Tag: police

  • ಕೋಡಿಮಠ ಸ್ವಾಮೀಜಿ ಚಿನ್ನಾಭರಣ ಕಳ್ಳತನ; 7 ವರ್ಷಗಳ ಬಳಿಕ ಆರೋಪಿ ಬಂಧನ

    ಕೋಡಿಮಠ ಸ್ವಾಮೀಜಿ ಚಿನ್ನಾಭರಣ ಕಳ್ಳತನ; 7 ವರ್ಷಗಳ ಬಳಿಕ ಆರೋಪಿ ಬಂಧನ

    ಬೆಂಗಳೂರು: ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಅವರ ಬಳಿಯಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ 7 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

    ಹಾಸನ (Hassan) ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅವರ ಚಿನ್ನಾಭರಣ ಕಳ್ಳತನವಾಗಿತ್ತು. ಸ್ವಾಮೀಜಿ ಬಳಿ ಆರೋಪಿ ಚಿನ್ನಾಭರಣ, ನಗದು ಕಳವು ಮಾಡಿದ್ದ. ಆರೋಪಿಯನ್ನು ಏಳು ವರ್ಷಗಳ ಬಳಿಕ ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು | ಒಂದೇ ಮೀಟರ್ – 16 ಮನೆಗಳಿಗೆ ವಿದ್ಯುತ್

    ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್ ಎಂಬಾತನ ಬಂಧನವಾಗಿದೆ. 2018 ರಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲೆದರ್ ಬ್ಯಾಗ್‌ನಲ್ಲಿ ಚಿನ್ನದ ಆಭರಣ, ನಗದು ಹಣವನ್ನು ಇಟ್ಟು ಸ್ವಾಮೀಜಿ ನಿದ್ದೆಗೆ ಜಾರಿದ್ದರು. ತಡರಾತ್ರಿ ಎಚ್ಚರಗೊಂಡು ನೋಡಿದ ವೇಳೆ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು.

    ಚಿನ್ನದ ಸರ 250 ಗ್ರಾಂ. ಗೌರಿಶಂಕರ ರುದ್ರಾಕ್ಷಿ ಪದಕ, ಎರಡು ಚಿನ್ನದ ಉಂಗುರಗಳು 50 ಗ್ರಾಂ., 1.62 ಲಕ್ಷ ನಗದು ಕಳ್ಳತನವಾಗಿತ್ತು. ಈ ಬಗ್ಗೆ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು, ಏಳು ವರ್ಷಗಳ ನಂತರ ಆರೋಪಿ ಜಿತೇಂದ್ರ ಕುಮಾರ್ ಬಂಧನ ಮಾಡಿದ್ದಾರೆ. ಇದನ್ನೂ ಓದಿ: Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

    ಬಂಧಿತನಿಂದ 13 ಕೇಸ್‌ಗಳು ಪತ್ತೆಯಾಗಿದ್ದು, ಎಸಿ ಕೋಚ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದ ಆರೋಪಿ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಕಳವು ಮಾಡುತ್ತಿದ್ದ. ಈ ವಿಚಾರ ರೈಲ್ವೆ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

  • ಉಚಿತ ಟಿಕೆಟ್‌ ಘೋಷಣೆಯಿಂದ ಕಾಲ್ತುಳಿತ: ದಯಾನಂದ್‌

    ಉಚಿತ ಟಿಕೆಟ್‌ ಘೋಷಣೆಯಿಂದ ಕಾಲ್ತುಳಿತ: ದಯಾನಂದ್‌

    ಬೆಂಗಳೂರು: ಉಚಿತ ಟಿಕೆಟ್‌ (Entry Free) ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium Stampede) ಬಳಿ ಕಾಲ್ತುಳಿತ ಸಂಭವಿಸಿತು ಎಂದು ಅಮಾನತಾಗಿರುವ ಐಪಿಎಸ್‌ ಅಧಿಕಾರಿ ದಯಾನಂದ್‌ (Dayanand) ತಿಳಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ. ವಿಚಾರಣೆಯ ಪ್ರಮುಖ ಭಾಗವಾದ ದಯಾನಂದ್‌ ಅವರ ಹೇಳಿಕೆಯನ್ನು ದಾಖಲು ಮಾಡಲಾಗಿದೆ.

    ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್‌ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

     

    ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಸಾವಿನ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಇಡೀ ದಿನ ಓಪನ್ ಡೇ ವಿಚಾರಣೆ ನಡೆಯಲಿದ್ದು ತನಿಖೆ ಕೊನೆಯ ಭಾಗವಾಗಿ ಸಾರ್ವಜನಿಕರು ಭಾಗಿಯಾಗಲಿದ್ದಾರೆ.

    ಕಾಲ್ತುಳಿತ ಸಂಬಂಧ ಈವರೆಗೆ 140 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದ್ದು ಮುಂದಿನ ವಾರ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ.

    ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳು
    1) ಪೊಲೀಸ್ ಠಾಣೆಯಲ್ಲಿ ಅನುಮತಿಗಿಂತ ಮೊದಲೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್
    2) ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದವರ ವೈಫಲ್ಯ
    3) ಬ್ಯಾರಿಕೇಡ್, ಗೇಟ್‌ಗಳಲ್ಲಿ ಸರಿಯಾದ ಸಂಖ್ಯೆಯಲ್ಲಿ ಸಿಬ್ಬಂದಿ ನಿಯೋಜನೆ ಮಾಡದೇ ಇರುವುದು
    4) ಅಂತಿಮ ಘಟ್ಟದಲ್ಲಿ ಉಚಿತ ಪ್ರವೇಶದ ಬಗ್ಗೆ ಘೋಷಣೆ

  • ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

    ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

    ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯ (Kalaburagi) ಹೊರವಲಯದ ಪಟ್ನಾ ಗ್ರಾಮದಲ್ಲಿ ನಡೆದಿದೆ.

    ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

    ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Tumakuru | ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು

  • ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

    ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

    ನವದೆಹಲಿ: ಕೆಲಸದಲ್ಲಿ ಜಾತಿ ನಿಂದನೆ (Casteist Insults) ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಗೋದ (Indigo) ತರಬೇತಿ ಪೈಲಟ್ ಒಬ್ಬರು ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

    ತರಬೇತಿ ಪೈಲಟ್‌ ಮೊದಲು ಬೆಂಗಳೂರಿನಲ್ಲಿ(Bengaluru) ದೂರು ನೀಡಿದ್ದರು. ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸರು ಈಗ ಈ ಪ್ರಕರಣವನ್ನು ಇಂಡಿಗೋದ ಪ್ರಧಾನ ಕಚೇರಿ ಇರುವ ಗುರುಗ್ರಾಮ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಈ ಪ್ರಕರಣದ ಬಗ್ಗೆ ಇಂಡಿಗೋ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ತಮ್ಮ ದೂರಿನಲ್ಲಿ ಪೈಲಟ್‌ ಏಪ್ರಿಲ್ 28 ರಂದು ಇಂಡಿಗೋದ ಗುರುಗ್ರಾಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿದ್ದಾರೆ. 30 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, ನಿನಗೆ ವಿಮಾನ ಹಾರಿಸಲು ಬರಲ್ಲ. ಬದಲಾಗಿ ಚಪ್ಪಲಿ ಹೊಲಿಯಲು ನೀನು ಯೋಗ್ಯ ವ್ಯಕ್ತಿ. ಇಲ್ಲಿ ನಿನಗೆ ಕಾವಲುಗಾರನಾಗಲು ಸಹ ಅರ್ಹತೆ ಹೊಂದಿಲ್ಲ ಎಂದು ಹೇಳಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಬಲಿ – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು

     

    ನಾನು ಉದ್ಯೋಗಕ್ಕೆ ರಾಜೀನಾಮೆ ನೀಡಬೇಕೆಂಬ ಕಾರಣಕ್ಕೆ ನನಗೆ ಕಿರುಕುಳ ನೀಡಲಾಗಿದೆ ಪರಿಶಿಷ್ಟ ಜಾತಿಗೆ ಸೇರಿದ ನನ್ನ ಗುರುತನ್ನು ಅವಮಾನಿಸುವ ಉದ್ದೇಶದಿಂದ ಈ ಅವಹೇಳನಕಾರಿ ಹೇಳಿಕೆಗಳನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ದೂರಿದ್ದಾರೆ.

    ಸಂಬಳ ಕಡಿತ, ಅನಗತ್ಯ ಎಚ್ಚರಿಕೆ ಪತ್ರಗಳನ್ನು ನೀಡುವ ಮೂಲಕ ನನ್ನನ್ನು ಬಲಿಪಶು ಮಾಡಲಾಗಿದೆ. ನನಗಾದ ಅನ್ಯಾದ ಬಗ್ಗೆ ಉನ್ನತ ಅಧಿಕಾರಿಗಳು ಮತ್ತು ಇಂಡಿಗೋದ ನೈತಿಕ ಸಮಿತಿ ದೂರು ನೀಡಿದ್ದೆ. ಆದರೆ ಅವರು ಯಾವುದೇ ಕ್ರಮಕೈಗೊಳ್ಳದ ಕಾರಣ ಪೊಲೀಸ್‌ ದೂರು ನೀಡಬೇಕಾಯಿತು ಎಂದು ಅವರು ಹೇಳಿದ್ದಾರೆ.

  • 2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

    2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

    – ದೊಣ್ಣೆ, ಹಾಕಿ ಸ್ಟಿಕ್, ತಲ್ವಾರ್‌ ಹಿಡಿದು ಗಲಾಟೆ
    – ಸುಮೋಟೋ ಕೇಸ್‌ ದಾಖಲಿಸಿದ ಪೊಲೀಸರು

    ಬಾಗಲಕೋಟೆ: ಬೈಕ್ ಸೈಡ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಇಳಕಲ್(Ilkal) ನಗರದ ಹೊಸಪೇಟೆ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

    ದಾದಾಪೀರ್ ಜಕ್ಕಲಿ, ಮಹಮ್ಮದ್ ಜಕ್ಕಲಿ ಹಾಗೂ ಸ್ನೇಹಿತರ ಗುಂಪು, ಶಾಮೀದ್ ರೇಶ್ಮಿ, ರಂಜಾನ್ ಬನ್ನು ಮಧ್ಯೆ ಬೈಕ್ ಸೈಡ್ ಹಾಕುವ ವಿಚಾರಕ್ಕೆ ಜಗಳ (Fight) ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪಿನ ಯುವಕರು ದೊಣ್ಣೆ, ಹಾಕಿ ಸ್ಟಿಕ್ ಹಾಗೂ ಮಾರಾಕಾಸ್ತ್ರಗಳನ್ನು ಬಳಸಿ ಗಲಾಟೆ ಶುರು ಮಾಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

    ಹೊಡೆದಾಟ ಜೋರಾಗುತ್ತಿದ್ದಂತೆ ಯುವಕನೊಬ್ಬ ತಲ್ವಾರ್‌ ಬಳಸಿ ಜಗಳಕ್ಕೆ ಇಳಿದಿದ್ದ. ಈ ಗಲಾಟೆಯ ಭಯಾನಕ ವಿಡಿಯೋ ಜಿಲ್ಲೆಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ರಸ್ತೆಗೆ ಅಡ್ಡಲಾಗಿ ನಿಂತ ವಾಹನವನ್ನು ಸೈಡಿಗೆ ಹಾಕುವ ವಿಚಾರವಾಗಿ ಶುರುವಾದ ಈ ಜಗಳ ನಂತರ ಮಾರಣಾಂತಿಕ‌ ಹಲ್ಲೆಯವರೆಗೆ ತಿರುಗಿದೆ. ಗಲಾಟೆಯಲ್ಲಿ ಮೂವರು ಗಾಯಗೊಂಡಿದ್ದು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇರಾನ್‌ ಪರ ನಿಲ್ಲಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

    ಈ ಪ್ರಕರಣದ ಕುರಿತು ಇಳಕಲ್ ನಗರದ ಶಹರ್ ಪೊಲೀಸರು ಎರಡೂ ಗುಂಪಿನ ಹಿರಿಯರನ್ನ ಕರೆದು ದೂರು ದಾಖಲಿಸುವಂತೆ ಸೂಚಿಸಿದ್ದರು. ಎರಡೂ ಗುಂಪಿನ ಹಿರಿಯರು ದೂರು ನೀಡಲು ಹಿಂದೇಟು ಹಾಕಿದ್ದರಿಂದ ಪೊಲೀಸರೇ ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಉಡುಪಿ | ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

    ಉಡುಪಿ | ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

    ಉಡುಪಿ: ಪತ್ನಿ (Wife) ಹೆಚ್ಚು ಸಮಯ ಮೊಬೈಲ್ (Mobile) ಬಳಸುತ್ತಾಳೆ ಎಂದು ಪತಿ (Husband) ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಬ್ರಹ್ಮಾವರ (Brahmavar) ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

    ಹತ್ಯೆಯಾದ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ, ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ, ಆರೋಪಿ ಕತ್ತಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಇನ್ನೂ ಆರೋಪಿ ವಿಪರೀತ ಮಧ್ಯ ವ್ಯಸನಿಯಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

    ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಎಸ್‍ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮಹಿಳೆಯ ಮೃತದೇಹವನ್ನು ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

  • RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

    RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

    – ಪೊಲೀಸರ ಕ್ರಮ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದ ಯು.ಜಿ. ರಾಧಾ
    – 20 ಲಕ್ಷ ರೂ. ಮಾನನಷ್ಟ ಪರಿಹಾರ ಕೋರಿ ಅರ್ಜಿ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಎಸ್‌ಪಿಗೆ ಹಿಂದೂ ಮುಖಂಡರ ಮನೆ ಮೇಲಿನ ಮಿಡ್ ನೈಟ್ ದಾಳಿ (Mid Night Raid) ಪ್ರಕರಣ ಬಿಸಿ ತುಪ್ಪವಾಗಿ ಪರಿಣಮಿಸಲು ಆರಂಭವಾಗಿದೆ. ಜಿಲ್ಲೆಯ ಹಿರಿಯ ಅರ್‌ಎಸ್‌ಎಸ್‌ (RSS) ಮುಖಂಡನ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌(High Court) ಈಗ ನೋಟಿಸ್‌ ಜಾರಿ ಮಾಡಿದೆ.

    ಯು.ಜಿ.ರಾಧಾ ಅವರ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್‌ಗೆ(Arun Kumar) ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸಬೇಕು. ಅಷ್ಟೇ ಅಲ್ಲದೇ ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.

    ಜೂನ್ 1 ರಂದು ಉಪ್ಪಿನಂಗಡಿಯಲ್ಲಿರುವ (Uppinangady) ನನ್ನ ಮನೆಗೆ ಪೊಲೀಸರು ರಾತ್ರಿ ಬಂದಿದ್ದರು. ನನ್ನ ಮೇಲೆ ಯಾವುದೇ ಕ್ರಿಮಿನಲ್‌ ಪ್ರಕರಣ ಇಲ್ಲದೇ ಇದ್ದರೂ ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದಾರೆ. ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ ಎಂದು ಆರೋಪಿಸಿ ಯು.ಜಿ.ರಾಧಾ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

    ವಿಚಾರಣೆ ನಡೆಸುವ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರು. ಮಾನನಷ್ಟ ಪರಿಹಾರ ನೀಡುವಂತೆ ಯು.ಜಿ.ರಾಧಾ ಹೈಕೋರ್ಟ್‌ಗೆ ದೂರು ನೀಡಿದ್ದರು. ದೂರುದಾರರ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾ. ಸುನಿಲ್‌ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈಗ ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದೆ.  ಇದನ್ನೂ ಓದಿ: ಹಿಂದೂ ಕಾರ್ಯಕರ್ತರ ಮನೆ ಮೇಲೆ ರೇಡ್‌ – ದ.ಕ. ಪೊಲೀಸರ ವಿರುದ್ಧವೇ ತನಿಖೆಗೆ NHRC ಆದೇಶ

    ಯು.ಜಿ.ರಾಧಾ ಅವರು ಈಗಾಗಲೇ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ನೀಡಿದ್ದಾರೆ. ಹಿಂದೂ ನಾಯಕರ ಮನೆಗಳಿಗೆ ಮಧ್ಯರಾತ್ರಿ ತೆರಳಿ ಫೋಟೋ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಜಿಲ್ಲಾ ಎಸ್‌ಪಿಗೆ ನೋಟಿಸ್‌ ಜಾರಿ ಮಾಡಿದೆ.

    ಶ್ರೀ ರಾಮ ಶಾಲಾ ಸಂಚಾಲಕ, ವೃತ್ತಿಯಲ್ಲಿ ಔಷಾಧಾಲಯದ ಮಾಲಕರಾದ ಯು.ಜಿ. ರಾಧಾ ಅವರಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ಇವರ ವಿರುದ್ಧ ಇಲ್ಲಿಯವರೆಗೆ ಯಾವುದೇ ಪೊಲೀಸ್‌ ಪ್ರಕರಣ ದಾಖಲಾಗಿಲ್ಲ. ಆದರೆ ಜೂ.1 ರಂದು ಅವರ ಔಷಧಾಲಯಕ್ಕೆ ಭೇಟಿ ನೀಡಿ ಫೋಟೋ ತೆಗೆದ ಪೊಲೀಸರು, ಜೂನ್‌ 2ರ ತಡ ರಾತ್ರಿ 11.58 ಕ್ಕೆ ಬಂದು 12.07 ನಿಮಿಷಕ್ಕೆ ನಿರ್ಗಮಿಸಿದ್ದರು. 54 ವರ್ಷದ ರಾಧಾ ಅವರನ್ನು ಮಧ್ಯ ರಾತ್ರಿ ನಿದ್ರೆಯಿಂದ ಎಬ್ಬಿಸಿ ಅವರ ಜೊತೆ ಪೊಟೋ ತೆಗೆದಿದ್ದರು. ಇದನ್ನೂ ಓದಿ: ಮಂಗಳೂರು | ಕಾರು ಅಪಘಾತದಲ್ಲಿ `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

    ಯಾವುದೇ ಲಿಖಿತ ಆದೇಶ ಪತ್ರವಿಲ್ಲ. ಫೋಟೋ ಯಾಕೆ ತೆಗೆದಿದ್ದೀರಿ ಎನ್ನುವುದಕ್ಕೆ ಕಾರಣ ನೀಡಿಲ್ಲ. ಪ್ರಶ್ನಿಸಿದರೆ ಪೊಲೀಸರು ಮೇಲಾಧಿಕಾರಿಗಳ ಆದೇಶ ಎಂಬ ಉತ್ತರ ನೀಡಿದ್ದರು ಎಂದು ಯು.ಜಿ. ರಾಧಾ ಹೇಳಿದ್ದರು.

  • ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

    ರಾಜಕೀಯ ಮಾತಾಡ್ಬಾರದು ಅಂತ ಯಾವಾಗಿನಿಂದ ಜಾರಿಯಾಗಿದೆ? – ನೋಟಿಸ್‌ಗೆ ಚಕ್ರವರ್ತಿ ಸೂಲಿಬೆಲೆ ಕಿಡಿ

    ಉಡುಪಿ: ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕುಂದಾಪುರ (Kundapura) ಪೊಲೀಸರ (Police) ವಿರುದ್ಧ ಕಿಡಿಕಾರಿದ್ದಾರೆ.

    ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಂದ `ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಚಾರವಾಗಿ ಜೂ.20, 21 ಮತ್ತು 22 ರಂದು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಪೊಲೀಸರು, ರಾಜಕೀಯ ಮಾತನಾಡಬಾರದು ಹಾಗೂ ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದು ಆಯೋಜಕರಿಗೆ ಹಾಗೂ ಸುಲಿಬೆಲೆಯವರಿಗೆ ನೋಟಿಸ್ ನೀಡಿದ್ದಾರೆ. ಇದೀಗ ನೋಟಿಸ್ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಇಂದು 5,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

    ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ. ನನಗೆ ನೋಟಿಸ್ ಹೊಸತಲ್ಲ, ಬಹಳ ಕಡೆಗಳಲ್ಲಿ ನೋಟಿಸ್ ಕೊಟ್ಟಿದ್ದಾರೆ. ಈ ಬಾರಿ ರಾಜಕೀಯ ಮಾತನಾಡಬಾರದು, ಯಾವುದೇ ನಾಯಕರ ತೇಜೋವಧೆ ಮಾಡಬಾರದು ಎಂದಿದ್ದಾರೆ. ನೆಹರು, ಇಂದಿರಾ, ರಾಜೀವ್ ಕುರಿತಂತೆ ಮಾತನಾಡಬಾರದು ಎಂದು ಅರ್ಥವೇ? ಘಜ್ನಿ, ಘೋರಿ, ಔರಂಗಜೇಬ್ ಮುಂತಾದ ಕ್ರೂರಿಗಳ ತೇಜೋವಧೆ ಮಾಡಬಾರದೆಂದು ಅರ್ಥವೇ? ಕರ್ನಾಟಕದಲ್ಲಿ ರಾಜಕೀಯ ಮಾತನಾಡಬಾರದು ಎನ್ನುವುದು ಎಂದಿನಿಂದ ಜಾರಿಯಾಯಿತು? ಕುಂದಾಪುರ ಪೊಲೀಸರೇ ಮಾಹಿತಿ ಕೊಟ್ಟರೆ ಉತ್ತಮ. ನಾನು ಕುಂದಾಪುರಕ್ಕೆ ಬರಬಾರದೆಂದು ಹೇಳುವವರು ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ ಎಂದಿದ್ದಾರೆ.

    ಕಾರ್ಯಕ್ರಮದ ಆಯೋಜಕ ನಿರಂಜನ್ ಶೆಟ್ಟಿ ಮಾತನಾಡಿ, ಎನ್‍ಎಸ್‍ಯುಐನವರು ಚಕ್ರವರ್ತಿ ಸೂಲಿಬೆಲೆಯವರು ಕುಂದಾಪುರಕ್ಕೆ ಬರಬಾರದು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಭಾಷಣ ಮಾಡಲು ಅವಕಾಶ ನೀಡಬಾರದು ಎಂದಿದ್ದಾರೆ. ಅಖಂಡ ಭಾರತದ ಬಗ್ಗೆ ಉಪನ್ಯಾಸ ನೀಡುವಾಗ ಕಾಶ್ಮೀರದ ವಿಚಾರ ಬರುತ್ತೆ. ಕಾಶ್ಮೀರ ಕಾಂಗ್ರೆಸ್ ಕಾಲದಲ್ಲಿ ಸಮಸ್ಯೆ ಆಗಿ ಉಳಿದಿತ್ತು. ಈ ವಿಚಾರ ಜನರಿಗೆ ತಿಳಿಯಬಾರದು ಅನ್ನೋದು ಇವರ ಉದ್ದೇಶ ಇರಬಹುದು. ಕಾಂಗ್ರೆಸ್ ಬಣ್ಣ ಬಯಲಾಗುತ್ತೆ ಎನ್ನುವ ಕಾರಣಕ್ಕೆ ತಡೆಯಲು ಮುಂದಾಗಿದ್ದಾರೆ. ತಡೆಯಲು ಎಷ್ಟೇ ಪ್ರಯತ್ನಪಟ್ಟರು ಕಾರ್ಯಕ್ರಮ ಮಾಡಿಯೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯದ ಮಹಿಳೆ ಸಾವು – ಮಣಿಪುರ ಮತ್ತೆ ಉದ್ವಿಗ್ನ

  • ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್

    ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್

    ಬೆಳಗಾವಿ: ಬಸ್‍ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ (Belagavi) ಮಾರ್ಕೆಟ್ ಠಾಣೆ ಪೊಲೀಸರು (Police) ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ.

    ಬುಧವಾರ ಪಂತ ಬಾಳೇಕುಂದ್ರಿ ಬಸ್‍ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಬಂಧಿತ ಬಾಲಕ ಹಾಗೂ ಯುವಕ ಮಾಜ್ ಸನದಿ (20) ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ಬಾಲಕ, ಕೇಂದ್ರ ಬಸ್ ನಿಲ್ದಾಣಕ್ಕೆ ತನ್ನ ಸ್ನೇಹಿತನನ್ನು ಕರೆಸಿಕೊಂಡು ಮಾಜ್ ಸನದಿಗೆ ಚಾಕು ಇರಿದಿದ್ದರು. ಬಳಿಕ ಅಲ್ಲಿಂದ ಇಬ್ಬರು ಪರಾರಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ಗೆ ಒಂದೇ ವಾರದಲ್ಲಿ 2 ಬಾರಿ ಬಾಂಬ್ ಬೆದರಿಕೆ

    ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆ ನಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದೇವೆ. ಇನ್ನೂ ಮುಂದೆ ಇಂತಹ ಅಪರಾಧ ತಡೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆ. ಮಾರ್ಕೆಟ್ ಪ್ರದೇಶ, ಸಾರ್ವಜನಿಕವಾಗಿ ಮಾರಕಾಸ್ತ್ರಗಳ ಹಿಡಿದು ಓಡಾಡುವುದು, ವಾಹನಗಳಲ್ಲಿ, ಬ್ಯಾಗ್‍ಗಳಲ್ಲಿ ಇಟ್ಟುಕೊಂಡು ಓಡಾಡುವುದು ಕಂಡು ಬಂದರೆ, ಅವರನ್ನ ಕೂಡಲೇ ಬಂಧಿಸುತ್ತೇವೆ. ಅಂತವರ ಮೇಲೆ ರೌಡಿಶೀಟರ್ ತೆರೆರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್‌

  • ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ – ದ.ಕ. ಪೊಲೀಸರ ವಿರುದ್ಧವೇ ತನಿಖೆಗೆ NHRC ಆದೇಶ

    ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ – ದ.ಕ. ಪೊಲೀಸರ ವಿರುದ್ಧವೇ ತನಿಖೆಗೆ NHRC ಆದೇಶ

    ಮಂಗಳೂರು: ಹಿಂದೂ (Hindu) ಕಾರ್ಯಕರ್ತರ ಮನೆಗೆ ನಿರಂತರ ಪೊಲೀಸರ (Police) ಭೇಟಿ ಪ್ರಕರಣಕ್ಕೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ಎಂಟ್ರಿಕೊಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ (Dakshina Kannada District Police) ವಿರುದ್ದ ತನಿಖೆಗೆ ಆದೇಶಿಸಿದೆ.

    ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ದೂರು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ ಡಿಜಿಗೆ ತನಿಖೆ ನಡೆಸುವಂತೆ ಆದೇಶಿಸಿದೆ. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್‌ ಶಾಕ್‌

     

    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ, ಪೊಲೀಸರ ದಾಖಲೆ ಪರಿಶೀಲನೆ ಮತ್ತು ಎಲ್ಲಾ ಸಂತ್ರಸ್ತರ ಹೇಳಿಕೆಗಳನ್ನು ಆಧರಿಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್‌ಹೆಚ್‌ಆರ್‌ಸಿ ಸೂಚಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಕಾನೂನು ಬಾಹಿರ ನಿಗಾ ಮತ್ತು ತಡರಾತ್ರಿ ಪೊಲೀಸ್ ಭೇಟಿ‌ಗೆ ಒಳಗಾಗುತ್ತಿದ್ದಾರೆ. ರಾತ್ರಿ 11 ಗಂಟೆ ನಂತರ ಕಾನೂನುಬದ್ಧ ವ್ಯಕ್ತಿಗಳಿಗೆ ತೊಂದರೆಯಾಗುತ್ತಿದೆ ಎಂದು ಶಾಸಕ ಭರತ್ ಶೆಟ್ಟಿ ದೂರು ನೀಡಿದ್ದರು. ಇದನ್ನೂ ಓದಿ: ಇರಾನ್‌ ವಾರ್‌ ಟೈಂ ಕಮಾಂಡರ್‌ ಹತ್ಯೆ – ಖಮೇನಿ ಹತ್ಯೆ ಬಳಿಕವಷ್ಟೇ ಯುದ್ಧಕ್ಕೆ ವಿರಾಮ ಎಂದ ಇಸ್ರೇಲ್‌

    ಯಾವುದೇ ಅಪರಾಧದ ಹಿನ್ನೆಲೆ, ಎಫ್‌ಐಆರ್‌ ಅಥವಾ ತನಿಖೆ ಇಲ್ಲದೇ ಪೊಲೀಸರ ಭೇಟಿ ನೀಡುತ್ತಿದ್ದಾರೆ. ಪೊಲೀಸ್ ಸಿಬ್ಬಂದಿ ಯಾವುದೇ ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಮನೆಗಳಿಗೆ ಹೋಗಿ ಛಾಯಾಚಿತ್ರ ತೆಗೆದು ಜಿಪಿಎಸ್‌ ಸ್ಥಳ ಮಾಹಿತಿ ಸಂಗ್ರಹಿಸಿ ಪ್ರಶ್ನೆ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಪೊಲೀಸರ ವಿರುದ್ಧ ಭರತ್‌ ಶೆಟ್ಟಿ ದೂರು ನೀಡಿದ್ದರು.