Tag: polluted water

  • ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು – 50ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

    ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು – 50ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

    ಬಳ್ಳಾರಿ: ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು (Polluted Water) ಕುಡಿದು ಮಹಿಳೆ (Woman) ಸಾವಿಗೀಡಾದ ಘಟನೆ ನಡೆದಿದೆ. ಸಚಿವ ಆನಂದ್ ಸಿಂಗ್ ಅವರ ಮನೆಯ ಬಳಿಯಲ್ಲೇ ಈ ಘಟನೆ ನಡೆದಿದ್ದು, ಹೊಸಪೇಟೆಯ ಜನರು ಆತಂಕಕ್ಕೀಡಾಗಿದ್ದಾರೆ.

    ಕಳೆದೊಂದು ವಾರದಿಂದ ಹೊಸಪೇಟೆಯ ರಾಣಿಪೇಟೆ ಪ್ರದೇಶಕ್ಕೆ ಕಲುಷಿತ ನೀರು ಸರಬರಾಜಾಗಿದೆ. ಇದನ್ನು ತಿಳಿಯದೇ ಕಲುಷಿತ ನೀರು ಸೇವಿಸಿ ಸ್ಥಳೀಯ ಮಹಿಳೆ ಲಕ್ಷ್ಮೀದೇವಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರು ಸೇವಿಸಿದ 50ಕ್ಕೂ ಹೆಚ್ಚಿನ ಜನರು ಅನಾರೋಗ್ಯಕ್ಕೀಡಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಚಿವರ ಆಡಳಿತ ಕಚೇರಿ ಹಿಂದಿನ ಭಾಗದ ಮನೆಯಲ್ಲಿಯೇ ಲಕ್ಷ್ಮೀದೇವಿ ಸಾವನ್ನಪ್ಪಿದ್ದಾರೆ ಎನ್ನುವುದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಆನಂದ್ ಸಿಂಗ್, ಡಿಸಿ ವೆಂಕಟೇಶ ಬಾಬು, ಎಸ್‌ಪಿ ಶ್ರೀಹರಿ ಬಾಬು ಖುದ್ದು ಪರಿಸ್ಥಿತಿ ಆಲಿಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ಮಹಿಳೆ ಮೃತಪಟ್ಟಿರುವುದರಿಂದ ಆರೋಗ್ಯ ಇಲಾಖೆ, ನಗರಸಭೆ ಫುಲ್ ಅಲರ್ಟ್ ಆಗಿದೆ. ಖುದ್ದು ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.

    ಡಾ. ದಿವ್ಯಾ ನೇತೃತ್ವದಲ್ಲಿ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಕಳೆದ 3 ದಿನಗಳಲ್ಲಿ ಸುಮಾರು 50ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಕಾರಲ್ಲ, ನಾಯಿ ಹೋಗಿ ಬಿದ್ದಿದ್ದರಿಂದ ವೃದ್ಧೆ ಸಾವು: ಶಾಸಕ ದಡೆಸುಗೂರ್‌

    ಹೊಸಪೇಟೆ ನಗರದಲ್ಲಿ 24*7 ಕುಡಿಯುವ ನೀರಿನ ಯೋಜನೆ ಜಾರಿಗೆ ಬಂದು ದಶಕ ಕಳೆದರೂ ಸರ್ಮಪಕವಾಗಿ ಅನುಷ್ಠಾನಗೊಂಡಿಲ್ಲ. ಹಲವೆಡೆ ಹಳೇ ಪೈಪ್‌ನಲ್ಲೇ ನೀರು ಪೂರೈಕೆಯಾಗುತ್ತಿದೆ. ಸ್ಥಳೀಯ ಶಾಸಕ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಜನ ಸಂಪರ್ಕ ಕಚೇರಿ ಮತ್ತು ಹಳೆ ಮನೆ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ನಗರದ ನೀರು ಪೂರೈಕೆಯಲ್ಲಿನ ಅವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು ಸಾರ್ವಜಕ ವಲಯದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

    ಹೊಸಪೇಟೆಯಿಂದ ಕೇವಲ 3 ಕಿ.ಮೀ ದೂರದಲ್ಲಿ ತುಂಗಭದ್ರಾ ಜಲಾಶಯ ಇದೆ. ಹೀಗಿದ್ದರೂ ತಾಲೂಕಿಗೆ ಸಮರ್ಪಕ ನೀರು ಪೂರೈಕೆ ಆಗದೇ ಕಳೆದ 3 ದಿನಗಳಿಂದ ವಾರ್ಡ್‌ನ ಹಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ನಗರಸಭೆ ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಸಲಾಗುತ್ತಿದೆ. ಇದನ್ನೂ ಓದಿ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರರ ಮನೆಗಳ ಶೋಧ – ಕಿಮ್ಮನೆ ಬಳಿಯೂ ಮಾಹಿತಿ ಸಂಗ್ರಹ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ವೃದ್ಧನ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ

    ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ವೃದ್ಧನ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ

    ಬೆಳಗಾವಿ: ರಾಮದುರ್ಗ (Ramadurga) ತಾಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು (Water Consumption) ಸೇವಿಸಿ ವೃದ್ಧ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಹತ್ತು ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಒಪ್ಪಿಗೆ ನೀಡಿದ್ದಾರೆ ಎಂದು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

    ನಗರದಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಲುಷಿತ ನೀರು ಸೇವಿಸಿ ರಾಮದುರ್ಗದಲ್ಲಿ ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಸದ್ಯಕ್ಕೆ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಅಸ್ವಸ್ಥರ ಕುರಿತು ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಡಿಎಚ್‍ಒ ಅವರಿಗೆ ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

    ಇನ್ನು ಮುದೇನೂರ ಗ್ರಾಮದಲ್ಲಿ ಆರ್‌ಓ ಪ್ಲಾಂಟ್ ಇದೆ. ಜನರು ಆರ್‌ಓ ಪ್ಲಾಂಟ್ ನೀರನ್ನೇ ಕುಡಿಯಬೇಕು. ಸಿಎಂ ಜೊತೆ ಮಾತಾಡಿ ಮೃತ ಶಿವಪ್ಪ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಳಿದ್ದೇನೆ. ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಜನ ಇನ್ನೂ ಮುಂದಾದರು ಶುದ್ಧವಾದ ನೀರು ಕುಡಿಯಬೇಕು. ನಲ್ಲಿಗಳ ಮೂಲಕ ಶುದ್ಧವಾದ ನೀರು ಕೊಡುವ ಪ್ರಯತ್ನ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮುದೇನೂರು ಜನರು ಪೈಪ್‍ಲೈನ್ ಮತ್ತು ಬೋರವೇಲ್‍ಗಳಿಂದ ನೀರನ್ನು ಕುಡಿಯಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ – ನವೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ?

    Live Tv
    [brid partner=56869869 player=32851 video=960834 autoplay=true]

  • ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

    ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

    ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಇದನ್ನೂ ಓದಿ: ಎಂಇಎಸ್‍ನಿಂದ ಮತ್ತೆ ಗಡಿ ಖ್ಯಾತೆ – ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಸಿದ್ಧತೆ

    ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ನಳಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಇದನ್ನೂ ಓದಿ: ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

    ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಲುಷಿತ ಕುಡಿಯುವ ನೀರು ಸೇವಿಸಿ 40 ಮಂದಿ ಅಸ್ವಸ್ಥ – ವೃದ್ಧ ಸಾವು

    ಕಲುಷಿತ ಕುಡಿಯುವ ನೀರು ಸೇವಿಸಿ 40 ಮಂದಿ ಅಸ್ವಸ್ಥ – ವೃದ್ಧ ಸಾವು

    ಬೆಳಗಾವಿ: ಕಲುಷಿತಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆನ್ನೂರ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಸೇವಿಸಿ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಅವರನ್ನು ರಾಮದುರ್ಗ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಕಳೆದ ರಾತ್ರಿ ಚಿಕಿತ್ಸೆ ಫಲಿಸದೇ ಬೆನ್ನೂರ ಗ್ರಾಮದ ಬಸಪ್ಪ ಖಾನಾಪೂರ(85) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿಂಧೆ ನಿಷ್ಠಾವಂತ ಅಧಿಕಾರಿ ಕಾರಿನ ಮೇಲೆ ಶಿವಸೈನಿಕರ ದಾಳಿ 

    ಕಲುಷಿತ ಕುಡಿಯುವ ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಏಕಾಏಕಿ ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಸದ್ಯ ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಇತ್ತ ವೃದ್ಧನ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜೆಜಿಎಂ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಲುಷಿತ ನೀರು ಕುಡಿದು 7ನೇ ಸಾವು – ಅಂಕಿ ಅಂಶದಲ್ಲಿ ಅಧಿಕಾರಿಗಳ ಕಳ್ಳಾಟ

    ಕಲುಷಿತ ನೀರು ಕುಡಿದು 7ನೇ ಸಾವು – ಅಂಕಿ ಅಂಶದಲ್ಲಿ ಅಧಿಕಾರಿಗಳ ಕಳ್ಳಾಟ

    ರಾಯಚೂರು: ನಗರಸಭೆ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಮತ್ತೊಂದು ಸಾವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ನಗರದ ವಾರ್ಡ್ ಸಂಖ್ಯೆ 14ರ ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ(48) ಸಾವಿನ ಮೂಲಕ ಮೃತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಮೇ 28ಕ್ಕೆ ವಾಂತಿ ಭೇದಿ, ಕಿಡ್ನಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೇ 29 ರಂದು ಸಾವನ್ನಪ್ಪಿದ್ದರು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದಲಿತ ಮುಖಂಡನ ಕೊಲೆ ಪ್ರಕರಣ – ಐವರು ಶಂಕಿತರು ವಶಕ್ಕೆ

    ಸಾವಿನ ಕಾರಣ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾಡಳಿತ ಹಾಗೂ ನಗರಸಭೆ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿರುವುದು ಬಯಲಾಗಿದೆ. ಇದುವರೆಗೂ ಮೃತಪಟ್ಟವರು ಹಾಗೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯನ್ನು ಗುಪ್ತವಾಗಿಯೇ ಇಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ನಗರಸಭೆ ಹಾಗೂ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದವರ ಲೆಕ್ಕವೇ ಇಡುತ್ತಿಲ್ಲ. ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾದವರ ಲೆಕ್ಕವೂ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಬರುವ ಮಾಹಿತಿಯೇ ಅಂತಿಮವಾಗಿದೆ. ಹೀಗಾಗಿ ಸಾರ್ವಜನಿಕರು ಮೃತಪಟ್ಟವರ ಹಾಗೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯನ್ನು ಬಹಿರಂಪಡಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸೇಫ್ಟಿ ಬೆಲ್ಟ್ ಇಲ್ಲದೆ ಕೆಲಸ ಮಾಡ್ತಿದ್ದ ಕಾರ್ಮಿಕ 50 ಅಡಿ ಎತ್ತರದಿಂದ ಬಿದ್ದು ಸಾವು

    ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಬಾಧಿತರಿಗೆ ಚಿಕಿತ್ಸಾ ವೆಚ್ಚ ಭರಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    Live Tv

  • ಜನರನ್ನ ಆಸ್ಪತ್ರೆಗೆ ಸೇರಿಸುವಲ್ಲಿ ದಾಖಲೆ ಬರೆದ ರಾಯಚೂರು – ವಾಂತಿ, ಭೇದಿ ರೋಗಿಗಳಿಂದ ಬೆಡ್ ಫುಲ್

    ಜನರನ್ನ ಆಸ್ಪತ್ರೆಗೆ ಸೇರಿಸುವಲ್ಲಿ ದಾಖಲೆ ಬರೆದ ರಾಯಚೂರು – ವಾಂತಿ, ಭೇದಿ ರೋಗಿಗಳಿಂದ ಬೆಡ್ ಫುಲ್

    ರಾಯಚೂರು: ಕಲುಷಿತ ನೀರನ್ನು ಸರಬರಾಜು ಮಾಡಿ ಸಾವಿರಕ್ಕೂ ಹೆಚ್ಚು ಜನ ಆಸ್ಪತ್ರೆ ಕದ ತಟ್ಟಿದ್ದಾರೆ. ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಾತ್ರವಲ್ಲದೆ ರಾಯಚೂರಿನ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳ ಬೆಡ್‍ಗಳು ವಾಂತಿ-ಭೇದಿ ರೋಗಿಗಳಿಂದಲೇ ತುಂಬಿವೆ. ನಿರ್ಜಲೀಕರಣ ಕಾರಣಕ್ಕೆ ಹಿಂದೆದೂ ಕಾಣದಷ್ಟು ರೋಗಿಗಳನ್ನ ವೈದ್ಯರು ನೋಡುತ್ತಿದ್ದಾರೆ.

    ಕಲುಷಿತ ನೀರನ್ನ ಸಾರ್ವಜನಿಕರಿಗೆ ಸರಬರಾಜು ಮಾಡಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿರುವ ರಾಯಚೂರು ನಗರಸಭೆ ಈಗ ಮತ್ತೊಂದು ದಾಖಲೆ ಬರೆದಿದೆ. ವಾಂತಿ-ಭೇದಿಯಿಂದ ಐದು ಜನ ಸಾವನ್ನಪ್ಪಿರುವ ಬೆನ್ನಲ್ಲೇ ಇದುವರೆಗೆ ಸಾವಿರಕ್ಕೂ ಹೆಚ್ಚು ಜನ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅನುಮತಿ ಪಡೆಯದೇ ಜಾಹೀರಾತು: ಇಬ್ಬರು ಅಭ್ಯರ್ಥಿಗಳ ವಿರುದ್ಧ FIR ದಾಖಲು

    ಮೇ 29 ರಿಂದ ಪ್ರಕರಣಗಳು ಹೆಚ್ಚಾಗಿದ್ದು, ಈಗಾಗಲೇ ವಾಂತಿ-ಭೇದಿಯಿಂದ ಒಂದು ಸಾವಿರಕ್ಕೂ ಹೆಚ್ಚು ಜನ ಆಸ್ಪತ್ರೆ ಸೇರಿದ್ದಾರೆ. ಇದರಲ್ಲಿ ಬಹುತೇಕರು ನಾಲ್ಕೈದು ದಿನ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಆದ್ರೆ ಕೆಲವರು ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ. ಅತಿಯಾದ ನಿರ್ಜಲೀಕರಣದಿಂದ ಕೆಲವರಿಗೆ ಕಿಡ್ನಿ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ.

    ನಗರಸಭೆ ಈಗಲೂ ಅದೇ ನಿರ್ಲಕ್ಷ್ಯ ಮುಂದುವರಿಸಿರುವುದರಿಂದ ಶುದ್ಧ ನೀರು ಕೊಂಡು ಕುಡಿಯಲಾಗದವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೇ 29ರಿಂದ ಇದುವರೆಗೆ ರಿಮ್ಸ್ ಆಸ್ಪತ್ರೆಗೆ 183 ಜನ ದಾಖಲಾಗಿದ್ದಾರೆ. ಇದರಲ್ಲಿ 140 ಜನ ಬಿಡುಗಡೆಯಾಗಿದ್ದು, 43 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 11 ಜನ ಮಕ್ಕಳಿದ್ದಾರೆ. ಇನ್ನೂ ರಿಮ್ಸ್ ಆಸ್ಪತ್ರೆಯಲ್ಲೇ ಒಟ್ಟು 5ರಲ್ಲಿ 3 ಜನ ಸಾವನ್ನಪ್ಪಿದ್ದಾರೆ.

    ರಾಯಚೂರು ನಗರದಲ್ಲಿರುವ ಪ್ರತಿಯೊಂದು ಖಾಸಗಿ ಆಸ್ಪತ್ರೆಯಲ್ಲೂ ಕನಿಷ್ಠ 40 ರಿಂದ 50 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಷ್ಟೋ ಜನ ಮನೆಯಲ್ಲೇ ಡ್ರಿಪ್ಸ್ ಹಾಕಿಕೊಂಡು ಮಲಗಿದ್ದಾರೆ. ಏಕಾಏಕಿ ತುಂಬಾ ಸಂಖ್ಯೆಯಲ್ಲಿ ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಮೊದಲಿಗೆ ಕಾರಣ ತಿಳಿದು ಬಂದಿರಲಿಲ್ಲ. ಯಾವಾಗ ಕುಡಿಯಲು ನಗರಸಭೆ ನೀರನ್ನೇ ಅವಲಂಬಿಸಿರುವ ಪ್ರದೇಶಗಳ ಜನರಲ್ಲಿ ನಿರ್ಜಲೀಕರಣ ಕಾಣಿಸಿಕೊಂಡಿತೋ, ಆಗ ಇದು ನಗರಸಭೆ ಯಡವಟ್ಟು ಅನ್ನೋದು ಬಯಲಾಯ್ತು. ಈಗಲೂ ಕೂಡ ನಗರಸಭೆ ಶುದ್ಧ ನೀರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದ ಹಿನ್ನೆಲೆ ಜನ ಆಸ್ಪತ್ರೆಗಳಿಗೆ ದಾಖಲಾಗುತ್ತಲೇ ಇದ್ದಾರೆ. ಇದನ್ನೂ ಓದಿ:  ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್ 

    ಜಿಲ್ಲಾಡಳಿತ ಮಾತ್ರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿರುವವರ ಮೇಲೆ ನಿಗಾ ಇಟ್ಟಿರುವುದಾಗಿ ಹೇಳುತ್ತಿದೆ. ಆದ್ರೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಕಡಿಮೆಯಾಗುತ್ತಿಲ್ಲ. ಕನಿಷ್ಠ ಈಗಲಾದ್ರೂ ನಗರಸಭೆ ಹಾಗೂ ಜಿಲ್ಲಾಡಳಿತ ರೋಗಿಗಳ ಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕಿದೆ.

  • ರಾಯಚೂರು ನಗರಸಭೆ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

    ರಾಯಚೂರು ನಗರಸಭೆ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

    ರಾಯಚೂರು: ನಗರದಲ್ಲಿ ಕಲುಷಿತ ನೀರಿಗೆ ಐದನೇ ಬಲಿಯಾಗಿದೆ. ನಗರಸಭೆ ಪೂರೈಸುತ್ತಿರುವ ಕಲುಷಿತ ನೀರು ಸೇವಿಸಿ ಮತ್ತೋರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ವಾಂತಿ ಭೇದಿಯಿಂದ ನಾಲ್ಕು ಸಾವು, ನೂರಾರು ಜನ ಆಸ್ಪತ್ರೆಗೆ ದಾಖಲಾಗಿದ್ದರೂ ನಗರಸಭೆ ಎಚ್ಚೆತ್ತುಕೊಳ್ಳದ ಹಿನ್ನೆಲೆ ಮತ್ತೊಬ್ಬ ವ್ಯಕ್ತಿ ಪ್ರಾಣ ಬಿಟ್ಟಿದ್ದಾನೆ.

    ಈಗಾಗಲೇ ಅವಾಂತರವಾದರೂ ಕಲುಷಿತ ನೀರನ್ನೇ ಜನರಿಗೆ ಕುಡಿಯಲು ಸರಬರಾಜು ಮಾಡುತ್ತಿದೆ. ಹೀಗಾಗಿ ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಗರದ ವಾರ್ಡ್ ಸಂಖ್ಯೆ 13ರ ಯರಗೆರಾ ಕಾಲೋನಿ ನಿವಾಸಿ ಜನಕರಾಜ್ (48) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ಹೆಚ್ಚಾಗಿ ಮಧ್ಯಮವರ್ಗ, ಬಡ ಕುಟುಂಬಗಳು ವಾಸಿಸುತ್ತಿರುವ ಪ್ರದೇಶಗಳಲ್ಲೇ ಕಲುಷಿತ ನೀರು ಕುಡಿದು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ

    ರಿಮ್ಸ್ ವೈದ್ಯರು ಮೃತ ಜನಕರಾಜ್ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ. ವಾಂತಿ ಭೇದಿ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದಾಗ ಪ್ರಜ್ಞೆ ಇರಲಿಲ್ಲ. ನಾಲ್ಕು ದಿನಕಾಲ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಿದರೂ ರೋಗಿಯನ್ನು ಉಳಿಸಲು ಆಗಲಿಲ್ಲ ಎಂದಿದ್ದಾರೆ.

    ಒಟ್ಟಿನಲ್ಲಿ ನಗರಸಭೆಗೆ ಇನ್ನೆಷ್ಟು ಬಲಿ ಬೇಕಿದೆಯೋ ಅನ್ನೋದೆ ದೊಡ್ಡ ಪ್ರಶ್ನೆಯಾಗಿದೆ. ಕನಿಷ್ಠ ಹೆಚ್ಚು ಜನ ಬಾಧಿತರಿರುವ ಪ್ರದೇಶಗಳಿಗಾದರೂ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಈಗಲೂ ನೂರಾರು ಜನ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕಿದೆ.

  • ಕಲುಷಿತ ನೀರು ಕುಡಿದು ಸಾವು ಪ್ರಕರಣ – ಮೃತರ ಕುಟುಂಬಕ್ಕೆ ನಗರಸಭೆಯಿಂದ ತಲಾ 10 ಲಕ್ಷ ರೂ. ಪರಿಹಾರ

    ಕಲುಷಿತ ನೀರು ಕುಡಿದು ಸಾವು ಪ್ರಕರಣ – ಮೃತರ ಕುಟುಂಬಕ್ಕೆ ನಗರಸಭೆಯಿಂದ ತಲಾ 10 ಲಕ್ಷ ರೂ. ಪರಿಹಾರ

    ರಾಯಚೂರು: ಎಲ್ಲಾ ಲೂಟಿಯಾದ ಮೇಲೆ ಕೋಟೆ ಬಾಗಿಲು ಹಾಕಿದ ಹಾಗೆ ರಾಯಚೂರು ನಗರಸಭೆ ಈಗ ಎಚ್ಚೆತ್ತಿದೆ. ನಗರದ ಟ್ಯಾಂಕ್‍ಗಳ ಶುದ್ಧೀಕರಣದ ಬಗ್ಗೆ ಈಗ ಅರಿವಿಗೆ ಬಂದಿದೆ. ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ ಬಳಿಕ ತುರ್ತು ಸಭೆ ಕರೆದು ಪರಿಹಾರ ಘೋಷಣೆ ಮಾಡಿದ್ದಾರೆ.

    ರಾಯಚೂರು ನಗರಸಭೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನಕ್ಕೆ ಕೊನೆಯೇ ಇಲ್ಲ ಎನ್ನುವುದಕ್ಕೆ ಇಂದು ನಡೆದ ನಗರಸಭೆ ಸದಸ್ಯರ ತುರ್ತು ಸಭೆ ಸಾಕ್ಷಿಯಾಗಿತ್ತು. ನಗರಸಭೆಯಿಂದ ಸರಬರಾಜಾದ ಕಲುಷಿತ ನೀರನ್ನು ಕುಡಿದು ಮೂರು ಜನ ಪ್ರಾಣ ಬಿಟ್ಟಿದ್ದರ ಹಿಂದೆ 25 ವರ್ಷಗಳ ನಿರ್ಲಕ್ಷ್ಯವಿದೆ. ನೀರು ಕುಡಿದ ನೂರಾರು ಜನ ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿರುವುದರ ಹಿಂದೆ ಭ್ರಷ್ಟಾಚಾರ, ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಕೊನೆಗೂ ಎಚ್ಚೆತ್ತಂತೆ ತುರ್ತು ಸಭೆ ಕರೆದ ಆಡಳಿತ ಮಂಡಳಿ ನಗರಸಭೆ ನೀರು ಕುಡಿದು ಸಾವನ್ನಪ್ಪಿದ ಮೂವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 20 ಸಾವಿರ ರೂಪಾಯಿ ಚಿಕಿತ್ಸಾ ವೆಚ್ಚ ಭರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಆಡಳಿತ ಮಂಡಳಿ ವೈಫಲ್ಯದ ಬಗ್ಗೆ ಕಿಡಿಕಾರಿದರು. ಶುದ್ಧೀಕರಣ ಘಟಕ ನಿರ್ವಹಣೆಯಲ್ಲಿನ ಲೋಪವನ್ನು ಇನ್ನು ಮುಂದಾದರೂ ಸರಿಪಡಿಸುವಂತೆ ಒತ್ತಾಯಿಸಿದರು. ನಗರದಲ್ಲಿನ 35 ಕ್ಕೂ ಹೆಚ್ಚು ನೀರಿನ ಟ್ಯಾಂಕ್‍ಗಳನ್ನು 25 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಸದಸ್ಯರು ಒತ್ತಾಯಿಸಿದರು.  ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    4.75 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನೀರು ಶುದ್ಧೀಕರಣ ಘಟಕ ಆರಂಭಿಸಲಾಗಿದೆ. ನೀರು ಸರಬರಾಜು ಮಂಡಳಿ ಮೂರು ತಿಂಗಳು ನೀರು ಪೂರೈಕೆ ಕೂಡ ಮಾಡಿತ್ತು. ನಂತರ ಹಸ್ತಾಂತರಕ್ಕೆ ಮುಂದಾದರೆ ನಗರಸಭೆ ನಿರ್ಲಕ್ಷ್ಯ ಮಾಡಲಾಗಿತ್ತು. ಈಗ ಘಟಕ ಉಪಯೋಗವಿಲ್ಲದಂತಾಗಿ 58 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಬೇಕಾಗಿದೆ ಅಂತ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖಾ ಸಮಿತಿಯನ್ನ ರಚಿಸಿದೆ. ಮೂರು ದಿನಗಳಲ್ಲಿ ವರದಿ ನೀಡುವಂತೆ ಸಮಿತಿಗೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ. ಅದೇನೇ ಇದ್ದರೂ ಒಟ್ಟಿನಲ್ಲಿ ನಗರಸಭೆಯ ದೀರ್ಘಕಾಲದ ನಿರ್ಲಕ್ಷ್ಯಕ್ಕೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ.

  • ಕೆಮಿಕಲ್ ಮಿಶ್ರಿತ ನೀರಿನಿಂದ ಲಕ್ಷಾಂತರ ಮೀನುಗಳ ಮಾರಣ ಹೋಮ

    ಕೆಮಿಕಲ್ ಮಿಶ್ರಿತ ನೀರಿನಿಂದ ಲಕ್ಷಾಂತರ ಮೀನುಗಳ ಮಾರಣ ಹೋಮ

    ಬೆಂಗಳೂರು/ಆನೇಕಲ್: ಬ್ಯಾಟರಿ ಕಾರ್ಖಾನೆಗಳು ನೇರವಾಗಿ ಕಲುಷಿತ ನೀರನ್ನು ಕೆರೆಗೆ ಬಿಡುತ್ತಿರುವ ಹಿನ್ನೆಲೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮೈಸೂರಮ್ಮನ ದೊಡ್ಡಿ ಗ್ರಾಮದ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ.

    ಮೈಸೂರಮ್ಮನ ದೊಡ್ಡಿ ಗ್ರಾಮದ ಕೆರೆಯ ಬಳಿ ಬ್ಯಾಟರಿ ಕಂಪನಿಗಳಿದ್ದು, ಕಂಪನಿಗಳಿಂದ ಬರುವ ಕೆಮಿಕಲ್ ಮಿಶ್ರಿತ ತ್ಯಾಜ್ಯ ಕಲುಷಿತ ನೀರಿನಿಂದಾಗಿ ಇದೀಗ ಕೆರೆ ಸಂಪೂರ್ಣ ಕಲುಷಿತವಾಗಿದೆ. ಅಲ್ಲದೇ ಕಳೆದ ವಾರದಿಂದ ಮಳೆಯಾಗುತ್ತಿದ್ದು, ಮಳೆ ನೀರಿನ ಜೊತೆ ಕೆಮಿಕಲ್ ನೀರು ಸಹ ಕೆರೆ ಸೇರಿ ಇದೀಗ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ಇದನ್ನೂ ಓದಿ:ಮಳೆಯಬ್ಬರಕ್ಕೆ ನಲುಗಿದ ಸಿಲಿಕಾನ್ ಸಿಟಿ- ಅಂಡರ್‌ಪಾಸ್‌ಗಳಲ್ಲಿ ನೀರು ನಿಂತು ಪರದಾಟ

    fish

    ಈ ಕುರಿತು ಈಗಾಗಲೇ ಸ್ಥಳೀಯರು ಎಷ್ಟು ಬಾರಿ ಅಧಿಕಾರಿಗಳ ಮೊರೆ ಹೋದರೂ ಸಹ ಇದುವರೆಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನೂ ಅದೇ ಗ್ರಾಮದ ಮಹದೇವಪ್ಪ ಅವರು ಕೆರೆ ಟೆಂಡರ್ ಪಡೆದಿದ್ದು, ಮೀನುಗಳು ಸುಮಾರು ಎರಡರಿಂದ ಮೂರು ಕೆಜಿಯಷ್ಟು ಬೆಳೆದಿದ್ದವು. ಈಗ ಮೀನುಗಳ ಸಾವಿನಿಂದ ಲಕ್ಷಾಂತರ ರೂ.ಗಳ ನಷ್ಟ ಅನುಭವಿಸುವಂತಾಗಿದೆ. ಈ ಒಂದು ಸಮಸ್ಯೆ ಕೇವಲ ನಿನ್ನೆ ಮೊನ್ನೆಯದಲ್ಲ ಅನೇಕ ವರ್ಷಗಳಿಂದ ಕೆರೆಗೆ ಪಕ್ಕದಲ್ಲೇ ಬ್ಯಾಟರಿ ಫ್ಯಾಕ್ಟರಿ ಇದ್ದು, ಇದಕ್ಕೂ ಮೊದಲು ತಹಶೀಲ್ದಾರ್ ದಾಳಿ ಮಾಡಿ ಫ್ಯಾಕ್ಟರಿಯನ್ನು ಮುಚ್ಚಿಸಿದ್ದರು. ಇದೀಗ ಆ ಫ್ಯಾಕ್ಟರಿ ಮತ್ತೆ ಚಾಲ್ತಿಯಲ್ಲಿದ್ದು, ಅಧಿಕಾರಿಗಳು ಕಂಡೂ ಕಾಣದಂತೆ ಸುಮ್ಮನಿದ್ದಾರೆ.

    fish

    ಈ ಕೆರೆಯ ನೀರನ್ನು ಕುಡಿದು ಎಷ್ಟೋ ಜಾನುವಾರುಗಳು ಅನಾರೋಗ್ಯಕ್ಕೀಡಾಗಿದೆ. ಜೊತೆಗೆ ಇದೀಗ ಎಲ್ಲೆ ಬೋರ್ವೆಲ್ ಅಗೆದರೂ ಸಹ ಕೆಮಿಕಲ್ ಮಿಶ್ರಿತ ನೀರೆ ಬರುತ್ತಿದ್ದು, ಅಂತರ್ಜಲ ಪೂರ್ತಿ ಹಾಳಾಗಿದೆ. ಇಷ್ಟೆಲ್ಲಾ ವಿಷಯಗಳು ತಿಳಿದಿದ್ದರೂ ಸಹ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಇದನ್ನೂ ಓದಿ: ಅಭಿಮಾನಿಯೊಂದಿಗೆ ಬೈಕ್ ಏರಿದ ಶಿವರಾಜ್‍ಕುಮಾರ್ – ವೀಡಿಯೋ ವೈರಲ್

  • ಕಲುಷಿತ ನೀರು ಕುಡಿದು 216 ಕಾರ್ಮಿಕರು ಅಸ್ವಸ್ಥ

    ಕಲುಷಿತ ನೀರು ಕುಡಿದು 216 ಕಾರ್ಮಿಕರು ಅಸ್ವಸ್ಥ

    ಕಾರವಾರ: ಕಲುಷಿತ ನೀರು ಕುಡಿದು 216 ಜನ ಕಾರ್ಮಿಕರು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ವೆಸ್ಟ್ ಕಾಸ್ಟ್ ಪೇಪರ್ ಮಿಲ್ ನಲ್ಲಿ ನೆಡೆದಿದೆ.

    ಪೇಪರ್ ಮಿಲ್‍ನ ಕ್ಯಾಂಟೀನ್ ಹಾಗೂ ಶುದ್ಧೀಕರಣ ಘಟಕದಿಂದ ಬರುವ ನೀರನ್ನು ಕಾರ್ಮಿಕರು ಸೇವಿಸಿದ್ದಾರೆ. ಈ ನೀರು ಕಲ್ಮಷಯುಕ್ತವಾಗಿದ್ದು, ಬ್ಯಾಕ್ಟೀರಿಯಾಗಳು ಹಾಗೂ ವೈರಸ್‍ಗಳು ಸೇರಿದ್ದರಿಂದ ನೀರು ಸೇವಿಸಿದ ಜನರಿಗೆ ಜಾಂಡಿಸ್ ಕಾಣಿಸಿಕೊಂಡಿದೆ. ಅನಾರೋಗ್ಯಪೀಡಿತ ಕಾರ್ಮಿಕರನ್ನು ದಾಂಡೇಲಿ ಕಾರ್ಮಿಕರ ವಿಮಾ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಸರ್ವೇಕ್ಷಣಾಧಿಕಾರಿಗಳು ಭೇಟಿ ನೀಡಿ ನೀರಿನ ಮಾದರಿ ಪರೀಕ್ಷಿಸಿ ನೀರು ಕಲ್ಮಷವಾಗಿದ್ದನ್ನು ದೃಢಪಡಿಸಿದ್ದಾರೆ.