Tag: poster

  • ‘ಪುಷ್ಪ 2’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ : ಅಡಗಿವೆ ಹಲವು ರಹಸ್ಯ

    ‘ಪುಷ್ಪ 2’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ : ಅಡಗಿವೆ ಹಲವು ರಹಸ್ಯ

    ನಿನ್ನೆ ಪುಷ್ಪ 2 ಸಿನಿಮಾದ ಮತ್ತೊಂದು ಪೋಸ್ಟರ್ (Poster) ರಿಲೀಸ್ ಆಗಿದೆ. ತ್ರಿಶೂಲ್ ಅನ್ನು ಪ್ರಮುಖವಾಗಿಟ್ಟುಕೊಂಡು ಪೋಸ್ಟರ್ ಡಿಸೈನ್ ಮಾಡಲಾಗಿದ್ದು, ಅದರಲ್ಲಿ ಹಲವಾರು ರಹಸ್ಯಗಳನ್ನು ಅಡಗಿಸಿಟ್ಟಿದ್ದಾರೆ ನಿರ್ದೇಶಕರು. ಕುಂಕುಮ ಹಾಕಿರೋ ತ್ರಿಶೂಲ. ಅದರ ಹಿಂದೆ ಉರಿಯುವ ಕಣ್ಣುಗಳು, ಶಂಖ ಊದುತ್ತಿರುವ ಗೆಸ್ಚರ್ ಒಂದು ರೀತಿಯಲ್ಲಿ ದೈವಾತಾರ ತಾಳಿರೋ ನಾಯಕನ ಪೋಸ್ಟರ್ ಅದಾಗಿದೆ.

    ಅಷ್ಟೇ ಅಲ್ಲ, ‘ಪುಷ್ಪ’ ಸಕ್ಸಸ್ ನಂತರ ಪುಷ್ಪ 2 (Pushpa 2) ಚಿತ್ರದ ಮೇಲೆ ನಿರೀಕ್ಷೆಯಿಟ್ಟ ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಸಿಗದೇ ನಿರಾಶರಾಗಿದ್ದರು. ಅಲ್ಲು ಅರ್ಜುನ್  (Allu Arjun) ಬರ್ತ್‌ಡೇಯಂದು (ಏ.8) ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಪುಷ್ಪ ಮಾಸ್ ಜಾತ್ರೆಗೆ ಕೌಂಟ್‌ಡೌನ್ ಎಂದು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಪುಷ್ಪ ಪಾರ್ಟ್ 2ಗೆ ಪುಷ್ಪ: ದಿ ರೈಸ್ ಎನ್ನುವ ಶೀರ್ಷಿಕೆ ಇಡಲಾಗಿದೆ. ಮೊದಲ ಭಾಗದಲ್ಲಿ ಕೇವಲ ಕಾರ್ಮಿಕನಂತಿದ್ದ ಪುಷ್ಪರಾಜ್ ಈಗ ರಕ್ತಚಂದನದ ಕಳ್ಳಸಾಗಣೆಯಲ್ಲಿ ಆತನೇ ಕಿಂಗ್‌ಪಿನ್ ಆಗಿ ಬೆಳೆದಿರುತ್ತಾನೆ. ಮೊದಲ ಭಾಗದಲ್ಲಿ ವಿದೇಶದ ರೆಫರೆನ್ಸ್ ನೀಡಲಾಗಿತ್ತು. ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂದು ತೋರಿಸಲಾಗಿತ್ತು. ಈಗ ಎರಡನೇ ಭಾಗದಲ್ಲಿ ಸಿನಿಮಾದ ಒಂದಷ್ಟು ಕಥೆ ವಿದೇಶದಲ್ಲೇ ಸಾಗಲಿದೆ ಎನ್ನಲಾಗಿದೆ.

     

    ಸುಕುಮಾರ್ ನಿರ್ದೇಶನದ ‘ಪುಷ್ಪ 2’ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಫಹಾದ್ ಫಾಸಿಲ್, ಕನ್ನಡದ ನಟ ಡಾಲಿ (Daali Dhananjay) ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾ ಇದೇ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ತೆರೆ ಕಾಣಲಿದೆ.

  • ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕೀಳು ಮಟ್ಟದ ಪೋಸ್ಟರ್: ದೂರು ನೀಡಲು ನಿರ್ಧಾರ

    ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕೀಳು ಮಟ್ಟದ ಪೋಸ್ಟರ್: ದೂರು ನೀಡಲು ನಿರ್ಧಾರ

    ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ (Puneeth Rajkumar) ಪತ್ನಿ ಅಶ್ವಿನಿ (Ashwini) ಅವರ ಬಗ್ಗೆ ಕೆಟ್ಟದ್ದಾಗಿ , ಕೀಳು ಮಟ್ಟದಲ್ಲಿ ಪೋಸ್ಟರ್ (Poster) ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದವರ ವಿರುದ್ಧ ದೂರು ನೀಡಲು ಅಪ್ಪು ಅಭಿಮಾನಿಗಳು ನಿರ್ಧಾರ ಮಾಡಿದ್ದಾರೆ. ಜೊತೆಗೆ ಅಂಥವರ ವಿರುದ್ಧದ ಕ್ರಮಕ್ಕಾಗಿ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.

    ಆರ್.ಸಿ.ಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರಣ ಎಂದು ಕೀಳು ಮಟ್ಟದಲ್ಲಿ ಪೋಸ್ಟರ್ ಮಾಡಲಾಗಿದೆ. ಕೆಲ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅವುಗಳನ್ನು ಹಂಚಿಕೊಂಡು ವಿಕೃತಿ ಮೆರೆಯಲಾಗುತ್ತಿದೆ. ಈ ಕುರಿತಂತೆ ಅನೇಕರ ಧ್ವನಿ ಎತ್ತಿದ್ದಾರೆ. ಅವರು ಯಾರ ಅಭಿಮಾನಿಗಳೇ ಆಗಿರಲಿ, ಅಂಥವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬರುತ್ತಿದೆ.

     

    ಅಶ್ವಿನಿ ಪುನೀತ್ ರಾಜ್ ಕುಮಾರ್ ಪರ ಸಾಕಷ್ಟು ಜನರು ಧ್ವನಿ ಎತ್ತಿದ್ದಾರೆ. ಅದರಲ್ಲೂ ಮಹಿಳಾ ಪರ ಸಂಘಟನೆಗಳು, ಹೋರಾಟಗಾರರು ಮತ್ತು ಬರಹಗಾರರು ಕೂಡ ಪೋಸ್ಟರ್  ವಿರುದ್ಧ ಧ್ವನಿ ಎತ್ತಿದ್ದಾರೆ. ಪೋಸ್ಟರ್ ಶೇರ್ ಮಾಡಿದ ಮತ್ತು ಹಂಚಿಕೊಂಡವರನ್ನು ಕೂಡಲೇ ಬಂಧಿಸಿ ಎನ್ನುವ ಮಾತುಗಳು ಕೇಳಿ ಬಂದಿವೆ.

  • ಕುತೂಹಲ ಮೂಡಿಸುವ ಝೈದ್ ಖಾನ್ ನಟನೆಯ ಹೊಸ ಚಿತ್ರದ ಪೋಸ್ಟರ್

    ಕುತೂಹಲ ಮೂಡಿಸುವ ಝೈದ್ ಖಾನ್ ನಟನೆಯ ಹೊಸ ಚಿತ್ರದ ಪೋಸ್ಟರ್

    ನಾರಸ್ ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ (Zaid Khan) ಹಾಗೂ ಈ ವರ್ಷದ ಮೊದಲ ಹಿಟ್ ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ (Anil Kumar) ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

    ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು,  ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

    ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ಚುನಾವಣೆ ಹೊತ್ತಲ್ಲಿ ಜೆಎನ್.ಯು ಸಿನಿಮಾ ಪೋಸ್ಟರ್ ರಿಲೀಸ್: ವಾದ-ವಿವಾದ

    ಚುನಾವಣೆ ಹೊತ್ತಲ್ಲಿ ಜೆಎನ್.ಯು ಸಿನಿಮಾ ಪೋಸ್ಟರ್ ರಿಲೀಸ್: ವಾದ-ವಿವಾದ

    ವಿವಾದಿತ ವಿಷಯಗಳನ್ನಿಟ್ಟುಕೊಂಡು ಬಾಲಿವುಡ್ ನಿರ್ದೇಶಕರು ಹೆಚ್ಚೆಚ್ಚು ಸಿನಿಮಾ ಮಾಡುತ್ತಿದ್ದಾರೆ. ಬಹುತೇಕ ಚಿತ್ರಗಳು ಹೆಚ್ಚ ಪ್ರಚಾರದೊಂದಿಗೆ ಬಾಕ್ಸ್ ಆಫೀಸಿನಲ್ಲೂ ಗೆಲ್ಲುತ್ತಿವೆ. ಅಂತಹ ಚಿತ್ರಗಳ ಸಾಲಿಗೆ ಇದೀಗ  ಜೆಎನ್.ಯು (JNU) ಸಿನಿಮಾ ಕೂಡ ಸೇರಿಕೊಂಡಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಭಾರೀ ಪರ ಮತ್ತು ವಿರೋಧಕ್ಕೂ ಕಾರಣವಾಗಿದೆ.

    ಜೆ.ಎನ್.ಯು ಅಂದರೆ ಜವಾಹರಲಾಲ್ ನೆಹರೂ ಯೂನಿವರ್ಸಿಟಿ. ಈ ವಿಶ್ವವಿದ್ಯಾಲಯ ನಾನಾ ಕಾರಣಗಳಿಂದ ಸದ್ದು ಮಾಡುತ್ತಲೇ ಇದೆ. ಎಡ ಮತ್ತು ಬಲ ವಿದ್ಯಾರ್ಥಿ ಸಂಘಟನೆಗಳು ಕಾರಣದಿಂದಾಗಿ ಬೇಡದ ವಿಷಯಕ್ಕೆಲ್ಲ ವಿಶ್ವ ವಿದ್ಯಾಲಯವನ್ನು ಬಳಸಿಕೊಳ್ಳಲಾಗಿದೆ. ಇದನ್ನೇ ಇಟ್ಟುಕೊಂಡು ಜೆಎನ್.ಯು ಸಿನಿಮಾ ಮಾಡಲಾಗಿದೆ.

    ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ  ಜೆಎನ್.ಯು ಅಂದರೆ ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ ಎಂದು ತೋರಿಸಲಾಗಿದೆ. ಪೋಸ್ಟರ್ ಮಧ್ಯ ಭಾರತದ ನಕ್ಷೆ ಇದ್ದು, ಒಂದು ಶೈಕ್ಷಣಿಕ ಸಂಸ್ಥೆ ರಾಷ್ಟ್ರವನ್ನು ಒಡೆಯಬಹುದೆ? ಎನ್ನುವ ಪ್ರಶ್ನೆಯನ್ನೂ ಮಾಡಲಾಗಿದೆ. ಈ ಸಾಲುಗಳೇ ಅನೇಕರನ್ನು ಕೆರಳಿಸಿವೆ. ಹಾಗಾಗಿ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಜರದಿದ್ದಾರೆ.

     

    ಏಪ್ರಿಲ್ 5ರಂದು ಈ ಸಿನಿಮಾವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆ ಹೊತ್ತಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಚಿತ್ರದಲ್ಲಿ ಊರ್ವಶಿ ರೌಟೇಲ (Urvashi Rautela) ಪ್ರಮುಖ ಪಾತ್ರವನ್ನು ಮಾಡಿದ್ದು, ಈ ಪಾತ್ರದ ಹಿನ್ನೆಲೆಯನ್ನು ಸಿನಿಮಾದಲ್ಲಿಯೇ ನೋಡಬೇಕು.

  • ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ರಿಲೀಸ್ ಮಾಡಿದ ನಿವೇದಿತಾ

    ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ರಿಲೀಸ್ ಮಾಡಿದ ನಿವೇದಿತಾ

    ಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ (Chandan Shetty) ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ  (Niveditha Gowda) ಬಿಡುಗಡೆಗೊಳಿಸಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿಯ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್ಪಿನ ಸುತ್ತ ಒಟ್ಟಾರೆ ಕಥೆಯ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ.

    ಈ ವಿಆರ್ ಪೋಸ್ಟರ್ (ವರ್ಚುವಲ್ ರಿಯಾಲಿಟಿ ಪೋಸ್ಟರ್ ಅಂತೂ ಈಗಿನ ಜನರೇಷನ್ನಿನ ಹುಡುಗರಿಗೆ ನೇರಾನೇರ ಕನೆಕ್ಟಾಗುವಂತಿದೆ. ಚಂದನ್ ಶೆಟ್ಟಿಯ ಗೆಟಪ್ಪು ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆಯನ್ನು ಒಳಗೊಂಡಿರಬಹುದಾ? ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರಿನಲ್ಲಿ ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲಕ್ಕು ಪಾತ್ರಗಳು ಎದುರುಗೊಂಡಿದ್ದವು. ಚಂದನ್ ಪಾತ್ರ ಕೈಯಲ್ಲಿ ವಿಆರ್ ಅನ್ನು ಹಿಡಿದುಕೊಂಡಿದೆ. ಇದೆಲ್ಲವನ್ನೂ ಕಂಡ ಪ್ರೇಕ್ಷಕರಿಗೆ ಇದೊಂದು ಈ ಕಾಲಮಾನದ ಆವೇಗ ಬಚ್ಚಿಟ್ಟುಕೊಂಡಿರುವ ಕಥೆಯೆಂಬ ವಿಚಾರವನ್ನು ದಾಟಿಸಿದೆ. ನಿಖರವಾಗಿ ಹೇಳಬೇಕೆಂದರೆ, ಈ ವಿಆರ್ ಪೋಸ್ಟರ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರತ್ತ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುವಂತಿದೆ.

     

    ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟ ತಲುಪಿಕೊಂಡಿದೆ.

  • ‘ಕಲ್ಕಿ’ಯಲ್ಲಿ ಭೈರವನ ಅವತಾರವೆತ್ತಿದ ನಟ ಪ್ರಭಾಸ್

    ‘ಕಲ್ಕಿ’ಯಲ್ಲಿ ಭೈರವನ ಅವತಾರವೆತ್ತಿದ ನಟ ಪ್ರಭಾಸ್

    ಪ್ರಭಾಸ್ (Prabhas) ನಟನೆಯ ಕಲ್ಕಿ ಸಿನಿಮಾದ ಮತ್ತೊಂದು ಪೋಸ್ಟರ್ (Poster) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಭೈರವ (Bhairava) ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಕಲ್ಕಿ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ರಾಜಮೌಳಿಯೂ (Rajamouli) ಪಾತ್ರ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಅವರು ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದು, ಅದು ವಿಜ್ಞಾನಿ (Scientist) ಪಾತ್ರವಾಗಿದೆಯಂತೆ. ಅಧಿಕೃತವಾಗಿ ಚಿತ್ರತಂಡ ಯಾವುದೇ ಮಾಹಿತಿ ಹಂಚಿಕೊಳ್ಳದೇ ಇದ್ದರೂ, ಇಂಥದ್ದೊಂದು ಸುದ್ದಿಯಂತೂ ಸಖತ್ ಜೋರಾಗಿಯೇ ಕೇಳಿ ಬರುತ್ತಿದೆ.

    ಪ್ರತಿ ಹಂತದಲ್ಲೂ ನಾನಾ ರೀತಿಯ ಸುದ್ದಿಗಳನ್ನು ಮಾಡುತ್ತಲೇ ಬರುತ್ತಿದೆ ಚಿತ್ರತಂಡ. ಮೊನ್ನೆಯಷ್ಟೇ ನಟ ಅಮಿತಾಭ್ ಬಚ್ಚನ್  (Amitabh Bachchan) ಅವರ ಹುಟ್ಟು ಹಬ್ಬದ (Birthday) ದಿನದಂದು ಕಲ್ಕಿ ಸಿನಿಮಾ ಟೀಮ್ ಅಮಿತಾಭ್ ಬಚ್ಚನ್ ಪಾತ್ರದ ಫಸ್ಟ್ ಲುಕ್(First Look)  ರಿಲೀಸ್ ಮಾಡಿತ್ತು. ವಿಚಿತ್ರ ವೇಷದಲ್ಲಿ ಅಮಿತಾಭ್ ಕಾಣಿಸಿಕೊಂಡಿದ್ದು ಪಾತ್ರದ ಬಗ್ಗೆ ಕುತೂಹಲ ಮೂಡಿಸಿತ್ತು.

    ಈ ನಡುವೆ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.

     

    ಕಲ್ಕಿ ಸಿನಿಮಾದ ವಿಎಫ್ಎಕ್ಷ್  ಮಾಡುತ್ತಿರುವ ಸಂಸ್ಥೆಯೇ ಫೋಟೋವನ್ನು ಲೀಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ಮಾಪಕರು ಪೊಲೀಸ್ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

  • ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

    ಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಎಲ್ಲರೂ ರಾಮ ನಾಮ ಸ್ಮರಣೆ ಮಾಡುವ ಶುಭ ಘಳಿಗೆಯಲ್ಲಿ ‘ಶ್ರೀ ರಾಮ್, ಜೈ ಹನುಮಾನ್’ (Shri Ram Jai Hanuman) ಎಂಬ ಹೊಚ್ಚ ಹೊಸ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿದೆ.  ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಿರ್ಮಾಣವಾಗಲಿರುವ ‘ಶ್ರೀ ರಾಮ್, ಜೈ ಹನುಮಾನ್’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

    ರಾಮ ಮಂದಿರ ಉದ್ಘಾಟನೆಯ ಸಮಯಕ್ಕೆ  ಅನಾವರಣಗೊಂಡಿರುವುದು ಹಿಂದೂ ಧರ್ಮದ ಭಕ್ತಗಣಕ್ಕೆ ಸಂತಸದ ವಿಷಯ. “An Untold Epic of RAMAYANA” ಎಂಬ ಅಡಿಬರಹ ಈ ಚಿತ್ರಕ್ಕಿದೆ. ರಾಮಾಯಣದ ಕುರಿತು ಬಹುತೇಕರಿಗೆ ವಿಷಯ ತಿಳಿದಿದೆ. ಆದರೆ ಎಲ್ಲೂ ದಾಖಲಾಗದ ಕೆಲವು ವಿಷಯಗಳನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ ಎಂಬುದು ಈ ಸಿನಿಮಾದ ಮತ್ತೊಂದು ವಿಶೇಷ.

    ಸದ್ಯ ಹರಿಬಿಟ್ಟಿರುವ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ – ಹನುಮ… ಹೀಗೆ ಅನೇಕ ಸಂಗತಿಗಳು ಪೋಸ್ಟರ್ ನಲ್ಲಿ ಅಡಕವಾಗಿವೆ. ಒಂದೆಡೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಖುಷಿಯಲ್ಲಿರುವ ಜನರಿಗೆ, ಈ ಪೋಸ್ಟರ್ ನೋಡುತ್ತಲೇ ಮೈ ಜುಂ ಎನಿಸುವಂತೆ ಮಾಡಿರುವುದು ಚಿತ್ರದ ಮೇಲೆ ಈಗಲೇ ಸಾಕಷ್ಟು ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

     

    ಯುವ ನಿರ್ದೇಶಕ ಅವಧೂತ ಶ್ರೀ ರಾಮ್, ಜೈ ಹನುಮಾನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ಮಾಪಕ ಕೆ ಎ.ಸುರೇಶ್ ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕನ್ನಡದಲ್ಲಿ ಈಗಾಗಲೇ ಯಶಸ್ವಿ ನಿರ್ಮಾಣ ಸಂಸ್ಥೆ ಎನ್ನಿಸಿಕೊಂಡಿರುವ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಈ ಪ್ಯಾನ್ ಇಂಡಿಯಾ ಸಿನಿಮಾ ಮೂಡಿ ಬರುತ್ತಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನ ಖ್ಯಾತ ನಟರು, ಕಲಾವಿದರು ಸೇರಿದಂತೆ ದೊಡ್ಡ ತಾರಾಬಳಗವೇ ಇರಲಿದೆ. ಬಹುಕೋಟಿ ವಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ಸದ್ಯ ಸ್ಟೋರಿ ಬೋರ್ಡ್ ಮತ್ತು ವಿಎಫ್ಎಕ್ಸ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಮತ್ತಷ್ಟು ವಿವರಗಳನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

  • ಪೃಥ್ವಿರಾಜ್ ನಟನೆಯ ‘ದಿ ಗೋಟ್ ಲೈಫ್’ ಚಿತ್ರದ ಮತ್ತೊಂದು ಪೋಸ್ಟರ್ ಔಟ್

    ಪೃಥ್ವಿರಾಜ್ ನಟನೆಯ ‘ದಿ ಗೋಟ್ ಲೈಫ್’ ಚಿತ್ರದ ಮತ್ತೊಂದು ಪೋಸ್ಟರ್ ಔಟ್

    ಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ ನಟನೆಯ ದಿ ಗೋಟ್ ಲೈಫ್ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದ್ದು, ಸಿನಿಮಾ ನೋಡುಗರ ಕುತೂಹಲಕ್ಕೆ ಕಾರಣವಾಗಿದೆ. ಪೃಥ್ವಿರಾಜ್ ಖಡಕ್ ಆಗಿ ಕಾಣಿಸಿಕೊಂಡಿದ್ದು, ಇಲ್ಲಿ ಅವರು ಹೊಸ ಬಗೆಯ ಪಾತ್ರವನ್ನು ಮಾಡಿದ್ದಾರೆ. ಒಂದು ಕಡೆ ಪೋಸ್ಟರ್ ರಿಲೀಸ್ ಆಗಿದ್ದರೆ ಮತ್ತೊಂದು ಕಡೆ  ದಿ ಗೋಟ್ ಲೈಫ್ (The Goat Life), ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ  (Blessy)ನಿರ್ದೇಶನದ ಸಿನಿಮಾ.

    ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ  ಕಥೆ ಆಧರಿಸಿದ ಚಿತ್ರವಾಗಿದೆ.

    ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಟ್ ಲೈಫ್ ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್.ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ.

    ಚಿತ್ರದ ಅದ್ಭುತ ದೃಶ್ಯಗಳನ್ನು ಸುನಿಲ್ ಕೆ.ಎಸ್ ತಮ್ಮ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ.  ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮಲಯಾಳಂ ಚಿತ್ರೋದ್ಯಮದ ಅತಿದೊಡ್ಡ ಸಿನಿಮಾ ಎನಿಸಿದೆ. ಅಂದಹಾಗೆ ಈ ಚಿತ್ರ ಮಲಯಾಳಂ ಸಾಹಿತ್ಯ ಪ್ರಪಂಚದ ಅತ್ಯಂತ ಜನಪ್ರಿಯ ಕಾದಂಬರಿ ‘ಆಡು ಜೀವಿತಂ’ ಆಧರಿಸಿದೆ, ಇದು ವಿದೇಶಿ ಸೇರಿದಂತೆ 12 ವಿವಿಧ ಭಾಷೆಗಳಲ್ಲಿ ಅನುವಾದಗೊಂಡಿದೆ.  ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಾದಂಬರಿ  90 ರ ದಶಕದಲ್ಲಿ ಅದೃಷ್ಟ ಹುಡುಕಿ ವಲಸೆ ಬಂದ ನಜೀಬ್ ಎಂಬ ಯುವಕನ ನೈಜ ಕಥೆಯನ್ನು ಹೊಂದಿದೆ.

     

    ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಬ್ಲೆಸ್ಸಿ, “ದಿ ಗೋಟ್ ಲೈಫ್ ಎಲ್ಲೆಡೆ ಸಲ್ಲುವ ಕಥೆ. ನಿರೂಪಣೆ ಸಲುವಾಗಿ ಸಾಜಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದೇನೆ. ಕಾದಂಬರಿಯನ್ನು ಸಿನಿಮಾ ಮಾಡುವಾಗ ಅನೇಕ ಸವಾಲು ಎದುರಾದವು.  ಪ್ರೇಕ್ಷಕರಿಗೆ ಒಳ್ಳೆಯ ಸಿನಿಮಾ ಕೊಡುವ ಪ್ರಯತ್ನ ಮಾಡಿದ್ದೇನೆ ಎನ್ನುತ್ತಾರೆ. ಗೋಟ್ ಲೈಫ್  ಏಪ್ರಿಲ್ 10 ರಂದು ಹಿಂದಿ, ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡದಲ್ಲಿ  ಬಿಡುಗಡೆಯಾಗಲಿದೆ.

  • ‘ಕಂಗುವ’ ಹೊಸ ಪೋಸ್ಟರ್ ನಲ್ಲಿ ಸೂರ್ಯ ಮತ್ತಷ್ಟು ಮಿಂಚು

    ‘ಕಂಗುವ’ ಹೊಸ ಪೋಸ್ಟರ್ ನಲ್ಲಿ ಸೂರ್ಯ ಮತ್ತಷ್ಟು ಮಿಂಚು

    ಟ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದಾರೆ. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

     

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು 2024ರಲ್ಲಿ ಬಿಡುಗಡೆಯಾಗಲಿದೆ.  ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ಮುಗಿದಿದ್ದು, ಬಾಕಿ ಇರುವ ಚಿತ್ರೀಕರಣವನ್ನು ಬೇಗ ಮುಗಿಸಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

  • ‘ಮಾಫಿಯಾ’ ಚಿತ್ರತಂಡದಿಂದ ಮತ್ತೊಂದು ಪೋಸ್ಟರ್

    ‘ಮಾಫಿಯಾ’ ಚಿತ್ರತಂಡದಿಂದ ಮತ್ತೊಂದು ಪೋಸ್ಟರ್

    ಲೋಹಿತ್.ಹೆಚ್  (Lohit) ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ ‘ಮಾಫಿಯಾ’ (Mafia) ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮಾಫಿಯಾ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.

    ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಕೂಡ ಆಗಿದ್ದು, ಅದಕ್ಕೆ ಅದ್ಭುತ ರೆಸ್ಪಾನ್ಸ್ ಕೂಡ ಸಿಕ್ಕಿತ್ತು.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.  ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

     

    ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.