Tag: police

  • ಪತ್ನಿಗೆ ಮೆಸೇಜ್‌ ಮಾಡಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ – ಜಾರ್ಖಂಡ್‌ಗೆ ಹೊರಟಿದ್ದ ಆರೋಪಿ ಅರೆಸ್ಟ್‌

    ಪತ್ನಿಗೆ ಮೆಸೇಜ್‌ ಮಾಡಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ – ಜಾರ್ಖಂಡ್‌ಗೆ ಹೊರಟಿದ್ದ ಆರೋಪಿ ಅರೆಸ್ಟ್‌

    ಬೆಂಗಳೂರು: ಪತ್ನಿಗೆ (Wife) ಮೆಸೇಜ್‌ ಮಾಡುತ್ತಿದ್ದ ಸ್ನೇಹಿತನ ಕತ್ತು‌ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ (Bengaluru) ಕೊಡುಗೇಹಳ್ಳಿ ಮರಿಯಪ್ಪನ ಪಾಳ್ಯದಲ್ಲಿ ನಡೆದಿದೆ.

    ಜಾರ್ಖಂಡ್ (Jharkhand) ಮೂಲದ ರಾಘು ಕೊಲೆಯಾದ ದುರ್ದೈವಿ. ರಾಜು ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರೂ ಜಾರ್ಖಂಡ್‌ ಮೂಲದವರು. ಎರಡು ವರ್ಷಗಳ ಹಿಂದೆ ಇಬ್ಬರೂ ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದರು. ಇತ್ತೀಚೆಗೆ ರಾಘು ತನ್ನ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿ, ಮೆಸೇಜ್‌ ಮಾಡುತ್ತಿದ್ದನಂತೆ. ಈ ವಿಚಾರ ತಿಳಿದ ರಾಜು ಸ್ನೇಹಿತ ರಾಘುವಿಗೆ ತಿಳುವಳಿಕೆ ಹೇಳಿದ್ದನಂತೆ.

    ಇಷ್ಟಾದರೂ ರಾಘು ಮಾತ್ರ ತನ್ನ ಹಳೆ ಚಾಳಿ ಬಿಡದೇ ಮತ್ತೆ ಸ್ನೇಹಿತನ ಪತ್ನಿಗೆ ಮೆಸೇಜ್‌ ಮಾಡುವುದನ್ನು ಮುಂದುವರಿಸಿದ್ದನಂತೆ. ಇದರಿಂದ ಕೋಪಗೊಂಡ ರಾಜು ಸೋಮವಾರ (ಅ.6) ರಾತ್ರಿ ರಾಘು ಜೊತೆ ಗಲಾಟೆ ಮಾಡಿ, ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಆರೋಪಿ ಜಾರ್ಖಂಡ್‌ಗೆ ತೆರಳಲು ಬೈಯ್ಯಪನಹಳ್ಳಿ ರೈಲು ನಿಲ್ದಾಣಕ್ಕೆ ಹೋಗಿದ್ದಾನೆ. ಇದನ್ನೂ ಓದಿ: ಯಾದಗಿರಿ | ಸೆಕ್ಸ್‌ಗೆ ಒಪ್ಪದಿದ್ದಕ್ಕೆ ಪತ್ನಿಯ ಭೀಕರ ಕೊಲೆ – ಕೊಡಲಿಯೊಂದಿಗೆ ಪೊಲೀಸರಿಗೆ ಶರಣಾದ ಹಂತಕ

    ಕೊಲೆ ವಿಚಾರ ತಿಳಿದ ಪೊಲೀಸರು, ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ, ರಾಜುವಿನ ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ತಕ್ಷಣ ಆತನ ಬಗ್ಗೆ ಮಾಹಿತಿ ಪಡೆದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದಿಂದ ಜಾರ್ಖಂಡ್‌ಗೆ ರೈಲು ಇರುವ ಮಾಹಿತಿ ತಿಳಿದು, ರೈಲು ನಿಲ್ದಾಣಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಆರೋಪಿ ಪತ್ತೆಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Bengaluru | ಪತಿಯೊಂದಿಗೆ ಗಲಾಟೆ – ಗೃಹಿಣಿ ನೇಣಿಗೆ ಶರಣು

  • ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ಲೈಕ್ಸ್‌ಗಾಗಿ ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್

    ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ – ಲೈಕ್ಸ್‌ಗಾಗಿ ದೆವ್ವದ ಕಥೆ ಕಟ್ಟಿದ್ದವನಿಗೆ ಪೊಲೀಸರ ಕ್ಲಾಸ್

    ಮಂಡ್ಯ: ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ (Ghost) ಫೇಕ್ ವಿಡಿಯೋ ಹಂಚಿಕೊಂಡಿದಾತನಿಗೆ ಮಂಡ್ಯ ಪೊಲೀಸರು (Mandya Police) ಕ್ಲಾಸ್ ತೆಗೆದುಕೊಂಡಿದ್ದಾರೆ.

    ಹೌದು, ನಾಗಮಂಗಲದಲ್ಲಿ ಬೈಕ್ ಸವಾರನಿಗೆ ಕಾಣಿಸಿಕೊಂಡ ದೆವ್ವದ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ ಆ ರಸ್ತೆಯಲ್ಲಿ ದೆವ್ವ ಇದೆ ಎಂದು ಜನರು ಓಡಾಡಲು ಹೆದರುತ್ತಿದ್ದರು. ಈ ಬಗ್ಗೆ ಮಂಡ್ಯ ಪೊಲೀಸರು ಫ್ಯಾಕ್ಟ್‌ಚೆಕ್‌ ನಡೆಸಿದ್ದು, ಬಳಿಕ ವಿಡಿಯೋದ ಅಸಲಿಯತ್ತು ಬಯಲಾಗಿದೆ. ಇದನ್ನೂ ಓದಿ: ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    ನಾಗಮಂಗಲ ಟೌನ್ ನಿವಾಸಿಯಾಗಿರುವ ಗೋಪಿಯು ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ ಎಂಬ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದ. ವಿಡಿಯೋ ಅಸಲಿಯತ್ತು ತಿಳಿಯಲು ನಾಗಮಂಗಲ ಪೊಲೀಸರು ಫ್ಯಾಕ್ಟ್‌ಚೆಕ್‌ ಮಾಡಿದ್ದರು. ಈ ವೇಳೆ ಗೋಪಿಯು ಲೈಕ್ಸ್, ವೀವ್ಸ್‌ಗಾಗಿ ಫೇಕ್ ವಿಡಿಯೋ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

    ಇದೀಗ ಪೊಲೀಸರು ಯುವಕನ ತಪ್ಪೊಪ್ಪಿಗೆಯ ವಿಡಿಯೋ ಪೋಸ್ಟ್ ಮಾಡಿ, ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಫೇಕ್ ವಿಡಿಯೋಗಳನ್ನು ನಂಬಿ ಭಯಬೀಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

  • ಶಿವಮೊಗ್ಗ | ಮದುವೆ ವಿಚಾರದಲ್ಲಿ ಮನಸ್ತಾಪ – ಇಬ್ಬರಿಗೆ ಚಾಕು ಇರಿತ

    ಶಿವಮೊಗ್ಗ | ಮದುವೆ ವಿಚಾರದಲ್ಲಿ ಮನಸ್ತಾಪ – ಇಬ್ಬರಿಗೆ ಚಾಕು ಇರಿತ

    ಶಿವಮೊಗ್ಗ: ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿದ ಘಟನೆ ನಗರದ (Shivamogga) ಊರುಗಡೂರು ಬಡಾವಣೆಯಲ್ಲಿ ನಡೆದಿದೆ. ಇರಿತಕ್ಕೊಳಗಾದ ಯುವಕರನ್ನು ಶಬ್ಬೀರ್‌ ಮತ್ತು ಶಹಬಾಜ್‌ ಎಂದು ಗುರುತಿಸಲಾಗಿದೆ. ಇಬ್ಬರು ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ವೈಯಕ್ತಿಕ ವಿಷಯಕ್ಕೆ ಘಟನೆ ಸಂಭವಿಸಿದೆ. ಇರಿತಕ್ಕೊಳಗಾದ ಶಬ್ಬೀರ್‌ನ ಸಹೋದರಿಯ ಗಂಡ ಫಾರ್ದಿನ್‌, ಆತನ ಸಹೋದರ ಮತ್ತು ಸ್ನೇಹಿತ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಟುಂಬಸ್ಥರ ಶವಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

    ಮದುವೆ ವಿಷಯಕ್ಕೆ ಮನಸ್ತಾಪ
    ಶಬ್ಬೀರ್‌ನ ಸಹೋದರಿ ಮತ್ತು ಫಾರ್ದಿನ್‌ ಪ್ರೀತಿಸಿ ಕೆಲವು ವರ್ಷದ ಹಿಂದೆ (Marriage) ಮದುವೆಯಾಗಿದ್ದರು. ಇದಕ್ಕೆ ಕುಟುಂಬದವರ ವಿರೋಧವಿತ್ತು. ಇತ್ತೀಚೆಗೆ ಶಬ್ಬೀರ್‌ನ ಸಹೋದರಿ ಮತ್ತು ಫಾರ್ದಿನ್‌ ಪ್ರತ್ಯೇಕವಾಗಿದ್ದರು. ಇದೇ ವಿಚಾರವಾಗಿ ಫಾರ್ದಿನ್‌ಗೆ ಶಬ್ಬೀರ್‌ ಮತ್ತು ಶಹಬಾಜ್‌ ಬೆದರಿಸುತ್ತಿದ್ದರು. ಹಾಗಾಗಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹೊಳೆನರಸೀಪುರ | ಜಾತಿಗಣತಿಗೆ ತೆರಳುವಾಗ ನಾಯಿಗೆ ಸ್ಕೂಟರ್ ಡಿಕ್ಕಿ – ಶಿಕ್ಷಕಿಗೆ ಗಂಭೀರ ಗಾಯ

  • ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ – ಬಾಲಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ – ಬಾಲಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    ಚಿಕ್ಕಮಗಳೂರು: ನಗರದಲ್ಲಿ (Chikkamagaluru) ಹಸುವಿನ (Cow) ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಬಾಲಕನನ್ನು ಹಿಂದೂ ಕಾರ್ಯಕರ್ತರು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

    ವಿಜಯಪುರ ಬಡಾವಣೆಯಲ್ಲಿ 16 ವರ್ಷದ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ್ದಾನೆ. ಬಾಲಕನ ಕೃತ್ಯ ಕಂಡು ಸ್ಥಳೀಯರು ಹಾಗೂ ಹಿಂದೂ ಕಾರ್ಯಕರ್ತರು ಬಾಲಕನಿಗೆ ಥಳಿಸಿ, ಪೊಲೀಸರಿಗೊಪ್ಪಿಸಿದ್ದಾರೆ. ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಾತಿಗಣತಿಗೆ ತರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ – ರಕ್ಷಣೆಗೆ ಬಂದ 7 ಮಂದಿಗೂ ಕಚ್ಚಿದ ಶ್ವಾನಗಳು

    ವಿಕೃತಿ ಮೆರೆದ ಬಾಲಕನ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನಿಗೆ ಥಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಬಾಲಕನ ತಾಯಿ ದೂರು ನೀಡಿದ್ದಾಳೆ. ಅಪ್ರಾಪ್ತ ಬಾಲಕನ ಮನಸ್ಥಿತಿ ಬಗ್ಗೆ ಸ್ಥಳೀಯರು ಆತಂಕ ಹೊರಹಾಕಿದ್ದಾರೆ.

    ಬಾಲಕ ಕೃತ್ಯಕ್ಕೆ ಬಳಸಿದ ಲೈಟರ್ ಹಾಗೂ ಸೆಂಟ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ – 2 ತಿಂಗಳು ಕಳೆದರೂ 12 ಆರೋಪಿಗಳಿಗೆ ಬಿಡುಗಡೆ ಭಾಗ್ಯವಿಲ್ಲ

  • ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ರಾಮನಗರ: ಲೋಕಾಯುಕ್ತ ಡಿವೈಎಸ್‌ಪಿ (Lokayukta DySP) ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ (Money) ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ರಾಮನಗರದ (Ramanagara) ಐಜೂರು ಪೊಲೀಸರು (Ijoor Police) ಬಂಧಿಸಿದ್ದಾರೆ.

    ಮುರೇಗಪ್ಪ ಬಂಧಿತ ಆರೋಪಿ. ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ ಮಾಡಿದ್ದ ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮಹಾರಾಷ್ಟçದ ಕೊಲ್ಲಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಆರೋಪಿ ಮುರೇಗಪ್ಪ ಮೇಲೆ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯಿಂದ 3 ಮೊಬೈಲ್ ಹಾಗೂ 9ಕ್ಕೂ ಹೆಚ್ಚು ಸಿಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೇ ಅಲ್ಲದೇ ಮುರೇಗಪ್ಪ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಲೋಕಾಯಕ್ತ ಅಧಿಕಾರಿ ಎಂದು ಬೆದರಿಕೆ ಹಾಕಿ ಹಣ ಪೀಕಿದ್ದ. ಮುರೇಗಪ್ಪ ಎಂಟು ವರ್ಷಗಳ ಕಾಲ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸಿದ್ದ. ಎರಡು ವರ್ಷ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸಿ, ಸಸ್ಪೆಂಡ್ ಆಗಿದ್ದ. ಬಳಿಕ ಬೆದರಿಕೆ ಹಾಕಿ ಹಣ ಪೀಕುವುದನ್ನೇ ವೃತ್ತಿ ಮಾಡಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ ಐಜೂರು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ – 2 ತಿಂಗಳು ಕಳೆದರೂ 12 ಆರೋಪಿಗಳಿಗೆ ಬಿಡುಗಡೆ ಭಾಗ್ಯವಿಲ್ಲ

  • ಯುವತಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್

    ಯುವತಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್

    ಚೆನ್ನೈ: ಆಂಧ್ರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ತಮಿಳುನಾಡಿನ ತಿರುವನ್ನಮಲೈನ ಜಿಲ್ಲಾ ಪೂರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

    25 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕಾನ್ಸ್ಟೇಬಲ್‌ಗಳಾದ ಸುಂದರ್ ಮತ್ತು ಸುರೇಶ್ ರಾಜ್‌ರನ್ನು ಬಂಧಿಸಿ, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮನಗರ ಸರಣಿ ಅಪಘಾತ; ಟೆಂಪೋ ಚಾಲಕ ಸಾವು, ಐವರಿಗೆ ಗಂಭೀರ ಗಾಯ

    ಯುವತಿಯು, ಆಕೆಯ ತಾಯಿಯೊಂದಿಗೆ ಆಂಧ್ರಪ್ರದೇಶದಿಂದ ತಿರುವನ್ನಮಲೈಗೆ ಹಣ್ಣುಗಳನ್ನು ಮಾರಾಟ ಮಾಡಲು ಪ್ರಯಾಣಿಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್‌ಗಳು ವಾಹನವನ್ನು ತಡೆದು, ತಪಾಸಣೆ ಮಾಡಿದ್ದರು.

    ಬಳಿಕ ಯುವತಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಯುವತಿಯ ತಾಯಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನಾಧಾರ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಬಂಧಿಸಿ, ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

  • ಮಾಜಿ ಸೈನಿಕನ ಮೇಲೆ ಹಲ್ಲೆ; ಎಎಸ್‌ಐ, ಕಾನ್ಸ್ಟೇಬಲ್‌ಗೆ ನ್ಯಾಯಾಂಗ ಬಂಧನ

    ಮಾಜಿ ಸೈನಿಕನ ಮೇಲೆ ಹಲ್ಲೆ; ಎಎಸ್‌ಐ, ಕಾನ್ಸ್ಟೇಬಲ್‌ಗೆ ನ್ಯಾಯಾಂಗ ಬಂಧನ

    – ಮಾಜಿ ಸೈನಿಕನ ವಿರುದ್ಧವೂ ಎಫ್‌ಐಆರ್

    ಧಾರವಾಡ: ಮಾಜಿ ಸೈನಿಕನ (Former Soldier) ಮೇಲೆ ಹಲ್ಲೆ ಪ್ರಕರಣಕ್ಕೆ ಎಎಸ್‌ಐ ಮತ್ತು ಓರ್ವ ಪೊಲೀಸ್ ಕಾನ್ಸ್ಟೇಬಲ್‌ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ ಇದೀಗ ಮಾಜಿ ಸೈನಿಕನ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

    ಅಮಾನತು ಮಾಡಿ ಆದೇಶ ಮಾಡಲಾಗಿದೆ. ಅಲ್ಲದೇ ಎಎಸ್‌ಐ ಮತ್ತು ಕಾನ್ಸ್ಟೇಬಲ್‌ಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಈ ಇಬ್ಬರನ್ನೂ ಕರ್ತವ್ಯದಿಂದ ವಜಾ ಮಾಡಬೇಕು ಎಂದು ಒತ್ತಾಯ ಮಾಡಲಾಗಿದೆ. ಇದನ್ನೂ ಓದಿ: ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ಧಾರವಾಡ (Dharwad) ಸಪ್ತಾಪುರದಲ್ಲಿರುವ ಸೈನಿಕ ಮೆಸ್ ಮಾಲೀಕ ರಾಮಪ್ಪ ನಿಪ್ಪಾಣಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ವಿದ್ಯಾನಂದ ಸುಬೇದಾರ ಹಾಗೂ ಪೊಲೀಸ್ ಕಾನ್ಸ್ಟೇಬಲ್ ರಾಚಪ್ಪ ಕಣಬೂರರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಜೊತೆಗೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಯಲ್ಲಿ ಕಳ್ಳತನ – 12 ಲಕ್ಷ ಮೌಲ್ಯದ ಚಿನ್ನ, 29 ಲಕ್ಷ ಕ್ಯಾಶ್ ಕಳವು

    ಪೊಲೀಸರು ಕೂಡ ಆ ಮಾಜಿ ಸೈನಿಕ ನಿಪ್ಪಾಣಿ ಮೇಲೆ ದೂರು ದಾಖಲಿಸಿದ್ದಾರೆ. ಕರ್ತವ್ಯದ ಮೇಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಆತ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ದೂರು ದಾಖಲಿಸಿದ್ದಾರೆ. ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಆ ರೀತಿ ಹಲ್ಲೆ ನಡೆಸಿದ್ದರೆ ಆ ಮಾಜಿ ಸೈನಿಕನ ಮೇಲೂ ಕ್ರಮ ಆಗಲಿದೆ. ಸದ್ಯ ಸಿಸಿಟಿವಿ ಡಿವಿಆರ್ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ಭಾನುವಾರ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಏಷ್ಯಾ ಕಪ್ ಫೈನಲ್ ಪಂದ್ಯಾವಳಿ ನಡೆದಿತ್ತು. ಈ ವೇಳೆ ಯಾವುದೇ ಗಲಾಟೆಗಳು ಆಗದಂತೆ ಪೊಲೀಸರು ಗಸ್ತು ತಿರುಗುತ್ತಿದ್ದರು. ರಾತ್ರಿ 12 ಗಂಟೆಯಾದರೂ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ತಮ್ಮ ಮೆಸ್ ತೆಗೆದು ಊಟ ಕೊಡುತ್ತಿದ್ದರು. ಈ ವೇಳೆ ಮೆಸ್ ಬಂದ್ ಮಾಡುವಂತೆ ಹೇಳಲು ಹೋದ ಪೊಲೀಸರ ಮೇಲೆ ರಾಮಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅಲ್ಲದೇ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದರು ಆರೋಪಿಲಾಗಿದೆ. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಪೊಲೀಸರು ಮೆಸ್ ಬಂದ್ ಮಾಡುವಂತೆ ಹೇಳಿ ಹಲ್ಲೆ ಮಾಡಿದ್ದಾರೆ ಎಂದು ಮಾಜಿ ಸೈನಿಕ ಆರೋಪಿಸಿದ್ದಾರೆ. ಇದೀಗ ಪೊಲೀಸರು ನೀಡಿದ ದೂರಿನಾಧಾರ ಮಾಜಿ ಸೈನಿಕ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

  • ಹಾಸನ | ಸಿಡಿಮದ್ದು ಸ್ಫೋಟಗೊಂಡು ಮನೆ ಛಿದ್ರ ಛಿದ್ರ – ಮಗು ಸೇರಿ ಮೂವರಿಗೆ ಗಾಯ, ದಂಪತಿ ಸ್ಥಿತಿ ಗಂಭೀರ

    ಹಾಸನ | ಸಿಡಿಮದ್ದು ಸ್ಫೋಟಗೊಂಡು ಮನೆ ಛಿದ್ರ ಛಿದ್ರ – ಮಗು ಸೇರಿ ಮೂವರಿಗೆ ಗಾಯ, ದಂಪತಿ ಸ್ಥಿತಿ ಗಂಭೀರ

    ಹಾಸನ: ಹಳೇಆಲೂರು ಗ್ರಾಮದಲ್ಲಿ ಸ್ಫೋಟ (Explosion) ಸಂಭವಿಸಿ ದಂಪತಿ ಗಾಯಗೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಸಿಡಿಮದ್ದು ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

    ಘಟನೆಯಲ್ಲಿ ಸುದರ್ಶನ್ ಆಚಾರ್ (32), ಕಾವ್ಯ (27) ಹಾಗೂ ಒಂದು ಮಗುವಿಗೆ ಗಾಯವಾಗಿದೆ. ಗಾಯಾಳುಗಳಿಗೆ ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ,  ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ದಂಪತಿ ಸ್ಥಿತಿ ಚಿಂತಾಜನಕವಾಗಿದೆ. ಉಳಿದಂತೆ ಮಗು ಸೇರಿ ಮನೆಯಲ್ಲಿದ್ದ ಇತರ ನಾಲ್ವರು ಸುರಕ್ಷಿತವಾಗಿದ್ದಾರೆ. ಇದನ್ನೂ ಓದಿ: ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಗಾಯಾಳುಗಳ ರವಾನೆ

    ಮನೆಯಲ್ಲಿದ್ದ ಎರಡು ಸಿಲಿಂಡರ್‌ ಹಾಗೂ ಗೀಸರ್‌ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಈಗ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ. ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಮನೆಯ ಸುತ್ತ ಆಲೂರು ಪೊಲೀಸರು ಭದ್ರತೆ ನೀಡಿದ್ದು, ಮಂಗಳೂರಿನಿಂದ ಸ್ಥಳ ಪರಿಶೀಲನೆಗೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಲಿದೆ. ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

  • ಚಿಕನ್‌ ಬೇಕು ಎಂದ ಮಕ್ಕಳನ್ನು ಲಟ್ಟಣಿಗೆಯಲ್ಲಿ ಬಡಿದ ತಾಯಿ – ಮಗ ಸಾವು, ಮಗಳಿಗೆ ಗಾಯ

    ಚಿಕನ್‌ ಬೇಕು ಎಂದ ಮಕ್ಕಳನ್ನು ಲಟ್ಟಣಿಗೆಯಲ್ಲಿ ಬಡಿದ ತಾಯಿ – ಮಗ ಸಾವು, ಮಗಳಿಗೆ ಗಾಯ

    ಮುಂಬೈ: ಚಿಕನ್‌ (Chicken) ಬೇಕು ಎಂದು ಒತ್ತಾಯಿಸಿದ ಮಗನನ್ನು ತಾಯಿಯೇ ಲಟ್ಟಣಿಗೆಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ.

    ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕ ತನ್ನ ತಾಯಿ ಪಲ್ಲವಿ (40) ಧುಮ್ಡೆ ಬಳಿ ಚಿಕನ್‌ ಬೇಕು ಎಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಹೊಡೆದು ಹತ್ಯೆಗೈದಿದ್ದಾಳೆ. ಅಲ್ಲದೇ ತನ್ನ 10 ವರ್ಷದ ಮಗಳ ಮೇಲೂ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

    ಕಿರುಚಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ. ನಂತರ ಪಾಲ್ಘರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.

    ಮಹಿಳೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103(1) (ಕೊಲೆ) ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ದೇಶ್ಮುಖ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

  • ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

    ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

    – ಅಜ್ಞಾತ ಸ್ಥಳದಲ್ಲಿಟ್ಟು ಗಿರಾಕಿಗಳಿಗೆ ಲೊಕೇಷನ್ ಕಳಿಸುತ್ತಿದ್ದ ಆರೋಪಿಗಳು

    ಬೆಂಗಳೂರು: ನಗರದಲ್ಲಿ (Bengaluru) ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

    ಆರೋಪಿಗಳು ದೆಹಲಿ ಮತ್ತು ಮುಂಬಯಿಂದ ಡ್ರಗ್ಸ್ ತರಿಸುತ್ತಿದ್ದರು. ಹೆಬ್ಬಗೋಡಿಯಲ್ಲಿ ಮನೆ ಮಾಡಿ ಮಾಡಿಕೊಂಡಿದ್ದರು. ಟೆಕ್ಕಿಗಳು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಆನ್‍ಲೈನ್ ಮೂಲಕ ಪೇಮೆಂಟ್ ಮಾಡಿಸಿಕೊಂಡು, ಅಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೋಕೇಷನ್ ಕಳಿಸುತ್ತಿದ್ದರು.

    ಈ ಇಬ್ಬರೂ ಇತ್ತೀಚಿಗಷ್ಟೆ ಭಾರತಕ್ಕೆ ಬಂದಿದ್ದರು. ಬಂದಿತರ ವಿರುದ್ಧ ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ