Tag: police

  • ಬೆಳಗಾವಿಗೆ ಡ್ರಗ್ಸ್‌ ವಿತರಿಸುತ್ತಿದ್ದ ಗ್ಯಾಂಗ್‌ ಸದಸ್ಯರು ಅರೆಸ್ಟ್‌ – 50  ಕೆಜಿ ಗಾಂಜಾ, 30 ಲಕ್ಷದ ಮಾದಕ ವಸ್ತು ಜಪ್ತಿ

    ಬೆಳಗಾವಿಗೆ ಡ್ರಗ್ಸ್‌ ವಿತರಿಸುತ್ತಿದ್ದ ಗ್ಯಾಂಗ್‌ ಸದಸ್ಯರು ಅರೆಸ್ಟ್‌ – 50 ಕೆಜಿ ಗಾಂಜಾ, 30 ಲಕ್ಷದ ಮಾದಕ ವಸ್ತು ಜಪ್ತಿ

    ಬೆಳಗಾವಿ: ಕುಂದಾನಗರಿಗೆ ಡ್ರಗ್ಸ್‌ (Drugus) ವಿತರಣೆ ಮಾಡುತ್ತಿದ್ದ ಗ್ಯಾಂಗ್‌ ಸದಸ್ಯರನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಮುಂಬೈನಲ್ಲಿದ್ದ ಕಿಂಗ್ ಪಿನ್ ಮಾಸ್ಟರ್ ಮೈಂಡ್ ಇಸ್ಮಾಯಿಲ್ ಸದ್ದಾಂ ಸಯ್ಯದ್, ತಾಜೀರ್ ಬಸ್ತವಾಡೆ, ಪ್ರಥಮೇಶ ಲಾಡ್, ತೇಜಸ್ ವಾಜರೆ, ಶಿವಕುಮಾರ್ ಆಸಬೆ, ರಮಜಾನ್ ಜಮಾದಾರ, ತಾಜೀಬ್ ಮುಲ್ಲಾ, ಅನುರಾಗ ಅರೆಸ್ಟ್‌ ಆಗಿದ್ದಾರೆ.

    ಬೆಳಗಾವಿ (Belagavi) ಸಿಇಎನ್ ಇನ್ಸ್‌ಪೆಕ್ಟರ್‌ ಬಿ.ಆರ್ ಗಡ್ಡೇಕರ್ ತಂಡ ಭರ್ಜರಿ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾನಗರಿ ಕಾಲೇಜುಗಳ ವಿದ್ಯಾರ್ಥಿಗಳೇ ಟಾರ್ಗೆಟ್ ಮಾಡಿದ್ದ ಇವರು ಗಾಂಜಾ, ಪೆನ್ನಿ, ಹೇರಾಯಿನ್‌ ವಿತರಿಸುತ್ತಿತ್ತು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್‌ನಿಂದ ತಂದಿದ್ದ 1 ಕೆಜಿ ಚಿನ್ನ, 15 ಲಕ್ಷ ನಗದು ಕಳ್ಳರ ಪಾಲು!

     

    50 ಕೆಜಿ ಗಾಂಜಾ, 30 ಲಕ್ಷ ಮೌಲ್ಯದ ಮಾದಕವಸ್ತು, 13 ಮೊಬೈಲ್, ಡಿಜಿಟಲ್ ಹ್ಯಾಂಗರ್ ತಕ್ಕಡಿ, ಎರಡು ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    ಒಡಿಶಾ, ಮುಂಬೈ, ಪುಣೆ, ಮಧ್ಯಪ್ರದೇಶದಿಂದ ಡ್ರಗ್ಸ್‌ ತೆಗೆದುಕೊಂಡು ಬಂದು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಈ ಗ್ಯಾಂಗ್‌ ವಿತರಣೆ ಮಾಡುತ್ತಿತ್ತು.

    ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಅವರು ಸಿಇಎನ್ ಪೊಲೀಸ್ ತಂಡಕ್ಕೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

  • ವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್‌ನಿಂದ ತಂದಿದ್ದ 1 ಕೆಜಿ ಚಿನ್ನ, 15 ಲಕ್ಷ ನಗದು ಕಳ್ಳರ ಪಾಲು!

    ವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್‌ನಿಂದ ತಂದಿದ್ದ 1 ಕೆಜಿ ಚಿನ್ನ, 15 ಲಕ್ಷ ನಗದು ಕಳ್ಳರ ಪಾಲು!

    • ಹಳೇಬೀಡಲ್ಲಿ ಚಿನ್ನಾಭರಣದೋಚಿದ ಕಳ್ಳರು

    ಹಾಸನ: ನಗರದ (Hassan) ಖಾಸಗಿ ಬ್ಯಾಂಕ್‍ನ ನೌಕರರೊಬ್ಬರ ಮನೆಯಲ್ಲಿ 1 ಕೆಜಿ ಚಿನ್ನ (Gold) ಹಾಗೂ 15 ಲಕ್ಷಕ್ಕೂ ಹೆಚ್ಚಿನ ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ.

    ಸದಾಶಿವನಗರದ ನವೀನ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ವರಮಹಾಲಕ್ಷ್ಮಿ ಹಬ್ಬಕ್ಕೆಂದು ಬ್ಯಾಂಕ್ ಲಾಕರ್‌ನಿಂದ ತಂದಿದ್ದ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ, ಬೆಳ್ಳಿ ಆಭರಣ ಹಾಗೂ 15 ಲಕ್ಷಕ್ಕೂ ಹೆಚ್ಚಿನ ನಗದನ್ನು ಕಳ್ಳರು ದೋಚಿದ್ದಾರೆ. ಗುರುವಾರ ರಾತ್ರಿ ನವೀನ್ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆರಳಿದ್ದರು. ಶನಿವಾರ (ಆ.23) ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಮನೆ ಬಾಗಿಲು ಮುರಿದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ನವೀನ್ ಈಗ ವಾಸವಿದ್ದ ಮನೆ ಎದುರು ಹೊಸ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಮನೆ ನಿರ್ಮಾಣಕ್ಕಾಗಿ ಹಣ ಹೊಂದಿಸಿಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    3.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    ಮತ್ತೊಂದು ಪ್ರಕರಣದಲ್ಲಿ ಮನೆಯ ಬಾಗಿಲು ಮುರಿದು ಸುಮಾರು 3.50 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆ ಹಾಗೂ 5,000 ರೂ. ನಗದು ದೋಚಿರುವ ಘಟನೆ ಬೇಲೂರು ತಾಲೂಕಿನ ಹಳೇಬೀಡಿನ ಕಲ್ಲುಮಠ ಬೀದಿಯಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಮಂಜಪ್ಪ ಮತ್ತು ಪತ್ನಿ ಪ್ರೇಮಲೀಲಾ ಅವರು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಜಾವಗಲ್ ಸರ್ಕಲ್‍ನಲ್ಲಿರುವ ತಾವು ನಡೆಸುತ್ತಿರುವ ಮೆಡಿಕಲ್‌ಗೆ ಹೋಗಿದ್ದರು. ಈ ವೇಳೆ ಈ ಕಳ್ಳತನ ನಡೆದಿದೆ.

    ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ, ಮನೆಯ ಬಾಗಿಲನ್ನು ಕಳ್ಳರು ಒಡೆದು, ಬೀರುಗಳಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರ, 3 ಗ್ರಾಂ. ತೂಕದ ಗುಂಡಿನ ಚೈನ್, 10 ಗ್ರಾಂ. ತೂಕದ ಬೆಳ್ಳಿಯ ಪೆಂಡೆಂಟ್, 2 ಉಂಗುರ, 6 ಗ್ರಾಂ. ತೂಕದ 1 ಮೂಗುತಿ ಹಾಗೂ ನಗದು ದೋಚಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

  • ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ಪೊಲೀಸರ ವಶಕ್ಕೆ

    ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ಪೊಲೀಸರ ವಶಕ್ಕೆ

    ಮಂಗಳೂರು: ಮಾಸ್ಕ್‌ಮ್ಯಾನ್‌ ಚಿನ್ನಯ್ಯನ (Chinnaiah) ಅಣ್ಣ ತಾನಾಸಿಯನ್ನು (Tanasi) ಪೊಲೀಸರು (Police) ವಶಕ್ಕೆ‌‌ ಪಡೆದಿದ್ದಾರೆ.

    ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಎಸ್‌ಐಟಿ (SIT) ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ ತಾನಾಸಿಯ ಬಗ್ಗೆ ಕೆಲ ಮಾಹಿತಿ ತಿಳಿಸಿದ್ದ ಹಿನ್ನೆಲೆಯಲ್ಲಿ ಈಗ ಅಣ್ಣನನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಇದು ಅಣ್ಣಪ್ಪ ಸ್ವಾಮಿಯ ಸತ್ಯ ದರ್ಶನ ಹೆಗ್ಗಡೆ ಮಾತು ಮತ್ತೆ ವೈರಲ್

     

    ಎಸ್‌ಐಟಿ ಚಿನ್ನಯ್ಯನ ವಿಚಾರಣೆ ನಡೆಸುತ್ತಿದ್ದ ವೇಳೆ ತಾನು ಹೆಣ ಹೂಳುತ್ತಿರುವ ವಿಚಾರ ಅಣ್ಣ ತಾನಾಸಿಗೂ ತಿಳಿದಿತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ತಾನಾಸಿಯನ್ನು ಎಸ್‌ಐಟಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು, ನಾರ್ಕೋ ಅನಾಲಿಸಿಸ್‌ ಟೆಸ್ಟ್‌ ಮಾಡ್ಬೇಕು: ಗಿರೀಶ್ಮಟ್ಟಣ್ಣನವರ್

    ಬೆಳ್ತಂಗಡಿ ಕೋರ್ಟ್‌ ಈಗ ಚಿನ್ನಯ್ಯನನ್ನು 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಶುಕ್ರವಾರ ವಿಚಾರಣೆಗೆ ಬಂದಿದ್ದ ಚಿನ್ನಯ್ಯನಿಗೆ ಎಸ್‌ಐಟಿ ಪೊಲೀಸರು ನಿರಂತರ ಪ್ರಶ್ನೆ ಕೇಳಿದ್ದರು. ರಾತ್ರಿಯೂ ಬೆಳ್ತಂಗಡಿ ಠಾಣೆಯಲ್ಲೇ ಇದ್ದ ಚಿನ್ನಯ್ಯನನ್ನು ಇಂದು ಬೆಳಗ್ಗೆ ಬಂಧಿಸಿದ್ದರು.

  • 10 ದಿನಗಳ ಎಸ್‌ಐಟಿ ಕಸ್ಟಡಿಗೆ ಬುರುಡೆ ಚಿನ್ನಯ್ಯ

    10 ದಿನಗಳ ಎಸ್‌ಐಟಿ ಕಸ್ಟಡಿಗೆ ಬುರುಡೆ ಚಿನ್ನಯ್ಯ

    ಮಂಗಳೂರು:  ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದಲ್ಲಿ  ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು (Chennayya) ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

    ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು (SIT Police) ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು.

    ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.

    ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.

  • ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮೊದಲೇ ನಡೆಸಿದ್ದರೆ ಗುಂಡಿ ತೋಡುವ ನಾಟಕವೇ ನಡೆಯುತ್ತಿರಲಿಲ್ಲ!

    ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮೊದಲೇ ನಡೆಸಿದ್ದರೆ ಗುಂಡಿ ತೋಡುವ ನಾಟಕವೇ ನಡೆಯುತ್ತಿರಲಿಲ್ಲ!

    – ಮಂಪರು ಪರೀಕ್ಷೆ ನಡೆಸಲು ಅರ್ಜಿ ಸಲ್ಲಿಸಿದ್ದ ಪೊಲೀಸರು
    – ದಕ್ಷಿಣ ಕನ್ನಡ ಪೊಲೀಸರನ್ನು ತೇಜೋವಧೆ ಮಾಡಿತ್ತು ಬುರುಡೆ ಗ್ಯಾಂಗ್‌

    ಮಂಗಳೂರು: ಬುರುಡೆ ಗ್ಯಾಂಗಿನ ಪಾತ್ರಧಾರಿ ಚಿನ್ನಯ್ಯನಿಗೆ (Chinnayya) ಮೊದಲೇ ಮಂಪರು ಪರೀಕ್ಷೆ ಮಾಡಿದ್ದರೆ ಒಂದು ತಿಂಗಳ ಕಾಲ ಧರ್ಮಸ್ಥಳದಲ್ಲಿ (Dharmasthala) ಈ ಬೃಹತ್‌ ನಾಟಕವೇ ನಡೆಯುತ್ತಿರಲಿಲ್ಲ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

    ಹೌದು. ಪಾಪ ಪ್ರಜ್ಞೆ ಕಾಡುತ್ತಿರುವ ಹಿನ್ನೆಲೆಯಲ್ಲಿ ನಾನು ಸತ್ಯ ಹೇಳಲು ಮುಂದೆ ಬಂದಿದ್ದೇನೆ ಎಂದಾಗಲೇ ದಕ್ಷಿಣ ಕನ್ನಡದ ಜಿಲ್ಲಾ ಎಸ್ಪಿ ಡಾ. ಅರುಣ್ (Dr. Arun) ಅವರು ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮಾಡಲು ಮುಂದಾಗಿದ್ದರು.

     

    ಚೆನ್ನಯ್ಯನ ಬಗ್ಗೆ ಅರುಣ್‌ ಕುಮಾರ್‌ ಮತ್ತು ದಕ್ಷಿಣ ಕನ್ನಡದ ಪೊಲೀಸರಿಗೆ ಕೆಲ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಮಂಪರು ಪರೀಕ್ಷೆ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

    ಪೊಲೀಸರು ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಅರುಣ್‌ ಕುಮಾರ್‌ ಮತ್ತು ದಕ್ಷಿಣ ಕನ್ನಡದ ಪೊಲೀಸರ ವಿರುದ್ಧವೇ ಈ ಬುರುಡೆ ಗ್ಯಾಂಗ್‌ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲು ಆರಂಭಿಸಿತ್ತು. ಸಾಕ್ಷಿಯನ್ನು ಕೊಲ್ಲಲು ಮುಂದಾಗಿದ್ದಾರೆ. ವ್ಯವಸ್ಥೆಯೇ ಷಡ್ಯಂತ್ರದ ಭಾಗವಾಗಿದೆ ಎಂದು ದೂರಲು ಆರಂಭಿಸಿತ್ತು. ಈ ಮಧ್ಯೆ ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿತ್ತು.

     

    ಚೆನ್ನಯ್ಯ ತೋರಿಸಿದ 11ನೇ ಜಾಗದ ಮೇಲ್ಭಾಗದ ಗುಡ್ಡದಲ್ಲಿ ಒಂದು ಕಳೇಬರ ಪತ್ತೆಯಾಗಿತ್ತು. ಈ ಕಳೇಬರ ಪತ್ತೆಯಾದ ನಂತರ ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಬೇಕಾ? ಬೇಡವೇ ಎಂಬುದರ ಬಗ್ಗೆ ದಕ್ಷಿಣ ಕನ್ನಡ ಪೊಲೀಸರಿಗೆ ಮತ್ತು ಎಸ್‌ಐಟಿ ಪೊಲೀಸರ ಮಧ್ಯೆ ಸಣ್ಣ ಗೊಂದಲ ಏರ್ಪಟ್ಟಿತ್ತು. ಇದನ್ನೂ ಓದಿ: ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

    ದಕ್ಷಿಣ ಕನ್ನಡ ಪೊಲೀಸರು ಈ ಕಳೇಬರದ ತನಿಖೆಯ ವ್ಯಾಪ್ತಿ ನಮಗೆ ಸೇರಬೇಕು. ಎಸ್‌ಐಟಿ ತನಿಖೆ ಹೂತಿದ್ದ ಶವಗಳ ಬಗ್ಗೆ ತನಿಖೆ ನಡೆಸಬೇಕು. ಆದರೆ ಇದು ಆತ್ಮಹತ್ಯೆ ಮಾಡಿಕೊಂಡ ಬಳಿ ನೆಲದ ಮೇಲೆ ಮೂಳೆಗಳು ಬಿದ್ದಿದೆ. ಹೀಗಾಗಿ ಈ ತನಿಖೆ ಎಸ್‌ಐಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಶವ ಶೋಧದ ತನಿಖೆಯ ವೇಳೆ ಈ ಮೂಳೆಗಳು ಪತ್ತೆಯಾಗಿರುವ ಕಾರಣ ಕೊನೆಗೆ ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.

  • ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

    ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

    ಬೆಂಗಳೂರು: ತಮಿಳುನಾಡಿನಲ್ಲಿದ್ದ (Tamil Nadu) ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ (Dharmasthala) ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ಹೌದು. ವಿಶೇಷ ತನಿಖಾ ತಂಡ (SIT) ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ ಎಸ್‌ಐಟಿ ಮೂಲಗಳಿಂದ ತಿಳಿದು ಬಂದಿತ್ತು.  ಇದನ್ನೂ ಓದಿ: ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

    ಮೂಲಗಳ ಪ್ರಕಾರ ಧರ್ಮಸ್ಥಳಕ್ಕೆ ಬರುವ ಮೊದಲೇ ಮೂರು ಬಾರಿ ಈತನನ್ನು ತಂಡ ಭೇಟಿ ಮಾಡಿತ್ತು.

     

    ಚಿನ್ನಯ್ಯ ಹೇಳಿದ್ದೇನು?
    ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳ ದೇವಸ್ಥಾನದ ವಿರೋಧಿ ಗ್ಯಾಂಗ್‌ ಸಂಪರ್ಕಿಸಿತ್ತು. ಮಾತುಕತೆ ನಡೆಸುವ ವೇಳೆ ಹಣದ ಆಮಿಷ ಒಡ್ಡಿದ್ದರು. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಈ ಪ್ರಕರಣಕ್ಕೆ ರೋಚಕ ತಿರುವು ಸಿಗುತ್ತದೆ ಎಂದು ಹೇಳಿದ್ದರು.

    ಯಾವುದೇ ಕಾರಣಕ್ಕೂ ನೀನು ಭಯ ಪಡುವ ಅಗತ್ಯವಿಲ್ಲ. ತನಿಖೆಯಾದ ನಂತರ ಹಲವು ಜನ ದೂರುದಾರರು ಬರುತ್ತಾರೆ. ಎಲ್ಲ ತನಿಖೆ ನಡೆಯುತ್ತದೆ ಎಂದು ಭರವಸೆ ನೀಡಿದ್ದರು.

    ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ಸ್ವಲ್ಪ ತರಬೇತಿ ನೀಡಲಾಗಿತ್ತು. ಪೊಲೀಸರು ಕೇಳಿದಾಗ ಯಾವ ರೀತಿ ಉತ್ತರ ಹೇಳಬೇಕು ಎನ್ನುವುದನ್ನು ತಿಳಿಸಲಾಗಿತ್ತು. ನಂತರ ಸೂತ್ರಧಾರರು ಹೇಳಿದಂತೆ ನಾನು ಪಾತ್ರ ಮಾಡುತ್ತಿದ್ದೆ. ಅವರು ಹೇಳಿದಂತೆ ನಾನು ಮಾಹಿತಿ ನೀಡುತ್ತಿದ್ದೆ ಎಂದು ಚಿನ್ನಯ್ಯ ತಿಳಿಸಿದ್ದ.

  • Video | ಅನನ್ಯಾ ಭಟ್‌ ಹೆಸ್ರನ್ನೇ ಬಂಡವಾಳ ಮಾಡ್ಕೊಂಡು ಕಥೆ ಕಟ್ಟಿದ್ನಾ ಸಮೀರ್‌?

    Video | ಅನನ್ಯಾ ಭಟ್‌ ಹೆಸ್ರನ್ನೇ ಬಂಡವಾಳ ಮಾಡ್ಕೊಂಡು ಕಥೆ ಕಟ್ಟಿದ್ನಾ ಸಮೀರ್‌?

    ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Village) ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಅಂತ ದೂರು ಕೊಟ್ಟು ಗೊಂದಲ ಸೃಷ್ಟಿಸಿರುವ ತಾಯಿ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್‌ ಕೊಟ್ಟಿದ್ದು, ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ಈ ನಡುವೆಯೇ ಯೂಟ್ಯೂಬರ್‌ ಎಂ.ಡಿ ಸಮೀರ್‌ (Sameer MD) ವೀವ್ಸ್‌, ಲೈಕ್ಸ್‌ಗಾಗಿಯೇ ಕಟ್ಟು ಕಥೆಗಳನ್ನ ಕಟ್ಟಿದ್ರಾ ಅನ್ನೋ ಪ್ರಶ್ನೆ ಕೂಡ ಮುನ್ನೆಲೆಗೆ ಬಂದಿದೆ. ಇದಕ್ಕೆ ಅಮೀರ್‌ ವಿಡಿಯೋಗಳೇ ಸಾಕ್ಷಿಯಾಗಿದೆ. ಈ ಕುರಿತ ಕಂಪ್ಲೀಟ್‌ ಡಿಟೇಲ್ಸ್‌ ವಿಡಿಯೋನಲ್ಲಿದೆ…

  • ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಬಳ್ಳಾರಿ/ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ (Dharmasthala Police Station) ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ (Sameer MD) ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ.

    ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ನಾಳೆ (ಆ.24) ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನಿನ್ನೆ ಸಂಜೆಯೇ ಧರ್ಮಸ್ಥಳ ಠಾಣೆ ಪೊಲೀಸರು ಮನೆಗೆ ನೋಟಿಸ್‌ ಅಂಟಿಸಿ ಹೋಗಿದ್ದಾರೆ. ಇದು ಈ ಪ್ರಕರಣದಲ್ಲಿ ಸಮೀರ್‌ಗೆ ಮೂರನೇ ನೋಟಿಸ್‌ ಆಗಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

    ಬೆಳ್ತಂಗಡಿ ಠಾಣೆಗೆ ಹಾಜರಾಗುವಂತೆ ಸೂಚನೆ
    ಇನ್ನೂ ಧರ್ಮಸ್ಥಳಕ್ಕೆ ಹೋಗಲು ತನಗೆ ಜೀವ ಭಯವಿದೆ ಎಂದಿದ್ದ ಸಮೀರ್‌ ಸುರಕ್ಷತೆ ದೃಷ್ಟಿಯಿಂದ ಧರ್ಮಸ್ಥಳ ಠಾಣೆಗೆ ನಾನು ಬರಲಾರೆ ಎಂದಿದ್ದ. ಈ ಹಿನ್ನೆಲೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಹಾಜರಾಗಿ ವಿಚಾರಣೆ ಎದುರಿಸುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಅನನ್ಯಾ ಭಟ್‌ ಅನ್ನೋ ಮಗಳೇ ಇರಲಿಲ್ಲ – ಉಲ್ಟಾ ಹೊಡೆದ ಸುಜಾತ ಭಟ್‌

    ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇತ್ತೀಚೆಗಷ್ಟೇ ಬನ್ನೇರುಘಟ್ಟದಲ್ಲಿರುವ ಮನೆಯಲ್ಲೇ ಸಮೀರ್‌ನನ್ನ ವಶಕ್ಕೆ ಪಡೆಯಲು ತೆರಳಿದ್ದರು. ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

  • ಮಟ್ಟಣ್ಣನವರ್‌ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

    ಮಟ್ಟಣ್ಣನವರ್‌ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

    ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಗಿರೀಶ್ ಮಟ್ಟಣ್ಣನವರ್‌ (Girish Mattannavar) ಸೇರಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangady Police Station) ಎಫ್ಐಅರ್ ದಾಖಲಾಗಿದೆ.

    ಗುರುವಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಬಂಧನ ಮಾಡಲು ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗಿರೀಶ್ ಮಟ್ಟಣ್ಣನವರ್‌, ಜಯಂತ್‌ ಮತ್ತು ಇತರರು ಪೊಲೀಸರಿಗೆ ಅಡ್ಡಿ ಪಡಿಸಿದ್ದರು. ಈ ಕಾರಣಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಕರಣ ದಾಖಲಾದ ನಂತರ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಎಸ್‌ಐಟಿ ಠಾಣೆಗೆ ಗಿರೀಶ್‌ ಮಟ್ಟಣ್ಣನವರ್‌ ಆಗಮಿಸಿದ್ದರು. ಕೆಲ ಕಾಲ ಪೊಲೀಸರು ವಿಚಾರಣೆ ನಡೆಸಿ ಮಟ್ಟಣ್ಣನವರ್‌ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮಗೆ ಕೋರ್ಟ್, ಸ್ಟೇಷನ್ ಬೀಗರ ಮನೆಯಾಗಿದೆ. ನಿನ್ನೆ ತಿಮರೋಡಿ ಬಂಧನಕ್ಕೆ100 ಜನ ಪೊಲೀಸರು ಬಂದಿದ್ದರು. ಮನೆಯವರು ಏಕೆ ಬಂದಿದ್ದೀರಾ ಅಂತ ಕೇಳಿದ್ದಾರೆ ಅಷ್ಟೇ. ನಾವು ಯಾರೂ ಪೊಲೀಸರಿಗೆ ಅಡ್ಡಿ ಮಾಡಿಲ್ಲ ಎಂದು ತಿಳಿಸಿದರು.

    ಇವತ್ತು 30 ಜನರ ಮೇಲೆ ಕೇಸ್ ಅಂತ ಸುದ್ದಿ ಬಂದಿದೆ. ನಾನು ಕೇಳಲು ಬಂದಿದ್ದೇನೆ, ಬಂಧನ ಮಾಡೋದಾದ್ರೆ ಮಾಡಲಿ. ಸುಮ್ಮನೆ, ಪೆಟ್ರೋಲ್ ಡಿಸೇಲ್ ಏಕೆ ಖರ್ಚು ಮಾಡಬೇಕು? ನಾನೇ ಬಂದಿದ್ದೇನೆ ಅರೆಸ್ಟ್ ಮಾಡೋದಾದ್ರೆ ಮಾಡಲಿ ಎಂದರು.

     

    ನಿನ್ನೆ ಬೆಳಗ್ಗೆ ಠಾಣೆಗೆ ಹೊರಟಿದ್ವಿ, ತಕ್ಷಣ ಮನೆಗೆ ಬಂದು ಅರೆಸ್ಟ್ ಮಾಡಿದ್ದಾರೆ. ಅದೇ ಸಮಯಕ್ಕೆ ಸಮೀರ್‌ ಮನೆಯನ್ನೂ ಸುತ್ತುವರಿದಿದ್ದಾರೆ. ಬೇಲ್ ಆಗಿದ್ದಕ್ಕೆ ವಾಪಸ್ ಬಂದಿದ್ದಾರೆ. ಇಲ್ಲದೇ ಇದ್ದರೆ ಸಮೀರ್‌ ಅರೆಸ್ಟ್ ಆಗುತ್ತಿದ್ದರು. ನಮ್ಮನ್ನ ಭಯಪಡಿಸಲು ಮುಂದಾಗಿದ್ದಾರೆ. ನಮ್ಮ ಮೇಲೆ ಕೇಸ್ ಆಗಿದ್ದು ನಾವೂ ಎಲ್ಲಿಯೂ ಓಡಿಹೋಗುವುದಿಲ್ಲ ಎಂದು ಹೇಳಿದರು.

    ನಾಲ್ಕು ಫೇಕ್ ಕೇಸ್‌ಗೆ ಸಂಬಂಧಿಸಿದಂತೆ ನಾಲ್ಕೂವರೆ ಗಂಟೆ ನಿರಂತರ ವಿಚಾರಣೆ ಮಾಡಿದ್ದಾರೆ. ನನ್ನ ಮೇಲೆ 20ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ. ಅರೆಸ್ಟ್ ಮಾಡೋದಾದ್ರೆ ಮಾಡಲಿ ಅದಕ್ಕೆ ನಾನೇ ಠಾಣೆಗೆ ಬಂದಿದ್ದೆ ಎಂದು ತಿಳಿಸಿದರು.

  • ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

    ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

    ಬೆಂಗಳೂರು: ಭದ್ರತೆ ದೃಷ್ಟಿಯಿಂದ ಧರ್ಮಸ್ಥಳಕ್ಕೆ (Dharmasthala) ಹೋಗಲು ಭಯ ಇದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಧರ್ಮಸ್ಥಳ ಠಾಣೆಗೆ ನಾನು ಬರಲಾರೆ ಎಂದು ಯೂಟ್ಯೂಬರ್‌ ಸಮೀರ್‌ (Youtuber Sameer) ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

    ಈ ಹಿಂದೆ ಪೊಲೀಸರು ಕೊಟ್ಟಿದ್ದ ನೊಟೀಸ್‌ಗೆ ಉತ್ತರಿಸಿದ್ದ ಸಮೀರ್, ಭದ್ರತೆ ದೃಷ್ಟಿಯಿಂದ ವಿಚಾರಣೆಗೆ ಹಾಜರಾಗಲು ಇದೇ 13 ರಂದು ಪತ್ರದ ಮೂಲಕ ಪೊಲೀಸರ ಬಳಿ ಕಾಲಾವಕಾಶ ಕೇಳಿದ್ದರು.  ಇದನ್ನೂ ಓದಿ: ಎಎಸ್ಪಿ ಕಾರಿಗೆ ಡಿಕ್ಕಿ ತಿಮರೋಡಿಯ ಮೂವರು ಬೆಂಬಲಿಗರು ಅರೆಸ್ಟ್

     

    ಸಮೀರ್ ಮನವಿಯಲ್ಲಿ ಏನಿತ್ತು?
    ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆಯಾಗಿದೆ. ನನಗೆ ಈಗಾಗಲೇ ಬೆದರಿಕೆ ಇರುವ ಕಾರಣ ಧರ್ಮಸ್ಥಳಕ್ಕೆ ವಿಚಾರಣೆಗೆ ಬರಬೇಕಾದರೆ ಹೆಚ್ಚಿನ ಭದ್ರತೆ ನೀಡಿ. ಇಲ್ಲವೇ ಪರ್ಯಾಯ ಜಾಗದ ವ್ಯವಸ್ಥೆ ಮಾಡಿ.

    ನನ್ನ ಯೂಟ್ಯೂಬ್ ಕಂಟೆಂಟ್ ಮೇಲೆ ದೂರು ಕೊಟ್ಟಿದ್ದಾರೆ. ಹಾಗಾಗಿ ನಾನು ನೇರವಾಗಿ ಠಾಣೆಗೆ ಬರಲು ಸಾಧ್ಯವಿಲ್ಲ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಭಾಗಿಯಾಗಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಸಮೀರ್‌ ಪತ್ರಕ್ಕೆ ಕೇರ್ ಮಾಡದ ಧರ್ಮಸ್ಥಳ ಪೊಲೀಸರು ಇಂದು ಬಂಧನ ಮಾಡಲು ಬೆಂಗಳೂರಿಗೆ ತೆರಳಿದ್ದರು. ಇದನ್ನೂ ಓದಿ:  ಮಹೇಶ್‌ ಶೆಟ್ಟಿ ತಿಮರೋಡಿ ಜೈಲಿಗೆ 14 ದಿನ ನ್ಯಾಯಾಂಗ ಬಂಧನ

     

    ಜಾಮೀನು ಮಂಜೂರು:
    ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ `ದೂತ’ ಯೂಟ್ಯೂಬ್‌ ವಾಹಿನಿಯ ಸಮೀರ್‌ಗೆ ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದೆ. ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರೋ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವರು ಕೇಸ್‌ಗಳು ದಾಖಲಾಗಿತ್ತು.

    ಸಿಡಿಆರ್ ಹಾಗೂ ಮೊಬೈಲ್ ನೆಟ್ವರ್ಕ್ ಆಧರಿಸಿ ಸಮೀರ್ ಬಂಧನಕ್ಕಾಗಿ ಬನ್ನೇರುಘಟ್ಟ ಸಮೀಪದ ಹುಲ್ಲಳ್ಳಿಯ ನಿವಾಸಕ್ಕೆ ಧರ್ಮಸ್ಥಳ ಪೊಲೀಸರು ಬಂದಿದ್ದರು. ಆದರೆ ನಿವಾಸದಲ್ಲಿ ಸಮೀರ್‌ ಇಲ್ಲದ ಕಾರಣ 48 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು ವಾಪಸ್ಸಾಗಿದ್ದಾರೆ.

    ಬಂಧನ ಭೀತಿಯಲ್ಲಿದ್ದ ಸಮೀರ್ ವಕೀಲರ ಮೂಲಕ ಮಂಗಳೂರು (Mangaluru) ಜಿಲ್ಲಾ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್  ಜಾಮೀನು ಮಂಜೂರು ಮಾಡಿದೆ.

    ಧರ್ಮಸ್ಥಳದ ಬಗ್ಗೆ ಮೊದಲ ವಿಡಿಯೋ ಮಾಡಿದ್ದಾಗ ಕೌಲಬಜಾರ್ ಠಾಣೆಯಲ್ಲಿ ಮೊದಲ ಕೇಸ್ ಆಗಿತ್ತು. ಬಳ್ಳಾರಿಯಲ್ಲಿ ಪೊಲೀಸರು ಹುಡುಕಾಡಿದ್ದಾಗ ಬಳ್ಳಾರಿಯಲ್ಲಿ ವಾಸ ಬಗ್ಗೆ ಮಾಹಿತಿ ದೊರೆತಿರಲಿಲ್ಲ.