Tag: Positive

  • ನಟಿ ಕಿರಣ್ ಖೇರ್ ಗೆ ಕೋವಿಡ್ : ಆತಂಕದಲ್ಲಿ ಬಾಲಿವುಡ್

    ನಟಿ ಕಿರಣ್ ಖೇರ್ ಗೆ ಕೋವಿಡ್ : ಆತಂಕದಲ್ಲಿ ಬಾಲಿವುಡ್

    ಬಾಲಿವುಡ್ ನ ಹೆಸರಾಂತ ನಟಿ, ರಾಜಕಾರಣಿ ಕಿರಣ್ ಖೇರ್ (Kiran Kher) ಕೋವಿಡ್ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ನಿನ್ನೆಯಷ್ಟೇ ಅವರು ಟೆಸ್ಟ್ ಮಾಡಿಸಿಕೊಂಡಿದ್ದು, ಕೋವಿಡ್ (Covid) ಪಾಸಿಟಿವ್ (Positive) ಬಂದಿದೆ. ಹಾಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ತಮ್ಮ ಸಂಪರ್ಕದಲ್ಲಿ ಇದ್ದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

    ಕಿರಣ್ ಖೇರ್ ತಮಗೆ ಕೊರೊನಾ (Corona) ಪಾಟಿಸಿವ್ ಬಂದಿರುವ ಕುರಿತು ಮಾಹಿತಿ ನೀಡುತ್ತಿದ್ದಂತೆಯೇ ಬಾಲಿವುಡ್ ನಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೋವಿಡ್ ಕಾರಣದಿಂದಾಗಿ ಈಗಾಗಲೇ ತತ್ತರಿಸಿ ಹೋಗಿದ್ದ ಬಾಲಿವುಡ್, ಇತ್ತೀಚೆಗೆ ಚೇತರಿಸಿಕೊಂಡಿದೆ. ಮತ್ತೆ ಕೊರೊನಾ ಹರಡಿ, ಇನ್ನೇನು ಆಗತ್ತೋ ಅನ್ನುವ ಆತಂಕ ಬಿಟೌನನದ್ದು. ಹಾಗಾಗಿ ಕಿರಣ್ ಅವರಿಗೆ ಅನೇಕರು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ : ನಟನ ನಿವಾಸಕ್ಕೆ ಫುಲ್ ಸೆಕ್ಯೂರಿಟಿ

    ಬಾಲಿವುಡ್ ನಟ ಅನುಪಮ್ ಖೇರ್ ಅವರ ಪತ್ನಿ ಕಿರಣ್ ಖೇರ್. ನಟಿಯಾಗಿ, ರಿಯಾಲಿಟಿ ಶೋ ತೀರ್ಪುಗಾರರಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡವರು. ಹಿಂದಿಯಲ್ಲಿ ಇವರಿಗೆ ಪ್ರೀತಿಯಿಂದ ಸರ್ವೋತ್ಕೃಷ್ಟ ತಾಯಿ ಎಂದೇ ಕರೆಯಲಾಗುತ್ತದೆ. ಅನೇಕ ಸ್ಟಾರ್ ಗಳಿಗೆ ತಾಯಿ ಪಾತ್ರ ಮಾಡಿದ ಹೆಗ್ಗಳಿಕೆ ಕಿರಣ್ ಅವರದ್ದು.

  • ತಮ್ಮ ‘ಕೊನೆ ಆಸೆ’ ತಿಳಿಸಿದ ಸೋನು ಶ್ರೀನಿವಾಸ್ ಗೌಡ: ಅವನಿಗೆ ಹೃದಯ ಪೂರ್ವಕ ಹಾರೈಕೆ

    ತಮ್ಮ ‘ಕೊನೆ ಆಸೆ’ ತಿಳಿಸಿದ ಸೋನು ಶ್ರೀನಿವಾಸ್ ಗೌಡ: ಅವನಿಗೆ ಹೃದಯ ಪೂರ್ವಕ ಹಾರೈಕೆ

    ಬಿಗ್ ಬಾಸ್ ಮನೆ ಅಂದಾಕ್ಷಣ ಥಟ್ಟನೆ ನೆನಪಾಗುವ ಹೆಸರು ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರದ್ದು. ಮೊದಲ ದಿನದಿಂದ ಕೊನೆಯ ದಿನದವರೆಗೂ ಜಗಳ, ಕೋಪ, ಪ್ರೀತಿ ಮಾಡಿಕೊಂಡೇ ಎಲ್ಲರ ಗಮನ ಸೆಳೆದವರು. ಅದರಲ್ಲೂ ಜಯಶ್ರೀ (Jayashree), ರಾಕೇಶ್ ಅಡಿಗ ಮತ್ತು ಸೋನು ಶ್ರೀನಿವಾಸ್ ಗೌಡ ಅವರ ತ್ರಿಕೋನ ಗೆಳೆತನ ನೋಡುಗರಿಗೆ ಸಾಕಷ್ಟು ಮನರಂಜನೆ ನೀಡಿತು. ಮನೆಯಿಂದ ಆಚೆ ಬರುತ್ತಿದ್ದಂತೆಯೇ ಅವರು ರಾಕೇಶ್ ಅಡಿಗನನ್ನು (Rakesh Adiga) ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ. ಇದನ್ನೂ ಓದಿ:ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಈ ಕುರಿತು ಮಾತನಾಡಿರುವ ಸೋನು, ‘ನಾನು ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಅವನು ಮುಂದಿನ ಹಂತ ತಲುಪಿದ್ದಾನೆ ಎಂದು ಕೇಳಿ ಸಂಭ್ರಮಿಸಿದೆ. ಮತ್ತೆ ಅವನು ಬಿಗ್ ಬಾಸ್ ಗೆದ್ದು ಬರಲಿ. ನನ್ನ ಕೊನೆ ಆಸೆ ಏನು ಅಂತ ಸದ್ಯ ಕೇಳಿದರೆ, ಅದು ರಾಕೇಶ್ ಬಿಗ್ ಬಾಸ್ (Bigg Boss OTT) ಮನೆಯಲ್ಲಿ ವಿನ್ ಆಗಬೇಕು’ ಎಂದಿದ್ದಾರೆ ಸೋನು. ತಮ್ಮಿಬ್ಬರ ಸ್ನೇಹ, ಪ್ರೀತಿ ಮತ್ತು ಪ್ರೇಮಕ್ಕಿಂತಲೂ ಮಿಗಿಲಾಗಿದ್ದು ಎನ್ನುವುದು ಸೋನು ಮಾತು.

    ಸೋಷಿಯಲ್ ಮೀಡಿಯಾದಲ್ಲಿ ಅಪಾರ ಸಂಖ್ಯೆಯಲ್ಲಿ ಫಾಲೋವರ್ಸ್ ಹೊಂದಿರುವ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಹಲವು ರೀತಿಯಲ್ಲಿ ಬದಲಾಗಿದ್ದಾರಂತೆ. ಮೊದ ಮೊದಲು ಇವರು ಸೋಷಿಯಲ್ ಮೀಡಿಯಾದಲ್ಲಿ ಏನೇ ಹಾಕಿದರೂ ಟ್ರೋಲ್ ಆಗುತ್ತಿದ್ದರು. ನೆಗೆಟಿವ್ (Negative) ಕಾಮೆಂಟ್ ಮಾಡಲಾಗುತ್ತಿತ್ತು. ಆದರೆ, ಇದೀಗ ನೆಗೆಟಿವ್ ಕಾಮೆಂಟ್ ಮಾಡುವವರ ಸಂಖ್ಯೆ ಸಾಕಷ್ಟು ಇಳಿಮುಖ ಆಗಿದೆಯಂತೆ.

    ಈ ಕುರಿತು ಮಾತನಾಡಿರುವ ಅವರು, ಬಿಗ್ ಬಾಸ್ ಮನೆಯಿಂದ ಆಚೆ ಬಂದ ನಂತರ, ಪೋಸ್ಟ್ ಹಾಕಿದ್ದೆ. ನನ್ನನ್ನು ಜನರು ಎಷ್ಟು ಪ್ರೀತಿಸುತ್ತಿದ್ದಾರೆ ಎಂದು ಗೊತ್ತಾಯಿತು. ನೆಗೆಟಿವ್ ಕಾಮೆಂಟ್ ಒಂದೆರಡು ಬಂದಿರಬಹುದು. ಆದರೆ, ಪಾಸಿಟಿವ್ (Positive) ಆಗಿ ವಿಶ್ ಮಾಡಿದವರೇ ಹೆಚ್ಚು. ನೆಗೆಟಿವ್ ಕಾಮೆಂಟ್ ಗೆ ನಾನು ಮೊದಲಿನಿಂದಲೂ ಕೇರ್ ಮಾಡಿಲ್ಲ. ಈಗಲೂ ಮಾಡಿಲ್ಲ. ನಾನು ಹೇಗೆ ಎನ್ನುವುದು ನನ್ನನ್ನು ಪ್ರೀತಿಸುವವರಿಗೆ ಗೊತ್ತಿದೆ’ ಎಂದಿದ್ದಾರೆ ಸೋನು.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್

    ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್

    ಬಾಲಿವುಡ್ ಹೆಸರಾಂತ ನಟ ಅಮಿತಾಭ್ ಬಚ್ಚನ್ ಅವರಿಗೆ ಎರಡನೇ ಬಾರಿ ಕೊರೊನಾ ಪಾಸಿಟಿವ್ ಆಗಿದೆ. ಈ ಮಾಹಿತಿಯನ್ನು ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಕೊರೊನಾ ಪಾಸಿಟಿವ್ ಆಗಿರುವ ಕಾರಣದಿಂದಾಗಿ ತಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

    ಈ ಹಿಂದೆಯು ಅಮಿತಾಭ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. 2020ರಲ್ಲಿ ಕೋವಿಡ್ ಪಾಸಿಟಿವ್ ಆದಾಗ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಾರಿ ಅಷ್ಟೇ ತೀವ್ರತರಹದ ಜ್ವರ ಕಾಣಿಸಿಕೊಳ್ಳದೇ ಇರುವ ಕಾರಣಕ್ಕಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಅಮಿತಾಭ್. ಆದರೂ, ವಯಸ್ಸಿನ ಕಾರಣದಿಂದಾಗಿ ಅಭಿಮಾನಿಗಳಲ್ಲಿ ಆತಂಕ ಮೂಡಿದೆ. ಇದನ್ನೂ ಓದಿ:ಜಯಶ್ರೀ ಜೊತೆ ಸೋನು ಶ್ರೀನಿವಾಸ್ ಗೌಡ ಕಿರಿಕ್

    ತಮಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾಗುತ್ತಿದ್ದಂತೆಯೇ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅಮಿತಾಭ್, ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ನೆಚ್ಚಿನ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು

    ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು

    ಕಿಚ್ಚ ಸುದೀಪ್ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ನೆಚ್ಚಿನ ನಟನಿಗೆ ಮತ್ತೆ ಕೋರೋನಾ ಬಾಧಿಸಿತಾ ಎಂದು ಅಭಿಮಾನಿಗಳು ಆತಂದಲ್ಲಿದ್ದರು. ಆದಷ್ಟು ಬೇಗ ಸುದೀಪ್ ಗುಣಮುಖರಾಗಲಿ ಎಂದು ಹಾರೈಕೆಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದವು. ಸುದೀಪ್ ಜ್ವರದಿಂದ ಬಳಲುತ್ತಿರುವುದು ನಿಜ. ಆದರೆ, ಕೋವಿಡ್ ಪಾಸಿಟಿವ್ ಆಗಿಲ್ಲ ಎಂದು ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ಕೊಟ್ಟಿದ್ದಾರೆ.

    ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಜಾಕ್ ಮಂಜು, ‘ಸುದೀಪ್ ಅವರು ಜ್ವರದಿಂದ ಬಳಲುತ್ತಿರುವುದು ನಿಜ. ಆದರೆ, ಕೋವಿಡ್ ಪಾಸಿಟಿವ್ ಆಗಿಲ್ಲ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಗದಿತ ದಿನಾಂಕಗಳಂದು ಅವರು ಮತ್ತೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 23 ರಿಂದ ಅವರು ಅನೇಕ ಊರುಗಳಿಗೆ ಪ್ರಚಾರಕ್ಕಾಗಿ ತೆರಳಲಿದ್ದಾರೆ ಎಂದು ಮಂಜು ವಿಡಿಯೋದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್

    ಸುದೀಪ್ ನಟನೆಯ ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಬಿಡುವಿಲ್ಲದ ಪ್ರಚಾರದ ಕೆಲಸಗಳಲ್ಲಿ ಕಿಚ್ಚ ತೊಡಗಿಕೊಂಡಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9ರ ಪ್ರೊಮೋ ಶೂಟಿಂಗ್ ನಲ್ಲೂ ಅವರು ಮೊನ್ನೆಯಷ್ಟೇ ಭಾಗಿಯಾಗಿದ್ದರು. ಇನ್ನೇನು ಮುಂದಿನ ವಾರ ಸಿನಿಮಾ ರಿಲೀಸ್ ಆಗಬೇಕು ಅಷ್ಟರಲ್ಲಿ ಕೋವಿಡ್ ಸೋಂಕು ಎಂದು ಸುದ್ದಿಯಾಗಿ ಅಭಿಮಾನಿಗಳು ಆತಂಕ್ಕೀಡಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ನಟಿ ವೇದಿಕಾಗೆ ಕರೋನಾ ಪಾಸಿಟಿವ್ : ತೀವ್ರ ಜ್ವರದಿಂದ ಬಳಲುತ್ತಿರುವ ನಟಿ

    ಕನ್ನಡದ ನಟಿ ವೇದಿಕಾಗೆ ಕರೋನಾ ಪಾಸಿಟಿವ್ : ತೀವ್ರ ಜ್ವರದಿಂದ ಬಳಲುತ್ತಿರುವ ನಟಿ

    ಶಿವರಾಜ್ ಕುಮಾರ್ ನಟನೆಯ ಶಿವಲಿಂಗು ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ವೇದಿಕಾಗೆ ಕರೋನಾ ಪಾಸಿಟಿವ್ ಆಗಿದೆಯಂತೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳನ್ನು ಬರೆದುಕೊಂಡಿದ್ದಾರೆ. ತಾವೀಗ ತೀವ್ರ ರೀತಿಯ ಜ್ವರದಿಂದ ನರಳುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಹಾಗಾಗಿ ಅಗತ್ಯ ಚಿಕಿತ್ಸೆಯನ್ನೂ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಕನ್ನಡ ಸಂಗಮಾ, ಹೋಮ್ ಮಿನಿಸ್ಟರ್, ಗೌಡರ ಹೋಟೆಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ವೇದಿಕಾ ತಮಗೆ ಕೋವಿಡ್ ಸೋಂಕು ತಗಲಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನನಗೆ ಕೋವಿಡ್ ಪಾಸಿಟಿವ್ ಆಗಿದೆ. ನನ್ನ ದುರಾದೃಷ್ಟ ಎಂದು ಅವರು ನೋವು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಒಲವೇ ಜೀವನ ಲೆಕ್ಕಾಚಾರ ಅಂತಿದ್ದಾರೆ ಯುವ ಜೋಡಿ

    ಮೊದ ಮೊದಲ ಜ್ವರದ ಲಕ್ಷಣಗಳಷ್ಟೇ ಕಾಣಿಸಿಕೊಂಡವು. ಆನಂತರ ತೀವ್ರ ಜ್ವರ ಶುರುವಾಯಿತು. ತಡಮಾಡದೇ ನಾನು ವೈದ್ಯರನ್ನು ಸಂಪರ್ಕ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ಮಾಡಬೇಡಿ ಎಂದು ಅವರು ಬರೆದುಕೊಂಡಿದ್ದಾರೆ. ಇದೀಗ ಅವರಿಗೆ 103 ಡಿಗ್ರಿ ಜ್ವರ ಇದೆಯಂತೆ. ಮೈಕೈ ನೋವಿನಿಂದಲೂ ಅವರು ನರಳುತ್ತಿದ್ದಾರಂತೆ.

    Live Tv

  • 500ರ ಗಡಿದಾಟಿದ ಕೋವಿಡ್ ಕೇಸ್ – ಶೂನ್ಯ ಮರಣ ಪ್ರಮಾಣ

    500ರ ಗಡಿದಾಟಿದ ಕೋವಿಡ್ ಕೇಸ್ – ಶೂನ್ಯ ಮರಣ ಪ್ರಮಾಣ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ ಆಗುತ್ತಿದ್ದು, 525 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ದಾಖಲಾಗಿದೆ.

    ರಾಜ್ಯದಲ್ಲಿ ಇಂದು 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೂ 39,12,024 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 22,673 ಜನರು ಇಂದು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ 

    ಬೆಂಗಳೂರಿನಲ್ಲಿ ಇಂದು 494 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಶೂನ್ಯ ಸಾವು ದಾಖಲಾಗಿದೆ. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 2.31% ಗೆ ಏರಿಕೆಯಾಗಿದೆ.

    74,134 ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದು, ಇಲ್ಲಿವರೆಗೂ ರಾಜ್ಯದಲ್ಲಿ 11,00,25,194 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 22,673 ಸ್ಯಾಂಪಲ್ (ಆರ್‌ಟಿ ಪಿಸಿಆರ್ 15,972 + 6701 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಮ್ಮ ಪಕ್ಷದವರಲ್ಲದವರು ಅಡ್ಡ ಮತದಾನ ಮಾಡಿರುವುದಕ್ಕೆ ನಾನ್ಯಾಕೆ ಉತ್ತರ ಕೊಡಲಿ: ಪ್ರಜ್ವಲ್ ರೇವಣ್ಣ 

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ 04, ಬೆಳಗಾವಿ 02, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 494, ಚಿಕ್ಕಮಗಳೂರು 01, ಚಿತ್ರದುರ್ಗ 02, ದ.ಕನ್ನಡ 07, ಧಾರವಾಡ 01, ಮೈಸೂರು 08 ಮತ್ತು ಉಡುಪಿ 03 ಕೊರೊನಾ ಪ್ರಕರಣಗಳು ದಾಖಲಾಗಿವೆ.

  • ಕೋವಿಡ್ ಸೋಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು

    ಕೋವಿಡ್ ಸೋಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಕೇಸ್ ಏರಿಕೆ ಆಗುತ್ತಿದೆ. ಇಂದು 376 ಕೇಸ್ ದಾಖಲಾಗಿದ್ದು, ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

    231 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.1.64 ದಾಖಲಾಗಿದ್ದು, ರಾಜ್ಯದಲ್ಲಿ ಈ ವಾರ ಸೋಂಕಿನಿಂದ ಮೃತಪಟ್ಟವರ ರೇಟ್ ಶೇ.0.04 ಇದೆ. ರಾಜಧಾನಿ ಬೆಂಗಳೂರಿನಲ್ಲಿ ಈ ವಾರ 2526ಕ್ಕೆ ಆಕ್ಟೀವ್ ಕೇಸ್ ಏರಿಕೆ ಆಗಿದೆ.

    ರಾಜ್ಯದಲ್ಲಿ ಇಂದು ಒಟ್ಟು 23,246 ಮಂದಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. 2,70,312 ಮಂದಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಒಟ್ಟು 23,246 ಸ್ಯಾಂಪಲ್ (ಆರ್‌ಟಿಪಿಸಿಆರ್ 17,339 + 5,907 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬೀದಿ ನಾಯಿಯನ್ನ ದೊಣ್ಣೆಯಿಂದ ಹೊಡೆದು ಎರಡನೇ ಪ್ಲೋರ್‌ನಿಂದ ಬಿಸಾಕಿದ ಪಾಪಿ – ಪ್ರಕರಣ ದಾಖಲು 

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ಗ್ರಾಮಾಂತರ 03, ಬೆಂಗಳೂರು ನಗರ 358, ದ.ಕನ್ನಡ 01, ಧಾರವಾಡ 04, ಹಾವೇರಿ 02, ಮೈಸೂರು 07 ಮತ್ತು ಉಡುಪಿ 01 ಕೊರೊನಾ ಪ್ರಕರಣಗಳು ದಾಖಲಾಗಿವೆ.

  • ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಬೆಂಗಳೂರು : ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಆದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಶೀತ, ಜ್ವರ ಜನರನ್ನು ಕಾಡುತ್ತಿದೆ.

    ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್ ಅವರು, ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ.   ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದಿದ್ದಾರೆ. ಇದನ್ನೂ ಓದಿ:  ಪಾಕ್ ಪ್ರಧಾನಿ ಅಂತರಾಷ್ಟ್ರೀಯ ಭಿಕ್ಷುಕ: ಸಿರಾಜುಲ್ ಹಕ್

    ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು 

  • ಮಲಯಾಳಂ ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್

    ಮಲಯಾಳಂ ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್

    ತಿರುವನಂತಪುರಂ: ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್ ಬಂದಿದೆ, ಈ ಹಿನ್ನೆಲೆಯಲ್ಲಿ ಸಿಬಿಐ 5ರ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ.

    ಮಲಯಾಳಂ ಸೂಪರ್‌ಸ್ಟಾರ್‌ ಮಮ್ಮುಟ್ಟಿ (ಜನವರಿ 16) ಇಂದು ಕೋವಿಡ್ ಪಾಸಿಟಿವ್ ಬಂದಿದೆ. ಅವರು ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆಯೇ ಅಥವಾ ಕೇರಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ಅವರ ಆರೋಗ್ಯದ ಮಾಹಿತಿ ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಡುತ್ತಿದ್ದರು. ಮಮ್ಮುಟ್ಟಿ ಅವರೆ ಟ್ವೀಟ್ ಮಾಡಿ ಆರೋಗ್ಯದ ಕುರಿತಾಗಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ ಮಾಡಿದ್ದೇನೆ. ಸ್ವಲ್ಪ ಜ್ವರ ಇದೆ. ನಾನು ಚೆನ್ನಾಗಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ದೇಶನದಂತೆ ನಾನು ಮನೆಯಲ್ಲಿ ಸ್ವಯಂ ಪ್ರತ್ಯೇಕವಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ಸಮಯದಲ್ಲೂ ಮಾಸ್ಕ್ ಬಳಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇದನ್ನೂ ಓದಿ: ಆತ್ಮಹತ್ಯೆ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ಭಾಮ

    ಮುಂಬರುವ ಅವರ ಸಿನಿಮಾಗೆ ತಾತ್ಕಾಲಿಕವಾಗಿ ಸಿಬಿಐ 5 ಎಂದು ಹೆಸರಿಸಲಾಗಿದೆ. ಸಿಬಿಐ 5ರ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಮಮ್ಮುಟ್ಟಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಾರೈಸಿದ್ದಾರೆ. ಇದನ್ನೂ ಓದಿ:  4.50 ಕೋಟಿ ರೂ. ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದ 6 ಮಂದಿ ವಶ

  • ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ : ಶೆಟ್ಟರ್

    ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ : ಶೆಟ್ಟರ್

    ಧಾರವಾಡ: ಲಾಕ್‍ಡೌನ್ ಘೋಷಿಸಿದ್ದರಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಶೇ.35 ಪಾಸಿಟಿವಿಟಿ ಹೋಗಿತ್ತು. ಆದರೆ ಈಗ ಶೇ. 14ಕ್ಕೆ ಇಳಿದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಶೇ.14ರಷ್ಟು ಪಾಸಿಟಿವಿಟಿ ಬರಬಹುದು. ಪ್ರತಿ ಹಂತದಲ್ಲಿ ಕೊರೊನಾ ಇಳಿಕೆಯಾಗುತ್ತಿದೆ. ಲಾಕ್‍ಡೌನ್‍ನಿಂದ ಇದೆಲ್ಲಾ ಸಾಧ್ಯವಾಗಿದೆ. ಇನ್ನೂ ಏಳು ದಿನ ಲಾಕ್‍ಡೌನ್ ಇದೆ. ಜೂ. 5 ಅಥವಾ 6 ರಂದು ಬರುವ ಪಾಸಿಟಿವಿಟಿ ರೇಟ್ ನೋಡಿ ಸಿಎಂ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುತ್ತಾರೆ. ಶೇ. 5 ರಷ್ಟು ಪಾಸಿಟಿವಿಟಿ ಬಂದರೆ ಲಾಕ್‍ಡೌನ್ ಸಡಿಲಕೆ ಮಾಡುತ್ತೇವೆ ಎಂದು ನುಡಿದರು.

    ಯತ್ನಾಳ್ ಸಿಎಂ ಬಗ್ಗೆ ಮಾತನಾಡಿರುವುದು ಅವರ ವೈಯಕ್ತಿಕ ವಿಚಾರ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲಾರೆ. ಸಿಎಂ ಬದಲಾವಣೆ ಗೊಂದಲನೇ ನನಗೆ ಅರ್ಥ ಆಗುತ್ತಿಲ್ಲ. ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಇದ್ದವರೇ ಮುಂದುವರೆತ್ತಾರೆ ಎಂದರು. ಸಹಿ ಸಂಗ್ರಹದ ವಿಚಾರವೂ ನನಗೆ ಗೊತ್ತಿಲ್ಲ. ಈ ಬೆಳವಣಿಗೆ ಬಗ್ಗೆ ಎಲ್ಲಿ ಏನು ಮಾತಾಡಬೇಕು ಆ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ:ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ: ಡಿಸಿಎಂ