Tag: poster

  • ಹಬ್ಬದಂದೇ ಅಭಿಮಾನಿಗಳಿಗೆ ಪ್ರಭಾಸ್ ಸಿಹಿ – ರಾಧೆ ಶ್ಯಾಮ್ ನ್ಯೂ ಪೋಸ್ಟರ್ ರಿಲೀಸ್

    ಹಬ್ಬದಂದೇ ಅಭಿಮಾನಿಗಳಿಗೆ ಪ್ರಭಾಸ್ ಸಿಹಿ – ರಾಧೆ ಶ್ಯಾಮ್ ನ್ಯೂ ಪೋಸ್ಟರ್ ರಿಲೀಸ್

    ಹೈದರಾಬಾದ್: ಯುಗಾದಿ ಹಬ್ಬದ ಪ್ರಯುಕ್ತ ಟಾಲಿವುಡ್ ನಟ ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ರಾಧೆ ಶ್ಯಾಮ್ ಚಿತ್ರದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

    ರಾಧೆ ಶ್ಯಾಮ್ ಸಿನಿಮಾದ ಈ ನೂತನ ಪೋಸ್ಟರ್ ರಿಲೀಸ್ ಆಗುತ್ತಿದ್ದಂತೆಯೇ ಸೋಶಿಯಲ್ ಮೀಡಿಯದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಫೋಟೋದಲ್ಲಿ ಪ್ರಭಾಸ್ ಲವ್ವರ್ ಬಾಯ್‍ನಂತೆ ರೆಟ್ರೋ ಲುಕ್‍ನಲ್ಲಿ ಮಿಂಚಿದ್ದು, ಕಂದು ಬಣ್ಣದ ಸ್ವೆಟರ್, ಅದಕ್ಕೆ ಸೂಟ್ ಆಗುವಂತಹ ಪ್ಯಾಂಟ್ ಧರಿಸಿ, ಕಂಬವನ್ನು ಹಿಡಿದುಕೊಂಡು ನಿಂತಿರುವುದನ್ನು ಕಾಣಬಹುದಾಗಿದೆ. ಅಲ್ಲದೆ ಪೋಸ್ಟರ್‍ನಲ್ಲಿ ಮಿಲಿಯನ್-ಡಾಲರ್‍ಗಳಿಗೆ ಸಾಟಿ ಎಂಬಂತೆ ಪ್ರಭಾಸ್ ಸ್ಮೈಲ್ ನೀಡಿದ್ದಾರೆ.

     

    View this post on Instagram

     

    A post shared by Prabhas (@actorprabhas)

    ಸದ್ಯ ಈ ಪೋಸ್ಟರ್‍ನನ್ನು ಪ್ರಭಾಸ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಸುಂದರ ಹಬ್ಬದ ಆಚರಣೆಯ ಪ್ರಮುಖ ಅಂಶವೆಂದರೆ ಪ್ರೀತಿ. ಅದನ್ನು ಅನುಭವಿಸಿ, ಅದನ್ನು ಪಾಲಿಸಿ, ಅದನ್ನು ಹಂಚಿ. ನಿಮಗೂ ಹಾಗೂ ನಿಮ್ಮ ಪ್ರೀತಿ ಪಾತ್ರರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Prabhas (@actorprabhas)

    ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ನಟಿ ಪೂಜಾ ಹೆಗ್ಡೆ ಇದೇ ಮೊದಲ ಬಾರಿಗೆ ಡ್ಯೂಯೆಟ್ ಆಡುತ್ತಿದ್ದು, ರಾಧಾಕೃಷ್ಣ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ಮುರಳಿ ಶರ್ಮ, ಸಚಿನ್ ಖೇಡೇಕರ್, ಪ್ರಿಯದರ್ಶಿ, ಸಶಾ ಚೆಟ್ರಿ, ಕುನಾಲ್ ರಾಯ್, ಕಪೂರ್ ಮತ್ತು ಸತ್ಯನ್ ನಟಿಸಿದ್ದಾರೆ. ರಾಧೆ ಶ್ಯಾಮ್ ಮುಂಬರುವ ಜುಲೈ 30 ರಂದು ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆ ಮೇಲೆ ಬರಲಿದೆ.

  • ನ್ಯೂಯಾರ್ಕ್ ನಾಸ್ಡಾಕ್ ಕಟ್ಟಡದ ಸ್ಕ್ರೀನ್ ಮೇಲೆ 3ಡಿಯಲ್ಲಿ ರಾಮ್‍ಚರಣ್!

    ನ್ಯೂಯಾರ್ಕ್ ನಾಸ್ಡಾಕ್ ಕಟ್ಟಡದ ಸ್ಕ್ರೀನ್ ಮೇಲೆ 3ಡಿಯಲ್ಲಿ ರಾಮ್‍ಚರಣ್!

    ಹೈದರಾಬಾದ್: ಟಾಲಿವುಡ್ ನಟ ಮೆಗಾ ಪವರ್ ಸ್ಟಾರ್ ರಾಮ್‍ಚರಣ್ ತೇಜ 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾಮ್‍ಚರಣ್ ಹುಟ್ಟುಹಬ್ಬಕ್ಕೆ ಸೋಶಿಯಲ್ ಮೀಡಿಯದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

    ಸದ್ಯ ರಾಮ್‍ಚರಣ್ ತೇಜ ಹುಟ್ಟುಹಬ್ಬದ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಶೇಷವೆಂದರೆ ನ್ಯೂಯಾರ್ಕ್‍ನ ಐಕಾನಿಕ್ ಟೈಮ್ಸ್ ಸ್ಕ್ವೇರ್‍ನ ನಾಸ್ಡಾಕ್ ಕಟ್ಟಡದ ಮೇಲೆ ರಾಮ್‍ಚರಣ್ ತೇಜರ ಫೋಟೋವನ್ನು 3ಡಿಯಲ್ಲಿ ಬಿಗ್ ಸ್ಕ್ರೀನ್ ಮೇಲೆ ಪ್ರದರ್ಶಿಸಲಾಗಿದೆ. ಇದನ್ನು ಕಂಡು ರಾಮ್‍ಚರಣ್ ತೇಜ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ ಕೂಡ ತಮ್ಮ ಮುಂದಿನ ಆಚಾರ್ಯ ಸಿನಿಮಾದ ಪೋಸ್ಟರ್‍ನನ್ನು ಹಂಚಿಕೊಳ್ಳುವ ಮೂಲಕ ಮಗನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಶಿವ ನಿರ್ದೇಶಿಸುತ್ತಿದ್ದು, ಪೂಜಾ ಹೆಗ್ಡೆ ರಾಮ್‍ಚರಣ್‍ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರು ಸಿನಿಮಾದ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ನಟಿ ಕಾಜಲ್ ಅಗರ್‍ವಾಲ್ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಚಾರ್ಯ ಸಿನಿಮಾ ಮೇ 13ರಂದು ಬಿಗ್ ಸ್ಕ್ರೀನ್ ಮೇಲೆ ತೆರೆ ಬರಲಿದೆ.

    ರಾಮ್‍ಚರಣ್ ತೇಜ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಆರ್‍ಆರ್‍ಆರ್ ಚಿತ್ರತಂಡ ನಿನ್ನೆ ಪೋಸ್ಟರ್‍ನನ್ನು ರಿಲೀಸ್ ಮಾಡುವ ಮೂಲಕ ವಿಶ್ ಮಾಡಿದೆ. ಪೋಸ್ಟರ್‍ನಲ್ಲಿ ರಾಮ್‍ಚರಣ್ ತೇಜ ರಾಮನ ಅವತಾರದಲ್ಲಿ ಮಿಂಚಿದ್ದಾರೆ. ಇನ್ನೂ ಈ ಸಿನಿಮಾದ ಮತ್ತೋರ್ವ ಪ್ರಮುಖ ನಾಯಕನಾಗಿ ಜ್ಯೂನಿಯರ್ ಎನ್‍ಟಿಆರ್ ಅಭಿನಯಿಸಿದ್ದು, ಎಸ್‍ಎಸ್ ರಾಜಮೌಳಿ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಾಲಿವುಡ್ ಖ್ಯಾತ ನಿರ್ದೇಶಕ ಶಂಕರ್ ಅವರು ರಾಮ್ ಚರಣ್ ಅವರ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

     

    View this post on Instagram

     

    A post shared by RRR Movie (@rrrmovie)

    ಈ ಹಿಂದೆ ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಪ್ರವೇಶಿಸಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಬುರ್ಜ್ ಖಲೀಫಾ ಕಟ್ಟದ ಪರದೆ ಮೇಲೆ ಕಿಚ್ಚ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟೀಸರ್‍ನನ್ನು ಬಿಡುಗಡೆಗೊಳಿಸಲಾಗಿತ್ತು.

  • ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಖುಷಿಯಲ್ಲಿರುವ ಜಗ್ಗೇಶ್ ಅವರಿಗೆ ತೋತಾಪುರಿ ಸಿನಿಮಾ ಟೀಂನಿಂದ ವಿಶೇಷ ಉಡುಗೊರೆಯೊಂದು ಸಿಕ್ಕಿದೆ.

    ಜಗ್ಗೇಶ್ ಜನ್ಮದಿನದ ಪ್ರಯುಕ್ತ ತೋತಾಪುರಿ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡುವ ಮೂಲಕ, ಇಂದಿನಿಂದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ವಿಭಿನ್ನ ಟೈಟಲ್ ಮೂಲಕ ಗಾಂಧಿನಗರದಲ್ಲಿ ನಿರೀಕ್ಷೆ ಹುಟ್ಟುಹಾಕಿರುವ ತೋತಾಪುರಿ ಸಿನಿಮಾದ ಶೂಟಿಂಗ್ ಇತ್ತೀಚೆಗಷ್ಟೇ ಕಂಪ್ಲೀಟ್ ಆಗಿದ್ದು, ಇದೀಗ ಜಗ್ಗೇಶ್ ಹುಟ್ಟುಹಬ್ಬಕ್ಕೆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

    ಈ ಹಿಂದೆ ನೀರ್ ದೋಸ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗುವಷ್ಟು ನಗಿಸಿದ್ದ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯ್ ಪ್ರಸಾದ್ ಜೋಡಿ, ನಾಲ್ಕು ವರ್ಷಗಳ ಬಳಿಕ ತೋತಾಪುರಿ ಸಿನಿಮಾದ ಮೂಲಕ ಸಿನಿರಸಿಕರನ್ನು ಮತ್ತಷ್ಟು ರಂಜಿಸಲು ರೆಡಿಯಾಗಿದ್ದಾರೆ.

    ಅಂದಹಾಗೆ ತೋತಾಪುರಿ ಸಿನಿಮಾವನ್ನು ಎರಡು ಭಾಗಗಳಾಗಿ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಕೊರೋನಾ ಲಾಕ್‍ಡೌನ್‍ಗೂ ಮೊದಲೇ ಫಸ್ಟ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದ ಚಿತ್ರತಂಡ ಇತ್ತೀಚೆಗಷ್ಟೇ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲಿಟ್ ಮಾಡುವ ಮೂಲಕ ಎರಡೂ ಸೀಕ್ವೆಲ್‍ಗಳ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಮೊದಲ ಸಿನಿಮಾ ಎಂಬ ದಾಖಲೆ ಬರೆದಿದೆ ತೋತಾಪುರಿ ಸಿನಿಮಾ.

    ಜಗ್ಗೇಶ್ ರೈತನ ಪಾತ್ರದಲ್ಲಿ ಅಭಿನಯಿಸಿದ್ದು, ಹಿಂದೆಂದೂ ಕಾಣಿಸಿಕೊಳ್ಳದ ರೋಲ್‍ನಲ್ಲಿ ಪ್ರೇಕ್ಷಕರನ್ನು ನಕ್ಕು ನಲಿಸಲಿದ್ದಾರೆ. ಜಗ್ಗೇಶ್‍ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಡಾಲಿ ಧನಂಜಯ್, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿ ಇರಲಿದೆ.

    ಸುರೇಶ್  ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಶಿವಲಿಂಗ ಖ್ಯಾತಿಯ ನಿರ್ಮಾಪಕ ಸುರೇಶ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನೂಪ್ ಸೀಳೀನ್ ಮ್ಯೂಸಿಕ್, ನಿರಂಜನ್ ಬಾಬು ಕ್ಯಾಮೆರಾ ವರ್ಕ್, ಸುರೇಶ್ ಅರಸ್ ಸಂಕಲನ ಸಿನಿಮಾಕ್ಕಿರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ತೋತಾಪುರಿ ಚಿತ್ರತಂಡ, ಏಪ್ರಿಲ್ ಅಥವಾ ಮೇ ವೇಳೆಗೆ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಹಾಕಿಕೊಂಡಿದೆ.

  • ರಿವೀಲ್ ಆಯ್ತು ರಾಧೆ ಶ್ಯಾಮ್ ಪೋಸ್ಟರ್ – ನ್ಯೂ ಲುಕ್‍ನಲ್ಲಿ ಪ್ರಭಾಸ್

    ರಿವೀಲ್ ಆಯ್ತು ರಾಧೆ ಶ್ಯಾಮ್ ಪೋಸ್ಟರ್ – ನ್ಯೂ ಲುಕ್‍ನಲ್ಲಿ ಪ್ರಭಾಸ್

    ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ತಮ್ಮ ಮುಂದಿನ ಸಿನಿಮಾ ರಾಧೆ ಶ್ಯಾಮ್ ಪೋಸ್ಟರ್‍ನನ್ನು ಇಂದು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಸಿನಿಮಾದ ಟೀಸರ್‍ನನ್ನು ಫೆಬ್ರವರಿ 14ರಂದು ಪ್ರೇಮಿಗಳ ದಿನದಂದು ಬೆಳಿಗ್ಗೆ 9:18ಕ್ಕೆ ಬಿಡುಗಡೆಗೊಳಿಸುವುದಾಗಿ ಬಹಿರಂಗಪಡಿಸಿದ್ದಾರೆ. ಸದ್ಯ ರಾಧೆ ಶ್ಯಾಮ್ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈ ವರ್ಷದ ಕೊನೆಯಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.

    ಡಾರ್ಲಿಂಗ್ ಪ್ರಭಾಸ್ ತಮ್ಮ ನೂತನ ಸಿನಿಮಾ ರಾಧೆ ಶ್ಯಾಮ್ ಪೋಸ್ಟರ್‍ನನ್ನು ಭಾಷೆಗಳಲ್ಲಿ ರಿಲೀಸ್ ಮಾಡಿದ್ದು, ಪೋಸ್ಟರ್‍ನಲ್ಲಿ ವಸಂತ ಕಾಲದಲ್ಲಿ ಎಲೆಗಳು ಉದುರುತ್ತಿರುವ ವಾತಾವರಣದಲ್ಲಿ ಪ್ರಭಾಸ್ ಕಿತ್ತಳೆ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿ, ಬೀದಿಯೊಂದರಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾದ ಪೋಸ್ಟರ್ ಶೇರ್ ಮಾಡಿಕೊಂಡಿರುವ ಪ್ರಭಾಸ್, ಪ್ರೇಮಗಳ ದಿನದಂದು ನಿಮ್ಮೆಲ್ಲರನ್ನು ನೋಡುತ್ತೇನೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

     

    View this post on Instagram

     

    A post shared by Prabhas (@actorprabhas)

    ಪ್ರೇಮಿಗಳ ದಿನದಂದು ರಿಲೀಸ್ ಆಗುತ್ತಿರುವ ರಾಧೆ ಶ್ಯಾಮ್ ಟೀಸರ್‍ಗೆ ವಾಯ್ಸ್ ಡಬ್ ನೀಡುತ್ತಿರುವ ನಟಿ ಪೂಜಾ ಹೆಗ್ಡೆ ಡಬ್ಬಿಂಗ್ ರೂಮ್‍ನಲ್ಲಿ ಕ್ಲಿಕ್ಕಿಸಿದ ಫೋಟೋವೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಜೊತೆಗೆ ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿರುವ ಟೀಸರ್‍ಗೆ ವಾಯ್ಸ್ ಡಬ್ ಕೊಡಲು ಮುಂಜಾನೆಯೇ ಬಂದಿದ್ದೇನೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದರು.

    ರಾಧೆ ಶ್ಯಾಮ್ ಚಿತ್ರದಲ್ಲಿ ಪ್ರಭಾಸ್ ವಿಕ್ರಮಾದಿತ್ಯ ಪಾತ್ರದಲ್ಲಿ ಮತ್ತು ಪೂಜಾ ಹೆಗ್ಡೆ ಪ್ರೇರಣಾ ಎಂಬ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ರಾಧಾ ಕೃಷ್ಣ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ಇದೊಂದು ಯುರೋಪಿನಲ್ಲಿ ನಡೆದ ಒಂದು ಪ್ರೇಮಕಥೆ ಆಧಾರಿತ ಸಿನಿಮಾಗಿದೆ. ಅಲ್ಲದೆ ಈ ಸಿನಿಮಾಕ್ಕೆ ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ಬಂಡವಾಳ ಹೂಡಿದ್ದು, ತೆಲಗು, ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದೆ.

  • ಮೂರು ಅವತಾರವೆತ್ತಿದ ದಾಸ – ತರುಣ್‍ಗೆ ವಿಶ್ ಮಾಡಿ ಪೋಸ್ಟರ್ ರಿಲೀಸ್

    ಮೂರು ಅವತಾರವೆತ್ತಿದ ದಾಸ – ತರುಣ್‍ಗೆ ವಿಶ್ ಮಾಡಿ ಪೋಸ್ಟರ್ ರಿಲೀಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದ ‘ಯಜಮಾನ’

    ಇಂದು ನಿರ್ದೇಶಕ ತರುಣ್ ಸುಧೀರ್ ಅವರ ಹುಟ್ಟುಹಬ್ಬ. ಹೀಗಾಗಿ ಅನೇಕ ನಟ, ನಟಿಯರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ತರುಣ್ ಸುಧೀರ್ ಅವರಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. ಜೊತೆಗೆ ‘ರಾಬರ್ಟ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ.

    “A Brother from another Mother. ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. ನಿಮ್ಮ ದಾಶ ದರ್ಶನ್ ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ.

    ಬಿಡುಗಡೆಯಾಗಿರುವ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ದರ್ಶನ್ ಮೂರು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪೋಸ್ಟರ್‌ನಲ್ಲಿ ಸದ್ಯದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಯಾವಾಗ ಎಂಬುದನ್ನು ಅಧಿಕೃತವಾಗಿ ತಿಳಿಸಿಲ್ಲ.

    ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಪೋಸ್ಟರ್ ಮೂಲಕವೇ ಭಾರೀ ಸದ್ದು ಮಾಡುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ರಾಬರ್ಟ್’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಲಾಕ್‍ಡೌಡ್‍ನಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.

  • ‘ರಾಧೆ, ಶ್ಯಾಮ್’ ಆದ ಪ್ರಭಾಸ್-ಪೂಜಾ

    ‘ರಾಧೆ, ಶ್ಯಾಮ್’ ಆದ ಪ್ರಭಾಸ್-ಪೂಜಾ

    ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅಭಿನಯದ ‘ಬಾಹುಬಲಿ’, ‘ಸಾಹೋ’ ಸಿನಿಮಾದ ಬಳಿಕ ಅಭಿಮಾನಿಗಳು ಅವರ ಮುಂದಿನ ಸಿನಿಮಾದ ಬಗ್ಗೆ ಭಾರೀ ಕುತೂಹಲ ಹೊಂದಿದ್ದರು. ಇದೀಗ ಪ್ರಭಾಸ್ ಮುಂದಿನ ಸಿನಿಮಾದ ಟೈಟಲ್ ಘೋಷಣೆಯಾಗಿದೆ.

    ನಟ ಪ್ರಭಾಸ್ ಅಭಿನಯದ 20ನೇ ಸಿನಿಮಾ ಇದಾಗಿದ್ದು, ಸಿನಿಮಾ ಸೆಟ್ಟೇರಿದಾಗಿನಿಂದ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಅಲ್ಲದೇ ಸಿನಿಮಾ ಟೈಟಲ್ ಕೂಡ ರಿವೀಲ್ ಮಾಡಿರಲಿಲ್ಲ. ಆದರೆ ಇಂದು ಸ್ವತಃ ಪ್ರಭಾಸ್ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳು ಸರ್‌ಪ್ರೈಸ್ ನೀಡಿದ್ದಾರೆ.

    ಪ್ರಭಾಸ್ ಅಭಿನಯದ 20ನೇ ಸಿನಿಮಾಗೆ ‘ರಾಧೆ ಶ್ಯಾಮ್’ ಎಂದು ಟೈಟಲ್ ಇಡಲಾಗಿದೆ. ಜೊತೆಗೆ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಜೊತೆಗಿರುವ ಒಂದು ಸುಂದರವಾದ ಫಸ್ಟ್‌ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ. ಪೋಸ್ಟರಿನಲ್ಲಿ ಪೂಜಾ ಮತ್ತು ಪ್ರಭಾಸ್ ರೊಮ್ಯಾಂಟಿಕ್ ಲುಕ್‍ನಲ್ಲಿ ಪೋಸ್ ನೀಡಿದ್ದಾರೆ. ಅಲ್ಲದೇ ಅವರ ಬ್ಯಾಕ್ ಡ್ರಾಪ್ ಸಹ ಗಮನ ಸೆಳೆಯುತ್ತಿದೆ. ಪೋಸ್ಟರಿನಲ್ಲಿ ಪ್ರಭಾಸ್ ಮತ್ತು ಪೂಜಾ ರೊಮ್ಯಾಂಟಿಕ್ ಲುಕ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಪ್ರಭಾಸ್ ಪಾಲಿಗೆ ಜುಲೈ 10 ಬಹಳ ವಿಶೇಷವಾದ ದಿನವಾಗಿದೆ. ಇಂದೇ ‘ಬಾಹುಬಲಿ’ ಸಿನಿಮಾ ತೆರೆಕಂಡಿತ್ತು. ಇದೀಗ ಈ ಸಿನಿಮಾ ರಿಲೀಸ್ ಆಗಿ ಐದು ವರ್ಷಗಳಾಗಿದೆ. ಈ ನೆನಪಿನಲ್ಲೇ ಪ್ರಭಾಸ್ ತಮ್ಮ ಮುಂದಿನ ಸಿನಿಮಾ ‘ರಾಧೆ ಶ್ಯಾಮ್’ನ ಟೈಟಲ್ ಮತ್ತು ಫಸ್ಟ್‌ಲುಕ್ ರಿಲೀಸ್ ಮಾಡಿದ್ದಾರೆ.

    ಪ್ರಭಾಸ್ ಆರಂಭದಿಂದಲೂ ಆ್ಯಕ್ಷನ್ ಸಿನಿಮಾಗಳಿಗೆ ಫೇಮಸ್ ಆದವರು. ಆದರೆ ‘ರಾಧೆ ಶ್ಯಾಮ್’ ಸಿನಿಮಾ ಪೋಸ್ಟರ್ ನೋಡಿದರೆ ಪ್ರಭಾಸ್ ಲವರ್ ಬಾಯ್ ಗೆಟಪ್‍ನಲ್ಲಿ ಮಿಂಚಲಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ರಾಧ ಕೃಷ್ಣ ಕುಮಾರ್ ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ.

    ‘ರಾಧೆ-ಶ್ಯಾಮ್ ಸಿನಿಮಾ ನಾಲ್ಕು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ನಾಲ್ಕು ಭಾಷೆಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ತೆಲಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬರಲಿದೆ. ಈ ಸಿನಿಮಾ ಪೋಸ್ಟರ್ ಶೇರ್ ಮಾಡಿ. ‘ಇದು ನಿಮಗಾಗಿ, ನೀವೆಲ್ಲರೂ ಇಷ್ಟಪಡುತ್ತೀರ ಎಂದು ಭಾವಿಸುತ್ತೇನೆ” ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    https://www.instagram.com/p/CCcr1VaH32n/?igshid=1c14hqi6enfek

  • ರಗಡ್ ಲುಕ್‍ನಲ್ಲಿ ‘ರಾಬರ್ಟ್’ ಮಿಂಚಿಂಗ್

    ರಗಡ್ ಲುಕ್‍ನಲ್ಲಿ ‘ರಾಬರ್ಟ್’ ಮಿಂಚಿಂಗ್

    ಬೆಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.

    ಭಾನುವಾರವೇ ಈ ಸಂಬಂಧ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿ “ಮೇ 25ರ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದರ್ಶನ್ ಅವರ ಖಾತೆಯಿಂದ ಪೋಸ್ಟರ್ ಬಿಡುಗಡೆಯಾಗಲಿದೆ” ಎಂದು ತಿಳಿಸಿದ್ದರು. ಅದರಂತೆಯೇ ಚಿತ್ರದ ಪೋಸ್ಟರ್ ನಟ ದರ್ಶನ್ ಅವರ ಖಾತೆಯಿಂದ ಬಿಡುಗಡೆಯಾಗಿದೆ.

    ಬಿಡುಗಡೆಯಾಗಿರುವ ಪೋಸ್ಟರಿನಲ್ಲಿ ದರ್ಶನ್ ಉದ್ದ ಕೂದಲು, ಗಡ್ಡ ಬಿಟ್ಟಿದ್ದು, ಕೂಲಿಂಗ್ ಗ್ಲಾಸ್ ಹಾಕಿಕೊಂಡು ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

    “ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ ‘ರಾಬರ್ಟ್’ ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ, ಮನೆಯವರಿಗಾಗಿ ಜಾಗೃತರಾಗಿರಿ” ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾದಿಂದ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ. ಈ ಮೂಲಕ ವರ್ಷದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಈ ನಡುವೆಯೇ ರಾಬರ್ಟ್ ಸಿನಿಮಾವನ್ನು ಆನ್‍ಲೈನ್ ಅಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಈ ಸುದ್ದಿಯನ್ನು ಉಮಾಪತಿ ಸುಳ್ಳು ಎಂದು ಹೇಳಿದ್ದಾರೆ.

  • ಪ್ರೆಸೆಂಟ್ ಪ್ರಪಂಚ 0% ಲವ್ ಪೋಸ್ಟರ್ ರಿಲೀಸ್- ಗಮನ ಸೆಳೆಯುತ್ತಿದೆ ಅಭಿರಾಮ್ 2ನೇ ಚಿತ್ರದ ಪೋಸ್ಟರ್

    ಪ್ರೆಸೆಂಟ್ ಪ್ರಪಂಚ 0% ಲವ್ ಪೋಸ್ಟರ್ ರಿಲೀಸ್- ಗಮನ ಸೆಳೆಯುತ್ತಿದೆ ಅಭಿರಾಮ್ 2ನೇ ಚಿತ್ರದ ಪೋಸ್ಟರ್

    ಹಿಂದೆ ಸಂಯುಕ್ತ-2 ಸಿನಿಮಾ ನಿರ್ದೇಶಿಸಿದ್ದ ಅಭಿರಾಮ್ ಈಗ ಕಾಮಿಡಿ ಎಂಟರ್ ಟೈನ್ಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕನ್ನು ರಂಜಿಸಲು ಸಜ್ಜಾಗಿದ್ದಾರೆ. ಪ್ರೆಸೆಂಟ್ ಪ್ರಪಂಚ 0% ಲವ್ ಎಂಬ ಕಾಮಿಡಿ ಎಂಟರ್ ಟೈನ್ಮೆಂಟ್ ಕಂ ಥ್ರಿಲ್ಲರ್ ಎಲಿಮೆಂಟ್ ಇರೋ ಸಿನಿಮಾ ನಿರ್ದೇಶನ ಮಾಡಿ ಬಿಡುಗಡೆ ಹಂತಕ್ಕೆ ಬಂದಿದ್ದಾರೆ. ಪ್ರೆಸೆಂಟ್ ಪ್ರಪಂಚ 0% ಲವ್ ಚಿತ್ರದ ಪೋಸ್ಟರ್ ರಿಲೀಸ್ ಮಾಡೋ ಮುಖಾಂತರ ಚಿತ್ರತಂಡ ಕುತೂಹಲ ಉಂಟುಮಾಡಿದೆ.

    ಸಂಯುಕ್ತ-2 ಚಿತ್ರಕ್ಕೆ ನಿರ್ಮಾಪಕರಾಗಿದ್ದ ಅರ್ಜುನ್ ಮಂಜುನಾಥ್ ಈ ಚಿತ್ರದಲ್ಲಿ ನಾಯಕ ನಟನಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕಾಗಿ ತೂಕ ಇಳಿಸಿಕೊಂಡು ಸಖತ್ ಯಂಗ್ ಲುಕ್ ನಲ್ಲಿ ಅರ್ಜುನ್ ಮಂಜುನಾಥ್ ಕಾಣಿಸಿಕೊಂಡಿದ್ದಾರೆ. ಸಂಭ್ರಮಶ್ರೀ ಚಿತ್ರದ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಪ್ರೆಸೆಂಟ್ ಪ್ರಪಂಚ 0% ಲವ್ ಸಿನಿಮಾ ಪ್ರಸ್ತುತ ಸಾಫ್ಟ್ ವೇರ್ ಯುಗದಲ್ಲಿ ಕಳೆದು ಹೋದ ಜನರು ತಮ್ಮ ಜೀವನದಲ್ಲಿ ಏನನ್ನು ಕಳೆದುಕೊಂಡಿದ್ದಾರೆ, ಏನಿದ್ರೆ ಜೀವನ ಚೆನ್ನಾಗಿರುತ್ತೆ ಎಂಬ ಸೂಕ್ಷ್ಮ ಎಳೆ ಇಟ್ಟುಕೊಂಡು ಈ ಚಿತ್ರ ಹೆಣೆಯಲಾಗಿದೆ. ಇದನ್ನು ಕಾಮಿಡಿ ಎಂಟಟೈನ್ಮೆಂಟ್ ಮೂಲಕ ತೆರೆ ಮೇಲೆ ತರೋ ಪ್ರಯತ್ನವನ್ನು ನಿರ್ದೇಶಕ ಅಭಿರಾಮ್ ಮಾಡಿದ್ದಾರೆ.

    ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸದ್ಯಕ್ಕೆ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಉಂಟುಮಾಡಿರೋ ಈ ಚಿತ್ರ ಮಾರ್ಚ್ ತಿಂಗಳಲ್ಲಿ ತೆರೆಗೆ ತರೋದಕ್ಕೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

    ತಬಲ ನಾಣಿ, ಚಂದನ್ ಆಚಾರ್, ಓಂ ಪ್ರಕಾಶ್ ರಾವ್,ಗೋವಿಂದೇ ಗೌಡ, ಯಶಸ್ ಅಭಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರೆಸೆಂಟ್ ಪ್ರಪಂಚ 0% ಲವ್ ಚಿತ್ರಕ್ಕೆ ಕೃಷ್ಣ ಮೂರ್ತಿ ಎಲ್, ರವಿಕುಮಾರ್ ಹೆಚ್.ಪಿ ಬಂಡವಾಳ ಹೂಡಿದ್ದು, ರವಿ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ಹುಟ್ಟುಹಬ್ಬದಂದೇ ಎದುರಾಳಿಗಳನ್ನು ಚಚ್ಚಲು ಸುತ್ತಿಗೆ ಹಿಡಿದು ಬಂದ ರಾಕಿಭಾಯ್

    ಹುಟ್ಟುಹಬ್ಬದಂದೇ ಎದುರಾಳಿಗಳನ್ನು ಚಚ್ಚಲು ಸುತ್ತಿಗೆ ಹಿಡಿದು ಬಂದ ರಾಕಿಭಾಯ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಎದುರಾಳಿಗಳನ್ನು ಚಚ್ಚಲು ರಾಕಿಭಾಯ್ ಸುತ್ತಿ ಹಿಡಿದುಕೊಂಡು ಬಂದಿದ್ದಾರೆ.

    ಯಶ್ ನಟಿಸುತ್ತಿರುವ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರಿನಲ್ಲಿ ಯಶ್ ಕೈಯಲ್ಲಿ ಸುತ್ತಿಗೆ ಹಿಡಿದು ಖಡಕ್ ಪೋಸ್ ನೀಡಿದ್ದಾರೆ. ಸದ್ಯ ಯಶ್ ಅವರ ಈ ಹೊಸ ಪೋಸ್ಟರಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ: ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ಐರಾ – ರಾಧಿಕಾರಿಂದ ಯಶ್ ಇನ್‍ಸ್ಟಾ ಖಾತೆ ಹ್ಯಾಕ್

    ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ರಾತ್ರಿ 11.58ಕ್ಕೆ ತಮ್ಮ ಟ್ವಿಟ್ಟರಿನಲ್ಲಿ ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ರಾಕಿಭಾಯ್ ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಕಿ ಈಗ ಬ್ರಾಂಡ್ ಆಗಿದೆ. ಎಲ್ಲರು ಯಶ್ ಅವರ ಜೊತೆ ಸುರಕ್ಷಿತ ಹುಟ್ಟುಹಬ್ಬ ಆಚರಿಸಿ” ಎಂದು ಟ್ವೀಟ್ ಮಾಡಿ ಮಾಡಿದ್ದಾರೆ. ಬೆಳಗ್ಗೆ ಆಗುವುರಷ್ಟರಲ್ಲಿ ಈ ಟ್ವೀಟ್ ಅನ್ನು 13 ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದರೆ 3 ಸಾವಿರಕ್ಕೂ ಅಧಿಕ ಮಂದಿ ರಿಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಹೆಜ್ಜೆ ಇಟ್ಟಾಗಿದೆ, ಆಟದ ರೇಂಜ್ ಚೇಂಜ್ ಆಗಿದೆ: ಯಶ್ ಖಡಕ್ ಡೈಲಾಗ್

    https://twitter.com/prashanth_neel/status/1214614822832103424?ref_src=twsrc%5Etfw%7Ctwcamp%5Etweetembed%7Ctwterm%5E1214614822832103424&ref_url=https%3A%2F%2Findianexpress.com%2Farticle%2Fentertainment%2Fregional%2Fkgf-2-new-poster-yash-birthday-6205213%2F

    ಹುಟ್ಟುಹಬ್ಬದ ದಿನ ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಯಶ್, `ಕೆಜಿಎಫ್ 2′ ಚಿತ್ರದ ಒಂದು ಡೈಲಾಗ್ ನಿಮಗೋಸ್ಕರ ಹೇಳುತ್ತೇನೆ. ಸಿನಿಮಾದಲ್ಲಿ ನೋಡಿದ್ದರೆ ಮಜಾ ಬಂದಿರೋದು. ಆದರೆ ನಿಮಗೋಸ್ಕರ ಸಣ್ಣದಾಗಿ ಹೇಳುತ್ತೇನೆ ಎಂದು ಚಿತ್ರದ ಡೈಲಾಗ್ ಹೇಳಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಕಿಭಾಯ್ – ವಿಶ್ವ ದಾಖಲೆ ನಿರ್ಮಿಸಿದ ಯಶ್ ಬರ್ತ್ ಡೇ

    “ಏನಂದೆ ಒಂದು ಹೆಜ್ಜೆ ಇಟ್ಕೊಂಡು ಬಂದೋನು ಅಂತ ಹೇಳ್ದ. ಕರೆಕ್ಟ್, ಗಡಿಯಾರದಲ್ಲಿ ಒಂದು ಗಂಟೆಯಾಗಬೇಕು ಅಂದರೆ ದೊಡ್ಡ ಮುಳ್ಳು 60 ಹೆಜ್ಜೆ ಇಡಬೇಕು. ಆದರೆ ಚಿಕ್ಕ ಮುಳ್ಳು ಒಂದು ಹೆಜ್ಜೆ ಇಟ್ಟರೆ ಸಾಕು. ನಾನು ಹೆಜ್ಜೆ ಇಟ್ಟಾಗಿದೆ, ಆಟದ ರೇಂಜ್ ಚೇಂಜ್ ಆಗಿದೆ. ನಿನ್ನ ಹಾವು-ಏಣಿ ಆಟಕ್ಕೆ ಮುಂಗುಸಿ ಇಳಿದಿದೆ. ಇನ್ಮೇಲೆಯಿಂದ ಆ ಟೆರಿಟರಿ ನಂದು, ಈ ಟೆರಿಟರಿ ನಿಂದು ಅನ್ನೋದೆಲ್ಲ ಬಿಟ್ಟುಬಿಡಿ, ವಲ್ರ್ಡ್ ಈಸ್ ಮೈ ಟೆರಿಟರಿ” ಎಂದು ಸಿನಿಮಾದ ಖಡಕ್ ಡೈಲಾಗ್ ಹೇಳಿದರು.

  • ರಾಜುಗೌಡ ಹುಟ್ಟುಹಬ್ಬದ ಬ್ಯಾನರ್, ಪೋಸ್ಟರ್ ಹರಿದ ಕಿಡಿಗೇಡಿಗಳು

    ರಾಜುಗೌಡ ಹುಟ್ಟುಹಬ್ಬದ ಬ್ಯಾನರ್, ಪೋಸ್ಟರ್ ಹರಿದ ಕಿಡಿಗೇಡಿಗಳು

    ಯಾದಗಿರಿ: ಶಾಸಕ ರಾಜುಗೌಡ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಮತ್ತು ಪೋಸ್ಟರ್ ಹಾಕಲು ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲುಗಳಿಂದ ಹಲ್ಲೆ ನಡೆಸುವ ಮೂಲಕ ರಾಜುಗೌಡರ ಭಾವಚಿತ್ರವುಳ್ಳ ಬ್ಯಾನರ್ ಗಳನ್ನು ಹರಿದು, ವಾಹನವನ್ನು ಜಖಂಗೊಳಿಸಿದ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ.

    ಕಳೆದ ರಾತ್ರಿ ಶಾಸಕರಿಗೆ ಶುಭ ಕೋರಿದ ಪೋಸ್ಟರ್ ಮತ್ತು ಬ್ಯಾನರ್ ಗಳನ್ನ ನಗರದ ಹಲವೆಡೆ ಹಚ್ಚಲು ಗಾಂಧಿ ವೃತ್ತದ ಬಳಿ ತೆರಳುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ ಮಾಡಲಾಯಿತು. ಕೆಲ ಕಾಂಗ್ರೆಸ್ ಕಾರ್ಯಕರ್ತರೇ ಈ ಕೆಲಸ ಮಾಡಿದ್ದಾರೆ ಅನ್ನೋ ಮಾತು ಕೂಡ ಕೇಳಿ ಬಂದಿವೆ. ಏಕಾಏಕಿ ಕಲ್ಲು ತೂರಾಟ ಮಾಡಿದ್ದರಿಂದ ವಾಹನದ ಗ್ಲಾಸ್ ಪುಡಿಪುಡಿಯಾಗಿದ್ದು, ಪೋಸ್ಟರ್ ಮತ್ತು ಬ್ಯಾನರ್ ಗಳು ಚೆಲ್ಲಾಪಿಲ್ಲಿಯಾಗಿದೆ. ಸದ್ಯಕ್ಕೆ ಸ್ಥಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

    ಕಳೆದ ತಿಂಗಳಷ್ಟೇ ಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಲಗತ್ತಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಹಲ್ಲೆಗೆ ಪ್ರತೀಕಾರ ತೆಗೆದುಕೊಳ್ಳುವ ದೃಷ್ಟಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಈ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

    ಹಾಲಿ ಶಾಸಕ ರಾಜುಗೌಡ ಮತ್ತು ರಾಜಾ ವೆಂಕಟಪ್ಪ ನಾಯಕ ದ್ವೇಷ ಮುಂದುವರಿದಿದ್ದು, ಶಾಸಕರುಗಳ ಕಿತ್ತಾಟಕ್ಕೆ ಕೈ ಮತ್ತು ಕಮಲದ ಕಾರ್ಯಕರ್ತರ ಮಧ್ಯ ದ್ವೇಷ ಮತ್ತಷ್ಟು ಹೆಚ್ಚಾಗಿದೆ. ಬ್ಯಾನರ್ ಮತ್ತು ಪೋಸ್ಟರ್ ವಿಚಾರಕ್ಕೆ ಈ ಕಾರ್ಯಕರ್ತರ ಮಧ್ಯ ಗಲಾಟೆ ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ನಗರಾದ್ಯಂತ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸುರಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.