Tag: Ponnampete

  • 2ನೇ ಗಂಡನೊಂದಿಗೆ ನಂಟು -3ನೇ ಗಂಡನಿಂದ ಪತ್ನಿ ಸೇರಿ ನಾಲ್ವರ ಬಾಳಿಗೆ ಕತ್ತಿಯೇಟು

    2ನೇ ಗಂಡನೊಂದಿಗೆ ನಂಟು -3ನೇ ಗಂಡನಿಂದ ಪತ್ನಿ ಸೇರಿ ನಾಲ್ವರ ಬಾಳಿಗೆ ಕತ್ತಿಯೇಟು

    -ಹತ್ಯೆಗೈದ 9 ಗಂಟೆಯೊಳಗೆ ಆರೋಪಿ ಅರೆಸ್ಟ್

    ಮಡಿಕೇರಿ: ಪತ್ನಿ ತನ್ನ ಎರಡನೇ ಗಂಡನೊಂದಿಗೆ ಮತ್ತೆ ಸಂಬಂಧ ಬೆಳೆಸಿದ್ದಾಳೆ ಎಂದು ಶಂಕಿಸಿದ ಮೂರನೇ ಗಂಡ, ಪತ್ನಿ ಸೇರಿ ನಾಲ್ವರನ್ನು ಹತ್ಯೆಗೈದ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆಯ (Ponnampete) ಬೇಗೂರು (Beguru) ಸಮೀಪದ ಬಾಳಂಗಾಡು ಗ್ರಾಮದಲ್ಲಿ ನಡೆದಿತ್ತು. ಹತ್ಯೆಗೈದ ಆರೋಪಿಯನ್ನು 9 ಗಂಟೆಯೊಳಗೆ ಕೇರಳದಲ್ಲಿ ಬಂಧಿಸುವಲ್ಲಿ ವಿಶೇಷ ತನಿಖಾ ತಂಡ ಯಶಸ್ವಿಯಾಗಿದೆ.

    ಹತ್ಯೆಯಾದವರನ್ನು ಕರಿಯ (75) ಗೌರಿ (70) ನಾಗಿ (35) ಹಾಗೂ ಕಾವೇರಿ (7) ಎಂದು ಗುರುತಿಸಲಾಗಿದೆ. ಗಿರೀಶ್ (35) ಹತ್ಯೆಗೈದ ಆರೋಪಿಯಾಗಿದ್ದಾನೆ.ಇದನ್ನೂ ಓದಿ:Modi Very Smart Man, ಶ್ರೇಷ್ಠ ಪ್ರಧಾನಿ – ಸುಂಕ ಘರ್ಷಣೆ ನಡುವೆ ಮೋದಿ ಗುಣಗಾನ ಮಾಡಿದ ಟ್ರಂಪ್‌

    ಕೊಡಗಿನ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ಗುರುವಾರ ರಾತ್ರಿ ಈ ಅಮಾನುಷ ಹತ್ಯೆ ನಡೆದಿದೆ. ಬಾಳಂಗಾಡು ಎಂಬಲ್ಲಿ ಒಂಟಿ ಮನೆಯಲ್ಲಿ ಹತ್ಯೆಯಾದ ನಾಲ್ವರು ಸೇರಿದಂತೆ ಗಿರೀಶ್ ಕೂಡ ವಾಸವಾಗಿದ್ದರು. ಆರೋಪಿ ಗಿರೀಶ್ ನಾಗಿಯ ಮೂರನೇ ಗಂಡನಾಗಿದ್ದು, ಕಳೆದ ಒಂದು ವರ್ಷದಿಂದ ಒಟ್ಟಿಗೆ ನೆಲೆಸಿದ್ದರು. ಆದರೆ ನಾಗಿ ತನ್ನ ಎರಡನೇ ಪತಿಯೊಂದಿಗೆ ಮತ್ತೆ ಸಂಬಂಧ ಬೆಳೆಸಿದ್ದಾಳೆ ಎಂದು ಗಿರೀಶ್‌ಗೆ ಸಂಶಯ ವ್ಯಕ್ತವಾಗಿತ್ತು. ಇದರಿಂದ ಗುರುವಾರ ರಾತ್ರಿ ಎಲ್ಲರು ಮಲಗಿರುವಾಗ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ.

    ಮಾರನೇ ದಿನ ಶುಕ್ರವಾರ ಮದ್ಯಾಹ್ನ 1.30ರ ಸುಮಾರಿಗೆ ಪೊನ್ನಂಪೇಟೆ ಠಾಣೆಯ ಪೊಲೀಸರಿಗೆ (Ponnampete Police Staion)  ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನಿಡಿ, ಪರಿಶೀಲನೆ ನಡೆಸಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ವಿರಾಜಪೇಟೆ (Virajapet) ಉಪವಿಭಾಗದ ಡಿಎಸ್ಪಿರವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆಗಿಳಿಯಲಾಗಿತ್ತು. ಕೃತ್ಯ ನಡೆದ 6 ಗಂಟೆಯ ಒಳಗಾಗಿ ಕೇರಳದ ತಲಪುಳ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ.

    ಈ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉತ್ತಮ ರೀತಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜಾನ್ ಅವರು ಶ್ಲಾಘಿಸಿದ್ದಾರೆ.ಇದನ್ನೂ ಓದಿ:ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ ಸಮಸ್ಯೆ!

  • ಆಟವಾಡಲು ಕೆರೆಗೆ ಇಳಿದು ಉಸಿರು ಚೆಲ್ಲಿದ ಬಾಲಕಿ

    ಆಟವಾಡಲು ಕೆರೆಗೆ ಇಳಿದು ಉಸಿರು ಚೆಲ್ಲಿದ ಬಾಲಕಿ

    ಮಡಿಕೇರಿ: ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.

    ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಮೃತ ದುರ್ದೈವಿ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

    ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದರು. ಆದರೆ ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ ಕಿರುಚಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾರ್ಮಿಕರು ಇಬ್ಬರನ್ನು ರಕ್ಷಿಸಿದ್ದರು. ಈ ಬಾಲಕಿಯನ್ನು ಕೆಸರಿಂದ ಹೊರಕ್ಕೆ ತರುವ ಪ್ರಯತ್ನ ವಿಫಲವಾದ್ದರಿಂದ ಆಕೆ ಅಸುನೀಗಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: 59 ಬಾರಿ ಡ್ರಗ್ಸ್‌ ಸಾಗಾಟ ಮಾಡಿದ್ರೂ ವಿಮಾನ ನಿಲ್ದಾಣ ಸಿಕ್ಕಿ ಬಿದ್ದಿಲ್ಲ ಹೇಗೆ?

    ಚೆನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಗಿರುವ ಮೃತ ಬಾಲಕಿ ನಾಳೆ ವಾರ್ಷಿಕ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಬಾಲಕಿಯು ವಿಧಿಯೊಡ್ಡಿದ ಪರೀಕ್ಷೆಗೆ ಬಲಿಯಾಗಿರುವುದು ಶೋಚನೀಯವಾಗಿದೆ. ಗೋಣಿಕೊಪ್ಪ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊಡಗು | ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಯ ಕೈಮುರಿತ

    ಕೊಡಗು | ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಯ ಕೈಮುರಿತ

    ಮಡಿಕೇರಿ: ಜಿಲ್ಲೆಯ ಪೊನ್ನಂಪೇಟೆ (Ponnamapete) ತಾಲೂಕಿನ ಚೆನ್ನಂಗಿ ಬಸವನಹಳ್ಳಿಯ ಹಾಡಿಯಲ್ಲಿ ಕಾಡಾನೆ ದಾಳಿ ನಡೆಸಿದೆ. ಹಾಡಿ ನಿವಾಸಿ ಜೆ.ಹೆಚ್ ಚಂದ್ರ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಪರಿಣಾಮ ಕೈಮುರಿದಿದೆ.ಇದನ್ನೂ ಓದಿ:

    ನಿನ್ನೆ (ನ.14) ಸಂಜೆ ಹಾಡಿ ಸಮೀಪದಲ್ಲಿ ಚಂದ್ರ ನಡೆದುಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ತಕ್ಷಣವೇ ಆತನನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ವಿಷಯ ತಿಳಿದ ಬಳಿಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಸದ್ಯ ಹಾಡಿ ಸಮೀಪದಲ್ಲಿ ಇರುವ ಕಾಡಾನೆಯನ್ನು ಮೀಸಲು ಅರಣ್ಯ ಪ್ರದೇಶಕ್ಕೆ ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಸಜ್ಜಾಗಿದ್ದಾರೆ.ಇದನ್ನೂ ಓದಿ: