Tag: police

  • ಅಡಿಕೆ ವ್ಯಾಪಾರಿಗೆ ಬೆದರಿಸಿ 17 ಲಕ್ಷ ದರೋಡೆ – 7 ಮಂದಿ ಅರೆಸ್ಟ್

    ಅಡಿಕೆ ವ್ಯಾಪಾರಿಗೆ ಬೆದರಿಸಿ 17 ಲಕ್ಷ ದರೋಡೆ – 7 ಮಂದಿ ಅರೆಸ್ಟ್

    ದಾವಣಗೆರೆ: ಚನ್ನಗಿರಿ (Channagiri) ಮತ್ತು ಸಂತೆಬೆನ್ನೂರು ಪೊಲೀಸರು (Police) ಕಾರ್ಯಾಚರಣೆ ನಡೆಸಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಚನ್ನಗಿರಿಯ ಮಹಮ್ಮದ್ ಇನಾಯತ್ (21), ಉಮ್ಮರ್ ಫಾರೂಕ್ (21) ಶಾಹಿದ್ ಖಾಜಿ (24), ಮೈಸೂರ ನಿವಾಸಿಗಳಾದ ಖುರಂ ಖಾನ್ (25), ಸೈಯದ್ ಸೈಫುಲ್ಲಾ (24), ಖಾಷಿಫ್ ಅಹಮದ್(25) ಹಾಗೂ ತುಮಕೂರು ನಿವಾಸಿ ಖುರಂ ಖಾನ್ (25) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಬೇಕರಿ ಮಾಲೀಕರಿಗೆ ಬೆದರಿಕೆ – ಬೆಂಗಳೂರು ಯೂಟ್ಯೂಬರ್‌ ಅರೆಸ್ಟ್‌

    ಆರೋಪಿಗಳು ಸೆ.30 ರಂದು ಚನ್ನಗಿರಿಯ ಜೋಳದಾಳ ಬಳಿ ಅಡಿಕೆ ವ್ಯಾಪಾರಿ ಅಶೋಕ್ ಎಂಬವರನ್ನು ಅಡ್ಡಗಟ್ಟಿ ಚಾಕು ತೋರಿಸಿ 17.24 ಲಕ್ಷ ರೂ. ದರೋಡೆ ಮಾಡಿದ್ದರು. ಬಳಿಕ ವಾಹನದ ಕೀ ಕಸಿದುಕೊಂಡು ಪರಾರಿಯಾಗಿದ್ದರು.

    ಅಡಿಕೆ ಕೊಡಿಸುವ ಮಧ್ಯಸ್ಥಿಕೆ ವಹಿಸಿದ್ದ ಮಹಮದ್ ಇನಾಯತುಲ್ಲಾ ಎಂಬಾತನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

    ಆರೋಪಿಗಳಿಂದ 7.37 ಲಕ್ಷ ರೂ. ನಗದು, 2 ಕಾರು, 2 ಬೈಕ್, 9 ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

  • ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

    ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

    ಕೊಪ್ಪಳ: ಬೈಕ್ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರು ಬೈಕ್ ಸವಾರರು ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಕಾಲುವೆ ಸೇತುವೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.

    ಬಂಧಿತ ಆರೋಪಿಗಳನ್ನು ಗಂಗಾವತಿ ನಗರದ ನಿವಾಸಿಗಳಾದ ಅರ್ಭಾಜ್, ಪಂಪನಗೌಡ, ವೆಂಕಟೇಶ ಎಂದು ಗುರುತಿಸಲಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸ್ ಮುಖ್ಯಪೇದೆ ಬಸವರಾಜ, ಚಾಲಕ ಕನಕಪ್ಪ ಅವರ ಮೇಲೆ ಹಲ್ಲೆ ನಡೆದಿದೆ.ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಇಲ್ಲ, ಸಿಎಂ ಬದಲಾವಣೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ

    ಗಂಗಾವತಿ ತಾಲೂಕಿನ ಹೇಮಗುಡ್ಡದ ದುರ್ಗಾದೇವಿ ದಸರಾ ಮಹೋತ್ಸದ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಂಡು, ಪೊಲೀಸರು ಗಂಗಾವತಿ ಕಡೆಗೆ ಬರುತ್ತಿದ್ದರು. ಇದನ್ನು ನೋಡಿದ ಆರೋಪಿಗಳು ಆರ್‌ಎಕ್ಸ್ ಬೈಕ್‌ನ್ನು ವ್ಹೀಲಿಂಗ್ ಮಾಡಿಕೊಂಡು ಪೊಲೀಸರ ವಾಹನದ ಬಲ ಭಾಗದಿಂದ ಓವರ್ ಟೇಕ್ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು ನಿಲ್ಲುವಂತೆ ಹೇಳಿದ್ದು, ಅಷ್ಟರಲ್ಲೇ ಆಯತಪ್ಪಿ ಬೈಕ್ ಕೆಳಗೆ ಬಿದ್ದಿದೆ. ಕೂಡಲೇ ತಮ್ಮ ವಾಹನದಿಂದ ಕೆಳಗಿಳಿದು ಬಂದಿರುವ ಪೊಲೀಸರು ಆರೋಪಿಗಳಿಗೆ ಬೈಕ್ ಸೈಡ್‌ಗೆ ಹಾಕುವಂತೆ ಸೂಚಿಸಿದ್ದು, ತಾವೇ ಬೈಕ್ ಎತ್ತಿಕೊಳ್ಳಲು ಮುಂದಾಗಿದ್ದಾರೆ.

    ಇದರಿಂದ ಆಕ್ರೋಶಗೊಂಡ ಅರ್ಭಾಜ್, ಪಂಪನಗೌಡ ಮತ್ತು ವೆಂಕಟೇಶ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಘಟನೆಯನ್ನು ವಿಡಿಯೋ ಮಾಡಲು ಮುಂದಾದ ಮುಖ್ಯಪೇದೆ ಬಸವರಾಜನ ಮೊಬೈಲ್ ಕಿತ್ತುಕೊಂಡು ಕಾಲುವೆಗೆ ಎಸೆದಿದ್ದಾರೆ. ಬಳಿಕ ದುಷ್ಕರ್ಮಿಗಳು ಅವರ ಮೇಲೆಯೂ ಹಲ್ಲೆ ಮಾಡಿದ್ದಾರೆ.

    ಮೂವರು ದುಷ್ಕರ್ಮಿಗಳು ಸೇರಿಕೊಂಡು ಇಬ್ಬರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಮತ್ತಷ್ಟು ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು, ಆರೋಪಿಗಳನ್ನು ಬೈಕ್ ಸಮೇತ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಹಲ್ಲೆಗೆ ಒಳಗಾದ ಇಬ್ಬರು ಪೊಲೀಸರು ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ನಾರಿಮಣಿಯರ ಗಮನ ಸೆಳೆದ ಕಟೌಟ್ ಪ್ಯಾಂಟ್‌ಸೂಟ್

  • ವಿವಿಧ ರಾಜ್ಯಗಳಲ್ಲಿ ಧರ್ಮ ಪ್ರಚಾರ – ಮತ್ತೆ 14 ಮಂದಿ ಪಾಕ್‌ ಪ್ರಜೆಗಳು ಅರೆಸ್ಟ್‌

    ವಿವಿಧ ರಾಜ್ಯಗಳಲ್ಲಿ ಧರ್ಮ ಪ್ರಚಾರ – ಮತ್ತೆ 14 ಮಂದಿ ಪಾಕ್‌ ಪ್ರಜೆಗಳು ಅರೆಸ್ಟ್‌

    ಬೆಂಗಳೂರು: ಮತ್ತೆ ಪಾಕಿಸ್ತಾನ (Pakistan) ಮೂಲದ 14 ಮಂದಿಯನ್ನು ಜಿಗಣಿ ಪೊಲೀಸರು (Jigani Police) ಬಂಧಿಸಿದ್ದಾರೆ.

    ಪ್ರಕರಣದ ಕಿಂಗ್ ಪಿನ್ ಪರ್ವೇಜ್ ಅರೆಸ್ಟ್ ಬೆನ್ನಲ್ಲೇ ಮತ್ತಷ್ಟು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 22 ಮಂದಿ ಪಾಕ್‌ ಪ್ರಜೆಗಳನ್ನು ಬಂಧಿಸಿದ್ದು ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನಿಗೂಢವಾಗಿ ನೆಲೆಸಿದ್ದ ಪಾಕ್‌ ದಂಪತಿ; ಬೆಂಗಳೂರಲ್ಲಿದ್ದುಕೊಂಡೇ ಧರ್ಮ ಪ್ರಚಾರ, ಪ್ರಚೋದಕರಾಗಿ ಕೆಲಸ

    ಪಾಕ್ ಪ್ರಜೆಗಳ ಬಂಧನಕ್ಕೆ ಚೆನ್ನೈ, ದೆಹಲಿ, ಹೈದರಾಬಾದ್ ಪೊಲೀಸರ ತಂಡ ತೆರಳಿತ್ತು. ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ 22 ಮಂದಿ ಧರ್ಮ ಪ್ರಚಾರಕ್ಕಾಗಿ ವಿವಿಧ ರಾಜ್ಯಗಳಲ್ಲಿ ತಂಗಿದ್ದರು.

     

  • ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನಕ್ಕೆ ಸಾಥ್ – ಯುವತಿ ಸೇರಿ ಇಬ್ಬರು ಅರೆಸ್ಟ್

    ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನಕ್ಕೆ ಸಾಥ್ – ಯುವತಿ ಸೇರಿ ಇಬ್ಬರು ಅರೆಸ್ಟ್

    ದಾವಣಗೆರೆ: ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಲು ವ್ಯಕ್ತಿಯೊಬ್ಬನಿಗೆ ಸಹಕರಿಸಿ ದರೋಡೆಯ ಕತೆ ಕಟ್ಟಿದ್ದ ಯುವತಿ ಸೇರಿದಂತೆ ಇಬ್ಬರನ್ನು ಚನ್ನಗಿರಿ (Channagiri) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತರನ್ನು ತಸ್ಮೀಯಖಾನಂ ಹಾಗೂ ಮುಜೀಬುಲ್ಲಾ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 10.77 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Bellary | ಈಜಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

    ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದ ಅಮಾನುಲ್ಲಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಅಮಾನುಲ್ಲಾ ಅವರ ಪುತ್ರಿ ತಸ್ಮೀಯಖಾನಂ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿತ್ತು. ಒಂಟಿಯಾಗಿದ್ದಾಗ ನೀರು ಹಾಕಿ ಪ್ರಜ್ಞೆ ತಪ್ಪಿಸಿ, ಕಳ್ಳತನ ಮಾಡಿದ್ದಾರೆ ಎಂದು ಯುವತಿ ಕತೆ ಕಟ್ಟಿದ್ದಳು.

    ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಾಗ ಸತ್ಯಾಂಶ ಬಯಲಿಗೆ ಬಂದಿತ್ತು. ತನಿಖೆ ನಡೆಸಿದ ತಂಡಕ್ಕೆ ಎಸ್‍ಪಿ ಉಮಾ ಪ್ರಶಾಂತ್ ಬಹುಮಾನ ಘೋಷಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

  • Punjab | ಕಾರು ಅಡ್ಡಗಟ್ಟಿ ಆಪ್‌ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    Punjab | ಕಾರು ಅಡ್ಡಗಟ್ಟಿ ಆಪ್‌ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಚಂಡೀಗಢ: ಪಂಜಾಬ್‌ನ (Punjab) ತರ್ನ್ ತರನ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತನನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಹತ್ಯೆಗೀಡಾದ ಆಪ್‌ ಕಾರ್ಯಕರ್ತನನ್ನು ತಲ್ವಾಂಡಿ ಮೌರ್ ಸಿಂಗ್ ಗ್ರಾಮದ ನಿವಾಸಿ ರಾಜ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು, ಟಕ್ಕರ್‌ಪುರ ಗ್ರಾಮದ ಬಳಿ ಸಿಂಗ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೂಡಲೇ ರಾಜ್ವಿಂದರ್ ಸಿಂಗ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

    ಪಕ್ಷದ ಕಾರ್ಯಕರ್ತನ ಸಾವಿಗೆ ಆಮ್ ಆದ್ಮಿ ಪಕ್ಷ ಶೋಕ ವ್ಯಕ್ತಪಡಿಸಿದೆ. ಆಪ್ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ರಾಜ್ವಿಂದರ್ ಅವರ ಕುಟುಂಬದೊಂದಿಗೆ ಪಕ್ಷ ಮತ್ತು ರಾಜ್ಯ ಸರ್ಕಾರ ನಿಂತಿದೆ ಎಂದು ಸಾಂತ್ವನ ಹೇಳಿದ್ದಾರೆ.‌

    ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

  • Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

    Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

    ಕೋಲಾರ: ಪತಿ ಹಾಗೂ ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ (Dowry Harassment) ಬೇಸತ್ತು ಮಹಿಳೆಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ. ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದಳು. ಇದನ್ನೂ ಓದಿ: ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ

    ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಈ ಸಂಬಂಧ ಬಂಗಾರಪೇಟೆ ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Hassan | ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ – ಕಾರಣ ನಿಗೂಢ

  • ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

    ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

    ರಾಯಚೂರು: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿಸಿರುವ ಘಟನೆ ನಗರದ ಮಕ್ತಲಪೇಟೆ (Makthalpete) ಬಡಾವಣೆಯಲ್ಲಿ ನಡೆದಿದೆ.

    ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಾಯಚೂರು (Raichuru) ತಾಲೂಕಿನ ವಡವಟ್ಟಿ ಗ್ರಾಮದ ಮಹಿಳೆಯೆಂದು ಗುರುತಿಸಲಾಗಿದೆ.ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

    ಮನೆಬಿಟ್ಟು ರಸ್ತೆಯಲ್ಲಿ ಓಡಾಡುತ್ತಿದ್ದಾಗ ಅಲ್ಲಿದ್ದ ಮಕ್ಕಳನ್ನು ಮುಟ್ಟಲು ಯತ್ನಿಸಿದ್ದಾಳೆ. ಈ ವೇಳೆ ಮಕ್ಕಳ ಕಳ್ಳಿಯಂದು ಭಾವಿಸಿ ಮಾನಸಿಕ ಅಸ್ವಸ್ಥೆಯೊಬ್ಬಳನ್ನು ಬಡಾವಣೆಯ ನಿವಾಸಿಗಳು ಮರಕ್ಕೆ ಕಟ್ಟಿ ಥಳಿಸಿದ್ದಾರೆ.

    ಬಡಾವಣೆಯಲ್ಲಿನ ಕಟ್ಟೆಯ ಮರಕ್ಕೆ ಮಹಿಳೆಯನ್ನು ಕಟ್ಟಿ ಹಾಕಿ ವಿಚಾರಣೆ ಮಾಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ 112 ಪೊಲೀಸ್ ವಾಹನ ಸಿಬ್ಬಂದಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿ ಠಾಣೆಗೆ ಕರೆದ್ಯೊಯ್ದಿದ್ದಾರೆ.

    ಮಹಿಳೆಯ ಕುಟುಂಬಸ್ಥರ ಮಾಹಿತಿ ಪಡೆದು ಸಂಬಂಧಪಟ್ಟವರಿಗೆ ಪೊಲೀಸರು ಒಪ್ಪಿಸಿದ್ದಾರೆ. ಮತ್ತೊಮ್ಮೆ ಮಹಿಳೆಯನ್ನು ಮನೆಯಿಂದ ಒಂಟಿಯಾಗಿ ಹೊರಬಿಡದಂತೆ ಕುಟುಂಬಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

  • Hassan | ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ – ಕಾರಣ ನಿಗೂಢ

    Hassan | ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ – ಕಾರಣ ನಿಗೂಢ

    ಹಾಸನ: ನಗರದ (Hassan) ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು (Teacher) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಇದನ್ನೂ ಓದಿ: HSR ಲೇಔಟ್ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್‌ – 555 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

    ಬೇಲೂರು (Beluru ) ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಮೂರು ವರ್ಷಗಳು ಮಾತ್ರ ಬಾಕಿ ಇತ್ತು. ರಂಗಸ್ವಾಮಿಯವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೀದರ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ – 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸೀಜ್‌

  • ಬೀದರ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ – 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸೀಜ್‌

    ಬೀದರ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ – 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸೀಜ್‌

    ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ (Bidar) ಪೊಲೀಸರು (Police) ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

    ಜಮೀನಿನಲ್ಲಿ 6 ಅಡಿಯ 700ಕ್ಕೂ ಅಧಿಕ ಗಿಡಗಳನ್ನು ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಬಸಂತ್ ಎಂಬಾತ ಗಾಂಜಾ ಬೆಳೆದಿದ್ದ ಎಂದು ತಿಳಿದು ಬಂದಿದೆ. ಆತ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಭೋಪಾಲ್‌ನಲ್ಲಿ 1,814 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌ – ಇಬ್ಬರು ಅರೆಸ್ಟ್‌

    ಗಾಂಜಾ ಗಿಡಗಳನ್ನು ಎಸ್ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಾಶ ಮಾಡಲಾಗಿದೆ. ಈ ಸಂಬಂಧ ಮಂಠಾಳ ಪೊಲೀಸ್‌ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

    ಇತ್ತೀಚೆಗೆ ದೇಶದೆಲ್ಲೆಡೆ ಮಾದಕ ವಸ್ತುಗಳ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಇತ್ತೀಚೆಗೆ ದೆಹಲಿಯಲ್ಲಿ 5,000 ಕೋಟಿ ರೂ. ಮೌಲ್ಯದ ಕೊಕೇನ್‌ ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದರು. ಇನ್ನೂ ಮಧ್ಯಪ್ರದೇಶದಲ್ಲಿ 1,814 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದರು. ಇದನ್ನೂ ಓದಿ: HSR ಲೇಔಟ್ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್‌ – 555 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

  • Amethi Horror | `ಐವರು ಸಾಯ್ತಾರೆʼ – ಕೊಲೆಗೂ ಮುನ್ನವೇ ವಾಟ್ಸಾಪ್‌ನಲ್ಲಿ ಶಂಕಿತನ ವಾರ್ನಿಂಗ್‌!

    Amethi Horror | `ಐವರು ಸಾಯ್ತಾರೆʼ – ಕೊಲೆಗೂ ಮುನ್ನವೇ ವಾಟ್ಸಾಪ್‌ನಲ್ಲಿ ಶಂಕಿತನ ವಾರ್ನಿಂಗ್‌!

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಅಮೇಥಿಯಲ್ಲಿ (Amethi Horror) ನಡೆದ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳ ಹತ್ಯೆಯ ಶಂಕಿತ ಆರೋಪಿ ಸುಮಾರು ಒಂದು ತಿಂಗಳಿನಿಂದ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಕೊಲೆ ಮಾಡುವ ಉದ್ದೇಶವನ್ನು ವಾಟ್ಸಾಪ್‌ನ ( WhatsApp) ಬಯೋದಲ್ಲಿ ಹಾಕಿಕೊಂಡಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸುನೀಲ್ ಕುಮಾರ್, ಅವರ ಪತ್ನಿ ಪೂನಂ ಭಾರತಿ ಮತ್ತು ಅವರ ಕೇವಲ ಒಂದು ಮತ್ತು ಆರು ವರ್ಷದವರು ಇಬ್ಬರು ಹೆಣ್ಣುಮಕ್ಕಳನ್ನು ಗುರುವಾರ ಅಮೇಥಿಯ ಭವಾನಿ ನಗರದಲ್ಲಿರುವ ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ನಂತರ ಹತ್ಯೆಗೀಡಾದ ಭಾರತಿ 2 ತಿಂಗಳ ಹಿಂದೆ ಚಂದನ್ ವರ್ಮಾ ಎಂಬಾತನ ವಿರುದ್ಧ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಅದರಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆತ ಕೊಲೆ ಬೆದರಿಕೆ ಹಾಕಿದ್ದ, ಏನಾದರೂ ಜೀವ ಹಾನಿ ಸಂಭವಿಸಿದರೆ ಆತನೆ ಹೊಣೆಗಾರ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

    ಅಲ್ಲದೇ ಭಾರತಿ ಅವರು ಆಗಸ್ಟ್ 18 ರಂದು ರಾಯ್ ಬರೇಲಿಯ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವರ್ಮಾ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ತನ್ನ ಮತ್ತು ತನ್ನ ಪತಿಗೆ ಕಪಾಳಮೋಕ್ಷ ಮಾಡಿದ್ದ. ಇದನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಸಾಯಿಸುತ್ತೇನೆ ಎಂದಿದ್ದ. ಇದಕ್ಕೂ ಮೊದಲು ಸಹ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ಅಪಾಯದಲ್ಲಿದೆ ಎಂದು ದೂರು ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

    ಪೊಲೀಸರು ಚಂದನ್ ವರ್ಮಾನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಸೆಪ್ಟೆಂಬರ್ 12 ಆತನ ವಾಟ್ಸಾಪ್ ಬಯೋದಲ್ಲಿ ʻ5 ಜನರು ಸಾಯುತ್ತಾರೆ, ನಾನು ಶೀಘ್ರದಲ್ಲೇ ನಿಮಗೆ ತೋರಿಸುತ್ತೇನೆʼಎಂದು ಬರೆದುಕೊಂಡಿರುವುದು ಪತ್ತೆಯಾಗಿದೆ. ಹತ್ಯೆ ಬಳಿಕ ಅದನ್ನು ಆತ ಸ್ಕ್ರೀನ್‌ಶಾಟ್ ಮಾಡಿ ಇಟ್ಟುಕೊಂಡಿದ್ದ. ಇದು ಆತನ ಯೋಜನೆಯನ್ನು ಬಯಲು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆ ನಡೆಯುವ ಮುನ್ನ ಅಮೇಥಿಯ ಪ್ರಸಿದ್ಧ ದೇವಸ್ಥಾನಕ್ಕೂ ಭೇಟಿ ನೀಡಿದ್ದ. ಅಲ್ಲದೇ ಹತ್ಯೆ ಬಳಿಕ ಆತ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.