ಬೆಳಗಾವಿ: ಉದ್ಯಮಿ ಸಂತೋಷ ಪದ್ಮನ್ನವರ (Santosh Padmannavar) ಕೊಲೆ ಪ್ರಕರಣದ (Murder Case) ಮೂವರು ಆರೋಪಿಗಳನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಬೆಳಗಾವಿಯಲ್ಲಿ (Belagavi) ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಮೃತಪಟ್ಟಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಪದ್ಮನ್ನವರ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆ ಪ್ರಕರಣದ ಮೂವರು ಆರೋಪಿಗಳಾದ ಸಂತೋಷ ಪತ್ನಿ ಉಮಾ ಪದ್ಮನ್ನವರ, ಶೋಭಿತ್‌ಗೌಡ, ಪವನ್ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ.
ಮಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಶೋಭಿತ್‌ಗೌಡ, ಪವನ್ ವಶಕ್ಕೆ ಪಡೆದಿದ್ದ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಇಡೀ ದಿನ ವಿಚಾರಣೆ ಆದ ಬಳಿಕ ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು ಮೂವರನ್ನೂ ಹಿಂಡಲಗಾ ಜೈಲಿಗೆ ಮಾಳಮಾರುತಿ ಠಾಣೆ ಪೊಲೀಸರು ರವಾನಿಸಿದ್ದಾರೆ.
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಭಾನುವಾರ (ಇಂದು) ಹೊತ್ತುಕೊಂಡಿದೆ. 66 ವರ್ಷದ ಹಿರಿಯ ರಾಜಕಾರಣಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ (Mumbai) ಬಾಂದ್ರಾದಲ್ಲಿರುವ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.
2 ತಿಂಗಳ ಹಿಂದೆಯೇ ಸ್ಕೆಚ್:
ಸಿದ್ದಿಕಿ ಹತ್ಯೆಗೆ 2 ತಿಂಗಳ ಹಿಂದೆಯೇ ಸ್ಕೆಚ್ ಹಾಕಲಾಗಿತ್ತು. ಸತತವಾಗಿ ಅವರ ಚಲವಲಗಳ ಮೇಲೆ ಗ್ಯಾಂಗ್‌ನವರು ನಿಗಾ ಇರಿಸಿದ್ದರು ಎಂದು ಪೊಲೀಸ್ (Mumbai Police) ಮೂಲಗಳಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಹರಿಯಾಣ ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ವಿಶೇಷ ತಂಡಗಳ ಮೂಲಕ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ
50,000ಕ್ಕೆ ಕಿಲ್ಲಿಂಗ್ ಕಾಂಟ್ರ್ಯಾಕ್ಟ್
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸ್ಫೋಟಕ ವಿಚಾರಗಳನ್ನ ಬಯಲಿಗೆಳೆದಿದ್ದಾರೆ. ತನಿಖೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಹಂತಕರಿಗೆ ಹಣ ನೀಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಮೂವರು ಕೊಲೆ ಆರೋಪಿಗಳು ಪಂಜಾಬ್ ಜೈಲಿಯಲ್ಲಿ ಭೇಟಿಯಾಗಿದ್ದರು. ಕಳೆದ ಸೆಪ್ಟೆಂಬರ್ 2 ರಿಂದ ಕುರ್ಲಾದಲ್ಲಿ ತಿಂಗಳಿಗೆ 14,000 ರೂ.ನೀಡುವ ಮನೆ ಬಾಡಿಗೆ ಪಡೆದು ವಾಸವಿದ್ದರು. ಸಿದ್ದಿಕ್ಕಿ ಹತ್ಯೆಗೆ ಅಲ್ಲಿಯೇ ಸಂಚು ರೂಪಿಸಿದ್ದರು. ಮೂವರು ಆರೋಪಿಗಳು ತಲಾ 50 ಸಾವಿರ ರೂ.ಗೆ ಗುತ್ತಿಗೆ ಪಡೆದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಫಲಿತಾಂಶದ ದಿನ ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್
ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ.
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.
ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.
ರಾಮನಗರ: ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ರಾಮನಗರ ಜಿಲ್ಲೆಯ (Ramanagara) ಐಜೂರು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸ್ವೀಟಿ (24), ಗ್ರೆಗೋರಿ ಫ್ರಾನ್ಸಿಸ್ (27) ಎಂದು ಗುರುತಿಸಲಾಗಿದೆ. ಇಬ್ಬರು ಆರೊಪಿಗಳು ಸೇರಿ ಕಬೀಲಾ (2), ಕಬೀಲನ್ (11 ತಿಂಗಳು) ಮಕ್ಕಳನ್ನು ಕೊಲೆಗೈದಿದ್ದರು. ಆರೋಪಿಗಳು ಮೂಲತ ಬೆಂಗಳೂರು ನಿವಾಸಿಗಳು ಎಂದು ತಿಳಿದು ಬಂದಿದೆ.
ಮದುವೆಯಾಗಿ ಎರಡು ಮಕ್ಕಳಿದ್ದರು ಪ್ರಿಯಕರನ ಜೊತೆ ಮಹಿಳೆ ಇತ್ತೀಚೆಗೆ ಪರಾರಿಯಾಗಿದ್ದಳು. ಬಳಿಕ ರಾಮನಗರ ಟೌನ್‍ನ ಮಂಜುನಾಥ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು.
ಇಬ್ಬರ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಾರೆ ಎಂದು ತಲೆದಿಂಬಿನಿಂದ ಉಸಿರುಕಟ್ಟಿಸಿ 15 ದಿನಗಳ ಅಂತರದಲ್ಲಿ ಎರಡು ಮಕ್ಕಳನ್ನು ಹತ್ಯೆಗೈದಿದ್ದರು. ಬಳಿಕ ರಾಮನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದರು. ಬಳಿಕ ಹುಷಾರಿಲ್ಲದೇ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದರು. ಸ್ಮಶಾನದ ಕಾವಲುಗಾರನಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ವೇಳೆ ಕೃತ್ಯ ಬೆಳಕಿಗೆ ಬಂದಿದೆ.
ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ (Haryana) ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.
ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಮತ್ತು ಕುಸ್ತಿಪಟು ವಿನೇಶ್ ಫೋಗಟ್ ಜೂಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದರು. ರಾಜ್ಯದಲ್ಲಿ ಬಿಜೆಪಿ (BJP) 48 ಸ್ಥಾನಗಳನ್ನು ಗೆದ್ದಿದೆ.
– ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್: ಪೊಲೀಸರಿಂದ ಮಾಹಿತಿ
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಕೈವಾಡ ಇದೆ ಎಂದು ತಿಳಿದುಬಂದಿದೆ.
ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ (Mumbai Police) ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್‌ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.
ಸದ್ಯ ಪೋಲೀಸರು ಪ್ರಕರಣವನ್ನು 2 ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಆದ್ರೆ ಸಿದ್ದಿಕ್ ಅವರಿಗೆ ಯಾವುದೇ ಬೆರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಪ್ರಕರಣದ ತನಿಖೆ ಕುರಿತು ಕೇಂದ್ರ ಏಜೆನ್ಸಿಗಳು ಮುಂಬೈ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಗುಜರಾತ್ ಮತ್ತು ದೆಹಲಿಯ ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸ್ಫೋಟಕ ಮಾಹಿತಿ:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್ ಭಾಗವತ್
ಗಾಂಧಿನಗರ: ಕಾರ್ಖಾನೆಯ ಟ್ಯಾಂಕ್ ಅಳವಡಿಕೆ ಕಾಮಗಾರಿ ವೇಳೆ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ (Gujarat) ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಮೀ ದೂರದಲ್ಲಿರುವ ಕಾಡಿ ಪಟ್ಟಣದ ಬಳಿ ಈ ಅವಘಡ ನಡೆದಿದೆ. ಮೃತ ಕಾರ್ಮಿಕರು ಕಾರ್ಖಾನೆಯೊಂದರ ಟ್ಯಾಂಕ್‌ಗಾಗಿ ಗುಂಡಿ ತೆಗೆಯುತ್ತಿದ್ದರು. ಈ ವೇಳೆ ಗೋಡೆ ಕುಸಿದಿದೆ.
ಐವರು ಕಾರ್ಮಿಕರ ಶವಗಳನ್ನು ಹೊರ ತೆಗೆಯಲಾಗಿದೆ. ಮೂರರಿಂದ ನಾಲ್ಕು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ (Police) ಇನ್ಸ್‌ಪೆಕ್ಟರ್ ಪ್ರಹ್ಲಾದಸಿಂಗ್ ವಘೇಲಾ ಹೇಳಿದ್ದಾರೆ.
ಇನ್ನೂ ಹೆಚ್ಚಿನ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ತರುಣ್ ದುಗ್ಗಲ್ ಹೇಳಿದ್ದಾರೆ.
ಉಡುಪಿ: ಮಲ್ಪೆಯಲ್ಲಿ (Malpe) ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು (Bangladesh Citizen) ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದರು.
ಸಿಕ್ಕಿಬಿದ್ದಿದ್ದು ಹೇಗೆ?
ಬಂಧನಕ್ಕೆ ಒಳಗಾಗಿರುವ ಮಾಣಿಕ್ ಹುಸೈನ್ ನಕಲಿ ಪಾಸ್‌ಪೋರ್ಟ್ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆತ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿ ನಕಲಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಪಡೆದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈತನನ್ನು ಬಂಧಿಸಿದ ಬಳಿಕ ಈತನೊಂದಿಗೆ ಮತ್ತಷ್ಟು ಜನ ಬಾಂಗ್ಲಾದೇಶಿ ಪ್ರಜೆಗಳು ದೇಶದೊಳಗೆ ನುಸುಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈತ ನೀಡಿದ ಮಾಹಿತಿ ಆಧಾರದಲ್ಲಿ ಮತ್ತೆ 6 ಮಂದಿಯನ್ನು ಉಡುಪಿಯ (Udupi) ಮಲ್ಪೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಯುತ್ತಿದೆ.
ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದು ಪೊಲೀಸರಿಂದ ಕೆಲವೇ ಗಂಟೆಗಳಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಹುಬ್ಬಳ್ಳಿ ಪೊಲೀಸರು ಗುಂಡೇಟು ನಿಡಿದ್ದಾರೆ.
ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಸೇರಿ ಶಿವು ಚಂದ್ರಶೇಖರ ಕಮ್ಮಾರ ಎಂಬಾತನನ್ನು ಚಾಕು ಇರಿದು ಹತ್ಯೆಗೈದಿದ್ದರು. ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇಬ್ಬರು ಸೇರಿ ಉಳಿದ ಆರೋಪಿಗಳನ್ನು ತೋರಿಸುವುದಾಗಿ ಕರೆದೊಯ್ದು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡೇಟು ನೀಡಿದ್ದಾರೆ.
ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಗೋಪನಕೊಪ್ಪದ ಬಳಿ ಆರೋಪಿಗಳು ಕೊಲೆಗೈದಿದ್ದರು. ಈ ಸಂಬಂಧ ಅಶೋಕ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ದಿಸ್ಪುರ್: ಐವರು ವಿಚಾರಣಾಧೀನ ಕೈದಿಗಳು ಸೇರಿ ಜೈಲಿನ ಕಂಬಿಗಳನ್ನು ಮುರಿದು, ಬೆಡ್‌ಶೀಟ್‌ಗಳು ಮತ್ತು ಲುಂಗಿಗಳನ್ನು ಬಳಸಿ 20 ಅಡಿ ಕಾಂಪೌಂಡ್‌ನ್ನು ಇಳಿದು ಪರಾರಿಯಾದ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ.
ಜೈಲಿಂದ ತಪ್ಪಿಸಿಕೊಂಡ ಕೈದಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ, ನೂರ್ ಇಸ್ಲಾಂ, ಮಫಿದುಲ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ 1 ರಿಂದ 2 ಗಂಟೆಯ ವೇಲೆ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ. ಬ್ಯಾರಕ್‌ಗಳ ರಾಡ್‌ಗಳನ್ನು ಮುರಿದು ಬಳಿಕ 20 ಅಡಿ ಕಾಂಪೌಂಡ್ ಇಳಿಯಲು ಕಂಬಳಿ, ಲುಂಗಿ ಮತ್ತು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐವರು ಪೋಕ್ಸೊ (POCSO) ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದರು. ಪರಾರಿಯಾದವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಬಗ್ಗೆ ಕೆಲವು ಜೈಲಲ್ಲಿರುವ ಕೈದಿಗಳನ್ನು ವಿಚಾರಣೆ ಮಾಡುತ್ತೇವೆ. ತನಿಖೆಯಲ್ಲಿ ಎಲ್ಲವೂ ಹೊರಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೈದಿಗಳು ಸೋನಿತ್‌ಪುರ ಜಿಲ್ಲೆಯ ತೇಜ್‌ಪುರ ಮತ್ತು ಮೊರಿಗಾಂವ್ ಜಿಲ್ಲೆಯ ಲಾಹೋರಿಘಾಟ್ ಮತ್ತು ಮೊಯಿರಾಬರಿ ನಿವಾಸಿಗಳು ಎಂದು ಮೊರಿಗಾಂವ್ ಜಿಲ್ಲಾಧಿಕಾರಿ ದೇವಾಶಿಸ್ ಶರ್ಮಾ ತಿಳಿಸಿದ್ದಾರೆ.
ಈ ಸಂಬಂಧ ಜೈಲರ್ ಪ್ರಶಾಂತ ಸೈಕಿಯಾ ಅವರನ್ನು ಅಮಾನತುಗೊಳಿಸಲಾಗಿದೆ. ಗುವಾಹಟಿಯ ಇಬ್ಬರು ಸಹಾಯಕ ಜೈಲರ್‌ಗಳನ್ನು ಜೈಲಿನ ನಿರ್ವಹಣೆಗೆ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.
ಭೋಪಾಲ್: ವ್ಯಕ್ತಿಯೊಬ್ಬ ನಾಲ್ಕು ವರ್ಷಗಳಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ (Madhya Pradesh) ಛತ್ತರ್‌ಪುರದಲ್ಲಿ ನಡೆದಿದೆ.
ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು (Police) ಹುಡುಕಾಟ ಆರಂಭಿಸಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಛತ್ತರ್‌ಪುರ ಎಸ್ಪಿ ತಿಳಿಸಿದ್ದಾರೆ.