Tag: police

  • ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    – ಪ್ಲ್ಯಾನ್‌ ಮಾಡಿ ಕಪ್ಪು ಚುಕ್ಕೆ ತರಲು ಮುಂದಾಗಿದ್ದಾರೆ

    ಬೆಂಗಳೂರು: ಧರ್ಮಸ್ಥಳ ಬುರುಡೆ (Dharmasthala Mass Burial) ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಖಾಲಿ ಡಬ್ಬ ಏನು ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಅವರು, ಈ ಪ್ರಕರಣದಲ್ಲಿ ಬಹಳ ಷಡ್ಯಂತ್ರ (Conspiracy) ನಡೆದಿದೆ. ಯಾರದ್ದು ಷಡ್ಯಂತ್ರ ಎಂದು ಈಗ ನಾನು ಹೇಳಲ್ಲ. ಬಹಳ ಪ್ಲ್ಯಾನ್‌ ಮಾಡಿ ಅವರ ಮೇಲೆ ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಯಾರನ್ನೋ ತೇಜೋವಧೆ ಮಾಡಿ ನೂರಾರು ವರ್ಷದಿಂದ ಬಂದ ಪರಂಪರೆಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವನ್ಯಾರೋ ಒಬ್ಬ ನ್ಯಾಯಾಲಯಕ್ಕೆ ಹೋಗಿ ಹೇಳಿಕೆ ಕೊಟ್ಟಿದ್ದಾನೆ. ಹೇಳಿಕೆ ನೀಡಿದ್ದರಿಂದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಹೆಣ ಹೂತಿದ್ದು ಈತನಲ್ಲ, ಈತನೇ ಹೆಣ ಹೂತಿದ್ದು ಇಬ್ಬರು ದೂರುದಾರರ ಹೇಳಿಕೆಯಿಂದ ಎಸ್‌ಐಟಿಗೆ ಗೊಂದಲ

     

    ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿವಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ, ಅಶೋಕ್ ರೈ ಮಾತಾಡಿದ್ದಾರೆ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆ? ಸುಳ್ಳು ಆರೋಪ ಮಾಡುತ್ತಾರೆ ಅವರ ವಿರುದ್ಧ  ಆಳಕ್ಕೆ ಆಗಿ ಹೋಗಿ ತನಿಖೆ ಮಾಡಿ ಕಾನೂನು ಕ್ರಮಕ್ಕೆ‌ ಕೈಗೊಳ್ಳಲು ಹೇಳಿದ್ದೇವೆ. ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದರು.

    ಸೋಮವಾರ ಗೃಹ ಮಂತ್ರಿಗಳು ಎಲ್ಲಾ ವಿವರಗಳನ್ನು ತರಿಸಿಕೊಂಡು ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ಹಿಂದೂ ಧರ್ಮ ಮಾತ್ರವಲ್ಲ ಯಾವುದೇ ಧರ್ಮದ ಭಾವನಗೆ ಚ್ಯುತಿ ಬರಬಾರದು. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಹೇಳಿದರು.

     

    ಏನು ಇಲ್ಲದೇ‌ ಬುರುಡೆ ಪ್ರಕರಣ ಮಾಡಿರುವುದು ನಮಗೆ ತಿಳಿದಿದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ತನಿಖೆ ನಡೆಯುತ್ತಿದೆ. ಮೀಡಿಯಾ, ಸೋಷಿಯಲ್ ಮೀಡಿಯಾದಲ್ಲಿ ಅವರದ್ದೇಯಾದ ವ್ಯಾಖ್ಯಾನ ಮಾಡಿದ್ದಾರೆ. ಅದಕ್ಕೆ ನಾನು ಕಮೆಂಟ್ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು.

    ಧರ್ಮಸ್ಥಳ ಆಗಲಿ ಯಾವುದೇ ಕ್ಷೇತ್ರದ ಗೌರವಕ್ಕೆ ತೊಂದರೆ ಮಾಡಲು ನಾವು ಅವಕಾಶ ನೀಡುವುದಿಲ್ಲ. ನಮ್ಮ ನಿಲುವು ಸ್ಪಷ್ಟವಾಗಿದ್ದು ನ್ಯಾಯದ ಬಗ್ಗೆ ಧರ್ಮದ ಬಗ್ಗೆ ಸರಿಸಮಾನವಾಗಿದ್ದೇವೆ ಎಂದು ನುಡಿದರು.

  • 32 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದ್ರೂ  ಸಿಕ್ಕಿಲ್ಲ ಮೂಳೆ!

    32 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದ್ರೂ ಸಿಕ್ಕಿಲ್ಲ ಮೂಳೆ!

    ಮಂಗಳೂರು: ಸತತ ಎರಡು ದಿನಗಳಿಂದ ನಡೆಯುತ್ತಿದ್ದ ಪಾಯಿಂಟ್‌ 13ರ ಶೋಧ ಕಾರ್ಯ ಅಂತ್ಯಗೊಂಡಿದ್ದು ಯಾವುದೇ ಮೂಳೆ ಸಿಕ್ಕಿಲ್ಲ.

    ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿರುವ (Dharmasthala Burial Case) ಮುಸುಕುಧಾರಿ ಆರೋಪದ ಮೇರೆಗೆ ಎಸ್‌ಐಟಿ ಶೋಧ ಕಾರ್ಯ ಆರಂಭಿಸಿ ಇಂದಿಗೆ 14 ಕಳೆದಿದೆ. ದೂರುದಾರನ ಮನವಿಯಂತೆ ಪಾಯಿಂಟ್ 13ರ ಉತ್ತರ ದಿಕ್ಕಿನಲ್ಲಿ ಶೋಧಕಾರ್ಯ ನಡೆಯಿತು. ಇದನ್ನೂ ಓದಿ: ಹೆಣ ಹೂತಿದ್ದು ಈತನಲ್ಲ, ಈತನೇ ಹೆಣ ಹೂತಿದ್ದು ಇಬ್ಬರು ದೂರುದಾರರ ಹೇಳಿಕೆಯಿಂದ ಎಸ್‌ಐಟಿಗೆ ಗೊಂದಲ

     

    ಸಣ್ಣ ಹಿಟಾಚಿ ಬಳಿಕ ದೊಡ್ಡ ಹಿಟಾಚಿ ಯಂತ್ರದ ಮೂಲಕ ಗುಂಡಿ ತೋಡುವ ಕಾರ್ಯ ನಡೆಯಿತು. ಉತ್ಖನನದ ವೇಳೆ ಮಳೆ ಬಂದು ಗುಂಡಿಯಲ್ಲಿ ನೀರು ಒರತೆ ರೂಪದಲ್ಲಿ ಬರುತ್ತಿತ್ತು. ಇದನ್ನೂ ಓದಿಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿರೇಣುಕಾಚಾರ್ಯ

    ಎಸ್‌ಐಟಿ ಅಧಿಕಾರಿಗಳು ಪಂಪ್‌ಸೆಟ್ ಮೂಲಕ ಗುಂಡಿಯಲ್ಲಿದ್ದ ನೀರನ್ನು ಹೊರ ಹಾಕಿದರು. 32 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳ ಗುಂಡಿ ತೋಡಿದರೂ ಯಾವುದೇ ಮೂಳೆಗಳು ಪತ್ತೆಯಾಗಲಿಲ್ಲ. ಸತತ 6 ಗಂಟೆ ಕಾರ್ಯಾಚರಣೆ ನಡೆಸಿದರೂ ಏನು ಸಿಗದ ಕಾರಣ ಕೊನೆಗೆ ತೆಗೆದ ಗುಂಡಿಗೆ ಅದೇ ಮಣ್ಣನ್ನು ಸುರಿದು ಮುಚ್ಚಲಾಯಿತು.

     

  • ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಉಡುಪಿ: ಹೆಂಡತಿ ಮಗುವಿನ ಜೊತೆ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಕೊಚ್ಚಿ ಕೊಂದ ಘಟನೆ ಪುತ್ತೂರಿನಲ್ಲಿ (Putturu) ನಡೆದಿದೆ.

    ಹತ್ಯೆಯಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ. ವಿನಯ್ ಮನೆ ರಾತ್ರಿ ವೇಳೆ ಮೂವರು ದುಷ್ಕರ್ಮಿಗಳು ಬಂದಿದ್ದರು. ಈ ವೇಳೆ, ಸ್ನೇಹಿತರಿರಬಹುದು ಎಂದು ಮನೆಯವರು ಒಳಗೆ ಬಿಟ್ಟಿದ್ದಾರೆ. ಬಳಿಕ ಮೂವರು ಹೆಂಡತಿ ಮತ್ತು ಮಗುವಿನ ಜೊತೆ ಮಲಗಿದ್ದ ವಿನಯ್ ಮೇಲೆ ತಲ್ವಾರ್‍ನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ದಾಳಿ ವೇಳೆ ತಡೆಯಲು ಹೋದ ಪತ್ನಿಗೆ ಸಹ ಗಾಯವಾಗಿದೆ. ಇದನ್ನೂ ಓದಿ: Delhi | ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಉಡುಪಿ (Udupi) ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

  • ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

    ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

    ಬಳ್ಳಾರಿ: ಮಧ್ಯರಾತ್ರಿ ಎಟಿಎಂ (ATM) ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ (Balalri) ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.

    ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ.

    ಕಳ್ಳನನ್ನ ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ

    ಖದೀಮ ಎಟಿಎಂ ಬಾಕ್ಸ್ ಹೊತ್ತೊಯ್ಯುಗಾಲೇ, ಖಚಿತ ಮಾಹಿತಿ ಮೇರೆಗೆ ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ. ಬೀಟ್ ನಲ್ಲಿದ್ದಾಗ ಎಎಸ್ಐ ಮಲ್ಲಿಕಾರ್ಜುನ ದರೋಡೆಕೋರನನ್ನ ಹಿಡಿದಿದ್ದರು.

    ಆರೋಪಿ ಎಎಸ್ಐ ಮಲ್ಲಿಕಾರ್ಜುನ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಕೂಡಲೇ ಮತ್ತಷ್ಟು ಬೀಟ್ ಸಿಬ್ಬಂದಿ ಕರೆಯಿಸಿಕೊಂಡಿದ್ದಾರೆ. ಆಗ ಮತ್ತೋರ್ವ ಕಾನ್ಸ್‌ಟೇಬಲ್ ನಿಂಗಪ್ಪ ಸಹಾಯಕ್ಕೆ ಧಾವಿಸಿದರು.

    ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನ ಸೆರೆಹಿಡಿದ ಪೊಲೀಸರ ಕಾರ್ಯಕ್ಕೆ ಮೆಚ್ಚಿ ಎಸ್ಪಿ ಡಾ ಶೋಭಾರಣಿ ಸನ್ಮಾನಿಸಿ, ಅಭಿನಂದಿಸಿದ್ದಾರೆ.

  • 6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ

    6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ

    – ಧರ್ಮಸ್ಥಳದ 13ನೇ ಪಾಯಿಂಟ್‌ನಲ್ಲಿ ಅಸ್ಥಿಗೆ ಶೋಧ

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಪಾಯಿಂಟ್ 13 ಕುತೂಹಲಕ್ಕೆ ತೆರೆಬಿದ್ದಿದೆ. 6 ತಾಸು ಹುಡುಕಿದರೂ ಏನೂ ಸಿಕ್ಕಿಲ್ಲ.

    ಸೋಮವಾರ ನೇತ್ರಾವತಿ ತಟದ ಪಾಯಿಂಟ್ 13ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಮೂಲಕ ಡೆಮೋ ನಡೆಸಿ ತೆರಳಿದ್ದ ವಿಶೇಷ ತನಿಖಾ ತಂಡ(SIT) ಇಂದು ನೇರವಾಗಿ ಅಖಾಡಕ್ಕೆ ಇಳಿಯಿತು. ಕಗ್ಗಂಟಾಗಿದ್ದ ಪಾಯಿಂಟ್ ನಂಬರ್ 13ರಲ್ಲಿ ಅನಾಮಿಕನ ಸಮ್ಮುಖದಲ್ಲಿ ಅಸ್ಥಿ ಶೋಧ ನಡೆಸಿದರು.

    ಪಾಯಿಂಟ್ 13ರಲ್ಲಿ ಮೂರು ಪಟ್ಟು ಜಾಗವನ್ನು ಗುರುತು ಮಾಡಲಾಗಿತ್ತು. ಕೆಎಸ್‌ಆರ್‌ಪಿ (KSRP) ಸಹಿತ ಶಸ್ತ್ರಸಜ್ಜಿತ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳಕ್ಕೆ ಖುದ್ದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಆಗಮಿಸಿ ಮಾಹಿತಿ ಪಡೆದರು. ಇದನ್ನೂ ಓದಿ: ಆ.17ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ

     

    ಮಧ್ಯಾಹ್ನದ ಹೊತ್ತಿಗೆ ಡ್ರೋನ್ ಮೌಂಟೆಡ್ ಜಿಪಿಆರ್‌ನಿಂದ ಸಂಗ್ರಹಿಸಿದ ಫುಟೇಜ್ ಆಧರಿಸಿ 2 ಹಿಟಾಚಿಗಳ ಮೂಲಕ ಕಾರ್ಯಾಚರಣೆ ನಡೆಸಲಾಯಿತು. ಈ ಹಿಂದೆ‌  ನೆರೆಯಿಂದ ಮಣ್ಣು ಸ್ವಲ್ಪ ಕೊಚ್ಚಿ ಹೋಗಿತ್ತು. ಜೊತೆಗೆ ರಸ್ತೆ ನಿರ್ಮಾಣ ಸಂಬಂಧ ಪಂಚಾಯತ್‌ 100  ಲೋಡ್ ಮಣ್ಣನ್ನು  ಹಾಕಿತ್ತು. ಹೀಗಾಗಿ ಈ ಮಣ್ಣುಗಳನ್ನು ತೆಗೆದು ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಅನಾಮಿಕ ದೂರುದಾರ 20 ಅಡಿ ಆಳದವರೆಗೆ ಗುಂಡಿ ತೋಡಲು  ಕೋರಿದ್ದಾನೆ. ಮಳೆಯಿಂದಾಗಿ ಮಣ್ಣು ತೆಗೆಯುವಾಗ ನೀರು ಬರುತ್ತಿದೆ. ಹೀಗಾಗಿ ಪೈಪ್‌ಗಳ ಮೂಲಕ  ಹೊರ ಹಾಕಲಾಯಿತು. ಹಿಟಾಚಿ ಮೂಲಕ 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳಕ್ಕೆ ಗುಂಡಿ ಅಗೆದು, ಒಂದೇ ಕಡೆ ಸುಮಾರು 6 ತಾಸು ಶೋಧ ನಡೆಸಿ ಇಂದಿನ ಕಾರ್ಯಾಚರಣೆ ಅಂತ್ಯಗೊಳಿಸಲಾಯಿತು. ಆದರೆ ಯಾವುದೇ ಅಸ್ಥಿಯ ಕುರುಹು ಸಿಗಲಿಲ್ಲ.

    ಬುಧವಾರವೂ ಮಣ್ಣು ತೆಗೆಯುವ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನ ಕಾರ್ಯಾಚರಣೆ ಸಮಯದಲ್ಲಿ ಎರಡು ವಿದ್ಯುತ್‌ ಕಂಬಗಳಿದ್ದವು. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಕಾರ್ಯಾಚರಣೆ ನಡೆಸಲಾಗಿತ್ತು.

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಭೇಟಿ ನೀಡಿ ಕಳೇಬರ ಶೋಧ ಕಾರ್ಯಕ್ಕೆ ಸಾಕ್ಷಿಯಾಯ್ತು. ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸಭೆ ನಡೆಸಿ ತನಿಖೆಯ ಮಾಹಿತಿಯನ್ನು ಪಡೆದುಕೊಂಡರು. ತನಿಖಾ ತಂಡದ ಎಸ್ಪಿ ಸೈಮನ್ ವಿವರಣೆ ನೀಡಿದರು.

  • ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್‌

    ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್‌

    ಮಂಗಳೂರು: ಧರ್ಮಸ್ಥಳದ (Dharmasthala) ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು (Police) 6 ಜನರನ್ನು ಬಂಧಿಸಿದ್ದಾರೆ.

    ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.  ಇದನ್ನೂ ಓದಿ: 11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

    ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

     

  • ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

    ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

    ದಾವಣಗೆರೆ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು (Arecanut Trees) ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಜಗಳೂರು (Jagalur) ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ (Farmer) ಅಜ್ಜಪ್ಪ ಎಂಬವರಿಗೆ ಸೇರಿದ ನಾಲ್ಕು ವರ್ಷದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಅವರು ಬೆಳಗ್ಗೆ ಜಮೀನಿಗೆ ಬಂದಾಗ ದುಷ್ಕರ್ಮಿಗಳ ಕೃತ್ಯ ಬೆಳಕಿಗೆ ಬಂದಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ಕಣೀರಿಟ್ಟಿದ್ದಾನೆ. ಇದನ್ನೂ ಓದಿ: ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ

    ಸ್ಥಳಕ್ಕೆ ಜಗಳೂರು ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

  • ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ

    ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ (Dharmasthala Mass Burial) ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ತೋರಿಸಿದ 13ನೇ ಜಾಗವನ್ನು ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಮೂಲಕ ಪರಿಶೋಧನೆ ನಡೆಸುವ ಸಾಧ್ಯತೆಯಿದೆ.

    ದೂರುದಾರ ಒಟ್ಟು 13 ಜಾಗದಲ್ಲಿ ಶವಗಳನ್ನು ಹೂತಿದಿದ್ದೇನೆ. ಅದರಲ್ಲೂ ಪಾಯಿಂಟ್‌ ನಂಬರ್‌ 9 ರಿಂದ ಪಾಯಿಂಟ್‌ 13ರವೆಗಿನ ಜಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಹೆಣವನ್ನು ಹೂಳಿದ್ದೇನೆ ಎಂದು ವಿಶೇಷ ತನಿಖಾ ತಂಡಕ್ಕೆ ಹೇಳಿದ್ದಾರೆ. ಇದನ್ನೂ ಓದಿ: ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

    ಈತನ ಮಾಹಿತಿಯಂತೆ ಇಲ್ಲಿಯವರೆಗೆ 12 ಸ್ಥಳಗಳಲ್ಲಿ ಶೋಧ ನಡೆಸಿದ್ದು 6ನೇ ಜಾಗದಲ್ಲಿ ಅಸ್ಥಿ ಸಿಕ್ಕಿದ್ದು ಬಿಟ್ಟರೆ ಬೇರೆ ಯಾವುದೇ ಜಾಗದಲ್ಲಿ ಅಸ್ಥಿ ಪತ್ತೆಯಾಗಿಲ್ಲ. ಹೀಗಾಗಿ ಈಗ ಬಾಕಿ ಇರುವ ಒಂದು ಜಾಗದಲ್ಲಿ ಜಿಪಿಆರ್‌ ಯಂತ್ರದ ಮೂಲಕ ಶೋಧ ನಡೆಸಲು ವಿಶೇಷ ತನಿಖಾ ತಂಡ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

    ಈ ಸಂಬಂಧ GPR ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಸದ್ಯ ಈಗ ಕಾರ್ಮಿಕರ ಸಹಾಯದಿಂದ ಭೂಮಿಯನ್ನು ಅಗೆಯಲಾಗಯತ್ತಿದೆ. ಆದರೆ ಜಿಪಿಆರ್‌ ಬಳಸಿದರೆ ಮಣ್ಣು ಅಗೆಯದೇ ಭೂಮಿ ಒಳಗಡೆ ಇರುವ ವಸ್ತುಗಳನ್ನು ಪತ್ತೆ ಹಚ್ಚಬಹುದು. ಈ ಕಾರಣಕ್ಕೆ ಜಿಪಿಆರ್‌ ಬಳಸುವಂತೆ ದೂರುದಾರ ಪರ ವಕೀಲರು ಎಸ್‌ಐಟಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿಧರ್ಮಸ್ಥಳ ಬುರುಡೆ ರಹಸ್ಯಕಗ್ಗಂಟಾಗಿದೆ 13ನೇ ಪಾಯಿಂಟ್  ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

    ಪಾಯಿಂಟ್ ನಂಬರ್ 13 ರಲ್ಲಿ ವಿದ್ಯುತ್ ಕಂಬಗಳು , ಹಲವಾರು ವಿದ್ಯುತ್ ಸಂಪರ್ಕಗಳಿವೆ. ಅಷ್ಟೇ ಅಲ್ಲದೇ ನೇತ್ರಾವದಿ ನದಿಗೆ ಸಣ್ಣ ಅಣೆಕಟ್ಟು ಸಹ ಕಟ್ಟಲಾಗಿದೆ. ಈ ಅಡೆ ತಡೆಗಳ ನಡುವೆ ಉತ್ಕನನ ಮಾಡುವುದು ಎಸ್‌ಐಟಿ ಸವಾಲಿನ ಕೆಲಸ. ಜಿಪಿಆರ್‌ ಬಳಕೆ ಬಗ್ಗೆ ಎಸ್‌ಐಟಿ ಅಧಿಕಾರಿಗಳ ಮಧ್ಯೆ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ತೀರ್ಮಾನವಾದರೆ ಜಿಪಿಆರ್‌ ಬಳಕೆಯಾಗಲಿದೆ. ಒಂದು ವೇಳೆ ಜಿಪಿಆರ್‌ ಸಿಗದೇ ಇದ್ದರೆ ಕಾರ್ಮಿಕರಿಂದ ಶೋಧ ನಡೆಯುವ ಸಾಧ್ಯತೆಯಿದೆ.

  • ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

    ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ(SIT) ಕಗ್ಗಂಟಾಗಿದ್ದು ಇಂದು ಶೋಧ ನಡೆಯಲಿದೆ.

    ದೂರುದಾರ ತೋರಿಸಿದ 13 ಕಡೆಗಳಲ್ಲೂ ಭೂಮಿ ಅಗೆದು ಹುಡುಕಿದರೂ ಪಾಯಿಂಟ್‌ ಸಂಖ್ಯೆ 6 ಹೊರತು ಪಡಿಸಿ ಬೇರೆ ಕಡೆ ಏನೂ ಸಿಗಲಿಲ್ಲ. ನೂರಾರು ಶವ ಹೂತಿಟ್ಟಿದ್ದೇನೆ ಎಂದಿದ್ದ ದೂರುದಾರನೂ ಇದೀಗ ಪಾಯಿಂಟ್ ನಂಬರ್ 13ರಲ್ಲಿ ರಾಶಿ ರಾಶಿ ಹೆಣಗಳಿದೆ ಎಂದು ಹೇಳಿದ್ದಾನೆ. ಈ ಕಾರಣಕ್ಕೆ ಸಾಕಷ್ಟು ಉದ್ದ ಅಗಲಕ್ಕೆ ಮಾರ್ಕ್ ಮಾಡಲಾಗಿದೆ. ಅದರೆ ಈ ಪಾಯಿಂಟ್ ಎಸ್‌ಐಟಿ ಅಧಿಕಾರಿಗಳಿಗೆ ಕಗ್ಗಂಟಾಗಿದೆ.

    ಬುಧವಾರ ಉತ್ಖನನ ಮಾಡಿ ಮುಗಿಸಬೇಕಿದ್ದ ಈ 13ನೇ ಪಾಯಿಂಟ್ ಅಗೆಯದೇ 14 ನೇ ಪಾಯಿಂಟ್ ಉತ್ಖನನ ನಡೆಸಿದ್ದರು. ಈ 13ನೇ ಪಾಯಿಂಟ್‌ನ ಮಧ್ಯಭಾಗದಲ್ಲೇ ಎರಡು ವಿದ್ಯುತ್ ಕಂಬಗಳಿದೆ. ಅಷ್ಟೇ ಅಲ್ಲದೇ ಪಕ್ಕದಲ್ಲೇ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾದ ಸಣ್ಣ ಅಣೆಕಟ್ಟು ಇದೆ. ಪಾಯಿಂಟ್ ಪಕ್ಕದಲ್ಲೇ ಸಾರ್ವಜನಿಕ ರಸ್ತೆ ಇದೆ. ಹೀಗಾಗಿ ಈ ಎಲ್ಲಾ ಸವಾಲು ಸರಿಪಡಿಸಲು ಒಂದು ದಿನ ಉತ್ಖನನವನ್ನು ಮುಂದೂಡಿದ್ದರು.  ಇದನ್ನೂ ಓದಿ: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ ಸಿಡಿದ ಧರ್ಮಸ್ಥಳದ ಭಕ್ತರು

     

    ಈ ಜಾಗವನ್ನು ಉತ್ಖನನ ಮಾಡಲು ಎಸ್‌ಐಟಿ ಸಿದ್ಧತೆ ಮಾಡಿದ್ದು, ಧರ್ಮಸ್ಥಳ ಗ್ರಾಮಪಂಚಾಯತ್, ನೀರಾವರಿ ಇಲಾಖೆ, ಮೆಸ್ಕಾಂ ಇಲಾಖೆ ಜೊತೆ ಸಭೆ ನಡೆಸಿದ್ದಾರೆ. ಕಿರು ಅಣೆಕಟ್ಟು ಪಕ್ಕದಲ್ಲಿ ನೆಲ ಅಗೆಯುವುದು ಹೇಗೆ? ವಿದ್ಯುತ್ ಕಂಬಗಳಿರುವ ಜಾಗದಲ್ಲಿ ಏನ್ ಮಾಡಬೇಕು ಎಂಬ ಬಗ್ಗೆ ತಜ್ಞರ ಅಭಿಪ್ರಾಯವನ್ನು ಎಸ್‌ಐಟಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ.   ಇದನ್ನೂ ಓದಿ: ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

    ಈ ಹಿನ್ನಲೆಯಲ್ಲೇ ಇಂದು ಉತ್ಖನನ ನಡೆಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ನಡುವೆ 13 ಕಡೆ ಭೂಮಿ ಅಗೆದರೂ ಏನೂ ಸಿಗದೇ ಇರುವ ಕಾರಣ ಮುಸುಕುಧಾರಿ ಅನಾಮಿಕ ಹೇಳುತ್ತಿರುವುದು ಸುಳ್ಳಾ ಎಂಬ ಪ್ರಶ್ನೆಯೂ ಎದ್ದಿದೆ. ಆತ ಹೇಳಿದ ಯಾವ ಪಾಯಿಂಟ್‌ನಲ್ಲೂ ಕಳೇಬರಗಳೇ ಸಿಗದೇ ಇದ್ದು ಹೊಸ ದಿಕ್ಕಿನಲ್ಲೂ ಹುಡುಕಿದರೂ ಯಾವುದೇ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ ಮುಸುಕುಧಾರಿ ಅನಾಮಿಕನ ವಿರುದ್ಧವೇ ರಿವರ್ಸ್ ತನಿಖೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

    ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸಿದ ಈ ತಲೆ ಬುರುಡೆ ಕಥೆಯನ್ನು ಅನಾಮಿಕ ವ್ಯಕ್ತಿ ಬುರುಡೆ ಬಿಟ್ಟಿದ್ದಾನಾ ಎಂಬ ಮಾತುಗಳು ಈಗ ಹರಿದಾಡಲು ಆರಂಭವಾಗಿದೆ. ಆತ ಎಸ್‌ಐಟಿ ಸೇರಿದಂತೆ ಎಲ್ಲರ ದಿಕ್ಕು ತಪ್ಪಿಸಿದ್ದಾನಾ ಎಂಬ ಅನುಮಾನವೂ ಹೆಚ್ಚಾಗಿದೆ. ಒಟ್ಟಿನಲ್ಲಿ ಇಂದು ಉತ್ಖನನ ಮಾಡುವ ಪಾಯಿಂಟ್‌ನಲ್ಲಿ ಏನಾಗುತ್ತದೆ ಎಂಬ ನಿರೀಕ್ಷೆ, ಕುತೂಹಲ ಎಲ್ಲರಲ್ಲಿದೆ.

  • ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

    ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ (Dharmasthala) ಕ್ಷೇತ್ರಕ್ಕೆ ನಿರಂತರ ಅವಮಾನ ಮಾಡುತ್ತಿರುವುದನ್ನು ಖಂಡಿಸಿ ಕ್ಷೇತ್ರದ ಭಕ್ತರು ಸಿಡಿದೆದ್ದಿದ್ದಾರೆ.

    ಸಾವಿರಾರು ಸಂಖ್ಯೆಯಲ್ಲಿ ಧರ್ಮಸ್ಥಳದ ಗ್ರಾಮಸ್ಥರು ಧರ್ಮಸ್ಥಳ ಠಾಣೆಗೆ ಮುತ್ತಿಗೆ ಹಾಕಿ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಕ್ಷೇತ್ರ ಬಗ್ಗೆ ಅಪಪ್ರಚಾರ ನಡೆಸಿದ್ದಕ್ಕೆ ಪಾಂಗಳ ಎಂಬಲ್ಲಿ ಮೂವರು ಯೂಟ್ಯೂಬರ್‌ ಮೇಲೆ  ಹಲ್ಲೆ ನಡೆಸಿದ್ದಾರೆ. ಎರಡು ಗುಂಪುಗಳ ಮಧ್ಯೆ ಕಿತ್ತಾಟ ನಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

    ಗ್ರಾಮಸ್ಥರು ಪ್ರತಿಭಟನೆ ಮುಂದಾಗಿದ್ದು ಯಾಕೆ?
    ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದರು. ಈ ಮಧ್ಯೆ ಯಾವಾಗ ಸಾಕ್ಷಿಧಾರ ತೋರಿಸಿದ 6ನೇ ಜಾಗದಲ್ಲಿ ಅಸ್ಥಿ ಸಿಕ್ಕಿತೋ ಆ ನಂತರ ಈ ಅಸ್ಥಿಯ ಬಗ್ಗೆ ಕೆಲ ಯೂಟ್ಯೂಬ್‌ ವಾಹಿನಿಗಳು ಸುಳ್ಳು ಸುದ್ದಿಗಳನ್ನು ಪ್ರಚಾರ ನಡೆಸಲು ಆರಂಭಿಸಿದವು.

    5-6 ವ್ಯಕ್ತಿಗಳ ದೇಹ ಸಿಕ್ಕಿವೆ. ಮಹಿಳೆಯರ ಮೂಳೆಗಳು ಸಿಕ್ಕಿವೆ ಎಂದು ಅಪ್ರಚಾರ ನಡೆಸಲು ಆರಂಭಿಸಿದವು. ಸೋಮವಾರ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೂಳೆಗಳು ಪತ್ತೆಯಾಗಿದ್ದವು. ಇದು ಬೆಳಕಿಗೆ ಬರುತ್ತಿದ್ದಂತೆ ಧರ್ಮಸ್ಥಳ ಗ್ರಾಮಸ್ಥರೇ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಕೆಲ ಯೂಟ್ಯೂಬರ್‌ಗಳು ಸುದ್ದಿ ಮಾಡಿದ್ದರು. ತಮ್ಮ ಎಲ್ಲಾ ಸುದ್ದಿಗಳಿಗೆ ಎಸ್‌ಐಟಿ ಖಚಿತ ಮೂಲಗಳು ತಿಳಿಸುತ್ತಿದ್ದರು.

    ರಾಜ್ಯಮಟ್ಟದ ಮಾಧ್ಯಮಗಳಲ್ಲಿ ತನಿಖೆಗೆ ಸಂಬಂಧಿಸಿದ ಸುದ್ದಿಗಳು ಮಾತ್ರ ಬರುತ್ತಿದ್ದರೆ ಯೂಟ್ಯೂಬ್‌ ವಾಹಿನಿಗಳಲ್ಲಿ ಅದಕ್ಕೆ ವಿರುದ್ಧವಾದ ಸುದ್ದಿಗಳು ಪ್ರಕಟವಾಗುತ್ತಿದ್ದವು. ಅಷ್ಟೇ ಅಲ್ಲದೇ ಕ್ಷೇತ್ರದ ಬಗ್ಗೆ ಅವಹೇಳನ ಮಾಡಿ ಸುದ್ದಿ ಪ್ರಕಟವಾಗುತ್ತಿತ್ತು. ಇದು ಗೊಂದಲಕ್ಕೆ ಕಾರಣವಾಗುತ್ತಿದ್ದವು. ನಿರಂತರ ದೇವಸ್ಥಾನ, ವೀರೇಂದ್ರ ಹೆಗಡೆ ಕುಟುಂಬದ ತೇಜೋವಧೆ, ಗ್ರಾಮಸ್ಥರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಇಂದು ಭಕ್ತರು ಸಿಡಿದು ನಿಂತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

    ಗ್ರಾಮಸ್ಥರ ಆಗ್ರಹ ಏನು?
    ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕಳೆದ 13 ವರ್ಷಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಕಾರಣ. ಇವರನ್ನು ಕೂಡಲೇ ಬಂಧಿಸಬೇಕು. ಸಮೀರ್‌ ಎಂಬಾತ ಯಾವುದೇ ಸಾಕ್ಷ್ಯ ಇಲ್ಲದೇ ಸುಳ್ಳು ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ.

    ಈಗ 12 ಸ್ಥಳಗಲ್ಲಿ ಶೋಧ ನಡೆಸಿದರೂ ಸರಿಯಾದ ಸಾಕ್ಷ್ಯ ಸಿಗಲಿಲ್ಲ. ಈ ಸಂದರ್ಭಲ್ಲಿ ಗಿರೀಶ್‌ ಮಟ್ಟಣನವರ್‌ ಪೊಲೀಸರ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೀಗಾಗಿ ಇವರ ಜೊತೆ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಯೂಟ್ಯೂಬರ್ಸ್‌ ವಿರುದ್ಧ ಕ್ರಮಕೈಗೊಳ್ಳಬೇಕು. ದಕ್ಷಿಣ ಕನ್ನಡ ಎಸ್‌ಪಿ, ಎಸ್‌ಐಟಿ ತಂಡ ಬರುವವರೆಗೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಕ್ಷೇತ್ರದ ಭಕ್ತರು ಈಗ ಧರ್ಮಸ್ಥಳ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.