ತಮಿಳಿನ (Tamil) ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) (ED Raid) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬಂದಿರುವ ಪೊನ್ನಿಯಿನ್ ಸೆಲ್ವನ್ (Ponniyin Selvan) ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಹಲವು ಗಂಟೆಗಳಿಂದ ಸಂಸ್ಥೆ ಹಾಗೂ ಮಾಲೀಕರ ಮನೆ ಮೇಲೂ ದಾಳಿ ಮಾಡಿದ್ದಾರಂತೆ.
ಲೈಕಾ ಪ್ರೊಡಕ್ಷನ್ ((Lyca Production)) ದಕ್ಷಿಣ ಭಾರತದ ಅತ್ಯಂತ ದೊಡ್ಡ ನಿರ್ಮಾಣ ಸಂಸ್ಥೆ. ತಮಿಳಿನ ಬಹುತೇಕ ಸ್ಟಾರ್ ನಟರ ಚಿತ್ರಗಳಿಗೆ ಈ ಸಂಸ್ಥೆ ಹಣ ಹೂಡಿದೆ. ಪೊನ್ನಿಯಿನ್ ಸೆಲ್ವನ್ ಸಿನಿಮಾ ನಿರ್ಮಾಣಕ್ಕಾಗಿಯೇ ಅದು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಹೂಡಿತ್ತು. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿ ಬಂದಿತ್ತು. ಎರಡೂ ಭಾಗಗಳೂ ಸೂಪರ್ ಹಿಟ್ ಆಗಿವೆ. ಎಂಟು ನೂರು ಕೋಟಿಗೂ ಅಧಿಕ ಹಣವನ್ನು ವಾಪಸ್ಸು ತಂದುಕೊಟ್ಟಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮುಂದಿನ ಪೀಳಿಗೆಯೂ ಕೊಲ್ಲೂರಿಗೆ ಬರಬೇಕಂದ್ರೆ ‘ದಿ ಕೇರಳ ಸ್ಟೋರಿ’ ಮೂವಿ ನೋಡಿ
ಲೈಕಾ ಪ್ರೊಡಕ್ಷನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದರಿಂದ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಸ್ಥೆಗೆ ಸೇರಿದ ಒಟ್ಟು ಎಂಟು ಕಚೇರಿಗಳ ಮೇಲೆ ಇಡಿ ದಾಳಿ ನಡೆದಿದೆ. 2014ರಿಂದ ಈ ಸಂಸ್ಥೆಯನ್ನು ಪ್ರಾರಂಭಿಸಿರುವ ಎ ಸುಭಾಸ್ಕರನ್ (A. Subhaskaran) ಇದರ ಮಾಲೀಕರು. ಕತ್ತಿ, ದಿಯಾ, 2.0, ಡಾನ್ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣವಾಗಿದೆ.
ಮಣಿರತ್ನಂ (Mani Ratnam) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan) ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು, ತುಂಬಿದ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ಚಿತ್ರಕ್ಕೆ ಅತ್ಯದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮಣಿರತ್ನಂ ಅವರ ಅತ್ಯುತ್ತಮ ಸಿನಿಮಾಗಳಲ್ಲಿ ಇದು ಒಂದು ಎಂದು ಬಣ್ಣಿಸಲಾಗುತ್ತಿದೆ. ಆದರೆ, ತಮಿಳಿನ ಖ್ಯಾತ ಲೇಖಕ ಮುರುಗವೇಲು (Murugavelu) ನಿರ್ದೇಶಕ ಮಣಿರತ್ನಂ ವಿರುದ್ಧ ಕಿಡಿಕಾರಿದ್ದಾರೆ.
ಪೊನ್ನಿಯಿನ್ ಸೆಲ್ವನ್ ಸುಳ್ಳು ಕಥೆಯನ್ನು ಹೇಳುವ ಸಿನಿಮಾ. ಇತಿಹಾಸವನ್ನು ತಿರುಚಲಾಗಿದೆ. ಅಲ್ಲದೇ ಮಣಿರತ್ನಂ ಈ ಸಿನಿಮಾದಲ್ಲಿ ಹಿಂದುತ್ವವನ್ನು (Hindutva) ಹೇರಿಕೆ ಮಾಡಿದ್ದಾರೆ. ಪೊನ್ನಿಯಿನ್ ಸೆಲ್ವನ್ ಕಾದಂಬರಿಯಲ್ಲಿ ಕಲ್ಕಿ ಬರೆದಿದ್ದೇ ಬೇರೆ, ಸಿನಿಮಾದಲ್ಲಿ ತೋರಿಸಿದ್ದೇ ಬೇರೆ. ಮಂದಾಕಿನಿ ಸ್ವಾತಂತ್ರ್ಯವನ್ನು ನಿರ್ದೇಶಕರಿಗೆ ಸಹಿಸಿಕೊಳ್ಳಲು ಆಗಿಲ್ಲ. ಮಹಿಳೆಯರು ಬೇರೆ ಪುರುಷನ ಬಗ್ಗೆ ಯೋಚಿಸಬಾರದು ಎನ್ನುವ ಕೆಟ್ಟ ಸಂದೇಶವನ್ನು ಸಾರಿದ್ದಾರೆ ಎಂದಿದ್ದಾರೆ ಲೇಖಕ ಮುರುಗವೇಲು.
ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ -2’. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಇದನ್ನೂ ಓದಿ:ಹೊಸ ಪ್ರಾಜೆಕ್ಟ್‌ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಸಮಂತಾ- ಅನುಷ್ಕಾ ಶರ್ಮಾ
ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿತ್ತು. ನಿರೀಕ್ಷೆಯನ್ನು ನಿರ್ದೇಶಕರು ತುಂಬಿಕೊಟ್ಟಿದ್ದಾರೆ.
ಇಂದು ವಿಶ್ವದಾದ್ಯಂತ ರಿಲೀಸ್ ಆಗಿರುವ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾದಲ್ಲಿ ಅಂದುಕೊಂಡಂತೆ ಆಗಿದ್ದರೆ ಅನುಷ್ಕಾ ಶೆಟ್ಟಿ (Anushka Shetty) ನಟಿಸಬೇಕಿತ್ತು. ಸ್ವತಃ ನಿರ್ದೇಶಕ ಮಣಿರತ್ನಂ (Mani Ratnam) ಅವರೇ ಅನುಷ್ಕಾಗೆ ಕರೆ ಮಾಡಿ, ಮಹತ್ವದ ಪಾತ್ರವೊಂದನ್ನು ಮಾಡಬೇಕು ಎಂದು ಹೇಳಿದ್ದರಂತೆ. ಹೆಸರಾಂತ ನಿರ್ದೇಶಕರು ಕರೆ ಮಾಡಿದರೂ, ಆ ಆಫರ್ ಅನ್ನು ತಿರಸ್ಕಾರ ಮಾಡಿದರಂತೆ ಅನುಷ್ಕಾ. ಅದಕ್ಕೆ ಕಾರಣ ಮೀ ಟೂ (Me Too) ಎಂದು ಹೇಳಲಾಗುತ್ತಿದೆ.
ತಮಿಳು ಮಾಧ್ಯಮಗಳ ಸುದ್ದಿ ಮಾಡಿದಂತೆ, ಮೀ ಟೂ ಕಾರಣದಿಂದಾಗಿ ಪೊನ್ನಿಯಿನ್ ಸೆಲ್ವನ್ ಸಿನಿಮಾವನ್ನು ಅನುಷ್ಕಾ ಕೈ ಬಿಟ್ಟಿದ್ದಾರಂತೆ. ಐಶ್ವರ್ಯ ರೈ ಮಾಡಿರುವ ಪಾತ್ರವನ್ನೇ ಅನುಷ್ಕಾ ನಿರ್ವಹಿಸಬೇಕಿತ್ತಂತೆ. ಆದರೆ, ಮೀ ಟೂ ಆರೋಪಿತ ವ್ಯಕ್ತಿಯೊಬ್ಬರು ಆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದರಿಂದ ಅವರ ಜೊತೆ ನಾನು ಕೆಲಸ ಮಾಡಲಾರೆ ಎಂದು ಅನುಷ್ಕಾ ತಿರಸ್ಕಾರ ಮಾಡಿದ್ದಾರಂತೆ.
ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಗೀತರಚನೆಕಾರ ವೈರಮುತ್ತು (Vairamuthu) ಕೆಲಸ ಮಾಡಿದ್ದಾರೆ. ಇವರ ಮೇಲೆ ಅನೇಕರು ಮೀ ಟೂ ಆರೋಪವನ್ನು ಮಾಡಿದ್ದಾರೆ. ಹಾಗಾಗಿ ತಾವು ಈ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದು ನೇರವಾಗಿಯೇ ಅನುಷ್ಕಾ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತು ಅನುಷ್ಕಾ ಆಗಲಿ ಅಥವಾ ಚಿತ್ರತಂಡದ ಯಾವುದೇ ಸದಸ್ಯರಾಗಲಿ ಅಧಿಕೃತ ಹೇಳಿಕೆ ನೀಡದೇ ಇದ್ದರೂ, ತಮಿಳು ಚಿತ್ರೋದ್ಯಮದಲ್ಲಿ ಈ ವಿಷಯ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ
ಇಂದು ವಿಶ್ವದಾದ್ಯಂತ ರಿಲೀಸ್ ಆಗಿರುವ ‘ಪೊನ್ನಿಯಿನ್ ಸೆಲ್ವನ್ 2’ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪೊನ್ನಿಯಿನ್ ಸೆಲ್ವನ್ 1 ಚಿತ್ರವೂ ಸಾಕಷ್ಟು ಸದ್ದು ಮಾಡಿತ್ತು. ತ್ರಿಷಾ, ಐಶ್ವರ್ಯ ರೈ, ಚಿಯಾನ್ ವಿಕ್ರಮ್, ಕಾರ್ತಿ ಸೇರಿದಂತೆ ಬಹುತಾರಾಗಣವೇ ಸಿನಿಮಾದಲ್ಲಿದೆ. ಈ ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ನಟಿ ತಮ್ಮ ಕಾಲಿನ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದು, ಅಪಘಾತವಾದ ಕಾರಣ ವೆಕೇಶನ್‌ನಿಂದ ವಾಪಸ್ ಬರಬೇಕಾಯಿತು ಎಂದಿದ್ದಾರೆ. ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿ, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್
ಎರಡು ದಶಕಗಳಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ತ್ರಿಶಾ, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ವಯಸ್ಸು 40 ಸಮೀಪಿಸುತ್ತಿದ್ದರೂ ಯುವ ನಟಿಯರಿಗೂ ಕಮ್ಮಿಯಿಲ್ಲದ ನಟಿ, ಸ್ಟಾರ್ ಹೀರೋಯಿನ್ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇತ್ತೀಚೆಗೆ ಅವರು ಅಭಿನಯಿಸಿರುವ `ಪೊನ್ನಿಯನ್ ಸೆಲ್ವನ್’ (Ponniyin Selvan) ಭಾಗ-1 ಚಿತ್ರವು ಭರ್ಜರಿ ಪ್ರದರ್ಶನ ಕಾಣ್ತಿದ್ದು, ಈಗಾಗಲೇ ಸುಮಾರು 500 ಕೋಟಿ ಬಾಚಿಕೊಂಡಿದೆ.
ಮಲಯಾಳಂ ಸ್ಟಾರ್ ಮೋಹನ್ ಲಾಲ್ (Mohan Lal) ಅವರೊಂದಿಗೆ ನಟಿಸಿರುವ `ರಾಮ್’ ಮಲಯಾಳಂ (Malayalam) ಸಿನಿಮಾದ (Cinema) ಶೂಟಿಂಗ್ ಮುಗಿಸಿದ ತ್ರಿಶಾ ಯುರೋಪಿಯನ್ ದೇಶಗಳಿಗೆ ಪ್ರವಾಸ ಹೋಗಿದ್ದರು. ಈ ವೇಳೆ ಕಾಲಿಗೆ ಪೆಟ್ಟಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಭಾರತೀಯ ಸಿನಿಮಾ ರಂಗದ ಖ್ಯಾತ ನಟ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾವನ್ನು ಸಿನಿ ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ರೀತಿಯಲ್ಲಿ ಈ ಚಿತ್ರ ಕಲೆಕ್ಷನ್ ಮಾಡುತ್ತಿದೆ. ಈವರೆಗೂ 250 ಕೋಟಿಗೂ ಅಧಿಕ ಹಣವನ್ನು ಈ ಚಿತ್ರ ಗಳಿಸಿದೆ. ದೇಶಕ್ಕೆ ದೇಶವೇ ಈ ಸಿನಿಮಾವನ್ನು ಕೊಂಡಾಡುತ್ತಿರುವ ಹೊತ್ತಿನಲ್ಲಿ ತಮಿಳಿನ ಖ್ಯಾತ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಿನ್ನೆಯಷ್ಟೇ ಈ ಸಿನಿಮಾವನ್ನು ಕಮಲ್ ಹಾಸನ್ (Kamal Haasan) ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಮಲ್ ಹಾಸನ್, ಚಿತ್ರದ ಬಗ್ಗೆ ಸಾಕಷ್ಟು ಸಕಾರಾತ್ಮಕ ಮಾತುಗಳನ್ನು ಹೇಳಿದ್ದಾರೆ. ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎನ್ನುವುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಹೇಳಿದ್ದಾರೆ. ಆಂಧ್ರದಲ್ಲಿ ಈ ಚಿತ್ರಕ್ಕೆ ಬೆಂಬಲ ಸಿಗುತ್ತಿಲ್ಲ ಎನ್ನುವ ಹೇಳಿಕೆಯನ್ನು ಅಲ್ಲಗಳೆದಿರುವ ಅವರು, ಯಾರೋ ಹೇಳುತ್ತಾರೆ ಅಂತ ನಂಬೋದು ಬೇಡ. ತೆಲುಗಿನಲ್ಲೂ ಈ ಚಿತ್ರಕ್ಕೆ ಬೆಂಬಲ ವ್ಯಕ್ತವಾಗಿದೆ ಅಂದಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪೈಲ್ವಾನ್‌ಗಳು: ಎನು ಇದು ಹೊಸ ಟ್ವಿಸ್ಟ್
ಪೊನ್ನಿಯಿನ್ ಸೆಲ್ವನ್ ಸಿನಿಮಾದ ಕಥಾ ಹಂದರದ ಬಗ್ಗೆ ಮಾತನಾಡಿರುವ ಕಮಲ್, ಚೋಳ ರಾಜರು ಹಿಂದೂಗಳಲ್ಲ (Hindu) ಎಂದು ಹೇಳಿದ್ದು, ಈ ಮಾತೇ ವಿವಾದಕ್ಕೆ ಕಾರಣವಾಗಿದೆ. ಚೋಳ ರಾಜರು ಯಾಕೆ ಹಿಂದೂಗಳಲ್ಲ ಅನ್ನುವುದನ್ನೂ ವಿವರಿಸಿರುವ ಅವರು, ‘ಚೋಳನ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ರಾಜರಾಜ ಚೋಳನು ಆಳುತ್ತಿದ್ದ ವೇಳೆ ಶೈವ ಮತ್ತು ವೈಷ್ಣವ ಧರ್ಮ ಮಾತ್ರವಿತ್ತು. ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ನಮ್ಮನ್ನ ಹೇಗೆ ಕರೆಯಬೇಕು ಎಂದು ಅವರಿಗೆ ಗೊತ್ತಾಗಲಿಲ್ಲ. ಆನಂತರ ಅವರು ಹಿಂದೂ ಅಂತ ಕರೆದರು ಎಂದಿದ್ದಾರೆ.
ಕಮಲ್ ಹಾಸನ್ ಮಾತಿಗೂ ಮೊದಲು ತಮಿಳಿನ ಮತ್ತೋರ್ವ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಕೂಡ ‘ರಾಜರಾಜ ಚೋಳನು ಹಿಂದೂ ಆಗಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಪೊನ್ನಿಯಿನ್ ಸೆಲ್ವನ್ ಸಿನಿಮಾ ನೋಡಿದ ನಂತರ ಮಾತನಾಡಿದ್ದ ವೆಟ್ರಿಮಾರನ್ ‘ನಿರಂತರವಾಗಿ ನಮ್ಮಅಸ್ಮಿತೆಯನ್ನು ಕಸಿದುಕೊಳ್ಳಲಾಗುತ್ತಿದೆ. ವಳ್ಳುವರ್ ಅವರನ್ನು ಕೇಸರಿಕರಣ ಮಾಡುವುದು ಹಾಗೂ ರಾಜ ರಾಜ ಚೋಳನನ್ನು ಹಿಂದೂ ಎಂದು ಕರೆಯುವುದು ನಡೆದೇ ಇದೆ’ ಎಂದು ತಿವಿದಿದ್ದರು. ಅವರ ಮಾತು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.
ವೆಟ್ರಿಮಾರನ್ (Vetrimaran) ಆಡಿದ ಮಾತಿಗೆ ಬಿಜೆಪಿಯ ಮುಖಂಡ ಎಚ್.ರಾಜಾ (H.Raj) ಅವರು ಪ್ರತಿಕ್ರಿಯೆ ನೀಡಿ, ‘ನಿರ್ದೇಶಕ ವೆಟ್ರಿಮಾರನ್ ಅವರಿಗೆ ಇತಿಹಾಸ ಚೆನ್ನಾಗಿ ತಿಳಿದಿಲ್ಲ. ಅವರು ಇತಿಹಾಸವನ್ನು ಸರಿಯಾಗಿಯೂ ಓದಿಕೊಂಡಿಲ್ಲ. ರಾಜ ರಾಜ ಚೋಳನು ನಿರ್ಮಿಸಿದ ಎರಡು ಮಸೀದಿ ಅಥವಾ ಚರ್ಚ್ ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ. ಈ ಮಾತಿಗೆ ಪೂರಕ ಎನ್ನುವಂತೆ ಕಮಲ್ ಹಾಸನ್ ಮಾತನಾಡಿದ್ದಾರೆ. ವೆಟ್ರಿಮಾರನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ತಮಿಳಿನ ಮಣಿರತ್ನಂ (Mani Ratnam) ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಸಿನಿಮಾ ಈ ವಾರ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ರಿಲೀಸ್ ಆಗಿ ಮೂರೇ ದಿನಕ್ಕೆ 230 ಕೋಟಿಗೂ ಅಧಿಕ ಹಣ ಗಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಮೂರೇ ದಿನಕ್ಕೆ ಬಾಕ್ಸ್ ಆಫೀಸಿನಲ್ಲಿ(Box Office) ಧೂಳೆಬ್ಬಿಸಿದೆ.
ತಮಿಳು ಸಿನಿಮಾ ರಂಗದ ವಿಶ್ಲೇಷಕ ರಮೇಶ್ ಬಾಲಾ ಈ ಕುರಿತು ಬರೆದುಕೊಂಡಿದ್ದು, ಪೊನ್ನಿಯಿನ್ ಸೆಲ್ವನ್ (PS1) ಸಿನಿಮಾ ಬಹುತೇಕ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸಿನಲ್ಲಿ 130 ಕೋಟಿಗಳನ್ನು ಗಳಿಸಿದೆ ಎಂದು ಅವರು ಟ್ವಿಟ್ ಮಾಡಿದ್ದಾರೆ. ಇದು ವಿಶ್ವದಾದ್ಯಂತ ಗಳಿಸಿದ ಬಾಕ್ಸ್ ಆಫೀಸ್ ರಿಪೋರ್ಟ್ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್
ಕಾದಂಬರಿಕಾರ ಕಲ್ಕಿ ಕೃಷ್ಣಮೂರ್ತಿ (Kalki Krishnamurthy) ಅವರ ಕಾದಂಬರಿಯನ್ನು ಆಧರಿಸಿ ಪೊನ್ನಿಯಿನ್ ಸೆಲ್ವನ್ ಸಿನಿಮಾವನ್ನು ತಯಾರಿ ಮಾಡಿದ್ದು, ಐಶ್ವರ್ಯ ರೈ (Aishwarya Rai) , ತ್ರಿಶಾ, ಚಿಯಾನ್ ವಿಕ್ರಮ್, ಕಾರ್ತಿ ಸೇರಿದಂತೆ ದಿಗ್ಗಜ ಕಲಾವಿದರೇ ಈ ಸಿನಿಮಾದಲ್ಲಿ ಇದ್ದಾರೆ. ಎ.ಆರ್.ರೆಹಮಾನ್ (Rahman) ಸಂಗೀತ ಸಂಯೋಜನೆ ಚಿತ್ರಕ್ಕಿದೆ. ರವಿವರ್ಮನ್ ಅವರ ಸಿನಿಮಾಟೋಗ್ರಫಿ ಚಿತ್ರಕ್ಕೆ ಮತ್ತಷ್ಟು ಜೀವ ತುಂಬಿದೆ.
Live Tv
[brid partner=56869869 player=32851 video=960834 autoplay=true]
ನಿರೀಕ್ಷೆ ಮೂಡಿಸಿರುವಂತಹ ನಾಲ್ಕು ಚಿತ್ರಗಳು ನಾಳೆ ಕರ್ನಾಟಕದಲ್ಲಿ ರಿಲೀಸ್ ಆಗುತ್ತಿವೆ. ಈ ನಾಲ್ಕು ಸಿನಿಮಾಗಳಲ್ಲಿ ಮೂರು ಚಿತ್ರಗಳು ತಮ್ಮದೇ ಆದ ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿವೆ. ದಸರಾ ಹಬ್ಬದ ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ ಪ್ರೇಕ್ಷಕರು ಯಾವೆಲ್ಲ ಸಿನಿಮಾಗಳನ್ನು ನೋಡಲಿದ್ದಾರೆ ಮತ್ತು ಬಾಕ್ಸ್ ಆಫೀಸಿನಲ್ಲಿ ಯಾವ ಚಿತ್ರಗಳು ಗೆಲ್ಲುತ್ತವೆ ಎನ್ನುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ:ಗನ್ ಹಿಡಿದು ಫೀಲ್ಡಿಗಿಳಿದ ರಾಕಿಭಾಯ್: ಮುಂದಿನ ಸಿನಿಮಾಗೆ ಯಶ್ ತಯಾರಿ
ಮೇಕಿಂಗ್ ವಿಡಿಯೋ ಮತ್ತು ಕಥೆಯ ಕಾರಣದಿಂದಾಗಿ ರಿಷಭ್ ಶೆಟ್ಟಿ ನಟಿಸಿ, (Rishabh Shetty) ನಿರ್ದೇಶನ ಮಾಡಿರುವ ಕಾಂತಾರ (Kantara) ಸಿನಿಮಾ ನಾಳೆ ಬಿಡುಗಡೆ ಆಗುತ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಮಂಗಳೂರು ನೆಲದ ದೇಸಿ ಕಥೆಯನ್ನು ಈ ಸಿನಿಮಾದಲ್ಲಿ ಹೇಳುತ್ತಿದ್ದಾರಂತೆ ರಿಷಭ್. ಕಾಡು ಮತ್ತು ಮನುಷ್ಯನ ನಡುವಿನ ಸಂಘರ್ಷವನ್ನು ಸೂಕ್ಷ್ಮವಾಗಿ ಈ ಸಿನಿಮಾದಲ್ಲಿ ಹೇಳುತ್ತಿದ್ದು, ಕಿಶೋರ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದ ತಾರಾಗಣದಲ್ಲಿ ಇದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಈ ಸಿನಿಮಾ ಮೂಡಿ ಬಂದಿದೆ.
ಭಾವೈಕ್ಯತೆಯ ಸಂದೇಶ ಸಾರುವ ಕಥಾಹಂದರ ಇರುವ ಚಿತ್ರ ತೋತಾಪುರಿ (Totapuri) ಈವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಕೆ.ಎ.ಸುರೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ನವರಸನಾಯಕ ಜಗ್ಗೇಶ್ (Jaggesh) ಹಾಗೂ ಅದಿತಿ ಪ್ರಭುದೇವಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ವಿಜಯ್ ಪ್ರಸಾದ್ ಅವರ ನಿರ್ದೇಶನವಿದೆ. ಕಾನ್‌ಸ್ಟಿಟ್ಯೂಷನ್ ಅಡಿಯಲ್ಲಿ ಬದುಕುತ್ತಿರುವ ನಾವೆಲ್ಲರೂ ಅಣ್ಣ ತಮ್ಮಂದಿರು ಎಂಬ ಅದ್ಭುತವಾದ ಸಂದೇಶ ಇರುವ ತೋತಾಪುರಿಯಲ್ಲಿ ಉಪ್ಪು, ಹುಳಿ, ಖಾರ ಎಲ್ಲದರ ಸಮನಾದ ಮಿಶ್ರಣವಿದೆ ಚಿತ್ರದಲ್ಲಿ ಒಬ್ಬ ಮುಸ್ಲಿಂ ಯುವತಿಯಾಗಿ ನಾಯಕಿ ಅದಿತಿ ಪ್ರಭುದೇವಾ ಕಾಣಿಸಿಕೊಂಡಿದ್ದಾರೆ. ಡಾಲಿ ಧನಂಜಯ್, ಸುಮನ್ ರಂಗನಾಥ್, ವೀಣಾಸುಂದರ್, ಹೇಮಾದತ್, ದತ್ತಣ್ಣ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ಮಣಿರತ್ನಂ (Mani Ratnam) ನಿರ್ದೇಶನದಲ್ಲಿ ಮೂಡಿ ಬಂದಿರುವ ಪೊನ್ನಿಯಿನ್ ಸೆಲ್ವನ್ (Ponniyin Selvan) ಕೂಡ ನಾಳೆ ರಿಲೀಸ್ ಆಗುತ್ತಿದೆ. ತಮಿಳು, ತೆಲುಗು ಮತ್ತು ಕನ್ನಡ ಮೂರು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಇದೊಂದು ಭಾರೀ ಬಜೆಟ್ ಸಿನಿಮಾ ಕೂಡ ಆಗಿದೆ. ಇದೊಂದು ಕಾದಂಬರಿ ಆಧರಿಸಿದ ಸಿನಿಮಾವಾಗಿದ್ದು, 1955 ಚೋಳರ ಆಳ್ವಿಕೆಯ ಸುತ್ತ ಹೆಣೆದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ನೈಜ ಘಟನೆಯ ಜೊತೆಗೆ ಫ್ಯಾಂಟಸಿ ಕೂಡ ಮಿಕ್ಸ್ ಆಗಿರುವುದು ಸಿನಿಮಾದ ವಿಶೇಷಗಳಲ್ಲಿ ಒಂದು. ವಿಕ್ರಮ್, ಐಶ್ವರ್ಯ ರೈ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ.
ಈ ಸಿನಿಮಾಗಳ ಜೊತೆಗೆ ವಿಕ್ರಮ್ ವೇದ (Vikram Veda) ಕೂಡ ನಾಳೆಯೇ ಬಿಡುಗಡೆ ಆಗುತ್ತಿದೆ. ಹೀಗಾಗಿ ಸಹಜವಾಗಿಯೇ ಸ್ಯಾಂಡಲ್ ವುಡ್ ನಲ್ಲಿ ಸಂಭ್ರಮ ಮನೆ ಮಾಡಿದೆ. ಬಹುತೇಕ ಚಿತ್ರಗಳು ನಿರೀಕ್ಷೆ ಮೂಡಿಸಿರುವುದರಿಂದ ಯಾರೆಲ್ಲ ಯಾವ ಸಿನಿಮಾಗಳನ್ನು ನೋಡಲಿದ್ದಾರೆ ಮತ್ತು ಬಾಕ್ಸ್ ಆಫೀಸಿನಲ್ಲಿ ಯಾವ ಚಿತ್ರಗಳಿಗೆ ಗೆಲುವು ಸಿಗಲಿದೆ ಎಂದು ಕಾದು ನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಕಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ `ಪೊನ್ನಿಯನ್ ಸೆಲ್ವನ್'(Ponniyin Selvan) ಚಿತ್ರ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಈ ಚಿತ್ರದ ಅದ್ದೂರಿ ಇವೆಂಟ್‌ನಲ್ಲಿ ರಜನಿಕಾಂತ್(Rajanikanth) ಮತ್ತು ಕಮಲ್ ಹಾಸನ್ (Kamal Haasan) ಕೂಡ ಭಾಗವಹಿಸಿ, ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ.
ಮಣಿರತ್ನಂ (Mani Ratnam) ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ರಜನಿಕಾಂತ್ ಮತ್ತು ಕಮಲ್ ಹಾಸನ್ ಹೈಲೈಟ್ ಆಗಿದ್ದರು. ಈ ವೇಳೆ ರಜನಿಕಾಂತ್ ಜತೆಗಿನ ಸ್ನೇಹ ಮತ್ತು ಸಿನಿಮಾ ಕುಟುಂಬವನ್ನ ಉದ್ದೇಶಿಸಿ ಕಮಲ್ ಹಾಸನ್ ಮಾತನಾಡಿದ್ದಾರೆ. ಇದನ್ನೂ ಓದಿ:`ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ
40 ವರ್ಷಗಳಿಂದ ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರು ಸ್ನೇಹಿತರು. ನಮ್ಮ ನಡುವೆ ಅಸೂಯೆಗೆ ಜಾಗವಿಲ್ಲ. ಸಿನಿಮಾ ಒಂದು ಕುಟುಂಬ, ಇಲ್ಲಿ ಅಸೂಯೆಗೆ ಜಾಗವಿಲ್ಲ ಎಂದು ನಟ ಕಮಲ್ ಮಾತನಾಡಿದ್ದಾರೆ. ಇನ್ನು 30 ವರ್ಷಗಳ ಹಿಂದೆಯೇ `ಪೊನ್ನಿಯನ್ ಸೆಲ್ವನ್’ ಚಿತ್ರವನ್ನು ಕಮಲ್ ಮತ್ತು ರಜನಿಕಾಂತ್ ಒಟ್ಟಿಗೆ ಮಾಡಲು ನಿರ್ಧರಿಸಲಾಗಿತ್ತು ಎಂಬ ವಿಚಾರ ಈ ಇವೆಂಟ್‌ನಲ್ಲಿ ಬಹಿರಂಗಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ನಾಲ್ಕು ವರ್ಷಗಳ ನಂತರ ಮತ್ತೆ ನಟನೆಗೆ ಮರಳಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಮೂಲಕ ಕನ್ನಡ ಸಿನಿಪ್ರೇಕ್ಷಕರಿಗೆ ಕರಾವಳಿ ಬೆಡಗಿ ಐಶ್ವರ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಿಶ್ವ ಸುಂದರಿ ಐಶ್ವರ್ಯ ಬಾಲಿವುಡ್ ಮತ್ತು ತೆಲುಗು ಮತ್ತು ತಮಿಳು ಸಿನಿಮಾಗಳ ಮೂಲಕ ಗಮನ ಸೆಳೆದಿದ್ದರು. ಇದೀಗ `ಮಣಿರತ್ನಂ’ ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಚಿತ್ರದ ಮೂಲಕ ಕರಾವಳಿ ನಟಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಈ ಚಿತ್ರದ ಲುಕ್ ಕೂಡ ಚಿತ್ರತಂಡ ರಿವೀಲ್ ಮಾಡಿದ್ದು, ಮಹಾರಾಣಿಯಂತೆ ಐಶ್ವರ್ಯ ರೈ ಕಂಗೊಳಿಸುತ್ತಿದ್ದಾರೆ. ಈ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ.ಇದನ್ನೂ ಓದಿ: ಕಾಫಿ ವಿತ್ ಕರಣ್ ಶೋದಲ್ಲಿ ಕಾಣಿಸಿಕೊಳ್ಳಲು ಕೋಟಿ ರೂ ಕೇಳಿದ್ರಾ ರಣಬೀರ್ ಕಪೂರ್
ಎಂದೂ ಮಾಡಿರದ ಭಿನ್ನ ಪಾತ್ರದಲ್ಲಿ ಐಶ್ವರ್ಯ ರೈ ಕಾಣಿಸಿಕೊಳ್ತಿದ್ದಾರೆ. ನಂದಿನಿ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇದೀಗ ಮಹಾರಾಣಿಯಂತೆ ಕಂಗೊಳಿಸುತ್ತಿರುವ ನಟಿಯ ಪೋಸ್ಟರ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನು ಜನಪ್ರಿಯ ಕಲ್ಕಿ ಕೃಷ್ಣಮೂರ್ತಿ ಅವರ ಐತಿಹಾಸಿಕ ಕಾದಂಬರಿ ಆಧರಿಸಿ `ಪೊನ್ನಿಯನ್ ಸೆಲ್ವನ್’ ಚಿತ್ರ ಮಾಡಲಾಗಿದೆ. ಇನ್ನೂ ಐಶ್ವರ್ಯ ರೈ ಜತೆ ಕಾರ್ತಿ, ತ್ರಿಷಾ, ವಿಕ್ರಮ್,ಪ್ರಕಾಶ್ ರಾಜ್, ಜಯರಾಮ್, ಜಯಂ ರವಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಕನ್ನಡ ಸೇರಿದಂತೆ ಹಿಂದಿ,ತಮಿಳು, ತೆಲುಗು ಮತ್ತು ಹಿಂದಿ ವರ್ಷನ್‌ನಲ್ಲಿ ಈ ವರ್ಷ ಸೆಪ್ಟೆಂಬರ್ 30ಕ್ಕೆ ತೆರೆಗೆ ಅಬ್ಬರಿಸಲಿದೆ.
Live Tv
[brid partner=56869869 player=32851 video=960834 autoplay=true]