Tag: police

  • Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌

    Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌

    ಮೈಸೂರು: ನಗರದ ಹೊರವಲಯದಲ್ಲಿ ಅನುಮತಿ ಪಡೆಯದೇ ಪಾರ್ಟಿ ನಡೆಸಿದ್ದ ಅಲ್ಲದೇ 64 ಮಂದಿ ವಿರುದ್ಧ ಪೊಲೀಸರು (Mysuru Police) ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಬಿಎನ್‌ಎಸ್‌ ಕಲಂ 221, 223, 121(2), 15(A), 32, 34, 38(A) KE ಅನ್ವಯ ಪ್ರಕರಣ ದಾಖಲಾಗಿದೆ. ಬಂಧಿತರು ಮೈಸೂರು, ಮಡಿಕೇರಿ, ಬೆಂಗಳೂರು ಹಾಗೂ ತಮಿಳುನಾಡು (Tamil Nadu) ಮೂಲದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    ಏನಾಗಿತ್ತು?
    ಕೆಆರ್‌ಎಸ್‌ ಹಿನ್ನೀರಿನ (KRS Back Water) ಬಳಿಯಿರುವ ಎಡಹಳ್ಳಿ ಗ್ರಾಮದಲ್ಲಿ ಮಧು ಎಂಬಾತನಿಗೆ ಸೇರಿದ ಜಮೀನಿನಲ್ಲಿ ಕೆ.ಆರ್.ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಸಂತೋಷ್ ಅಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಅಧಿಕೃತವಾಗಿ ಪಾರ್ಟಿಗೆ ಅನುಮತಿ ಪಡೆಯಲಾಗಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿಯೂ ಬರೆದುಕೊಂಡಿದ್ದ. ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ನೋಂದಣಿ ಮಾಡಿಕೊಂಡಿದ್ದರು. ಆದ್ರೆ ಡಿಜೆ ಮೂಲಕ ಅಬ್ಬರದ ಮ್ಯೂಸಿಕ್ ಹಾಕಿದ್ದ ಕಾರಣ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಗೆ ಮಾಹಿತಿ ನೀಡಲಾಗಿತ್ತು. ಎಸ್ಪಿ ಆದೇಶದಂತೆ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ರಾವತರ್‌ ದಾಳಿ ನಡೆಸಿ ಸಾಕಷ್ಟು ಯುವಕ-ಯುವತಿಯರನ್ನ ವಶಕ್ಕೆ ಪಡೆದುಕೊಂಡಿದ್ದರು. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪವೂ ವ್ಯಕ್ತವಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ಎಸ್‌ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಸ್ಥಳದಲ್ಲಿ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಹಾಗೂ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಇಸ್ರೇಲ್‌ನ ರ‍್ಯಾಪರ್ ಗ್ರೇನ್ ರಿಪ್ಪರ್ ಭಾಗಿ:
    ಒಟ್ಟು 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಪಾರ್ಟಿಯಲ್ಲಿ ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ ಬಂದಿದ್ದನು. ಆಯೋಜಕರಿಂದ ಪಾರ್ಟಿಗೆ ಬರಲು ತಲಾ 2000 ರೂ. ಹಣವನ್ನು ನಿಗದಿ ಮಾಡಿದ್ದರು. ಪೊಲೀಸರ ದಾಳಿ ವೇಳೆ ಅಲ್ಲಿದ್ದ ಯುವಕ-ಯುವತಿಯರು ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ. ಇದನ್ನೂ ಓದಿ: ಲಾ ಕಾಲೇಜ್‌ಗೆ ಸೇರಿಸದಿದ್ದರೇ ಆಸ್ತಿಯಲ್ಲಿ ಭಾಗ ಕೊಡು ಅಂತ ನಮ್ಮಪ್ಪನನ್ನ ಕೇಳಿದ್ದೆ: ಸಿಎಂ

  • ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

    ಮೈಸೂರು: ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅನುಮಾನದ ಮೇರೆಗೆ (Rave Party) ಪೊಲೀಸರು ದಾಳಿ ನಡೆಸಿ, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

    ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಹೊರವಲಯದಲ್ಲಿ ರೇವ್ ಪಾರ್ಟಿ ಬಗ್ಗೆ ಅನುಮಾನಗೊಂಡು ಮೈಸೂರು ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

    ತಡರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ಪೊಲೀಸರು ದಿಢೀರ್ ಎಂಟ್ರಿ ಕೊಟ್ಟಿದ್ದು, ಪಾರ್ಟಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ. ಅಡಿಷನಲ್ ಎಸ್‌ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.ಇದನ್ನೂ ಓದಿ: ಕ್ರಿಮಿನಲ್‍ಗಳ ಮಾಹಿತಿ ನೀಡಲು ನಿರಾಕರಣೆ – ವಾಟ್ಸಾಪ್ ನಿರ್ದೇಶಕರ ವಿರುದ್ಧ ಎಫ್‍ಐಆರ್

    ಇದಕ್ಕೆ ಸಂಬಂಧಿಸಿದಂತೆ ಎಸ್‌ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಆದರೆ ಸ್ಥಳದಲ್ಲಿ ಮದ್ಯ ಹಾಗೂ ಸಿಗರೇಟ್ ದೊರೆತಿದೆ. ಎಫ್‌ಎಸ್‌ಎಲ್ ತಂಡ (FSL) ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಪಾರ್ಟಿಯಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಹಾಗೂ ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಒಟ್ಟು 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಪಾರ್ಟಿಯಲ್ಲಿ ಇಸ್ರೇಲ್‌ನಿಂದ ರ‍್ಯಾಪರ್ ಗ್ರೇನ್ ರಿಪ್ಪರ್ (Rapper Grain Ripper) ಬಂದಿದ್ದನು. ಆಯೋಜಕರಿಂದ ಪಾರ್ಟಿಗೆ ಬರಲು ತಲಾ 2000 ರೂ. ಹಣವನ್ನು ನಿಗದಿ ಮಾಡಿದ್ದರು. ಪೊಲೀಸರ ದಾಳಿ ವೇಳೆ ಅಲ್ಲಿದ್ದ ಯುವಕ-ಯುವತಿಯರು ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ.ಇದನ್ನೂ ಓದಿ: ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

  • ಕ್ರಿಮಿನಲ್‍ಗಳ ಮಾಹಿತಿ ನೀಡಲು ನಿರಾಕರಣೆ – ವಾಟ್ಸಾಪ್ ನಿರ್ದೇಶಕರ ವಿರುದ್ಧ ಎಫ್‍ಐಆರ್

    ಕ್ರಿಮಿನಲ್‍ಗಳ ಮಾಹಿತಿ ನೀಡಲು ನಿರಾಕರಣೆ – ವಾಟ್ಸಾಪ್ ನಿರ್ದೇಶಕರ ವಿರುದ್ಧ ಎಫ್‍ಐಆರ್

    ಚಂಡೀಗಢ: ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದ ಮಾಹಿತಿ ನೀಡಲು ನಿರಾಕರಿಸಿದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್‍ನ (WhatsApp) ನಿರ್ದೇಶಕ ಮತ್ತು ನೋಡಲ್ ಅಧಿಕಾರಿಗಳ ವಿರುದ್ಧ ಗುರುಗ್ರಾಮ್ (Gurugram) ಪೊಲೀಸರು (Police) ಎಫ್‍ಐಆರ್ ದಾಖಲಿಸಿದ್ದಾರೆ.

    ಮಾಹಿತಿ ನೀಡಲು ನಿರಾಕರಿಸಿದ ವಾಟ್ಸಾಪ್‍ನ ನಿರ್ದೇಶಕರು ಮತ್ತು ಅಧಿಕಾರಿಗಳ ವಿರುದ್ಧ ಸರ್ಕಾರಿ ಆದೇಶಕ್ಕೆ ಅವಿಧೇಯತೆ ತೋರುವುದು, ಅಪರಾಧಿಯನ್ನು ಕಾನೂನಿನ ಶಿಕ್ಷೆಯಿಂದ ರಕ್ಷಿಸಲು ಯತ್ನ ಮತ್ತು ಸಾಕ್ಷ್ಯವಾಗಿ ಸಲ್ಲಿಸಬೇಕಾದ ಯಾವುದೇ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಾಶಪಡಿಸುವ ಹುನ್ನಾರದ ಆರೋಪ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಚುನಾವಣಾ ಬಾಂಡ್ ಸಿಕ್ಕಿಲ್ವಾ? ಮೊದಲು ಸೂಟ್‌ಕೇಸ್, ಮೂಟೆಯಲ್ಲಿ ಕದ್ದು ತೆಗೆದುಕೊಳ್ತಿದ್ರು: ಸಿ.ಟಿ.ರವಿ

    ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಅಡಿಯಲ್ಲಿ ದೂರೊಂದು ದಾಖಲಾಗಿತ್ತು. ಅದರ ತನಿಖೆಯ ಭಾಗವಾಗಿ, ಗುರುಗ್ರಾಮ್ ಪೊಲೀಸರು, ಆರೋಪಿಗಳು ಬಳಸುತ್ತಿದ್ದ ನಾಲ್ಕು ಸಂಖ್ಯೆಗಳ ಬಗ್ಗೆ ಮಾಹಿತಿಗಾಗಿ ವಾಟ್ಸಾಪ್ ನಿರ್ದೇಶಕರ ಬಳಿ ಮಾಹಿತಿ ಕೇಳಿದ್ದರು. ಈ ಸಂಬಂಧ ಇಮೇಲ್ ಮೂಲಕ ನೋಟಿಸ್ ಸಹ ಕಳುಹಿಸಲಾಗಿತ್ತು.

    ಪೊಲೀಸರು ಕೇಳಿದ್ದ ಮಾಹಿತಿಯನ್ನು ನೀಡಲು ವಾಟ್ಸಾಪ್ ತಿರಸ್ಕರಿಸಿದೆ. ಈ ನಿರಾಕರಣೆಯು ಕಾನೂನನ್ನು ನಿರ್ಲಕ್ಷಿಸುವ ಉದ್ದೇಶವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅದರಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

  • ಐಎಎಸ್ ಅಧಿಕಾರಿ ಪತ್ನಿ ರೇಪ್ ಕೇಸ್; ತನಿಖೆಯಲ್ಲಿ ಲೋಪವೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್ ಸೂಚನೆ

    ಐಎಎಸ್ ಅಧಿಕಾರಿ ಪತ್ನಿ ರೇಪ್ ಕೇಸ್; ತನಿಖೆಯಲ್ಲಿ ಲೋಪವೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್ ಸೂಚನೆ

    ಕೋಲ್ಕತ್ತಾ: ಐಎಎಸ್ ಅಧಿಕಾರಿ ಪತ್ನಿ ಮೇಲಿನ ಅತ್ಯಾಚಾರ ಪ್ರಕರಣದ (IAS Officer’s Wife’s Rape) ಪ್ರಾಥಮಿಕ ತನಿಖೆಯನ್ನು ತಪ್ಪಾಗಿ ನಿರ್ವಹಿಸಿದ ಮೂವರು ಉನ್ನತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋಲ್ಕತ್ತಾ ಹೈಕೋರ್ಟ್ (Kolkata High Court) ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

    ತನಿಖಾ ತಂಡದಿಂದ ನಿರ್ಲಕ್ಷ್ಯ ಕಂಡುಬಂದಿದೆ ಎಂದು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ನೇತೃತ್ವದ ನ್ಯಾಯಪೀಠ ಹೇಳಿದೆ. ಕಾನೂನಿಗೆ ವಿರುದ್ಧವಾಗಿ ಪುರುಷ ಅಧಿಕಾರಿಯೊಬ್ಬರಿಗೆ ಪ್ರಕರಣ ಹೊಣೆ ನೀಡಲಾಗಿದ್ದು, ಈ ವೇಳೆ ಗಂಭೀರ ಆರೋಪಗಳನ್ನು ಸಣ್ಣ ಆರೋಪಗಳಾಗಿ ಪರಿವರ್ತಿಸಲಾಗಿತ್ತು. ಇದು ಕೆಳ ನ್ಯಾಯಾಲಯದಿಂದ ಆರೋಪಿಯ ಜಾಮೀನಿಗೆ ದಾರಿ ಮಾಡಿಕೊಟ್ಟಿತು. ಆದರೆ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ್ದು, ಆರೋಪಿಯ ಜಾಮೀನು ತಿರಸ್ಕರಿಸಿದೆ. ಅಲ್ಲದೇ ತನಿಖೆಯನ್ನು ಡೆಪ್ಯೂಟಿ ಕಮಿಷನರ್ ಮಟ್ಟದ ಅಧಿಕಾರಿಗೆ ವರ್ಗಾಯಿಸುವಂತೆ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಲೋಕಾಯುಕ್ತ FIR ಬೆನ್ನಲ್ಲೇ ಸಿಎಂಗೆ ಇಡಿ ಭಯ; ಇ-ಮೇಲ್ ಮೂಲಕ ಸ್ನೇಹಮಯಿ ಕೃಷ್ಣ ದೂರು

    ಜುಲೈ 14 ಮತ್ತು 15 ರಂದು ಈ ಘಟನೆ ನಡೆದಿದ್ದು, ಆರೋಪಿ ರಾತ್ರಿ 11:30ರ ಸುಮಾರಿಗೆ ಮನೆಗೆ ನುಗ್ಗಿ ಬಂದೂಕು ತೋರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾಯಿಸಿದ್ದರು. ಅಪರಾಧ ಗಂಭೀರ ಸ್ವರೂಪದ್ದಾದರೂ ಆರೋಪಿಗಳ ವಿರುದ್ಧ ಸಣ್ಣ ಆರೋಪ ಹೊರಿಸಲಾಗಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಗೌರವಯುತವಾಗಿ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕರ ವಿರುದ್ಧ ಯತ್ನಾಳ್ ಕಿಡಿ

    ಅತ್ಯಾಚಾರ ಆರೋಪಿಯ ಪತ್ನಿ ಮತ್ತು ಆಕೆಯ ಮಗ ತನ್ನ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದರು. ಅಲ್ಲದೇ ಆರೋಪಿಗಳು ತನ್ನ ಮನೆಗೆ ನುಗ್ಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಗಣಿಸಲು ಪೊಲೀಸರು ನಿರಾಕರಿಸಿದರು ಎಂದು ಸಂತ್ರಸ್ತೆ ಹೇಳಿದ್ದಾರೆ. ಇದನ್ನೂ ಓದಿ: ಸುನೀತಾ ವಿಲಿಯಮ್ಸ್‌ ಕರೆತರಲು ಇಂದು ನಭಕ್ಕೆ ನೆಗೆಯಲಿದೆ ಕ್ರ್ಯೂ -9

    ಇದರಿಂದ ಆರೋಪಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಲೈಂಗಿಕ ದೌರ್ಜನ್ಯದ ಆರೋಪದ ಗಂಭೀರತೆಯನ್ನು ಹಾಳು ಮಾಡಿದೆ ಎಂದಿರುವ ಕೋರ್ಟ್, ಪ್ರಕರಣದ ತನಿಖೆಯನ್ನು ನಡೆಸುವಂತೆ ಆದೇಶಿಸಿದೆ. ಅಲ್ಲದೇ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಮೂರು ದಿನಗಳೊಳಗೆ ಎಲ್ಲಾ ದಾಖಲೆಗಳು ಮತ್ತು ಕೇಸ್ ಡೈರಿಯನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸುವಂತೆ ಹಾಲಿ ತನಿಖಾಧಿಕಾರಿಗೆ ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

    ಹೈಕೋರ್ಟ್ ನಿರ್ದೇಶನದ ನಂತರ, ತನಿಖೆಯನ್ನು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣದ ಮೇಲ್ವಿಚಾರಣೆಗೆ ವಿಭಾಗೀಯ ಉಪ ಆಯುಕ್ತರಿಗೆ (ಡಿಸಿ) ತಿಳಿಸಲಾಗಿದೆ. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

  • Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ

    Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ

    ಭೋಪಾಲ್: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಲು ಮಧ್ಯಪ್ರದೇಶದ (Madhya Pradesh) ಹರ್ದಾ ಜಿಲ್ಲೆಯ ಪೊಲೀಸರು (Police) ನೈಟ್ ವಿಷನ್ ಡ್ರೋನ್ (Night Vision Drone) ಬಳಸಿ ಅರಣ್ಯ ಪ್ರದೇಶದಲ್ಲಿ ಜಾಲಾಡಿದ್ದಾರೆ.

    ಥರ್ಮಲ್ ಇಮೇಜ್ ಕ್ಯಾಮೆರಾ ಹೊಂದಿರುವ ಡ್ರೋನ್‍ನ್ನು ಭೋಪಾಲ್ ಮೂಲದ ಮಧ್ಯಪ್ರದೇಶ ಎಲೆಕ್ಟ್ರಾನಿಕ್ ಡೆವಲಪ್‍ಮೆಂಟ್ ಕಾರ್ಪೋರೇಷನ್ ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದಿತ್ಯ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

    ಡ್ರೋನ್ ಉಷ್ಣ ಸಂವೇದಕಗಳನ್ನು ಹೊಂದಿದೆ. ಇದು ಸಾಮಾನ್ಯ ಮಾನವನ ದೇಹದ ಉಷ್ಣತೆಯನ್ನು ಗ್ರಹಿಸುತ್ತದೆ. ಇದರಿಂದಾಗಿ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಅಡಗಿರುವವರನ್ನು ಕಂಡುಹಿಡಿಯುವುದು ಸುಲಭ ಎಂದು ತಿಳಿಸಿದ್ದಾರೆ.

    ಆರೋಪಿಗಾಗಿ ಹಲವು ಅಡಗುದಾಣಗಳ ಮೇಲೆ ದಾಳಿ ನಡೆಸಿದರೂ, ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ಡ್ರೋನ್ ಕ್ಯಾಮೆರಾವನ್ನು ಬಳಸಲು ಮುಂದಾಗಿದ್ದಾರೆ. ಆರೋಪಿಯು ಹರ್ದಾದಿಂದ 50 ಕಿಮೀ ದೂರದ ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

    ಸೆ.23 ರಂದು ಸಿರಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಪ್ರಜ್ಞೆ ಮರಳಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದು ಬಂದಿತ್ತು.

    ಆರೋಪಿ ಸುಮಾರು 24 ವರ್ಷ ವಯಸ್ಸಿನವನು, ಬಾಲಕಿಗೆ ತಿಂಡಿ ನೀಡಿ ನಂತರ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲಡ್ಡು ಲಡಾಯಿ | ಭದ್ರತೆಯ ನೆಪವೊಡ್ಡಿ ತಿರುಪತಿ ಭೇಟಿ ರದ್ದುಗೊಳಿಸಿದ ಜಗನ್ – ಚಂದ್ರಬಾಬು ನಾಯ್ಡು ತಿರುಗೇಟು

  • ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

    ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

    – ಸರ್.. ಗಲಾಟೆ ನಡೀತಿದೆ ಬೇಗ ಬನ್ನಿ ಅಂತಾ ಪೊಲೀಸರಿಗೆ ಸುಳ್ಳು ಕರೆ
    – ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಬಳಿ ಮಾವನ ಮನೆಗೆ ಡ್ರಾಪ್ ಕೇಳಿದ – ಮುಂದೇನಾಯ್ತು?

    ಚಿಕ್ಕಮಗಳೂರು: ಪಿತೃಪಕ್ಷದ ಊಟಕ್ಕೆ ಹೋಗಲು ವ್ಯಕ್ತಿಯೊಬ್ಬ ಪೊಲೀಸ್ ಜೀಪ್ ಕರೆಸಿಕೊಂಡಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆಯಲ್ಲಿ ನಡೆದಿದೆ.

    112 ಗೆ ಫೋನ್ ಮಾಡಿದ ವ್ಯಕ್ತಿ, ‘ಸರ್… ಗಲಾಟೆ ನಡೀತಿದೆ.. ಬೇಗ ಬನ್ನಿ’ ಅಂತಾ ಮನವಿ ಮಾಡಿದ್ದ. ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಕೇಳಿಕೊಂಡಿದ್ದಾನೆ. ಇದನ್ನೂ ಓದಿ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ‘ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಪೊಲೀಸರ ಬಳಿ ವ್ಯಕ್ತಿ ಮನವಿ ಮಾಡಿದ್ದಾನೆ. ಇದರಿಂದ ಪೆಚ್ಚಾದ ಪೊಲೀಸರು, ಆ ವ್ಯಕ್ತಿಗೆ ಬೈಯ್ಯಬೇಕೋ ಅಥವಾ ನಗಬೇಕೋ ತಿಳಿಯದೇ ಸುಮ್ಮನಾದರು.

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದೆ ಎಂದು ಅದೇ ಗ್ರಾಮದ ಅಶೋಕ್ ಎಂಬ ವ್ಯಕ್ತಿ, ಪೊಲೀಸರಿಗೆ ಫೋನ್ ಮಾಡಿದ್ದ. ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್‌ಗೆ ಪೊಲೀಸರು ಬುದ್ದಿಮಾತು ಹೇಳಿದ್ದಾರೆ. ಕೊನೆಗೆ ಪೊಲೀಸರು, ಲಾರಿಯೊಂದಕ್ಕೆ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

  • ಬಿಹಾರದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ – ಪ್ರಯಾಣಿಕರಿಗೆ ಗಾಯ

    ಬಿಹಾರದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ – ಪ್ರಯಾಣಿಕರಿಗೆ ಗಾಯ

    ಪಾಟ್ನಾ: ಬಿಹಾರದ (Bihar) ಸಮಸ್ತಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ (Swatantrata Senani Express) ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

    ಮುಜಾಫರ್‍ಪುರ-ಸಮಸ್ತಿಪುರ ಮಾರ್ಗದಲ್ಲಿ ಜೈನಗರದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮಸ್ತಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ರೈಲಿನ ಕೆಲವು ಕೋಚ್‍ಗಳ ಗಾಜುಗಳು ಪುಡಿಪುಡಿಯಾಗಿವೆ.

    ಸಮಸ್ತಿಪುರ ರೈಲ್ವೆ ಪೊಲೀಸರು (Railway Police)  ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಾಳಿಕೋರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕಲ್ಲುಗಳನ್ನು ಏಕೆ ಎಸೆಯಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

    ಸಮಸ್ತಿಪುರ ರೈಲು ನಿಲ್ದಾಣದ ಹೊರ ಸಿಗ್ನಲ್‍ನಲ್ಲಿ ಈ ಘಟನೆ ಸಂಭವಿಸಿದೆ. ರೈಲು ಮುಜಾಫರ್‍ಪುರಕ್ಕೆ ಹೊರಡುವ ಮೊದಲು ಗುರುವಾರ ರಾತ್ರಿ 8:45ರ ಸುಮಾರಿಗೆ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಂತಿತ್ತು. ಬಳಿಕ ಹೊರಗಿನ ಸಿಗ್ನಲ್ ತಲುಪಿದ ತಕ್ಷಣ ಕಲ್ಲು ತೂರಾಟ ಆರಂಭವಾಯಿತು. ದಾಳಿಯಿಂದಾಗಿ ರೈಲು 45 ನಿಮಿಷ ತಡವಾಯಿತು.

    ಕಳೆದ ವಾರ ದೆಹಲಿ-ಜೈನಗರ ಮಾರ್ಗದ ಗಾಜಿಪುರದ ರಾಜ್‍ದೇಪುರ್ ಬಳಿ ರೈಲ್ವೇ ಹಳಿಯ ಮೇಲೆ ಮರದ ದಿಮ್ಮಿ ಇರಿಸಲಾಗಿತ್ತು. ಇದರಿಂದ ರೈಲಿನ ಇಂಜಿನ್‍ನ ಭಾಗಕ್ಕೆ ಹಾನಿಯಾಗಿ, ಮುನ್ನೆಚ್ಚರಿಕೆಯಾಗಿ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

  • ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ

    ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ

    ಭವನೇಶ್ವರ್: ಬೆಂಗಳೂರಿನ ವೈಯಾಲಿಕಾವಲ್‍ನಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಭೀಕರ ಹತ್ಯೆ ಪ್ರಕರಣಕ್ಕೆ (Bengaluru fridge horror ) ಸಂಬಂಧಿಸಿದಂತೆ ಆರೋಪಿ ಮುಕ್ತಿ ರಂಜನ್ ರಾಯ್‍ನ ತಾಯಿ ಕುಂಜಲತಾ ರಾಯ್ ಆಘಾತಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತಾಡಿದ ಅವರು, ತಮ್ಮ ಮಗ ಕೊಲೆಯಾದ ಮಹಿಳೆಯ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಉಸಿರುಗಟ್ಟಿಸಿ ಮಹಾಲಕ್ಷ್ಮಿ ಕೊಲೆ; ಆ್ಯಕ್ಸಲ್ ಬ್ಲೇಡ್‌ನಿಂದ ದೇಹ ಪೀಸ್ – ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್

    ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ಒಡಿಶಾದ (Odisha) ಭದ್ರಕ್‍ನ ಎಸ್‍ಪಿ ವರುಣ್ ಗುಂಟುಪಲ್ಲಿ, ಇತ್ತೀಚೆಗೆ ನಡೆದ ಮಹಿಳೆಯ ಕೊಲೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರ ತಂಡ ಇಲ್ಲಿಗೆ ಬಂದಿತ್ತು. ಪ್ರಮುಖ ಆರೋಪಿ ಭದ್ರಕ್‍ಗೆ ಸೇರಿದವನು ಎಂದು ತಂಡ ಹೇಳಿದೆ. ತಂಡವು ಆರೋಪಿಗಳನ್ನು ಬಂಧಿಸುವ ಮೊದಲು ಮುಕ್ತಿರಾಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಬೆಂಗಳೂರು ಪೊಲೀಸರಿಗೆ (Police) ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

    ರಾಯ್ ಮತ್ತು ಮಹಾಲಕ್ಷ್ಮಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಭೇಟಿಯಾಗಿದ್ದರು. ಬಳಿಕ ಇಬ್ಬರು ಸಂಪರ್ಕದಲ್ಲಿದ್ದರು. ಮಹಾಲಕ್ಷ್ಮಿ ತನ್ನನ್ನು ಮದುವೆಯಾಗುವಂತೆ ರಾಯ್‍ಗೆ ಒತ್ತಡ ಹೇರುತ್ತಿದ್ದಳು. ಇದು ಆಗಾಗ ಜಗಳ ನಡೆಯಲು ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವನ್ನು ಡೆಟ್‍ನೋಟ್‍ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿ ಡೆತ್‍ನೋಟ್ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ಸೆಪ್ಟಂಬರ್ 3 ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಮುಕ್ತಿ ರಂಜನ್ ರಾಯ್ ಉಲ್ಲೇಖಿಸಿದ್ದಾನೆ. ಸೆ.3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದೇನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಬರೆದಿದ್ದಾನೆ. ಇದನ್ನೂ ಓದಿ: ಬಿಜೆಪಿ ನಾಯಕನ ಪತ್ನಿ ವಿರುದ್ಧ ಮಾನಹಾನಿ ಹೇಳಿಕೆ – ಸಂಜಯ್ ರಾವತ್‍ಗೆ 15 ದಿನಗಳ ಜೈಲು!

  • ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್, ಬೆಡ್‍ರೂಮ್‍ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ ಕಾಮುಕ ಅರೆಸ್ಟ್

    ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್, ಬೆಡ್‍ರೂಮ್‍ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ ಕಾಮುಕ ಅರೆಸ್ಟ್

    ನವದೆಹಲಿ: ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್ ಮತ್ತು ಬೆಡ್‍ರೂಮ್‍ನ ಬಲ್ಬ್‍ಗಳಲ್ಲಿ ಹಿಡನ್ ಕ್ಯಾಮೆರಾ (Spy Camera) ಇಟ್ಟಿದ್ದ ಆರೋಪಿಯನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಬಂಧಿತ ಆರೋಪಿ ಕರಣ್ ಮನೆ ಮಾಲೀಕನ ಮಗನಾಗಿದ್ದು, ಕಟ್ಟಡದ ಇನ್ನೊಂದು ಮಹಡಿಯಲ್ಲಿ ವಾಸವಾಗಿದ್ದ. ಸಿವಿಲ್ ಸರ್ವೀಸ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಮಹಿಳೆ ಶಕರ್‍ಪುರದ ಬಾಡಿಗೆಗೆ ಇದ್ದರು. ಮಹಿಳೆ ಇತ್ತೀಚೆಗೆ ಉತ್ತರ ಪ್ರದೇಶದ ತನ್ನ ಊರಿಗೆ ತೆರಳುವಾಗ ಮನೆಯ ಕೀಯನ್ನು ಅವನ ಬಳಿ ಕೊಟ್ಟು ಹೋಗಿದ್ದಳು. ಈ ವೇಳೆ ಆರೋಪಿ, ಮಹಿಳೆ ವಾಸವಿದ್ದ ಮನೆಯಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಅಪೂರ್ವ ಗುಪ್ತಾ ಅವರು, ಮಹಿಳೆ ಇತ್ತೀಚೆಗೆ ತನ್ನ ವಾಟ್ಸಪ್ ಖಾತೆಯಲ್ಲಿ ಕೆಲವು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಳು. ಬಳಿಕ ಆಕೆಯ ವಾಟ್ಸಪ್ ಖಾತೆಯನ್ನು ಬೇರೆ ಲ್ಯಾಪ್‍ಟಾಪ್‍ನಲ್ಲಿ ಬಳಕೆ ಮಾಡುತ್ತಿರುವುದು ತಿಳಿದು ಬಂದಿತ್ತು. ಬಳಿಕ ಆಕೆ ತಕ್ಷಣ ಲಾಗ್ ಔಟ್ ಮಾಡಿದ್ದಳು.

    ಬಳಿಕ ತನ್ನನು ಯಾರೋ ಕಣ್ಗಾವಲಿನಲ್ಲಿಟ್ಟಿದ್ದಾರೆ ಎಂದು ಶಂಕಿಸಿ ಮಹಿಳೆ ಮನೆಯನ್ನು ಹುಡುಕಿದಾಗ ಬಾತ್‍ರೂಮ್‍ನಲ್ಲಿ ಅಡಗಿಸಿಟ್ಟಿದ್ದ ಕ್ಯಾಮೆರಾ ಪತ್ತೆಯಾಗಿದೆ. ಬಳಿಕ ಮಹಿಳೆ ಪೊಲಿಸರಿಗೆ ಮಾಹಿತಿ ನೀಡಿದ್ದಳು. ಪೊಲೀಸರು ಮತ್ತೆ ತಪಾಸಣೆ ನಡೆಸಿದಾಗ ಆಕೆಯ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‍ನಲ್ಲಿ ಮತ್ತೊಂದು ಕ್ಯಾಮೆರಾ ಅಳವಡಿಸಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿ ಕರಣ್, ಮೂರು ತಿಂಗಳ ಹಿಂದೆ ಮಹಿಳೆ ಊರಿಗೆ ತೆರಳಿದ್ದಾಗ ರೂಮಿನ ಕೀ ನನ್ನ ಬಳಿ ಕೊಟ್ಟು ಹೋಗಿದ್ದಳು. ಈ ವೇಳೆ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಮೂರು ಸ್ಪೈ ಕ್ಯಾಮೆರಾಗಳನ್ನು ಖರೀದಿಸಿ ಅಳವಡಿಸಿದ್ದಾಗಿ ಹೇಳಿದ್ದಾನೆ.

    ಈ ಕ್ಯಾಮೆರಾಗಳನ್ನು ಆನ್‍ಲೈನ್‍ನಲ್ಲಿ ನಿರ್ವಹಿಸಲಾಗುವುದಿಲ್ಲ. ದೃಶ್ಯಗಳನ್ನು ಮೆಮೊರಿ ಕಾರ್ಡ್‍ಗಳಲ್ಲಿ ಸಂಗ್ರಹಿಸಲಾಗುತ್ತದೆ. ಹೀಗಾಗಿ, ಕರಣ್ ತನ್ನ ಕೋಣೆಯಲ್ಲಿನ ವಿದ್ಯುತ್ ರಿಪೇರಿ ನೆಪದಲ್ಲಿ ಮಹಿಳೆಯ ಕೀಗಳನ್ನು ಪದೇ ಪದೇ ಕೇಳುತ್ತಿದ್ದ. ಇದರಿಂದಾಗಿ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ತನ್ನ ಲ್ಯಾಪ್‍ಟಾಪ್‍ಗೆ ವರ್ಗಾಯಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಕೃತ್ಯಕ್ಕೆ ಬಳಿಸಿದ ಕ್ಯಾಮೆರಾ ಹಾಗೂ ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿಕಲಾಂಗನಾಗಿದ್ದು ಆತನ ವಿರುದ್ಧ ಬಿಎನ್‍ಎಸ್‍ಎಸ್ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

  • ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

    ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

    ಮುಂಬೈ: ಬದ್ಲಾಪುರದಲ್ಲಿ (Badlapur) ಇಬ್ಬರು ನರ್ಸರಿ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅಕ್ಷಯ್ ಶಿಂಧೆಯನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಪೊಲೀಸರ ಈ ನಡೆಯನ್ನು ಆರೋಪಿ ತಾಯಿ ಮತ್ತು ಸಹೋದರ ಅಲ್ಕಾ ಶಿಂಧೆ ತೀವ್ರವಾಗಿ ಖಂಡಿಸಿದ್ದಾರೆ.

    ಪೊಲೀಸರ ಎನ್‌ಕೌಂಟರ್ ಕುರಿತು ಮಾತನಾಡಿರುವ ಮೃತ ಆರೋಪಿ ತಾಯಿ, ಪೊಲೀಸರು ನನ್ನ ಮಗನನ್ನು ಕೊಂದಿದ್ದಾರೆ. ಈ ಸಂಬಂಧ ಶಾಲೆಯ ಆಡಳಿತ ಮಂಡಳಿಯನ್ನೂ ತನಿಖೆ ಮಾಡಬೇಕು ಎಂದು ಆರೋಪಿಯ ತಾಯಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ಪೊಲೀಸರು ನನ್ನ ಮಗನ ಹೇಳಿಕೆ ದಾಖಲಿಸುವ ಸಲುವಾಗಿ ಕರೆದುಕೊಂಡು ಹೋದರು. ಅದೇನೆಂದು ನಮಗೆ ತಿಳಿದಿಲ್ಲ. ನನ್ನ ಮಗ ಪಟಾಕಿ ಸಿಡಿಸುವುದಕ್ಕೆ ಹೆದರುತ್ತಿದ್ದ. ಹಾಗಿರುವಾಗ ಅವನು ಪೊಲೀಸರ ಮೇಲೆ ಹೇಗೆ ಗುಂಡು ಹಾರಿಸಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ಈ ಬಗ್ಗೆ ಅಕ್ಷಯ್ ಶಿಂಧೆ ಸಹೋದರ ಅಲ್ಕಾ ಶಿಂಧೆ ಮಾತನಾಡಿ, ಹತ್ಯೆಯು ಯೋಜಿತ ಸಂಚಾಗಿದೆ. ಪೊಲೀಸರೊಂದಿಗೆ ಶಾಲಾ ಆಡಳಿತ ಮಂಡಳಿಯನ್ನೂ ತನಿಖೆ ಮಾಡಬೇಕು. ಅಲ್ಲಿಯವರೆಗೆ ನಾವು ಅಕ್ಷಯ್ ಶವವನ್ನು ಸ್ವೀಕರಿಸುವುದಿಲ್ಲ. ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    ಐದು ದಿನಗಳ ಹಿಂದೆಯಷ್ಟೇ ಶಾಲೆಯ ಶೌಚಾಲಯದಲ್ಲಿ ನಾಲ್ಕು ಮತ್ತು ಐದು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಅಕ್ಷಯ್ ಶಿಂಧೆಯನ್ನ ಬಂಧಿಸಲಾಗಿತ್ತು. ಆರೋಪಿಯನ್ನು ಕರೆತರುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಗನ್ ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದು ಆರೋಪಿ ಸಾವನ್ನಪ್ಪಿದ್ದ. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಪ್ರಕರಣ – ವೈದ್ಯರಿಂದ ಇಂದು ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ