Tag: police

  • ಶಿವಮೊಗ್ಗ | ರೌಡಿಶೀಟರ್‌ ಹತ್ಯೆ ಕೇಸ್‌ – ನಾಲ್ವರು ಆರೋಪಿಗಳು ಅರೆಸ್ಟ್‌

    ಶಿವಮೊಗ್ಗ | ರೌಡಿಶೀಟರ್‌ ಹತ್ಯೆ ಕೇಸ್‌ – ನಾಲ್ವರು ಆರೋಪಿಗಳು ಅರೆಸ್ಟ್‌

    ಶಿವಮೊಗ್ಗ: ಬೊಮ್ಮನಕಟ್ಟೆ ಬಡಾವಣೆಯಲ್ಲಿ ರೌಡಿಶೀಟರ್ ರಾಜೇಶ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಗಣೇಶ್, ಕಿರಣ್ ಗೌಡ, ನಾಗರಾಜ್, ವೆಂಕಟೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ದೀಪು ಹಾಗೂ ವಿನಯ್ ತಲೆಮರೆಸಿಕೊಂಡಿದ್ದಾರೆ. ಉಳಿದ ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಮೇಲ್ನೋಟಕ್ಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

    ಬೇಕರಿ ಬಳಿ ಜ್ಯೂಸ್ ಕುಡಿಯುತ್ತಾ ಕುಳಿತಿದ್ದ ರೌಡಿಶೀಟರ್ ರಾಜೇಶ್ ಶೆಟ್ಟಿಯನ್ನು ನ.30 ರಂದು ಆರೇಳು ಮಂದಿ ಸೇರಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ

    ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ

    ಹಾಸನ: ಟಯರ್‌ ಸ್ಫೋಟಗೊಂಡ ಪರಿಣಾಮ ಪೊಲೀಸ್‌ (Police) ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನದಲ್ಲಿ (Hassan) ನಡೆದಿದೆ.

    ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ದನ್ ಎಂದು ಗುರುತಿಸಲಾಗಿದೆ. ಮೈಸೂರಿನ (Mysuru) ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

    ಹರ್ಷಬರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಇಂದು (ಭಾನುವಾರ) ಸಂಜೆ ವರದಿ ಮಾಡಿಕೊಳ್ಳಲು ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.

    ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

  • ಕೊಯಮತ್ತೂರು | ಕಾಲೇಜಿನ ವಾಶ್‌ರೂಮ್‌ನಲ್ಲಿ ಪೆನ್ ಕ್ಯಾಮೆರಾ ಇಟ್ಟಿದ್ದ ವೈದ್ಯ‌ ಅರೆಸ್ಟ್‌

    ಕೊಯಮತ್ತೂರು | ಕಾಲೇಜಿನ ವಾಶ್‌ರೂಮ್‌ನಲ್ಲಿ ಪೆನ್ ಕ್ಯಾಮೆರಾ ಇಟ್ಟಿದ್ದ ವೈದ್ಯ‌ ಅರೆಸ್ಟ್‌

    ಚೆನ್ನೈ: ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಮೆಡಿಕಲ್‌ ಕಾಲೇಜಿನ ವಾಶ್ ರೂಮ್‌ನಲ್ಲಿ ಪೆನ್ ಕ್ಯಾಮೆರಾ ಇಟ್ಟ ಆರೋಪದ ಮೇಲೆ ಓರ್ವ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಡಾ. ವೆಂಕಟೇಶ್ (33) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ನಡೆಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಮಹಿಳಾ ವೈದ್ಯರೊಬ್ಬರಿಗೆ ವಾಶ್‌ರೂಮ್‌ನಲ್ಲಿ ಕ್ಯಾಮೆರಾ ಇರುವುದು ಕಂಡು ಬಂದಿದೆ. ಅವರು ಈ ವಿಚಾರವನ್ನು ಕಾಲೇಜಿನ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಹಿಡನ್ ಕ್ಯಾಮೆರಾ (Hidden Camera) ಮತ್ತು ಅದರ ಮೆಮೊರಿ ಕಾರ್ಡ್‌ನ್ನು ವಶಪಡಿಸಿಕೊಂಡಿದ್ದಾರೆ.

    ಆರೋಪಿ ವಿರುದ್ಧ ಐಟಿ ಕಾಯ್ದೆ ಮತ್ತು ಭಾರತ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿನಿಮೀಯ ಶೈಲಿಯಲ್ಲಿ 3 ಕೋಟಿ ಮೌಲ್ಯದ ಮೊಬೈಲ್ ಎಗರಿಸಿದ್ನಾ ಲಾರಿ ಚಾಲಕ?

    ಸಿನಿಮೀಯ ಶೈಲಿಯಲ್ಲಿ 3 ಕೋಟಿ ಮೌಲ್ಯದ ಮೊಬೈಲ್ ಎಗರಿಸಿದ್ನಾ ಲಾರಿ ಚಾಲಕ?

    – ಕಂಟೈನರ್‌ಗೆ ಕನ್ನ ಕೊರೆದು 5,140 ಮೊಬೈಲ್‌ ಕಳ್ಳತನ

    ಚಿಕ್ಕಬಳ್ಳಾಪುರ: ದೆಹಲಿಯಿಂದ ಬೆಂಗಳೂರಿಗೆ (Bengaluru) ಸಾಗಾಟ ಮಾಡ್ತಿದ್ದ 3 ಕೋಟಿ ರೂ. ಮೌಲ್ಯದ ಮೊಬೈಲ್‌ಗಳು (Mobile) ಸಿನಿಮೀಯ ಶೈಲಿಯಲ್ಲಿ ಕಳ್ಳತನವಾಗಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ.

    ನ.22ರಂದು ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್‌ಗಳನ್ನು ಸಾಗಿಸುತ್ತಿದ್ದ ಕಂಟೈನರ್ ವಾಹನ ಬೆಂಗಳೂರು ತಲುಪದೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ಪತ್ತೆಯಾಗಿತ್ತು. ಚಾಲಕ ಕೂಡ ನಾಪತ್ತೆಯಾಗಿದ್ದ. ವಾಹನಕ್ಕೆ ಆಳವಡಿಸಿದ್ದ ಜಿಪಿಎಸ್ ಮೂಲಕ ವಾಹನ ಪತ್ತೆ ಹಚ್ಚಲಾಗಿದೆ. ವಾಹನ ಪರಿಶೀಲನೆ ನಡೆಸಿದಾಗ ವಾಹನದ ಚಾಲಕನ ಕ್ಯಾಬಿನ್ ಹಿಂಭಾಗದಿಂದ ಕಂಟೈನರ್‌ಗೆ ಕನ್ನ ಕೊರೆದು ಮೊಬೈಲ್‌ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

    ಇನ್ನೂ ಲಾರಿ ಚಾಲಕ ರಾಹುಲ್ ಎಂಬಾತನ ಮೊಬೈಲ್ ಸ್ವಿಚ್ಡ್ ಅಫ್ ಆಗಿದ್ದು ಆತನ ಮೇಲೆಯೇ ಅನುಮಾನ ಮೂಡಿದೆ. ಲಾರಿ ಕಂಪನಿಯ ಪ್ರತಿನಿಧಿ ಪದ್ಮನಾಭಂ ಎಂಬವರು ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಸದ್ಯ ಬಿಎನ್ಎಸ್ ಸೆಕ್ಷನ್ 306ರ ಅಡಿ ಪ್ರಕರಣ ದಾಖಲಾಗಿದೆ.

    ಆರೋಪಿಗಾಗಿ ಪೊಲೀಸರು ಹುಡಕಾಟ ನಡೆಸಿದ್ದಾರೆ. ಇನ್ನೂ ಲಾರಿ ಪರಿಶೀಲನೆ ನಂತರ ಕಂಟೈನರ್ ನಲ್ಲಿ 257 ಬಾಕ್ಸ್ ನಲ್ಲಿದ್ದ ಮೊಬೈಲ್‌ಗಳು ಕಳ್ಳತನವಾಗಿದ್ದು, ಕೇವಲ 76 ಬಾಕ್ಸ್‌ಗಳು ಲಾರಿಯಲ್ಲಿ ಉಳಿದುಕೊಂಡಿವೆ ಎಂದು ತಿಳಿದು ಬಂದಿದೆ.

  • ಕೂಲ್‌ ಡ್ರಿಂಕ್ಸ್‌ ಕುಡಿಯುತ್ತ ಕುಳಿತಿದ್ದ ರೌಡಿಶೀಟರ್‌ ಮೇಲೆ ಏಕಾಏಕಿ ದಾಳಿ – ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೊಲೆ

    ಕೂಲ್‌ ಡ್ರಿಂಕ್ಸ್‌ ಕುಡಿಯುತ್ತ ಕುಳಿತಿದ್ದ ರೌಡಿಶೀಟರ್‌ ಮೇಲೆ ಏಕಾಏಕಿ ದಾಳಿ – ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೊಲೆ

    ಶಿವಮೊಗ್ಗ: ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ (Murder) ಘಟನೆ ನಗರದ (Shivamogga) ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

    ಕೊಲೆಯಾದ ರೌಡಿಶೀಟರ್‌ನನ್ನು ರಾಜೇಶ್ ಶೆಟ್ಟಿ (38 ) ಎಂದು ಗುರುತಿಸಲಾಗಿದೆ. ರಾಜೇಶ್ ಬೊಮ್ಮನಕಟ್ಟೆಯ ಅಂಗಡಿ ಬಳಿ‌ ಕೂಲ್‌ ಡ್ರಿಂಕ್ಸ್‌ ಕುಡಿಯುತ್ತ ಕುಳಿತಿದ್ದ. ಅಲ್ಲಿಗೆ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

    ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹಾಗೂ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೊಲೆಯಾದ ರಾಜೇಶ್ ಶೆಟ್ಟಿ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಆರೇಳು ಪ್ರಕರಣಗಳಿವೆ. ಈತ ಆಟೋ ಚಾಲನೆ, ರಿಯಲ್ ಎಸ್ಟೇಟ್ ಬ್ರೋಕರ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ಪೊಲೀಸ್ (Police) ಮೂಲಗಳು ತಿಳಿಸಿವೆ.

  • ಬೆಳಗಾವಿ | ಯುವಕನ ಎದೆಗೆ ಚಾಕು ಇರಿದು ಬರ್ಬರ ಹತ್ಯೆ – ಐವರ ಮೇಲೆ ಶಂಕೆ

    ಬೆಳಗಾವಿ | ಯುವಕನ ಎದೆಗೆ ಚಾಕು ಇರಿದು ಬರ್ಬರ ಹತ್ಯೆ – ಐವರ ಮೇಲೆ ಶಂಕೆ

    ಬೆಳಗಾವಿ: ಹಾಡಹಗಲೇ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಸವದತ್ತಿ (Savadatti) ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

    ಹತ್ಯೆಯಾದ ಯುವಕನನ್ನು ಸೋಹಿಲ್ ಅಹ್ಮದ್ ಕಿತ್ತೂರು (17) ಎಂದು ಗುರುತಿಸಲಾಗಿದೆ. ಯುವಕ ಗ್ರಾಮದಲ್ಲಿ ಎಗ್‍ರೈಸ್ ಅಂಗಡಿ ಇಟ್ಟುಕೊಂಡಿದ್ದ. ಆತನನ್ನು ಐವರು ಯುವಕರು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.

    ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಯುವಕನ ಹತ್ಯೆ ಖಂಡಿಸಿ ಮುರಗೋಡ ಪೊಲೀಸ್ ಠಾಣೆ ಮುಂದೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

  • ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!

    ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!

    ಕಾರವಾರ: ಸಣ್ಣಪುಟ್ಟ ಕಳ್ಳತನ ಮಾಡಿ ಊರು ಬಿಟ್ಟು ಬೆಂಗಳೂರಿಗೆ ಸೇರಿದ್ದ ಯುವಕನೊಬ್ಬ, ಊರಿಗೆ ಬಂದು ಪಕ್ಕದ ಮನೆಗೆ ಕನ್ನ ಹಾಕಿ ಚಿನ್ನ (Gold) ಲೂಟಿ ಮಾಡಿ ಪೊಲೀಸರ (Police) ಅತಿಥಿಯಾಗಿದ್ದಾನೆ.

    ಬಂಧಿತ ಆರೋಪಿಯನ್ನು ಬೇಡ್ಕಣಿಯ ಗಣೇಶ್ ಎಂದು ಗುರುತಿಸಲಾಗಿದೆ. ಈತ ಚಿಕ್ಕಪುಟ್ಟ ಕಳ್ಳತನ ಮಾಡಿ, ಊರು ಬಿಟ್ಟು ಬೆಂಗಳೂರು ಸೇರಿ ಕೂಲಿ ಕೆಲಸ ಮಾಡಿಕೊಂಡಿದ್ದ. ಊರಿಗೆ ಬಂದವನೆ ಪಕ್ಕದ ಮನೆಗೆ ಕನ್ನ ಹಾಕಿ 1.26 ಲಕ್ಷ ರೂ. ಮೌಲ್ಯದ 21 ಗ್ರಾಂ ಚಿನ್ನ ಕದ್ದು, ಪರಾರಿಯಾಗಿದ್ದ.

    ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಚಿನ್ನಾಭರಣ ಸಮೇತ ಈತನನ್ನು ಬಂಧಿಸಿದ್ದಾರೆ.

    ಈ ಹಿಂದೆ ಆರೋಪಿಯ ಚಿಕ್ಕಪುಟ್ಟ ತಪ್ಪುಗಳನ್ನು ಊರಿನ ಜನ ಕ್ಷಮಿಸಿದ್ದರು. ಇದೀಗ ದೊಡ್ಡ ಕಳ್ಳತನ ಮಾಡಿ ಕಂಬಿ ಹಿಂದೆ ಸೇರಿದ್ದಾನೆ.

  • ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದವನ ವಿರುದ್ಧ ಸುಮೊಟೋ ಕೇಸ್

    ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದವನ ವಿರುದ್ಧ ಸುಮೊಟೋ ಕೇಸ್

    ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿದೆ.

    ಮೋಹಿತ್ ನರಸಿಂಹಮೂರ್ತಿ ಎಂಬಾತನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‍ಐಆರ್‍ನಲ್ಲಿ ಉಲ್ಲೇಖಿಸಲಾಗಿದೆ.

    ಮೋಹಿತ್ ತನ್ನ ಎಕ್ಸ್ ಮತ್ತು ಇನ್‍ಸ್ಟಾಗ್ರಾಂ ಖಾತೆಯಲ್ಲಿ ಸಚಿವರ ವಿರುದ್ಧ ವಿಡಿಯೋ ಪ್ರಕಟಿಸಿದ್ದ. ಅದರಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ಹಣವೇನು ನಿಮ್ಮಪ್ಪನ ಮನೆಯಿಂದ ತಂದಿದ್ದೀರಾ? ಸಾರ್ವಜನಿಕರ ಹಣ ಲೂಟಿ ಮಾಡಿ ನೀವು ಮತ್ತು ಕುಟುಂಬ ಐಶಾರಾಮಿ ಜೀವನ ನಡೆಸುತ್ತಿದ್ದೀರಾ ಎಂದು ಹೇಳಿಕೊಂಡಿದ್ದ.

    ಸದ್ಯ ಆತನ ವಿರುದ್ಧ ಪೊಲೀಸರು (Police) ಎಫ್‍ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

  • ಬೆಳಗಾವಿ | ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ಪೊಲೀಸರಿಂದ ರಣಚಂಡಿಕಾ ಹೋಮ

    ಬೆಳಗಾವಿ | ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ಪೊಲೀಸರಿಂದ ರಣಚಂಡಿಕಾ ಹೋಮ

    ಬೆಳಗಾವಿ: ಅಪರಾಧ ಕೃತ್ಯಗಳು ಕಡಿಮೆ ಆಗಲಿ ಎಂದು ಬೆಳಗಾವಿ ನಗರ ಪೊಲೀಸರು ಹೋಮ ಹವನದ ಮೊರೆ ಹೋಗಿರುವ ವಿಶೇಷ ಪ್ರಸಂಗವೊಂದು ಕಂಡುಬಂದಿದೆ.

    ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣಾ ಪೊಲೀಸರು (Malmaruti Police Station) ಅಪರಾಧ ಚಟುವಟಿಕೆ ಕಡಿಮೆ ಆಗಬೇಕು, ಠಾಣೆಯಲ್ಲಿ ಶಾಂತಿ ನೆಲೆಸಬೇಕು ಎಂಬ ಉದ್ದೇಶದಿಂದ ರಣಚಂಡಿಕಾ ಹೋಮ ನೆರವೇಸಿರಿದ್ದಾರೆ.ಇದನ್ನೂ ಓದಿ: ಹಾಸನದಲ್ಲಿ ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

    ಪೊಲೀಸ್ ಠಾಣೆಯ ಹಾಲ್‌ನಲ್ಲಿ ಹೋಮ ಹವನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಠಾಣೆಯ ಬಾಗಿಲಿಗೆ ಬೂದಗುಂಬಳಕಾಯಿ ಒಡೆದು, ಅರಿಶಿನ ಕುಂಕುಮ ಹಚ್ಚಿ ಪೂಜೆ ಮಾಡಿದ್ದಾರೆ. ಇಡೀ ಠಾಣೆಯಲ್ಲಿ ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

    ಕಳೆದ ಒಂದೂವರೆ ತಿಂಗಳಲ್ಲಿ ಅತಿ ಹೆಚ್ಚು ಅಪರಾಧಗಳು ಪ್ರಕರಣಗಳು ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ. ಕಳೆದ ವಾರ ಮಹಿಳೆಯೊಬ್ಬರನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಅಮಾನವೀಯ ಘಟನೆಯೂ ನಡೆದಿತ್ತು. ಎರಡು ದಿನಗಳ ಹಿಂದೆಯಷ್ಟೇ ಪ್ರೀತಿಗಾಗಿ ಗುಂಡಿನ ಸದ್ದು ಕೇಳಿ ಬಂದಿತ್ತು. ಕೊಲೆ, ಸುಲಿಗೆ, ದರೋಡೆ, ಕಳ್ಳತನ ಸೇರಿ ಸುಮಾರು 45ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.

    ಕ್ರೈಂ ಕಂಟ್ರೋಲ್‌ಗೆ ಸಾಕಷ್ಟು ಪ್ರಯತ್ನ ಮಾಡಿದರೂ ಏನು ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆ ಠಾಣಾಧಿಕಾರಿ ಜೆ.ಎಮ್ ಖಾಲಿಮಿರ್ಚಿ ಅವರು ಇದೀಗ ದೇವರ ಮೊರೆ ಹೋಗಿದ್ದಾರೆ. ಇದು ಪೊಲೀಸರೇ ಮೂಢನಂಬಿಕೆ, ಮೌಢ್ಯಕ್ಕೆ ಶರಣಾಗಿದ್ದು ಪರ ವಿರೋಧ ಚರ್ಚೆಗೆ ಆಸ್ಪದ ನೀಡಿದೆ.ಇದನ್ನೂ ಓದಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

  • ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯ (Hospital) ನರ್ಸ್ (Nurse) ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ನಗರದ ಪ್ರಕಾಶ್ ಜಾಧವ್ ಎಂಬಾತ ನರ್ಸ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಪ್ರಾಣ ಪಣಕ್ಕಿಟ್ಟು ಆಕೆ ಹೋರಾಡಿದ್ದಳು. ಆರೋಪಿಯ ಕೃತ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ್ದ ಖಡೇಬಜಾರ್ ಪೊಲೀಸರು(Police), ಪ್ರಕಾಶ್‍ನನ್ನು ಬಂಧಿಸಿದ್ದರು.

    ಆರೋಪಿ ಹೆಲ್ಮೆಟ್ ಧರಿಸಿಕೊಂಡು ಆಸ್ಪತ್ರೆಗೆ ಬಂದಿದ್ದ. ಬಳಿಕ ಪ್ಲಾಸ್ಟಿಕ್ ಕವರ್‍ನಲ್ಲಿ ತಂದಿದ್ದ ಮಚ್ಚಿನಿಂದ ನರ್ಸ್ ಮೇಲೆ ದಾಳಿ ನಡೆಸಿದ್ದ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಹೆದರಿ ಅಲ್ಲಿಂದ ಓಡಿದ್ದರು.

    ಆರೋಪಿ ಪ್ರಕಾಶ್ ಹಲ್ಲೆಗೊಳಗಾದ ನರ್ಸ್‍ನ 10ನೇ ತರಗತಿಯ ಸಹಪಾಠಿಯಾಗಿದ್ದ. ಕೆಲ ದಿನಗಳ ಹಿಂದೆ ಕುಟುಂಬಸ್ಥರನ್ನು ಆಕೆಯ ಮನೆಗೆ ಕರೆದುಕೊಂಡು ಹೋಗಿ ಮದುವೆ ಪ್ರಸ್ತಾಪ ಮಾಡಿದ್ದ. ಅಲ್ಲದೇ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದಕ್ಕೆ ಯುವತಿ ಒಪ್ಪಿರಲಿಲ್ಲ ಎಂದು ತನಿಖೆ ವೇಳೆ ತಿಳಿದು ಬಂದಿದೆ.