Tag: poster

  • ಜಗನ್ ಪೋಸ್ಟರ್ ಹರಿದ ಶ್ವಾನದ ವಿರುದ್ಧ ಕೇಸ್ ದಾಖಲು

    ಜಗನ್ ಪೋಸ್ಟರ್ ಹರಿದ ಶ್ವಾನದ ವಿರುದ್ಧ ಕೇಸ್ ದಾಖಲು

    ಅಮರಾವತಿ: ಆಂಧ್ರಪ್ರದೇಶ (Andhrapradesh) ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಪೋಸ್ಟರ್ ಕಿತ್ತ ಶ್ವಾದ ವಿರುದ್ಧ ಕೆಸ್ ದಾಖಲಿಸಿದ ಅಚ್ಚರಿಯ ಘಟನೆಯೊಂದು ವಿಜಯವಾಡದಲ್ಲಿ ನಡೆದಿದೆ.

    ವಿಜಯವಾಡದ ಶ್ರೀಕಾಕುಳಂ ಜಿಲ್ಲೆಯ ಪುಟ್ಟ ಹಳ್ಳಿಯೊಂದರ ಮನೆಯ ಗೋಡೆಯ ಮೇಲೆ ‘ಜಗನಣ್ಣ ನಮ್ಮ ಭವಿಷ್ಯ’ ಎಂಬ ಸಣ್ಣ ಪೋಸ್ಟರ್ ಅಂಟಿಸಲಾಗಿತ್ತು. ಇದನ್ನು ರಾತ್ರಿ ಹೊತ್ತಲ್ಲಿ ಶ್ವಾನ (Dog) ಕಿತ್ತು ಹಾಕಿದೆ. ಇದಕ್ಕೆ ಪಕ್ಷದ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗೋಡೆಗೆ ಅಂಟಿಸಿದ ಪೋಸ್ಟರ್ ಅನ್ನು ಶ್ವಾನ ಕಿತ್ತು ಹಾಕುತ್ತಿರುವ ದೃಶ್ಯವನ್ನು ಅಲ್ಲೇ ಇದ್ದವರು ವೀಡಿಯೋ ಮಾಡಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿಯಿಂದ ಟಿಕೆಟ್‌ ಸಿಗ್ಲಿಲ್ಲ ಅಂತಾ ಬೆಂಬಲಿಗರ ಸಭೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಟಿಕೆಟ್‌ ವಂಚಿತೆ ನಾಗಶ್ರೀ

    ಟಿಡಿಪಿ ನಾಯಕ ದಸರಿ ಶ್ರೀ ಅವರು ಪಾಯಕರಾವ್ಪೇಟೆ ಪೊಲೀಸ್ ಠಾಣೆಯಲ್ಲಿ ಶ್ವಾನದ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಲ್ಲದೆ ಕೂಡಲೇ ಶ್ವಾನವನ್ನು ಬಂಧಿಸಿ, ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

  • ರಶ್ಮಿಕಾ ಹುಟ್ಟುಹಬ್ಬಕ್ಕೆ #VNRTrio ಸಿನಿಮಾದ ಹೊಸ ಪೋಸ್ಟರ್ ರಿಲೀಸ್

    ರಶ್ಮಿಕಾ ಹುಟ್ಟುಹಬ್ಬಕ್ಕೆ #VNRTrio ಸಿನಿಮಾದ ಹೊಸ ಪೋಸ್ಟರ್ ರಿಲೀಸ್

    ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಅಡಿ ಇಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ನ್ಯಾಷನಲ್ ಕ್ರಶ್ ಆಗಿ ಬೆಳೆದಿದ್ದಾರೆ. ಸ್ಯಾಂಡಲ್ ವುಡ್ ನಿಂದ ಸಿನಿ ಬದುಕು ಶುರು ಮಾಡಿ ಟಾಲಿವುಡ್, ಕಾಲಿವುಡ್, ಬಾಲಿವುಡ್ ನಲ್ಲಿ ಮಿಂಚುತ್ತಿರುವ ಭೀಷ್ಮ ಬ್ಯೂಟಿಗೆ ಇವತ್ತು ಹುಟ್ಟುಹಬ್ಬದ ಸಂಭ್ರಮ.. ರಶ್ಮಿಕಾ ಬರ್ತ್ ಡೇ ಪ್ರಯುಕ್ತ ಅಭಿಮಾನಿಗಳು ಸ್ಪೆಷಲ್ ಸಿಡಿಪಿ ರಿಲೀಸ್ ಮಾಡಿ ಪ್ರೀತಿಯಿಂದ ಶುಭಾಯ ಕೋರಿದ್ದಾರೆ. ಸೆಲೆಬ್ರಿಟಿಗಳು ಸಾನ್ವಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. ರಶ್ಮಿಕಾ ಜನುಮದಿನದ ಸ್ಪೆಷಲ್ ಆಗಿ #VNRTrio ಸಿನಿಮಾ ತಂಡ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿದೆ.

    ಭೀಷ್ಮ (Bhishma) ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಯಂಗ್ ಟಾಲಿವುಡ್ ಹೀರೋ ನಿತಿನ್ (Nitin) ಹಾಗೂ ರಶ್ಮಿಕಾ ಮಂದಣ್ಣ #VNRTrio ಸಿನಿಮಾ ಮೂಲಕ ಮತ್ತೆ ಒಂದಾಗ್ತಿದೆ. ಭೀಷ್ಮ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವೆಂಕಿ ಕುದುಮುಲ ಮತ್ತೊಮ್ಮೆ ಈ ಜೋಡಿಗೆ  ನಿರ್ದೇಶನ ಮಾಡ್ತಿದ್ದು, ಸೌತ್ ಇಂಡಸ್ಟ್ರೀಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ #VNRTrioಗೆ ಬಂಡವಾಳ ಹೂಡಿದೆ. ಈ ಚಿತ್ರತಂಡ ರಶ್ಮಿಕಾ ಹುಟ್ಟಹಬ್ಬಕ್ಕೆ ಸ್ಪೆಷಲ್ ಉಡುಗೊರೆ ನೀಡಿದೆ. ಈ ಹಿಂದಿ ನಿತಿನ್ ಬರ್ತ್ ಡೇ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿದ್ದ #VNRTrio ಟೀಂ ಈಗ ರಶ್ಮಿಕಾ ಜನ್ಮದಿನಕ್ಕೆ ಪೋಸ್ಟರ್ ಅನಾವರಣ ಮಾಡಿದೆ. ಸ್ಟೈಲೀಶ್ ಔಟ್ ಫಿಟ್ ನಲ್ಲಿ ರಶ್ಮಿಕಾ ಗ್ಲಾಮರ್ ಲುಕ್ ನಲ್ಲಿ ಕಂಗೊಳಿಸಿದ್ದಾರೆ. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಮೈತ್ರಿ ಮೂವೀ ಮೇಕರ್ಸ್ ಸಾರಥಿಗಳಾದ ನವೀನ್ ಯೆರ್ನೇನಿ ಹಾಗೂ ವೈ ರವಿ ಶಂಕರ್ ದೊಡ್ಡ ಕ್ಯಾನ್ವನ್ ನಲ್ಲಿ ಚಿತ್ರ ನಿರ್ಮಾಣ ಮಾಡ್ತಿದ್ದು, ನಟ ಕಿರೀಟಿ ರಾಜೇಂದ್ರ ಪ್ರಸಾದ್ ಹಾಗೂ ವಿನ್ನೆಲ ಕಿಶೋರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜಿವಿ ಪ್ರಕಾಶ್ ಕುಮಾರ್ ಸಂಗೀತ. ಸಾಯಿ ಶ್ರೀರಾಮ್ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ, ರಾಮ್ ಕುಮಾರ್ ಕಲಾ ನಿರ್ದೇಶನ ಚಿತ್ರಕ್ಕಿದೆ. #VNRTrio ಸಿನಿಮಾದ ಮತ್ತಷ್ಟು ವಿವರಗಳನ್ನು ಶೀಘ್ರದಲ್ಲಿ ರಿವೀಲ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿ ಹೈದ್ರಾಬಾದ್ ನಲ್ಲಿ ಈ ಚಿತ್ರದ ಮುಹೂರ್ತ ನೆರವೇರಿದ್ದು, ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದರು.

  • ಪೋಸ್ಟರ್ ವಾರ್ – ಪ್ರಧಾನಿ ಶೈಕ್ಷಣಿಕ ಅರ್ಹತೆ ಕೆಣಕಿದ AAP

    ಪೋಸ್ಟರ್ ವಾರ್ – ಪ್ರಧಾನಿ ಶೈಕ್ಷಣಿಕ ಅರ್ಹತೆ ಕೆಣಕಿದ AAP

    ನವದೆಹಲಿ: ಆಪ್ (AAP) ಮತ್ತು ಬಿಜೆಪಿ (BJP) ನಡುವೆ ನಡೆಯುತ್ತಿರುವ ಪೋಸ್ಟರ್ ವಾರ್ (Poster War) ತಾರಕಕ್ಕೇರಿದೆ. ದೆಹಲಿಯಲ್ಲಿ (Delhi) ‘ಮೋದಿ ಹಟಾವೋ, ದೇಶ್ ಬಚಾವೋ’ ಪೊಸ್ಟರ್ ಅಂಟಿಸಿದ ಆಪ್ ಕಾರ್ಯಕರ್ತರ ಬಂಧನದ ಬಳಿಕ ಪೋಸ್ಟರ್ ಅಭಿಯಾನವನ್ನು ತೀವ್ರಗೊಳಿಸಿರುವ ಆಮ್ ಅದ್ಮಿ ಪಕ್ಷ 11 ಭಾಷೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಪೋಸ್ಟರ್ ಅಂಟಿಸಲು ಆರಂಭಿಸಿದೆ.

    ಈ ಹಿಂದೆ ‘ಮೋದಿ ಹಟಾವೋ, ದೇಶ್ ಬಚಾವೋ’ಗೆ ಸೀಮಿತವಾಗಿದ್ದ ಪೋಸ್ಟರ್ ವಾರ್‌ನಲ್ಲಿ ಈಗ ಪ್ರಧಾನಿಗಳ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಲಾಗುತ್ತಿದೆ. ‘ಕ್ಯಾ ಭಾರತ್ ಕೆ ಪಿಎಂ ಕೋ ಪಢೆ ಲಿಖೆ ಹೋನಾ ಚಾಹಿಯೇ?’ (ಭಾರತದ ಪ್ರಧಾನಿ ಶಿಕ್ಷಿತರಾಗಿರಬೇಕು ಅಲ್ಲವೇ) ಎಂಬ ಪೋಸ್ಟರ್‌ಗಳನ್ನು ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಂಟಿಸಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಎಎಪಿ ಮುಖ್ಯಸ್ಥ ಗೋಪಾಲ್ ರೈ, ಪಕ್ಷದ ಎಲ್ಲಾ ರಾಜ್ಯ ಘಟಕಗಳಿಗೆ ಆಯಾ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸಲು ಸೂಚಿಸಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ‘ಮೋದಿ ಹಟಾವೋ, ದೇಶ್ ಬಚಾವೋ’ ಪೋಸ್ಟರ್ ಅಂಟಿಸಿದ ಬಳಿಕ ಪೊಲೀಸರು 6 ಮಂದಿ ಆಮ್ ಆದ್ಮಿ ಕಾರ್ಯಕರ್ತರನ್ನು ಬಂಧಿಸಿತ್ತು. ಈ ಬೆಳವಣಿಗೆ ಬಳಿಕ ಮತ್ತಷ್ಟು ಪೋಸ್ಟರ್ ಅಂಟಿಸಿದ್ದ 100ಕ್ಕೂ ಅಧಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಬಂಧಿತರಲ್ಲಿ 2 ಪ್ರಿಂಟಿಂಗ್ ಪ್ರೆಸ್‌ಗಳ ಮಾಲೀಕರು ಇದ್ದು, ಒಂದು ಲಕ್ಷಕ್ಕೂ ಅಧಿಕ ಪೋಸ್ಟರ್ ಮುದ್ರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: Exclusive: ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ಔಟ್

    ದೆಹಲಿ ಪೊಲೀಸರು ‘ಭಾರತದ ಪ್ರಧಾನಿ ಸಾಕ್ಷರರಾಗಬೇಕೇ?’ ಎಂದು ಬರೆದಿರುವ ಆಪ್‌ನ ಪೋಸ್ಟರ್‌ಗಳನ್ನು ಹರಿದು ಹಾಕುತ್ತಿದ್ದಾರೆ. ಇದರರ್ಥ ಪ್ರಧಾನಿ ಮೋದಿ, ಅವರ ಪಕ್ಷ ಮತ್ತು ಪೊಲೀಸರು ಭಾರತದ ಪ್ರಧಾನಿ ಅನಕ್ಷರಸ್ಥನಾಗಿರಬೇಕು ಎಂದು ಒಪ್ಪಿಕೊಂಡಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಗುರುವಾರ ಟ್ವಿಟ್ಟರ್‌ನಲ್ಲಿ ವೀಡಿಯೊ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಬಿಗ್ ರಿಲೀಫ್ – ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

  • ‘ಫುಲ್ ಮೀಲ್ಸ್’ ಸಿನಿಮಾದ ಪೋಸ್ಟರ್ ರಿಲೀಸ್

    ‘ಫುಲ್ ಮೀಲ್ಸ್’ ಸಿನಿಮಾದ ಪೋಸ್ಟರ್ ರಿಲೀಸ್

    ‘ಸಂಕಷ್ಟಕರ ಗಣಪತಿ’ ಹಾಗೂ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ಜನಮನ ಗೆದ್ದಿರುವ  ಲಿಖಿತ್ ಶೆಟ್ಟಿ (Likhit Shetty) ನಿರ್ಮಿಸಿ ಜೊತೆಗೆ ನಾಯಕರಾಗೂ ನಟಿಸುತ್ತಿರುವ ಚಿತ್ರ ‘ಫುಲ್ ಮೀಲ್ಸ್ (Full Meals). ಈ ಸಿನಿಮಾ ಟೈಟಲ್ ಕಾರಣದಿಂದಾಗಿಯೇ ಗಮನ ಸೆಳೆದಿತ್ತು. ಅಲ್ಲದೇ, ಈ ಸಿನಿಮಾದ ಶೀರ್ಷಿಕೆಯ ವಿಶೇಷತೆಯನ್ನು ಸಿನಿಮಾ ಟೀಮ್ ಹಂಚಿಕೊಂಡಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ.

    ಸದ್ಯ ‘ಫುಲ್ ಮೀಲ್ಸ್’ ಚಿತ್ರದ ನೂತನ ಪೋಸ್ಟರ್ (Poster) ಬಿಡುಗಡೆಯಾಗಿದೆ. ಪೋಸ್ಟರ್ ಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಈ ಚಿತ್ರದ ಅರ್ಧದಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಎನ್ ವಿನಾಯಕ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ (Gurukiran) ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ. ಇದನ್ನೂ ಓದಿ:ಯಾರನ್ನಾದರೂ ಡೇಟ್ ಮಾಡಿ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು?

    ಲಿಖಿತ್ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮ, ರಂಗಾಯಣ ರಘು, ಸಾಧುಕೋಕಿಲ, ವಿಜಯ್ ಚೆಂಡೂರ್, ರಾಜೇಶ್ ನಟರಂಗ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ, ಚಂದ್ರಕಲಾ ಮೋಹನ್, ಸುಜಯ್ ಶಾಸ್ತ್ರಿ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಗೆ ಮಾಸ್ ಲುಕ್

    ‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಗೆ ಮಾಸ್ ಲುಕ್

    ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ,  ಗುರುತೇಜ್ ಶೆಟ್ಟಿ (Gurtej Shetty) ಕಥೆ  ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕಿರಣ್ ರಾಜ್ (Kiran Raj) ನಾಯಕರಾಗಿ ನಟಿಸುತ್ತಿರುವ ‘ರಾನಿ’ (Rani) ಚಿತ್ರದ ಪೋಸ್ಟರ್ (Poster) ಯಗಾದಿ ಹಬ್ಬಕ್ಕೆ ಬಿಡುಗಡೆಯಾಗಿದೆ. ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ (Mass Look) ಕಾಣಿಸಿಕೊಂಡಿದ್ದಾರೆ.

    ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ  ಪ್ರಶಂಸೆ ಪಡೆದುಕೊಂಡಿದ್ದರು.  ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್  ಮಾಡಿದಾರಂತೆ, ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿದೆ‌. ‘ರಾನಿ’ ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ‌.  5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ಈಗಾಗಲೇ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.   ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್‌, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ‌.

     ‘ಸಿಂಗಾರ ಸಿರಿಯೆ’ ಹಾಡು ಬರೆದಿರುವ ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.  ಸೂಕ್ಷ್ಮ ಕಥೆಯುಳ್ಳ,   ಪಕ್ಕ ಆಕ್ಷನ್ ಚಿತ್ರ ಇದಾಗಿದ್ದು, ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಬಿಡುಗಡೆ ಯಾಗಲಿದೆ.  ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು  ತಿಳಿಸುತ್ತೇವೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

  • ಮುರುಗದಾಸ್ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ

    ಮುರುಗದಾಸ್ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ

    ‘ಘಜನಿ’, ‘7 ಆಮ್ ಅರಿವು’, ‘ತುಪಾಕಿ’, ‘ಕತ್ತಿ’, ‘ದರ್ಬಾರ್’ ಮುಂತಾದ ಸೂಪರ್ ಹಿಟ್ ತಮಿಳು ಚಿತ್ರಗಳ ನಿರ್ದೇಶಕರಾದ ಎ.ಆರ್. ಮುರುಗದಾಸ್ (Murugadoss), ಈಗ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ.

    ಮುರುಗದಾಸ್ ನಿರ್ಮಾಣದ ಚಿತ್ರದ ಹೆಸರು ‘ಆಗಸ್ಟ್ 16, 1947’. ಹೆಸರು ಕೇಳಿದರೆ, ಇದು ಸ್ವಾತಂತ್ರ್ಯ ಸಂಗ್ರಾಮ ಕಥೆ ಇದ್ದಿರಬಹುದು ಎಂದನಿಸಬಹುದು. ಹೌದು, ಇದು ಸ್ವಾತಂತ್ರ್ಯ ಸಂಗ್ರಾಮದ ಕಥೆಯೇ. ಆದರೆ, ಇದುವರೆಗೂ ಯಾರೂ ಹೇಳದ ಮತ್ತು ತೋರಿಸದ ಒಂದು ವಿಭಿನ್ನ ಮತ್ತು ವಿಶೇಷ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ.. ಬ್ರಿಟಿಷ್ ಸಾಮ್ರಾಜ್ಯದ ಎದುರು ಒಂದು ಸಣ್ಣ ಹಳ್ಳಿಯ ಜನ ತೊಡೆ ತಟ್ಟಿ ನಿಲ್ಲುವುದರ ಜೊತೆಗೆ, ಹೇಗೆ ನಿದ್ದೆ ಕೆಡಿಸಿದರು ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.

    ಅಂದಹಾಗೆ, ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ ನವನಿರ್ದೇಶಕ ಎನ್.ಎಸ್. ಪೊನ್ ಕುಮಾರನ್. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತಮಿಳು, ತೆಲುಗು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ವರುಣ್ ತೇಜ್ ಜೊತೆ ಲಾವಣ್ಯ ಮದುವೆ? ಸ್ಪಷ್ಟನೆ ನೀಡಿದ ನಟಿ

    ಪರ್ಪಲ್ ಬುಲ್ ಎಂಟರ್ಟೈನ್ಮೆಂಟ್ ಅರ್ಪಿಸಿ, ಎ.ಆರ್. ಮುರುಗದಾಸ್, ಓಂಪ್ರಕಾಶ್ ಭಟ್ ಮತ್ತು ನರಸೀರಾಮ್ ಚೌಧರಿ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಗೌತಮ್ ಕಾರ್ತಿಕ್ (Gautham Karthik), ನವನಟಿ ರೇವತಿ (Revathi), ಪುಗಳ್ ಸೇರಿದಂತೆ ಹಲವು ಪ್ರತಿಭಾವಂತ ನಟ-ನಟಿಯರು ಅಭಿನಯಿಸಿದ್ದಾರೆ.  ಅಂದಹಾಗೆ, ‘ಆಗಸ್ಟ್ 16, 1947’ ಚಿತ್ರವು ಏಪ್ರಿಲ್ 07ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

  • ಅಜಯ್ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್ ಬಿಡುಗಡೆ

    ಅಜಯ್ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್ ಬಿಡುಗಡೆ

    ಆರ್​.ಎಕ್ಸ್​.100′ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದವರು ನಿರ್ದೇಶಕ ಅಜಯ್​ ಭೂಪತಿ. ಆ ಚಿತ್ರದ ನಂತರ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, ‘ಮಂಗಳಾವರಂ’ ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಆ ಚಿತ್ರದ ಕಾನ್ಸಪ್ಟ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

    ‘ಮಂಗಳಾವರಂ’ ಚಿತ್ರವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗುಗಷ್ಟೇ ಸೀಮಿತವಲ್ಲ, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆಯಾಗಲಿದೆ. ಈ ಮೂಲಕ ಇದೊಂದು ದಕ್ಷಿಣ ಭಾರತದ ಚಿತ್ರವಾಗಲಿದೆ. ಇದನ್ನೂ ಓದಿ: ಪೂಜಾ ಗಾಂಧಿ ಕನ್ನಡ ಪ್ರೀತಿಗೆ ಭೇಷ್ ಎಂದ ಕನ್ನಡಿಗರು

    ಇದೊಂದು ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಚಿತ್ರದಲ್ಲಿ ಒಟ್ಟು 30 ಪಾತ್ರಗಳಿದ್ದು, ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಪ್ರತಿಯೊಂದು ಪಾತ್ರವೂ ಕಥೆಯನ್ನು ಮುನ್ನಡೆಸುವುದಷ್ಟೇ ಅಲ್ಲ, ಒಟ್ಟಾರೆ ಕಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದ್ದಾರೆ.

    ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, ”ಆರ್.ಎಕ್ಸ್.100′ ಚಿತ್ರದಂತೆಯೇ, ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ’  ಎನ್ನುತ್ತಾರೆ

    ‘ಮಂಗಳಾವರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿದೆ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

  • ಮೇಘನಾ ರಾಜ್ ಬೆಂಬಲಕ್ಕೆ ನಿಂತ ಚಿತ್ರೋದ್ಯಮ

    ಮೇಘನಾ ರಾಜ್ ಬೆಂಬಲಕ್ಕೆ ನಿಂತ ಚಿತ್ರೋದ್ಯಮ

    ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ನಟಿ ಮೇಘನಾ ರಾಜ್ (Meghana Raj). ಕೊನೆಗೂ ಅವರು ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ. ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” (Tatsama Tadbhava) ಚಿತ್ರದ ಪೋಸ್ಟರ್ (Poster) ಬಿಡುಗಡೆ ಮಾಡಲಾಗಿದೆ.

    ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ ಮರಳಿರುವ ಚಿತ್ರ “ತತ್ಸಮ ತದ್ಭವ”ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ. ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನೂತನ ಪ್ರತಿಭೆ ವಿಶಾಲ್ ಆತ್ರೇಯ (Vishal Atreya) ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

    ವಿಶೇಷವೆಂದರೆ, ಫೆಬ್ರವರಿ 19 ರಂದು “ತತ್ಸಮ ತದ್ಭವ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ. ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿರುವುದು ಹೆಮ್ಮೆಯ ವಿಷಯ..

    ಚಿತ್ರದ ಸುಮಧುರ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನವಿರುವ “ತತ್ಸಮ ತದ್ಭವ” ಚಿತ್ರಕ್ಕಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್

    ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ.

    ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ “ಮಾಫಿಯಾ” ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k