Tag: police recruitment

  • ಯುಪಿ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ – ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ವಜಾ

    ಯುಪಿ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ – ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ವಜಾ

    ಲಕ್ನೋ: ಉತ್ತರ ಪ್ರದೇಶ (Uttar Pradesh) ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ (Question Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ (Renuka Mishra) ಅವರನ್ನು ವಜಾಗೊಳಿಸಲಾಗಿದೆ.

    ಉತ್ತರ ಪ್ರದೇಶ ಸರ್ಕಾರ ರೇಣುಕಾ ಮಿಶ್ರಾ ಅವರನ್ನು ವಜಾಗೊಳಿಸಿದ್ದು, ರಾಜೀವ್ ಕೃಷ್ಣ ಅವರಿಗೆ ನೇಮಕಾತಿ ಮಂಡಳಿಯ ಜವಾಬ್ದಾರಿಯನ್ನು ನೀಡಿದೆ. ಫೆಬ್ರವರಿ 17 ಮತ್ತು 18ರಂದು ಉತ್ತರ ಪ್ರದೇಶದಲ್ಲಿ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. 60,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 48 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದನ್ನೂ ಓದಿ: ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

    ಸದ್ಯ ಈ ಪ್ರಕರಣವನ್ನು ಎಸ್‌ಟಿಎಫ್‌ಗೆ ಹಸ್ತಾಂತರಿಸಲಾಗಿದೆ. ಮುಂದಿನ 6 ತಿಂಗಳಲ್ಲಿ ಲಿಖಿತ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲಾಗುವುದು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮುಂದಿನ 3 ತಿಂಗಳು ರಣರಣ ಬಿಸಿಲು – ಬಿಸಿಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

  • ಜಮ್ಮು, ಕಾಶ್ಮೀರದಲ್ಲಿ ಪೊಲೀಸ್ ನೇಮಕಾತಿ ವಂಚನೆ – 1,200 ಮೆರಿಟ್ ಪಟ್ಟಿ ರದ್ದು

    ಜಮ್ಮು, ಕಾಶ್ಮೀರದಲ್ಲಿ ಪೊಲೀಸ್ ನೇಮಕಾತಿ ವಂಚನೆ – 1,200 ಮೆರಿಟ್ ಪಟ್ಟಿ ರದ್ದು

    ಶ್ರೀನಗರ: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,200 ಪೊಲೀಸ್ ಅಧಿಕಾರಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ.

    2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇದೇ ಮೊದಲಬಾರಿಗೆ ನೇಮಕಾತಿ ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೊಫೆಸರ್ ಕ್ಷಮೆಯಾಚನೆ 

    ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ತನಿಖೆಗೆ ಆದೇಶ ನೀಡಿದ್ದು, ಆರ್.ಕೆ.ಗೋಯಲ್ ನೇತೃತ್ವದ ತನಿಖಾ ಸಮಿತಿಯು ವರದಿಯನ್ನು ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಭರವಸೆ ನೀಡಿದ್ದಾರೆ.

    ಕಳೆದ ತಿಂಗಳು  J&K ಸೇವೆಗಳ ಆಯ್ಕೆ ಮಂಡಳಿ (JKSSB) ಬಿಡುಗಡೆ ಮಾಡಿದ ಪೊಲೀಸ್ ಸಬ್-ಇನ್‍ಸ್ಪೆಕ್ಟರ್‌ಗಳ ಅರ್ಹತಾ ಪಟ್ಟಿಯ ದೊಡ್ಡ ಪ್ರಮಾಣದ ಭ್ರಷ್ಟಾಚಾರವನ್ನು ಸಮಿತಿಯು ಕಂಡುಹಿಡಿದಿದೆ. ಇದನ್ನೂ ಓದಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ 

    ರಾಜ್ಯಪಾಲ ಸಿನ್ಹಾ ಟ್ವೀಟ್ ಮಾಡಿದ್ದು, ಜೆಕೆಪಿ ಸಬ್-ಇನ್‍ಸ್ಪೆಕ್ಟರ್ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ. ಆಯ್ಕೆ ಪ್ರಕ್ರಿಯೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ನ್ಯಾಯಾಂಗದ ಮುಂದೆ ತಂದು ಒಪ್ಪಿಸಲಾಗುವುದು. ನಮ್ಮ ಯುವಕರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಮೊದಲ ದೊಡ್ಡ ಹೆಜ್ಜೆಯಾಗಿದೆ. ಸರ್ಕಾರವು ಭವಿಷ್ಯದ ಕೋರ್ಸ್ ಶೀಘ್ರದಲ್ಲೇ ನಿರ್ಧರಿಸುತ್ತದೆ. ಹೊಸ ನೇಮಕಾತಿ ಬಗ್ಗೆ ತನಿಖೆ ಮಾಡಲಾಗುತ್ತೆ ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶೌಚಾಲಯವಿಲ್ಲದೇ 8,360 ವಿದ್ಯಾರ್ಥಿಗಳು ಪರದಾಟ

    ಶೌಚಾಲಯವಿಲ್ಲದೇ 8,360 ವಿದ್ಯಾರ್ಥಿಗಳು ಪರದಾಟ

    – ಸಹಾಯಕ್ಕೆ ಧಾವಿಸಿದ ಮಾಜಿ ಎಂಎಲ್‍ಸಿ

    ಕೊಪ್ಪಳ: ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಎಡವಟ್ಟು ನಡೆದಿದ್ದು, ಶೌಚಾಲಯ ಇಲ್ಲದೆ ವಿದ್ಯಾರ್ಥಿಗಳ ಪರದಾಡುವಂಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೆ.ಎಸ್.ಆರ್.ಪಿ ಪರೀಕ್ಷೆ ಹಿನ್ನೆಲೆಯಲ್ಲಿ ಗಂಗಾವತಿಗೆ 8,360 ವಿದ್ಯಾರ್ಥಿಗಳು ಆಗಮಿಸಿದ್ದರು. ಗಂಗಾವತಿ ತಾಲೂಕಿನಾದ್ಯಾಂತ ಸುಮಾರು 21 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆದ್ದರಿಂದ ಶನಿವಾರ ರಾತ್ರಿನೇ ಗಂಗಾವತಿಗೆ ಸಾವಿರಾರು ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಆದರೆ ಬಂದಿರುವ ವಿದ್ಯಾರ್ಥಿಗಳಿಗೆ ತಂಗಲು ವ್ಯವಸ್ಥೆ ಇಲ್ಲದೆ ಪರದಾಡಿದ್ದಾರೆ.

    ನಗರದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಪರದಾಡಿದ್ದು, ಒಂದೇ ಒಂದು ಶೌಚಾಲಯಕ್ಕೆ ಸಾಗರೋಪಾದಿಯಲ್ಲಿ ವಿದ್ಯಾರ್ಥಿಗಳು ಕ್ಯೂ ನಿಂತಿದ್ದರು. ಕೊನೆಗೆ ಕೆ.ಎಸ್.ಆರ್.ಪಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಕಷ್ಟಕ್ಕೆ ಮಾಜಿ ಎಂಎಲ್ ಸಿ ಎಚ್.ಆರ್. ಶ್ರೀನಾಥ್ ನೇರವಾಗಿದ್ದಾರೆ. ತಕ್ಷಣ ಅವರು ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳಿಗೆ ತಂಗಲು ಅವಕಾಶ ಮಾಡಿಕೊಟ್ಟಿದ್ದಾರೆ.

    ಕಲ್ಯಾಣ ಮಂಟಪದಲ್ಲಿ ತಂಗಲು ವ್ಯವಸ್ಥೆ ಮಾಡಿದ್ದರೂ ಇನ್ನುಳಿದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ಮಲಗಿಕೊಂಡಿದ್ದು, ಕೊರೆಯುವ ಚಳಿಯಲ್ಲಿ ಬಸ್ ನಿಲ್ದಾಣದಲ್ಲೇ ಕಾಲ ಕಳೆದಿದ್ದಾರೆ. ತಾತ್ಕಾಲಿಕ ಶೌಚಾಲಯ ಕಲ್ಪಿಸುವ ವ್ಯವಸ್ಥೆಯನ್ನು ಇಲ್ಲಿನ ನಗರಸಭೆ ಮಾಡಲಿಲ್ಲ ಎಂದು ಇಲ್ಲದ ನಗರಸಭೆ ವಿರುದ್ಧ ವಿದ್ಯಾರ್ಥಿಗಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಮಾಜಿ ಎಂಎಲ್‍ಸಿ ಎಚ್.ಆರ್. ಶ್ರೀನಾಥ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಈ ರೀತಿ ಪೊಲೀಸ್ ನೇಮಕಾತಿಯ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಬಗ್ಗೆ ಪೊಲೀಸರು ಮುಂಚಿತವಾಗಿ ತಿಳಿಸಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ನಮಗೆ ತಿಳಿಸಿದ್ದರು. ಆದ್ದರಿಂದ ತಕ್ಷಣ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿರುವುದರಿಂದ ಶೌಚಾಲಯಗಳ ತೊಂದರೆಯಾಗಿದೆ. ನಾವು ಗಂಗಾವತಿಯವರು ಎಲ್ಲರೂ ಒಟ್ಟಾಗಿ ಸೇರಿ ಸಹಾಯ ಮಾಡುತ್ತಿದ್ದೇವೆ. ಆದರೆ ಶನಿವಾರ ಸಂಜೆ 6ಗಂಟೆಗೆ ಈ ಬಗ್ಗೆ ತಿಳಿಸಿದ್ದಾರೆ. ಮುಂಚಿತವಾಗಿ ಹೇಳಿದ್ದರೆ, ರಾತ್ರಿ ಊಟ, ಬೆಳಗ್ಗೆ ತಿಂಡಿ ವ್ಯವಸ್ಥೆಯನ್ನು ಮಾಡಬಹುದಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

    ಮುಂಜಾಗ್ರತೆಗಾಗಿ ಇಬ್ಬರು ಎಸ್‍ಪಿ, 11 ಡಿವೈಎಸ್ಪಿ ಸೇರಿದಂತೆ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಾಂತ ಕೇವಲ 517 ಹುದ್ದೆಗಳಿಗೆ ಬರೋಬ್ಬರಿ 4 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಅತೀ ಹೆಚ್ಚು ಅಭ್ಯರ್ಥಿ ಕೊಪ್ಪಳದ ಗಂಗಾವತಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv