Tag: Political Crisis

  • ದೇಶದ್ರೋಹಿಗಳು ಎಂದಿಗೂ ಗೆಲ್ಲಲ್ಲ: ಆದಿತ್ಯ ಠಾಕ್ರೆ

    ದೇಶದ್ರೋಹಿಗಳು ಎಂದಿಗೂ ಗೆಲ್ಲಲ್ಲ: ಆದಿತ್ಯ ಠಾಕ್ರೆ

    ಮುಂಬೈ: ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಶಿವಸೇನೆಯ ಬಂಡಾಯ ಶಾಸಕರಿಗೆ ಸರ್ಕಾರದಿಂದ ಏನು ತಪ್ಪಾಗಿದೆ ಎಂದು ನೇರವಾಗಿ ಉತ್ತರಿಸುವಂತೆ ಸವಾಲು ಎಸೆದಿದ್ದಾರೆ.

    ಆದಿತ್ಯ ಠಾಕ್ರೆ ತಂದೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ಸವಾಲು ಎಸೆದಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು

    ಬಂಡಾಯ ಶಾಸಕರನ್ನು ಟೀಕಿಸಿದ ಆದಿತ್ಯ ಠಾಕ್ರೆ, ಅವರು ಬಂಡುಕೋರರಲ್ಲ, ದೇಶದ್ರೋಹಿಗಳು. ದೇಶ ದ್ರೋಹಿಗಳು ಎಂದಿಗೂ ಗೆಲ್ಲುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ

    ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಾದ ನಡುವೆ ಬಂಡಾಯ ಶಾಸಕರು ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್‌ಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ, ಸಂಜಯ್ ರಾವತ್ ಸೇರಿದಂತೆ ಶಿವಸೇನೆಯ ಹಿರಿಯ ರಾಜಕಾರಣಿಗಳು ವಾಗ್ದಾಳಿ ನಡೆಸಿದ್ದಾರೆ

    Live Tv

  • ಗುರುವಾರ ಬೆಳಗ್ಗೆ 11 ಗಂಟೆಗೆ ಸರ್ಕಾರದ ಭವಿಷ್ಯ ನಿರ್ಧಾರ

    ಗುರುವಾರ ಬೆಳಗ್ಗೆ 11 ಗಂಟೆಗೆ ಸರ್ಕಾರದ ಭವಿಷ್ಯ ನಿರ್ಧಾರ

    ಬೆಂಗಳೂರು: ಗುರುವಾರ ಸಿಎಂ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈ ಮೂಲಕ ಮೂರು ದಿನ ಸರ್ಕಾರ ಸೇಫ್ ಆಗಿರಲಿದೆ.

    ಇಂದು ಮಧ್ಯಾಹ್ನ 1 ಗಂಟೆಯ ವೇಳೆ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಲಹಾ ಸಮಿತಿ ಸಭೆ ನಡೆಯಿತು. ಈ ವೇಳೆ ಬಿಎಸ್ ಯಡಿಯೂರಪ್ಪ ಇಂದೇ ಸಿಎಂ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಪಟ್ಟು ಹಿಡಿದರು.

    ಸರ್ಕಾರ ಮತ್ತು ಆಡಳಿತ ಪಕ್ಷದ ನಾಯಕರ ಜೊತೆ ಸ್ಪೀಕರ್ ಸುಮಾರು ಮುಕ್ಕಾಲು ಗಂಟೆ ಸಭೆ ನಡೆಸಿದರು. ನಂತರ ಸ್ಪೀಕರ್ ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸ ಮತ ಸಾಬೀತು ಪಡಿಸಲು ಸಿಎಂಗೆ ಅನುಮತಿ ನೀಡಿದರು.

    ಈ ಸಭೆಯಲ್ಲಿ ಬಿಎಸ್‍ವೈ, ಸುಪ್ರೀಂ ತೀರ್ಪು ಯಾವಾಗ ಬೇಕಾದರೂ ಬರಲಿ. ಆದರೆ ಸಿಎಂ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಯಾಕೆಂದರೆ ಸರ್ಕಾರಕ್ಕೆ ಬಹುಮತ ಇಲ್ಲ. ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಪಟ್ಟು ಹಿಡಿದರು.

    ಈ ವೇಳೆ ಸ್ಪೀಕರ್ ಅವರು, ನಾಳೆ ಸುಪ್ರೀಂ ತೀರ್ಪು ಬರಲಿದೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಿರಿ. ತೀರ್ಪಿನ ಬಳಿಕ ದಿನಾಂಕ ನಿಗದಿ ಮಾಡೋಣ ಎಂದು ಸಲಹೆ ನೀಡಿದರು. ಆದರೆ ಸ್ಪೀಕರ್ ನಿರ್ಧಾರಕ್ಕೆ ಬಿಎಸ್‍ವೈ ವಿರೋಧ ವ್ಯಕ್ತಪಡಿಸಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.