Tag: political party

  • ರಾಜಕೀಯ ಪಕ್ಷಗಳಿಗೆ ಮೂಗುದಾರ ಹಾಕಲು ಸುಪ್ರೀಂ ಸಿದ್ಧತೆ – ಉಚಿತ ಕೊಡುಗೆಗಳ ನಿಯಂತ್ರಣಕ್ಕೆ ಸಮಿತಿ ರಚಿಸಲು ಒಲವು

    ರಾಜಕೀಯ ಪಕ್ಷಗಳಿಗೆ ಮೂಗುದಾರ ಹಾಕಲು ಸುಪ್ರೀಂ ಸಿದ್ಧತೆ – ಉಚಿತ ಕೊಡುಗೆಗಳ ನಿಯಂತ್ರಣಕ್ಕೆ ಸಮಿತಿ ರಚಿಸಲು ಒಲವು

    ನವದೆಹಲಿ: ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಮಿತಿ ರಚಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆ ವೇಳೆ ಸಿಜೆಐ ಪೀಠ ಇಂತದೊಂದು ಅಭಿಪ್ರಾಯ ಕೋರ್ಟ್ ವ್ಯಕ್ತಪಡಿಸಿದೆ.

    ಆರ್ಥಿಕತೆಯ ಮೇಲೆ ಮಹತ್ವದ ಪರಿಣಾಮ ಬೀರುವುದರಿಂದ ಉಚಿತ ಕೊಡುಗೆಗಳ ಸಾಧಕ-ಬಾಧಕಗಳನ್ನು ನಿರ್ಧರಿಸುವ ಅಗತ್ಯವಿದೆ. ಹೀಗಾಗಿ ಸಮಿತಿಯಲ್ಲಿ ನೀತಿ ಆಯೋಗ, ಹಣಕಾಸು ಆಯೋಗ, ಆಡಳಿತ ಮತ್ತು ವಿರೋಧ ಪಕ್ಷಗಳು, ಆರ್‍ಬಿಐ ಮತ್ತು ಇತರ ಮಧ್ಯಸ್ಥಗಾರರು ಒಳಗೊಂಡಿರಬೇಕು ಎಂದು ಸಿಜೆಐ ಎನ್‍ವಿ ರಮಣ ಹೇಳಿದ್ದಾರೆ.  ಇದನ್ನೂ ಓದಿ: ಸಿದ್ದರಾಮೋತ್ಸವ ಹೌಸ್ ಫುಲ್- ಸಿದ್ದರಾಮಯ್ಯ ಬಗ್ಗೆ ಹಾಡಿಗೆ ಕಂಬಳಿ ಬೀಸಿ ಡ್ಯಾನ್ಸ್ ಮಾಡಿದ ಅಭಿಮಾನಿಗಳು

    ಪ್ರಸ್ತಾಪಿತ ಸಮಿತಿಯೂ ಉಚಿತ ಕೊಡುಗೆಗಳನ್ನು ಹೇಗೆ ನಿಯಂತ್ರಿಸುವುದು ಮತ್ತು ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಕೋರ್ಟ್‍ಗೆ ವರದಿಗಳನ್ನು ನೀಡಬೇಕು ಎಂದು ಪೀಠ ಹೇಳಿದೆ. ತಜ್ಞರ ಸಮಿತಿಯ ರಚನೆಯ ಕುರಿತು ಏಳು ದಿನಗಳಲ್ಲಿ ತಮ್ಮ ಸಲಹೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಹಾಗೂ ಹಿರಿಯ ವಕೀಲ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಮತ್ತು ಅರ್ಜಿದಾರರಿಗೆ ನ್ಯಾಯಾಲಯ ಹೇಳಿದೆ.

    Law

    ವಿಚಾರಣೆ ವೇಳೆ ಚುನಾವಣಾ ಆಯೋಗದ “ನಿಷ್ಕ್ರಿಯತೆ”ಯಿಂದ ಇಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು. ಇದಕ್ಕೆ ಉತ್ತರಿಸಿದ ಆಯೋಗದ ಪರ ವಕೀಲರು ಉಚಿತಗಳ ಮೇಲಿನ ನ್ಯಾಯಾಲಯದ ತೀರ್ಪಿನಿಂದ ತನ್ನ ಕೈಗಳನ್ನು ಕಟ್ಟಲಾಗಿದೆ ಎಂದು ಹೇಳಿದರು. ಇದಕ್ಕೆ ಮತ್ತೆ ಉತ್ತರಿಸಿದ ಕೋರ್ಟ್ ಅಗತ್ಯಬಿದ್ದರೆ ಹಳೆಯ ತೀರ್ಪನ್ನು ಮರುಪರಿಶೀಲಿಸುವುದಾಗಿ ಹೇಳಿದೆ. ಇದನ್ನೂ ಓದಿ: ವರ್ಷದ ಹಿಂದೆ ಅತ್ಯಾಚಾರಗೈದು ಜೈಲು ಸೇರಿದ್ದವನಿಂದ ಮತ್ತೆ ರೇಪ್ – ಸ್ನೇಹಿತನಿಂದಲೇ ಕೃತ್ಯ ಸೆರೆ

    ಈ ವೇಳೆ ಮಧ್ಯಪ್ರವೇಶ ಮಾಡಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಷಯದ ಬಗ್ಗೆ ಚರ್ಚೆ ನಡೆಸಿ ಕಾನೂನು ಜಾರಿಗೊಳಿಸಲು ಸಂಸತ್ತಿಗೆ ಬಿಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಜೆಐ ಯಾವುದೇ ರಾಜಕೀಯ ಪಕ್ಷವು ಉಚಿತ ಕೊಡುಗೆಗಳ ನಿರ್ಧಾರದ ವಿರುದ್ಧ ನಿಲ್ಲುವುದಿಲ್ಲ ಎಂದು ಹೇಳಿದರು.

    ಮುಂದುವರಿದು ಇದರ ಬಗ್ಗೆ ಸಂಸತ್ತು ಚರ್ಚೆ ನಡೆಸುತ್ತದೆ ಎಂದು ನೀವು ಭಾವಿಸುತ್ತೀರಾ? ಯಾವ ರಾಜಕೀಯ ಪಕ್ಷವು ಚರ್ಚೆ ನಡೆಸುತ್ತದೆ? ಯಾವುದೇ ರಾಜಕೀಯ ಪಕ್ಷವು ಉಚಿತಗಳನ್ನು ವಿರೋಧಿಸುವುದಿಲ್ಲ. ಪ್ರತಿಯೊಬ್ಬರೂ ಅದನ್ನು ಬಯಸುತ್ತಾರೆ. ನಾವು ತೆರಿಗೆ ಪಾವತಿದಾರರು ಮತ್ತು ದೇಶದ ಆರ್ಥಿಕತೆಯ ಬಗ್ಗೆ ಯೋಚಿಸಬೇಕು ಎಂದು ಸಿಜೆಐ ರಮಣ, ವಕೀಲ ಕಪಿಲ್ ಸಿಬಲ್‍ಗೆ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅನ್ಯ ಪಕ್ಷಗಳಲ್ಲಿ ಅಧಿಕಾರ ಕುಟುಂಬ ರಾಜಕಾರಣಕ್ಕೆ ಸೀಮಿತ: ಜೆ.ಪಿ ನಡ್ಡಾ

    ಅನ್ಯ ಪಕ್ಷಗಳಲ್ಲಿ ಅಧಿಕಾರ ಕುಟುಂಬ ರಾಜಕಾರಣಕ್ಕೆ ಸೀಮಿತ: ಜೆ.ಪಿ ನಡ್ಡಾ

    ಬೆಂಗಳೂರು: ಕಾಂಗ್ರೆಸ್, ಸಮಾಜವಾದಿ, ಡಿಎಂಕೆ, ಆರ್.ಜೆ.ಡಿ., ಜನತಾದಳದಂಥ ಪಕ್ಷಗಳಲ್ಲಿ ಯಾರೂ ಪ್ರಧಾನಿಯಾಗಲು, ರಾಜ್ಯಾಧ್ಯಕ್ಷ, ರಾಷ್ಟ್ರೀಯ ಅಧ್ಯಕ್ಷರಾಗಲೂ ಸಾಧ್ಯವಿಲ್ಲ. ಇಂತಹ ಪಕ್ಷಗಳಲ್ಲಿ ಕುಟುಂಬದ ಸದಸ್ಯರಷ್ಟೇ ಅಧಿಕಾರ ಅನುಭವಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.

    ಯಲಹಂಕ ಬಳಿಯ ಸಿಂಗನಾಯಕನಹಳ್ಳಿ ಖಾಸಗಿ ರೆಸಾರ್ಟ್‍ನಲ್ಲಿ ಆಯೋಜಿಸಿದ್ದ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಬೇರೆ ಪಕ್ಷಗಳಿಂದ ಹೇಗೆ ಭಿನ್ನವಾಗಿದ್ದೇವೆ ಎಂಬುದನ್ನು ಅರಿಯಬೇಕು. ಕೇವಲ ಬಿಜೆಪಿ ಎಲ್ಲಾ ಪಕ್ಷಗಳಿಗಿಂತ ಶ್ರೇಷ್ಠ ಮತ್ತು ಮಹತ್ವದ್ದಾಗಿದೆ. ಬೇರೆ ಪಕ್ಷಗಳಲ್ಲಿ ರಾಜಕೀಯ ಸಂಘಟನೆ ಬಿಜೆಪಿಯಂತಿಲ್ಲ. ಅನ್ಯ ಪಕ್ಷಗಳಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವುದರಲ್ಲಿಯೇ ತಲ್ಲೀನರಾಗಿದ್ದಾರೆ. ಅನಿವಾರ್ಯ ಮತ್ತು ಅತ್ಯಗತ್ಯ ಸಂದರ್ಭದಲ್ಲಿ ಮಧ್ಯರಾತ್ರಿಯಲ್ಲೂ ಪಕ್ಷಕ್ಕಾಗಿ ದುಡಿಯುವವರು ನಮ್ಮ ಬಿಜೆಪಿಯಲ್ಲಿದ್ದಾರೆ. ಹೀಗಾಗಿ ಬಿಜೆಪಿಯ ವೈಶಿಷ್ಟ್ಯವನ್ನು ಅರಿಯಬೇಕು ಎಂದು ಅವರು ನುಡಿದರು. ಇದನ್ನೂ ಓದಿ: 777 ಚಾರ್ಲಿ ಸಿನಿಮಾಗೆ 6 ತಿಂಗಳ ತೆರಿಗೆ ವಿನಾಯಿತಿ

    ಬಿಜೆಪಿ ಇಡೀ ವಿಶ್ವದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ವಿಶೇಷತೆಯನ್ನು ಅರಿತು ನಡೆಯಬೇಕಿದೆ. ಬಿಜೆಪಿ ಎಲ್ಲರನ್ನೂ ಪರಿಗಣಿಸುತ್ತದೆ. ಎಲ್ಲಾ ಕಾರ್ಯಕರ್ತರ ಬಗ್ಗೆ ಪಕ್ಷಕ್ಕೆ ಮಾಹಿತಿಯಿದೆ. ಬಿಜೆಪಿಯೆನ್ನುವುದು ಎನ್ಸೈಕ್ಲೋಪೀಡಿಯಾ ಇದ್ದಂತೆ. ಎಲ್ಲರ ಬಗ್ಗೆಯೂ ಮಾಹಿತಿ ಇಟ್ಟುಕೊಂಡಿದೆ. ಎಲ್ಲಿ ಬಿಜೆಪಿಯ ಅವಶ್ಯಕತೆಯಿದೆಯೋ ಅಲ್ಲಿ ಬಿಜೆಪಿ ಧಾವಿಸುತ್ತದೆ. ಕಲಿಯುವಿಕೆ ಎನ್ನುವುದು ಜೀವನದ ಪ್ರತಿ ದಿನದಲ್ಲಿಯೂ ಇರುತ್ತದೆ. ಹೀಗಾಗಿ ಕಲಿಯಲು ಯಾರೂ ಹಿಂದೇಟು ಹಾಕಬೇಡಿ. ತರಬೇತಿ ಎನ್ನುವುದು ಕಲಿಯುವಿಕೆ ಎನ್ನುವುದು ಬಿಜೆಪಿಯಲ್ಲಿ ಇದ್ದೇ ಇದೆ. ಹೊಸ ವಿಷಯಗಳ ಕಲಿಯುವಿಕೆ ಪಕ್ಷದಲ್ಲಿ ಇದ್ದೇ ಇದೆ. ಸಣ್ಣ ಸಣ್ಣ ಆಸಕ್ತಿಗಳೇ ಮನುಷ್ಯನನ್ನು ಮನಸನ್ನು ಪ್ರೇರೇಪಿಸುತ್ತವೆ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ದೇಶಭಕ್ತಿ ಇರೋರು ಸೇನೆ ಸೇರ್ತಾರೆ ಇಲ್ಲದಿರೋರು ಸಿದ್ದರಾಮಯ್ಯ ಥರ ಮಾತನಾಡುತ್ತಾರೆ: ಸಿ.ಟಿ ರವಿ

    ಉತ್ತಮ ನಡವಳಿಕೆ ಎನ್ನುವುದು ಬಹಳ ಮುಖ್ಯ. ಕರ್ನಾಟಕದ ಬಗ್ಗೆಯೂ ನನಗೆ ಮಾಹಿತಿಯಿದೆ. ತರಬೇತಿ ಎನ್ನುವುದು ತಿಳಿಯುವಿಕೆಯ ಭಾಗವಾಗಿದೆ. ಯಾರೂ ತಿಳಿಯುತ್ತಾರೋ ಕಲಿಯುತ್ತಾರೋ ಅವರು ಮುಂದೆ ಬರುತ್ತಾರೆ. ಪ್ರತಿ ಜನಪ್ರತಿನಿಧಿಯೂ ಕಾರ್ಯಕರ್ತನಾಗಿರುತ್ತಾನೆ. ಎಲ್ಲರೂ ಕಲಿಯಲೇಬೇಕು. ಎಷ್ಟೇ ತಿಳಿದರೂ ಕಡಿಮೆಯೇ ಎಂಬ ಮನಸ್ಥಿತಿ ಇರಲಿ. ಹೀಗಾಗಿ ಎಲ್ಲಾ ಕ್ಷೇತ್ರಗಳ ಬಗ್ಗೆ ಎಲ್ಲಾ ವಿಷಯಗಳ ಬಗ್ಗೆ ಜ್ಞಾನ ಅರಿವು ಇರಬೇಕು. ಪಕ್ಷದ ವಿಷಯಗಳನ್ನು ಸಾಧನೆಗಳನ್ನು ಎಲ್ಲರೂ ಸರಳರೂಪದಲ್ಲಿ ತಮ್ಮದೇ ಭಾಷೆಯಲ್ಲಿ ಜನರ ಮುಂದೆ ಇಡುವ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

    ಸಾಧರಣ ವ್ಯಕ್ತಿಗೆ ತಿಳಿಸಲು ಸರಳ ಭಾಷೆಯೇ ಉತ್ತಮ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದನ್ನು ಅರಿತು ಜನರಿಗೆ ತಿಳಿ ಹೇಳಬೇಕು. ರಾಜಕೀಯ ಕಾರ್ಯಕರ್ತರು ಸದಾ ಜಾಗೃತಾವಸ್ಥೆಯಲ್ಲಿರಬೇಕು. ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿ ರಾಜಕೀಯ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ, ವಾತಾವರಣ ಹೇಗಿದೆ, ವಿಪಕ್ಷಗಳ ಬಗ್ಗೆ ಏನು ಮಾಹಿತಿ ಇದೆ ಎಂಬುದನ್ನು ಅರಿತಿರಬೇಕಾದ ಕುತೂಹಲ ಪ್ರವೃತ್ತಿ ಮತ್ತು ಜವಾಬ್ದಾರಿ ಇರಲೇಬೇಕು. ಪ್ರತಿಯೊಬ್ಬರು ಪಕ್ಷಕ್ಕಾಗಿ, ಪಕ್ಷ ಸಂಘಟನೆಗಾಗಿ ಎಷ್ಟು ಕಾರ್ಯಕರ್ತರು ತಮ್ಮ ಬಳಿಯಿದ್ದಾರೆ ಎಂದು ವೈಯಕ್ತಿಕವಾಗಿ ಮನಸಿನಲ್ಲಿ ಅವಲೋಕನ ಮಾಡಿಕೊಳ್ಳಿ ಎಂದು ಎಂದು ಕರೆ ನೀಡಿದರು. ಇದನ್ನೂ ಓದಿ: ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

    ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಹೇಳುವ ಬೊಮ್ಮಾಯಿ ಅವರೊಬ್ಬ ಜಾಗೃತ ನಾಯಕರೆಂಬುದನ್ನು ತೋರಿಸುತ್ತದೆ. ಈ ವರ್ಗಗಳ ಬಗ್ಗೆ ಅವರು ಆಲೋಚಿಸುತ್ತಿದ್ದಾರೆ ಎಂಬುದನ್ನು ತೋರಿಸುವುದೇ ಜಾಗೃತಾವಸ್ಥೆ. ರಾಜಕೀಯ ಕಾರ್ಯಕರ್ತರ ಜೀವನ ಪಕ್ಷವಾಗಬೇಕು. ತಮ್ಮತಮ್ಮ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಕಾರ್ಯಕರ್ತರು ಅರಿತಿರಬೇಕು. ಕಾರ್ಯಕರ್ತರು ಸದಾ ಸಕ್ರಿಯರಾಗಿರಬೇಕು. ನಮ್ಮ ಪರಿಚಯವೇನೆಂಬುದು ಕೇಳಿದರೆ ಅದು ಬಿಜೆಪಿಯಾಗಬೇಕು. ಎಲ್ಲರ ಜಾತಿ ಬಿಜೆಪಿಯಾಗಬೇಕು. ಇಂತಹ ಅಭ್ಯಾಸ ರೂಢಿಸಿಕೊಳ್ಳಬೇಕು. ಬಿಜೆಪಿ ಎನ್ನುವ ಜಾತಿಯೊಂದಿಗೆ ಎಲ್ಲರೂ ತಮ್ಮನ್ನು ಜೋಡಿಸಿಕೊಳ್ಳಬೇಕು. ಎಲ್ಲರ ಜಾತಿಯೇ ಬಿಜೆಪಿಯೇ ಆಗಬೇಕು. ನಾವು ವಿಶೇಷ ಚಿಕಿತ್ಸೆ ನೀಡುವುದಿಲ್ಲ. ನಮ್ಮ ಜಾತಿಯ ವ್ಯಕ್ತಿ ಬಿಜೆಪಿಯಲ್ಲಿದ್ದಾನೆ ಎಂಬ ಹೆಮ್ಮೆ ಜಾತಿ ಸಮುದಾಯದಲ್ಲಿ ಬರಬೇಕು. ಹಿಂದುಳಿದ ವರ್ಗಗಳ ಸಮುದಾಯ ಬಹಳ ದೊಡ್ಡ ಸಮುದಾಯವಾಗಿದೆ. ಈ ವರ್ಗದಿಂದ ಯಾರೊಬ್ಬರೂ ಬಿಜೆಪಿಯಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಹಿಂದುಳಿದ ಜಾತಿಗಳ ಪ್ರಭಾವಿ ಯಾರು? ನಾಯಕ ಯಾರು? ಎಂಬುದನ್ನು ತಿಳಿಯಬೇಕು. ನಮ್ಮ ನಮ್ಮಲ್ಲಿ ಜಾತಿ ದ್ವೇಷ ಬರಬಾರದು. ಎಲ್ಲಾ ಜಾತಿಗಳ ಪ್ರಭಾವಿಗಳು ನಾಯಕರು ಬಿಜೆಪಿಯಾಗಬೇಕು. ಸಣ್ಣ ಸಣ್ಣ ಮಾತುಗಳನ್ನು ಆಡುವವರು ಸಣ್ಣದಾಗಿಯೇ ಇದ್ದು ವ್ಯರ್ಥ ಉತ್ಪನ್ನಗಳಾಗಿ ಉಳಿದುಬಿಡುತ್ತಾರೆ. ಪ್ರಧಾನ ಮಂತ್ರಿಗಳು ಒಂದೊಂದು ವಿಷಯವನ್ನು ಒಂದೊಂದು ಸಮುದಾಯ ಒಂದೊಂದು ಜಾತಿಯನ್ನು ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಒಗ್ಗೂಡಿಸಿ ಸುಂದರ ಪುಷ್ಪಗುಚ್ಛವನ್ನು ತಯಾರು ಮಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಪಕ್ಷ ಸಂಘಟನೆಯತ್ತ ಗಮನ ಕೇಂದ್ರೀಕರಿಸಬೇಕು ಎಂದು ನುಡಿದರು.

    ಒಂದು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿ ಯಾರೊಂದಿಗೂ ಮಾತನಾಡದೇ ಏಕಾಗ್ರತೆಯಿಂದ ನಮ್ಮ ಆರ್ಥಿಕತೆ ಸ್ಥಿತಿಯೇನಿದೆ? ನಮ್ಮ ಅಭಿವೃದ್ಧಿ ಏನಾಗಿದೆ? ನಾವೆಲ್ಲಿದ್ದೇವೆ? ನಾವು ಎಷ್ಟು ಕಾಲಾವಧಿಯಲ್ಲಿ ಎಲ್ಲಿಗೆ ಹೋಗಬೇಕು ಎಂಬುದನ್ನು ಚಿಂತನೆ ಮಾಡಬೇಕು. ಎಲ್ಲಾ ಜಾತಿಗಳ ನಾಯಕರ ಬಗ್ಗೆ ಪಟ್ಟಿ ಮಾಡಿ ಇದನ್ನು ದ್ವಿಗುಣಗೊಳಿಸಲು ದುಡಿಯಬೇಕು. ನಮ್ಮ ಸಂಘಟನೆ ಎಷ್ಟು ದೊಡ್ಡದಾಗಿದೆ ಎಂದರೆ ಪಕ್ಷಕ್ಕಾಗಿ ನನ್ನ ಕೊಡುಗೆ ಏನು ಎಂಬುದನ್ನೇ ಮರೆತುಬಿಡುವಂತಾಗಿದೆ. ಬಿಜೆಪಿ ಅಷ್ಟೊಂದು ವಿಶಾಲವಾಗಿ ಬೆಳೆದಿದೆ. ಕಳೆದ ಮೂರು ದಿನಗಳಿಂದ ತರಬೇತಿ ಕೇಂದ್ರದಲ್ಲಿ ಬಿಜೆಪಿ ಸಂಘಟನೆ ಬಗ್ಗೆ ಚರ್ಚಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೊಡುಗೆಗಳ ಬಗ್ಗೆ ಚರ್ಚಿಸಲಾಗಿದೆ. ಇದರೊಂದಿಗೆ ನರೇಂದ್ರ ಮೋದಿಯವರ 8 ವರ್ಷಗಳ ಸಾಧನೆ ಬಗ್ಗೆಯೂ ತರಬೇತಿ ಸಭೆಗಳಲ್ಲಿ ಚರ್ಚಿಸಲಾಗಿದೆ ಎಂದು ಜೆ.ಪಿ.ನಡ್ಡಾ ಹೇಳಿದರು.

    ಕರ್ನಾಟಕದ ಭೂಮಿಯಲ್ಲಿ ಹಿಂದುಳಿದ ವರ್ಗಗಳಿಗಾಗಿ ಪ್ರತ್ಯೇಕ ಹಾಸ್ಟೆಲ್‍ಗಳು, ಪ್ರತ್ಯೇಕ ವಸತಿ ಶಾಲೆಗಳು, ಉದ್ಯೋಗ ನೀಡುವಂತಾಗಬೇಕು. ಇದನ್ನು ಬಿಜೆಪಿ ಸರ್ಕಾರ ಮಾಡುತ್ತದೆ. ಪ್ರತಿಯೊಂದು ಪ್ರದೇಶಗಳ ಒಬಿಸಿ ಬಗ್ಗೆ ಎಲ್ಲಾ ಪ್ರದೇಶಗಳಿಗೂ ತಿಳಿದಿರಬೇಕು. ಹೀಗಾಗಿ ದೇಶದ ಪ್ರತಿಯೊಂದು ಪ್ರದೇಶದಲ್ಲಿ ಹಿಂದುಳಿದ ವರ್ಗಗಳಿಗೆ ಆದ ಕೆಲಸಗಳ ಮಾಹಿತಿ ನೀಡುವಂತೆ ರಾಷ್ಟ್ರೀಯ ಒಬಿಸಿ ಮೋರ್ಚಾದ ಅಧ್ಯಕ್ಷ ಡಾ.ಲಕ್ಷ್ಮಣ್ ಅವರಿಗೆ ನಡ್ಡಾ ಅವರು ಸೂಚಿಸಿದರು.

    ಸಾಮಾಜಿಕ ನ್ಯಾಯವಷ್ಟೇ ಅಲ್ಲ, ಸಾಮಾಜಿಕ ಅವಕಾಶ ನೀಡುವಂತಾಗಬೇಕು. ಬೊಮ್ಮಾಯಿ ಅವರ ಸರ್ಕಾರ ಸಾಮಾಜಿಕ ನ್ಯಾಯವಷ್ಟೇ ಅಲ್ಲ, ಸಾಮಾಜಿಕ ಅವಕಾಶವನ್ನೂ ನೀಡಿದೆ. ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಭಾರತದ ಬಡತನರೇಖೆಗಿಂತ ಕೆಳಗಿನ ಮಟ್ಟ 22% ಇಂದ 10%ಕ್ಕೆ ಕಡಿಮೆಯಾಗಿದೆ. ಕೋವಿಡ್ ಕಾಲದಲ್ಲಿಯೂ ಸರ್ಕಾರ ಮಾಡಿದ ಸಾಧನೆ ಸೇರಿದಂತೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಎಲ್ಲಾ ನಾಯಕರು ಇಡಬೇಕು ಎಂದರು.

    ಸಮಾರೋಪ ಸಮಾರಂಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ರಾಜ್ಯದ ಸಚಿವರು, ಆಹ್ವಾನಿತ ಪ್ರತಿನಿಧಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

    Live Tv

  • ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್

    ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್

    ಬೆಂಗಳೂರು: ಬೇರೆ ಪಕ್ಷಗಳಿಗೂ ಆಮ್ ಆದ್ಮಿ ಪಾರ್ಟಿಗೂ ಸಾಕಷ್ಟು ವ್ಯತ್ಯಾಸವಿದೆ. ಬೇರೆ ಪಕ್ಷಗಳು ಹಾಗೂ ಅವುಗಳ ನಾಯಕರು ಹಣಬಲದಲ್ಲಿ ಮಾತ್ರ ಶ್ರೀಮಂತರಾಗಿದ್ದಾರೆ. ನೈತಿಕತೆಯಲ್ಲಿ ಅವರೆಲ್ಲ ಬಡವರು. ಆದರೆ ಆಮ್ ಆದ್ಮಿ ಪಾರ್ಟಿಯು ವಿಚಾರದಲ್ಲಿ ಶ್ರೀಮಂತವಾಗಿದೆ. ಪ್ರಾಮಾಣಿಕತೆ ಹಾಗೂ ಸ್ವಚ್ಛ ರಾಜಕೀಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತನಾಡುವ ನೈತಿಕತೆಯನ್ನು ಎಎಪಿ ಉಳಿಸಿಕೊಂಡಿದೆ ಎಂದು ಎಎಪಿ ಮುಖಂಡ ಭಾಸ್ಕರ್ ರಾವ್ ಅಭಿಪ್ರಾಯಪಟ್ಟಿದ್ದಾರೆ.


    ಬೆಂಗಳೂರಿನ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಮಾತನಾಡಿದ ಭಾಸ್ಕರ್ ರಾವ್, ಕರ್ನಾಟಕಕ್ಕೆ ನೆಲ, ಜಲ, ಸಂಪನ್ಮೂಲಗಳ ಕೊರತೆಯಿಲ್ಲ. ಇವೆಲ್ಲ ಇದ್ದರೂ ಆಡಳಿತಗಾರರ ನಿರ್ಲಕ್ಷ್ಯದಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಳುವ ರಾಜಕಾರಣಿಗಳು ಸಾಮಾನ್ಯ ಜನರ ಬಗ್ಗೆ ಎಷ್ಟು ನಿರ್ಲಕ್ಷ್ಯ ವಹಿಸುತ್ತಾರೆ ಎನ್ನುವುದನ್ನು ಕೋವಿಡ್ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರದ ಬೊಕ್ಕಸದಿಂದ ಲಕ್ಷ ಕೋಟಿ ರೂಪಾಯಿ ಖರ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಎಲ್ಲ ಹಣವು ಭ್ರಷ್ಟ ರಾಜಕಾರಣಿಗಳ ಪಾಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ


    ಯಾವ ಸರ್ಕಾರಗಳ ಬಳಿಯೂ ಹಣದ ಕೊರತೆಯಿಲ್ಲ. ಆದರೆ ಪ್ರಾಮಾಣಿಕತೆ ಹಾಗೂ ಇಚ್ಛಾಶಕ್ತಿಯ ಕೊರತೆಯಿದೆ. ದೆಹಲಿಯ ಆಮ್ ಆದ್ಮಿ ಪಾರ್ಟಿ ಸರ್ಕಾರವು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದರಿಂದಲೇ, ಅಲ್ಲಿ ಭಾರೀ ಪ್ರಮಾಣದ ಹಣ ಉಳಿತಾಯವಾಯಿತು. ಅದನ್ನು ಜನರ ಕಲ್ಯಾಣಕ್ಕೆ ಅಲ್ಲಿನ ಸರ್ಕಾರ ಬಳಸಿಕೊಂಡಿತು. ವಿದ್ಯುತ್, ಗುಣಮಟ್ಟದ ಶಿಕ್ಷಣ, ಕುಡಿಯುವ ನೀರು, ಸಾರಿಗೆ ಮುಂತಾದ ಸೌಲಭ್ಯಗಳನ್ನು ಉಚಿತವಾಗಿ ಕೊಡುವುದರಲ್ಲಿ ದೆಹಲಿ ಸರ್ಕಾರ ಯಶಸ್ವಿಯಾಗಿದೆ ಎಂದರು.

    ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಮಾತನಾಡಿ, ಕರ್ನಾಟಕದಲ್ಲಿ ಯಾವಾಗ ಎಎಪಿಯು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಾವೆಲ್ಲ ಬಹಳ ವರ್ಷಗಳ ಹಿಂದೆಯೇ ಕೇಜ್ರಿವಾಲ್‍ರವರನ್ನು ಕೇಳುತ್ತಿದ್ದೆವು. ಈ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಬಾರದು, ಜನರು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಉತ್ತರಿಸುತ್ತಿದ್ದರು. ಆ ಸಮಯ ಈಗ ಬಂದಿದ್ದು, ಕರ್ನಾಟಕದ ಜನರು ಎಎಪಿಯತ್ತ ಒಲವು ತೋರುತ್ತಿದ್ದಾರೆ. ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರಲು ಬಯಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ಆಮ್ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ, ರಾಜ್ಯ ಸಂಘಟನಾ ಪ್ರಮುಖ ಡಾ. ದಾಮೋದರನ್, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯ್ ಶರ್ಮ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮತ್ತಿತರ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಬಿಜೆಪಿ, ಕಾಂಗ್ರೆಸ್ ಹೆಸರು ಹೇಳಿ ಭವಿಷ್ಯ ನುಡಿದ ಮಕಣಾಪುರದ ದೈವ

    ಬಿಜೆಪಿ, ಕಾಂಗ್ರೆಸ್ ಹೆಸರು ಹೇಳಿ ಭವಿಷ್ಯ ನುಡಿದ ಮಕಣಾಪುರದ ದೈವ

    ವಿಜಯಪುರ: ಇದೇ ಮೊದಲ ಬಾರಿ ರಾಜಕೀಯ ಪಕ್ಷಗಳ ಹೆಸರು ಹೇಳಿ ದೈವ ಭವಿಷ್ಯ ನುಡಿದಿದ್ದು, ರಾಜಕಾರಣಿಗಳಿಗೆ ಶಾಕ್ ನೀಡಿದೆ.

    ಚಡಚಣ ತಾಲೂಕಿನ ಮಕಣಾಪುರದ ಸೋಮಲಿಂಗ ದೇವಸ್ಥಾನದ ಕಲ್ಲೂರುಸಿದ್ಧ ಭವಿಷ್ಯ ಬಹಳ ಪ್ರಸಿದ್ಧ. ಮಕಣಾಪುರ ಗ್ರಾಮದಲ್ಲಿ ಪ್ರತಿ ವರ್ಷ ಯುಗಾದಿ ಬಳಿಕ ದೈವ ಭವಿಷ್ಯ ನುಡಿಯುತ್ತೆ. ಶಿವನ ಅವತಾರ ಸೋಮಲಿಂಗ ದೇವರ ಸೇವಕನಾಗಿರುವ ಪವಾಡ ಪುರುಷ ಕಲ್ಲೂರುಸಿದ್ಧ ಭವಿಷ್ಯವನ್ನು ಜನರು ನಂಬುತ್ತಾರೆ. ನಾಲಿಗೆ ಮೇಲೆ ಶಿವನೆ ಕುಳಿತು ಭವಿಷ್ಯ ನುಡಿಯುತ್ತಾನೆ ಎಂಬ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ. ಇದನ್ನೂ ಓದಿ: ಇ-ಹರಾಜು ಮೂಲಕ ಸಾರಿಗೆಯೇತರ ವಾಹನಗಳಿಗೆ ‘ವಿಐಪಿ ಸಂಖ್ಯೆ’: ಹರಿಯಾಣ ಸಿಎಂ

    ಹೇಳಿದ್ದೇನು?
    ಕಯ್ಯಲ್ಲಿ ಬೆಳ್ಳಿ ತ್ರಿಶೂಲ, ಮುಖಕ್ಕೆ ದೇವರ ಮುಖವಾಡ ಧರಿಸಿ ಭವಿಷ್ಯವನ್ನು ನುಡಿಯುತ್ತೆ. ಈ ವೇಳೆ ದೈವ, ಕಾಂಗ್ರೆಸ್-ಬಿಜೆಪಿ ತಾ ಮುಂದು ನಾ ಮುಂದು ಎನ್ನುತ್ವೆ. ಎರಡು ಪಕ್ಷಗಳ ನಡುವೆ ಭಾರೀ ತಿಕ್ಕಾಟ ನಡೆಯುತ್ತೆ ಎಂದು ಭವಿಷ್ಯವನ್ನ ಕಲ್ಲೂರುಸಿದ್ಧ ದೈವ ನುಡಿದಿದೆ.

    ಎರಡು ಪಕ್ಷಗಳು ನಾ ಮುಂದು, ತಾ ಮುಂದು ಎನ್ನುವಾಗ ಜಗತ್ತೆ ಅಲ್ಲೋಲ ಕಲ್ಲೋಲ ಆಗುತ್ತೆ. ಎರಡು ಪಕ್ಷದ ತಿಕ್ಕಾಟದಿಂದ ಅಲ್ಲೋಲ ಕಲ್ಲೋಲ. ಬಿಜೆಪಿ ಜನರಿಗೆ ಹೊಂದಿಕೊಂಡು ಹೋದರೆ ನಿಶಾನೆ(ಧ್ವಜ/ಗೆಲುವು) ಹಚ್ತೇನೆ. ಇಲ್ಲಂದ್ರ ಕಡಿದು ಮೂರು ತುಂಡು ಮಾಡೀನಿ ಎಂದು ದೈವ ನುಡಿದಿದೆ. ಇದನ್ನೂ ಓದಿ: ಪವಾರ್‌ ಆಯೋಜಿಸಿದ್ದ ಡಿನ್ನರ್‌ನಲ್ಲಿ ಗಡ್ಕರಿ, ರಾವತ್‌ ಭಾಗಿ

    ಬಿಜೆಪಿ ಜನರೊಂದಿಗೆ ಹೊಂದಾಣಿಕೆ ಆದ್ರೆ ಗೆಲುವು ಎಂದು ಬರುತ್ತೆ. ಈ ವೇಳೆ ಭೂಕಂಪನ ಭವಿಷ್ಯವನ್ನು ಕಲ್ಲೂರುಸಿದ್ಧ ದೈವ ನುಡಿದಿದೆ. ನಾಲ್ಕು ಮೂಲೆ ಸೋಸಿ(ಶೋಧಿಸಿ) ನೋಡುದ್ರಾಗ ಕತ್ತಲೆ ಬಿತ್ತಲೆ. ಭೂತ್ಯಾನ ಹಚ್ಚಿ ಬಯಲು ಮಾಡಿದ್ರ ಎರಡು ಮೂಲೆ ತೊಟ್ಟಲಿಟ್ಟು ತೂಗಿತು ಎನ್ನುವ ಮೂಲಕ ಎರಡು ಭಾಗದಲ್ಲಿ ಭೂಕಂಪ ಆಗಬಹುದು ಎಂದಿದೆ.

  • ರಷ್ಯಾದೊಂದಿಗೆ ಸಂಬಂಧ – 11 ರಾಜಕೀಯ ಪಕ್ಷಗಳನ್ನು ಅಮಾನತುಗೊಳಿಸಿದ ಉಕ್ರೇನ್

    ರಷ್ಯಾದೊಂದಿಗೆ ಸಂಬಂಧ – 11 ರಾಜಕೀಯ ಪಕ್ಷಗಳನ್ನು ಅಮಾನತುಗೊಳಿಸಿದ ಉಕ್ರೇನ್

    ಕೀವ್: ಉಕ್ರೇನ್‌ನ ರಾಷ್ಟ್ರೀಯ ಭದ್ರತೆ ಹಾಗೂ ರಕ್ಷಣಾ ಮಂಡಳಿ ರಷ್ಯಾದ ಪರವಾಗಿದ್ದ 11 ರಾಜಕೀಯ ಪಕ್ಷಗಳನ್ನು ಅಮಾನತುಗೊಳಿಸಿದೆ. ಇದೀಗ ಉಕ್ರೇನ್‌ನಲ್ಲಿ ಸಮರ ಕಾನೂನು ಜಾರಿಗೊಳಿಸಲಾಗಿದೆ.

    ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತನ್ನ ದೇಶದ ಮೇಲೆ ಯುದ್ಧ ಸಾರಿರುವ ರಷ್ಯಾದೊಂದಿಗೆ ಸಂಬಂಧ ಹೊಂದಿದ್ದ 11 ರಾಜಕೀಯ ಪಕ್ಷಗಳನ್ನು ಅಮಾನತುಗೊಳಿಸಿದ್ದಾರೆ. 4.41 ಕೋಟಿ ಜನಸಂಖ್ಯೆ ಇರುವ ಉಕ್ರೇನ್‌ನಲ್ಲಿ 450 ಸಂಸತ್ ಸ್ಥಾನಗಳಲ್ಲಿ 44 ಸ್ಥಾನಗಳನ್ನು ರಷ್ಯಾಗೆ ಬೆಂಬಲ ನೀಡುತ್ತಿದ್ದ ರಾಜಕೀಯ ಪಕ್ಷದವರೇ ಪಡೆದುಕೊಂಡಿದ್ದರು. ಇದನ್ನೂ ಓದಿ: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ 

    ಭಾನುವಾರ ವೀಡಿಯೋ ಸಂದೇಶವನ್ನು ಕಳುಹಿಸಿದ ಉಕ್ರೇನ್ ಅಧ್ಯಕ್ಷ ರಷ್ಯಾ ಉಕ್ರೇನ್ ಮೇಲೆ ದೊಡ್ಡ ಮಟ್ಟದ ಯುದ್ಧವನ್ನೇ ನಡೆಸಿದೆ. ಈ ಯುದ್ಧಕ್ಕೆ ನಮ್ಮ ದೇಶದ ಒಳಗಡೆಯೇ ಕೆಲವು ರಾಜಕೀಯ ಪಕ್ಷಗಳು ಬೆಂಬಲವನ್ನು ನೀಡಿರುವುದು ಗಮನಕ್ಕೆ ಬಂದಿದೆ. ರಷ್ಯಾದೊಂದಿಗೆ ಸಂಬಂಧವನ್ನು ಹೊಂದಿರುವ ರಾಜಕೀಯ ಪಕ್ಷಗಳನ್ನು ಸಮರ ಕಾನೂನಿನ ಅವಧಿಗೆ ಅಮಾನತುಗೊಳಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: 98ರ ಹರೆಯದಲ್ಲೂ ರಷ್ಯಾ ವಿರುದ್ಧ ಹೋರಾಡಲು ಮುಂದಾದ ವೃದ್ಧೆ

     

  • ಬೆಂಗಾಲಿ ಸ್ವೀಟ್‍ಗಳ ಮೇಲೆ ರಾಜಕೀಯ ಚಿಹ್ನೆ

    ಬೆಂಗಾಲಿ ಸ್ವೀಟ್‍ಗಳ ಮೇಲೆ ರಾಜಕೀಯ ಚಿಹ್ನೆ

    ಕೋಲ್ಕತ್ತಾ: ಬಂಗಾಳದಲ್ಲಿ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ಎಲ್ಲೆಲ್ಲೂ ರಾಜಕೀಯವೇ ರಾರಾಜಿಸುತ್ತಿದೆ. ಇತ್ತೀಚೆಗೆ ಕ್ರಿಕೆಟಿಗ ಮನೋಜ್ ತಿವಾರಿ ಅವರ ಜಾಕೆಟ್ ಮೇಲೆ, ಅಗ್ನಿಮಿತ್ರ ಪಾಲ್ ಅವರ ಡಿಸೈನರ್ ಸೀರೆಗಳ ಕಮಲದ ಚಿಹ್ನೆ ಇತ್ತು. ಇದೀಗ ಸ್ವೀಟ್ ಅಂಗಡಿಯ ಮಾಲೀಕ ಸಂದೇಶ್ ಸರದಿ.

    ಕೋಲ್ಕತ್ತಾದ ಬಲರಾಮ್ ಮುಲ್ಲಿಕ್ ರಾಧರಮನ್ ಮುಲ್ಲಿಕ್ ಸ್ವೀಟ್‍ಗಳ ಮೇಲೆ ರಾಜಕೀಯ ಪಕ್ಷದ ಚಿಹ್ನೆಗಳನ್ನು ರಚಿಸುವ ಮೂಲಕ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

    ರಾಜಕೀಯದ ಪ್ರಮುಖ ಪಕ್ಷಗಳ ಚಿಹ್ನೆ ಸೇರಿದಂತೆ ಕಾಂಗ್ರೆಸ್, ಭಾರತೀಯ ಜನತಾ ಪಕ್ಷದ ಚಿಹ್ನೆ ಜೊತೆಗೆ ಜೈ ಶ್ರೀ ರಾಮ್ ಮತ್ತು ಖೇಲಾ ಹೋಬ್ ಎಂಬ ಎರಡು ಪದಗಳನ್ನು ಸ್ವೀಟ್‍ಗಳ ಮೇಲೆ ರಚಿಸಿದ್ದಾರೆ. ಇದೀಗ ಈ ಸ್ವೀಟ್‍ಗಳು ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ.

    ಈ ಕುರಿತಂತೆ ಮಾತನಾಡಿದ ಸ್ವೀಟ್ ಹೌಸ್ ವ್ಯವಸ್ಥಾಪಕ ನಿರ್ದೇಶಕ ಸುದೀಪ್ ಮಲ್ಲಿಕ್, ವರ್ಷದ ಬಹುದೊಡ್ಡ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನಾವು ಚುನಾವಣೆಯ ಸಂಬಂಧಪಟ್ಟಂತೆ ಸ್ವೀಟ್‍ಗಳನ್ನು ತಯಾರಿ ಮಾಡುತ್ತಿದ್ದು, ಈ ಸ್ವೀಟ್‍ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಖೇಲಾ ಹೋಬ್ ಮತ್ತು ಜೈ ಶ್ರೀ ರಾಮ್ ಎಂದು ಪದವನ್ನು ರಚಿಸಿರುವ ಸ್ವೀಟ್‍ಗಳಂತೂ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿಹೋಗಿದೆ ಎಂದು ಹೇಳಿದ್ದಾರೆ.

    ಸದ್ಯ ಈ ಸ್ವೀಟ್‍ಗಳು ಗ್ರಾಹಕರ ಗಮನ ಸೆಳೆಯುತ್ತಿದ್ದು, ಗ್ರಾಹಕರು ರಾಜಕೀಯ ಚಿಹ್ನೆಗಳುಳ್ಳ ಸ್ವೀಟ್‍ಗಳನ್ನು ಖರೀದಿಸಲು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

  • ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿದ ರಜನಿಕಾಂತ್

    ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿದ ರಜನಿಕಾಂತ್

    ಚೆನ್ನೈ: ನಟ ರಜನಿಕಾಂತ್ ತಮ್ಮ ಹೊಸ ಅಧ್ಯಾಯವಾಗಿ ರಾಜಕೀಯ ಪಕ್ಷವನ್ನು ಜನವರಿಯಲ್ಲಿ ಸ್ಥಾಪಿಸುವುದಾಗಿ ಘೋಷಿಸಿಕೊಂಡಿದ್ದರು. ಆದರೆ ಇದೀಗ ದಿಢೀರ್ ಈ ನಿರ್ಧಾರದಿಂದ ಹೊರಬಂದಿರುವ ನಟ, ತಮ್ಮ ಆರೋಗ್ಯ ಸಮಸ್ಯೆಯಿಂದಾಗಿ ಪಕ್ಷ ಸ್ಥಾಪಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    2021ರ ತಮಿಳುನಾಡು ಚುನಾವಣೆಗಾಗಿ ರಾಜಕೀಯ ಪಕ್ಷ ಕಟ್ಟಲು ಹೊರಟಿದ್ದ ತಲೈವಾ, ಕೆಲದಿನಗಳ ಹಿಂದೆ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ರ್ಟಾಜ್ ಆದ ಬೆನ್ನಲ್ಲೇ ಆರೋಗ್ಯ ಸಮಸ್ಯೆ ದೇವರ ಎಚ್ಚರಿಕೆಯಾಗಿದೆ. ಹಾಗಾಗಿ ನನ್ನನ್ನು ನಂಬುವ ಜನರನ್ನು ಬಲಿಪಶು ಮಾಡಲು ಬಯಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಇತ್ತೀಚೆಗೆ ಮೂತ್ರಪಿಂಡದ ಕಸಿ ಮಾಡಿಸಿಕೊಂಡಿದ್ದ ರಜನಿಕಾಂತ್ ಹೈದರಾಬಾದ್‍ನ ಆಸ್ಪತ್ರೆಯಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮೂರು ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಚೆನ್ನೈಗೆ ಮರಳಿದ್ದ ನಟ, ತಮ್ಮ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೆಲ ದಿನಗಳ ಹಿಂದೆ ತೀರ್ಮಾನಿಸಿದ್ದ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಅಭಿಮಾನಿಗಳಿಗೆ ತಿಳಿದಿದ್ದಾರೆ.

  • ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ಮುಂಬೈ: ಯಾವುದೇ ರಾಜಕೀಯ ಪಕ್ಷಕ್ಕೂ ರಾಮ ಸೇರಿಲ್ಲ. ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮನು ಕೇವಲ ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ ಇರಬಾರದು ಎಂದು ಕಿಡಿಕಾರಿದ್ದಾರೆ.

    ಒಂದು ವೇಳೆ ಸಂತರು ಹಾಗೂ ಸನ್ಯಾಸಿಗಳು ಒಗ್ಗೂಡಿ ಪ್ರಾಮಾಣಿಕತೆಯಿಂದ ಇರದಿದ್ದರೆ ದೇಶದಲ್ಲಿ ಏಕತೆ ಹಾಗೂ ಸಮಗ್ರತೆಯನ್ನು ಹೇಗೆ ಕಾಯ್ದುಕೊಳ್ಳಲು ಸಾಧ್ಯ? ರಾಮನ ಹೆಸರನ್ನು ಬಳಸಿಕೊಂಡು ದೇಶವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ನಾನು ಎಲ್ಲಾ ಸನ್ಯಾಸಿಗಳು ಹಾಗೂ ಸಂತರ ಬಳಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

    ಕೆಲ ಸನ್ಯಾಸಿಗಳು ಹಾಗೂ ಪ್ರಜೆಗಳು ರಾಮ ಮಂದಿರವನ್ನು ಆದಷ್ಟು ಬೇಗ ಅಯೋಧ್ಯೆಯಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದ್ರೆ ಜನವರಿ 30ರಂದು ಸನ್ಯಾಸಿಗಳು ಹಾಗೂ ಸಂತರು ಸಂಘಟಿತಗೊಂಡಾಗ ರಾಮಮಂದಿರ ನಿರ್ಮಾಣದ ಕಾರ್ಯ ಫೆಬ್ರವರಿ 21ಕ್ಕೆ ಆರಂಭವಾಗಲಿದೆ ಎಂದು ತಿಳಿಸಿದ್ದರು.

    ಜನವರಿ 29ರಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‍ಗೆ ವಿವಾದದಲ್ಲಿರುವ ಅಯೋಧ್ಯೆಯ ಜಾಗವನ್ನು ಹೊರತುಪಡಿಸಿ ಇನ್ನುಳಿದ ಸ್ಥಳವನ್ನು ರಾಮ ಮಂದಿರ ಪುನರ್ ನಿರ್ಮಿಸಲು ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ

    ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ

    ನವದೆಹಲಿ: ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಚುನಾವಣೆಗೆ ನಿಲ್ಲುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂದು ಸರ್ಕಾರೇತರ ಸಂಸ್ಥೆ ಮತ್ತು ಬಿಜೆಪಿ ನಾಯಕ ಅಶ್ವನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಕಳಂಕಿತರು ಚುನಾವಣೆಗೆ ಸ್ಪರ್ಧೆ ಮಾಡದಂತೆ ಸಮರ್ಪಕ ಕಾಯ್ದೆ ರೂಪಿಸುವಂತೆ ಮಂಗಳವಾರ ಸಂಸತ್ತಿಗೆ ಸೂಚಿಸಿದೆ.

    ಚಾರ್ಜ್ ಶೀಟ್ ಆಧರಿಸಿ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕೇಂದ್ರ ಕಾಯ್ದೆ ರೂಪಿಸುವವರೆಗೂ ಕ್ರಿಮಿನಲ್ ಹಿನ್ನೆಲೆ ಹೊಂದಿದ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ಉತ್ತಮ ಜನರಿಂದ ಆಳ್ವಿಕೆ ಪಡೆದುಕೊಳ್ಳುವುದು ನಮ್ಮ ಹಕ್ಕು. ಈ ಕುರಿತು ಕಾಯ್ದೆ ರೂಪಿಸಲು ಅದಷ್ಟು ಬೇಗ ಕಾರ್ಯಾರಂಭ ಮಾಡಿದರೆ ಒಳಿತು ಎಂದು ಸುಪ್ರೀಂ ಈಗ ಈ ಚೆಂಡನ್ನು ಸಂಸತ್ ಅಂಗಳಕ್ಕೆ ಎಸೆದಿದೆ. ಅಲ್ಲದೇ ಜನರೇ ರಾಜಕಾರಣಿಗಳ ಭವಿಷ್ಯ ನಿರ್ಧರಿಸುವವರು ಎಂದಿದೆ.

    ರಾಜಕೀಯ ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಅಲ್ಲದೇ ಅಭ್ಯರ್ಥಿಗಳು ಸಹ ತಮ್ಮ ಮೇಲಿರುವ ಕ್ರಿಮಿನಲ್ ಆರೋಪಗಳ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ವಿವರಗಳ ಕುರಿತು ವ್ಯಾಪಕ ಪ್ರಚಾರ ನೀಡಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಬಳಕೆ ಮಾಡಲು ರಾಜಕೀಯ ಪಕ್ಷಗಳಿಗೆ ಕೋರ್ಟ್ ಸೂಚನೆ ನೀಡಿದೆ.

    ಸದ್ಯ ಜಾರಿಯಲ್ಲಿರುವ ನಿಯಮಗಳ ಅನ್ವಯ ಯಾವುದೇ ವ್ಯಕ್ತಿಯ ವಿರುದ್ಧ ಆರೋಪ ಸಾಬೀತಾದರೆ ಆತನಿಗೆ 6 ವಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಆದರೆ ಅವರು ರಾಜಕೀಯ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಬಹುದಾಗಿದೆ.

    ಇದೇ ವೇಳೆ ಜನಪ್ರತಿನಿಧಿಗಳು ವಕೀಲರಾಗಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಗೆ ಕೋರ್ಟ್, ಎಲ್ಲಾ ಜನ ಪ್ರತಿನಿಧಿಗಳು ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲು ಸಾಧ್ಯವಿಲ್ಲ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಈ ನಿಷೇಧ ವಿಧಿಸಿಲ್ಲವದ್ದರಿಂದ ಜನಪ್ರತಿನಿಧಿಗಳು ತಮ್ಮ ಅಧಿಕಾರ ಅವಧಿಯಲ್ಲಿ ವಕೀಲರಾಗಿ ಮುಂದುವರಿಯಬಹುದು ಎಂದು ಸ್ಪಷ್ಟಪಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ‘ನಮ್ಮ ಕಾಂಗ್ರೆಸ್’ ಪಕ್ಷದ ಉದ್ಘಾಟನಾ ಸಮಾರಂಭಕ್ಕೆ ಜನರನ್ನು ಸೆಳೆಯಲು ಯುವತಿಯರ ಆಂಧ್ರ ಸ್ಟೈಲ್ ಡಾನ್ಸ್

    ‘ನಮ್ಮ ಕಾಂಗ್ರೆಸ್’ ಪಕ್ಷದ ಉದ್ಘಾಟನಾ ಸಮಾರಂಭಕ್ಕೆ ಜನರನ್ನು ಸೆಳೆಯಲು ಯುವತಿಯರ ಆಂಧ್ರ ಸ್ಟೈಲ್ ಡಾನ್ಸ್

    ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಇಂದು `ನಮ್ಮ ಕಾಂಗ್ರೆಸ್ ಪಕ್ಷ’ ಉದಯವಾಯಿತು. ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಚಾಲನೆ ನೀಡಿದರು.

    ಆದರೆ ಜಿಲ್ಲೆಯ ಕೂಡಲಸಂಗಮದಲ್ಲಿ ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭಕ್ಕೆ ಹೆಚ್ಚಿನ ಜನ ಬಾರದ ಕಾರಣ ಕಾರ್ಯಕ್ರಮದ ಆಯೋಜಕರು ಜನರನ್ನು ಸೆಳೆಯಲು ವೇದಿಕೆ ಮೇಲೆ ಯುವತಿಯರಿಂದ ನೃತ್ಯ ಕಾರ್ಯಕ್ರಮ ನಡೆಸಿದ್ದಾರೆ. ಈ ವೇಳೆ ಪಕ್ಷದ ಉದ್ಘಾಟನಾ ಸಮಾರಂಭ ನೋಡಲು ಬಂದ ಹಲವರು ಯುವತಿಯರ ನೃತ್ಯ ನೋಡುವ ಮೂಲಕ ಮುಜುಗರಕ್ಕೆ ಒಳಗಾಗಿದ್ದಾರೆ.

    ನಮ್ಮ ಕಾಂಗ್ರೆಸ್ ಪಕ್ಷದ ಹೊಲಿಗೆ ಯಂತ್ರದ ಚಿಹ್ನೆ ಇರುವ ಪಕ್ಷದ ಧ್ವಜವನ್ನ ಶಾಸಕ ವರ್ತೂರ್ ಪ್ರಕಾಶ್ ಅವರು ತಮ್ಮ ತಂದೆಗೆ ಹಸ್ತಾಂತರಿಸುವ ಮೂಲಕ ಪಕ್ಷದ ಲಾಂಛನವನ್ನ ಬಿಡುಗಡೆಗೊಳಿಸಿ ಪಕ್ಷವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿದರು. ಈ ವೇಳೆ ಸಮಾವೇಶಕ್ಕೆ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ವಿರೋಧ ಪಕ್ಷದ ಸ್ಥಾನ ಸಿಗದಿದ್ದಾಗ, 2008ರಲ್ಲಿ ಯಡಿಯೂರಪ್ಪ ಅವರಿಂದ 8 ಕೋಟಿ ದುಡ್ಡು ಪಡೆದು ಬಿಜೆಪಿಯೊಂದಿಗೆ ಸಹಕರಿಸಿದ್ದ ನೀವು ಬಿಜೆಪಿ ಏಜೆಂಟ್ ಎಂದು ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿ ವೇದಿಕೆ ಸಿದ್ಧಗೊಳಿಸಿ, ಯಾರು ಬಿಜೆಪಿ ಏಜೆಂಟ್ ಅಂತಾ ಸಾಬೀತು ಪಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಅಧಿಕಾರದ ಆಸೆಗಾಗಿ ನಾನು ಪಕ್ಷ ಕಟ್ಟಿಲ್ಲ, ಆದರೆ ಸಿಎಂ ಸಿದ್ದರಾಮಯ್ಯನವರು ಹೊಗಳು ಭಟ್ಟರಿಗೆ ಒಳ್ಳೆಯ ಸ್ಥಾನ ಕೊಟ್ಟಿದ್ದಾರೆ. ಯಾರು ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಅವರಿಗೆ ಒಂದು ಪಟ್ಟ ಕಟ್ಟುತ್ತಾರೆ. ಅನ್ನ ಹಾಕಿದ ಸತೀಶ್ ಜಾರಕಿಹೊಳಿ ಅವರನ್ನು ಹೊರಕಿದ್ದಾರೆ ಎಂದು ಲೇವಡಿ ಮಾಡಿದರು. ಅಲ್ಲದೇ ಸಿದ್ದರಾಮಯ್ಯ ಅವರು ತಮ್ಮ ಏಜೆಂಟ್ ರ ಮೂಲಕ ವೀರಶೈವ ಲಿಂಗಾಯತ ಸಮಾಜವನ್ನ ಒಡೆದು ಹಾಕಿದ್ದಾರೆ, ವೀರಶೈವ ಸಮಾಜವನ್ನು ಒಡೆದಂತಹ ಕೀರ್ತಿ ಸಿಎಂ ಅವರಿಗೆ ಸಲ್ಲುತ್ತೆ ಎಂದರು.

    ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ಮೂಲ ನಾಯಕರನ್ನು ಹೊರಹಾಕುವ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಗೋಮುಖ ವ್ಯಾಗ್ರಹಗಳಿದ್ದಂತೆ. ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜಕೀಯ ಮಾಡುತ್ತಿವೆ. ಈ ಪಕ್ಷಗಳು ದುಡ್ಡು ಲೂಟಿ ಹೊಡೆಯಲು ಅಧಿಕಾರಕ್ಕೆ ಬರುತ್ತಿವೆ. ನಾನು ಯಾರಿಗೂ ದುಡ್ಡು ಕೊಟ್ಟು ಸಮಾವೇಶಕ್ಕೆ ಬರ ಹೇಳಿಲ್ಲ, ಆದರೂ ಇಷ್ಟು ಜನ ಬಂದಿದ್ದರೆ ಎಲ್ಲರಿಗೂ ಧಾನ್ಯವಾದ ಎಂದು ಹೇಳಿದರು.

    https://www.youtube.com/watch?v=3i8JNu_r7pI