Tag: POP Ganesha

  • ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

    ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

    ಬೆಂಗಳೂರು: ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ (Ganesha) ಪರಿಸರದಿಂದಲೇ (ಮಣ್ಣಿನಿಂದ) ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ (Eshwar Khandre) ನಾಡಿನ ಜನತೆಗೆ ಮನವಿ ಮಾಡಿದ್ದಾರೆ.

    ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪೂಜಿಸುವುದು ಅನೂಚಾನವಾಗಿ ನಡೆದುಬಂದಿರುವ ಸಂಪ್ರದಾಯ. ಆದರೆ ಇತ್ತೀಚಿನ ವರ್ಷಗಳಲ್ಲಿ ನೀರಲ್ಲಿ ಕರಗದ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ವಿಷಕಾರಿಯಾದ ಭಾರಲೋಹಯುಕ್ತ ರಾಸಾಯನಿಕ ಬಣ್ಣ ಲೇಪಿತ – ಪಿಓಪಿ (POP) ಮೂರ್ತಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ವಿಸರ್ಜನೆಯಿಂದ ಜಲಚರಗಳು, ಪಶುಪಕ್ಷಿಗಳ ಸಾವಿಗೆ ಕಾರಣವಾಗುತ್ತಿದೆ ಎಂದೂ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

    ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ. ಪ್ರಜ್ಞಾವಂತ, ಜವಾಬ್ದಾರಿಯುತ ನಾಗರಿಕರು, ಧಾರ್ಮಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರವೇ ಪೂಜಿಸಿ ಪರಿಸರ ಉಳಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

    ಪಿಓಪಿ ಗಣೇಶ ವಿಗ್ರಹಗಳನ್ನು ಕ್ಯಾಲ್ಷಿಯಂ, ಸಲ್ಫೇಟ್, ಹೆಮಿಹೈಡ್ರೇಟ್‌ಯುಕ್ತ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುತ್ತವೆ. ಇಂತಹ ಮೂರ್ತಿಗಳಿಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು

    ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವು ಉಂಟು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಆದರೆ ಪರಿಸರಕ್ಕೆ ಮಾರಕವಾದ ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ರಾಜ್ಯ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿಯಾದ ಮಣ್ಣಿನ ಮೂರ್ತಿಗಳನ್ನು ಪೂಜಿಸಿ ಪರಿಸರ ಉಳಿಸುವಂತೆ ಕೋರಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ NDA ಉಪರಾಷ್ಟ್ರಪತಿ ಅಭ್ಯರ್ಥಿ

  • 10 ಲಕ್ಷ ರೂ. ಬೆಲೆಬಾಳುವ 281 ಪಿಒಪಿ ಗಣೇಶನ ಮೂರ್ತಿ ಜಪ್ತಿ

    10 ಲಕ್ಷ ರೂ. ಬೆಲೆಬಾಳುವ 281 ಪಿಒಪಿ ಗಣೇಶನ ಮೂರ್ತಿ ಜಪ್ತಿ

    ಬೆಂಗಳೂರು: ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪಿಒಪಿ ಗಣೇಶ ಮಾರಾಟ ಮಳಿಗೆಗಳ ಮೇಲೆ ಇಂದು ದಾಳಿ ಮಾಡಿದ್ದಾರೆ.

    ಇಂದು ದಕ್ಷಿಣ ವಲಯದ ಆರೋಗ್ಯಾಧಿಕಾರಿಗಳಿಂದ ಪಿಒಪಿ ಗಣೇಶ ಮೂರ್ತಿಗಳ ಮುಟ್ಟುಗೋಲು ಕಾರ್ಯಾಚರಣೆ ಮಾಡಿದರು. ನಗರದ ಮಿನರ್ವ ಸರ್ಕಲ್ ನಲ್ಲಿರೋ ಮಳಿಗೆಗಳು ಮತ್ತು ಲಾಲ್ ಬಾಗ್ ಪಶ್ಚಿಮ ದ್ವಾರದ ಆರ್ ವಿ ರಸ್ತೆಯ ಮಾವಳ್ಳಿ ಸುತ್ತ ಮುತ್ತ ಪಿಒಪಿ ಮೂರ್ತಿಗಳ ತಯಾರಿಕ ಮತ್ತು ಮಾರಾಟ ಕೇಂದ್ರಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದರು.

    ಈ ವೇಳೆ 10 ಲಕ್ಷ ರೂ. ಬೆಲೆಬಾಳುವ 281 ಗಣೇಶನ ಮೂರ್ತಿಗಳನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಅಲ್ಲದೆ ಪ್ಯಾಸ್ಟರ್ ಪ್ಯಾರಿಸ್ ಗಣೇಶ ಪರಿಸರಕ್ಕೆ ಹಾನಿ ಹೀಗಾಗಿ 2016 ರಲ್ಲೇ ಗಣೇಶ ಮೂರ್ತಿ ಮಾರಾಟಕ್ಕೆ ನಿಷೇಧ ಹೇರಿರೊ ವಿಚಾರವನ್ನು ಮನವರಿಕೆ ಮಾಡಿದರು.

    ಆದರೆ ವ್ಯಾಪಾರಿಗಳು ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲು ಒಪ್ಪಲಿಲ್ಲ. ಪರಿಣಾಮ ಸ್ಥಳದಲ್ಲಿ ಅಧಿಕಾರಿ ಮತ್ತು ವ್ಯಾಪಾರಿಗಳ ನಡುವೆ ಗಂಟೆಗಟ್ಟಲೆ ವಾಗ್ವಾದ ನಡೆಯಿತು. ಕಡೆಯದಾಗಿ ಪಾಲಿಕೆ ಅಧಿಕಾರಿಗಳು ಪೊಲೀಸರ ಸಹಾಯ ಪಡೆದು ಗಣೇಶ ಮೂರ್ತಿ ಸೀಜ್ ಗೆ ಮುಂದಾಗಿದ್ದು, ಹಂತ ಹಂತವಾಗಿ ಗಣೇಶ ಮೂರ್ತಿಗಳನ್ನ ವಶಕ್ಕೆ ಪಡೆಯುವುದಾಗಿ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.