ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.
ಕಳೆದ ಹತ್ತು ದಿನಗಳಿಂದ ತಿಪ್ಪನಟಗಿ ಗ್ರಾಮದ ಹಲವರು ವಾಂತಿ, ಭೇದಿಯಿಂದ ಬಳಲಿ, ಅಸ್ವಸ್ಥರಾಗುತ್ತಿದ್ದರು. ಈ ಹಿನ್ನೆಲೆ ಜನರು ಚಿಕಿತ್ಸೆಗಾಗಿ ಬೇರೆ ಬೇರೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಆದರೆ ದಾಖಲಾದ ಮೂರೇ ದಿನಗಳಲ್ಲಿ ಮೂರು ಜನರು ಸಾವನ್ನಪ್ಪಿದ್ದು, ಆರು ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರು ಚೇತರಿಸಿಕೊಂಡಿದ್ದು, 20 ಜನರು ಅಸ್ವಸ್ಥರಾಗಿದ್ದಾರೆ.
ಈ ಹಿನ್ನೆಲೆ ಸ್ಥಳಕ್ಕೆ ಸುರಪುರ ಟಿಹೆಚ್‌ಓ (THO) ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವರದಿ ನೀಡುವಂತೆ ವೈದ್ಯರಿಗೆ ತಿಳಿಸಿದ್ದಾರೆ.
ಈ ಸಂಬಂಧ ಯಾದಗಿರಿ (Yadagiri) ಡಿಹೆಚ್‌ಓ (DHO) ಡಾ. ಮಹೇಶ್ ಬಿರಾದಾರ ಪ್ರತಿಕ್ರಿಯೆ ನೀಡಿದ್ದು, ತಿಪ್ಪನಟಗಿ ಗ್ರಾಮದಲ್ಲಿನ ವಾಂತಿ-ಭೇದಿ ಪ್ರಕರಣಗಳು ನಮ್ಮ ಗಮನಕ್ಕೆ ಬಂದಿದೆ. ನಮ್ಮ ಆರೋಗ್ಯ ಇಲಾಖೆಯ ಟಿಹೆಚ್‌ಓ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಸಾವಿಗೀಡಾದವರು ಹಲವು ಕಾಯಿಲೆಯಿಂದ ಬಳಲುತ್ತಿದ್ದರು. ಜೊತೆಗೆ ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಮೆದುಳಿನ ರೋಗದಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ವಾಂತಿ-ಭೇದಿ ಸಾವಿಗೆ ನಿಖರ ಕಾರಣವಲ್ಲ. ಸದ್ಯ ಇದೇ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ. ಗ್ರಾಮಸ್ಥರು ಆತಂಕಪಡುವ ಪರಿಸ್ಥಿತಿ ಇಲ್ಲ ಎಂದರು.
ಸಾವಿಗೆ ನಿಖರವಾದ ಕಾರಣದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಳೆದ ಹತ್ತು ದಿನಗಳ ಹಿಂದೆ ಕುಡಿಯುವ ನೀರನ್ನು ತಪಾಸಣೆ ಮಾಡಲಾಗಿತ್ತು. ವರದಿಯಲ್ಲಿ ನೀರು ಕುಡಿಯಲು ಯೋಗ್ಯವಿದೆ ಎಂದು ಬಂದಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಸಂಪೂರ್ಣ ತನಿಖೆ ಬಳಿಕ ಎಲ್ಲಾ ಸತ್ಯ ಹೊರಬರಲಿದೆ ಎಂದ ತಿಳಿಸಿದರು. ಇದನ್ನೂ ಓದಿ: ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ
ಚಿತ್ರದುರ್ಗ: ಕಲುಷಿತ ನೀರು (Polluted Water) ಸೇವಿಸಿ ದುರಂತ ನಡೆದ ಕಾವಾಡಿಗರಹಟ್ಟಿಯಲ್ಲಿ (Kavadigarahatti) ಚಿತ್ರದುರ್ಗ (Chitradurga) ಜಿಲ್ಲಾಡಳಿತದಿಂದ ಮತ್ತೊಂದು ಎಡವಟ್ಟಾಗಿದೆ. ಸಮಾಜ ಕಲ್ಯಾಣ ಇಲಾಖೆ ತೆರೆದಿದ್ದ ಗಂಜಿಕೇಂದ್ರದಲ್ಲಿ ವಿತರಿಸಿದ್ದ ಆಹಾರದಲ್ಲಿ (Food) ಮಿಡತೆ ಹುಳ ಪತ್ತೆಯಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ.
ಇಡೀ ಬಡಾವಣೆಯ ನಾಗರಿಕರು ಇದೇ ಆಹಾರವನ್ನು ಸೇವಿಸಿದ್ದು ಮತ್ತೆ ಅಸ್ವಸ್ಥತೆ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಆಕ್ರೋಶಗೊಂಡ ನಾಗರಿಕರು ಕಾವಾಡಿಗರಹಟ್ಟಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು. ಸ್ಥಳಕ್ಕೆ ಡಿಸಿ ದಿವ್ಯ ಪ್ರಭು ತಕ್ಷಣವೇ ಆಗಮಿಸುವಂತೆ ಆಗ್ರಹಿಸಿದ್ದು, ಈ ವೇಳೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ನಾಗವೇಣಿಗೆ ಜನರು ತರಾಟೆ ತೆಗೆದುಕೊಂಡರು. ಮಾತಿನ ಚಕಮಕಿ ನಡೆಸಿದರು. ಇದನ್ನೂ ಓದಿ: ಎಸ್‌ಟಿಎಸ್‌ಗೆ ಕೈ ಗಾಳ, ಆಪರೇಷನ್ ಹಸ್ತಕ್ಕೆ ಕಾರಣ ಅಮಿತ್ ಶಾ! – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಎಫ್‌ಎಸ್‌ಎಲ್ ಟೆಸ್ಟ್ ಕಳುಹಿಸಲು ಸಂಗ್ರಹಿಸಿದ ಆಹಾರದ ಪೊಟ್ಟಣವನ್ನು ಅಧಿಕಾರಿಗಳಿಂದ ಕಿತ್ತುಕೊಂಡು ಪ್ರತಿಭಟಿಸಿದರು. ಚಿತ್ರದುರ್ಗ ಜಿಲ್ಲಾಡಳಿತ ಮಾಡಿಸುವ ಲ್ಯಾಬ್ ಟೆಸ್ಟ್ ಬಗ್ಗೆ ನಂಬಿಕೆ ಇಲ್ಲವೆಂದು ಆಕ್ರೋಶ ಹೊರಹಾಕಿದರು. ಹಾಗೆಯೇ ಕಲುಷಿತ ನೀರು ಸೇವನೆ ದುರಂತದ ಲ್ಯಾಬ್ ಟೆಸ್ಟ್ ತಿರುಚಿದ್ದಾರೆಂದು ಆರೋಪಿಸಿದ ನಾಗರಿಕರು, ಈ ಪ್ರಕರಣವನ್ನು ಮರೆಮಾಚಲಿದ್ದಾರೆಂದು ಕಿಡಿಕಾರಿದರು. ರಾತ್ರಿಯಿಡೀ ನ್ಯಾಯಕ್ಕಾಗಿ ರಸ್ತೆಯಲ್ಲೇ ಪ್ರತಿಭಟಿಸಿದರು.
ಚಿತ್ರದುರ್ಗ: ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಳ್ಳುವಂತಹ ದಾರಿದ್ರ್ಯ ಕುಮಾರಸ್ವಾಮಿ ಅವರಿಗೆ ಬರೋದು ಬೇಡ. ಅಂತಹ ದಾರಿದ್ರ್ಯ ಬರೋದು ಒಳ್ಳೆಯದಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗದ (Chitradurga) ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯತ್ತಿರುವ ಸಂತ್ರಸ್ತರನ್ನ ಭೇಟಿಯಾದ ಸಿ.ಟಿ ರವಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ ಎಂಬ ಹೆಚ್‌ಡಿಕೆ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಂತ್ರಸ್ತರ ಕುರಿತು ಮಾತನಾಡಿ, ಕಾವಾಡಿಗರಹಟ್ಟಿ ಮಾದರಿಯ ಪ್ರಕರಣಗಳು ರಾಜ್ಯದ ಹಲವೆಡೆ ನಡೆದಿವೆ. ರಾಯಚೂರಿನ ಮೊಳಕಾಲ್ಮೂರಿನಲ್ಲೂ ಇಂತಹ ಪ್ರಕರಣಗಳು ಈ ಹಿಂದೆ ನಡೆದಿದ್ದವು. ಆದ್ರೆ ರಾಜ್ಯ ಸರ್ಕಾರ ಈವರೆಗೆ ಎಚ್ಚೆತ್ತುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಐವರು ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ವಿತರಣೆ
ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಯ ದಲಿತ ಕಾಲೊನಿಯಲ್ಲಿ ಕಲುಷಿತ ನೀರು (Contaminated Water) ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (D Sudhakar) ತಲಾ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಘಟನಾ ಸ್ಥಳಕ್ಕೆ ಶನಿವಾರ ಆಗಮಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸ್ಥಳೀಯರಿಂದ ಸಮಸ್ಯೆ ಆಲಿಸಿದರು. ಐವರ ಸಾವಿಗೆ ಕಲುಷಿತ ನೀರು ಸೇವನೆಯೇ ಕಾರಣವಾ? ಅಥವಾ ಮತ್ತಿನ್ನೇನಾದ್ರೂ ಕಾರಣವಿದೆಯೇ? ಎನ್ನುವ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. FSL ಒಳಗೊಂಡು ಎಲ್ಲಾ ವರದಿ ಬಹಿರಂಗಪಡಿಸಲಾಗುವುದು. ಘಟನೆ ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯಿಸಿದರು.
ಸಚಿವರು ಅಸ್ವಸ್ಥರ ಯೋಗ-ಕ್ಷೇಮ ವಿಚಾರಿಸಲು ಜಿಲ್ಲಾಸ್ಪತ್ರೆಗೆ (District Hospital) ಭೇಟಿ ನೀಡಿದ್ದ ವೇಳೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿಲ್ಲ, ಔಷಧ ಹೊರಗಡೆ ಬರೆದುಕೊಡುತ್ತಾರೆ. ಇಲ್ಲಿನ ವೈದ್ಯಾಧಿಕಾರಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದಾಗಿ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬಂದ ಬೆನ್ನಲ್ಲೇ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ ಬಸವರಾಜ್‌ರನ್ನ ಅಮಾನತುಗೊಳಿಸಿದರು.
ಅಸ್ವಸ್ಥರ ಸಂಖ್ಯೆ 190ಕ್ಕೆ ಏರಿಕೆ:
ಕವಾಡಿಗರ ಹಟ್ಟಿಯ ದಲಿತ ಕಾಲೊನಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದವರ ಸಂಖ್ಯೆ ಈವರೆಗೂ 190ಕ್ಕೆ ಏರಿಕೆಯಾಗಿದೆ. ಶನಿವಾರ ಕೂಡ ಐದಾರು ಮಂದಿಗೆ ವಾಂತಿ-ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದಲ್ಲಿ ಐವರು ಮೃತಪಟ್ಟಿದ್ದು, ಹಳೆಯ ಪ್ರಕರಣಗಳ ಪೈಕಿ 25 ಮಂದಿ ಚಿಕಿತ್ಸೆ ಪಡೆದು ಗುಣಮುಖವಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 22, ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 138 ಸೇರಿ 160 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರಿಸ್ಥಿತಿಯ ಬಗ್ಗೆ ವಿವರವಾಗಿ ಅವಲೋಕಿಸಲು ಬೆಂಗಳೂರಿನ ಸಿ.ವಿ ರಾಮನ್ ಆಸ್ಪತ್ರೆ ವೈದ್ಯರ ತಂಡ ಕವಾಡಿಗರಹಟ್ಟಿಗೆ ಆಗಮಿಸಿ ಬೀಡು ಬಿಟ್ಟಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಬಿಎಂಆರ್‌ಸಿ ಆಸ್ಪತ್ರೆಯಿಂದ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದಾರೆ. ಸ್ಥಳದಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲಾಗಿದೆ. ತುರ್ತು ಸ್ಪಂದನಾ ತಂಡ ಗ್ರಾಮದಲ್ಲಿದ್ದು, ವಾಂತಿ ಬೇಧಿ ಲಕ್ಷಣ ಕಂಡುಬಂದರೆ ತಕ್ಷಣೆವೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಡಿಹೆಚ್‌ಓ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ (Kavadigarhatti) ಕಲುಷಿತ ನೀರು (Polluted Water) ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಕವಾಡಿಗರಹಟ್ಟಿ ಕಲುಷಿತ ನೀರು ದುರಂತ ಪ್ರಕರಣವಾಗಿ ಹೊರಹೊಮ್ಮುತ್ತಿದೆ. ಜುಲೈ 31ರಿಂದ ಇಲ್ಲಿಯವರೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ನೂರಾರು ಜನರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ದಿನೇ ದಿನೇ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ.
ಕಲುಷಿತ ನೀರು ಸೇವಿಸಿದ ಪರಿಣಾಮ ಕವಾಡಿಗರಹಟ್ಟಿಯ ರುದ್ರಪ್ಪ (50) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಸ್ ಎಂದು ಕರೆಯದ್ದಕ್ಕೆ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
ಕವಾಡಿಗರಹಟ್ಟಿಯ ತಮ್ಮ ಮನೆಯಲ್ಲಿಯೇ ಪಾರ್ವತಮ್ಮ (75) ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಪಾರ್ವತಮ್ಮ 2 ವರ್ಷಗಳ ಹಿಂದೆ ಪಾರ್ಶ್ವವಾಯುಗೆ ಒಳಗಾಗಿದ್ದರು. 2 ದಿನದ ಹಿಂದೆ ಅವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಪಾರ್ವತಮ್ಮ ಕುಟುಂಬಸ್ಥರೆಲ್ಲರೂ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದರು. ಆದರೆ ಪಾರ್ವತಮ್ಮ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕಲುಷಿತ ನೀರು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಮಂಜುನಾಥ್ ಗಿರಡ್ಡಿ, ಜೆಇ ಕಿರಣ್, ವಾಲ್ ಮ್ಯಾನ್ ಪ್ರಕಾಶ್ ಬಾಬುನನ್ನು ಅಮಾನತು ಮಾಡಲಾಗಿದೆ. ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಗುತ್ತಿಗೆ ಆಧಾರಿತ ನೌಕರ ಕವಾಡಿಗರಹಟ್ಟಿ ನೀರಗಂಟಿ ಸುರೇಶ್‌ನನ್ನು ಕೆಲಸದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಪುತ್ರ ಯತೀಂದ್ರಗೆ ವರುಣದಲ್ಲಿ ಫುಲ್ ಡಿಮ್ಯಾಂಡ್
ಕೊಪ್ಪಳ: ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯೊಬ್ಬಳು (Girl) ತೀವ್ರ ಅಸ್ವಸ್ಥಳಾಗಿ ಸಾವನ್ನಪಿರುವ ಘಟನೆ ನಡೆದಿದೆ. ಕಲುಷಿತ ನೀರು (Polluted Water) ಸೇವಿಸಿ ಬಾಲಕಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಕೊಪ್ಪಳ (Koppala) ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕಿಯೂ ವಾಂತಿ-ಭೇದಿಗೆ ತುತ್ತಾಗಿದ್ದರಿಂದ ಆಕೆಯ ಸಾವು ಕಲುಷಿತ ನೀರು ಸೇವಿಸಿದ್ದರಿಂದ ಆಗಿದೆ ಎಂದು ಊಹಿಸಲಾಗಿದೆ.
ಬಾಲಕಿಗೆ ಬುಧವಾರ ರಾತ್ರಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಆಕೆಯನ್ನು ರಾತ್ರಿ ವೇಳೆ ಆಸ್ಪತ್ರೆಗೆ ಕರೆದೊಯ್ಯಲು ಪೋಷಕರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಗುರುವಾರ ಬೆಳಗ್ಗೆ ಆಕೆಯನ್ನು ಕುಷ್ಟಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಬಾಲಕಿ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಳಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸುವ ಮೊದಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: 1 ಫೋನ್ ಕರೆ.. 9 ಅಧಿಕಾರಿಗಳು..; ಒಡಿಶಾ ರೈಲು ದುರಂತದ ಬಳಿಕ ಏನೇನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ
ಗ್ರಾಮದಲ್ಲಿ ಈಗಾಗಲೇ ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವುದರಿಂದ ಕಲುಷಿತ ನೀರು ಸೇವನೆಯಿಂದಲೇ ವಾಂತಿ-ಭೇದಿ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಅಪಾರ ಪ್ರಮಾಣದ ಬೆಳೆ ನಾಶ
ರಾಯಚೂರು: ಕಲುಷಿತ ನೀರು (Polluted Water) ಕುಡಿದು ಬಾಲಕನೊಬ್ಬ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ (Raichur ZP CEO) ಶಶಿಧರ್ ಕುರೇರಾ ಅವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ (Notice) ಜಾರಿ ಮಾಡಿದೆ.
ಜಾರಿಗೊಳಿಸಲಾಗಿರುವ ನೋಟಿಸ್‍ಗೆ ಒಂದು ವಾರದ ಒಳಗಾಗಿ ಉತ್ತರಿಸುವಂತೆ ಮಂಡಳಿ ಸೂಚಿಸಿದೆ. ಅಲ್ಲದೆ ತಪ್ಪಿತಸ್ಥ ಗ್ರಾಮ ಪಂಚಾಯಿತಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜಲ ಕಾಯ್ದೆ 1974 ರ ಸೆಕ್ಷನ್ 24 ಮತ್ತು 25ರ ಅಡಿಯಲ್ಲಿ ಜಲ ಮೂಲಗಳನ್ನು ಕಲಿಷಿತಗೊಳಿಸುವುದು ಅಪರಾಧವಾಗಿದೆ. ಈ ಕಾಯ್ದೆ ಅಡಿ ಯಾಕೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್‍ನಲ್ಲಿ ಪ್ರಶ್ನಿಸಲಾಗಿದೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಬಾಲಕ ಸಾವು – 30ಕ್ಕೂ ಹೆಚ್ಚು ಜನ ಅಸ್ವಸ್ಥ
ದೇವದುರ್ಗದ (Devadurga) ರೇಕಲಮರಡಿ ಹಾಗೂ ಲಿಂಗಸುಗೂರಿನ ಗೊರೆಬಾಳ ಗ್ರಾಮದಲ್ಲಿ ಮೇ 26 ರಂದು ಕಲುಷಿತ ನೀರು ಕುಡಿದು ಓರ್ವ ಬಾಲಕ ಮೃತಪಟ್ಟಿದ್ದ. ಅಲ್ಲದೆ 34 ಜನ ಗ್ರಾಮಸ್ಥರು ಅಸ್ವಸ್ಥರಾಗಿದ್ದರು. ಲಿಂಗಸುಗೂರು ತಾಲ್ಲೂಕಿನ ಗೊರೆಬಾಳದಲ್ಲಿ 21 ಜನ ಅಸ್ವಸ್ಥಗೊಂಡಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!
ರಾಯಚೂರು: ಕಲುಷಿತ ನೀರು (Polluted Water) ಸೇವಿಸಿ ಬಾಲಕ (Boy) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
ನೀರು ಸರಬರಾಜು ಮಾಡುವ ಪೈಪ್ ಲೈನ್‌ಗೆ ಚರಂಡಿ ನೀರು ಸೇರುತ್ತಿದ್ದು ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಸದ್ಯ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಗ್ರಾಮದ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯವೇ ಇದಕ್ಕೆಲ್ಲಾ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು (Polluted Water) ಸೇವಿಸಿ ಮೂವರು ಮೃತಪಟ್ಟು, ನೂರಾರು ಜನರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ (Lokayukta) ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚರಗೊಂಡಿರುವ ಅಧಿಕಾರಿಗಳು ತನಿಖೆಯನ್ನೂ ಆರಂಭಿಸಿದ್ದಾರೆ.
ಫೆಬ್ರವರಿ 14 ರಂದು ಕಾಣಿಸಿಕೊಂಡ ವಾಂತಿ-ಭೇದಿ ಪ್ರಕರಣದಿಂದ ಸಾವಿತ್ರಮ್ಮ (35), ಸಾಯಮ್ಮ (70) ಹಾಗೂ ನರಸಮ್ಮ (73) ಮೃತಪಟ್ಟಿದ್ದರು. ನಿರ್ಜಲೀಕರಣಕ್ಕೆ ಒಳಗಾಗಿ ನೂರಾರು ಜನರು ಅಸ್ವಸ್ಥಗೊಂಡು ಯಾದಗಿರಿ, ರಾಯಚೂರು ಹಾಗೂ ಆಂಧ್ರ ಪ್ರದೇಶದ ನಾರಾಯಣಪೇಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಇದನ್ನೂ ಓದಿ: ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು
ಸದ್ಯ ವಾಂತಿ-ಭೇದಿ ಪ್ರಕರಣಗಳು ಕಡಿಮೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರು ಒಬ್ಬೊಬ್ಬರಾಗಿಯೇ ಡಿಸ್ಚಾರ್ಜ್ ಆಗುತ್ತಿದ್ದಾರೆ. ಗ್ರಾಮದ 11 ಕಡೆಗಳಲ್ಲಿ ಸಂಗ್ರಹಿಸಿ ತಪಾಸಣೆ ಮಾಡಿದ ನೀರಿನ ವರದಿ ಈಗಾಗಲೇ ಬಂದಿದ್ದು, ಬರೋಬ್ಬರಿ 4 ಕಡೆಗಳಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಆಘಾತಕಾರಿ ಅಂಶವೂ ಬಯಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಇದೀಗ ಎಲ್ಲಾ ಆಯಾಮಗಳಲ್ಲೂ ತನಿಖೆ ಆರಂಭವಾಗಿದೆ. ಇದನ್ನೂ ಓದಿ: ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು
LIVE TV
[brid partner=56869869 player=32851 video=960834 autoplay=true]