Tag: police

  • ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

    ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

    ಕಲಬುರಗಿ: ಬೀದರ್‌ನ (Bidar) ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ಆಪ್ತ ರಾಜು ಕಪನೂರ್ ಸೇರಿದಂತೆ 6 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪ್ರಕರಣ ಸಂಬಂಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಪೊಲೀಸರು ನ್ಯಾಯಾಲಯದ ಗಮನಕ್ಕೆ ತಂದು ಎಫ್‍ಐಆರ್ ದಾಖಲಿಸಿದ್ದಾರೆ. ಬಿಎನ್‍ಎಸ್ 351(2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಅಲ್ಲದೇ ಎಫ್‍ಐಆರ್ ಪ್ರತಿಯನ್ನು ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಅವರು ಪ್ರತಿಭಟನಾ ನಿರತ ಬಿಜೆಪಿ ನಾಯಕರಿಗೆ ನೀಡಿದ್ದಾರೆ.

    ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಬಿಜೆಪಿ ಶಾಸಕ ಮತ್ತಿಮೂಢ್ ಸೇರಿ ಹಲವರ ಕೊಲೆಗೆ ರಾಜು ಕಪನೂರ್ ಸಂಚು ರೂಪಿಸಿರುವುದು ಇದೀಗ ಬಯಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಹೋರಾಟಕ್ಕೆ ಮುಂದಾಗಿದೆ.

    ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಲಾಗಿದೆ. ಅಲ್ಲದೇ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಢ್, ಆಂದೋಲಾ ಶ್ರೀ, ಕಲಬುರಗಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ್ ರಾಠೋಡ್ ಹತ್ಯೆಗೆ ಸುಪಾರಿ ನೀಡಿರುವದರ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಲಾಗಿದೆ.

  • ಚಾಕು ಇರಿದು ಗೆಳತಿಯ ಹತ್ಯೆ – ಕೊಲೆ ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್‌ ಪ್ರೇಮಿ

    ಚಾಕು ಇರಿದು ಗೆಳತಿಯ ಹತ್ಯೆ – ಕೊಲೆ ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್‌ ಪ್ರೇಮಿ

    ದಿಸ್ಪುರ್‌: ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ ನಡೆದಿದೆ. ಕೊಲೆಯ ಬಳಿಕ ಆತ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಹತ್ಯೆಗೀಡಾದ ಮಹಿಳೆಯನ್ನು ಮೌಸುಮಿ ಗೊಗೊಯ್ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಭೂಪೇನ್ ದಾಸ್ ಎಂದು ಗುರುತಿಸಲಾಗಿದೆ. ಲೇಟ್ ಗೇಟ್ ಪ್ರದೇಶದ ಮಹಿಳೆಯ ನಿವಾಸದ ಹೊರಗೆ ಕೊಲೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನನ್ನು ಶೀಘ್ರದಲ್ಲೇ ಕಸ್ಟಡಿಗೆ ಪಡೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗೊಗೊಯ್ ಆ್ಯಪ್ ಮೂಲಕ ಬುಕ್ ಮಾಡಿದ್ದ ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಆರೋಪಿ ಭೂಪೇನ್ ದಾಸ್ ತನ್ನ ಕಾರಿನಲ್ಲಿ ಬಂದು ಆಕೆಗೆ ಇರಿದಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೂ ಯಾವುದೇ ಪ್ರಯೋಜನವಾಗಿಲ್ಲ.

    ಗೊಗೊಯ್ ಅವರು ಈ ಹಿಂದೆ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ತನಗೆ ಜೀವ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ

    ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ

    ಶಿವಮೊಗ್ಗ: ಮೊಬೈಲ್ (Mobile) ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಆಕೆ ಶಿವಮೊಗ್ಗದಲ್ಲಿ (Shivamogga) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು.

    ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಗುರುವಾರ) ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

    ಈ ಸಂಬಂಧ ಕುಂಸಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದಾವಣಗೆರೆ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ!

    ದಾವಣಗೆರೆ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ!

    ದಾವಣಗೆರೆ: ಜಿಲ್ಲೆಯ (Davanagere) ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ.

    ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್‍ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2 ಬೈಕ್ ಹಾಗೂ 32 ನಾಡಬಾಂಬ್‍ಗಳನ್ನು ಅರಣ್ಯ ಇಲಾಖೆಯ (Forest Department) ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

  • ಜಮೀನಿನಲ್ಲಿ ರಸ್ತೆ ಬಿಡುವ ವಿಚಾರಕ್ಕೆ ಗಲಾಟೆ – ಮೂವರಿಗೆ ಚಾಕು ಇರಿತ

    ಜಮೀನಿನಲ್ಲಿ ರಸ್ತೆ ಬಿಡುವ ವಿಚಾರಕ್ಕೆ ಗಲಾಟೆ – ಮೂವರಿಗೆ ಚಾಕು ಇರಿತ

    ಮೈಸೂರು: ಜಮೀನಿನಲ್ಲಿ ಹಾದು ಹೋಗುವ ರಸ್ತೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮೂವರಿಗೆ ಚಾಕು ಇರಿದು ರಾಡ್‍ನಿಂದ ಹಲ್ಲೆ ನಡೆಸಿದ ಘಟನೆ ಹೆಚ್‍ಡಿ ಕೋಟೆ (HD Kote) ತಾಲೂಕಿನ ಕಟ್ಟೆಮನುಗನ ಹಳ್ಳಿಯಲ್ಲಿ ನಡೆದಿದೆ.

    ಜಮೀನು ಮಾಲೀಕರಾದ ಬಸವರಾಜು ಹಾಗೂ ಪ್ರದೀಪ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ನ್ಯಾಯಾಲಯದಲ್ಲಿ ಜಮೀನಿನ ವಿಚಾರವಾಗಿ ಪ್ರಕರಣವಿದ್ದರೂ ಜಮೀನಿಗೆ ನುಗ್ಗಿ ಗ್ರಾಮದ ಸಣ್ಣಕುಮಾರ, ಬುದ್ದ, ಸೋಮೇಶ್, ಸಂಜು, ರವಿ, ಕುಮಾರ್, ಮುನಿಯಮ್ಮ, ದೊಡ್ಡಸಿದ್ದು, ರಾಜಶೇಖರ್ ಹಾಗೂ ಕವಿತಾ ಎಂಬವರು ಗಲಾಟೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದವರು ಆರೋಪಿಸಿದ್ದಾರೆ.

    ಈ ಸಂಬಂಧ ಹೆಚ್‍ಡಿ ಕೋಟೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್‌ಗೆ ಗುಂಡೇಟು

    ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್‌ಗೆ ಗುಂಡೇಟು

    ಅನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ (Police) ಮೇಲೆ ಹಲ್ಲೆಗೆ ಮುಂದಾಗಿದ್ದು, ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ಘಟನೆ ಬಂಡಾಪುರ ಸಮೀಪದ ಮಡಿವಾಳದಲ್ಲಿ ನೆಡೆದಿದೆ.

    ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ, ಅನೇಕಲ್‍ಗೆ (Anekal) ಬರುವ ಮಾಹಿತಿ ಆಧರಿಸಿ ಆತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಬರುವುದನ್ನು ಗಮನಿಸಿದ ಪೊಲೀಸರು ಆತನಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಅತ್ತಿಬೆಲೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಘವ್ ಗೌಡ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

    ಕಳೆದ ನವೆಂಬರ್‌ನಲ್ಲಿ ಜಿಗಣಿ ಬಳಿ ರೌಡಿಶೀಟರ್ ಮನೋಜ್ ಗ್ಯಾಂಗ್ ಮೇಲೆ ಅಟ್ಯಾಕ್ ನಡೆದಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಜಿಗಣಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಾದ ಬಳಿಕ ಸುನೀಲ್‌ ತಲೆಮರೆಸಿಕೊಂಡಿದ್ದ. ಅಲ್ಲದೇ, ಆರೋಪಿ ವಿರುದ್ಧ ಮರಸೂರು ಗೇಟ್ ಪೆಟ್ರೋಲ್ ಬಂಕ್ ಗಲಾಟೆ, ಒಂದು ಕೊಲೆ ಎರಡು ಕೊಲೆ ಯತ್ನ ಸೇರಿದಂತೆ ಒಟ್ಟು 7 ಪ್ರಕರಣಗಳಿವೆ. ಆತನ ವಿರುದ್ಧ ಅರೆಸ್ಟ್‌ ವಾರೆಂಟ್‌ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ರೌಡಿಶೀಟರ್ ನಡೆಸಿದ ಹಲ್ಲೆಯಿಂದ ವಿನಯ್ ಎಂಬ ಕಾನ್‌ಸ್ಟೇಬಲ್ ಕೈಗೆ ಗಾಯವಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‍ಪಿ ನಾಗೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 6 ಜನರನ್ನು ಮದುವೆಯಾಗಿ ಹಣ, ಚಿನ್ನ ಕಳ್ಳತನ – 7ನೇ ಮ್ಯಾರೇಜ್‌ಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌!

    6 ಜನರನ್ನು ಮದುವೆಯಾಗಿ ಹಣ, ಚಿನ್ನ ಕಳ್ಳತನ – 7ನೇ ಮ್ಯಾರೇಜ್‌ಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌!

    ಲಕ್ನೋ: 6 ಜನರನ್ನು ಮದುವೆಯಾಗಿ (Marriage) ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಹಿಳೆಯನ್ನು 7ನೇ ಮದುವೆ ತಯಾರಿಯಲ್ಲಿದ್ದಾಗ ಉತ್ತರ ಪ್ರದೇಶದ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಮಹಿಳೆಯನ್ನು ಪೂನಂ ಎಂದು ಗುರುತಿಸಲಾಗಿದೆ. ಆಕೆಯ ತಾಯಿಯಂತೆ ಸಂಜನಾ ಗುಪ್ತಾ ಎಂಬಾಕೆ ನಟಿಸುತ್ತಿದ್ದಳು. ಈ ಇಬ್ಬರಿಗೂ ವಿಮಲೇಶ್ ವರ್ಮಾ ಮತ್ತು ಧರ್ಮೇಂದ್ರ ಪ್ರಜಾಪತಿ ಎಂಬವರು ಯುವಕರನ್ನು ಪರಿಚಯಿಸುತ್ತಿದ್ದರು. ಬಳಿಕ ಗ್ಯಾಂಗ್ ಯುವಕರಿಂದ ಹಣ ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪರಿಚಯಿಸಿದ ಯುವಕರ ಜೊತೆ ಸರಳ ವಿವಾಹವಾಗಿ ಪೂನಂ ಪತಿಯ ಮನೆಗೆ ತೆರಳುತ್ತಿದ್ದಳು. ಬಳಿಕ ಸಮಯ ಸಿಕ್ಕಾಗ ಹಣ ಹಾಗೂ ಚಿನ್ನ ದೋಚಿ‌ ಆಕೆ ಪರಾರಿಯಾಗುತ್ತಿದ್ದಳು. ಇದೇ ರೀತಿ 6 ಜನರಿಗೆ ಈ ಗ್ಯಾಂಗ್‌ ವಂಚಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳು ಶಂಕರ್ ಉಪಾಧ್ಯಾಯ ಎಂಬವರಿಗೆ ಪೂನಂಳನ್ನು ತೋರಿಸಿ ಮದುವೆ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಶಂಕರ್‌ಗೆ ಅನುಮಾನ ಬಂದು ಪೂನಂ ಹಾಗೂ ಸಂಜನಾಳ ಆಧಾರ್‌ ಕಾರ್ಡ್‌ ಕೇಳಿದ್ದಾರೆ. ಈ ವೇಳೆ ಅವರ ಸಂಚು ಬಯಲಾಗಿದೆ. ಈ ವೇಳೆ ಆರೋಪಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಶಂಕರ್‌ ದೂರಿದ್ದಾರೆ. ಈ ಸಂಬಂಧ ಅವರು ದಾಖಲಿಸಿದ ದೂರಿನ ಮೇಲೆ ಮೂವರನ್ನು ಬಂಧಿಸಲಾಗಿದೆ.

  • 5 ರೂ. ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

    5 ರೂ. ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

    – ಬಂಧನ ಭೀತಿಯಲ್ಲಿ ಗ್ರಾಮ ತೊರೆದ 20 ಮಂದಿ

    ದಾವಣಗೆರೆ: ಕೇವಲ 5 ರೂ. ಕುರ್ ಕುರೆ ವಿಚಾರಕ್ಕೆ ಮಾರಾಮಾರಿ ನಡೆದು 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲಾದ ಘಟನೆ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ.

    ಕುರ್ ಕುರೆ ಪ್ಯಾಕೇಟ್ ವಿಚಾರಕ್ಕೆ ಹೊನ್ನೇಬಾಗಿಯ ಅತೀಫ್ ಉಲ್ಲಾ ಹಾಗೂ ಸದ್ದಾಂ ಕುಟುಂಬದ ನಡುವೆ ಮಾರಾಮಾರಿಯಾಗಿದೆ. ಅತೀಫ್ ಉಲ್ಲಾ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ. ಅದೇ ಅಂಗಡಿಯಲ್ಲಿ ಸದ್ದಾಂ ಕುಟುಂಬದ ಮಕ್ಕಳು ಕುರ್ ಕುರೆ ಖರೀದಿ ಮಾಡಿದ್ದರು. ಆದರೆ ಅವಧಿ ಮುಗಿದ ಕುರ್ ಕುರೇ ಮಾರಾಟ ಮಾಡಿದ್ದೀಯಾ, ಬೇರೆಯದನ್ನು ಕೊಡು ಎಂದು ಕೇಳಿದ್ದಕ್ಕೆ ಗಲಾಟೆ ನಡೆದಿದೆ. ಈ ಸಂಬಂಧ ಸದ್ದಾಂ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

    ಇದೇ ವಿಚಾರಕ್ಕೆ ದ್ವೇಷ ಸಾಧಿಸಿದ ಅತೀಫ್ ಕುಟುಂಬಸ್ಥರು, ರಸ್ತೆ ಬದಿ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸದ್ದಾಂ ಕುಟುಂಬದ ಮೇಲೆ ಏಕಾಏಕಿ ಕಾರಿನಲ್ಲಿ ಬಂದು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ದೊಣ್ಣೆ ಹಿಡಿದು 20 ಕ್ಕೂ ಹೆಚ್ವು ಜನರು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಹಲ್ಲೆ ಮಾಡುವ ಸಂದರ್ಭದಲ್ಲಿ ಬಿಡಿಸಲು ಬಂದವರ ಮೇಲೆಯೂ ಹಲ್ಲೆ ನಡೆಸಿದ್ದು, ಗಾಯಗೊಂಡವರನ್ನು ಚನ್ನಗಿರಿ, ಭದ್ರಾವತಿ ಹಾಗೂ ಶಿವಮೊಗ್ಗ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ.

    ಎರಡು ಕುಟುಂಬದಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 20 ಕ್ಕೂ ಹೆಚ್ಚು ಜನರು ಬಂಧನ ಭೀತಿಯಿಂದ ಗ್ರಾಮವನ್ನು ತೊರೆದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

  • ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

    ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಹಲ್ಲೆ – ದೂರು ದಾಖಲು

    ಶಿವಮೊಗ್ಗ: ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅನುಮತಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ (Student) ಹಾಗೂ ಆತನ ಪೋಷಕರು ಕಾಲೇಜಿನಲ್ಲಿಯೇ ಉಪನ್ಯಾಸಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಾಗರದ (Sagar) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (College) ನಡೆದಿದೆ.

    ಹಲ್ಲೆಗೊಳಗಾದ ಉಪನ್ಯಾಸಕರನ್ನು ಪ್ರೊ.ರಾಜು ಎಂದು ಗುರುತಿಸಲಾಗಿದೆ. ಇನ್ನೂ ರಾಜು ಅವರೇ ಮೊದಲು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕ ವಿಜಯ್‍ಕುಮಾರ್ ಆರೋಪಿಸಿದ್ದಾರೆ.

    ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಹಲ್ಲೆಗೊಳಗಾದ ಉಪನ್ಯಾಸಕರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

  • ಪತ್ನಿ ಮೇಲೆ ಸಂಶಯ – ಆಡಿಯೋ ಕೇಳಿ ಮಹಿಳೆಯ ಬರ್ಬರ ಹತ್ಯೆ!

    ಪತ್ನಿ ಮೇಲೆ ಸಂಶಯ – ಆಡಿಯೋ ಕೇಳಿ ಮಹಿಳೆಯ ಬರ್ಬರ ಹತ್ಯೆ!

    ಶಿವಮೊಗ್ಗ: ಪತ್ನಿಯ (Wife) ಮೇಲಿನ ಅನುಮಾನದಿಂದ ಪತಿಯೇ (Husband) ಆಕೆಗೆ ಚಾಕು ಇರಿದು ಹತ್ಯೆಗೈದ ಘಟನೆ ಶಿವಮೊಗ್ಗ (Shivamogga) ನಗರದಲ್ಲಿ ನಡೆದಿದೆ.

    ಹತ್ಯೆಯಾದ ಮಹಿಳೆಯನ್ನು ರುಕ್ಸನಾ (38) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಯೂಸುಫ್ ಎಂದು ಗುರುತಿಸಲಾಗಿದೆ. ಆರೋಪಿ, ರುಕ್ಸನಾಳನ್ನು ಕಳೆದ 13 ವರ್ಷದ ಹಿಂದೆ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಮೇಲೆ ಸಂಶಯ ವ್ಯಕ್ತಪಡಿಸಿ ಆರೋಪಿ ಗಲಾಟೆ ಮಾಡಿದ್ದ. ಅಲ್ಲದೇ ಕಳೆದ ಮೂರು ದಿನಗಳ ಹಿಂದೆ ಸಹ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

    ಆರೋಪಿ ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ಫೋನಿನಲ್ಲಿ ಆಡೀಯೊ ರೆಕಾರ್ಡಿಂಗ್ ಇಟ್ಟು ಹೊರಗಡೆ ಹೋಗಿದ್ದ. ಮನೆಗೆ ವಾಪಸ್ ಬಂದು ನೋಡಿದಾಗ ರುಕ್ಸಾನ ಬೇರೆ ವ್ಯಕ್ತಿಯ ಜೊತೆ ಮಾತನಾಡಿದ ಆಡಿಯೋ ಆತನಿಗೆ ಸಿಕ್ಕಿತ್ತು. ಇದರಿಂದ ಕೋಪಗೊಂಡ ಯುಸೂಫ್ ಆಕೆಗೆ ಪ್ರಶ್ನೆ ಮಾಡಿದ್ದಾನೆ. ರುಕ್ಸಾನ ಕೂಡ ತನ್ನದು ತಪ್ಪಾಗಿದೆ ಎಂದು ಹೇಳಿದ್ದಳು. ಬಳಿಕ ತವರು ಮನೆಗೆ ತೆರಳಿದ್ದಳು ಎಂದು ತಿಳಿದು ಬಂದಿದೆ.

    ತವರು ಮನೆಗೆ ಹೋಗಿದ್ದ ಪತ್ನಿಯನ್ನು ಆರೋಪಿ ಇಂದು (ಭಾನುವಾರ) ಬೆಳಗ್ಗೆ ತನ್ನ ಮಗುವಿಗೆ ಆರೋಗ್ಯ ಸರಿಯಿಲ್ಲವೆಂದು ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆರೋಪಿ ಆಕೆಗೆ ಮಾರಕಾಸ್ತ್ರಗಳಿಂದ ಇರಿದಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

    ಈ ಸಂಬಂಧ ಆರೋಪಿಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.