Tag: Postal Voting

  • ಕರ್ನಾಟಕದಲ್ಲಿ ನಾಳೆಯಿಂದ ಮತದಾನ ಆರಂಭ – ಮನೆಗೆ ಬರಲಿದೆ ಮತಗಟ್ಟೆ

    ಕರ್ನಾಟಕದಲ್ಲಿ ನಾಳೆಯಿಂದ ಮತದಾನ ಆರಂಭ – ಮನೆಗೆ ಬರಲಿದೆ ಮತಗಟ್ಟೆ

    ಬೆಂಗಳೂರು: ಏ.26 ರಂದು ಮೊದಲ ಹಂತ ನಡೆಯಲಿರುವ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಹಿರಿಯ ನಾಗರಿಕರ ಮತದಾನ ನಡೆಯಲಿದೆ.

    ರಾಜ್ಯದಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ (ಎವಿಎಸ್‍ಸಿ) ಹಾಗೂ ವಿಶೇಷ ಚೇತನರಿಗೆ (40%ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳ, ಮತದಾರರ ಪಟ್ಟಿಯಲ್ಲಿ ಗುರುತಿಸಿರುವವರಿಗೆ) ಅಂಚೆ ಮತದಾನದ  (Postal voting) ಮೂಲಕ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಬಂಧನ- NIA, ಪೊಲೀಸರಿಗೆ ಪರಮೇಶ್ವರ್‌ ಅಭಿನಂದನೆ

    ಬೆಂಗಳೂರಿನಲ್ಲಿ (Bengaluru) 85 ವರ್ಷ ಮೇಲ್ಪಟ್ಟ 95,128 ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

    85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಿಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೋ ಮೂಲಕ ಸೆರೆಹಿಡಿಯಲಾಗುತ್ತದೆ.

    ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುತ್ತಾರೆ. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಈ ವೇಳೆ ಮತದಾರರು ಸಿಗದಿದ್ದರೆ, ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.

    ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ. ಇದನ್ನೂ ಓದಿ: ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

  • ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    ನವದೆಹಲಿ: ಚುನಾವಣಾ (Election) ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ (Postal Voting) ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ (Central Government)  ಕಡ್ಡಾಯ ಮಾಡಿದೆ.

    ಅಂಚೆ ಮತದಾನದ ದುರ್ಬಳಕೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪಿಸಿದ್ದ ಶಿಫಾರಸ್ಸನ್ನು ಕೇಂದ್ರ ಕಾನೂನು ಸಚಿವಾಲಯ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೂ ಮತ ಚಲಾವಣೆಗೆ ಅವಕಾಶವಿದೆ. ಈ ವೇಳೆ ಅದನ್ನು ಮತಗಟ್ಟೆ ಹೊರಗೆ ಒಯ್ದು ನಂತರ ಚುನಾವಣಾಧಿಕಾರಿಗೆ ನೀಡುತ್ತಿದ್ದರು. ಆದರೆ ಹೆಚ್ಚಿನ ಸಮಯ ಮತ ಚೀಟಿ ಅವರ ಬಳಿ ಇದ್ದಷ್ಟೂ ಅವರು ರಾಜಕೀಯ ಪಕ್ಷಗಳ ಅಥವಾ ಅಭ್ಯರ್ಥಿಗಳ ಬೆದರಿಕೆ, ಲಂಚ ಅಥವಾ ಒತ್ತಡಕ್ಕೆ ಒಳಗಾಗಿ ಮತ ಚಲಾವಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕಾಗಿ ಈ ಬದಲಾವಣೆ ತರಲಾಗಿದೆ. ಇದನ್ನೂ ಓದಿ: ದೊಡ್ಡಗೌಡರ ಕಾಲಿಗೆ ಮಂಡಿಯೂರಿ ನಮಸ್ಕರಿಸಿದ ಸಂಸದ ಪ್ರತಾಪ್‌ಸಿಂಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]