Tag: post

  • ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

    ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

    – ಅಂಚೆ ಇಲಾಖೆಯಿಂದ ಆನ್‌ಲೈನ್‌ ಸೇವೆ
    –  ಪ್ರಾಯೋಗಿಕ ಸೇವೆಗೆ ದೇಶದಲ್ಲೇ ಬಾಗಲಕೋಟೆ ಜಿಲ್ಲೆ ಆಯ್ಕೆ

    ಬಾಗಲಕೋಟೆ: ಭಾರತೀಯ ಅಂಚೆ ಇಲಾಖೆಯ (Department of Post) ಹಲವು ಸೇವೆಗಳು ಈಗ ಆನ್‌ಲೈನ್‌ನಲ್ಲಿ (Online) ದೊರೆಯಲಿದ್ದು, ಪ್ರಾಯೋಗಿಕವಾಗಿ ಈ ಸೌಲಭ್ಯ ಒದಗಿಸಲು ದೇಶದಲ್ಲೇ ಬಾಗಲಕೋಟೆ (Bagalkote) ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ.

    ಅಂಚೆ ಇಲಾಖೆಯಿಂದ ಹೊಸ ತಂತ್ರಾಂಶ ಅಳವಡಿಸಿ ಸರಕು, ಪತ್ರಗಳ ರವಾನೆಯನ್ನು ಆನ್‌ಲೈನ್ ಸೌಲಭ್ಯದಡಿ ಒದಗಿಸಲಾಗುತ್ತಿದೆ. ಮೈಸೂರು ವಿಭಾಗ ಹಾಗೂ ಬಾಗಲಕೋಟೆ ವಿಭಾಗಗಳು ಪ್ರಾಯೋಗಿಕವಾಗಿ ಸೌಲಭ್ಯ ಒದಗಿಸಲು ಆಯ್ಕೆಯಾಗಿವೆ. ಈ ವಿಭಾಗಗಳಲ್ಲಿನ ಯಶಸ್ಸು ನೋಡಿಕೊಂಡು ರಾಷ್ಟ್ರಾದ್ಯಂತ ಸೇವೆ ಒದಗಿಸಲು ಇಲಾಖೆ ಯೋಜನೆ ರೂಪಿಸಿದೆ.

    ಇಲಾಖೆ ಅಡ್ವಾನ್ಸ್‌ಡ್ ಪೋಸ್ಟಲ್ ಟೆಕ್ನಾಲಜಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶದಡಿ ಹೊಸ ಸೌಲಭ್ಯ ಒದಗಿಸಲಾಗುತ್ತಿದೆ. ಈಗ ಬುಕ್ಕಿಂಗ್ ಹಾಗೂ ಡೆಲಿವರಿ ಸೌಲಭ್ಯ ಆನ್‌ಲೈನ್ ಆಗಲಿವೆ. ಗ್ರಾಹಕರು ಅಂಚೆ ಮೂಲಕ ವಸ್ತುವೊಂದನ್ನು ಕಳಿಸಬೇಕಿದ್ದರೆ ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು. ನಿಗದಿತ ಶುಲ್ಕ ಪಡೆದು ಈ ಸೇವೆ ಒದಗಿಸಲಾಗುತ್ತಿದೆ. ಬುಕ್ ಮಾಡಿದ ನಂತರ ಪೋಸ್ಟ್‌ಮನ್ ಮನೆಗೆ ಬಂದು ಪಾರ್ಸೆಲ್ ಪಡೆಯುತ್ತಾರೆ. ಪಾರ್ಸಲ್ ಕಳುಹಿಸಿದ ನಂತರ ಗ್ರಾಹಕರಿಗೆ ಮಾಹಿತಿ ದೊರೆಯುತ್ತದೆ. ಈ ಸೌಲಭ್ಯದಡಿ ತಮ್ಮ ಪಾರ್ಸೆಲ್ ಎಲ್ಲಿದೆ ಎಂಬ ಬಗ್ಗೆ ಗ್ರಾಹಕರು ಮಾಹಿತಿ ಪಡೆಯಬಹುದು. ಇದನ್ನೂ ಓದಿ: ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆ ಪಡುತ್ತಾರೆ: ಅಮಿತ್ ಶಾ

    ಪಾರ್ಸೆಲ್‌ ತಲುಪಿಸಿದ ನಂತರ ಪೋಸ್ಟ್‌ಮನ್ ಗ್ರಾಹಕರ ಡಿಜಿಟಲ್ ಸಹಿ ಪಡೆಯಲಿದ್ದಾರೆ. ಪಾರ್ಸೆಲ್‌ ತಲುಪಿದ ಬಗ್ಗೆ ಕಳುಹಿಸಿದವರಿಗೂ ಸಂದೇಶ ರವಾನೆಯಾಗುತ್ತದೆ. ಸಾಮಾನ್ಯ ಪತ್ರಗಳು, ಲಕೋಟೆಗಳನ್ನು ಕಳುಹಿಸಲು ಭವಿಷ್ಯದಲ್ಲಿ ಬಾರ್ ಕೋಡ್ ಸೌಲಭ್ಯ ಒದಗಿಸಲಾಗುತ್ತದೆ. ಈ ಸೇವೆಯಡಿ ತಮ್ಮ ಲಕೋಟೆ, ಪತ್ರ ಯಾವ ಸ್ಥಳದಲ್ಲಿದೆ ಎಂಬ ಮಾಹಿತಿಯನ್ನು ಗ್ರಾಹಕರು ಆನ್‌ ಲೈನ್ ಮೂಲಕ ಪಡೆಯಬಹುದು. ಇದನ್ನೂ ಓದಿ: ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

    ಜಿಲ್ಲೆಯಲ್ಲಿ ಜೂನ್ 17 ರಿಂದ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯಾದ್ಯಂತ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ 46 ಅಂಚೆ ಕಚೇರಿಗಳಲ್ಲಿ ಸೌಲಭ್ಯ ದೊರೆಯಲಿದೆ. ಎಲ್ಲ ಕಚೇರಿಗಳು ಗಣಕೀಕರಣಗೊಂಡಿದ್ದು, ಸೌಲಭ್ಯ ಜಾರಿಗೆ ಸಿದ್ಧತೆ ಪೂರ್ಣಗೊಂಡಿದೆ. ಉತ್ತಮ ನೆಟ್ವರ್ಕ್, ತಾಂತ್ರಿಕ ತರಬೇತಿ ಪಡೆದ ಸಿಬ್ಬಂದಿ ಹಾಗೂ ಮೂಲ ಸೌಕರ್ಯವಿರುವ ಕಾರಣ ಜಿಲ್ಲೆ ಪೈಲೆಟ್ ಯೋಜನೆಗೆ ಆಯ್ಕೆಯಾಗಿದೆ.

  • ಅಶ್ವಿನಿ ನಿಂದನೆ ಪೋಸ್ಟ್ ವಿಚಾರ: ಮೂರು ಠಾಣೆಗಳಲ್ಲಿ ದೂರು ದಾಖಲು

    ಅಶ್ವಿನಿ ನಿಂದನೆ ಪೋಸ್ಟ್ ವಿಚಾರ: ಮೂರು ಠಾಣೆಗಳಲ್ಲಿ ದೂರು ದಾಖಲು

    ಜಪಡೆ (Gajapade) ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ ಬಗ್ಗೆ ನಿಂದನೆ ಪೋಸ್ಟ್ ಮಾಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ನಡೆಯನ್ನು ಖಂಡಿಸಿದ್ದಾರೆ. ಜೊತೆಗೆ ಅಪ್ಪು ಫ್ಯಾನ್ಸ್ ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಿದ್ದಾರೆ. ಸದ್ಯ ಬಿಟಿಎಂ‌ ಲೇ ಔಟ್, ಜೆ ಪಿ ನಗರ ಹಾಗೂ ತಲಘಟ್ಟಪುರದ ಪೊಲೀಸ್ ಠಾಣೆಯಲ್ಲಿ ಗಜಪಡೆ ಖಾತೆಯ ವಿರುದ್ಧ ದೂರು (Complaint) ನೀಡಲಾಗಿದೆ.

    ಅಶ್ವಿನಿ (Ashwini Puneeth Rajkumar)  ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.

    ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.

    ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

     

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

  • ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಅವಹೇಳನ: ಕ್ರಮಕ್ಕೆ ಹೆಚ್ಚಿದ ಒತ್ತಡ

    ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಅವಹೇಳನ: ಕ್ರಮಕ್ಕೆ ಹೆಚ್ಚಿದ ಒತ್ತಡ

    ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ (Ashwini Puneeth Rajkumar)  ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.

    ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲ್ಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.

    ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

     

    ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನೆಗೆಟಿವ್, ಪಾಸಿಟಿವ್ ಸಮನಾಗಿ ಸ್ವೀಕರಿಸುವೆ: ಅಶ್ವಿನಿ ಪುನೀತ್ ರಾಜ್ ಕುಮಾರ್

    ನೆಗೆಟಿವ್, ಪಾಸಿಟಿವ್ ಸಮನಾಗಿ ಸ್ವೀಕರಿಸುವೆ: ಅಶ್ವಿನಿ ಪುನೀತ್ ರಾಜ್ ಕುಮಾರ್

    ಳೆದ ಮೂರ್ನಾಲ್ಕು ದಿನದಿಂದ ಸೋಷಿಯಲ್ ಮೀಡಿಯಾದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಅವರ ಬಗ್ಗೆ ಕೆಟ್ಟದ್ದಾಗಿ ನಿಂದಿಸಲಾಗಿದೆ. ಅನೇಕರು ಈ ಕುರಿತಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೇ ಹಿನ್ನೆಲೆಯಾಗಿಟ್ಟುಕೊಂಡು ಅಶ್ವಿನಿ ಅವರು ಮಾತನಾಡಿದ್ದಾರೆ. ನೆಗೆಟಿವ್ ಅಥವಾ ಪಾಟಿಸಿವ್ ಏನೇ ಬಂದರೂ, ಸಮಾನಾಗಿ ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಪರೋಕ್ಷವಾಗಿ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅಶ್ವಿನಿ ಅವರಿಗೆ ಅವಹೇಳನ ಮಾಡಿರುವ ವಿಷಯಕ್ಕೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಮಹಿಳಾ ಬರಹಗಾರರು ಮತ್ತು ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ತಮ್ಮದೇ ಆದ ನಿಲುವನ್ನು ವ್ಯಕ್ತ ಪಡಿಸಿದ್ದಾರೆ.

    ಇವರ  ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

     

    ಅಶ್ವಿನಿ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ.

  • ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ

    ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ

    ಸೋಷಿಯಲ್ ಮೀಡಿಯಾದಲ್ಲಿ ನಟ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಅವಹೇಳನ ಮಾಡಿರುವ ವಿಷಯಕ್ಕೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಮಹಿಳಾ ಬರಹಗಾರರು ಮತ್ತು ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ತಮ್ಮದೇ ಆದ ನಿಲುವನ್ನು ವ್ಯಕ್ತ ಪಡಿಸಿದ್ದಾರೆ.

    ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

    ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ.

     

    ಸಾಕಷ್ಟು ಬಾರಿ ಈ ಫ್ಯಾನ್ಸ್ ವಾರ್ ಕನ್ನಡದಲ್ಲಿ ನಡೆದಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವಂತೆ ಸ್ವತಃ ದರ್ಶನ್ ಅವರೇ ಈ ಹಿಂದೆ ವಿಡಿಯೋ ಮೂಲಕ ಮನವಿ ಮಾಡಿದ್ದರು. ತಮ್ಮ ಅಭಿಮಾನಿಗಳು ಯಾವುದೇ ಕಾರಣಕ್ಕೂ ಬೇರೆಯ ನಟರ ಅಥವಾ ಅಭಿಮಾನಿಗಳನ್ನು ನಿಂದಿಸಬಾರದು ಎಂದು ಮನವಿ ಮಾಡಿದ್ದರು. ಆದರೂ, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಲೇ ಇವೆ.

  • ರವಿಚಂದ್ರನ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ರವಿಚಂದ್ರನ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಹಾಗೂ ನೂತನ ಪ್ರತಿಭೆ ರಘು ಭಟ್ (Raghu Bhatt) ಪ್ರಮುಖಪಾತ್ರದಲ್ಲಿ ನಟಿಸಿರುವ ನೂತನ  ಚಿತ್ರವೊಂದರ ಚಿತ್ರೀಕರಣ ಸದ್ದಿಲ್ಲದೆ ನಡೆಯುತ್ತಿದ್ದು, ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್  ನೆಲಮಂಗಲದ ಬಳಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಅನಾವರಣವಾಯಿತು. ಚಿತ್ರಕ್ಕೆ ‘ಪರವಶ’ (Paravash) ಎಂದು ಹೆಸರಿಡಲಾಗಿದೆ. ಖ್ಯಾತ ನಿರೂಪಕಿ ಅನುಶ್ರೀ ಅವರ ಅಚ್ಚುಕಟ್ಟಾದ ನಿರೂಪಣೆಯಲ್ಲಿ ಸಮಾರಂಭ ನೆರವೇರಿತು.

    ಅವ್ಯಕ್ತ ಸಿನಿಮಾಸ್ ಲಾಂಛನದಲ್ಲಿ ಹರೀಶ್ ಗೌಡ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸುಧೀಂದ್ರ ನಾಡಿಗರ್ ನಿರ್ದೇಶಿಸುತ್ತಿದ್ದಾರೆ.  ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಹೊಸತಂಡದ ಜೊತೆಗೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಾನು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನನ್ನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ದೇಶಕ ಸುಧೀಂದ್ರ ನಾಡಿಗರ್ ಅವರ ‌ನಿರ್ದೇಶನದ ಶೈಲಿ ವಿನೂತನವಾಗಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಕ್ರೇಜಿಸ್ಟಾರ್ ರವಿಚಂದ್ರನ್.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಈಗಾಗಲೇ ನಲವತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮಂಗಳೂರು, ಉಡುಪಿ, ಮಣಿಪಾಲ ಹಾಗೂ ಕುಂದಾಪುರದಲ್ಲಿ ಚಿತ್ರೀಕರಣವಾಗಿದೆ. ರವಿಚಂದ್ರನ್, ರಘು ಭಟ್, ಸೋನಾಲ್ ಮೊಂಟೆರೊ, ಪವಿತ್ರ ಲೋಕೇಶ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ  ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಯಕ ರಘು ಭಟ್ “ಪರವಶ” ಚಿತ್ರಕ್ಕೆ ಕಥೆ ಬರೆದಿದ್ದಾರೆ.  ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಆನಂದ್ ಮೀನಾಕ್ಷಿ  ಛಾಯಾಗ್ರಹಣ ಹಾಗೂ ಪ್ರತೀಕ್ ಶೆಟ್ಟಿ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ರಚಿಸಿದ್ದಾರೆ.  ಸಂಭಾಷಣೆಯನ್ನು ರಘು ನಿಡವಳ್ಳಿ ಬರೆದಿದ್ದಾರೆ ಎಂದು ನಿರ್ದೇಶಕ ಸುಧೀಂದ್ರ ನಾಡಿಗರ್ ತಿಳಿಸಿದರು.

    ನಮ್ಮೂರಿನಲ್ಲಿ ನಾನು ನಿರ್ಮಿಸುತ್ತಿರುವ “ಪರವಶ” ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿರುವುದು ಖುಷಿಯಾಗಿದೆ. ಹೊಸತಂಡಕ್ಕೆ ಪ್ರೋತ್ಸಾಹ ನೀಡುತ್ತಿರುವ ರವಿಚಂದ್ರನ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಹರೀಶ್ ಗೌಡ. ಥ್ರಿಲ್ಲರ್, ಕೌಟುಂಬಿಕ ಹಾಗೂ ಪ್ರೇಮ  ಕಥಾಹಂದರವುಳ್ಳ “ಪರವಶ” ಚಿತ್ರದಲ್ಲಿ ಜನರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಒಟ್ಟಿನಲ್ಲಿ ಪ್ರೇಕ್ಷಕ ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನೋರಂಜನೆ ನೀಡುವ ಚಿತ್ರವಿದು. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಕೂಡ ಮುದ ನೀಡುತ್ತದೆ ಎಂದು ನಾಯಕ ಹಾಗೂ ಕಥೆಗಾರ ರಘು ಭಟ್ ತಿಳಿಸಿದರು.

     

    ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ.‌ ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದರು ನಾಯಕಿ ಸೋನಾಲ್ ಮೊಂಟೆರೊ, ಕಲಾವಿದರಾದ ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಹಾಗೂ ಛಾಯಾಗ್ರಾಹಕ ಆನಂದ್ ಮೀನಾಕ್ಷಿ ಚಿತ್ರತಂಡದ ಅನೇಕ ಸದಸ್ಯರು ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ  ಉಪಸ್ಥಿತರಿದ್ದರು.

  • ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಬೆಂಗಳೂರು: ಪೋಸ್ಟ್ ಮೂಲಕ ಡ್ರಗ್ಸ್ (Drugs ) ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ (CCB)  ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.

    ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿಂದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

    ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ ಚರಸ್ ಡ್ರಗ್ಸ್ನ ಕಳುಹಿಸಲಾಗಿತ್ತು. ನಂತರ ಬಂದಿದ್ದ ಬಾಕ್ಸ್ಗಳನ್ನು ಆರೋಪಿಯಿಂದಲೇ ಪೊಲೀಸರು ತೆಗೆಸಿದ್ದಾರೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ ಪಿಎ ಹೆಸರು ಹೇಳಿ ಧೋನಿ ಮ್ಯಾನೇಜರ್‌ಗೆ ಲಕ್ಷ ಲಕ್ಷ ವಂಚನೆ

    ಬಾಕ್ಸ್ ತೆಗೆದು ನೋಡಿದ ಸುಮಾರು 6.50 ಲಕ್ಷ ಮೌಲ್ಯದ 130 ಗ್ರಾಂ ಚರಸ್ ಪತ್ತೆಯಾಗಿದೆ. ಇವುಗಳನ್ನು ಋಷಿಕೇಶದಿಂದ ಪೋಸ್ಟ್ ಮೂಲಕ ಕಳುಹಿಸಲಾಗಿತ್ತು. ಕೇರಳ ಮೂಲದ ಆರೋಪಿ ಅದಿತ್ ಸರ್ವೋತ್ತಮ್ ಎಂಬವನು ಪಾರ್ಸೆಲ್ ಮಾಡಿದ್ದನು. ಸದ್ಯ ಅದಿತ್ ತಲೆಮರೆಸಿಕೊಂಡಿದ್ದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜಸ್ಥಾನ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್‌ ಪಾಸಿಟಿವ್‌

  • ನನ್ನ ಪಾಲಿಗೆ ಇಂದು, ಭವಿಷ್ಯವೂ ನೀನೇ : ಚಿರು ನೆನೆದ ಮೇಘನಾ ರಾಜ್

    ನನ್ನ ಪಾಲಿಗೆ ಇಂದು, ಭವಿಷ್ಯವೂ ನೀನೇ : ಚಿರು ನೆನೆದ ಮೇಘನಾ ರಾಜ್

    ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ (Chiranjeevi Sarja) ನಿಧನರಾಗಿ ಇಂದಿಗೆ ಮೂರು ವರ್ಷ. ಹೃದಯಾಘಾತದಿಂದ ಹಠಾತ್ತಾಗಿ ನಿಧನ ಹೊಂದಿದ ಚಿರು ಆಗಷ್ಟೇ ಮದುವೆಯಾಗಿದ್ದರು. ಅಸಂಖ್ಯಾತ ಅಭಿಮಾನಿಗಳ ಜೊತೆ ಪ್ರೀತಿಯ ಮಡದಿಯನ್ನೂ ಅವರು ಬಿಟ್ಟು ಹೋದರು. ಈ ನೋವಿನಲ್ಲೇ ಬದುಕುತ್ತಿರುವ ಪತ್ನಿ, ನಟಿ ಮೇಘನಾ ರಾಜ್, ಇಂದು ಪತಿಗಾಗಿ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

    ಚಿರು ಜೊತೆಗಿನ ಆತ್ಮೀಯ ಫೋಟೋವನ್ನು ಹಂಚಿಕೊಂಡಿರುವ ಮೇಘನಾ ರಾಜ್, ‘ನನಗೆ ನಿನ್ನೆ, ನಾಳೆ, ಭವಿಷ್ಯವೂ ನೀನೇʼ ಎಂದು ಭಾವುಕರಾಗಿ ಸಾಲುಗಳನ್ನು ಬರೆದಿದ್ದಾರೆ. ಚಿರುವನ್ನು ಹಿಂದಿನಿಂದ ತಬ್ಬಿಕೊಂಡ ಫೋಟೋವನ್ನು ಶೇರ್ ಮಾಡಿದ್ದಾರೆ. ಫೋಟೋ ಮತ್ತು ಮೇಘನಾ ರಾಜ್ ಬರೆದ ಸಾಲುಗಳು ನಿಜಕ್ಕೂ ಭಾವುಕ ಪ್ರಪಂಚಕ್ಕೆ ಕರೆದುಕೊಂಡು ಹೋಗುತ್ತವೆ. ಇದನ್ನೂ ಓದಿ:ಪ್ರಣಿತಾ ಹಾಟ್‌ನೆಸ್‌ಗೆ ಸಂತೂರ್ ಮಮ್ಮಿ ಎಂದ ನೆಟ್ಟಿಗರು

    ಚಿರಂಜೀವಿ ಸರ್ಜಾ ಅವರನ್ನು ಪುತ್ರನಲ್ಲಿ ಕಾಣುತ್ತಿರುವ ಮೇಘನಾ ರಾಜ್ (Meghana Raj) ಮೊನ್ನೆಯಷ್ಟೇ ರಾಯನ್ ರಾಜ್ ಸರ್ಜಾ (Rayaan Raj Sarja) ರನ್ನು ಶಾಲೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಮೇಘನಾ ರಾಜ್, ಪೋಸ್ಟ್ ಹಂಚಿಕೊಂಡು ಭಾವುಕರಾಗಿದ್ದರು. ಅವರ ಆ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು.

    ಸರ್ಜಾ ಕುಟುಂಬದ ಖುಷಿ ರಾಯನ್, ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ಮಗನ ಆರೈಕೆಯಲ್ಲಿ ತನ್ನ ನೋವನ್ನೆಲ್ಲ ಮರೆಯಲು ನಟಿ ಮೇಘನಾ ಪ್ರಯತ್ನಿಸುತ್ತಿದ್ದಾರೆ. ಮಗನ ಖುಷಿಯಲ್ಲಿ ತನ್ನ ಖುಷಿಯನ್ನ ಕಾಣುತ್ತಿದ್ದಾರೆ. ಹೀಗಿರುವಾಗ ಪುತ್ರ ರಾಯನ್ ಶಾಲೆಗೆ ಕಾಲಿಟ್ಟಿರುವ ಬಗ್ಗೆ ನಟಿ ಪೋಸ್ಟ್ ಶೇರ್ ಮಾಡಿದ್ದರು.

    ನಾವು ಪೋಷಕರಾದ ಮೇಲೆ ಮಕ್ಕಳು ಮಾತ್ರವಲ್ಲ ನಾವು ಕೂಡ ಜೀವನ ಪ್ರತಿಯೊಂದು ಮೈಲಿಗಲ್ಲು ದಾಟುತ್ತೀವಿ ಎಂದು ಮೇಘನಾ ಬರೆದುಕೊಂಡಿದ್ದು. ಇಂದು ನಮ್ಮ ಜೀವನದ ತುಂಬಾ ಸ್ಪೆಷಲ್ ದಿನವಾಗಿದೆ. ರಾಯನ್ ರಾಜ್ ಸರ್ಜಾ ಸ್ಕೂಲ್‌ನ ಮೊದಲ ದಿನ ಇಂದು. ನನ್ನ ಭಾವನೆಗಳನ್ನು ಪದಗಳಲ್ಲಿ ವರ್ಣಿಸಲು ಆಗುವುದಿಲ್ಲ. ವಿದ್ಯಾಭ್ಯಾಸ, ಜ್ಞಾನ ಹಾಗೂ ಜೀವನದ ಅತಿ ಅಮೂಲ್ಯವಾದ ಪಾಠಗಳನ್ನು ಕಲಿಯುವುದ್ದಕ್ಕೆ ರಾಯನ್ ಮೊದಲ ಹೆಜ್ಜೆ ಇಡುತ್ತಿದ್ದಾನೆ. ನಿಮ್ಮ ಹಾರೈಕೆ ಮತ್ತು ಪ್ರೀತಿ ಅವನ ಮೇಲಿರಲಿ ಎಂದು ಮೇಘನಾ ರಾಜ್ ಹೇಳಿದ್ದರು.

     

    ಇನ್ನೂ ಮೇಘನಾ ರಾಜ್ ಅವರು ‘ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಆಗಿದ್ದಾರೆ. ಫೀಮೇಲ್ ಓರಿಯೆಂಟೆಡ್ ಚಿತ್ರದಲ್ಲಿ ಮೇಘನಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

  • ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತ ಆಗಿರಲಿ: ಯಾರಿಗಾಗಿ ಬರೆದರು ಕಂಗನಾ?

    ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತ ಆಗಿರಲಿ: ಯಾರಿಗಾಗಿ ಬರೆದರು ಕಂಗನಾ?

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut), ಸೋಷಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ಪೋಸ್ಟ್ ಹಾಕಿ ಬೆಂಕಿ ಹಾಕುತ್ತಲೇ ಇರುತ್ತಾರೆ. ಒಂದೊಂದು ಸಲ ಆ ಬೆಂಕಿ ಯಾರಿಗೋ ತಟ್ಟುತ್ತದೆ. ಮತ್ತೊಂದು ಸಾರಿ ತಟ್ಟದೇ ಆರುತ್ತದೆ. ಈ ಬಾರಿಯೂ ಟ್ವಿಟರ್ (Twitter) ನಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿರುವ ಅವರು, ಅದನ್ನು ಯಾರಿಗೆ ಹೇಳಿದ್ದಾರೆ ಎನ್ನುವುದನ್ನು ಮಾತ್ರ ಗೌಪ್ಯವಾಗಿ ಇಟ್ಟಿದ್ದಾರೆ.

    ಕೆಲವು ವಿಚಾರಗಳಲ್ಲಿ ಕಂಗನಾ ರಣಾವತ್ ನೇರ, ದಿಟ್ಟ. ಯಾರಿಗೆ ತಮ್ಮ ಮಾತು ತಲುಪಬೇಕಿತ್ತೋ ಅದನ್ನು ನೇರವಾಗಿಯೇ ತಲುಪಿಸುತ್ತಾರೆ. ಅದರಲ್ಲೂ ಕರಣ್ ಜೋಹಾರ್ ಬಗ್ಗೆ ನೇರವಾಗಿಯೇ ರಣಕಣಕ್ಕೆ ಆಹ್ವಾನಿಸುತ್ತಾರೆ. ಆದರೆ, ಕೆಲವರ ವಿಚಾರದಲ್ಲಿ ಪರೋಕ್ಷವಾಗಿ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಗಾಗಿ ಇವತ್ತು ಬರೆದ ಬೆಡ್, ಹಾಸಿಗೆ, ಲೈಂಗಿಕ ವಿಚಾರ ಯಾರ ಮೇಲಿನ ಪ್ರಸ್ತಾಪ ಎನ್ನುವುದು ಗೊತ್ತಾಗಿಲ್ಲ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಹೆಣ್ಣು (Female)  ಗಂಡು (Male) ತಾರತಮ್ಯದ ಬಗ್ಗೆಯೂ ಮಾತನಾಡಿದ ಅವರು, ನಮ್ಮ ವೃತ್ತಿಯ ಮೇಲೆಯೇ ನಮ್ಮ ಐಡೆಂಟಿಟಿ ನಿರ್ಧಾರವಾಗುತ್ತದೆ. ಯಾರೂ ಈಗ ನಟಿ, ನಿರ್ದೇಶಕಿ ಎಂದು ಕರೆಯುವುದಿಲ್ಲ. ಕಲಾವಿದರು ಮತ್ತು ನಿರ್ದೇಶಕರು ಎನ್ನುತ್ತಾರೆ. ಜಗತ್ತು ನೀವು ಏನು ಮಾಡುತ್ತೀರಿ ಎನ್ನುವುದರ ಮೇಲೆ ನಿಮ್ಮನ್ನು ನಿರ್ಧರಿಸುತ್ತದೆ ಹೊರತು, ನೀವು ಬೆಡ್ ಮೇಲೆ ಏನು ಮಾಡಿದ್ದೀರಿ ಎನ್ನುವುದರ ಮೇಲಲ್ಲ’ ಎಂದು ಬರೆದುಕೊಂಡಿದ್ದಾರೆ.

    ಲೈಂಗಿಕ ಆದ್ಯತೆಗಳು ಅವು  ಕೇವಲ ಹಾಸಿಗೆಗೆ ಮಾತ್ರ ಸೀಮಿತವಾಗಿರಲಿ. ಅದೇ ನಿಮ್ಮ ಗುರುತಾಗಬಾರದು ಎಂದು ಮಾರ್ಮಿಕವಾಗಿ ಕಂಗನಾ ಬರೆದುಕೊಂಡಿದ್ದಾರೆ. ಈ ಕುರಿತಂತೆ ಹಲವರು ಹಲವು ರೀತಿಯಲ್ಲಿ ಕಂಗನಾಗೆ ಪ್ರಶ್ನೆ ಮಾಡಿದ್ದಾರೆ. ಏನನ್ನು ನೀವು ನೇರವಾಗಿ ಹೇಳುವುದಕ್ಕೆ ಹೊರಟಿದ್ದೀರೋ, ಅದನ್ನು ನೇರವಾಗಿ ಹೇಳಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

  • ಪಾಕಿಸ್ತಾನ ಧ್ವಜದ ಸಿಂಹ ಪೋಸ್ಟ್ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

    ಪಾಕಿಸ್ತಾನ ಧ್ವಜದ ಸಿಂಹ ಪೋಸ್ಟ್ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

    ವಿಜಯಪುರ: ಪಾಕಿಸ್ತಾನ ಧ್ವಜ ಮಾದರಿಗೆ ಸಿಂಹದ ಚಿತ್ರ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಳಿ ಘಟನೆ ನಡೆದಿದೆ.

    ಹೊನವಾಡ ಗ್ರಾಮದ ಪೈಲ್ವಾನ್ ಉಮೇಶ ಹರಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಜತ್ತ ತಾಲ್ಲೂಕಿನ ಆಸಂಗಿ ಗ್ರಾಮದ ಅಫ್ಜಲ್ ಖಾನ್ ಮುಜಾವರ ಹಾಗೂ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊ ಳಗಾದ ಉಮೇಶ್ ಆರೋಪಿಸಿದ್ದಾನೆ. ಇದನ್ನೂ ಓದಿ: ಶಿರಸಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ 1 ರೂ. ಇಳಿಕೆ

    ಪೈಲ್ವಾನ್ ಅಫ್ಜಲ್, ಹಸಿರು ಸಿಂಹದ ಮೇಲೆ ಅರ್ಧ ಚಂದ್ರನ ಫೋಟೋವನ್ನು ವಾಟ್ಸ್ಆ್ಯಪ್‌ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ಪೈಲ್ವಾನ್ ಉಮೇಶ ಹರಗಿ ವಾಟ್ಸಪ್‌ನಲ್ಲಿ ಪ್ರಶ್ನಿಸಿದ್ದ.

    ಇದಕ್ಕೆ ಹೊನವಾಡ ಗ್ರಾಮದ ಬಳಿ ರಾಡ್‌ನಿಂದ ಹಲ್ಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಗೊಂಡಿರುವ ಉಮೇಶ ಜಿಲ್ಲಾಸ್ಪತ್ರೆ ದಾಖಲಾಗಿದ್ದಾನೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    Live Tv
    [brid partner=56869869 player=32851 video=960834 autoplay=true]