾತಾಡಿರೋದು ನೋಡಿದ್ದೇನೆ. ಕೆ.ಆರ್.ಪುರಂನಲ್ಲಿ ಅಧಿಕಾರಿ ನಂದೀಶ್ ವ್ಯಾಪ್ತಿಯಲ್ಲಿ ರಾತ್ರಿ ಆದರೂ ಪಬ್ ನಡೆಯುತ್ತಿತ್ತು. ಇದಕ್ಕಾಗಿ ನಂದೀಶ್ ರನ್ನ ಅಮಾನತು ಮಾಡಲಾಗಿದೆ ಇದರಿಂದ ಮಾನಸಿಕವಾಗಿ ಕುಗ್ಗಿ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

    ಈಗಾಗಲೇ ಸರ್ಕಾರ ರಾತ್ರಿ 1 ಗಂಟೆವರೆಗೆ ಹೊಟೇಲ್ ತೆರೆಯೋಕೆ ಅವಕಾಶ ಕೊಟ್ಟಿದೆ. ಅದೊಂದು ಪಬ್ ಮಾತ್ರ ರಾತ್ರಿ ನಡೆಯುತ್ತಿತ್ತಾ? ಅ ಪಬ್ ನಲ್ಲಿ ರಾಜಕಾರಣಿಗಳ ಬೆಂಬಲಿಗರು ಎಷ್ಟು ಜನ ಇದ್ದರು? ಪೊಲೀಸರು ಸಹ ಪಬ್‌ನಲ್ಲಿ ಡಾನ್ಸ್ (Dance) ಮಾಡ್ತಿದ್ರು ಅಂತಾ ಹೇಳಿದ್ದಾರೆ. ಇದೆಲ್ಲಾ ನೋಡಿದಾಗ ರಾಜ್ಯದಲ್ಲಿ ಮಟ್ಕಾ ದಂಧೆ, ಅಕ್ರಮ ಪಬ್ ಗಳು ನಡೆಯಲು ಪೊಲೀಸ್ ಇಲಾಖೆಯೂ ಸಹಕಾರ ಕೊಟ್ಟಿದೆ ಎಂಬುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಉತ್ಸವಕ್ಕೆ ಮುಂಚಿತವಾಗಿಯೇ ಕೋಮು ಸೌಹಾರ್ದ ಸಭೆ ನಡೆಸುವಂತೆ ತಿಳಿಸಿದೆ.

    ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್‌ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೂ ಸೇರಿದಂತೆ ಸುತ್ತೋಲೆ ಬಿಡುಗಡೆ ಮಾಡಿದೆ. ಉತ್ಸವಕ್ಕೂ ಮುಂಚೆ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಸಭೆ ನಡೆಸಲು ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

    ಆಗಸ್ಟ್‌ 30ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಗಿ ನೀಡುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಬೇಕು ಎಂದು ಹೇಳಿದೆ. ಇದನ್ನೂ ಓದಿ:  ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ

    ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    1. ಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ, ಪರವಾನಗಿಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ, ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಪರವಾನಗಿ ನೀಡಲು ಸೂಕ್ತ ಕ್ರಮ ವಹಿಸುವುದು.
    2. ಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಮಾಡುವುದು.
    3. ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ 3 ದಿನಗಳ ಒಳಗೆ ಪರವಾನಗಿ ನೀಡಲು ಕ್ರಮ ವಹಿಸುವುದು.
    4. ರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
    5. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
    6. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.
    7. ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ಕೊಡುವಂತಿಲ್ಲ.
    8. ತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.

    Live Tv
    [brid partner=56869869 player=32851 video=960834 autoplay=true]

  • 200 ಸಿಬ್ಬಂದಿ ನಿಯೋಜನೆ; ಇನ್ನೂ ಪತ್ತೆಯಾಗಿಲ್ಲ ಚಿರತೆ!

    200 ಸಿಬ್ಬಂದಿ ನಿಯೋಜನೆ; ಇನ್ನೂ ಪತ್ತೆಯಾಗಿಲ್ಲ ಚಿರತೆ!

    ಬೆಳಗಾವಿ: ಕಳೆದ 15 ದಿನಗಳಿಂದ ಬೆಳಗಾವಿ ನಗರದಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಪತ್ತೆಗೆ ಶಸ್ತ್ರ ಸಜ್ಜಿತವಾಗಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ 200ಕ್ಕೂ ಸಿಬ್ಬಂದಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿವೆ. ಆದರೆ ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಚಿರತೆ ಪತ್ತೆಯಾಗದೇ ಇರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.

    ಆಗಸ್ಟ್ 5ರಂದು ಬೆಳಗಾವಿಯ ಜಾಧವ ನಗರದಲ್ಲಿ ಕಾಣಿಸಿಕೊಂಡ ಚಿರತೆ, ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದಲ್ಲಿ ಕಣ್ಮರೆಯಾಗಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ಗಾಲ್ಫ್ ಮೈದಾನದಲ್ಲಿ 22 ಟ್ರ್ಯಾಪ್ ಕ್ಯಾಮೆರಾ, 8 ಬೋನುಗಳನ್ನು ಅಳವಡಿಸಿ ಚಿರತೆ ಸೆರೆಗೆ ಮುಂದಾಗಿತ್ತು. ಈ ವೇಳೆ ಆಗಸ್ಟ್ 7 ಮತ್ತು 8 ರಂದು ಎರಡು ಭಾರಿ ಗಾಲ್ಫ್ ಮೈದಾನದಲ್ಲಿ ಚಿರತೆ ಚಲನವಲನ ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹೀಗಾಗಿ ದಿನದಿಂದ ದಿನಕ್ಕೆ ಜನರಲ್ಲಿ ಚಿರತೆ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಅರಣ್ಯ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಇವತ್ತು 200 ಸಿಬ್ಬಂದಿ ಮುಂದಿಟ್ಟುಕೊಂಡು ಚಿರತೆ ಸೆರೆಗೆ ಮುಂದಾಗಿವೆ. ಇದನ್ನೂ ಓದಿ: ಸಾವರ್ಕರ್, ಗೃಹ ಸಚಿವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಕಾಂಗ್ರೆಸ್

    ಪೊಲೀಸ್ ಇಲಾಖೆ ಧ್ವನಿವರ್ಧಕಗಳ ಮೂಲಕ, ಗಾಲ್ಫ್ ಪ್ರದೇಶ, ಹನುಮಾನಗರ, ಕುವೆಂಪು ನಗರ, ದೂರದರ್ಶನ ನಗರ, ಜಾಧವ ನಗರ ಹಾಗೂ ಕ್ಯಾಂಪ್ ಪ್ರದೇಶದ ಜನರಿಗೆ ಜಾಗೃತಿ ಮೂಡಿಸಿದೆ. ಅರಣ್ಯ ಇಲಾಖೆಯಿಂದ ಮತ್ತೇರುವ ಗುಂಡು ಹಾರಿಸಿ ಚಿರತೆಯನ್ನು ಅಸ್ವಸ್ಥಗೊಳಿಸಿ, ಅದು ಮೂರ್ಛೆ ಹೋದಾಗ ಅದನ್ನು ಬಲೆಗೆ ಹಾಕಲು ವಿಶೇಷ ಶೂಟರ್‌ಗಳು ಸಹ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ರಕ್ಷಣಾ ಸಾಮಗ್ರಿ ಸಮೇತ 100 ಮಂದಿ ಅರಣ್ಯ, 100 ಪೊಲೀಸ್ ಸಿಬ್ಬಂದಿ ಇದ್ದರು.‌

    ಎಸಿಎಫ್ ಮಂಜುನಾಥ ಕುಸನಾಳ, ಡಿಸಿಪಿ ರವೀಂದ್ರ ಗಡಾಡಿ ನೇತೃತ್ವದಲ್ಲಿ ಇಬ್ಬರು ಅರವಳಿಕೆ ತಜ್ಞರು, ಅರವಳಿಕೆ ಮದ್ದು ಸಮೇತ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಕೈಯಲ್ಲಿ ಕೊಯಿತಾ, ಬಡಿಗೆ, ಹೆಲ್ಮೆಟ್, ರಕ್ಷಣಾ ವಸ್ತುಗಳ ಸಮೇತ ಕಾರ್ಯಾಚರಣೆ ನಡೆಸಲಾಯಿತು. ಆದರೆ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಚಿರತೆ ಪತ್ತೆಯಾಗಿಲ್ಲ. ಹೀಗಾಗಿ ಚಿರತೆ ಸಿಗುವವರೆಗೂ ಚಿರತೆ ಪತ್ತೆ ಕಾರ್ಯ ಮುಂದುವರಿಯಲಿದೆ. ಸಾರ್ವಜನಿಕರು ಭೀತಿಗೆ ಒಳಗಾಗಬಾರದು. ಗಾಲ್ಫ್ ಮೈದಾನದ ಕಡೆಗೆ ವಾಯುವಿಹಾರ ಮಾಡದಂತೆ ಬೆಳಗಾವಿ ಎಸಿಎಫ್ ಮಂಜುನಾಥ ಕುಸನಾಳ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    Live Tv
    [brid partner=56869869 player=32851 video=960834 autoplay=true]

  • ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಬೆಂಗಳೂರು: ರಾಜ್ಯದಲ್ಲಿ ಮೈಕ್ ದಂಗಲ್ ಬಳಿಕ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಲು ಪೊಲೀಸರ ಅನುಮತಿ ಕಡ್ಡಾಯ ಮಾಡಲಾಗಿದೆ. ಅದರಂತೆ, ಕೊಟ್ಟ ಗಡುವಿನಲ್ಲಿ ಧಾರ್ಮಿಕ ಕೇಂದ್ರಗಳು ಅನುಮತಿ ಪಡೆದಿವೆ.

    loudspeakers

    ವಿಶೇಷವೆಂದರೆ ಮೈಕ್ ಅನುಮತಿ ಪಡೆದ ಧಾರ್ಮಿಕ ಕೇಂದ್ರಗಳ ಪಟ್ಟಿಯಲ್ಲಿ ದೇಗುಲಗಳೇ ಅತಿ ಕಡಿಮೆ ಇವೆ. ಮೈಕ್ ಅನುಮತಿ ಪಡೆಯೋದ್ರದಲ್ಲಿ ದೇಗುಲಗಳು ಹಿಂದುಳಿದಿದ್ದು, ಮಸೀದಿ, ಚರ್ಚ್‌ಗಳು ಹೆಚ್ಚಿನ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡಿವೆ. ಬೆಂಗಳೂರಲ್ಲಿ ಸಲ್ಲಿಕೆ ಆಗಿದ್ದ 1,530 ಅರ್ಜಿಗಳ ಪೈಕಿ 797 ಅರ್ಜಿಗಳು ಮಸೀದಿಗಳಿಂದಲೇ ಸಲ್ಲಿಕೆಯಾಗಿವೆ. ಒಟ್ಟು ಅರ್ಜಿಗಳ ಪೈಕಿ 10 ಅರ್ಜಿಗಳು ರದ್ದಾಗಿದ್ದು, 79 ಅರ್ಜಿಗಳು ಇನ್ನೂ ಪರಿಶೀಲನೆ ಹಂತದಲ್ಲಿದೆ. ಇದನ್ನೂ ಓದಿ: ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    LOUDSPEAKER (1)

    ನಗರದಲ್ಲಿ ಒಟ್ಟು 308 ದೇಗುಲಗಳು ಅರ್ಜಿ ಸಲ್ಲಿಸಿದ್ದು, 295 ದೇಗುಲಗಳು ಅನುಮತಿ ಪಡೆದುಕೊಂಡಿದೆ. ಹಾಗೆಯೇ 797 ಮಸೀದಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, 762 ಮಸೀದಿಗಳು ಅನುಮತಿ ಪಡೆದಿವೆ. 358 ಚರ್ಚ್‌ಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈ ಪೈಕಿ 320 ಚರ್ಚ್‌ಗಳಿಗೆ ಮೈಕ್‌ಗಳನ್ನು ಬಳಸಲು ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ಇಲಾಖೆ ಸಿಬ್ಬಂದಿ ವಿರುದ್ಧ ಪೋಸ್ಟ್ – ಕಾನ್ಸ್‌ಟೇಬಲ್ ಅಮಾನತು

    ಪೊಲೀಸ್ ಇಲಾಖೆ ಸಿಬ್ಬಂದಿ ವಿರುದ್ಧ ಪೋಸ್ಟ್ – ಕಾನ್ಸ್‌ಟೇಬಲ್ ಅಮಾನತು

    ಕೋಲಾರ: ಪೊಲೀಸ್ ಇಲಾಖೆ ಸಿಬ್ಬಂದಿ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ.

    ಕೋಲಾರದ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣೆ ಪೇದೆ ಬಿ.ವಿ.ರಮೇಶ್ ಅವರನ್ನು ಕರ್ತವ್ಯ ಲೋಪ, ದುರ್ನಡತೆ ಕಾರಣ ನೀಡಿ ಎಸ್‍ಪಿ ಡಿ.ದೇವರಾಜ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

    ರಮೇಶ್ ಮಾಲೂರು ಹಾಗೂ ಮಾಸ್ತಿ ಪೊಲೀಸ್ ಸಿಬ್ಬಂದಿಗಳಾದ ವೆಂಕಟರಾಮಯ್ಯ, ನಾಗೇಂದ್ರ, ವೆಂಕಟೇಶಪ್ಪ ವಿರುದ್ಧ ವಾಟ್ಸ್‌ಆಪ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ನಲ್ಲಿ, ಮರಳು ಮಾಫಿಯಾ, ಜೂಜಾಟ ಹಾಗೂ ಹಲವು ದಂಧೆಗಳಲ್ಲಿ ಮೂವರು ಸಿಬ್ಬಂದಿ ಭಾಗಿಯಾಗಿದ್ದಾರೆಂದು ವಾಟ್ಸಾಪ್‍ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದರು.

    ಈ ಪೋಸ್ಟ್ ವೈರಲ್ ಆಗಿದ್ದು, ರಮೇಶ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ. ಮಾಸ್ತಿ ಇನ್ಸ್‌ಪೆಕ್ಟರ್ ವಸಂತ್ ನೀಡಿದ ವರದಿ ಆಧಾರದಲ್ಲಿ ದೇವರಾಜ್ ಅವರು ರಮೇಶ್‍ನನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ

  • ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ – ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್ ಅಧಿಕಾರಿಗಳು

    ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ – ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್ ಅಧಿಕಾರಿಗಳು

    ಕೊಪ್ಪಳ: ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಗರದ ಗಂಗಾವತಿ ತಾಲೂಕಿನ ಲಕ್ಷ್ಮೀ ಕ್ಯಾಂಪ್ ಏರಿಯಾದಲ್ಲಿ ನಡೆದಿದೆ.

    ಲಕ್ಷ್ಮೀ ಕ್ಯಾಂಪ್‍ನಲ್ಲಿರುವ ಉದ್ಯಾನವನದ ಜಾಗದಲ್ಲಿ ಮಸೀದಿ ನಿರ್ಮಿಸಿಕೊಂಡು ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿ, ಕೋಮುಗಲಭೆಗೆ ಪ್ರಚೋದನೆ ಮಾಡಲಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಭಾಷಣವನ್ನು ಖಂಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಘಟನೆ ಕುರಿತು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್