Tag: police

  • ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

    ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

    ಬೆಂಗಳೂರು: ನಗರದ (Bengaluru) ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು ನಡೆದಿವೆ. ಪೊಲೀಸರು ರಾತ್ರಿ ಪೂರ್ತಿ ನಿದ್ರೆ ಬಿಟ್ಟು 6 ಜನ ಅಪ್ರಾಪ್ತರ ಗ್ಯಾಂಗ್‍ನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಮಾದನಾಯಕನಹಳ್ಳಿ, ದೊಡ್ಡಬಳ್ಳಾಪುರ (Doddaballapura), ಸೂರ್ಯನಗರ, ನೆಲಮಂಗಲ (Nelamangala) ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ದರೋಡೆ ಪ್ರಕರಣಗಳು ನಡೆದಿದ್ದವು. ಈ ಗ್ಯಾಂಗ್ ಹಣ ಕೊಟ್ರೆ ಸುಮ್ಮನಾಗುತ್ತಿತ್ತು. ಹಣ ಕೊಡದಿದ್ದರೆ ಚಾಕು ಹಾಕಿ ಪರಾರಿಯಾಗುತ್ತಿದ್ದರು.

    ಈ ಅಪ್ರಾಪ್ತ ಆರೋಪಿಗಳು ರಾತ್ರಿ ಹೊತ್ತು ಮೂರು ಬೈಕ್‍ನಲ್ಲಿ ಸುತ್ತಾಡುತ್ತಿದ್ದರು. ಮೊದಲ ದಿನ ದೊಡ್ಡಬಳ್ಳಾಪುರ ಸುತ್ತಮುತ್ತ ದರೋಡೆ ಮಾಡಿ, ಎರಡನೇ ದಿನ ಮಾದನಾಯಕನಹಳ್ಳಿ, ನೆಲಮಂಗಲ ಭಾಗದಲ್ಲಿ ದರೋಡೆ ಮಾಡಿದ್ದರು. ಮೂರನೇ ದಿನ ಸೂರ್ಯನಗರ ಸುತ್ತಮುತ್ತ ದರೋಡೆ ಮಾಡಿದ್ದರು. ಹೀಗೆ ಬರೋಬ್ಬರಿ ಮೂರು ದಿನದಲ್ಲಿ 37 ಕಡೆ ಅಪ್ರಾಪ್ತರ ಗ್ಯಾಂಗ್ ದರೋಡೆ ಮಾಡಿತ್ತು. ಇದನ್ನೂ ಓದಿ: ಡ್ರಗ್ಸ್‌ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ

    ಆರೋಪಿಗಳು ಬೈಕ್, ಕಾರು ಹಾಗೂ ಲಾರಿಗಳನ್ನು ಅಡ್ಡ ಹಾಕಿ, ಚಾಕು ತೋರಿಸಿ ಮೊಬೈಲ್, ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್ ಒಬ್ಬರಿಗೆ ಚಾಕು ಇರಿದಿತ್ತು.

    ಸಿಸಿ ಟಿವಿ ಪರಿಶೀಲನೆ ವೇಳೆ ಒಂದೇ ತಂಡ ಈ ಕೃತ್ಯ ಎಸಗಿರುವುದು ಗೊತ್ತಾಗಿತ್ತು. ಇದೇ ಆಧಾರದ ಮೇಲೆ ಗ್ರಾಮಾಂತರ ಪೊಲೀಸರು ವಿಶೇಷ ತಂಡ ರಚಿಸಿದ್ದರು. ರಾತ್ರಿಯಿಡೀ ಪೊಲೀಸರು ಗಸ್ತು ತಿರುಗುತ್ತಿದ್ದಿದ್ದರಿಂದ ಗ್ಯಾಂಗ್ ನಗರಕ್ಕೆ ಎಂಟ್ರಿ ಕೊಟ್ಟಿದ್ದರು. ತಪಾಸಣೆ ವೇಳೆ ಬ್ಯಾಡರಹಳ್ಳಿ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಎಲ್ಲಾ ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

    ಗ್ಯಾಂಗ್‍ನಿಂದ 9 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಓರ್ವನಿಗೆ ಅಪರಾಧದ ಹಿನ್ನೆಲೆ ಇರುವುದು ಗೊತ್ತಾಗಿದೆ. ಇದನ್ನೂ ಓದಿ: Hassan | ಬಟ್ಟೆ ಆಫರ್ – ಖರೀದಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್

  • ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

    ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

    ದಾವಣಗೆರೆ: ನಗರದ (Davanagere) ದೇವಸ್ಥಾನವೊಂದರ ಮುಂದೆ ಅನ್ಯಕೋಮಿನ ಯುವಕನೊಬ್ಬ ತಲ್ವಾರ್ ಹಿಡಿದು ಓಡಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ದಾವಣಗೆರೆಯ ಮಟ್ಟಿಕಲ್‌ನಲ್ಲಿರುವ ಬಸವೇಶ್ವರ ದೇವಸ್ಥಾನದ (Temple) ಮುಂಭಾಗದ ರಸ್ತೆಯಲ್ಲಿ ಯುವಕ ತಲ್ವಾರ್‌ ಹಿಡಿದು ಓಡಾಡಿದ್ದಾನೆ. ಇದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವೀಡಿಯೋ ಆಧರಿಸಿ ಆರ್‌ಎಂಸಿ ಠಾಣೆ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್

    ಯುವಕ ಯಾವ ಕಾರಣಕ್ಕೆ ತಲ್ವಾರ್‌ ಹಿಡಿದು ಓಡಾಡಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೇಸ್ ದಾಖಲಾದರೂ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿಯನ್ನು ಬಂಧಿಸಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

  • ದಾವಣಗೆರೆ | ಪತ್ನಿಯ ಅಕ್ರಮ ಸಂಬಂಧಕ್ಕೆ ರೋಸಿ 20 ಬಾರಿ ಇರಿದು ಕೊಂದ ಪತಿ

    ದಾವಣಗೆರೆ | ಪತ್ನಿಯ ಅಕ್ರಮ ಸಂಬಂಧಕ್ಕೆ ರೋಸಿ 20 ಬಾರಿ ಇರಿದು ಕೊಂದ ಪತಿ

    – ಬೆಡ್‍ರೂಮ್‍ಲ್ಲಿ ಸಿಸಿ ಕ್ಯಾಮೆರಾ ಇಟ್ಟು ಸಾಕ್ಷಿ ಕಲೆ ಹಾಕಿದ್ದ ಹಂತಕ
    – ಡಿವೋರ್ಸ್ ಬಳಿಕ ಮಕ್ಕಳು ಅವಳ ಪಾಲಾಗ್ತಾರೆ ಅಂತ ಹತ್ಯೆ

    ದಾವಣಗೆರೆ: ಪತ್ನಿಯ (Wife) ಅನೈತಿಕ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದ ಘಟನೆ ದಾವಣಗೆರೆಯ (Davanagere) ಕಾಡಜ್ಜಿ ಗ್ರಾಮದಲ್ಲಿ ನಡೆದಿದೆ.

    ಕೊಲೆಗೈದ ಆರೋಪಿಯನ್ನು ಕಲೀಂವುಲ್ಲಾ ಎಂದು ಗುರುತಿಸಲಾಗಿದೆ. ಈತನಿಗೆ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಮದುವೆಯಾಗಿ ಇಬ್ಬರು ಮಕ್ಕಳು ಇದ್ದರೂ ಪತ್ನಿ ಬೇರೋಬ್ಬ ಪುರುಷನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳಂತೆ. ಈ ವಿಚಾರ ಪತಿಗೆ ಗೊತ್ತಾಗಿ ಹಿರಿಯರಿಗೆ ಹೇಳಿ ರಾಜಿ ಪಂಚಾಯಿತಿ ನಡೆಸಿದ್ದ. ಆದರೆ ಹಿರಿಯರು ಯಾರು ನಂಬಿರಲಿಲ್ಲ. ಇದನ್ನೂ ಓದಿ: ಗಾಜಿಯಾಬಾದ್‌ ಎನ್‌ಕೌಂಟರ್‌ – ಕಳ್ಳನ ಕಾಲುಮುರಿದು ಬಂಧಿಸಿದ ಮಹಿಳಾ ಪೊಲೀಸರ ತಂಡ

    ಇದೇ ಕಾರಣಕ್ಕೆ ರಹಸ್ಯವಾಗಿ ಬೆಡ್‍ರೂಮ್‍ನಲ್ಲಿ ಸಿಸಿ ಕ್ಯಾಮೆರಾ ಇರಿಸಿದ್ದ. ಬಳಿಕ ಬೇರೊಬ್ಬನೊಂದಿಗೆ ಪತ್ನಿ ಇದ್ದ ಖಾಸಗಿ ವೀಡಿಯೋವನ್ನು ಇಟ್ಟುಕೊಂಡು ಡಿವೋರ್ಸ್‍ಗೆ ಅರ್ಜಿ ಹಾಕಿದ್ದ. ಮಕ್ಕಳು ತನ್ನ ಬಳಿಯೇ ಇರಬೇಕು ಎಂದು ಮನವಿ ಮಾಡಿದ್ದ. ಹಿರಿಯರು ಒಂದು ಮಗು ಅವನ ಬಳಿ ಹಾಗೂ ಇನ್ನೊಂದು ಮಗು ಮಹಿಳೆಯ ಜೊತೆ ಇರಲಿ ಎಂದು ಹೇಳಿದ್ದರು. ಅದರಂತೆ ಬಾಲನ್ಯಾಯ ಮಂಡಳಿಗೆ ಮಕ್ಕಳನ್ನು ಕೌನ್ಸಿಲಿಂಗ್‍ಗೆ ಕರೆದಿದ್ದರು. ಇನ್ನೇನೂ ಕೌನ್ಸಿಲಿಂಗ್‍ಗೆ ಹೋಗಬೇಕು ಎನ್ನುವಷ್ಟರಲ್ಲಿ ಕಲೀಂವುಲ್ಲಾ ಪತ್ನಿಗೆ 20 ಬಾರಿ ಚಾಕು ಇರಿದಿದ್ದಾನೆ.

    ಬಿಡಿಸಲು ಬಂದ ಪತ್ನಿಯ ತಾಯಿಗೂ ಕೂಡ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಇಬ್ಬರನ್ನು ಬಡಾವಣೆ ಪೊಲೀಸರು ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ಫಲಿಸದೆ ಪತ್ನಿ ಸಾವಿಗೀಡಾಗಿದ್ದಾಳೆ. ಅತ್ತೆಗೆ ಚಿಕಿತ್ಸೆ ಮುಂದುವರಿದಿದೆ.

    ಕಲೀಂವುಲ್ಲಾ ಅತ್ತೆ ಪ್ರತಿಕ್ರಿಯಿಸಿ, ತನ್ನ ಮಗಳ ಮೇಲೆ ಆರೋಪಿ ಸುಖಾಸುಮ್ಮನೆ ಅನುಮಾನ ಪಡುತ್ತಿದ್ದ. ಅವನ ಸ್ನೇಹಿತನನ್ನು ಬಿಟ್ಟು ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿ, ವೀಡಿಯೋ ಮಾಡಿಕೊಂಡು ಹೆದರಿಸುತ್ತಿದ್ದ ಎಂದು ಮಗಳನ್ನು ಸಮರ್ಥಿಸಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – 33 ತುಂಡುಗಳು ವಶ, ಆರೋಪಿ ಅರೆಸ್ಟ್

  • ಕೊಪ್ಪಳ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ – 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ

    ಕೊಪ್ಪಳ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ – 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ

    ಕೊಪ್ಪಳ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ (Annabhagya) ಯೋಜನೆ ಭ್ರಷ್ಟರ ಪಾಲಾಗುತ್ತಿದೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ ಮಾಡಲು ಮುಂದಾದ ಲಾರಿಯನ್ನು ಕೊಪ್ಪಳದ ಮುನಿರಾಬಾದ್ ಪೊಲೀಸರು (Munirabad Police) ವಶಕ್ಕೆ ಪಡೆದಿದ್ದಾರೆ.

    ಕಳೆದ 16 ರಂದು ಬೆಳಗಿನ ಜಾವ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ಲಾರಿಯಲ್ಲಿರುವ ಅಕ್ಕಿ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬುದನ್ನು ಮುನಿರಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನವರಾತ್ರಿಯಿಂದಲೇ ಹೊಸ GST ದರ ಜಾರಿ; ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ? – ಇಲ್ಲಿದೆ ಪೂರ್ಣ ಪಟ್ಟಿ

    ಇನ್ನು ಆಹಾರ ಇಲಾಖೆಯ ಅಧಿಕಾರಿಗಳು ಲಾರಿಯಲ್ಲಿರೋ ಅಕ್ಕಿಯ ಲೆಕ್ಕ ಕೊಡುವಾಗ 8 ಟನ್ ಎಂದು ತೋರಿಸಿ ಪೊಲೀಸ್ ಇಲಾಖೆಗೆ ಮಂಕು ಬೂದಿ ಎರಚಲು ಮುಂದಾಗಿದ್ದಾರೆ. 16 ಚಕ್ರದ ವಾಹನದ ಸಾಮರ್ಥ್ಯ 35 ಟನ್, ಪೂರ್ತಿ ಲೋಡೆಡ್ ಲಾರಿಯಲ್ಲಿ 8 ಟನ್ ಮಾತ್ರ ಇದೆ ಎಂದು ಪೊಲೀಸ್ ಇಲಾಖೆಗೆ ಆಹಾರ ನಿರೀಕ್ಷಕ ರವಿಚಂದ್ರ ಲೆಕ್ಕ ಕೊಟ್ಟಿದ್ದಾರೆ.

    ಸೆಪ್ಟಂಬರ್ 16 ರಂದು ವಾಹನ ಸಿಕ್ಕರೂ ಮೂರು ದಿನಗಳು ಕಳೆದ್ರು, ಈ ಅಕ್ಕಿಯನ್ನ ಸೀಜ್ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.

    ವಶಕ್ಕೆ ಪಡೆದ ಲಾರಿಯಲ್ಲಿದ್ದ ಅಕ್ಕಿ ಪ್ರಮಾಣ ಎಷ್ಟು, ಲಾರಿ ಚಾಲಕ, ಮಾಲೀಕ ಯಾರು? ಎಲ್ಲಿಗೆ ಸಾಗಾಟ ಮಾಡಲಾಗ್ತಿತ್ತು? ಎಲ್ಲವನ್ನೂ ವರದಿ ಮಾಡಿ ಪೊಲೀಸ್ ಇಲಾಖೆಗೆ ದೂರು ನೀಡಿ, ಎಫ್‌ಐಆರ್ ದಾಖಲಿಸಬೇಕಾಗಿರೋದು ಆಹಾರ ಇಲಾಖೆ ಅಧಿಕಾರಿಗಳ ಕೆಲಸವಾಗಿದೆ. ಆದ್ರೆ ಕಳೆದ ಮೂರು ದಿನಗಳಿಂದ ಆಹಾರ ಇಲಾಖೆ ಅಧಿಕಾರಿಗಳು, ಈ ಯಾವುದೇ ಕೆಲಸ ಮಾಡಿಲ್ಲ. ಲಾರಿಯಲ್ಲಿರುವ ಅಕ್ಕಿಯ ಪ್ರಮಾಣ ಕೂಡಾ ಗೊತ್ತಿಲ್ಲ. ಕೇವಲ 8 ಟನ್ ಅಕ್ಕಿ ಎಂದು ನಾಮಕಾವಸ್ಥೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

  • ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

    ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ

    ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ (California) ಸಾಂತಾ ಕ್ಲಾರಾದಲ್ಲಿ (Santa Clara) ನಡೆದಿದೆ.

    ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು.ಇದನ್ನೂ ಓದಿ: iPhone 17 ಖರೀದಿಗೆ ನೂಕುನುಗ್ಗಲು – ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು

    ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ 6:30ರ ಸುಮಾರಿಗೆ 911 ಸಂಖ್ಯೆಗೆ ಕರೆಯೊಂದು ಬಂದಿತ್ತು. ಸಾಂತಾ ಕ್ಲಾರಾದ ನಿವಾಸವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಹತ್ಯೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಮೃತ ನಿಜಾಮುದ್ದೀನ್ ಚಾಕು ಹಿಡಿದು ಆತನ ರೂಮ್‌ಮೇಟ್‌ಗೆ ಬೆದರಿಕೆ ಹಾಕುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಗುಂಡಿನ ದಾಳಿ ನಡೆಸಿದರು. ಕೂಡಲೇ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನೂ ಮೃತನ ರೂಮ್‌ಮೇಟ್‌ಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಸದ್ಯ ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ನಿಜಾಮುದ್ದೀನ್ ಸಾವನ್ನಪ್ಪಿದ ಎರಡು ವಾರಗಳ ಬಳಿಕ ಆತನ ಕುಟುಂಬಸ್ಥರಿಗೆ ಮಾಹಿತಿ ತಿಳಿದಿದ್ದು, ನಾನು ನನ್ನ ಮಗನಿಗೆ ಕರೆ ಮಾಡಿದೆ. ಆದರೆ ಮೊಬೈಲ್ ಸ್ವಿಚ್ಢ್ ಆಫ್ ಬಂತು. ಬಳಿಕ ಆತನ ಸ್ನೇಹಿತ ನಿಜಾಮುದ್ದೀನ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾನೆ ಎಂದು ಮೃತನ ಪೋಷಕರು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ನಿಜಾಮುದ್ದೀನ್ ಸ್ನೇಹಿತರು ಮಾಹಿತಿ ನೀಡಿದ್ದು, ನಿಜಾಮುದ್ದೀನ್‌ಗೆ ಆತನ ಕಂಪನಿಯಲ್ಲಿ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಕಳೆದ 6 ತಿಂಗಳ ಹಿಂದೆಯೇ ನಿಜಾಮುದ್ದೀನ್‌ ಅನ್ನು ಕೆಲಸದಿಂದ ತೆಗೆದಿದ್ದರು. ಜೊತೆಗೆ ಆತನ ಓರ್ವ ರೂಮ್‌ಮೇಟ್‌ ಕೂಡ ತುಂಬಾ ಪೀಡಿಸುತ್ತಿದ್ದ ಎಂದು ಹೇಳಿಕೊಂಡಿದ್ದಾರೆ.

    ಸದ್ಯ ನಿಜಾಮುದ್ದೀನ್ ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಕೋರಿ ಸಾಮಾಜಿಕ ಕಾರ್ಯಕರ್ತ ಮತ್ತು ಮಜ್ಲಿಸ್ ಬಚಾವೋ ತೆಹ್ರೀಕ್ ಮುಖ್ಯಸ್ಥರು ಅಮ್ಜೇದ್ ಉಲ್ಲಾ ಖಾನ್ ಅವರು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.ಇದನ್ನೂ ಓದಿ: 15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ

  • ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಬೆಂಗಳೂರು: ಬಿಗ್‌ ಬಾಸ್ (Bigg Boss) ರಂಜಿತ್ (Ranjith) ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ (Amruthahalli Police Station) ದೂರು ದಾಖಲಾಗಿದೆ.

    ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು ಪೊಲೀಸರು ಎನ್‌ಸಿಆರ್‌ (NCR) ದಾಖಲಿಸಿದ್ದಾರೆ.  ಇದನ್ನೂ ಓದಿ:  ಚಿಕ್ಕೋಡಿ | ಬಸ್ ಇಳಿಯುತ್ತಿದ್ದಂತೆ ಅಟ್ಯಾಕ್ – ಯುವಕನ ಕೊಚ್ಚಿ ಕೊಲೆ

     

    ಏನಿದು ಗಲಾಟೆ?
    2018 ರಿಂದ ಅಮೃತಹಳ್ಳಿಯ ಫ್ಲ್ಯಾಟ್‌ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, 2025 ರಿಂದ ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್‌ ವಾಸವಿದ್ದರು. ಈಗ ಈ ಮನೆ ನನ್ನದು ಎಂದು ಅಕ್ಕ ತಮ್ಮನ ನಡುವೆ ಗಲಾಟೆ ನಡೆದಿದೆ. ರಂಜಿತ್ , ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿ ಒಬ್ಬರಿಗೊಬ್ಬರು ಹಲ್ಲೆ ನಡೆಸಿದ್ದಾರೆ.

    ಮನೆ ಬಿಟ್ಟು ಹೋಗದೆ ಈ ಮನೆ ನನ್ನದು ಎಂಧು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್‌ ದೂರು ನೀಡಿದ್ದಾರೆ. ದೂರಿಗೆ ಸಾಕ್ಷ್ಯವಾಗಿ ಮನೆಯಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಳ್ಳುವ ವೀಡಿಯೋವನ್ನು ನೀಡಿದ್ದಾರೆ.

    ದೂರು ದಾಖಲಾದ ಬೆನ್ನಲ್ಲೇ ರಂಜಿತ್‌ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೊಮ್ಮೆ ಗಲಾಟೆ ಮಾಡಿಕೊಳ್ಳಬಾರದು ಎಂದು ಹೇಳಿ ನ್ಯಾಯಾಲಯದಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ.

  • ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi )ವಿರುದ್ದ ವಿಶೇಷ ತನಿಖಾ ತಂಡ (SIT) ಪ್ರಕರಣ ದಾಖಲಿಸಿದೆ. ಎಸ್‌ಪಿ ಸೈಮನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ (Arms Act )ಅಡಿ ಪ್ರಕರಣ ದಾಖಲಿಸಿದ್ದಾರೆ.

    ಆಗಸ್ಟ್ 26 ರಂದು ಚಿನ್ನಯ್ಯನನ್ನು ತಿಮರೋಡಿಯ ನಿವಾಸಕ್ಕೆ ಕರೆದುಕೊಂಡು ಬಂದು ಎಸ್‌ಐಟಿ ಶೋಧಕಾರ್ಯ ನಡೆಸಿತ್ತು. ತಿಮರೋಡಿ ಮನೆಯಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸುವ ಸಂದರ್ಭ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿತ್ತು.  ಇದನ್ನೂ ಓದಿ:  ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    25.5 ಇಂಚು ಉದ್ದದ ಮರದ ಹಿಡಿಕೆಯುಳ್ಳ 2 ತಲವಾರು, ಒಂದು ಬಂದೂಕು ಸೇರಿದಂತೆ 44 ಸ್ವತ್ತುಗಳನ್ನ ಎಸ್‌ಐಟಿ ವಶಪಡಿಸಿಕೊಂಡಿತ್ತು. ಈಗ ಆರ್ಮ್ಸ್ ಆಕ್ಟ್ 1959 ಸೆಕ್ಷನ್ 25(1),25 (1-A) ,24(1-B)(A)) ಅಡಿಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದೆ.
  • ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಅರೆಸ್ಟ್

    ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಅರೆಸ್ಟ್

    ಭುವನೇಶ್ವರ: ಒಡಿಶಾದ (Odisha) ಪುರಿಯ ಬೀಚ್ ಬಳಿ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನ ಎದುರಲ್ಲೇ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಹೀನ ಕೃತ್ಯ ನಡೆದಿದೆ.

    ಯುವತಿಯು ಪ್ರಿಯಕರನೊಂದಿಗೆ ಬಲಿಹರ್ಚಂಡಿ ದೇವಾಲಯದ (Baliharichandi Temple) ಬಳಿ ಕುಳಿತು ಕಾಲ ಕಳೆಯುತ್ತಿದ್ದರು. ಇದನ್ನು ಗಮನಿಸಿದ ಮೂವರು ಆರೋಪಿಗಳು ಅವರ ವೀಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಬಳಿಕ ಅವರ ಬಳಿ ಬಂದು ವೀಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಹಣ ಕೊಡಲು ನಿರಾಕರಿಸಿದ ವೇಳೆ ಆರೋಪಿಗಳು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಆತನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಎದುರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

    ಯುವತಿಯು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಮೊಬೈಲ್‌ನಲ್ಲಿದ್ದ ವೀಡಿಯೋವನ್ನೂ ಡಿಲೀಟ್ ಮಾಡಿದ್ದಾರೆ.

  • ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್

    ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್

    ರಾಯಚೂರು: ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

    ಮಂಗಳವಾರ (ಸೆ.16) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ ಮಾರ್ಗದಲ್ಲಿ ಸಾವಿರಾರು ಪೊಲೀಸರಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಜಾಗೃತಿ ಜಾಥಾ ನಡೆಸಿದರು.ಇದನ್ನೂ ಓದಿ: ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು – ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮ

    ಗಣೇಶ ಮೆರವಣಿಗೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.

    ಸಂಜೆ ಗಣೇಶ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagouda Patil Yatnal) ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಇದೇ ವೇಳೆ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಯತ್ನಾಳ್ ಭಾಷಣ ಮಾಡಲಿದ್ದಾರೆ.ಇದನ್ನೂ ಓದಿ: ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ

  • ದಾವಣಗೆರೆ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ – ಮೂವರು ಅಂತರರಾಜ್ಯ ಕಳ್ಳರು ಅರೆಸ್ಟ್

    ದಾವಣಗೆರೆ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ – ಮೂವರು ಅಂತರರಾಜ್ಯ ಕಳ್ಳರು ಅರೆಸ್ಟ್

    ದಾವಣಗೆರೆ: ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Jewellery) ಹಾಗೂ ನಗದು ದೋಚಿದ್ದ ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ರಾಜಸ್ಥಾನ (Rajasthan) ಮೂಲದ ಶ್ಯಾಮ್ ಸಿಂಗ್ (28) ಕವರ್ ಪಾಲ್(24) ಪ್ರತಾಪ್ ಸಿಂಗ್ (33) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 15.37 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.

    ಆರೋಪಿಗಳು ಆ.30ರಂದು‌ ವಿದ್ಯಾನಗರ ನಿವಾಸಿ ರಂಗನಾಥ ಎಂಬವರ ಮನೆಯ ಇಂಟರ್ ಲಾಕ್ ಒಡೆದು ನುಗ್ಗಿ ಚಿನ್ನಾಭರಣ, ಬೆಳ್ಳಿ ಆಭರಣ ದೋಚಿ ಪರಾರಿಯಾಗಿದ್ದರು. ರಂಗನಾಥ ಅವರು ಸೆ.1 ರಂದು ಬೆಂಗಳೂರಿಂದ ಮನೆಗೆ ವಾಪಸ್ ಆದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದರು. ಇದನ್ನೂ ಓದಿ: ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್

    ಆರೋಪಿಗಳ ಪತ್ತೆಗೆ ವಿದ್ಯಾನಗರ ಠಾಣೆ ಸಿಪಿಐ ಶಿಲ್ಪಾ ವೈ.ಎಸ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಗುಜರಾತ್‍ನ ಸೂರತ್ ಸಿಟಿ ಸಾರೋಲಿ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 12.97 ಲಕ್ಷ ರೂ. ಮೌಲ್ಯದ 162.150 ಗ್ರಾಂ ತೂಕದ ಬಂಗಾರದ ಆಭರಣಗಳು, 1.08 ಲಕ್ಷ ಮೌಲ್ಯದ 1350 ಗ್ರಾಂ ತೂಕದ ಬೆಳ್ಳಿ ವಸ್ತುಗಳು, 95 ನಗದು, 34 ಸಾವಿರ ರೂ. ಬೆಲೆಯ 6 ಮೊಬೈಲ್, 3 ಸಾವಿರ ಬೆಲೆಯ ಎರಡು ವಾಚ್‍ಗಳನ್ನು ಜಪ್ತಿ ಮಾಡಲಾಗಿದೆ.

    ಆರೋಪಿಗಳ ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ನಗರ ಠಾಣೆ, ಹಳಿಯಾಳ ಠಾಣೆ, ಧಾರವಾಡ, ತುಮಕೂರು ಬಡಾವಣೆ, ತಿಪಟೂರು, ಮದ್ಯಪ್ರದೇಶದ ಭೂಪಾಲ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ವೇಳೆ ಗೊತ್ತಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ