Tag: political leader

  • ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

    ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

    ನವದೆಹಲಿ: 2024ರ ಲೋಕಸಭಾ ಚುನಾವಣೆ (2024 Lok Sabha elections) ಸಂದರ್ಭದಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು. ಆದರೆ ನಾನು ಆ ಆಫರ್‌ ತಿರಸ್ಕರಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಬಹಿರಂಗಪಡಿಸಿದ್ದಾರೆ.

    ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ನನಗೆ ಈಗಲೂ ಒಂದು ಘಟನೆ ನೆನಪಿದೆ. ನಾನು ಯಾರ ಹೆಸರನ್ನೂ ಉಲ್ಲೇಖಿಸಲ್ಲ. ಆದ್ರೆ ಆ ವ್ಯಕ್ತಿ ʻನೀವು ಪ್ರಧಾನಿಯಾಗಲು (PM Post) ಬಯಸಿದ್ರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆʼ ಎಂದು ಹೇಳಿದ್ದರು. ನಾನು ಆ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಅಂತಹ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲವೆಂದೂ ಹೇಳಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರೀ ಮಳೆ; ತಾಜ್‌ಮಹಲ್‌ನ ಮುಖ್ಯ ಗುಂಬಜ್‌ನಲ್ಲಿ ಸೋರಿಕೆ – ವೀಡಿಯೋ ವೈರಲ್‌

    ಬಳಿಕ ನೀವು ನನ್ನನ್ನು ಏಕೆ ಬೆಂಬಲಿಸಬೇಕು? ನಾನು ನಿಮ್ಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು? ಎಂದು ಕೇಳಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ನಂಬಿಕೆಗಳಿಗೆ ಮತ್ತು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

    2019 ಮತ್ತು 2024ರ ಲೋಕಸಭಾ ಚುನಾವಣೆ ವೇಳೆ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ನಿತಿನ್‌ ಗಡ್ಕರಿ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಮೋದಿ ನಂತರ ಪ್ರಧಾನಿಯಾಗಲು ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ (Yogi Adityanath) ನಂತರ ಗಡ್ಕರಿ ಅವರೇ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೀಗ ಇದಕ್ಕೆಲ್ಲಾ ನಿತಿನ್‌ ಗಡ್ಕರಿ ಅವರೇ ಫುಲ್‌ಸ್ಟಾಪ್‌ ಹಾಕಿದ್ದಾರೆ. ಇದನ್ನೂ ಓದಿ: ಪರ ಪುರುಷನ ಜೊತೆ ಹಾಸಿಗೆ ಹಂಚಿಕೊಳ್ಳುವಂತೆ ಕಿರುಕುಳ – ನಿರಾಕರಿಸಿದ್ದಕ್ಕೆ ಪತ್ನಿ ಕೊಂದ ಪತಿ

    ನಾಗ್ಪುರ ಲೋಕಸಭಾ ಕ್ಷೇತ್ರದಿಂದ 3 ಬಾರಿ ಗೆದ್ದಿರುವ ಗಡ್ಕರಿ ಅವರು ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್‌ ನಾಯಕರಿಂದಲೂ ಅಪಾರ ಬೆಂಬಲ ಹೊಂದಿದ್ದಾರೆ. ಅವರು ಪ್ರಸ್ತುತ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳಿಗೆ ಕೇಂದ್ರ ಸಚಿವರಾಗಿ ದೀರ್ಘಕಾಲ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ 2009ರಿಂದ 2013ರ ವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ನಿಗಿ ನಿಗಿ ಕೆಂಡವಾಗಿದ್ದ ನಾಗಮಂಗಲ ಶಾಂತ – ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ಸಕ್ಸಸ್

  • ಫಾರ್ಮ್‍ಹೌಸ್‍ಗೆ ಯುವತಿಯ ಎಳೆದೊಯ್ದು ಮದ್ಯ ಕುಡಿಸಿ ಮೂವರು 2 ದಿನ ನಿರಂತರ ಅತ್ಯಾಚಾರಗೈದ್ರು!

    ಫಾರ್ಮ್‍ಹೌಸ್‍ಗೆ ಯುವತಿಯ ಎಳೆದೊಯ್ದು ಮದ್ಯ ಕುಡಿಸಿ ಮೂವರು 2 ದಿನ ನಿರಂತರ ಅತ್ಯಾಚಾರಗೈದ್ರು!

    – ಮೂವರು ಆರೋಪಿಗಳಿಗೆ ಬಲೆ ಬಿಸಿದ ಪೊಲೀಸರು

    ಭೋಪಾಲ್: ಮನೆಗೆ ಹೋಗುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಬಲವಂತವಾಗಿ ಕರೆದೊಯ್ದು, 2 ದಿನಗಳಕಾಲ ನಿರಂತರವಾಗಿ ಅತ್ಯಾಚಾರ ಮಾಡಿ ಯುವತಿಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಮಧ್ಯ ಪ್ರದೇಶದ ಶಹ್ದೋಲ್ ಜಿಲ್ಲೆಯಲ್ಲಿ ನಡೆದಿದೆ.

    20 ವರ್ಷದ ಯುವತಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ. ಆರೋಪಿಗಳಾದ ಶಿಕ್ಷಕ ರಾಜೇಶ್ ಶುಕ್ಲಾ ಮತ್ತು ಸ್ಥಳೀಯ ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ ಸೇರಿದಂತೆ ಮೂವರು ಸೇರಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

    ಯುವತಿ ಒಬ್ಬಳೇ ಮನೆಗೆ ತೆರಳುತ್ತಿರುವುದನ್ನು ಗಮನಿಸಿದ ಮೂವರು ಕಾಮುಕರು, ಆಕೆಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪಕ್ಕದ ಹಳ್ಳಿಗೆ ಕರೆದೊಯ್ದಿದ್ದಾರೆ. ನಿರ್ಜನ ಪ್ರದೇಶದಲ್ಲಿದ್ದ ಫಾರ್ಮ್ ಹೌಸ್ ಗೆ ಕರೆದುಕೊಂಡು ಹೋಗಿದ್ದಾರೆ. ಕೊಠಡಿಯಲ್ಲಿ ಆಕೆಯ ಮೇಲೆ ಒಬ್ಬರ ಮೇಲೊಬ್ಬರಂತೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಅಕೆಗೆ ಬಲವಂತವಾಗಿ ಮದ್ಯ ಕುಡಿಸಲಾಗಿದ್ದು ಬಳಿಕ ನಿರಂತರ 2 ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರಗೈದಿದ್ದಾರೆ. ತಮ್ಮ ಕಾಮ ತೃಷೆ ತೀರಿಸಿಕೊಂಡ ಬಳಿಕ ಯುವತಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

    ಯುವತಿ ಕಾಣದೇ ಇರುವುದರಿಂದ ಗಾಬರಿಗೊಂಡ ಪಾಲಕರು ಜೈತ್ಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಕುರಿತು ದೂರು ಸಲ್ಲಿಕೆ ಮಾಡಿದ್ದರು. ಯುವತಿ 2 ದಿನಗಳ ನಂತರ ಮನೆಗೆ ಬಂದಿದ್ದಾಳೆ. ನಡೆದ ಘಟನೆಯ ಕುರಿತಾಗಿ ಹೇಳಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಯುವತಿಯಿಂದ ಪ್ರಾಥಮಿಕ ಮಾಹಿತಿ ಪಡೆದು ಆರೋಪಿಗಳಾದ ಶಿಕ್ಷಕ ರಾಜೇಶ್ ಶುಕ್ಲಾ ಮತ್ತು ಸ್ಥಳೀಯ ಬಿಜೆಪಿ ಮುಖಂಡ ವಿಜಯ್ ತ್ರಿಪಾಠಿ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 376 ಅಡಿ (ಸಾಮೂಹಿಕ ಅತ್ಯಾಚಾರ), 342 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪರಾರಿಯಾಗಿರುವ ಆರೋಪಿಗಳಿಗೆ ಬಲೆ ಬೀಸಿದ್ದೇವೆ ಎಂದು ಶಹಾದೋಲ್ ಜಿಲ್ಲಾ ಪೊಲೀಸ್ ಅಧೀಕ್ಷಕ ಅವಧೇಶ್ ಗೋಸ್ವಾಮಿ ಹೇಳಿದ್ದಾರೆ.