Tag: posco

  • ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ (Jani Master) ಕೇಂದ್ರ ಸರ್ಕಾರ ದೊಡ್ಡ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (National Film Awards) ರದ್ದುಗೊಳಿಸಿದೆ.

    ಇತ್ತೀಚೆಗೆ ಜಾನಿ ಮಾಸ್ಟರ್‌ ವಿರುದ್ಧ ತಮ್ಮ ಸಹಾಯಕ ನೃತ್ಯ ಸಂಯೋಜಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳಿನ `ತಿರುಚಿತ್ರಂಬಲಂʼ ಚಿತ್ರದ ʻಮೇಘಂ ಕರುಕಥʼ ಗೀತೆಗಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ ಜಂಟಿಯಾಗಿ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಅಕ್ಟೋಬರ್‌ 8 ರಂದು ದೆಹಲಿಯಲ್ಲಿ ಆಯೋಜನೆಯಾಗಿದೆ. ರಾಷ್ಟ್ರಪತಿಗಳು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

    ಅಕ್ಟೋಬರ್‌ 8ರ ಸಮಾರಂಭಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿವೆ. ಈ ನಡುವೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಮತ್ತು ನ್ಯಾಯಾಲಯ ಪರಿಗಣಿಸಿ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

  • ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು

    ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು

    ಬೆಂಗಳೂರು: 2 ವರ್ಷದ ಹೆಣ್ಣು ಮಗುವಿನ ಮೇಲೆ ತನ್ನ ದೊಡ್ಡಪ್ಪನೇ ಅತ್ಯಾಚಾರ ಎಸಗಿದ್ದು, ತೀವ್ರ ರಕ್ತಸ್ರಾವದಿಂದ ಮಗು ಮೃತಪಟ್ಟಿರುವ ಘಟನೆ ಆನೆಕಲ್ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ದೀಪು ಎಂದು ಗುರುತಿಸಲಾಗಿದ್ದು, ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಘಟನೆ?
    ದೀಪು ಕಳೆದ 10 ದಿನಗಳ ಹಿಂದೆ ದೊಡ್ಡಬಳ್ಳಾಪುರದಿಂದ ತನ್ನ ತಮ್ಮನ 2 ವರ್ಷದ ಹೆಣ್ಣುಮಗಳನ್ನು ಊರಿನಿಂದ ಅತ್ತಿಬೆಲೆಗೆ ಕರೆತಂದಿದ್ದ.  ಅಂತೆಯೇ ಒಂದು ದಿನ ನೆರಳೂರು ಗೇಟ್ ಬಳಿ ಚಿಕನ್ ತರಲು ಸ್ನೇಹಿತನ ಜೊತೆಗೂಡಿ ಮಗುವನ್ನೂ ಕರೆದೊಯ್ದಿದ್ದ. ಮಾರ್ಗಮಧ್ಯದಲ್ಲಿ ಸ್ನೇಹಿತನನ್ನು ಮದ್ಯ ತರಲು ಕಳುಹಿಸಿದ್ದಾನೆ. ಇದೇ ವೇಳೆ ಕಾರಿನಲ್ಲೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪೈಶಾಚಿಕ ಕೃತ್ಯದಿಂದ ನಲುಗಿದ್ದ ಮಗುವಿನ ಗುಪ್ತಾಂಗದಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ಸ್ಫೋಟ- ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ಸುನೀಲ್ ಕುಮಾರ್

    ಅತ್ಯಾಚಾರ ಎಸಗಿದ ಬಳಿಕ ಮಗು ಸ್ತಬ್ಧವಾಗಿದ್ದನ್ನು ಕಂಡು ಆತಂಕಗೊಂಡ ದೀಪು, ಅತ್ತಿಬೆಲೆಯ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಮಗುವಿನ ತಲೆಗೆ ಗಾಯ ಆಗಿದೆ ಎಂದು ಸುಳ್ಳು ಹೇಳಿ ಚಿಕಿತ್ಸೆ ಕೊಡಿಸಲು ಯತ್ನಿಸಿದ್ದಾನೆ. ಆದರೆ ಮಗು ಮೃತಪಟ್ಟಿತ್ತು. ನಂತರ ಸ್ಥಳೀಯ ಪೊಲೀಸ್ ಠಾಣೆಗೆ ತಾನೇ ಹೋಗಿ, ಹಠಾತ್ತನೆ ಕಾರಿನ ಬ್ರೇಕ್ ಹಾಕಿದ್ದರಿಂದ ಬಿದ್ದು ಮಗುವಿನ ತಲೆಗೆ ಪೆಟ್ಟಾಗಿ ಮೃತಪಟ್ಟಿದೆ ಎಂದು ದೂರು ದಾಖಲಿಸಿದ್ದ.

    ಇತ್ತ ಈತನ ನಡವಳಿಕೆ ಬಗ್ಗೆ ಪೊಲೀಸರು ಅನುಮಾನಗೊಂಡಿದ್ದು, ಮಗುವಿನ ಮರಣೋತ್ತರ ಪರೀಕ್ಷೆಗೆ ಶಿಫಾರಸು ಮಾಡಿದ್ದರು. ಈಗ ಮಗುವಿನ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಮಗುವನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಆರೋಪಿ ದೀಪು ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

  • ಉಳ್ಳಾಲದ ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ : ಉಸ್ತಾದ್ ಬಂಧನ

    ಉಳ್ಳಾಲದ ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ : ಉಸ್ತಾದ್ ಬಂಧನ

    ಮಂಗಳೂರು: ಚೈಲ್ಡ್ ಕೇರ್ ಕೇಂದ್ರದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಒಂದು ಚೈಲ್ಡ್ ಕೇರ್ ಕೇಂದ್ರದಲ್ಲಿ 14 ವರ್ಷದ ಅಪ್ರಾಪ್ತ ಬಾಲಕನಿಗೆ ಕೇಂದ್ರದ ಉಸ್ತಾದ್ ನಿಂದಲೇ ಕಿರುಕುಳ ಆಗಿದೆ. ಕಿರುಕುಳ ನೀಡಿದ ಕೋಣಾಜೆ ಮೂಲದ ಆರೋಪಿ ಉಸ್ತಾದ್ ಆಯೂಬ್ ಮೇಲೆ ಪೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

    ಚೈಲ್ಡ್ ಕೇರ್ ಸೆಂಟರ್‌ಗಳಲ್ಲಿ ತಂದೆ ತಾಯಿಯಿಲ್ಲದ ಅನಾಥ ಮಕ್ಕಳು, ಕೌಟುಂಬಿಕ ಸಮಸ್ಯೆಗಳಿಂದ ಅನಾಥರಾಗಿರುವ ಮಕ್ಕಳು ಇರುತ್ತಾರೆ. ಈ ಮಕ್ಕಳನ್ನು ಜವಾಬ್ದಾರಿಯುತವಾಗಿ ಚೈಲ್ಡ್ ಕೇರ್ ಸೆಂಟರ್ಗಳು ಆರೈಕೆ ಮಾಡಬೇಕಾಗುತ್ತದೆ.

    ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ  ಖಚಿತ ಮಾಹಿತಿ ಕಮೀಷನರ್ ಶಶಿಕುಮಾರ್ ಅವರಿಗೆ ಬಂದಿತ್ತು. ಇದಕ್ಕಾಗಿ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು. ಅರಿವು ನೆರವು ಎಂಬ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಕಾರ್ಯಕ್ರಮದ ಹೆಸರಲ್ಲಿ ಚೈಲ್ಡ್ ಕೇರ್ ಸೆಂಟರಿನ ಮಕ್ಕಳನ್ನು ಕರೆಸಿಕೊಳ್ಳಲಾಯಿತು. ಈ ಕಾರ್ಯಾಗಾರದಲ್ಲಿ ಮನೋವೈದ್ಯರು, ಮಕ್ಕಳ ವೈದ್ಯರನ್ನು ಬಳಸಿಕೊಳ್ಳಲಾಯಿತು.

    ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗೆಗೆ ಮಕ್ಕಳಿಂದ ಮಾಹಿತಿ ಸಂಗ್ರಹಿಸಲಾಯಿತು. ಒಂದಷ್ಟು ಪ್ರಶ್ನೋತ್ತರಗಳ ಪತ್ರಿಕೆಯನ್ನು ನೀಡಿ ಮಕ್ಕಳಿಂದ ಉತ್ತರ ಪಡೆಯಲಾಯಿತು. ಮಕ್ಕಳಿಂದ ಬಂದ ಉತ್ತರದ ಬಳಿಕ ಚೈಲ್ಡ್ ಕೇರ್ ಸೆಂಟರ್‍ನಲ್ಲಿ ನಡೆಯುತ್ತಿದ್ದ ಕರ್ಮಕಾಂಡಗಳು ಗೊತ್ತಾಗಿದೆ.

    ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಚೈಲ್ಡ್ ಕೇರ್ ಸೆಂಟರ್ ಇದ್ದು ಸುಮಾರು 500 ಮಕ್ಕಳು ಇದ್ದಾರೆ. ಇಡೀ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಈ ರೀತಿಯ  ಸೆಂಟರ್‌ಗಳಿದ್ದು 1,024 ಮಕ್ಕಳಿದ್ದಾರೆ. ಸದ್ಯ ಮಂಗಳೂರು ವ್ಯಾಪ್ತಿಯ ನಿಗಾ ಘಟಕಗಳ ಮಕ್ಕಳ ಪರೀಕ್ಷೆ ನಡೆಸಲಾಗಿದ್ದು, ಕಿರುಕುಳ ನೀಡುತ್ತಿದ್ದ  ಸೆಂಟರ್‌ಗಳಿಗೆ ನೋಟಿಸ್ ನೀಡಲಾಗಿದೆ.

  • ಸ್ನೇಹಿತರ ಜೊತೆ ಸೇರಿ ಎಫ್‍ಬಿ ಫ್ರೆಂಡ್‍ನಿಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    ಸ್ನೇಹಿತರ ಜೊತೆ ಸೇರಿ ಎಫ್‍ಬಿ ಫ್ರೆಂಡ್‍ನಿಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಫೇಸ್‍ಬುಕ್ ಸ್ನೇಹಿತ ಮತ್ತು ಅವನ ಮೂವರು ಸ್ನೇಹಿತರು ಸೇರಿ ಮೂರು ಬಾರಿ ಬಾಲಕಿಯ ಮೆಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದ ಚಕ್ಕೇರಿ ಪ್ರದೇಶದಲ್ಲಿ ನಡೆದಿದೆ.

    ಆರೋಪಿಗಳಾದ ರಾಹುಲ್ ಸೋಂಕರ್ ಮತ್ತು ಮಿಥುನ್ ಸೋಂಕರ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ ಇನ್ನೂ ಇಬ್ಬರು ಆರೋಪಿಗಳಾದ ಸಾಹಿಲ್ ಮತ್ತು ವಿ.ಕೆ.ರಾಜಪೂತ್ ಪರಾರಿಯಾಗಿದ್ದಾರೆ.

    ಪ್ರಕರಣದ ಹಿನ್ನೆಲೆ :
    ಬಾಲಕಿಗೆ ಫೇಸ್ಬುಕ್ ಮೂಲಕ ಸಾಹಿಲ್ ಪರಿಚಯವಾಗಿ ಬಾಲಕಿ ಜೊತೆ ಸ್ನೇಹ ಬೆಳೆಸಿದ್ದಾನೆ. ಒಂದು ದಿನ ಸಾಹಿಲ್ ತನ್ನ ಸ್ನೇಹಿತರಾರದ ರಾಹುಲ್ ಮತ್ತು ಮಿಥುನ್‍ಗೆ ಬಾಲಕಿಯನ್ನು ಬೈಕ್‍ನಲ್ಲಿ ತ್ರಿಮೂರ್ತಿ ದೇವಸ್ಥಾನದ ಬಳಿ ಕರೆದುಕೊಂಡು ಬರಲು ಹೇಳಿದ್ದನು. ಆಗ ಬಾಲಕಿಯನ್ನು ಕರೆದುಕೊಂಡು ಸ್ನೇಹಿತರು ಬಂದಿದ್ದಾರೆ. ಸಾಹಿಲ್ ಮತ್ತು ವಿ.ಕೆ.ರಜಪೂತ್ ಕೂಡಾ ಮಾರ್ಗದ ಮಧ್ಯದಲ್ಲಿ ಕಾರ್‍ನಲ್ಲಿ ಬಂದು ಸೇರಿದ್ದಾರೆ. ಈ ವೇಳೆ ಬಾಲಕಿಗೆ ಅಮಲಿನ ಔಷಧ ಮತ್ತು ಕೆಲವು ನಿದ್ರೆ ಮಾತ್ರೆಗಳನ್ನು ಬಾಲಕಿಗೆ ತಿನ್ನಲು ಕೊಟ್ಟಿದ್ದಾರೆ.


    ಆಗ ಬಾಲಕಿಯನ್ನು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆಗ ಕಾರಿನಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಾಲ್ವರು ಸೇರಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಯೂ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಆರೋಪಿಗಳು ಅಪ್ರಾಪ್ತೆ ಬಾಲಕಿಯನ್ನು ಮಾರುಕಟ್ಟೆಯ ಮೇಲ್ ಛಾವಣಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಬಾಲಕಿಯ ಮೇಲೆ ಮೂರು ಬಾರಿ ಅತ್ಯಾಚಾರ ನಡೆದಿದೆ ಎಂದು ಅಧಿಕಾರಿ ಸತ್ಯಜಿತ್ ಗುಪ್ತಾ ಹೇಳಿದ್ದಾರೆ.

    ಈ ಘಟನೆ ಬಾಲಕಿ ಪೊಷಕರಿಗೆ ತಿಳಿಸಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ ಐಪಿಸಿ ಸಂಬಂಧಿತ ವಿವಿಧ ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇಬ್ಬರು ಆರೋಪಿ ರಾಹುಲ್ ಸೋಂಕರ್ ಮತ್ತು ಮಿಥುನ್ ಸೋಂಕರ್ ಅವರನ್ನು ನಾವು ಬಂಧಿಸಿದ್ದೇವೆ. ಸಾಹಿಲ್ ಮತ್ತು ವಿ.ಕೆ.ರಾಜಪೂತ್ ಅವರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

  • 6ರ ಬಾಲಕಿಯ ಮೇಲೆ 26 ವರ್ಷದ ಯುವಕನಿಂದ ಅತ್ಯಾಚಾರ

    6ರ ಬಾಲಕಿಯ ಮೇಲೆ 26 ವರ್ಷದ ಯುವಕನಿಂದ ಅತ್ಯಾಚಾರ

    – ಮನೆಯಲ್ಲಿ ಯಾರೂ ಇಲ್ಲದಾಗ ಘಟನೆ
    – ಬೆಂಗ್ಳೂರಲ್ಲಿ ಬಡಗಿ ಕೆಲಸ ಮಾಡ್ತಿದ್ದ ಆರೋಪಿ

    ಹೈದರಾಬಾದ್: ನೆರೆಮನೆಯಲ್ಲಿ 6 ವರ್ಷದ ಬಾಲಕಿಯ ಮೇಲೆ 26 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

    ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿದ್ದನ್ನು ಗಮನಿಸಿದ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ನಡೆದಾಗ ಸಂತ್ರಸ್ತೆಯ ತಾಯಿ ತರಕಾರಿಗಳನ್ನು ಖರೀದಿಸಲು ಹೋಗಿದ್ದಳು. ಹೀಗಾಗಿ ಮನೆಯಲ್ಲಿ ಯಾರೂ ಇರಲಿಲ್ಲ.

    ಇತ್ತ ಹೊರಗಡೆ ಹೋಗಿದ್ದ ಅಜ್ಜಿ ಮನೆಗೆ ಬಂದು ನೋಡಿದಾಗ ಬಾಲಕಿಗೆ ರಕ್ತಸ್ರಾವವಾಗುತ್ತಿದ್ದನ್ನು ಕಂಡು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ತೀವ್ರ ರಕ್ತಸ್ರಾವವಾಗಿತ್ತು ತುರ್ತು ವೈದ್ಯಕೀಯ ಆರೈಕೆಯನ್ನು ನೀಡಿದ್ದೇವೆ. ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಸ್ಥಳೀಯ ಆಸ್ಪತ್ರೆಯ ಇನ್‍ಚಾರ್ಜ್ ಹೇಳಿದ್ದಾರೆ.

    ಅತ್ಯಾಚಾರದ ವೇಳೆ ಬಾಲಕಿ ಧರಿಸಿದ್ದ ಬಟ್ಟೆ ಮೇಲೆ ಇರುವ ರಕ್ತ ಮತ್ತು ವೀರ್ಯವನ್ನು ಸಂಗ್ರಹಿಸಿದ್ದೇವೆ. ವಿಜಯವಾಡ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ಬಾಲಕಿ ಕುಟುಂಬ ಮತ್ತು ಪರೀಕ್ಷಿಸಿದ ವೈದ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಸೋಮವಾರ ಬಂಧಿಸಿದ್ದೇವೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವಳು ಅಪಾಯದಿಂದ ಪಾರಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಆರೋಪಿ ಬೆಂಗಳೂರಿನಲ್ಲಿ ಬಡಗಿ ಕೆಲಸ ಮಾಡುತ್ತಿದ್ದ. ಆದರೆ ರಾಷ್ಟ್ರವ್ಯಾಪಿ ಲಾಕ್‍ಡೌನ್ ನಂತರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪೊಲೀಸರು ಹೇಳುವ ಪ್ರಕಾರ ಆರೋಪಿ ಬಾಲಕಿಯನ್ನು ಸ್ನಾನಗೃಹಕ್ಕೆ ಎಳೆದೊಯ್ದಿದ್ದಾನೆ ಅಲ್ಲಿ ಅವನು ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.

    ಮಕ್ಕಳ ಮೇಲೆ ಲೈಂಗಿಕ ಅಪರಾಧಗಳಿಂದ (ಪೋಕ್ಸೋ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಚಿಂತನೆ

    ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಚಿಂತನೆ

    ನವದೆಹಲಿ: ದೇಶ್ಯಾದ್ಯಂತ ಹೆಚ್ಚುತ್ತಿರುವ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಮೇಲಿನ ಆಕ್ರೋಶಕ್ಕೆ ಕಿವಿಗೊಟ್ಟಿರುವ ಕೇಂದ್ರ ಸರ್ಕಾರ 12 ವರ್ಷಗಳ ಕೆಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲು ಚಿಂತನೆ ನಡೆಸಿದೆ.

    ಈ ಕ್ರಮಕ್ಕೆ ಪೂರಕವಾಗಿ ಈಗಾಗಲೇ ಜಾರಿಯಲ್ಲಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ತೀರ್ಮಾನಿಸಿದ್ದು, ಈ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

    ಸುಪ್ರೀಂ ಕೋರ್ಟ್‍ಗೆ ವಕೀಲ ಶ್ರೀವಾಸ್ತವ ಎಂಬವರು ಸಾರ್ವಜನಿಕ ಹಿತಾಸಕ್ತಿ ಆರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ 12 ವರ್ಷಗಳ ಕೆಳಗಿನ ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸುವಂತೆ ಮನವಿ ಮಾಡಿದ್ದರು.

    ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಏಪ್ರಿಲ್ 27 ಕ್ಕೆ ವಿಚಾರಣೆಯನ್ನು ಮುಂದೂಡಿತು.

    ಕಳೆದ ಕೆಲ ದಿನಗಳ ಹಿಂದೆ ಜಮ್ಮು ಕಾಶ್ಮೀರದ ಅಪ್ರಾಪ್ತ ಬಾಲಕಿ ಆಸಿಫಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಬಳಿಕ ಕೇಂದ್ರ ಸಚಿವೆ ಮನೇಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವ ಕಾನೂನಿನ ಕುರಿತು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬಳಿ ಮಾಹಿತಿ ನೀಡಲು ಸೂಚಿಸಿದ್ದರು.

    ದೇಶದಲ್ಲಿ ಆಸಿಫಾ ಹಾಗೂ ಅಪ್ರಾಪ್ತ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ತಮಗೆ ತೀವ್ರ ನೋವುಂಟು ಮಾಡಿದೆ. ಇಂತಹ ಪ್ರಕರಣಗಳನ್ನು ತಡೆಯಲು ಪೋಸ್ಕೋ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕುರಿತು ಚಿಂತನೆ ನಡೆಸುವ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.