ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು.
ಮಂಗಳೂರು: ಅಬ್ದುಲ್ ರಹೀಂ (Abdul Rahim) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ (Bantwal Rural Police Station) ಪ್ರಕರಣ ದಾಖಲಾಗಿದೆ.
ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್ 103, 109, 118(1), 118(2), 190, 191(1), 191(2), 191(3) ಅಡಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಹೆಸರು ಮಾತ್ರ ಉಲ್ಲೇಖವಾಗಿದ್ದು ಉಳಿದ 13 ಮಂದಿ ಯಾರೂ ಎನ್ನುವುದು ತಿಳಿದು ಬಂದಿಲ್ಲ.
ದೂರಿನಲ್ಲಿ ಏನಿದೆ?
ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್
ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ನಡೆಸಿದ್ದಾರೆ. ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ.
ಮಂಡ್ಯ: ನಗರದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ (Mandya Traffic Police) ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್‌ಐಗಳ (ASI) ತಲೆದಂಡವಾಗಿದೆ.
ಈ ಕುರಿತು ಮಾತನಾಡಿರುವ ಮಂಡ್ಯ ಎಸ್ಪಿ, ಸುರಕ್ಷಿತ ನಿಯಮ ಪಾಲಿಸದೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮಗು ಬರುತ್ತಿದ್ದ ವಾಹನವನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಹಿಂಭಾಗದಿಂದ ಬಂದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಮಗು ಕೆಳಗೆ ಬಿದ್ದಿದೆ, ಆ ಸಂಧರ್ಭದಲ್ಲಿ ಹಿಂದೆ ಬರುತ್ತಿದ್ದ ವಾಹನ ಮಗುಮೇಲೆ ಹತ್ತಿದೆ. ಈ ಕಾರಣದಿಂದ ಮಗು ಸಾವನಪ್ಪಿದೆ. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ
ಸಿಸಿಟಿವಿ ಪರಿಶೀಲನೆ ನಂತರ ಘಟನೆಗೆ ನಿಖರ ಕಾರಣ ತಿಳಿಯಲಿದೆ. ಮಗುವಿನ ಮೇಲೆ ವಾಹನ ಹತ್ತಿದೆಯಾ ಅಥವಾ ಪೊಲೀಸರು ತಡೆದು ಬೀಳಿಸಿದ್ದಾರಾ ಎಲ್ಲೌೂ ಗೊತ್ತಾಗಬೇಕಿದೆ. ಇದು ಹಳೆಯ ರಾಷ್ಟ್ರೀಯ ಹೆದ್ದಾರಿಯಾಗಿದೆ. ಹೆದ್ದಾರಿ ನಗರದ ಒಳಗೆ ಹೋಗುವ ಕಾರಣದಿಂದ ಇಲ್ಲಿ ತಪಾಸಣೆ ಮಾಡಲಾಗಿದೆ. ತಪಾಸಣೆ ವೇಳೆ ಸುರಕ್ಷಿತ ಕ್ರಮ ಕೈಗೊಂಡಿಲ್ಲದ ಕಾರಣ ಮೂವರು ಎಎಸ್‌ಐಗಳನ್ನ ಅಮಾನತು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಘಟನೆ ಬಳಿಕ ಮಂಡ್ಯ ಮಿಮ್ಸ್ ಶವಗಾರಕ್ಕೆ ಡಿಸಿ ಡಾ.ಕುಮಾರ್, ಜಿಪಂ ಸಿಇಓ ಕೆ.ಆರ್.ನಂದಿನಿ ಭೇಟಿ ನೀಡಿದ್ದು ಮೃತ ಬಾಲಕಿ ಅಂತಿಮ ದರ್ಶನ ಪಡೆದು, ಮೃತ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ (Rape) ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು (Madenur Manu) ಜೈಲುಪಾಲಾಗಿದ್ದಾರೆ. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ.
ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
– 27 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು
ಚಿಕ್ಕಬಳ್ಳಾಪುರ: ದೇವನಹಳ್ಳಿ (Devanahalli) ತಾಲೂಕಿನ ಕನ್ನಮಂಗಲ ಗ್ರಾಮದ ಬಳಿಯ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ (Rave party) ಮೇಲೆ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ 7 ಯುವತಿಯರು ಹಾಗೂ 24 ಯುವಕರು ಭಾಗಿಯಾಗಿರುವುದು ಗೊತ್ತಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ 4 ಜನರನ್ನು ಬಂಧಿಸಿದ್ದು, ಉಳಿದವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ನಾಪತ್ತೆ
ಬೆಳಗ್ಗೆ 5:00 ಗಂಟೆ ಸುಮಾರಿಗೆ ಕನ್ನಮಂಗಲ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬರ್ತ್ ಡೇ ಪಾರ್ಟಿಯಲ್ಲಿ, ರಾತ್ರಿ ಇಡೀ ಮಾದಕ ವಸ್ತು ಬಳಕೆ ಮಾಡಿದ್ದಾರೆ ಎಂಬುದು ತಿಳಿದು ಬಂದಿತ್ತು. ಪಾರ್ಟಿಯಲ್ಲಿ ಪೆಡ್ಲರ್ ಕೂಡ ಇದ್ದ. ಆರೋಪಿಗಳು ಐಟಿ ಸೆಕ್ಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ದಾದಾಸಾಹೇಬ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಶನಿವಾರ(ಮೇ 25) ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ – ಕಟ್ಟಿಗೆಯಿಂದ ಹೊಡೆದು ಹತ್ಯೆ
ಮೃತ ಪೊಲೀಸ್ ಪೇದೆಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ದಾದಾಸಾಹೇಬ್ ಅವರ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.
ಬೆಂಗಳೂರು: ಎಡಿಜಿಪಿ ಅಲೋಕ್ ಕುಮಾರ್ (Alok Kumar) ವಿರುದ್ಧ ಸರ್ಕಾರ ಈಗ ಇಲಾಖಾ ತನಿಖೆಗೆ ಆದೇಶ ನೀಡಿದೆ. ಆದರೆ ಈಗಾಗಲೇ ಇಲಾಖಾ ತನಿಖೆ ಪೂರ್ಣಗೊಂಡಿರುವ ಸ್ಫೋಟಕ ವಿಚಾರ ಬಯಲಾಗಿದೆ.
ಹೌದು. ರಾಜ್ಯ ಪೊಲೀಸ್ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ಇಲಾಖಾ ತನಿಖೆಗೆ ಆದೇಶಿಸಿದೆ.
ಸರ್ಕಾರ ಈಗ ಇಲಾಖಾ ತನಿಖೆಗೆ ಆದೇಶಿಸಿದ್ದರೂ ಈ ತನಿಖೆ ಈಗಾಗಲೇ ಪೂರ್ಣಗೊಂಡಿರುವ ಬಗ್ಗೆ ಅಲೋಕ್ ಕುಮಾರ್ ಅವರು ಆರ್‌ಟಿಐ (RTI) ಅಡಿ ಪ್ರಶ್ನಿಸಿ ಉತ್ತರ ಪಡೆದಿದ್ದಾರೆ. ವಿಧಾನಸೌಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖಾ ತನಿಖೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಎಲ್ಲಾ ಮಾಹಿತಿಗಳು ಲಭ್ಯವಿದ್ದರೂ ಮುಂಬಡ್ತಿ ನೀಡದ ಸರ್ಕಾರದ ನಡೆಯಿಂದ ಬೇಸತ್ತಿರುವ ಅಲೋಕ್ ಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
ಆರ್‌ಟಿಐ ಉತ್ತರದಲ್ಲಿ ಏನಿದೆ?
ಪ್ರಕರಣದ ತನಿಖೆ ನಡೆಸಿದ ಸಿಬಿಐ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಈ ವೇಳೆ ಭಾಸ್ಕರ್ ರಾವ್ (ನಿವೃತ್ತ) ಮತ್ತು ಅಲೋಕ್ ಕುಮಾರ್ ವಿರುದ್ಧ ಇಲಾಖಾ ವಿಚಾರಣೆಗೆ ಸಿಬಿಐ ಶಿಫಾರಸು ಮಾಡಿತ್ತು. ಈ ಇಬ್ಬರು ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ಪ್ರಾರಂಭಿಸದೇ ಪ್ರಾಥಮಿಕ ಹಂತದಲ್ಲಿಯೇ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಮುಕ್ತಾಯಗೊಳಿಸಲಾಗಿದೆ. ಪ್ರಸ್ತುತ ಇಬ್ಬರು ಅಧಿಕಾರಿಗಳ ಇಲಾಖಾ ವಿಚಾರಣೆಗೆ ಸಂಬಂಧಿಸಿದ ಕಡತಗಳು ಮುಖ್ಯಮಂತ್ರಿಯವರ ಕಚೇರಿಯಲ್ಲಿರುತ್ತದೆ.
ಇಲಾಖಾ ವಿಚಾರಣೆ ಪ್ರಾಥಮಿಕ ಹಂತದಲ್ಲಿಯೇ ಮುಕ್ತಾಯವಾಗಿದ್ದರೂ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂಬಡ್ತಿ ನೀಡದೇ ಇರಲು ಸ್ಪಷ್ಟವಾದ ಕಾರಣ ತಿಳಿದು ಬರುತ್ತಿಲ್ಲ.
ಈ ಹಿಂದೆ ಕೇಳಿ ಬಂದಿದ್ದ ಫೋನ್ ಟ್ಯಾಪಿಂಗ್ (Phone Tapping) ಹಾಗೂ ಅಕ್ರಮವಾಗಿ ಮೊಬೈಲ್ ಕರೆ ವಿವರ(ಸಿಡಿಆರ್) ಪಡೆದ ಪ್ರಕರಣದಲ್ಲಿ ಅಲೋಕ್ ಕುಮಾರ್ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ. ಒಂದು ಡಿಜಿಪಿ ಸ್ಥಾನ ತೆರವಾದ ಹಿನ್ನೆಲೆ 1994ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಅವರಿಗೆ ಈ ತಿಂಗಳಲ್ಲಿ ಡಿಜಿಪಿ ಆಗಿ ಮುಂಬಡ್ತಿ ಸಿಗಬೇಕಿತ್ತು. ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?
ಏನಿದು ಪ್ರಕರಣ?
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್ ಕುಮಾರ್ ಸಿಸಿಬಿ ಮುಖ್ಯಸ್ಥರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು. ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್ ಟ್ಯಾಪಿಂಗ್ ಮತ್ತು ಸಿಡಿಆರ್ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್ ಕುಮಾರ್ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್ ಟ್ಯಾಪಿಂಗ್ ಮಾಡಿದ್ದ ಆಡಿಯೋ ಒಂದು ವೈರಲ್ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಳಿಕ ಸಿಬಿಐ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು.
ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದಡಿ ಕಾಮುಕ ಸ್ವಾಮೀಜಿಯನ್ನು ಅರೆಸ್ಟ್ ಮಾಡಲಾಗಿದೆ.
ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ (Ram Mandir) ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ (Pocso Case) ದಾಖಲಾಗಿದ್ದು ಪೊಲೀಸರು ಈಗ ಜೈಲಿಗಟ್ಟಿದ್ದಾರೆ.
ಬಾಗಲಕೋಟೆ (Bagalkote) ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಐಫೋನ್ ತಯಾರಿಸಿದರೆ 25% ಸುಂಕ – ಆಪಲ್‌ಗೆ ಟ್ರಂಪ್ ವಾರ್ನಿಂಗ್
ಏನಿದು ಕೇಸ್?
ಬಾಲಕಿಗೆ 17 ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ ಬಿಡುತ್ತಿದ್ದರು.
ಹೀಗೆ ಮಠಕ್ಕೆ ಬಂದಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡಲು ಲೋಕೇಶ್ವರ ಸ್ವಾಮೀಜಿ ತೀರ್ಮಾನಿಸಿದ್ದ. ಮೇ 13 ರಂದು ಇಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಯಚೂರಿನಲ್ಲಿ 2 ದಿನ ಇದ್ದ ಇವರು ಮೇ15 ರಂದು ಬಾಗಲಕೋಟೆಗೆ ಬಂದಿದ್ದಾರೆ.
ಈ ಎರಡು ಕಡೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿ ಮೇ 16 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್
ಮೇ17 ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತದೆ. ವಿಚಾರಣೆಗೆ ಒಳಪಡಿಸಿದಾಗ ಬಾಲಕಿ ನಡೆದ ಎಲ್ಲಾ ಘಟನೆಗಳನ್ನು ವಿವರಿಸಿದ್ದಾಳೆ. ಕೇಸ್ ದಾಖಲಾದ ಬಳಿಕ ಪ್ರಕರಣ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ಮಡೆನೂರು ಮನುನನ್ನ (Madenur Manu) ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಸನದಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಬಳಿಕ ಪ್ರಾಥಮಿಕವಾಗಿ ನಡೆದ ವಿಚಾರಣೆಯಲ್ಲಿ ಹಲವು ರಹಸ್ಯೆಗಳನ್ನು ಮನು ಬಾಯ್ಬಿಟ್ಟಿದ್ದಾರೆ. ಈ ಕುರಿತ ಎಕ್ಸ್‌ಕ್ಲೂಸಿವ್ ಮಾಹಿತಿಗಳು ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ (Rape) ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ದೂರಿನ ಮೇರೆಗೆ ಅತ್ಯಾಚಾರ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಗೆ ಬಲೆ ಬೀಸಿದ್ದರು. ಇತ್ತ ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದರು.
ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ (Actor) ಮಡೆನೂರು ಮನು ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಈ ವಿಡಿಯೋನಲ್ಲಿ ನನ್ನ ವಿರುದ್ಧ ಅತ್ಯಾಚಾರ ಪ್ರಕರಣ (Rape Case) ದಾಖಲಿಸಿರುವ ಸಹ ಕಲಾವಿದೆ ಹಿಂದೆ ಇಬ್ಬರು ಹೀರೋಗಳು ಹಾಗೂ ಓರ್ವ ಲೇಡಿ ಡಾನ್ ಇದ್ದಾಳೆ ಎಂದು ಬಾಂಬ್ ಸಿಡಿಸಿದ್ದಾರೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು (Madenur Manu) ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಪ್ರಕರಣದ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮನು ಮಾತನಾಡಿರುವ ವಿಡಿಯೋವೊಂದು ಲಭ್ಯವಾಗಿದೆ. ಇದನ್ನೂ ಓದಿ: ರೇಪ್ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?
ಇದು ಉದ್ದೇಶಪೂರ್ವಕವಾಗಿ ಅಂತ ನಾನೇನು ಹೇಳಬೇಕಿಲ್ಲ ಎಲ್ಲರಿಗೂ ಗೊತ್ತಾಗಿದೆ. ಕಷ್ಟಪಟ್ಟು, ಇಷ್ಟಪಟ್ಟು ಮಾಡಿರುವ ʻಕುಲದಲ್ಲಿ ಕೀಳ್ಯಾವುದೋʼ ಸಿನಿಮಾ ನಾಳೆ ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಹೀಗಿರುವಾಗ ಎಫ್‌ಐಆರ್ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಅಂತ ಹೇಳಿಕೊಡ್ತಿದ್ದಾರೆ ಅಂತ ಅವಳೇ ಹೇಳಿದ್ದಳು. ಯಾರ‍್ಯಾರು ಹೇಳಿಕೊಡ್ತಿದ್ದಾರೆ ಅಂತ ಕೂಡ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
ಮುಂದುವರಿದು.. ಅವಳ ಜೊತೆಯಲ್ಲಿದ್ದವರೇ ಹೇಳಿಕೊಟ್ಟಿದ್ದಾರೆ. ಆಕೆ ಹಿಂದೆ ಇಬ್ಬರು ಹೀರೋ, ಓಬ್ಬಳು ಲೇಡಿ ಡಾನ್ ಸೇರಿ 12 ಜನ ಇದ್ದಾರೆ. ಇತ್ತೀಚೆಗೆ ಕೂಡ ನನ್ನ ಸಾವು ಬಯಸಿ ನಗುತ್ತಿದ್ದರಂತೆ. ನಾನು ಯಾರಿಗೇನು ಮಾಡಿದ್ದೇನೆ ಅಂತ ಗೊತ್ತಿಲ್ಲ. ನಾನಾಯ್ತು ಸಿನಿಮಾ ಕೆಲಸ ಆಯ್ತು ಅಂತ ಇರ್ತೀನಿ. ಇಲ್ಲದಿದ್ರೆ ಜಮೀನು ಕೆಲಸ ಮಾಡ್ತೀನಿ. ಆದ್ರೆ ನನ್ನ ವಿರುದ್ಧ ಪ್ರತಿಯೊಂದು ಆರೋಪಕ್ಕೂ ಸಾಕ್ಷಿ ಕೊಡ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸ್ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್
ಈಗ 2 ತಿಂಗಳಿಂದ ಸಿನಿಮಾಗೆ ಎಲ್ಲರನ್ನೂ ಕರೆದಿದ್ದೇನೆ. ಪಾಪ ನಿರ್ಮಾಪಕರು ದುಡ್ಡು ಎಲ್ಲಿಂದ ತಂದಿರ್ತಾರೆ ಗೊತ್ತಿಲ್ಲ. ಈ ಕೇಸ್‌ನಿಂದ ಅವರಿಗೆ ಸಮಸ್ಯೆ ಆಗಬಾರದು. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡ್ತೀನಿ ಅಂತ ವಿಡಿಯೋನಲ್ಲಿ ಹೇಳಿದ್ದಾರೆ.