Tag: police

  • Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – 30 ನಕ್ಸಲರು ಬಲಿ

    Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – 30 ನಕ್ಸಲರು ಬಲಿ

    ರಾಯ್‌ಪುರ: ಛತ್ತೀಸ್‌ಗಢದ (Chhattisgarh) ದಾಂತೇವಾಡ ಜಿಲ್ಲೆಯ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) 30 ನಕ್ಸಲರು (Maoists) ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ಮೀಸಲು ಗಾರ್ಡ್‌ಗಳು (ಡಿಆರ್‌ಜಿ), ಅಬುಜ್‌ಮದ್‌ನಲ್ಲಿ ನಕ್ಸಲರು ಇರುವುದರ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಅಬುಜ್‌ಮದ್‌ನ ದಕ್ಷಿಣ ಭಾಗದಲ್ಲಿರುವ ತುಲ್ತುಲಿ ಗ್ರಾಮದಲ್ಲಿ ಎನ್‌ಕೌಂಟರ್ ನಡೆದಿದೆ. ಈ ಗ್ರಾಮವು ದಾಂತೇವಾಡದಿಂದ ಸುಮಾರು 40 ರಿಂದ 50 ಕಿಮೀ ದೂರದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ನಿವಾಸ ತೊರೆದು ಆಪ್ ಸಂಸದನ ಮನೆಗೆ‌ ತೆರಳಿದ ಕೇಜ್ರಿವಾಲ್

    ಎನ್‌ಕೌಂಟರ್‌ ನಡೆದ ಸ್ಥಳದಿಂದ ಎಕೆ 47 ರೈಫಲ್ ಮತ್ತು ಸ್ವಯಂ-ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ನಂತಹ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಶೋಧ ಕಾರ್ಯಾಚರಣೆಗಳು ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗೋವಾದ ಗಾತ್ರದ ಅಬುಜ್ಮದ್ ಪ್ರದೇಶವನ್ನು ನಕ್ಸಲೀಯರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಕಳೆದ ಸೆಪ್ಟೆಂಬರ್ 3 ರಂದು ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ಆರು ಮಹಿಳೆಯರು ಸೇರಿದಂತೆ ಒಂಬತ್ತು ಮಾವೋವಾದಿಗಳು ಹತ್ಯೆಗೀಡಾಗಿದ್ದರು. ಇದನ್ನೂ ಓದಿ: ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

  • ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

    ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

    ಬೆಂಗಳೂರು: ನಗರದ (Bengaluru) ಮೂರು ಖಾಸಗಿ ಕಾಲೇಜುಗಳಿಗೆ (College) ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ್ದಾರೆ.

    ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಿಎಮ್‍ಎಸ್, ರಾಮಯ್ಯ, ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ‌ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್‌ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

    ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ ಎಮ್.ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ ಬಿಎಮ್‍ಎಸ್ ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ.

    ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ. ಕಸದ ಡಬ್ಬಿ, ಲಿಫ್ಟ್, ಮೆಟ್ಟಿಲು, ಬ್ಯಾಗ್‍ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ.

    ಕಳೆದ 28ರಂದು ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಐಪಿಎಸ್ ಅಧಿಕಾರಿ ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದನ್ನೂ ಓದಿ: 5,600 ಕೋಟಿ ಮೌಲ್ಯದ ಕೊಕೇನ್ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡ – ನಾಚಿಕೆಗೇಡು ಎಂದ ಅಮಿತ್ ಶಾ

  • 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ವಂಚನೆ – ಬೆಚ್ಚಿ ಬೀಳಿಸಿದ ಯುಪಿ ದಂಪತಿ ಹಗರಣ

    60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ವಂಚನೆ – ಬೆಚ್ಚಿ ಬೀಳಿಸಿದ ಯುಪಿ ದಂಪತಿ ಹಗರಣ

    ಲಕ್ನೋ: ಚಿಕಿತ್ಸೆ ಮೂಲಕ 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ನೂರಾರು ವೃದ್ಧರಿಗೆ 35 ಕೋಟಿ ರೂ. ವಂಚಿಸಿದ ಪ್ರಕರಣ ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ನಡೆದಿದೆ.

    ವಂಚಿಸಿದ ದಂಪತಿಯನ್ನು ರಾಜೀವ್ ಕುಮಾರ್ ದುಬೆ ಮತ್ತು ಆತನ ಪತ್ನಿ ರಶ್ಮಿ ದುಬೆ ಎಂದು ಗುರುತಿಸಲಾಗಿದೆ. ಇಬ್ಬರೂ ಕಾನ್ಪುರದಲ್ಲಿ ಥೆರಪಿ ಸೆಂಟರ್‌ನ್ನು ತೆರದಿದ್ದರು. ಬಳಿಕ ಇಸ್ರೇಲ್‌ನಿಂದ ತರಲಾದ ಯಂತ್ರವನ್ನು ಬಳಸಿ 60 ವರ್ಷದ ವ್ಯಕ್ತಿಯನ್ನು 25 ವರ್ಷ ವಯಸ್ಸಿನವರನ್ನಾಗಿ ಪರಿವರ್ತಿಸುತ್ತೇವೆ ಎಂದು ವೃದ್ಧರನ್ನು ನಂಬಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಪರ ಜಿಟಿಡಿ ಬ್ಯಾಟಿಂಗ್ | ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ವ್ಯಂಗ್ಯ

    ಕಲುಷಿತ ಗಾಳಿಯಿಂದಾಗಿ ಜನರಿಗೆ ವೇಗವಾಗಿ ವಯಸ್ಸಾಗುತ್ತಿದೆ. ಆಕ್ಸಿಜನ್ ಥೆರಪಿ ಮೂಲಕ ಕೆಲವೇ ತಿಂಗಳೊಳಗೆ ಯುವಕರನ್ನಾಗಿ ಪರಿವರ್ತಿಸುತ್ತೇವೆ ಎಂದು ಹೇಳಿ ವೃದ್ಧರನ್ನು ನಂಬಿಸಿ ವಂಚಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ದಂಪತಿಗೆ, ರೇಣು ಸಿಂಗ್ ಎಂಬವರು 10.75 ರೂ. ಲಕ್ಷ ನೀಡಿದ್ದಾರೆ. ನೂರಾರು ಜನರು ಇದೇ ರೀತಿ ಹಣ ನೀಡಿದ್ದಾರೆ. ಹೀಗೆ ಸುಮಾರು 35 ಕೋಟಿ ರೂ. ವಂಚಿಸಲಾಗಿದೆ ಎಂದೂ ಅವರು ಆರೋಪಿಸಿದ್ದಾರೆ.

    ಈ ಸಂಬಂಧ ರೇಣು ಸಿಂಗ್‌ ದೂರು ದಾಖಲಿಸಿದ್ದಾರೆ. ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು ದಂಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದುಬೆ ದಂಪತಿ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

  • ದೆಹಲಿ ಡಾಕ್ಟರ್‌ ಹತ್ಯೆ ಕೇಸ್‌ – ಚಿಕಿತ್ಸೆಗೆ ಹೆಚ್ಚಿನ ಬಿಲ್‌ ಮಾಡಿದ್ದಕ್ಕೆ ಕೊಲೆ ಮಾಡ್ದೆ ಎಂದ ಅಪ್ರಾಪ್ತ!

    ದೆಹಲಿ ಡಾಕ್ಟರ್‌ ಹತ್ಯೆ ಕೇಸ್‌ – ಚಿಕಿತ್ಸೆಗೆ ಹೆಚ್ಚಿನ ಬಿಲ್‌ ಮಾಡಿದ್ದಕ್ಕೆ ಕೊಲೆ ಮಾಡ್ದೆ ಎಂದ ಅಪ್ರಾಪ್ತ!

    – ಅಂತೂ 2024ರಲ್ಲಿ ಮರ್ಡರ್‌ ಮಾಡ್ದೆ ಅಂತ ಪೋಸ್ಟ್‌!

    ನವದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ 55 ವರ್ಷದ ವೈದ್ಯರನ್ನು ಹತ್ಯೆಗೈದ ಆರೋಪದ ಮೇಲೆ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಚಿಕಿತ್ಸೆಗೆ ಹೆಚ್ಚಿನ ಹಣ ಕೇಳಿದ್ದಕ್ಕೆ ಗುಂಡು ಹಾರಿಸಿ ವೈದ್ಯರನ್ನು ಹತ್ಯೆ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಗನ್‌ ಹಿಡಿದುಕೊಂಡು ಫೋಟೋ ಹಂಚಿಕೊಂಡಿದ್ದ. ಅಂತಿಮವಾಗಿ 2024ರಲ್ಲಿ ಮರ್ಡರ್‌ ಮಾಡ್ದೆ ಎಂದು ಬರೆದುಕೊಂಡಿದ್ದ. ಇದನ್ನೂ ಓದಿ: Delhi | ಚಿಕಿತ್ಸೆಗೆ ಬಂದು ವೈದ್ಯನ ಗುಂಡಿಕ್ಕಿ ಹತ್ಯೆಗೈದ ಅಪ್ರಾಪ್ತರು

    ಬಂಧಿತ ಅಪ್ರಾಪ್ತ, ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ಪ್ರದೇಶದ ನಿಮಾ ಆಸ್ಪತ್ರೆಗೆ ಬುಧವಾರ ತಡರಾತ್ರಿ ಅಪ್ರಾಪ್ತನೊಬ್ಬ ಚಿಕಿತ್ಸೆಗಾಗಿ ಸ್ನೇಹಿತನೊಂದಿಗೆ ಬಂದಿದ್ದ. ಚಿಕಿತ್ಸೆ ಬಳಿಕ ಡಾ.ಜಾವೇದ್ ಅಖ್ತರ್ ಅವರಿಗೆ ಗುಂಡಿಕ್ಕಿ ಹತ್ಯೆಗೈದಿದ್ದ.

    ವೈದ್ಯರನ್ನು ಹತ್ಯೆಗೈದ ಬಾಲಕ, ತನ್ನ ಗಾಯಗೊಂಡ ಕಾಲ್ಬೆರಳಿಗೆ ಡ್ರೆಸ್ಸಿಂಗ್ ಮಾಡಿಸಿಕೊಂಡಿದ್ದ. ಬಳಿಕ ಪ್ರಿಸ್ಕ್ರಿಪ್ಷನ್ ಬೇಕು ಎಂದು ಕೇಳಿದ್ದ. ಡಾ.ಅಖ್ತರ್ ಕ್ಯಾಬಿನ್‌ಗೆ ತೆರಳುತ್ತಿದ್ದಂತೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದ.

    ಕೃತ್ಯಕ್ಕೆ ಬಳಸಿದ ಪಿಸ್ತೂಲ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನರ್ಸಿಂಗ್ ಹೋಂನ ಮಹಿಳಾ ನರ್ಸ್ ಮತ್ತು ಆಕೆಯ ಪತಿಯನ್ನು ಸಹ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಗುಂಡಿನ ಚಕಮಕಿಯಲ್ಲಿ ಮೂವರು ಸಾವು, 20 ಮಂದಿಗೆ ಗಾಯ

  • ದೆಹಲಿ ಪೊಲೀಸರ ಭರ್ಜರಿ ಬೇಟೆ – 2,000 ಕೋಟಿ ಮೌಲ್ಯದ ಕೊಕೇನ್ ವಶ

    ದೆಹಲಿ ಪೊಲೀಸರ ಭರ್ಜರಿ ಬೇಟೆ – 2,000 ಕೋಟಿ ಮೌಲ್ಯದ ಕೊಕೇನ್ ವಶ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) 2,000 ಕೋಟಿ ರೂ. ಮೌಲ್ಯದ 500 ಕೆಜಿ ಕೊಕೇನ್‍ನ್ನು (Cocaine) ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಡ್ರಗ್ಸ್ ಸ್ಮಗ್ಲಿಂಗ್ ತಂಡ ಈ ಬೃಹತ್ ಕೊಕೇನ್ ರವಾನೆಯ ಹಿಂದೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ಭಾನುವಾರ 400 ಗ್ರಾಂ ಹೆರಾಯಿನ್ ಮತ್ತು 160 ಗ್ರಾಂ ಕೊಕೇನ್ ವಶಪಡಿಸಿಕೊಂಡು ಇಬ್ಬರು ಅಫ್ಘಾನಿಸ್ತಾನ ಪ್ರಜೆಗಳನ್ನು ಬಂಧಿಸಲಾಗಿತ್ತು. ಇದಾದ ನಂತರ ಮಾದಕ ವಸ್ತುಗಳ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ಬೃಹತ್ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ.

    ಭಾನುವಾರ ಬಂಧಿಸಲಾಗಿದ್ದ ಆರೋಪಿಗಳನ್ನು ಹಾಶಿಮಿ ಮೊಹಮ್ಮದ್ ವಾರಿಸ್ ಮತ್ತು ಅಬ್ದುಲ್ ನಯೀಬ್ ಎಂದು ಗುರುತಿಸಲಾಗಿದೆ.

    ವಾರಿಸ್ ಜನವರಿ 2020 ರಿಂದ ಭಾರತದಲ್ಲಿ ವಾಸಿಸುತ್ತಿದ್ದಾನೆ. ಆತನ ಕುಟುಂಬ ಅಫ್ಘಾನಿಸ್ತಾನದಲ್ಲಿದೆ. ಭಾರತಕ್ಕೆ ಬಂದ ನಂತರ ವಿಕಾಸಪುರಿಯಲ್ಲಿ ಮೆಡಿಕಲ್ ಸ್ಟೋರ್‌ನಲ್ಲಿ ಆತ ಕೆಲಸ ಮಾಡುತ್ತಿದ್ದ. ನಯೀಬ್ ಕೂಡ ಆಫ್ಘಾನ್ ಪ್ರಜೆಯಾಗಿದ್ದು, ಅವನು ತನ್ನ ತಂದೆಯೊಂದಿಗೆ ಜನವರಿ 2020 ರಿಂದ ಭಾರತದಲ್ಲಿ ವಾಸವಾಗಿದ್ದಾನೆ. ಆತನ ಇಡೀ ಕುಟುಂಬವು ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದೆ.

    ನಯೀಬ್ ಮತ್ತು ವಾರಿಸ್ ವಿಕಾಸಪುರಿಯ ಮೆಡಿಕಲ್ ಸ್ಟೋರ್‌ನಲ್ಲಿ ಭೇಟಿಯಾಗಿದ್ದರು. ಬಳಿಕ ಐಷರಾಮಿ ಜೀವನಶೈಲಿಗಾಗಿ ವಾರಿಸ್ ನಯೀಬ್ ನನ್ನು ಡ್ರಗ್ ವ್ಯವಹಾರಕ್ಕೆ ಆಮಿಷವೊಡ್ಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಇನ್ನೂ ಅದೇ ದಿನ ಕಸ್ಟಮ್ಸ್ ಅಧಿಕಾರಿಗಳು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 24 ಕೋಟಿ ರೂ. ಮೌಲ್ಯದ 1,660 ಗ್ರಾಂ ಕೊಕೇನ್‍ನ್ನು ವಶಪಡಿಸಿಕೊಂಡಿದ್ದರು.

    ದುಬೈನಿಂದ ದೆಹಲಿಗೆ ಆಗಮಿಸಿದ್ದ ಫೆಡರಲ್ ರಿಪಬ್ಲಿಕ್ ಆಫ್ ಲೈಬೀರಿಯಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

  • ಹಿಂದೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ ಹೊಟ್ಟೆಗೆ ಚಾಕು ಇರಿದ ಯುವಕ

    ಹಿಂದೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ ಹೊಟ್ಟೆಗೆ ಚಾಕು ಇರಿದ ಯುವಕ

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ (BMTC) ವೋಲ್ವೋ ಬಸ್ ಕಂಡಕ್ಟರ್‌ಗೆ ಪ್ರಯಾಣಿಕನೊಬ್ಬ ಚಾಕು ಇರಿದ ಪ್ರಕರಣ ನಗರದಲ್ಲಿ (Bengaluru) ನಡೆದಿದೆ.

    ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ವೈದೇಹಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ವೋಲ್ವೋ ಬಸ್ ಹತ್ತಿದ್ದಾನೆ. ಬಸ್ ಹತ್ತಿದವನು ಒಳಗಡೆ ಹೋಗದೆ ಡೋರ್ ಸಮೀಪ ನಿಂತಿದ್ದಾನೆ. ಈ ವೇಳೆ ಕಂಡಕ್ಟರ್ ಯೋಗಿಶ್ ಯುವಕನಿಗೆ ಒಳಗಡೆ ಹೋಗುವಂತೆ ಸೂಚಿಸಿದ್ದಾರೆ. ಅಷ್ಟಕ್ಕೇ ಕೋಪಗೊಂಡಿರುವ ಯುವಕ ಕಂಡಕ್ಟರ್ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಎರಡು ಮೂರು ಬಾರಿ ಇರಿದ್ದಾನೆ.

    ಬಸ್‌ನಲ್ಲಿದ್ದ ಸಹ ಪ್ರಯಾಣಿಕರು ಭಯಭೀತರಾಗಿ ಚಿರಾಡಿದಾಗ ಯುವಕ ಇಳಿದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಬಳಿಕ ಬಸ್‍ನಲ್ಲಿದ್ದ ಪ್ರಯಾಣಿಕರು 112 ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಕೂಡಲೇ ಘಟನ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಆಗಮಿಸಿ ಕಂಡಕ್ಟರ್ ಯೋಗಿಶ್ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಚಾಕು ಇರಿದಿದ್ದ ಯುವಕನ್ನ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ. ಆರೋಪಿ ಹರಿಸಿಂಹ ಜಾರ್ಖಂಡ್ ಮೂಲದವನು ಎಂದು ತಿಳಿದು ಬಂದಿದೆ.

  • ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

    ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

    ಲಕ್ನೋ: ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    ಯೂಟ್ಯೂಬ್‍ನಲ್ಲಿ ಪ್ರಸಾರವಾದ ಮಾನಹಾನಿ ವಿಚಾರದಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನನ್ನ ಹೆಸರಿಗೆ ಕಳಂಕ ಬಂದಿದೆ ಎಂದು ದೂರಿನಲ್ಲಿ ಗಂಭೀರ ಆರೊಪ ಮಾಡಿದ್ದರು. ತಮ್ಮ ವಿರುದ್ಧ ಪ್ರಸಾರವಾದ ಸುದ್ದಿ `ಆಧಾರರಹಿತ’ ಎಂದು ವಿಕೆ ಸಿಂಗ್ ಉಲ್ಲೇಖಿಸಿದ್ದರು.

    ಈ ಕೃತ್ಯವನ್ನು ಕ್ಷಮಿಸಲಾಗುವುದಿಲ್ಲ ಮತ್ತು ಇದು ನನ್ನ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ಇದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದಿದ್ದರು.

    ಆರೋಪಿ ವಿರುದ್ಧ ಬಿಎನ್‍ಎಸ್ ಸೆಕ್ಷನ್ 356 (ಮಾನನಷ್ಟ), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 61 (2) (ಕ್ರಿಮಿನಲ್ ಪಿತೂರಿಯ) ಮತ್ತು ಐಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

  • ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 43 ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಜಪ್ತಿ

    ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 43 ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಜಪ್ತಿ

    ಬೀದರ್: ಬೀದರ್ ಜಿಲ್ಲಾ ಪೊಲೀಸರು 43 ಲಕ್ಷಕ್ಕೂ ರೂ. ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಿದ್ದು, ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ ಕಳ್ಳರಿಗೆ ಬಿಗ್ ಶಾಕ್ ನೀಡಿದ್ದಾರೆ.ಇದನ್ನೂ ಓದಿ: ಶೂಟಿಂಗ್ ಮುಗಿಸಿದ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

    35 ಲಕ್ಷ ರೂ. ಅಧಿಕ ಮೌಲ್ಯದ ಬೈಕ್, 5 ಲಕ್ಷ 95 ಸಾವಿರ ರೂ. ಮೌಲ್ಯದ ಚಿನ್ನಧಾಭರಣ, 1 ಲಕ್ಷ 50 ಸಾವಿರ ರೂ. ಮೌಲ್ಯದ ಕಳ್ಳತನವಾಗಿದ್ದ ಕುರಿಗಳು, 21 ಸಾವಿರ ರೂ. ಮೌಲ್ಯ ಬೆಳ್ಳಿ ಹಾಗೂ 40 ಸಾವಿರ ರೂ. ಮೌಲ್ಯದ ನೀರಿನ ಪಂಪಸೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಜಿಲ್ಲೆಯಾದ್ಯಂತ 9 ಠಾಣೆಯಲ್ಲಿ ದಾಖಲಾಗಿದ್ದ 20 ಪ್ರಕರಣಗಳಲ್ಲಿ ಒಟ್ಟು 25 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೊದಲ ಬಾರಿಗೆ ಪೊಲೀಸರು 35 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಜಪ್ತಿ ಮಾಡಿದ್ದು, ಈ ಮೂಲಕ ಅಂತರ ರಾಜ್ಯದಿಂದ ಬಂದು ಬೈಕ್ ಕಳ್ಳತನ ಮಾಡುವ ಖದೀಮರಿಗೆ ಬಿಗ್ ಶಾಕ್ ನೀಡಿದ್ದಾರೆ.ಇದನ್ನೂ ಓದಿ: ಹಂಸ ದಮಯಂತಿಯಂತೆ ಪೋಸ್ ಕೊಟ್ಟ ಹರ್ಷಿಕಾ

  • ತಾಯಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಟರು – ಪಾಪಿಗಳು ಅರೆಸ್ಟ್

    ತಾಯಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಟರು – ಪಾಪಿಗಳು ಅರೆಸ್ಟ್

    ಅಗರ್ತಲಾ: ಇಬ್ಬರು ಮಕ್ಕಳು ಸೇರಿ ತಾಯಿಯನ್ನು (Mother) ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ (Tripura) ನಡೆದಿದೆ.

    ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ನಿಲ್ದಾಣ ನಿರ್ಮಾಣವಾಗಿ 12 ವರ್ಷ ಕಳೆದರೂ ಇನ್ನೂ ಆರಂಭಗೊಂಡಿಲ್ಲ ನಗರ ಸಾರಿಗೆ!

    ಮಹಿಳೆಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ (Police) ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ತಿಳಿಸಿದ್ದಾರೆ.

    ಹತ್ಯೆಗೀಡಾದ ಮಹಿಳೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಆರೋಪಿಗಳನ್ನು ಇಂದು (ಸೋಮವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

  • ಛತ್ತೀಸ್‍ಗಢದಲ್ಲಿ ನಕಲಿ ಎಸ್‍ಬಿಐ ಬ್ರಾಂಚ್ ತೆರೆದು ವಂಚನೆ – ಮೂವರು ಅರೆಸ್ಟ್

    ಛತ್ತೀಸ್‍ಗಢದಲ್ಲಿ ನಕಲಿ ಎಸ್‍ಬಿಐ ಬ್ರಾಂಚ್ ತೆರೆದು ವಂಚನೆ – ಮೂವರು ಅರೆಸ್ಟ್

    ರಾಯ್‍ಪುರ: ಛತ್ತೀಸ್‍ಗಢದ (Chhattisgarh) ಶಕ್ತಿ ಜಿಲ್ಲೆಯಲ್ಲಿ ಕಿಡಿಗೇಡಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹೆಸರಲ್ಲಿ ನಕಲಿ ಶಾಖೆಯೊಂದನ್ನು ತೆರೆದು ಜನರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

    ಮಲ್ಖರೌಡ ಪೊಲೀಸ್ ಠಾಣಾ ವ್ಯಾಪ್ತಿಯ ಛಪೋರಾ ಗ್ರಾಮದಲ್ಲಿ ಬ್ಯಾಂಕ್‍ನ ನಕಲಿ ಶಾಖೆಯನ್ನು ನಡೆಸಲಾಗುತ್ತಿತ್ತು. ನಕಲಿ ಬ್ಯಾಂಕ್ ಘಟಕವನ್ನು ಸೆಪ್ಟೆಂಬರ್ 18 ರಂದು ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಅಂಗಡಿಯಲ್ಲಿ ಸ್ಥಾಪಿಸಲಾಗಿತ್ತು. ಈ ಸಂಬಂಧ ಪೊಲೀಸರು (Police) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಪಟೇಲ್ ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್| ಲೇಡಿ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಕಾನ್‌ಸ್ಟೇಬಲ್‌ ಅಮಾನತು

    ಈ ಘಟಕದ ಬಗ್ಗೆ ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಬಳಿಕ ಕೊರ್ಬಾದಲ್ಲಿರುವ ಎಸ್‍ಬಿಐನ ಪ್ರಾದೇಶಿಕ ಕಚೇರಿಯ ಅಧಿಕಾರಿಗಳ ತಂಡ ಪರಿಶೀಲಿಸಿದಾಗ ಅದು ನಕಲಿ ಎಂದು ತಿಳಿದು ಬಂದಿದೆ.

    ನಕಲಿ ಶಾಖೆಯಲ್ಲಿ ಐವರು ನೌಕರರು ಕೆಲಸ ಮಾಡುತ್ತಿದ್ದರು. ಅವರನ್ನು ಸಂದರ್ಶನಗಳ ಮೂಲಕ ನೇಮಿಸಿಕೊಳ್ಳಲಾಗಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಕಲಿ ಶಾಖೆಯಿಂದ ಕಂಪ್ಯೂಟರ್ ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

    ನಕಲಿ ಶಾಖೆಯಲ್ಲಿ ಎಷ್ಟು ಮಂದಿ ಖಾತೆ ತೆರೆದಿದ್ದಾರೆ ಮತ್ತು ಅವರಿಂದ ಎಷ್ಟು ಹಣವನ್ನು ವಸೂಲಿ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‍ಎಸ್) ಅಡಿಯಲ್ಲಿ ಮೂವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ