Tag: Pooja Gehlot

  • ನನ್ನ ತಪ್ಪುಗಳಿಂದ ರಾಷ್ಟ್ರಗೀತೆ ಮೊಳಗಲಿಲ್ಲ – ಅದು ತಪ್ಪಲ್ಲ ಕ್ಷಮೆ ಕೇಳುವ ಅಗತ್ಯವಿಲ್ಲ: ಮೋದಿ

    ನನ್ನ ತಪ್ಪುಗಳಿಂದ ರಾಷ್ಟ್ರಗೀತೆ ಮೊಳಗಲಿಲ್ಲ – ಅದು ತಪ್ಪಲ್ಲ ಕ್ಷಮೆ ಕೇಳುವ ಅಗತ್ಯವಿಲ್ಲ: ಮೋದಿ

    ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು 40ಕ್ಕೂ ಹೆಚ್ಚು ಪದಕ ಗೆದ್ದು ಕೀರ್ತಿ ಪತಾಕೆ ಹಾರಿಸಿದ್ದಾರೆ. ಈ ನಡುವೆ ಕುಸ್ತಿಯಲ್ಲಿ ಚಿನ್ನದ ಪದಕ ಗೆಲ್ಲಲು ವಿಫಲವಾದ ಪೂಜಾ ಗೆಹ್ಲೋಟ್ ಆಡಿದ ಬೇಸರದ ನುಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಧಾನದ ಮಾತುಗಳಿಂದ ಕ್ರೀಡಾಪಟುವಿಗೆ ಧೈರ್ಯ ತುಂಬಿದ್ದಾರೆ.

    ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಸ್ಕಾಟ್ಲೆಂಡ್‍ನ ಕ್ರಿಸ್ಟೆಲ್ಲೆ ಲೆಮೊಫ್ಯಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು. ಆ ಬಳಿಕ ಸಂಭ್ರಮ ಹಂಚಿಕೊಳ್ಳುತ್ತ ಪೂಜಾ ಗೆಹ್ಲೋಟ್, ನಾನು ನನ್ನ ದೇಶವಾಸಿಗಳೊಂದಿಗೆ ಕ್ಷಮೆಯಾಚಿಸುತ್ತೇನೆ. ವಿಜಯ ವೇದಿಕೆಯಲ್ಲಿ ನಾನಿರುವಾಗ ನಮ್ಮ ದೇಶದ ರಾಷ್ಟ್ರಗೀತೆ ಮೊಳಗಬೇಕೆಂದು ನಾನು ಬಯಸಿದ್ದೆ. ಆದರೆ ನನ್ನ ತಪ್ಪುಗಳಿಂದ ಈ ಅವಕಾಶ ಸಿಗಲಿಲ್ಲ. ಈ ಸೋಲಿನಿಂದ ಪಾಠ ಕಲಿತು ಮುಂದೆ ಮುನ್ನಡೆಯುತ್ತೇನೆ ಎಂದಿದ್ದರು. ಇದನ್ನೂ ಓದಿ: ಇದು ಯಾವ್ ಶಾಟ್ ಗುರು – ಪಂತ್ ಕಾಲೆಳೆದ ನೆಟ್ಟಿಗರು

    ಪೂಜಾ ಗೆಹ್ಲೋಟ್ ಆಡಿದ ಈ ಮಾತುಗಳನ್ನು ಕೇಳಿಸಿಕೊಂಡ ಬಳಿಕ ಮೋದಿ, ನಿಮ್ಮ ಪದಕವು ದೇಶದ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ನೀವು ಕ್ಷಮೆ ಕೇಳುವ ಅಗತ್ಯವಿಲ್ಲ. ನಿಮ್ಮ ಜೀವನ ಪಯಣ ನಮ್ಮನ್ನು ಪ್ರೇರೇಪಿಸುತ್ತದೆ, ನಿಮ್ಮ ಯಶಸ್ಸು ನಮಗೆ ಸಂತೋಷವನ್ನು ನೀಡುತ್ತದೆ. ನೀವು ಮುಂದೆ ಮಹತ್ತರವಾದ ಗುರಿ ಹೊಂದಿದ್ದೀರಿ. ಮುಂದಿನ ದಿನಗಳಲ್ಲೂ ಇದೇ ರೀತಿ ಹೊಳೆಯುತ್ತಿರಿ ಎಂದು ಟ್ವಿಟ್ಟರ್ ಮೂಲಕ ಪೂಜಾ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ಅಫ್ರಿದಿಯನ್ನು ಹಿಂದಿಕ್ಕಿದ ಹಿಟ್‌ಮ್ಯಾನ್‌ – ಭಾರತಕ್ಕೆ ಸರಣಿ ಜಯ

    ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಭರ್ಜರಿ ಪದಕ ಬೇಟೆಯಾಡಿದ್ದಾರೆ. ಈವರೆಗೆ 13 ಚಿನ್ನ, 11 ಬೆಳ್ಳಿ, 16 ಕಂಚು ಸೇರಿ ಒಟ್ಟು 40 ಪದಕ ಗೆದ್ದಿದ್ದಾರೆ. 10ನೇ ದಿನವಾದ ಇಂದು ಇನ್ನಷ್ಟು ಪದಕ ಗೆಲ್ಲುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

  • CWG 2022: ಚಿನ್ನಕ್ಕೆ ಮುತ್ತಿಟ್ಟ ರವಿ ಕುಮಾರ್ ದಹಿಯಾ, ವಿನೇಶ್ ಫೋಗಟ್ – ಪೂಜಾ ಗೆಹ್ಲೋಟ್‍ಗೆ ಕಂಚು

    CWG 2022: ಚಿನ್ನಕ್ಕೆ ಮುತ್ತಿಟ್ಟ ರವಿ ಕುಮಾರ್ ದಹಿಯಾ, ವಿನೇಶ್ ಫೋಗಟ್ – ಪೂಜಾ ಗೆಹ್ಲೋಟ್‍ಗೆ ಕಂಚು

    ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ 9ನೇ ದಿನ ಭಾರತದ ಕುಸ್ತಿ ಪಟುಗಳು ಗೆಲುವಿನ ನಗೆ ಬೀರಿದ್ದಾರೆ. ರವಿ ಕುಮಾರ್ ದಹಿಯಾ, ವಿನೇಶ್ ಫೋಗಟ್ ಚಿನ್ನದ ಪದಕ ಗೆದ್ದರೆ, ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆದ್ದು ಭಾರತಕ್ಕೆ ಸಂಭ್ರಮ ತಂದಿದ್ದಾರೆ.

    ಪುರುಷರ 57 ಕೆಜಿ ವಿಭಾಗದ ಕುಸ್ತಿಯಲ್ಲಿ ರವಿ ಕುಮಾರ್ ದಹಿಯಾ, ಎಬಿಕೆವೆನಿಮೊ ವೆಲ್ಸನ್ ಅವರನ್ನು 10-0 ಅಂತರದಿಂದ ಸೋಲಿಸಿ ಚಿನ್ನದ ಪದಕ ಗೆದ್ದು ಬೀಗಿದರು. ಇತ್ತ ಮಹಿಳೆಯರ 53 ಕೆಜಿ ವಿಭಾಗದಲ್ಲಿ ವಿನೇಶ್ ಫೋಗಟ್ ಚಿನ್ನ ಗೆದ್ದು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಹ್ಯಾಟ್ರಿಕ್‌ ಪದಕ ಗೆದ್ದ ಮೊದಲ ಮಹಿಳಾ ಕುಸ್ತಿಪಟು ಎಂಬ ದಾಖಲೆ ಬರೆದಿದ್ದಾರೆ. ಇವರೊಂದಿಗೆ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಸ್ಕಾಟ್ಲೆಂಡ್‍ನ ಕ್ರಿಸ್ಟೆಲ್ಲೆ ಲೆಮೊಫ್ಯಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದರು. ಇದನ್ನೂ ಓದಿ: CWG 2022: ಬಾಕ್ಸಿಂಗ್‍ನಲ್ಲಿ ಮೊದಲ ಪದಕ – ಕಂಚು ಗೆದ್ದ ಜಾಸ್ಮಿನ್ ಲಂಬೋರಿಯಾ

    ಈ ಮೊದಲು ಮಹಿಳೆಯರ 57-60 ಕೆಜಿ ವಿಭಾಗದ ಬಾಕ್ಸಿಂಗ್‍ನಲ್ಲಿ ಜೈಸ್ಮಿನ್ ಲಂಬೋರಿಯಾ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಕಾಮನ್‍ವೆಲ್ತ್ ಕ್ರೀಡಾಕೂಟದ 9ನೇ ದಿನ ಕುಸ್ತಿಯಲ್ಲಿ 2 ಚಿನ್ನ 1 ಕಂಚು ಸೇರಿ ಒಟ್ಟು ಮೂರು ಪದಕ ಭಾರತಕ್ಕೆ ಸಿಕ್ಕಿದೆ. ಇದನ್ನೂ ಓದಿ: CWG 2022: ಲಾನ್ ಬಾಲ್ಸ್‌ನಲ್ಲಿ ರಜತ ಪದಕ ಗೆದ್ದ ಭಾರತದ ಪುರುಷರ ತಂಡ

    ಈ ಮೂಲಕ ಭಾರತ ತಂಡ 11 ಚಿನ್ನ, 11 ಬೆಳ್ಳಿ, 11 ಕಂಚಿನ ಪದಕದೊಂದಿಗೆ ಒಟ್ಟು 33 ಪದಕ ಬಾಚಿಕೊಂಡು ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದೆ.

    Live Tv
    [brid partner=56869869 player=32851 video=960834 autoplay=true]