Tag: Police Inspector

  • ಪೊಲೀಸ್‌ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್‌ – ಅಂಗೈನಲ್ಲಿ ಡೆತ್‌ ನೋಟ್‌ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ

    ಪೊಲೀಸ್‌ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್‌ – ಅಂಗೈನಲ್ಲಿ ಡೆತ್‌ ನೋಟ್‌ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ

    ಮುಂಬೈ: ಸತಾರಾದ (Satara) ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು (Police inspector) ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು ಆಕೆಯ ಅಂಗೈನಲ್ಲಿದ್ದ 7 ಸಾಲಿನ ಡೆತ್‌ನೋಟ್‌ನಿಂದ ಗೊತ್ತಾಗಿದೆ.

    ಹೌದು. ವೈದ್ಯರು ಮತ್ತು ಜಿಲ್ಲಾ ಪೊಲೀಸರ ನಡುವೆ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮಧ್ಯೆ ಘಟನೆ ಸಂಭವಿಸಿದೆ. ಫಾಲ್ಟನ್‌ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆ ಕೈಮೇಲೆ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ. ಎಸ್‌ಐ ಗೋಪಾಲ್ ಬದ್ನೆ ತನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಪೊಲೀಸರ ನಿರಂತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂ

    ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವೈದ್ಯೆ (Woman Doctor) ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ನಡುವಿನ ವಿವಾದದಲ್ಲಿ ಸಿಲುಕಿದ್ದರು. ಇದರಿಂದ ವೈದ್ಯೆ ವಿರುದ್ಧ ಇಲಾಖಾ ಹಂತದ ವಿಚಾರಣೆ ಕೂಡ ಆರಂಭಿಸಲಾಗಿತ್ತು. ಈ ಮಧ್ಯೆ ಸಂತ್ರಸ್ತೆ ತಮ್ಮ ಹಿರಿಯ ಅಧಿಕಾರಿಯನ್ನ ಸಂಪರ್ಕಿಸಿ, ತನ್ನ ಮೇಲೆ ಅನ್ಯಾಯವಾಗುತ್ತಿದೆ. ಈ ದೌರ್ಜನ್ಯ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದಾಗ್ಯೂ ಕಿರುಕುಳ ಮುಂದುವರಿದ ಹಿನ್ನೆಲೆ ಅಂಗೈನಲ್ಲಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ತನ್ನ ಅಂಗೈಯಲ್ಲಿರುವ ಡೆತ್‌ನೋಟ್‌ ಅಲ್ಲದೇ, ಸಂತ್ರಸ್ತೆ ಕಳೆದ ಜೂನ್ 19 ರಂದೇ ಫಾಲ್ಟನ್ ಉಪ-ವಿಭಾಗೀಯ ಕಚೇರಿಯ ಡಿಎಸ್ಪಿಗೆ ಬರೆದ ಪತ್ರದಲ್ಲೂ ಇದೇ ರೀತಿಯ ಆರೋಪಗಳನ್ನ ಮಾಡಿದ್ದರಂತೆ. ಫಾಲ್ಟನ್ ಗ್ರಾಮೀಣ ಪೊಲೀಸ್ ಇಲಾಖೆಯ ಎಸ್‌ಐ ಗೋಪಾಲ್‌ ಬದ್ನೆ, ಉಪ-ವಿಭಾಗೀಯ ಪೊಲೀಸ್ ಇನ್ಸ್‌ಪೆಕ್ಟರ್ ಪಾಟೀಲ್ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಲಾಡ್‌ಪುತ್ರೆ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    ʻನನ್ನ ಸಾವಿಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೋಪಾಲ್‌ ಬದ್ನೆ ಸೇರಿ ಮೂವರು ಕಾರಣ. ಗೋಪಾಲ್‌ ಬದ್ನೆ ನನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾರೆ. 5 ತಿಂಗಳಿಗೂ ಹೆಚ್ಚು ಕಾಲ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆʼ ಅಂತ ಆರೋಪಿಸಿದ್ದಾರೆ.

    ಘಟನೆ ಬಳಿಕ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ ಅವರ ಆದೇಶದ ಮೇರೆಗೆ ಆರೋಪಿ ಪೊಲೀಸ್‌ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಅತ್ತ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಕೂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರ ತನಿಖೆಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸದ್ಯ ವೈದ್ಯೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಸಮುದ್ರದಲ್ಲಿ 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಸಾಧನೆ

    ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಸಮುದ್ರದಲ್ಲಿ 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಸಾಧನೆ

    ಹುಬ್ಬಳ್ಳಿ: ಹಿಂದೂ ಮಹಾಸಾಗರ (Indian Ocean) ಹಾಗೂ ಬಂಗಾಳಕೊಲ್ಲಿಯಲ್ಲಿ (Bay of Bengal) 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹುಬ್ಬಳ್ಳಿ (Hubballi) ಗ್ರಾಮೀಣ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣ ಅವರು ಶ್ರೀಲಂಕಾದ ರಾಮಸೇತುಯಿಂದ ಭಾರತದ ಧನುಷ್ ಕೋಡಿವರೆಗೆ ಸ್ವಿಮ್ಮಿಂಗ್ ರಿಲೇ ಮಾಡಿದ್ದಾರೆ.

    ಭೀಕರ ಸಮುದ್ರದಲೆಗಳನ್ನು ಲೆಕ್ಕಿಸಿದೇ ಕೇವಲ 8 ಗಂಟೆ 30 ನಿಮಿಷದಲ್ಲಿ 28 ಕಿ.ಮೀ ಈಜಿದ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣ ಮತ್ತು ಅವರ 8 ಜನರ ತಂಡ ಈ ಸಾಧನೆ ಮಾಡಿದೆ. ಉತ್ತರಪ್ರದೇಶ ಮತ್ತು ಹರಿಯಾಣದ ಇಬ್ಬರು ಐಎಎಸ್ ಅಧಿಕಾರಿಗಳು, ಪಶ್ಚಿಮ ಬಂಗಾಳ ಮತ್ತು ಹರಿಯಾಣದ ಅಂಗವಿಕಲ ಕ್ರೀಡಾಪಟುಗಳು, ಹುಬ್ಬಳ್ಳಿ ಕಿಮ್ಸ್‌ನ ಎಂಬಿಬಿಎಸ್ ವಿದ್ಯಾರ್ಥಿನಿ ಅಮನ ಶಾನ್‌ಭಾಗ್ ಈ ಸಾಧನೆ ಮಾಡಿದ್ದಾರೆ. ಫಿಟ್ ಇಂಡಿಯಾ ಮತ್ತು ಭಾರತ ಸ್ವಿಮ್ಮಿಂಗ್ ಫೆಡರೇಷನ್ ನೇತೃತ್ವದಲ್ಲಿ ಸ್ವಿಮ್ಮಿಂಗ್ ರಿಲೇ ನಡೆದಿತ್ತು. ಇದನ್ನೂ ಓದಿ: ಪ್ರಣಿತಾ ಮಗನ ನಾಮಕರಣದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಇನ್ನೂ ಜೂನ್ ತಿಂಗಳಲ್ಲಿ ಈ ತಂಡವು ಅತ್ಯಂತ ಅಪಾಯಕಾರಿಯಾಗಿರುವ ಇಂಗ್ಲಿಷ್ ಕಾಲುವೆಯಲ್ಲಿ ಈಜಲು ಸಿದ್ಧವಾಗಿದೆ. ಇಂಗ್ಲೆಂಡ್ ಮತ್ತು ಫ್ರಾನ್ಸ್ ಮಧ್ಯದಲ್ಲಿರುವ 36 ಕಿ.ಮೀ ಇಂಗ್ಲಿಷ್ ಕಾಲುವೆಯಲ್ಲಿ ಈಜಿ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿರುವ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣ ಅವರ ಸಾಧನೆಯು ಎಲ್ಲರ ಮೆಚ್ಚುಗೆಗಳಿಸಿದೆ.

  • ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ ಶಾಕ್ – ಲೋಕಾ ದಾಳಿ ವೇಳೆ ಪರಾರಿ

    ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ ಶಾಕ್ – ಲೋಕಾ ದಾಳಿ ವೇಳೆ ಪರಾರಿ

    – ಅನ್ನಪೂರ್ಣೇಶ್ವರಿ ಪೊಲೀಸ್ ಇನ್ಸ್‌ಪೆಕ್ಟರ್‌ ವಿರುದ್ಧ ಕಿರುಕುಳ ಆರೋಪ
    – 4 ಕೋಟಿ ಮೌಲ್ಯದ ಮನೆಯನ್ನ 60 ಲಕ್ಷಕ್ಕೆ ಹೇಳಿದವರಿಗೆ ಕೊಡುವಂತೆ ಕಿರುಕುಳ
    – ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾ ದಾಳಿ

    ಬೆಂಗಳೂರು: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌(Police Inspector) ಕುಮಾರ್ ಅವರಿಗೆ ಲೋಕಾಯುಕ್ತ ಶಾಕ್ ನೀಡಿದೆ. ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ, ಇನ್ಸ್‌ಪೆಕ್ಟರ್‌ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.

    ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ(Annapoorneshwari Nagara) ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ರಿಂದ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

    ಆರೋಪ ಏನು?
    ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್‌ಪೆಕ್ಟರ್‌ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇವರಿಬ್ಬರಿಗೂ ಇನ್ಸ್‌ಪೆಕ್ಟರ್‌ ಕಿರುಕುಳ ಕೊಟ್ಟಿದ್ದರು.

    ಈ ಹಿಂದೆ ದಾಖಲಾಗಿದ್ದ ಕೇಸ್ ಒಂದನ್ನು ಬಿ ರಿಪೋರ್ಟ್‌ಗೆ ಹಾಕುತ್ತೇನೆ. ಮನೆಯನ್ನು ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್‌ ಕುಮಾರ್ ಅವರು ಚೆನ್ನೇಗೌಡ ಅವರ ಮನೆಗೆ ಕೆಲ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ಅವರು ವಿಡಿಯೋ ಮಾಡಿಕೊಂಡಿದ್ದರು. ಇದನ್ನೂ ಓದಿ: ತವರಲ್ಲಿ ಗೆದ್ದು ಹ್ಯಾಟ್ರಿಕ್‌ ಸಾಧನೆ ಮಾಡುತ್ತಾ ಆರ್‌ಸಿಬಿ?

    ಪೊಲೀಸ್ ಇನ್ಸ್‌ಪೆಕ್ಟರ್‌, ಸಂಬಂಧಿಯೊಬ್ಬರಿಗೆ ಕಡಿಮೆ ಬೆಲೆಗೆ ಮನೆ ಕೊಡಿಸಲು ಪ್ಲ್ಯಾನ್ ಮಾಡಿದ್ದರು. 4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮನೆ ನೋಡಿಕೊಂಡು ಬರಲು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರ ಜೊತೆ ಅವರ ಸಂಬಂಧಿಕರನ್ನ ಕಳುಹಿಸಿದ್ದರು.

    ಇನ್ಸ್‌ಪೆಕ್ಟರ್‌ ಸೂಚನೆಯಂತೆ ಇಬ್ಬರು ವ್ಯಕ್ತಿಗಳೊಂದಿಗೆ ಮನೆ ನೋಡಬೇಕೆಂದು ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರು ಚೆನ್ನೇಗೌಡ ಅವರ ಮನೆಗೆ ನುಗ್ಗಿದ್ದರು. ಮಾ. 18ರಂದು ಸಮಯ 3:25 ನಿಮಿಷಕ್ಕೆ ಕೆಂಪು ಬಣ್ಣದ ಕೆಎ 42 ಪಿ 0919 ನೋಂದಣಿಯ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನಿಸಿದ ಚೆನ್ನೇಗೌಡ ಅವರು ವಿಡಿಯೋ ಸಹ ಮಾಡಿದ್ದರು. ಈ ವೇಳೆ ಸ್ಟೇಷನ್‌ನಿಂದ ಕಾರು ಸಮೇತ ಕರೆದುಕೊಂಡು ಬರುವುದಾಗಿ ಹೇಳಿದ್ದಾರೆ ಎಂದು ಹೆಡ್ ಕಾನ್ಸ್ಟೇಬಲ್ ಉಮೇಶ್ ಅವರು ಅಲ್ಲಿಂದ ಎಸ್ಕೇಪ್ ಆಗಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ – ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ವಿದ್ಯಾರ್ಥಿನಿ ಸಾವು

    ಮತ್ತೊಂದಡೆ ನಾಗರಭಾವಿಯ ಖಾಸಗಿ ಹೊಟೇಲ್‌ನಲ್ಲಿ ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾ ದಾಳಿ ನಡೆಸಿದೆ. ಹೆಡ್ ಕಾನ್ಸ್‌ಟೇಬಲ್ ಉಮೇಶ್, ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಠಾಣೆಯ ಸಿಬ್ಬಂದಿಗಳನ್ನ ಹಾಗೂ ಸಿಕ್ಕಿಬಿದ್ದ ಸಿಬ್ಬಂದಿಗಳನ್ನು ಗುರುವಾರ ಸಂಜೆ 5 ಗಂಟೆಯಿಂದ ಬೆಳಗಿನ ಜಾವದವರೆಗೆ ವಿಚಾರಣೆ ನಡೆಸಿದ್ದು, ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

  • ಸಿಸಿಬಿ ಇನ್ಸ್‌ಪೆಕ್ಟರ್‌ ಆತ್ಮಹತ್ಯೆಗೆ ಶರಣು

    ಸಿಸಿಬಿ ಇನ್ಸ್‌ಪೆಕ್ಟರ್‌ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಸಿಸಿಬಿ ಇನ್ಸ್‌ಪೆಕ್ಟರ್‌ (Police Inspector) ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ (Thimme Gowda) ಬಿಡದಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

  • ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಬೆಂಗಳೂರು: ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರನ್ನು ಸಿಐಡಿಗೆ ವರ್ಗಾವಣೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ಗೆ (G.Parameshwara) ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಪತ್ರ ಬರೆದಿದ್ದಾರೆ.

    ಬೆಂಗಳೂರು ನಗರದ ಹಲಸೂರು ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ್ ವರ್ಗಾವಣೆ ಕುರಿತು ಗೃಹ ಇಲಾಖೆಯ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಸುರೇಶ್‌ ಕುಮಾರ್‌, ಈ ಬಗ್ಗೆ ಸ್ಪಷ್ಟನೆ ಕೇಳಿ ಬರೆದಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

    ನಗರ ಪೊಲೀಸ್ ಆಯುಕ್ತರು ಒಂದು ವಿದ್ಯಮಾನದಲ್ಲಿ ಮಂಜುನಾಥ್ ಅವರ ವಿಚಾರಣೆ ನಡೆಸಿದ ನಂತರ ಅಮಾನತು ಮಾಡಿದ್ದಾರೆ. ಈ ಮಾಹಿತಿ ಮಾಧ್ಯಮದ ಮೂಲಕ ನನಗೆ ತಿಳಿಯಿತು. ಅದೇ ಸುದ್ದಿಯಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿಯನ್ನೂ ಓದಿದೆ. ಅಮಾನತುಗೊಂಡ ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಅದರ ಬೆನ್ನಲ್ಲೇ ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ನನ್ನಲ್ಲಿ ಕೆಲವು ಪ್ರಶ್ನೆಗಳು ಉದ್ಭವವಾಗಿವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಆಯುಕ್ತರು ಅಮಾನತು ಮಾಡಿದ ಆದೇಶ ಇಂದು ಯಾವ ಸ್ಥಿತಿಯಲ್ಲಿದೆ? ಅಮಾನತುಗೊಂಡ ಹಿಂದೆಯೇ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿಸಿರುವ ಹಿಂದಿನ ಶಕ್ತಿ ಯಾವುದು? ಆ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಲೋಪದ ಕಾರಣ ಅಮಾನತು ಮಾಡಿದ ಪೊಲೀಸ್‌ ಆಯುಕ್ತರಿಗೆ ಇದರಿಂದ ನೈತಿಕ ಬಲ ಕುಸಿದಂತೆ ಆಗಿಲ್ಲವೇ? ಸಿಐಡಿ ಎಂದರೆ ಇಂತಹ ಕರ್ತವ್ಯಲೋಪ ಎಸಗಿರುವವರನ್ನು, ಅದಕ್ಷತೆ ತೋರಿಸುವವರನ್ನು, ಭ್ರಷ್ಟಾಚಾರ ಪ್ರಕರಣ ಎದುರಿಸುವವರನ್ನು ವರ್ಗಾವಣೆ ಮಾಡುವ ಒಂದು ಕೇಂದ್ರವೇ? ಪೊಲೀಸ್ ಇಲಾಖೆಯಲ್ಲಿ ಸಿಐಡಿ ವಿಭಾಗಕ್ಕೆ ಯಾವುದೇ ಮಹತ್ವ ಇಲ್ಲವೇ? ತಾವು ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ಡಜನ್‍ಗೂ ಹೆಚ್ಚು ಇನ್ಸ್‌ಪೆಕ್ಟರ್‌ ವರ್ಗಾವಣೆಗೆ ತಡೆ – ಆದೇಶಕ್ಕೆ ದಿಢೀರ್‌ ತಡೆ ಹಿಡಿದಿದ್ದು ಯಾಕೆ?

    5 ಡಜನ್‍ಗೂ ಹೆಚ್ಚು ಇನ್ಸ್‌ಪೆಕ್ಟರ್‌ ವರ್ಗಾವಣೆಗೆ ತಡೆ – ಆದೇಶಕ್ಕೆ ದಿಢೀರ್‌ ತಡೆ ಹಿಡಿದಿದ್ದು ಯಾಕೆ?

    ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಜೋರಾಗಿದ್ದು ಈ ಮಧ್ಯೆ ಕೆಲ ಗೊಂದಲವೂ ಏರ್ಪಟ್ಟಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಗೃಹಸಚಿವ ಪರಮೇಶ್ವರ್ (Parameshwar) ರಹಸ್ಯ ಸಭೆ ನಡೆಸಿದರೂ ಪೊಲೀಸ್‌ ಇನ್ಸ್‌ಪೆಕ್ಟರ್‌ ವರ್ಗಾವಣೆ (Police Inspector Transfer) ಸಂಬಂಧ ಹಲವು ಪ್ರಶ್ನೆಗಳು ಎದ್ದಿದೆ.

    211 ಇನ್ಸ್‌ಪೆಕ್ಟರ್ ವರ್ಗಾವಣೆಯಲ್ಲಿ 5 ಡಜನ್‍ಗೂ ಹೆಚ್ಚು ವರ್ಗಾವಣೆಗೆ ತಡೆ ಏಕೆ? ಸರ್ಕಾರದಲ್ಲಿ ಯಾರು, ಯಾರಿಗಾಗಿ, ಯಾವ ಜಾಗ ಕೇಳುತ್ತಿದ್ದಾರೆ ಎಂಬುದು ಈಗ ಕುತೂಹಲದ ಪ್ರಶ್ನೆ. ಇದನ್ನೂ ಓದಿ: ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP

     

    ವರ್ಗಾವಣೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಆ ವೇಳೆ ಎಚ್ಚರಿಕೆಯಿಂದ ಹೆಜ್ಜೆ ಇಡಲು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಪೊಲೀಸ್ ವರ್ಗಾವಣೆಯಲ್ಲಿ ಶಾಸಕರು, ಪಕ್ಷದ ಹಿರಿಯರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ರಹಸ್ಯ ಸಭೆ ನಡೆಸಿ ಫೈನಲ್ ಮಾಡಿದ್ದರು.

    ಪೊಲೀಸ್ ಇಲಾಖೆಯ ವರ್ಗಾವಣೆಯನ್ನು ಅಳೆದು ತೂಗಿ ಸಿದ್ದು, ಪರಂ ನಿರ್ಧಾರ ಮಾಡಿದ್ದರೂ ವರ್ಗಾವಣೆ ಆದೇಶದ ಬಳಿಕ ಕೆಲ ಪ್ರಭಾವಿ ಸಚಿವರು, ಕೆಲ ಶಾಸಕರು ಆಕ್ಷೇಪ ಎತ್ತಿದ್ದರು.

     

    ವಿಶೇಷವಾಗಿ ಬೆಂಗಳೂರಿಗೆ ಸಂಬಂಧಪಟ್ಟ ವರ್ಗಾವಣೆ ಬಗ್ಗೆಯೇ ಕೆಲ ಪ್ರಭಾವಿಗಳ ಆಕ್ಷೇಪ ಹಿನ್ನೆಲೆ ಇದ್ದಕ್ಕಿದ್ದಂತೆ 60ಕ್ಕೂ ಹೆಚ್ಚು ವರ್ಗಾವಣೆಗಳನ್ನ ಪೊಲೀಸ್ ಇಲಾಖೆ ತಡೆ ಹಿಡಿದಿದೆ. ದೆಹಲಿ ಪ್ರವಾಸದಿಂದ ಸಿದ್ದರಾಮಯ್ಯ ವಾಪಸ್ ಆದ ಬಳಿಕ ತಡೆಹಿಡಿದ ವರ್ಗಾವಣೆ ಮರುಪರಿಶೀಲನೆ ಮಾಡುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಾಯುಕ್ತ ಟ್ರ್ಯಾಪ್ ಕೇಸ್‌ನಲ್ಲಿ ಹೆಸರು – ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

    ಲೋಕಾಯುಕ್ತ ಟ್ರ್ಯಾಪ್ ಕೇಸ್‌ನಲ್ಲಿ ಹೆಸರು – ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

    ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ (Corruption) ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ರನ್ನ (Police Inspector) ಅಮಾನತು (Suspend) ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

    ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್. ಇವರು ಶಿವಾಜಿನಗರ (Shivajinagara) ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್‌ಐ ಸವಿತಾ ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದು, ಲಂಚದ ಹಣವಾದ 5 ಸಾವಿರ ರೂ. ಪಡೆಯುತ್ತಿದ್ದಾಗ ಸಬ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತದ (Lokayukta) ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

    ಲೋಕಾಯುಕ್ತ ಟ್ರ್ಯಾಪ್‌  ಕೇಸ್‌ನಲ್ಲಿ ಇನ್‌ಸ್ಪೆಕ್ಟರ್ ಸುಮಾ ಹೆಸರು ಕೇಳಿ ಬಂದಿತ್ತು. ಸುಮಾ ಮೇಲೆ ಹಲವು ಆರೋಪಗಳು ಕೇಳಿ ಬಂದಿದ್ದು, ಲಂಚ, ಕರ್ತವ್ಯ ಲೋಪ, ದುವರ್ತನೆ, ಎಲ್ಲಾ ಆರೋಪಗಳ ಹಿನ್ನೆಲೆ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು

  • ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್‌ಪೆಕ್ಟರ್ – ಕುಖ್ಯಾತ ಕಳ್ಳನನ್ನು ಬಂಧಿಸಿ ಭಾರೀ ಮೆಚ್ಚುಗೆ

    ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್‌ಪೆಕ್ಟರ್ – ಕುಖ್ಯಾತ ಕಳ್ಳನನ್ನು ಬಂಧಿಸಿ ಭಾರೀ ಮೆಚ್ಚುಗೆ

    ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಕಳ್ಳತನ (Theft) ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಠಾಣೆ ಇನ್ಸ್‌ಪೆಕ್ಟರ್ ರವಿಚಂದ್ರ (Inspector Ravichandra) ಬಡಫಕೀರಪ್ಪನವರ್ ಯಶಸ್ವಿಯಾಗಿದ್ದಾರೆ. ತಮ್ಮ ತಾಯಿಯ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್‌ಪೆಕ್ಟರ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲೂ ಕೂಡ ಕಳ್ಳತನವಾಗಿತ್ತು. ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ರವಿಚಂದ್ರ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆದರೆ ತಾಯಿ ಅಗಲಿಕೆ ನಡುವೆಯೇ 3 ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ

    ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ ಅವರು, ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ ಶ್ರೀಕಾಂತ್(26) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ, ನಗರದ ಮಿಷನ್ ಕಂಪೌಂಡ್ ಹತ್ತಿರ ಮನೆಯೊಂದರಲ್ಲಿ 3,20,000 ರೂ. ಮೌಲ್ಯದ 71 ಗ್ರಾಂ ತೂಕದ ಚಿನ್ನದ ಆಭರಣಗಳು ಹಾಗೂ 1,00,000 ರೂ. ಹಣವನ್ನು ಕಳ್ಳತನ ಮಾಡಿದ್ದ.

    3 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯಿಂದ 6,95,000 ರೂ. ಮೌಲ್ಯದ 165 ಗ್ರಾಂ ತೂಕದ ಬಂಗಾರದ ಆಭರಣಗಳು, 1,000 ರೂ. ಮೌಲ್ಯದ 20 ಗ್ರಾಂ ಬೆಳ್ಳಿ ಆಭರಣ ಮತ್ತು 30,000 ರೂ. ನಗದನ್ನು ಜಪ್ತಿ ಮಾಡಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಲಾಗಿದೆ. ರವಿಚಂದ್ರ ಅವರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಬಹುಮಾನ ಘೋಷಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

    Live Tv
    [brid partner=56869869 player=32851 video=960834 autoplay=true]

  • ಡ್ಯೂಟಿ ಬಿಟ್ಟು ಸಮವಸ್ತ್ರದಲ್ಲೇ ಬ್ಯೂಟಿ ಕಡೆ ವಾಲಿ ಕೆಲಸ ಕಳೆದುಕೊಂಡ ಇನ್ಸ್‌ಪೆಕ್ಟರ್!

    ಡ್ಯೂಟಿ ಬಿಟ್ಟು ಸಮವಸ್ತ್ರದಲ್ಲೇ ಬ್ಯೂಟಿ ಕಡೆ ವಾಲಿ ಕೆಲಸ ಕಳೆದುಕೊಂಡ ಇನ್ಸ್‌ಪೆಕ್ಟರ್!

    ಲಕ್ನೋ: ಸಾಮಾನ್ಯವಾಗಿ ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ ಕೆಲವೊಮ್ಮೆ ಸಮವಸ್ತ್ರ ಧರಿಸಿದ ಪೋಲೀಸರು ಇಂತಹ ಕೃತ್ಯ ಎಸಗುವುದು ಇಡೀ ಪೊಲೀಸ್ ಇಲಾಖೆಯನ್ನು ನಾಚಿಕೆಗೇಡು ಮಾಡುತ್ತದೆ. ಇದಕ್ಕೆ ಉತ್ತಮ ನಿದರ್ಶನ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದ ಘಟನೆ.

    ಹೌದು. ಪ್ರಯಾಗ್‍ರಾಜ್‍ನ ಸಿವಿಲ್ ಲೈನ್ ಔಟ್‍ಪೋಸ್ಟ್ ಇನ್‍ಚಾರ್ಜ್ ರಾಕೇಶ್ ಚಂದ್ ಶರ್ಮಾ ಅವರು ಸಮವಸ್ತ್ರ ಧರಿಸಿಯೇ ಮಸಾಜ್ ಸೆಂಟರ್‍ಗೆ ತೆರಳಿ ಮಸಾಜ್ ಮಾಡಿಕೊಂಡಿದ್ದಾರೆ. ರಾಕೇಶ್ ಮಸಾಜ್ ಮಾಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

    ಯುವತಿಯೊಬ್ಬಳು ಇನ್ಸ್ ಪೆಕ್ಟರ್ ಮುಖಕ್ಕೆ ಮಸಾಜ್ ಮಾಡುತ್ತಿದ್ದಳು. ಇದನ್ನು ಅಲ್ಲೆ ಇದ್ದವರು ತಮ್ಮ ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಪೊಲೀಸ್ ಇಲಾಖೆಯ ಟ್ವಿಟ್ಟರ್‍ಗೆ ಕಳುಹಿಸಿದ್ದಾರೆ. ಅಲ್ಲದೆ ಇನ್ಸ್ ಪೆಕ್ಟರ್ ಅವರು ತನ್ನ ಪ್ರದೇಶದ ಸಿವಿಲ್ ಲೈನ್‍ನ ಸ್ಪಾದಲ್ಲಿ ಮಹಿಳೆಗೆ ಮಸಾಜ್ ಮಾಡುತ್ತಿದ್ದಾನೆ ಎಂದು ಬರೆದಿದ್ದಾರೆ.

    ವೀಡಿಯೋದಲ್ಲೇನಿದೆ..?: ರಾಕೇಶ್ ಅವರು ಸ್ಪಾ ಕೇಂದ್ರದಲ್ಲಿ ಚೇರ್ ಮೇಲೆ ಕುಳಿತುಕೊಂಡಿದ್ದಾರೆ. ಇತ್ತ ಯುವತಿ ಚೇರ್ ಹಿಂದೆ ನಿಂತು ಇನ್ಸ್‍ಪೆಕ್ಟರ್ ಮುಖಕ್ಕೆ ನಯವಾಗಿ ಮಸಾಜ್ ಮಾಡುತ್ತಿದ್ದಾರೆ. ಯುವತಿ ಮುಖ ಕ್ಷಣಾರ್ಧದಲ್ಲಿ ಕಣ್ಣಮುಂದೆ ಬರುತ್ತದೆ. ನಂತರ ಅವಳು ತನ್ನ ಮುಖವನ್ನು ತಿರುಗಿಸುತ್ತಾಳೆ. ಸದ್ಯ ಕೇವಲ 17 ಸೆಕೆಂಡ್‍ಗಳ ವೈರಲ್ ವೀಡಿಯೋ ಇನ್ಸ್ ಪೆಕ್ಟರ್ ಕಾರ್ಯವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೆ ಎಚ್ಚೆತ್ತ ಅಲ್ಲಿನ ಎಸ್‍ಎಸ್‍ಪಿ ಪ್ರಯಾಗರಾಜ್ ಶೈಲೇಂದ್ರ ಕುಮಾರ್ ಪಾಂಡೆ ಅವರು ರಾಕೇಶ್ ಅವರನ್ನು ಅಮಾನತುಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

    ಏನಿದು ಪ್ರಕರಣ:
    ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    ಹೊರಟ್ಟಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು. ಆ ಬಳಿಕ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಈ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಈ ವೇಳೆ ಎಸ್‍ಪಿ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಎರಡು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.