Tag: police

  • ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    – ಕೂಡಲೇ ಪೊಲೀಸರ ಮುಂದೆ ಶರಣಾಗಿ ವಿಚಾರಣೆ ಎದುರಿಸು
    – ಇದು ನಾನು ಆತನಿಗೆ ಕೊಡುತ್ತಿರುವ ಎಚ್ಚರಿಕೆ

    ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಅವರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು.

     

    ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.  ಇದನ್ನೂ ಓದಿ: ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು! 

    ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.

    ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

    ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ತೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

    ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೇ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದನ್ನು ನಾನು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೇ ಹಿಂದಿರುಗಿ ಬರಬೇಕು.

    ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೇ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೇ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

  • ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು!

    ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು!

    ಡೆಹ್ರಾಡೂನ್‌: ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ (Police) ಅಧಿಕಾರಿಗಳು ಬೊಲೆರೋ ಜೀಪ್‌ ವಾಹನವನ್ನು ಏಮ್ಸ್ (AIIMS) ಆಸ್ಪತ್ರೆಗೆ ನುಗ್ಗಿಸಿದ ಘಟನೆ ಋಷಿಕೇಶದಲ್ಲಿ (Rishikesh) ನಡೆದಿದೆ.

    ಸಿನಿಮಾದಂತೆ ಏಮ್ಸ್‌ ತುರ್ತು ಚಿಕಿತ್ಸಾ ವಾರ್ಡ್‌ ಮೂಲಕ ವಾಹನ ಸಂಚರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲ್‌ (Video Viral) ಆಗಿದೆ. ಏಮ್ಸ್‌ನಲ್ಲಿರುವ ನರ್ಸಿಂಗ್ ಅಧಿಕಾರಿ ಸತೀಶ್‌ ಕುಮಾರ್‌ ಮಹಿಳಾ ವೈದ್ಯೆಯೊಬ್ಬರನ್ನು ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಲೈಂಗಿಕವಾಗಿ ನಿಂದಿಸಿದ ಆರೋಪ ಕೇಳಿ ಬಂದಿದೆ.  ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

     

     

    ಈತನನ್ನು ಸೇವೆಯಿಂದಲೇ ವಜಾಗೊಳಿಸುವಂತೆ ಏಮ್ಸ್‌ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದರು.

    ಆತನನ್ನು ಬಂಧಿಸಿ ಕರೆ ತರುತ್ತಿದ್ದಾಗ ಪ್ರತಿಭಟನಕಾರರು ಪೊಲೀಸ್‌ ವಾಹನವನ್ನು ಸುತ್ತುವರಿದು ಆತನನನ್ನು ಕೂಡಲೇ ಸೇವೆಯಿಂದಲೇ ತೆಗೆದು ಹಾಕುವಂತೆ ಆಗ್ರಹಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

     

    ವಾಹನ ನುಗ್ಗಿಸಿದ್ದು ಯಾಕೆ?
    ನಾಲ್ಕನೇ ಮಹಡಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಅರೆಸ್ಟ್‌ ಮಾಡಲು ಆಸ್ಪತ್ರೆಗೆ ಬಂದಿದ್ದರು.  ಆಸ್ಪತ್ರೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಏಮ್ಸ್‌ ವೈದ್ಯರು, ನರ್ಸ್‌ಗಳು ಪ್ರತಿಭಟನೆ ನಡೆಸುತ್ತಿದ್ದರು. ಬಂಧಿಸಿ ಕರೆ ತರುವಾಗ ಆತನ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇತ್ತು. ಈ ಕಾರಣಕ್ಕೆ ಆಸ್ಪತ್ರೆಯ ಒಳಗಡೆ ವಾಹನ ನುಗ್ಗಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

     

  • ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    ನವದೆಹಲಿ: ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ (Home Ministry Office) ಬಾಂಬ್ ಬೆದರಿಕೆ ಮೇಲ್ ಬಂದಿದೆ.

    ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬಾಂಬ್‌ ಬೆದರಿಕೆ (Bomb Threat) ಮೇಲ್‌ ಬಂದಿತ್ತು. ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ.

    ತನಿಖೆಗೆ ಇಳಿದ ಪೊಲೀಸರಿಗೆ ಇದು ನಕಲಿ ಬೆದರಿಕೆ ಎನ್ನುವುದು ಗೊತ್ತಾಗಿದೆ. ಐಪಿ ವಿಳಾಸವನ್ನು ಆಧಾರಿಸಿ ಪೊಲೀಸರು ಪೊಲೀಸರು ಇಮೇಲ್‌ ಕಳುಹಿಸಿದ ವ್ಯಕ್ತಿಯ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ನಾರ್ತ್ ಬ್ಲಾಕ್‌ನಲ್ಲಿ ಹೆಚ್ಚಿನ ಶೋಧ ನಡೆಸುತ್ತಿದ್ದಾರೆ.

    ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿದಂತೆ ಹಲವು ಸಂಸ್ಥೆಗಳು ಕಳೆದ ತಿಂಗಳಿನಿಂದ ಬೆದರಿಕೆ ಕರೆ, ಮೇಲ್‌ ಬರುತ್ತಲೇ ಇದೆ.

  • ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    – ದಿಢೀರ್‌ ಪುಣೆಗೆ ಆಗಮಿಸಿದ ಪೊಲೀಸರ ಜೊತೆ ಫಡ್ನಾವೀಸ್‌ ಸಭೆ
    – ಬೆಂಗಳೂರು ಶೋರೂಂನಿಂದ ಪೋರ್ಶೆ ಖರೀದಿ

    ಪುಣೆ: ಮದ್ಯದ ಅಮಲಿನಲ್ಲಿ ಐಶಾರಾಮಿ ಪೋರ್ಶೆ ಕಾರು (Pune Porsche Accident) ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಆಪ್ರಾಪ್ತನಿಗೆ ಜಾಮೀನು (Bail) ನೀಡಿದ ವಿಚಾರ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಇದೇ ಹೊತ್ತಲ್ಲಿ, ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ (Police Station) ರಾಜ ಮರ್ಯಾದೆ ನೀಡಿದ್ದಾರೆ. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಅತಿಥ್ಯ ನೀಡಿದ ವಿಚಾರ ಬೆಳಕಿಗೆ ಬಂದಿದೆ.

    ಈ ವಿಚಾರ ತಿಳಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಾಕಷ್ಟು ಟೀಕೆ, ಆಕ್ರೋಶದ ನಂತರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪ್ರಾಪ್ತನಿಗೆ ಅಪಘಾತದ ಬಗ್ಗೆ ಪ್ರಬಂಧ ಬರೆಯುವ ಶಿಕ್ಷೆ

    ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು, ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ (Bengaluru) ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೆ 1,600 ಕಿಲೋಮೀಟರ್ ಸಂಚಾರ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ, ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ.

    200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ.ಬೈಕ್‌ನಲ್ಲಿ ತೆರಳ್ತಿದ್ದ ಟೆಕ್ಕಿಗಳಾದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ರು. ಮೃತರ ಕುಟುಂಬಸ್ಥರು ಕೂಡ, ಅಪ್ರಾಪ್ತನ ಜಾಮೀನು ರದ್ದು ಮಾಡಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

    ಫಡ್ನಾವೀಸ್‌ ಸಭೆ:
    ಪುಣೆ ಅಪಘಾತ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ಪುಣೆ ಪೊಲೀಸ್ ಆಯುಕ್ತರಿಗೆ ಫೋನ್‌ ಮಾಡಿದ್ದ ಗೃಹ ಸಚಿವರು ಆಗಿರುವ ಡಿಸಿಎಂ ದೇವೇಂದ್ರ ಫಡ್ನಾವೀಸ್ (Devendra Fadnavis) ಇಂದು ದಿಢೀರ್ ಎಂದು ಪುಣೆಯ ಪೊಲೀಸ್ ಮುಖ್ಯಕಚೇರಿಗೆ ಧಾವಿಸಿ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತರಾಟೆಗೆ ತೆಗೆದುಕೊಂಡರು.

    ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತನ ವಿಚಾರದಲ್ಲಿ ಮೃದು ಧೊರಣೆ ತಾಳದೇ, ಕಠಿಣ ಕ್ರಮಗಳನ್ನು ಜರುಗಿಸುವಂತೆ ಸೂಚನೆ ನೀಡಿದರು. 17 ವರ್ಷ ತುಂಬಿರುವ ಅಪ್ರಾಪ್ತನನ್ನು ವಯಸ್ಕ ಎಂದು ಪರಿಗಣಿಸಲು ಬಾಲನ್ಯಾಯಮಂಡಳಿ ಮೊರೆ ಹೋಗಲು ಪುಣೆ ಪೊಲೀಸರಿಗೆ ಸೂಚಿಸಿದರು.

    ಈ ಮಧ್ಯೆ ಅಪ್ರಾಪ್ತನಿಗೆ ಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪುಣೆ ಪೊಲಿಸರು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

     

  • ಅಂಜಲಿ ಬಳಿಕ ರೈಲಿನಲ್ಲಿ ಮಹಿಳೆಗೆ ಚಾಕು ಹಾಕಲು ಯತ್ನಿಸಿ ಸಿಕ್ಕಿಬಿದ್ದ ಕಿರಾತಕ ವಿಶ್ವ

    ಅಂಜಲಿ ಬಳಿಕ ರೈಲಿನಲ್ಲಿ ಮಹಿಳೆಗೆ ಚಾಕು ಹಾಕಲು ಯತ್ನಿಸಿ ಸಿಕ್ಕಿಬಿದ್ದ ಕಿರಾತಕ ವಿಶ್ವ

    ಹುಬ್ಬಳ್ಳಿ: ಅಂಜಲಿ ಕೊಲೆ (Anjali Murder) ಮಾಡಿದ್ದಲ್ಲದೇ ಮತ್ತೊಂದು ಕೊಲೆ ಮಾಡಲು ಹೋಗಿ ಕಿರಾತಕ ವಿಶ್ವ (Vishwa) ಈಗ ಅರೆಸ್ಟ್‌ ಆಗಿದ್ದಾನೆ.

    ಅಂಜಲಿಯನ್ನು ಹತ್ಯೆ ಮಾಡಿದ ಬಳಿಕ ವಿಶ್ವ ಪರಾರಿಯಾಗಿ ದಾವಣಗೆರೆ (Davanagere) ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ರೈಲಿನಲ್ಲಿ ಮಹಿಳೆ ಜೊತೆ ಗಲಾಟೆ ಮಾಡಿ ಸಿಟ್ಟಾಗಿ ಚಾಕು ಹಾಕಲು ಮುಂದಾಗಿದ್ದ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ

     

    ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು. ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ  ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಡುತ್ತದೆ.

    ಈಗ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್‌ ಆಯುಕ್ತೆ ರೇಣುಕಾ ಸುಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

  • ಬಿಷ್ಣೋಯ್, ಗೋದಾರಾ ಗ್ಯಾಂಗ್‍ನ ಐವರು ಶೂಟರ್‌ಗಳ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಬಿಷ್ಣೋಯ್, ಗೋದಾರಾ ಗ್ಯಾಂಗ್‍ನ ಐವರು ಶೂಟರ್‌ಗಳ ಅರೆಸ್ಟ್ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಚಂಡೀಗಢ: ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ರೋಹಿತ್ ಗೋದಾರಾ (Rohit Godara) ಗ್ಯಾಂಗ್‍ಗೆ ಸೇರಿದ ಐವರು ಶೂಟರ್‌ಗಳನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ದಿನೇಶ್ ಅಲಿಯಾಸ್ ದೀನು, ಜಗದೀಶ್ ಅಲಿಯಾಸ್ ಜಗ್ಗು, ವಿಷ್ಣು, ಸಾಗರ್ ಮತ್ತು ಪ್ರದೀಪ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 10 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಮೂರು ವಿದೇಶಿ ನಿರ್ಮಿತ ಗ್ಲೋಕ್ ಪಿಸ್ತೂಲ್, ಐದು ಸ್ವಯಂಚಾಲಿತ ಪಿಸ್ತೂಲ್‍ಗಳು ಮತ್ತು 55 ಸಜೀವ ಕಾಟ್ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

    ಎಲ್ಲಾ ಶೂಟರ್‍ಗಳು ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್ ಮತ್ತು ರೋಹಿತ್ ಗೋದಾರಾ ಗ್ಯಾಂಗ್ ಜೊತೆ ಕೆಲಸ ಮಾಡಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಿನೇಶ್‍ನನ್ನು ಶನಿವಾರ ಫರೂಖ್‍ನಗರದಲ್ಲಿ ಬಂಧಿಸಲಾಗಿತ್ತು. ಆತನನ್ನು ವಿಚಾರಣೆ ನಡೆಸಿದಾಗ ಉಳಿದ ಆರೋಪಿಗಳ ಬಗ್ಗೆ ಮಾಹಿತಿ ನಿಡಿದ್ದ. ಈ ಮಾಹಿತಿ ಆಧರಿಸಿ ಉಳಿದ ನಾಲ್ವರನ್ನು ಪಂಜಾಬ್‍ನ ಫಾಜಿಲ್ಕಾ ಬಳಿಯ ಅಬೋಹರ್‍ನಲ್ಲಿ ಬಂಧಿಸಲಾಗಿದೆ.

    ಫರೂಖ್‍ನಗರದಲ್ಲಿ ವೈ-ಫೈ ಕನೆಕ್ಷನ್ ಪ್ರೊವೈಡರ್ ಶಾಪ್ ನಡೆಸುತ್ತಿರುವ ದಿನೇಶ್ ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್ ಮತ್ತು ರೋಹಿತ್ ಗೋಡಾರಾರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಆತ ಶೂಟರ್‌ಗಳಿಗಾಗಿ ಅಡಗುದಾಣಗಳನ್ನು ಸಿದ್ಧಪಡಿಸುತ್ತಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಗುರುಗ್ರಾಮ್ ಪ್ರದೇಶದಲ್ಲಿ ಗ್ಯಾಂಗ್ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಮುಂದಾಗಿತ್ತು ಎಂದು ಪೊಲಿಸರು ತಿಳಿಸಿದ್ದಾರೆ.

    ಬಂಧಿತ ಆರೋಪಿಗಳು ಗ್ಯಾಂಗ್ ಲೀಡರ್‌ಗಳ ಸೂಚನೆಯ ಮೇರೆಗೆ ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್ ಪ್ರದೇಶಗಳಲ್ಲಿ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಸೀರಿಯಲ್‌ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್‌ ಫೈನ್‌!

  • ರಾಜ್ಯದ ಇತಿಹಾಸದಲ್ಲೇ 2ನೇ ಅತಿದೊಡ್ಡ ಗಾಂಜಾ ಬೇಟೆ – 15 ಕೋಟಿ ಮೌಲ್ಯದ ಗಾಂಜಾ ಸೀಜ್!

    ರಾಜ್ಯದ ಇತಿಹಾಸದಲ್ಲೇ 2ನೇ ಅತಿದೊಡ್ಡ ಗಾಂಜಾ ಬೇಟೆ – 15 ಕೋಟಿ ಮೌಲ್ಯದ ಗಾಂಜಾ ಸೀಜ್!

    ಬೀದರ್: ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.

    ಒರಿಸ್ಸಾದಿಂದ ಬೀದರ್ (Bidar)  ಮೂಲಕ ಮಹಾರಾಷ್ಟ್ರಕ್ಕೆ (Maharashtra) ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    ಆರೋಪಿಗಳು ಕೆಎ – 38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ಸ್‌ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್ ಪೊಸ್ಟ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಗಾಂಜಾವನ್ನು ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

    ಈ ಸಂಬಂಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.9 ರಂದು ಸಹ ವನಮಾರಪ್ಪಳ್ಳಿ ಚೆಕ್ ಪೋಸ್ಟ್‌ನಲ್ಲಿ 15 ಕೋಟಿ 50 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದರು. ಇದನ್ನೂ ಓದಿ: ಸಂಸದರ ನಿಧಿಯನ್ನ ಸೋನಿಯಾ ಗಾಂಧಿ ಅಲ್ಪಸಂಖ್ಯಾತರಿಗಾಗಿ ಬಳಕೆ ಮಾಡಿದ್ದಾರೆ: ಅಮಿತ್ ಶಾ

  • ಮರದ ಮೇಲೆ ವಿದ್ಯಾರ್ಥಿನಿ ರುಂಡ ಪತ್ತೆ

    ಮರದ ಮೇಲೆ ವಿದ್ಯಾರ್ಥಿನಿ ರುಂಡ ಪತ್ತೆ

    ಕೊಡಗು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ. ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿ ತಲೆ ಸಿಕ್ಕಿದೆ.

    ಕೊಡಗಿನ (Kodagu) ಕುಂಬಾರಗಡಿಯಲ್ಲಿ ಹತ್ಯೆ ನಡೆದಿತ್ತು. ಕೊಲೆ ಆರೋಪಿ ಈಗ ಪೊಲೀಸರ ವಶದಲ್ಲಿದ್ದು, ಬಾಲಕಿಯ ತಲೆ ಶೋಧಕ್ಕಾಗಿ ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಕರೆತಂದಿದ್ದರು. ಹತ್ಯೆ ಮಾಡಿದ್ದ ಸ್ಥಳದ ಸಮೀಪದಲ್ಲೇ ಮರವೊಂದರಲ್ಲಿ ಬಾಲಕಿಯ ತಲೆ ಸಿಕ್ಕಿದೆ. ಇದನ್ನೂ ಓದಿ: ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

    ಬಾಲಕಿ ತಲೆಯನ್ನು ಮರದ ಮೇಲಿಟ್ಟಿರುವುದಾಗಿ ಆರೋಪಿ ಹೇಳಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ಲಾಸ್ಟಿಕ್ ಚೀಲದ ಬ್ಯಾಗಿನಲ್ಲಿ ತಲೆ ಸಾಗಿಸಿದ್ದಾರೆ.

    ನಿನ್ನೆ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾ ತಲೆ ಪತ್ತೆಯಾಗಿರಲಿಲ್ಲ. ಹುಡುಕಾಡಿದ್ದ ಸ್ಥಳದಲ್ಲೇ ಮರದ ಮೇಲೆ ಆರೋಪಿ ತಲೆ ಇರಿಸಿದ್ದ. ತಲೆ ವಶಕ್ಕೆ ಪಡೆದು ಹುಡುಗಿ ಮನೆ ಬಳಿಗೆ ಮಹಜರ್‌ಗೆ ಪೊಲೀಸರು ಹೋಗಿದ್ದರು. ಇದನ್ನೂ ಓದಿ: ಕೊಡಗಿನಲ್ಲಿ SSLC ವಿದ್ಯಾರ್ಥಿನಿಯ ತಲೆ ಕತ್ತರಿಸಿ ಬರ್ಬರ ಕೊಲೆ!

    ತಂಗಿಯ ತಲೆ ನೋಡುತ್ತಲೇ ಅಣ್ಣ ದಿಲೀಪ್ ರೋಷಗೊಂಡ. ಆಗ ದಿಲೀಪ್‌ಗೆ ನೀರು ಕುಡಿಸಿ ಪೊಲೀಸರು ಸಮಾಧಾನಪಡಿಸಿದರು. ಗನ್ ತೆಗೆದುಕೊಂಡು ಬಂದು ಆರೋಪಿಯ ಶೂಟ್ ಮಾಡಲು ಮುಂದಾದ. ಕೂಡಲೇ ದಿಲೀಪ್‌ನನ್ನು ಹಿಡಿದು ಪೊಲೀಸರು ಪಾಪಸ್ ಕರೆತಂದರು.

  • ಲೈಂಗಿಕ ದೌರ್ಜನ್ಯ ಪ್ರಕರಣ: ವಕೀಲ ದೇವರಾಜೇಗೌಡ ಪೊಲೀಸ್ ವಶಕ್ಕೆ

    ಲೈಂಗಿಕ ದೌರ್ಜನ್ಯ ಪ್ರಕರಣ: ವಕೀಲ ದೇವರಾಜೇಗೌಡ ಪೊಲೀಸ್ ವಶಕ್ಕೆ

    ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಿಜೆಪಿ (BJP) ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

    ದೇವರಾಜೇಗೌಡ ( Devarajegowda) ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅವರು ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ (Prajwal Revanna Pendrive case) ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ ಜೆಡಿಎಸ್ (JDS)  ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು. ಅಲ್ಲದೇ ಪ್ರಜ್ವಲ್ ಲೈಂಗಿಕ ಕಿರುಕುಳದ ವೀಡಿಯೋಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ನಾಯಕರನ್ನು ದೂಷಿಸಿದ್ದರು.

    ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್ ಮಾಡಿ ತನ್ನ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

    ಮಹಿಳೆ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ದೆಹಲಿ ಪೊಲೀಸರ ಮುಂದೆ ಹಾಜರಾದ ರಶ್ಮಿಕಾ ಮಂದಣ್ಣ

    ದೆಹಲಿ ಪೊಲೀಸರ ಮುಂದೆ ಹಾಜರಾದ ರಶ್ಮಿಕಾ ಮಂದಣ್ಣ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ದೆಹಲಿ (Delhi) ಪೊಲೀಸರ ಮುಂದೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳ ವರದಿ ಮಾಡಿವೆ. ಡೀಪ್ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಟಿಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

    ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ದೇಶದಾದ್ಯಂತ ಈ ನಡೆಯನ್ನು ಖಂಡಿಸಿ, ಅನೇಕರು ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಸೇರಿದಂತೆ ಸಾಕಷ್ಟು ಕಲಾವಿದರು ಇದರ ವಿರುದ್ದದ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಕ್ರಮಕ್ಕೆ ಮುಂದಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು (Police) ಅರೆಸ್ಟ್ ಕೂಡ ಮಾಡಿದ್ದಾರೆ.

    ರಶ್ಮಿಕಾಗೆ (Rashmika Mandanna) ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿತ್ತು. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ (Deep Fake Video) ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆರೋಪಿ ಬಂಧನದ ಬಳಿಕ ರಶ್ಮಿಕಾ ಪ್ರತಿಕ್ರಿಯೆ ಕೂಡ ನೀಡಿದ್ದರು.

    ಆಂಧ್ರ ಪ್ರದೇಶದ ಗುಂಟೂರು ಮೂಲದ ನವೀನ್ ಈಮಾನಿ (24) ಬಂಧಿತ ಆರೋಪಿಯಾಗಿದ್ದು, ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅನ್ನು ನಿರ್ವಹಣೆ ಮಾಡುತ್ತಿದ್ದರು.

    ಬಂಧಣದ ಬಳಿಕ ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯದ ಜವಾಬ್ದಾರರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಹುಡುಗಿಯೇ ಮತ್ತು ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ. ಅದು ತಪ್ಪು, ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ ಮತ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದರು.

     

    ಡೀಪ್‌ಫೇಕ್ ವಿಡಿಯೋ ಮಾಡುತ್ತಿದ್ದ ಆರೋಪಿ ಬಂಧನವಾಗಿದ್ದಕ್ಕೆ ದೆಹಲಿ ಪೊಲೀಸರಿಗೆ ಅಭಿಮಾನಿಗಳು ಕೂಡ ಧನ್ಯವಾದಗಳನ್ನು ತಿಳಿಸಿದ್ದರು. ಈಗ ಪೊಲೀಸರ ಕರೆಯ ಮೇರೆ ಹಾಜರಾಗಿ ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದಾರೆ.