Tag: politics

  • ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವ್ರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಕೆಶಿ

    ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವ್ರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಕೆಶಿ

    ಬೆಂಗಳೂರು: ಸಿಎಂ ಹೇಳಿದ್ಮೇಲೆ ಇನ್ನೇನಿದೆ? ಅವ್ರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Siddaramaiah) ಹೇಳಿದ್ದಾರೆ.

    ದೆಹಲಿಯಿಂದ ಮರಳಿದ ಡಿಕೆಶಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    ಇನ್ನು ದೆಹಲಿ ಭೇಟಿ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು. ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದ್ದಾರೆ.

    ನೀವು ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗಿದ್ದಿರಿ ಎಂದು ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ದೆಹಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ನೀವು ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ ಎಂದಿದ್ದಾರೆ.

  • ಕಡೂರು ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ – ಹಾಲಿ ಶಾಸಕನ ಸಂಬಂಧಿ ವಿರುದ್ಧ ಆರೋಪ

    ಕಡೂರು ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ – ಹಾಲಿ ಶಾಸಕನ ಸಂಬಂಧಿ ವಿರುದ್ಧ ಆರೋಪ

    ಚಿಕ್ಕಮಗಳೂರು: ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಐವರು ಯುವಕರು ನಡು ರಸ್ತೆಯಲ್ಲಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಕಡೂರಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಬೆಳ್ಳಿ ಪ್ರಕಾಶ್ ಅಳಿಯ ಸಂದೇಶ್ ಬೆಂಗಳೂರಿನಿಂದ ಹಿಂದಿರುಗುವಾಗ ರಸ್ತೆಯಲ್ಲಿ ಸೈಡ್ ಬಿಡುವ ವಿಚಾರಕ್ಕೆ ಗಲಾಟೆ ನಡೆದಿದೆ, ಈ ವೇಳೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಇದನ್ನೂ ಓದಿ: ವಿದೇಶದಲ್ಲಿ ಕುಳಿತು ಬೆಂಗಳೂರಲ್ಲಿ ಸೈಬರ್ ವಂಚನೆ – ಹ್ಯಾಕರ್ಸ್‌ ಲಿಂಕ್‌ನಲ್ಲಿದ್ದ ಬೆಳಗಾವಿ ಮೂಲದ ಆರೋಪಿ ಅರೆಸ್ಟ್‌

    ಹಲ್ಲೆ ಮಾಡಿದವರು ಕಡೂರು ಶಾಸಕ ಕೆ.ಎಸ್.ಆನಂದ್ ಅವರ ಸಂಬಂಧಿಗಳು ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಬೆಳ್ಳೆ ಪ್ರಕಾಶ್ 500 ಜನಕ್ಕಿಂತ ಹೆಚ್ಚಿನ ಕಾರ್ಯಕರ್ತರ ಜೊತೆ ಮಧ್ಯರಾತ್ರಿಯೇ ಪೊಲೀಸ್‌ ಠಾಣೆಯ ಮೂಮದೆ ಪ್ರತಿಭಟನೆ ನಡೆಸಿದ್ದಾರೆ.

    ಹಲ್ಲೆ ನಡೆಸಿದ ಸಂತೋಷ್ ಸೇರಿ ಐವರ ವಿರುದ್ಧ ಕಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತನೊಂದಿಗೆ ಸಲುಗೆ ಕಂಡು 4 ಮಕ್ಕಳ ತಾಯಿಯ ಹತ್ಯೆ – ಕೊಂದು ಅದೇ ಗೆಳೆಯನ ಜೊತೆ ಎಸ್ಕೇಪ್ ಆಗಿದ್ದ ಲವ್ವರ್‌ ಅರೆಸ್ಟ್

  • ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ

    ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ

    ರಾಮನಗರ: ಭವಿಷ್ಯ ನುಡಿಯಲು ಅವರು ಯಾರು? ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದ್ದಾರೆ.

    ಮುಂದಿನ ಚುನಾವಣೆಯಲ್ಲಿ ಜೆಡಿಎಸ್ (JDS) 8 ರಿಂದ 9ನೇ ಸ್ಥಾನಕ್ಕೆ ಇಳಿಯಲಿದೆ ಎಂಬ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ಹೇಳಲು ಅವರೇನು ಜ್ಯೋತಿಷ್ಯೀನಾ? ಅವರು ಭವಿಷ್ಯ ನುಡಿಯಲಿ. ಸಮಯ ಬಂದಾಗ ಮಾತನಾಡುತ್ತೇವೆ ಎಂದು ಟಾಂಗ್ ನೀಡಿದರು.

    ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ. ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್‌ ವ್ಯಾಲ್ಯೂ ಮೇಲೆ ದರ ನಿಗದಿ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.  ಇದನ್ನೂ ಓದಿ:  ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

    ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡುತ್ತವೆ. ಅದಕ್ಕೆ 100 ದಿನ ಟೈಂ ಲೈನ್ ನಿಗದಿ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್‌ಆರ್‌ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗಲಿದೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್‌ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

    ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ನೀಡಿದ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನು ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:  ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದೆ ನನ್ನ ಗುರಿ, ನನಗೆ ಅಧಿಕಾರ ಬೇಕಿಲ್ಲ: ನಿಖಿಲ್

    ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡುತ್ತೇವೆ ಎಂದು ಹೇಳಿ ಏನೂ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10 ಕೋಟಿ ರೂ. ಅನುದಾನವೂ ಸಿಕ್ಕಿಲ್ಲ. ಬಿಜೆಪಿ-ಜೆಡಿಎಸ್ (BJP-JDS) ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.

    ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

  • ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದೆ ನನ್ನ ಗುರಿ, ನನಗೆ ಅಧಿಕಾರ ಬೇಕಿಲ್ಲ: ನಿಖಿಲ್

    ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದೆ ನನ್ನ ಗುರಿ, ನನಗೆ ಅಧಿಕಾರ ಬೇಕಿಲ್ಲ: ನಿಖಿಲ್

    ರಾಮನಗರ: ಕುಮಾರಸ್ವಾಮಿ (HD Kumaraswamy) ಅವರನ್ನು ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ (Channapatna) ಇಂದು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬೇಸರ ಹೊರಹಾಕಿದರು. ಸೊಸೈಟಿ ಚುನಾವಣೆ ಹಿನ್ನೆಲೆ ಬಣ ರಾಜಕೀಯ ಮಾಡ್ತಿದ್ದ ಕಾರ್ಯಕರ್ತರನ್ನ ತರಾಟೆಗೆ ತೆಗೆದುಕೊಂಡ ನಿಖಿಲ್, ಶಿಸ್ತಿನ ಪಾಠ ಮಾಡಿದರು. ಇದನ್ನೂ ಓದಿ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ

    ಸ್ಥಳೀಯ ಮುಖಂಡರ ಒತ್ತಡಕ್ಕೆ ಮಣಿದು ನಾನು ಚುನಾವಣೆಗೆ ಬಂದೆ. ನಾನು ಹೇಡಿ ಅಲ್ಲ, ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ, ಆದರೆ ಅವತ್ತು ಕಣ್ಣೀರು ಹಾಕಿದೆ. ಈಗ ಸೊಸೈಟಿ ಚುನಾವಣೆ ಬಗ್ಗೆ ಪ್ರಶ್ನೆ ಮಾಡ್ತಿದ್ದೀರಲ್ಲಾ. ಜಿಲ್ಲೆಯ ಜನ ನನಗೆ ಅಧಿಕಾರ ಕೊಟ್ಟಿದ್ದೀರಾ? ನನಗೆ ಒಂದು ಬಾರಿಯಾದ್ರೂ ಆಶೀರ್ವಾದ ಮಾಡಿದ್ದೀರಾ? ಕುಮಾರಣ್ಣ 1,200 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ರು. ಆದರೆ ಇಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಬೆಲೆ ಇಲ್ಲ ಎಂದು ಬೇಸರಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಜಿಲ್ಲೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ, ಇದು ಶಾಶ್ವತ ಅಲ್ಲ. ಜನ ಮನಸ್ಸು ಮಾಡಿದ್ರೆ ಬದಲಾವಣೆ ಆಗೇ ಆಗುತ್ತೆ. ಇಲ್ಲಿ ನಡೆಯುವ ವಿಚಾರ ಇಡೀ ರಾಜ್ಯಕ್ಕೆ ಹೋಗುತ್ತೆ. ಇಲ್ಲಿ ಬೀದಿಬೀದಿಯಲ್ಲಿ ಚರ್ಚೆ ಮಾಡಿದ್ರೆ ಪಕ್ಷದ ಗೌರವ ಏನಾಗುತ್ತೆ? ಏನೇ ಸಮಸ್ಯೆ ಇದ್ರೂ ಪಕ್ಷದ ಚೌಕಟ್ಟಿನ ಒಳಗೆ ಚರ್ಚೆ ಮಾಡಿ. ಅಧಿಕಾರ ಇದ್ದಾಗ ಸಭೆಗೆ ಎಷ್ಟು ಜನ ಸೇರುತ್ತಿದ್ದರು. ಈಗ ಎಷ್ಟು ಜನ ಬಂದಿದ್ದಾರೆ ಎಂದರು. ಇದನ್ನೂ ಓದಿ: ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಅಲ್ಲದೇ ಚುನಾವಣೆ ಇನ್ನು ಎರಡೇ ವರ್ಷ ಇರೋದು. ಈಗ ಸೊಸೈಟಿ ಚುನಾವಣೆ ಬಗ್ಗೆ ಚರ್ಚೆ ಮಾಡಿಕೊಂಡು ಕೂತುಕೊಳ್ಳೊದು ಬೇಡ. ತಾಲೂಕಿನಲ್ಲಿ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಸಹಕಾರ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿ ಗೆದ್ದಿದೆ. ಮುಂದೆ ಅಧಿಕಾರ ಹೇಗೆ ಮಾಡಬೇಕು ಅಂತ ಕಾಂಗ್ರೆಸ್‌ನವರು ತೋರಿಸಿಕೊಟ್ಟಿದ್ದಾರೆ. ಮುಂದೆ ನಾವೂ ಇದನ್ನೇ ಅನುಸರಿಸುತ್ತೇವೆ. ನಾನು ಕೆಲಸ ಮಾಡುತ್ತಿರೋದು ಈ ಪಕ್ಷಕ್ಕೋಸ್ಕರ. ಮುಂದೆ ಚುನಾವಣೆಗೆ ಎಷ್ಟು ಸೀಟ್ ತರಬೇಕು ಅನ್ನೋದು ಡೆಲ್ಲಿಯಲ್ಲಿ ತೀರ್ಮಾನ ಆಗುತ್ತದೆ. ಕುಮಾರಣ್ಣನ ಸಿಎಂ ಕುರ್ಚಿಯಲ್ಲಿ ಕೂತ ದಿನ ನಾನು ಅಧಿಕಾರ ತೆಗೆದುಕೊಳ್ಳಲ್ಲ. ಕಾರ್ಯಕರ್ತರು, ಮುಖಂಡರಿಗೆ ಅಧಿಕಾರ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!

  • ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ

    ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ

    – ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ

    ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶ ಸಿಕ್ಕಿದೆ. ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ. ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ, ಅವಕಾಶದ ವಿಚಾರದಲ್ಲಿ ನಾನು ಸಂತೃಪ್ತನಾಗಿದ್ದೇನೆ ಎಂದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ರಚನೆಯ ಸಂದರ್ಭದಲ್ಲೇ ಬೇರೆಯವರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿತ್ತು. ಸಚಿವ ಸ್ಥಾನ ಸ್ವೀಕರಿಸುವುದಕ್ಕೂ ಮೊದಲೇ ಗಮನಕ್ಕೆ ತಂದು ಸಂಪುಟ ರಚಿಸಲಾಗಿತ್ತು. ಈ ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕು ಎಂಬ ನಿರ್ಧಾರ ಆಗಿತ್ತು. ಸಂಪುಟಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಆದರೆ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಚಿವ ಸಂಪುಟ ಪುನರ್ ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಪ್ರತಿ ಇಲಾಖೆಯೂ ರೇಡ್‌ ಕಾರ್ಡ್‌ ಫಿಕ್ಸ್‌ ಮಾಡಿದೆ: ಮೋಹನ್ ದಾಸ್ ಪೈ

    ಬಿಜೆಪಿಯವರಿಗೆ (BJP) ದ್ರಾಕ್ಷಿ ಗೊಂಚಲು ಹುಳಿ ಅನ್ನುವ ರೀತಿ ಆಗಿದೆ. ರಾಜಕೀಯ ಮಾತನಾಡಿ ಬೇಳೆ ಬೇಯಿಸಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಅಧಿಕಾರ ಇಲ್ಲ, ನೀರಿನಿಂದ ಹೊರಬಿದ್ದ ಮೀನಿನಂತೆ ಒದ್ದಾಡುತ್ತಿದ್ದಾರೆ. ಅವರು ಇರೋದೆ ಸರ್ಕಾರದ ವಿರುದ್ಧ ಮಾತನಾಡಲು. ಬಿಜೆಪಿಗರಿಗೆ ಅಧಿಕಾರದ ಹಪಾಹಪಿ ಇದೆ. ಅಧಿಕಾರ ಬಿಟ್ರೆ ಬೇರೆ ಏನು ಜ್ಞಾನ ಇಲ್ಲ, ಅಧಿಕಾರ ಇಲ್ಲದೆ ಚಡಿಪಡಿಸುತ್ತಿದ್ದಾರೆ. ನಾವು ಜವಾಬ್ದಾರಿ ಸ್ಥಾನದಲ್ಲಿದ್ದೇವೆ, ಕೆಲಸ ಮಾಡುತ್ತಿದ್ದೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿಗೆ

    ಕಾಂಗ್ರೆಸ್‌ನ ಒಬ್ಬೊಬ್ಬ ನಾಯಕರು ಒಂದೊಂದು ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವ, ಯಾರು ಯಾವ ಅಭಿಪ್ರಾಯವನ್ನ ಬೇಕಾದರೂ ವ್ಯಕ್ತಪಡಿಸಬಹುದು. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯ ಇರುತ್ತದೆ. ಐದು ಬೆರಳು ಸಮನಾಗಿರಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತೆ, ಅವರೇ ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ಆರೋಪಿ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದು ನಿಜ – ಸತ್ಯ ಒಪ್ಪಿಕೊಂಡ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್

    ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಇಂತಹ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ. ಸಿಎಂ ಜವಾಬ್ದಾರಿ ಹಾಗೂ ಕೆಲಸ ಕೊಟ್ಟಿದ್ದಾರೆ. ರಾಜಕೀಯ ಅಭಿಪ್ರಾಯ ಮಾತನಾಡಲು ಪಕ್ಷದ ಚೌಕಟ್ಟು ಇದೆ. ಹೈಕಮಾಂಡ್ ಇದೆ, ಅಲ್ಲಿ ಏನು ಹೇಳಬೇಕು ಹೇಳುತ್ತೇನೆ. ಹೈಕಮಾಂಡ್ ಕಾಲಕಾಲಕ್ಕೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್

    ನಾವು ವೋಟ್ ಚೋರಿ ಅಭಿಯಾನ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವದ ಜೀವಾಳವೇ ಚುನಾವಣೆ. ಇದನ್ನ ಹಾಳು ಮಾಡುವ ಪ್ರಯತ್ನ ನಡೆದಿದೆ. ಇಡಿ, ಐಟಿ, ಸಿಬಿಐ ಸಂಸ್ಥೆಗಳು ರಾಜಕೀಯವಾಗಿ ಬಳಕೆಯಾಗುತ್ತಿವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಳು ನಾಯಿಗಳ ರೀತಿಯಲ್ಲಿ ಸಂವಿಧಾನದ ಸಂಸ್ಥೆಗಳ ಬಳಕೆಯಾಗಿದೆ. ಚುನಾವಣಾ ಆಯೋಗವೇ ಪಕ್ಷಪಾತವಾಗಿ ಚುನಾವಣೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಮತಪಟ್ಟಿಯಲ್ಲಿ ವ್ಯತ್ಯಾಸ ಆಗಿದೆ. ನಮ್ಮ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಬೆಳಕಿಗೆ ಬಂದಿದೆ. ಮಹದೇವಪುರ, ಆಳಂದದಲ್ಲಿ ಮತಗಳವು ಆಗಿದೆ, ಇದು ಕೂಡಲೇ ನಿಲ್ಲಬೇಕು. ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡಬೇಕು. ಈ ಬಗ್ಗೆ ನಾವು ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವ ಉಳಿಸಬೇಕು ಅಂದ್ರೆ ಚುನಾವಣೆ ಪಾವಿತ್ರ‍್ಯತೆ ಕಾಪಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್‌ಮೇಲ್‌ ಆರೋಪ; ಕಿರುತೆರೆ ನಟಿ ವಿರುದ್ಧ FIR

  • ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿಕೆಶಿ ಪರೋಕ್ಷ ಗುನ್ನಾ

    ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿಕೆಶಿ ಪರೋಕ್ಷ ಗುನ್ನಾ

    ಬೆಂಗಳೂರು: ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಉತ್ತರಿಸಿದರು.

    ನಾನು ಶಿಸ್ತಿನ ಜೊತೆ ನಿಲ್ಲುತ್ತೇನೆ. ಶಿಸ್ತು ನನ್ನ ಪಕ್ಷದ ಆದ್ಯತೆ ಎಂದು ಹೇಳುವ ಪರೋಕ್ಷವಾಗಿ ಯತೀಂದ್ರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ ಶಾಸಕರ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.

    ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಡಿಕೆ ಶಿವಕುಮಾರ್‌ ಜಾಣ ನಡೆ ತೋರಿಸುತ್ತಿದ್ದಾರೆ. ಒಂದು ವೇಳೆ ಯತೀಂದ್ರ ಹೇಳಿಕೆಗೆ ಖಡಕ್‌ ಆಗಿ ಪ್ರತಿಕ್ರಿಯಿಸಿದರೆ ಮತ್ತೆ ಅದು ದೊಡ್ಡ ಮಟ್ಟದ ಸುದ್ದಿಯಾಗಲಿದೆ ಎನ್ನುವುದನ್ನು ಅರಿತಿರುವ ಡಿಕೆಶಿ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದಷ್ಟೇ ಹೇಳಿದ್ದಾರೆ.  ಇದನ್ನೂ ಓದಿ:  ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ ರಾಹುಲ್‌ ಗಾಂಧಿ

    ಹೈಕಮಾಂಡ್‌ಗೆ ವರದಿ ಸಲ್ಲಿಕೆ:
    ಬೆಳಗಾವಿಯಲ್ಲಿ ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಯತೀಂದ್ರ ಭಾಷಣದ ವಿಡಿಯೋಗೆ ಸಂಬಂಧಿಸಿದಂತೆ ಹೈಕಮಾಂಡ್‌ಗೆ ಕೆಪಿಸಿಸಿಯಿಂದ ವರದಿ ಸಲ್ಲಿಕೆಯಾಗಿದೆ.

    ಯತೀಂದ್ರ ಸಿದ್ದರಾಮಯ್ಯ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಉಳಿದ ನಾಯಕರಂತೆ ಯತೀಂದ್ರ ಹೇಳಿಕೆಗಳಿಗೂ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಬಗ್ಗೆ ಹೈ ಕಮಾಂಡ್ ಗೆ ವಿಸ್ತೃತ ವರದಿ ರವಾನೆಯಾಗಿದೆ.

  • ಆರ್‌ಎಸ್‌ಎಸ್‌ಗೆ ಕಡಿವಾಣ | ಹೊಸ ಬಿಲ್‌ಗೆ ಸರ್ಕಾರದಿಂದ ರೆಡ್‌ ಸಿಗ್ನಲ್‌

    ಆರ್‌ಎಸ್‌ಎಸ್‌ಗೆ ಕಡಿವಾಣ | ಹೊಸ ಬಿಲ್‌ಗೆ ಸರ್ಕಾರದಿಂದ ರೆಡ್‌ ಸಿಗ್ನಲ್‌

    ಬೆಂಗಳೂರು: ಆರ್‌ಎಸ್‌ಎಸ್‌ (RSS) ಚಟುವಟಿಕೆಗಳ ನಿಯಂತ್ರಣಕ್ಕೆ ಮುಂದಾಗಿದ್ದ ಸರ್ಕಾರ ಈಗ ಇಟ್ಟ ಹೆಜ್ಜೆಯಿಂದ ಹಿಂದಕ್ಕೆ ಸರಿದಿದೆ. ಹೊಸ ಬಿಲ್‌ಗೆ ಸರ್ಕಾರ ರೆಡ್ ಸಿಗ್ನಲ್ ನೀಡಿದೆ.

    ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರಕ್ಕೆ ಸಂಬಂಧಿಸಿದಂತೆ ಈಗ ನಾವು ಆದೇಶ ಪ್ರಕಟಿಸಿದ್ದೇವೆ. ಹೊಸ ಮಸೂದೆಯನ್ನು ಮಂಡನೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಹೊಸ ಮಸೂದೆ ಸಿಎಂ, ಡಿಸಿಎಂ ಸೇರಿದಂತೆ ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದು ಬಂದಿದೆ.

    ಏನು ಚರ್ಚೆ ನಡೆದಿದೆ?
    ಕಳೆದ ವಾರದ ಕ್ಯಾಬಿನೆಟ್‌ ಸಭೆಯಲ್ಲಿ ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಯಂತ್ರಿಸುವಂತೆ ಪ್ರಿಯಾಂಕ್‌ ಖರ್ಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

    ಈ ವೇಳೆ ಸರ್ಕಾರಿ ಆದೇಶ ಹೊರಡಿಸಿದರೆ ಸಾಕು. ಸುಮ್ಮನೇ ಈ ವಿಚಾರವನ್ನು ಎಳೆದಾಡುವ ಅಗತ್ಯವಿಲ್ಲ. ಸದ್ಯಕ್ಕೆ ಯಾವ ಮಸೂದೆ ಬೇಡ. ನಾವು ಈಗ ಕ್ರಮ ಕೈಗೊಂಡರೆ ಆರ್‌ಎಸ್‌ಎಸ್‌ಗೆ ಸುಮ್ಮನೇ ಪ್ರಚಾರ ನೀಡಿದಂತೆ ಆಗುತ್ತದೆ ಎಂದು ಪ್ರಿಯಾಂಕ್ ಖರ್ಗೆಗೆ ಸಿಎಂ, ಡಿಸಿಎಂ ಸೇರಿ ಹಲವು ಹಿರಿಯ ಸಚಿವರು ಕಿವಿಮಾತು ಹೇಳಿದ್ದಾರೆ.  ಇದನ್ನೂ ಓದಿ:  ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ – ಹಿಂದೂ ಹುಡುಗಿಗೆ ವಂಚಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್

     

    ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಅಂಡ್ ಪ್ರಾಪರ್ಟೀಸ್ ಬಿಲ್ – 2025ರ ಕರಡು ರೆಡಿಯಾಗಿದ್ದರೂ ಈ ಮಸೂದೆಯನ್ನು ಮಂಡನೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಮ್ಮ ರಾಜಕೀಯ ಜಗಳ ಬೇರೆ, ಸಿದ್ಧಾಂತದ ಜಗಳ ಎರಡೂ ಬೇರೆ ಬೇರೆ. ಮಸೂದೆ ಮಂಡನೆ ಮಾಡಲೇಬೇಕಾದರೆ ಅದು ನಿಮ್ಮಿಷ್ಟ ಎಂದು ಡಿಸಿಎಂ ತಿಳಿಸಿದರು.

    ಈ ಬಿಲ್‌ ಜಾರಿಯಾದರೆ ಆರ್‌ಎಸ್‌ಎಸ್‌ಗೆ ಮಾತ್ರವಲ್ಲ, ಎಲ್ಲದಕ್ಕೂ ಎಲ್ಲರಿಗೂ ಅನ್ವಯ ಆಗುತ್ತದೆ. ಇದರಿಂದ ಮತ್ತಷ್ಟು ಸಂಕಷ್ಟ ಎದುರಾಗುತ್ತದೆ. ಹೀಗಾಗಿ ಈ ಬಿಲ್‌ ಮಂಡನೆ ಮಾಡುವುದು ಬೇಡ ಎಂದು ಹಿರಿಯ ಸಚಿವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕ್ಯಾಬಿನೆಟ್ ಚರ್ಚೆಯ ಅಭಿಪ್ರಾಯವನ್ನೇ ಮುಂದಿಟ್ಟುಕೊಂಡು ಸರ್ಕಾರ ಈಗ ಮಸೂದೆಯನ್ನು ತಿರಸ್ಕರಿಸಿದೆ ಎಂಬ ವಿಚಾರವನ್ನು ಮೂಲಗಳು ತಿಳಿಸಿವೆ.

    ಗೊಂದಲ ಇರುವ ಜಿಲ್ಲೆ, ಜಾಗಗಳಲ್ಲಿ ಮಾತ್ರ ಕಠಿಣ ನಿಯಮ ಜಾರಿ ಮಾಡಿ ಅಳೆದು ತೂಗಿ ಅನುಮತಿ ನೀಡಬೇಕು. ಉಳಿದ ಕಡೆ ಸ್ಥಳೀಯ ಪರಿಸ್ಥಿತಿ ನೋಡಿ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.

    ಮಸೂದೆಯಲ್ಲಿ ಏನಿತ್ತು?
    – ಯಾವುದೇ ಧಾರ್ಮಿಕ, ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು.
    – ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ
    – ನಿಯಮ ಮೀರಿ ಚಟುವಟಿಕೆ ನಡೆಸಿದರೆ ಎರಡು ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ
    – ಎರಡನೇ ಬಾರಿ ನಿಯಮ ಮೀರಿದ್ರೆ ಮೂರು ವರ್ಷ ಜೈಲು ಶಿಕ್ಷೆ 1 ಲಕ್ಷ ರೂ. ದಂಡ
    – ಇದಕ್ಕೂ ಮೀರಿ ಮುಂದುವರೆದರೆ ಪ್ರತೀ ದಿನ 5,000 ದಂಡ ವಿಧಿಸುವ ನಿಯಮ

  • ದೀಪಾವಳಿ ಹಬ್ಬ | ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌!

    ದೀಪಾವಳಿ ಹಬ್ಬ | ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌!

    ಬೆಂಗಳೂರು: ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ (Cabinet Reshuffle) ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ (Deepavali) ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಿವಾಸದ ಮುಂದೆ ಶಾಸಕರ ಪರೇಡ್‌ ಆರಂಭವಾಗಿದೆ.

    ಹಬ್ಬದ ಶುಭ ಕೋರಲು ಶಾಸಕರು ಪೈಪೋಟಿ ನಡೆಸುತ್ತಿದ್ದು ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್‌ ಮಾಡುವ ಅನಿವಾರ್ಯತೆಗೆ ಸಿಕ್ಕಿದ್ದಾರೆ. ಇಬ್ಬರ ನಿವಾಸಕ್ಕೂ ಭೇಟಿ ನೀಡಿ ಹಬ್ಬದ ಶುಭಾಶಯ ಹೇಳಿ ಇಬ್ಬರ ಬಳಿಯೂ ಪರೋಕ್ಷವಾಗಿ ಸಂಪುಟ ವಿಸ್ತರಣೆ/ ಪುನಾರಚನೆಯ ಪ್ರಸ್ತಾಪ ಇಡುತ್ತಿದ್ದಾರೆ.

    ಪ್ರಸ್ತಾಪ ಇಡುವುದರ ಜೊತೆಗೂ ತಮಗೂ ಕ್ಯಾಬಿನೆಟ್‌ನಲ್ಲಿ ಅವಕಾಶ ನೀಡುವಂತೆ ಕೇಳುತ್ತಿದ್ದಾರೆ. ಹೊಸ ಹುದ್ದೆಯ ನಿರೀಕ್ಷೆಯಲ್ಲಿ ಶಾಸಕರ ತೆರಮರೆಯ ಪೈಪೋಟಿ ಜೋರಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ:  ಕಾಂಗ್ರೆಸ್‌ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ

    ಸಿಎಂ ಸಿದ್ದರಾಮಯ್ಯ ಸಚಿವರಿಗೆ ಆಯೋಜಿಸಿದ ಡಿನ್ನರ್‌ ಸಭೆಯಲ್ಲಿ ಸಂಪುಟ ಪುನಾರಚನೆಯ ಸುಳಿವು ನೀಡಿದ್ದರು ಎನ್ನಲಾಗುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯ ನಂತರ ಡಿಸೆಂಬರ್‌ನಲ್ಲಿ ಸಂಪುಟ ಪುನನಾಚನೆ ನಡೆದರೆ, ಸಂಪುಟದಿಂದ ಕೈಬಿಟ್ಟರೆ, ಪಕ್ಷದಲ್ಲಿ ಪರ್ಯಾಯ ಹುದ್ದೆಗಳೊಂದಿಗೆ ಅವರಿಗೆ ಗೌರವಯುತವಾಗಿ ಬೀಳ್ಕೊಡುಗೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದರು.

    ಪಕ್ಷದ ಹೈಕಮಾಂಡ್ ಪ್ರಸ್ತುತ ಬಿಹಾರ ಚುನಾವಣೆಗಳಲ್ಲಿ ನಿರತವಾಗಿದೆ. ಹೈಕಮಾಂಡ್ ಅನುಮೋದಿಸಿದರೆ, ಆಡಳಿತಕ್ಕೆ ಶಕ್ತಿ ತುಂಬಲು 12-15 ಸಚಿವರನ್ನು ಹೊಸ ಮುಖಗಳೊಂದಿಗೆ ಬದಲಾಯಿಸುವ ಸಾಧ್ಯತೆಯಿದೆ.

  • ಆರ್‌ಎಸ್‌ಎಸ್‌ ವಿರುದ್ಧದ ಸಂಘರ್ಷದಲ್ಲಿ ಪ್ರಿಯಾಂಕ್‌ ಒಂಟಿ – ಕಾಂಗ್ರೆಸ್‌ನಲ್ಲೇ ಅಪಸ್ವರ!

    ಆರ್‌ಎಸ್‌ಎಸ್‌ ವಿರುದ್ಧದ ಸಂಘರ್ಷದಲ್ಲಿ ಪ್ರಿಯಾಂಕ್‌ ಒಂಟಿ – ಕಾಂಗ್ರೆಸ್‌ನಲ್ಲೇ ಅಪಸ್ವರ!

    ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನಡೆದ ಆರ್‌ಎಸ್‌ಎಸ್‌ (RSS) ವಿರುದ್ಧದ ಸಂಘರ್ಷ ಕಾಂಗ್ರೆಸ್‌ನಲ್ಲಿ (Congress) ಆಂತರಿಕ ಸಂಘರ್ಷ ಹುಟ್ಟು ಹಾಕಿತಾ ಎಂಬ ಪ್ರಶ್ನೆ ಈಗ ಎದ್ದಿದೆ.

    ಹೌದು. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಲಿ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಪ್ರತಿನಿಧಿಸುವ ಚಿತ್ತಾಪುರದ ಕ್ಷೇತ್ರದಲ್ಲಿ ಭಾನುವಾರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ಆದರೆ ಭಾನುವಾರ ರಾಜ್ಯದ ಹಲವಾರು ಜಿಲ್ಲೆಗಳ ನಗರಗಳಲ್ಲಿ ಯಾವುದೇ ವಿರೋಧ ಇಲ್ಲದೇ ಆರ್‌ಎಸ್‌ಎಸ್‌ ಪಥಸಂಚಲನ ನಡೆದಿದೆ.

    ಪ್ರಿಯಾಂಕ್‌ ಅವರ ನಿರ್ಧಾರ ಬೇರೆ ನಮ್ಮ ನಿರ್ಧಾರ ಬೇರೆ ಎಂಬಂತೆ ಉಳಿದ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ನಾಯಕರಿಂದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಇದನ್ನೂ ಓದಿ:  ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

    ಸರ್ಕಾರಿ ಜಾಗಗಳಲ್ಲಿ ಆರ್‌ಎಸ್ಎಸ್‌ ಚಟುವಟಿಕೆ ನಿಷೇಧಿಸಬೇಕೆಂಬ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಹಿರಿಯ ಸಚಿವರು ಸಿಎಂ ಸಿದ್ದರಾಮಯ್ಯ ಬಳಿ ಕಳೆದ ವಾರದ ಡಿನ್ನರ್‌ ಸಭೆಯ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

    ಆರ್‌ಎಸ್‌ಎಸ್‌ಗೆ ನಾವು ನಿರ್ಬಂಧ ಹೇರಿದರೆ ಉಳಿದ ಧರ್ಮ, ಸಂಘಟನೆಗಳ ಕಾರ್ಯಕ್ರಮಗಳು ನಡೆಸಿದಾಗ ಅವುಗಳಿಗೆ ಹೇಗೆ ಅನುಮತಿ ನೀಡಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಇದರಿಂದ ಸರ್ಕಾರಿ ಅಧಿಕಾರಿಗಳಿಗೂ ದೊಡ್ಡ ತಲೆನೋವಾಗಲಿದೆ. ಕೋರ್ಟ್‌ಗಳಿಗೆ ಹೋದರೆ ಅದಕ್ಕೆ ಮತ್ತಷ್ಟು ಪ್ರಚಾರ ಸಿಗುತ್ತದೆ. ವಿವಾದವಾದರೆ ಮತ್ತೆ ಜಾಸ್ತಿ ಪ್ರಮಾಣದಲ್ಲಿ ಪೊಲೀಸ್‌ ಭದ್ರತೆ ನೀಡಬೇಕು. ಹೀಗಾಗಿ ಇಲ್ಲಿಯವರೆಗೆ ಹೇಗೆ ನಡೆದಿದಿಯೋ ಅದೇ ರೀತಿ ನಡೆಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕೆ ಬಹುತೇಕ ಸಚಿವರು ಸೈಲೆಂಟ್‌ ಆಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:  ಚಿತ್ತಾಪುರ ಆಯ್ತು ಈಗ ಸೇಡಂ – ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಬ್ರೇಕ್‌

    ಅದರಲ್ಲೂ ಮಾಜಿ ಸಚಿವ ಕೆಎನ್‌ ರಾಜಣ್ಣ ಅವರು ಬಹಿರಂಗವಾಗಿಯೇ ಸರ್ಕಾರ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವಾಗ ರಸ್ತೆಯಲ್ಲೇ ನಮಾಜ್ ಮಾಡುತ್ತಾರೆ. ಹಾಗಾದರೆ ಅವರೆಲ್ಲ ಅನುಮತಿ ಪಡೆದು ನಮಾಜ್ ಮಾಡುತ್ತಾರಾ ಎಂದು ರಾಜಣ್ಣ ಪ್ರಶ್ನೆ ಮಾಡಿದ್ದಾರೆ.

    ಸರ್ಕಾರಗಳು ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

    ಎಲ್ಲಾ ಬೆಳವಣಿಗೆ ನೋಡುವಾಗ ಬೇರೆ ಸಚಿವರಿಂದ ಬೆಂಬಲ ವ್ಯಕ್ತವಾಗದ ಕಾರಣ ಆರ್‌ಎಸ್‌ಎಸ್‌ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿ ಪ್ರಿಯಾಂಕ್‌ ಖರ್ಗೆ ಏಕಾಂಗಿಯಾದ್ರಾ ಎಂಬ ಪ್ರಶ್ನೆ ಎದ್ದಿದೆ.

    ಈ ಹಿಂದೆ  2023 ರಲ್ಲಿ ತಮಿಳುನಾಡು ಸರ್ಕಾರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ  ಅನುಮತಿ ನೀಡಿರಲಿಲ್ಲ. ಕೊನೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿತ್ತು. ಸುಪ್ರೀಂ ಕೋರ್ಟ್‌ ಅನುಮತಿ ನೀಡಿದ ಬಳಿಕ ಆರ್‌ಎಸ್‌ಎಸ್‌ ಕಾರ್ಯಕರ್ತರು ಬಹಳ ವಿಜೃಂಭಣೆಯಿಂದ ಪಥ ಸಂಚಲನ ನಡೆಸುವ ಮೂಲಕ ತಮಿಳುನಾಡು ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

  • 20ಕ್ಕೂ ಹೆಚ್ಚು ಸರ್ಕಾರಿ ನೌಕರರ ಆತ್ಮಹತ್ಯೆ, ಸಿಎಂ ಮಾನವೀಯತೆ ಸತ್ತಂತೆ ಇದ್ದಾರೆ: ಸಿ.ಟಿ ರವಿ

    20ಕ್ಕೂ ಹೆಚ್ಚು ಸರ್ಕಾರಿ ನೌಕರರ ಆತ್ಮಹತ್ಯೆ, ಸಿಎಂ ಮಾನವೀಯತೆ ಸತ್ತಂತೆ ಇದ್ದಾರೆ: ಸಿ.ಟಿ ರವಿ

    – ಇದಕ್ಕೆ ಸಿದ್ದರಾಮಯ್ಯನವರ ರಾಜೀನಾಮೆಯೇ ಪ್ರಾಯಶ್ಚಿತ್ತ

    ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಅವಧಿಯಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರು ಸರ್ಕಾರದ ಕಾರಣ ಮುಂದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಮಾತ್ರ ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ, ಹೃದಯವಿದ್ದು ಮಾನವೀಯತೆ ಸತ್ತಂತೆ ಇದ್ದಾರೆ ಎಂದು ಎಮ್‍ಎಲ್‍ಸಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಚಿವರು, ಶಾಸಕರು, ಸಿಬ್ಬಂದಿ, ಸರ್ಕಾರದ ಬೇಜವಾಬ್ದಾರಿ, ಸಂಬಳ ನೀಡದೇ ಇರುವುದರ ಕಾರಣ ನೀಡಿ ಡೆತ್ ನೋಟ್ ಬರೆದಿಟ್ಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ಹೃದಯ ಇದೆಯೋ? ಇಲ್ವೋ ಗೊತ್ತಿಲ್ಲ, ಮಾನವೀಯತೆ ಸತ್ತಿರೋದು ಗೊತ್ತಾಗ್ತಿದೆ. ಇದು ಸರ್ಕಾರದ ಪ್ರಾಯೋಜಿತ ಕೊಲೆ, ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಸರ್ಕಾರದ ಭಕ್ಷಣೆಯ ದಾಹಕ್ಕೆ ಸರ್ಕಾರಿ ನೌಕರರು ಬಲಿಯಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ನಕ್ಸಲರು ಇಷ್ಟ ಆಗ್ತಾರೆ, ದೇಶಭಕ್ತರನ್ನು ಕಂಡ್ರೆ ಅಸಹನೆ: ಸಿ.ಟಿ ರವಿ

    ಈ ಸಾವಿಗೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯೇ ಪ್ರಾಯಶ್ಚಿತ್ತ. ಆದರೆ ಸರ್ಕಾರ ಹೃದಯಹೀನ ಸರ್ಕಾರವಾಗಿ, ಮಾನವೀಯತೆ ಸತ್ತಂತೆ ವರ್ತಿಸುತ್ತಿದೆ. ದಪ್ಪ ಚರ್ಮ ಅನ್ನೋಣ ಅಂದ್ರೆ ಆ ದಪ್ಪ ಚರ್ಮಕ್ಕಾದ್ರು ಸ್ವಲ್ಪ ನಾಟುತ್ತೆ. ಚಡಿ ಏಟು ನಾಟದಿದ್ರು, ಕರೆಂಟ್ ಶಾಕ್ ಆದ್ರೂ ನಾಟುತ್ತೆ. ಇದು ದಪ್ಪ ಚರ್ಮವೋ, ಸತ್ತಿರೋ ಚರ್ಮವೋ ಗೊತ್ತಾಗ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕೊಲೆ, ಸುಲಿಗೆ, ಅತ್ಯಾಚಾರ ಸಂಭ್ರಮಕ್ಕೆ ಔತಣಕೂಟ – ಸಿಎಂ ಡಿನ್ನರ್‌ ಮೀಟಿಂಗ್‌ಗೆ ಸಿ.ಟಿ ರವಿ ವ್ಯಂಗ್ಯ