Tag: police

  • ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!

    ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!

    – ಬೆಟ್ಟ ಹತ್ತುವಾಗ ಯುವತಿಗೆ ಕಾಲು ಮುರಿತ

    ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ (Devirammana Betta) ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ (Police) ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.

    ಬೇಲೂರು ತಾಲೂಕಿನ ಎಂಸಂದಿ ಗ್ರಾಮದ ಸಿಂಧು (25) ಎಂಬ ಯುವತಿ, ಮಾಣಿಕ್ಯಧಾರಾ ಕಡೆಯಿಂದ ಬೆಟ್ಟ ಹತ್ತಿ ದೇವಿ ದರ್ಶನ ಪಡೆದು ಇಳಿಯುತ್ತಿದ್ದಳು. ಈ ವೇಳೆ ಯುವತಿಗೆ ಪ್ರಜ್ಞೆ ತಪ್ಪಿದೆ. ಯುವತಿಯನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಸಾವಿರಾರು ಭಕ್ತರು ಮಳೆ, ಜಾರಿಕೆ ಮಧ್ಯೆಯೂ ಹಗ್ಗ ಹಿಡಿದು ದೇವೀರಮ್ಮನ ಬೆಟ್ಟವನ್ನು ಹತ್ತುತ್ತಿದ್ದಾರೆ. ಈ ಬಾರಿ ಬೆಟ್ಟ ಹತ್ತುವಾಗ ಭಕ್ತರಿಗೆ ನಾನಾ ರೀತಿಯ ತೊಂದರೆ ಎದುರಾಗುತ್ತಿದೆ. ಬೆಂಗಳೂರು ಮೂಲದ ದಿವ್ಯಾ (30) ಎಂಬ ಯುವತಿಗೆ ಕಾಲು ಮುರಿತವಾಗಿದೆ. ಮಂಗಳೂರಿನ ಜಯಮ್ಮ (55) ಎಂಬವರು ಲೋ ಬಿಪಿಯಿಂದ ಬೆಟ್ಟದ ಮಧ್ಯೆದಲ್ಲೇ ಸುಸ್ತಾಗಿ ಕುಳಿತಿದ್ದಾರೆ. ತರೀಕೆರೆ ಮೂಲದ ವೇಣು ಎಂಬ ಯುವಕ ಜಾರಿ ಬಿದ್ದು ಆತನ ತಲೆಗೆ ಗಾಯವಾಗಿದೆ.

    ಎಲ್ಲರನ್ನೂ ಪೊಲೀಸರು ಸುರಕ್ಷಿತವಾಗಿ ಹೊತ್ತು ತಂದಿದ್ದಾರೆ. ಬಳಿಕ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ.

  • ಲಾರೆನ್ಸ್ ಬಿಷ್ಣೋಯ್‌ | ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಟಿವಿಗೆ ಸಂದರ್ಶನ – 7 ಪೊಲೀಸರು ಸಸ್ಪೆಂಡ್‌

    ಲಾರೆನ್ಸ್ ಬಿಷ್ಣೋಯ್‌ | ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಟಿವಿಗೆ ಸಂದರ್ಶನ – 7 ಪೊಲೀಸರು ಸಸ್ಪೆಂಡ್‌

    ನವದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ (Lawrence Bishnoi) 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಪಂಜಾಬ್ ಪೊಲೀಸರನ್ನು (Police) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

    ಅಮಾನತುಗೊಂಡವರಲ್ಲಿ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳಾದ ಗುರ್ಶರ್ ಸಿಂಗ್ ಮತ್ತು ಸಮ್ಮರ್ ವನೀತ್, ಸಬ್-ಇನ್‌ಸ್ಪೆಕ್ಟರ್ ರೀನಾ, ಸಿಐಎ, ಖರಾರ್ (ಎಸ್‌ಎಎಸ್ ನಗರ), ಸಬ್-ಇನ್‌ಸ್ಪೆಕ್ಟರ್ (ಎಲ್‌ಆರ್) ಜಗತ್ಪಾಲ್ ಜಂಗು, ಎಜಿಟಿಎಫ್, ಸಬ್-ಇನ್‌ಸ್ಪೆಕ್ಟರ್ ಶಗಂಜಿತ್ ಸಿಂಗ್ (ಆಗಿನ ಕರ್ತವ್ಯ ಅಧಿಕಾರಿ), ಮತ್ತು ಹೆಡ್ ಕಾನ್‌ಸ್ಟೆಬಲ್ ಓಂ ಪ್ರಕಾಶ್ ಸೇರಿದ್ದಾರೆ. ಅಧಿಕಾರಿಗಳು ಅಜಾಗರೂಕತೆ ಮತ್ತು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಈ ಕ್ರಮಕೈಗೊಳ್ಳಲಾಗಿದೆ.

    ಲಾರೆನ್ಸ್ ಬಿಷ್ಣೋಯ್ ಸೆ.2022 ರಲ್ಲಿ ಖರಾರ್ ಸಿಐಎ ವಶದಲ್ಲಿದ್ದ. ಆತನ ಸಂದರ್ಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿತ್ತು. ಈ ಪ್ರಕರಣದ ತನಿಖೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತನಿಖೆ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂದರ್ಶನ ನಡೆಸಿರುವುದು ಬೆಳಕಿಗೆ ಬಂದಿತ್ತು.

    ಲಾರೆನ್ಸ್ ಬಿಷ್ಣೋಯ್ ಜೈಪುರ ಸೆಂಟ್ರಲ್ ಜೈಲಿನಲ್ಲಿ ಸಂದರ್ಶಿಸಲಾಗಿದೆ ಎಂಬುದಕ್ಕೆ ವಿಶೇಷ ತನಿಖಾ ತಂಡವು ಪುರಾವೆಗಳನ್ನು ಸಲ್ಲಿಸಿತ್ತು. ತನಿಖಾ ವರದಿಯ ಆಧಾರದ ಮೇಲೆ ಶುಕ್ರವಾರ ರಾಜ್ಯ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

    ಇದರ ನಡುವೆ ಮೊಹಾಲಿ ವಿದ್ಯಾರ್ಥಿಯೊಬ್ಬನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ 13 ವರ್ಷ ಹಳೆಯ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್‌ಗೆ ಶುಕ್ರವಾರ ರಿಲೀಫ್ ಸಿಕ್ಕಿದೆ.

  • ಭಾವಿ ಪತಿ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು

    ಭಾವಿ ಪತಿ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು

    ಭುವನೇಶ್ವರ: 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದ (Odisha) ನಯಾಗಢದಲ್ಲಿ ನಡೆದಿದೆ.

    ಘಟನೆ ಅ.20 ರಂದು ನಡೆದಿದ್ದು, ಸಂತ್ರಸ್ತೆ ಫತೇಗಢ ಪೊಲೀಸ್ (Police) ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆಕೆ ತನ್ನ ಭಾವಿ ಪತಿ ಜೊತೆಗೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

    ಪಿತಾಖೈ ಅರಣ್ಯದ ಬಳಿ ಇಬ್ಬರನ್ನು ಮೂವರು ಅಪರಿಚಿತರು ಅಡ್ಡಗಟ್ಟಿ ಬಲವಂತವಾಗಿ ಕಾಡಿಗೆ ಕರೆದೊಯ್ದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಅತ್ಯಾಚಾರ ಎಸಗುವುದನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ ಕೇಸ್‌ – ಪಾಕ್ ಡ್ರೋನ್‌ಗಳ ಮೂಲಕ ಗನ್‌ ಪೂರೈಕೆ?

  • ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

    ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ!

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ತಿರುಪತಿಯ (Tirupati) 3 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ (Bomb Threats) ಬಂದಿದೆ. ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

    ಈ ಬಗ್ಗೆ ಹೊಟೆಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು, ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್‌ನೊಂದಿಗೆ ಹೊಟೇಲ್‌ಗಳಲ್ಲಿ ಶೋಧ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ವಿ.ಸೋಮಣ್ಣಗೆ ಬಿಗ್ ರಿಲೀಫ್ – ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣ ವಜಾ

    ಬೆದರಿಕೆ ಇಮೇಲ್ ಕೇವಲ ವದಂತಿ ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದು ಕೇವಲ ಜನರನ್ನು ಆತಂಕಕ್ಕೊಳಪಡಿಸಲು ಈ ರೀತಿ ಮಾಡಿದ್ದಾರೆ. ಪೊಲೀಸರು ಈಗ ಇಮೇಲ್ ಕಳುಹಿಸಿರುವವರ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಅಲ್ಲದೇ ಹೋಟೆಲ್‌ಗಳಿಗೆ ಭೇಟಿಕೊಟ್ಟವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ಇಮೇಲ್‌ನಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಅರೆಸ್ಟ್‌ ಆದ ಮಾದಕವಸ್ತುಗಳ ಜಾಲದ ಕಿಂಗ್‌ಪಿನ್ ಜಾಫರ್ ಸಿದ್ದಿಕ್ ಹೆಸರು ಇದೆ ಎಂದು ಹೇಳಲಾಗಿದೆ.

    ಕಳೆದ 15 ದಿನಗಳಿಂದ ವಿಶ್ವದ ಪ್ರಸಿದ್ಧ ವಿಮಾನಯಾನ ಸಂಸ್ಥೆಗಳ ವಿಮಾನಗಳಿಗೂ ಬಾಂಬ್ ಬೆದರಿಕೆಗಳು ಬಂದಿವೆ. ಶಾಲಾ-ಕಾಲೇಜುಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿವೆ. ಹೀಗಾಗಿ ಇಂತಹ ಸಂದೇಶಗಳನ್ನು ಕಳುಹಿಸುತ್ತಿರುವ ಜನರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ ಕೇಸ್‌ – ಪಾಕ್ ಡ್ರೋನ್‌ಗಳ ಮೂಲಕ ಗನ್‌ ಪೂರೈಕೆ?

  • ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು – ಚಾಲಕ‌  ಪೊಲೀಸರ ವಶಕ್ಕೆ

    ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು – ಚಾಲಕ‌ ಪೊಲೀಸರ ವಶಕ್ಕೆ

    ಶಿವಮೊಗ್ಗ: ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿ ಒಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದ್ದು, ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

    ನಗರದ ಸಹ್ಯಾದ್ರಿ ಕಾಲೇಜು ಬಳಿ ಸಂಚಾರ ಠಾಣೆ ಪೊಲೀಸರು ವಾಹನ ತಡೆದು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್ ರಸ್ತೆಯಲ್ಲಿ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: NVIDIA ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್‌ ಹುವಾಂಗ್‌ ಚಪ್ಪಾಳೆ

    ಬಿ.ಹೆಚ್ ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೇ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ – ಶಕ್ತಿದೇವತೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

    ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ನಾಗಮಂಗಲದಲ್ಲಿ ಕೋಟೆ ವಿದ್ಯಾಗಣಪತಿ ವಿಸರ್ಜನೆ – ಕೋಮು ಗಲಭೆ ನಡೆದ ಸ್ಥಳದಲ್ಲೇ ಇಂದು ಬೃಹತ್ ಶೋಭಾಯಾತ್ರೆ

    ಕಾರು ಚಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಕಾರು ಚಾಲಕನನ್ನು ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು

  • ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು

    ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು

    ಬೆಳಗಾವಿ: ಮಕ್ಕಳ ಕಳ್ಳರ (Child Theft) ಮೇಲೆ ಅಥಣಿ ಪೋಲಿಸರು (Athani Police) ಫೈರಿಂಗ್ (Firing) ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.

    ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ (Maharashtra Border) ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಓರ್ವ ಆರೋಪಿಯ ಎಡಗಾಲಿಗೆ ಗುಂಡೇಟು ಹೊಡೆದು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಗಾಯಾಳುವನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಗುರುವಾರ ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ಮಕ್ಕಳನ್ನು ಅಪಹರಿಸಿ ಪರಾರಿಯಾಗಿದ್ದರು. ಇದನ್ನೂ ಓದಿ: ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ..

    ಪೊಲೀಸರು ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಆರೋಪಿ ಸಂಬಾಜಿ ರಾವಸಾಬ ಕಾಂಬಳೆಯ ಎಡಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಈ ಕಾರ್ಯಾಚರಣೆಯಲ್ಲಿ ಪೊಲೀಸ್‌ ಸಿಬ್ಬಂದಿಯಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಗಾಯಗೊಂಡಿದ್ದು ಅವರನ್ನು ಅಥಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

     

  • ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

    ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

    ಶಿವಮೊಗ್ಗ: ವಾಹನ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ (Police) ಸಿಬ್ಬಂದಿಯೊಬ್ಬರನ್ನು ಕಾರಿನ (Car) ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ನಗರದಲ್ಲಿ (Shivamogga) ನಡೆದಿದೆ.

    ನಗರದ ಸಹ್ಯಾದ್ರಿ ಕಾಲೇಜಿನ ಬಳಿ ಪೂರ್ವ ಸಂಚಾರ ಠಾಣೆಯ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ಬಳಿಕ ಕಾರನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೇ ಮುಂದೆ ಚಲಾಯಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ. ಇದನ್ನೂ ಓದಿ: ಡಿಜೆ ರಿಪೇರಿಗೆ ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ!

    ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೇ ಸಹ್ಯಾದ್ರಿ ಕಾಲೇಜು ಗೇಟ್‍ನಿಂದ ಮತ್ತೂರು ರಸ್ತೆಯ ವರೆಗೂ ಸಾಗಿದ್ದಾನೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೆಜಿಗೂ ಅಧಿಕ ಚಿನ್ನ ಜಪ್ತಿ – ಇಬ್ಬರು ಪ್ರಯಾಣಿಕರು ಅರೆಸ್ಟ್‌

  • ಡಿಜೆ ರಿಪೇರಿಗೆ ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ!

    ಡಿಜೆ ರಿಪೇರಿಗೆ ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ!

    ನವದೆಹಲಿ: ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾದ ಸುಮಾರು ಮೂರು ವಾರಗಳ ನಂತರ, ಆಕೆಯ ಮಗ ಮತ್ತು ಆತನ ಇಬ್ಬರು ಸ್ನೇಹಿತರನ್ನು ಕೊಲೆ ಆರೋಪದ ಮೇಲೆ ಪೊಲೀಸರು (Police) ಬಂಧಿಸಿದ್ದಾರೆ.

    ಹತ್ಯೆಗೀಡಾದ (Murder) ಮಹಿಳೆಯನ್ನು ಸಂಗೀತಾ ತ್ಯಾಗಿ (47) ಎಂದು ಗುರುತಿಸಲಾಗಿದೆ. ಮಹಿಳೆಯ ಮೃತದೇಹ ಅ.4 ರಂದು ಬೆಳಿಗ್ಗೆ ಗಾಜಿಯಾಬಾದ್‌ನ ಟ್ರೋನಿಕಾ ಸಿಟಿ ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಾದ ಮಹಿಳೆಯ ಪುತ್ರ ಸುಧೀರ್‌ ಹಾಗೂ ಆತನ ಇಬ್ಬರು ಸ್ನೇಹಿತರಾದ ಅಂಕಿತ್ ಮತ್ತು ಸಚಿನ್ ಎಂಬವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ, ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಸೇರಿ ಮತ್ತೆ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ

    ಸುಧೀರ್ ಡಿಜೆ ಮಿಕ್ಸರ್ ರಿಪೇರಿ ಮಾಡಲು ತಾಯಿಯ ಬಳಿ 20,000 ರೂ. ಹಣ ಕೇಳಿದ್ದ. ಆದರೆ ಮಹಿಳೆ ಹಣ ನೀಡಲು ನಿರಾಕರಿಸಿದ್ದಳು. ಇದೇ ಕಾರಣಕ್ಕೆ ಆಕೆಯ ಮಗ ಮತ್ತು ಆತನ ಸ್ನೇಹಿತರು ಸೇರಿಕೊಂಡು ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆಯಾದ ಸಂಗೀತಾರ ಪುತ್ರ ಸುಧೀರ್ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆತ ಮದ್ಯ ವ್ಯಸನಿಯಾಗಿದ್ದ. ಆತ ಸಮಾರಂಭಗಳಲ್ಲಿ ಡಿಜೆ ನಿರ್ವಾಕನಾಗಿ ಕೆಲಸ ಮಾಡುತ್ತಿದ್ದ. ಆತನ ತಾಯಿ ಸಣ್ಣ ಬಟ್ಟೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಅ.3ರ ರಾತ್ರಿ ಸಂಗೀತಾ ಅವರನ್ನು ಬೈಕ್‌ನಲ್ಲಿ ಹತ್ತಿಸಿಕೊಂಡು ಗೆಳೆಯರಾದ ಅಂಕಿತ್ ಹಾಗೂ ಸಚಿನ್ ಕಾಯುತ್ತಿದ್ದ ಜಾಗಕ್ಕೆ ಸುಧೀರ್ ತೆರಳಿದ್ದ. ಅಲ್ಲಿ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದರು. ಬಳಿಕ ಟ್ರೋನಿಕಾ ಸಿಟಿ ಪ್ರದೇಶದಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ಆರೋಪಿಗಳ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವು

  • ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್‌ ಸಿಬ್ಬಂದಿಗೆ ಗಾಯ

    ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್‌ ಸಿಬ್ಬಂದಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲಾ ನ್ಯಾಯಾಲಯದಲ್ಲಿ (Court) ಸಾಕ್ಷಿಗಾಗಿ ತಂದಿದ್ದ ಗ್ರೆನೇಡ್ ಸ್ಫೋಟಗೊಂಡು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದುಅಧಿಕಾರಿಗಳು ತಿಳಿಸಿದ್ದಾರೆ.

    ಬಾರಾಮುಲ್ಲಾ ಪಟ್ಟಣದ ನ್ಯಾಯಾಲಯದ ಸಾಕ್ಷ್ಯ ಕೊಠಡಿ ಒಳಗೆ ಪ್ರಕರಣ ಒಂದರ ಸಾಕ್ಷ್ಯವಾಗಿ ಗ್ರೆನೇಡ್ ಸಂಗ್ರಹಿಸಿಲಾಗಿತ್ತು. ಅದು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಧ್ಯಾಹ್ನ 1:5ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೋಲೀಸ್‌ ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋರ್ಟ್‌ ಬಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯಾವುದೇ ವದಂತಿಗಳಿಗೂ ಕಿವಿಗೊಡದಂತೆ ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

  • ಹಬ್ಬಕ್ಕೆ ಬಂದಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು?

    ಹಬ್ಬಕ್ಕೆ ಬಂದಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು?

    ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾದ ಘಟನೆ ಜಿಲ್ಲೆಯ (Chikkamagaluru) ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

    ಮಂಡ್ಯದ (Mandya) ಮದ್ದೂರೂ ಮೂಲದ ಪುನೀತ್ (23) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ಪುನೀತ್ ಸಂಬಂಧಿಕರ ಮನೆಗೆ ಹಬ್ಬಕ್ಕೆ ಬಂದಿದ್ದ. ಈ ವೇಳೆ ಮತ್ತೋರ್ವ ಯುವಕನ ಜೊತೆ ಕೆರೆಯಲ್ಲಿ ಈಜಲು ತೆರಳಿದ್ದ. ಆದರೆ ಕೆರೆಯಿಂದ ಓರ್ವ ಯುವಕ ಮಾತ್ರ ಮೇಲೆ ಬಂದಿದ್ದು, ಪುನೀತ್ ನಾಪತ್ತೆಯಾಗಿದ್ದಾನೆ. ಎತ್ತಿನಹೊಳೆ ಯೋಜನೆ ನೀರು ಹಾಗೂ ಮಳೆಯಿಂದ ತುಂಬಿದ್ದ ಕೆರೆ ತುಂಬಿತ್ತು.

    ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಗ್ರಾಮಾಂತರ ಪೆÇಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾದವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.