Tag: Postponement

  • ಸಿಇಟಿ ಫಲಿತಾಂಶ ಒಂದು ದಿನ ಮುಂದಕ್ಕೆ: ಅಶ್ವಥ್ ನಾರಾಯಣ್

    ಸಿಇಟಿ ಫಲಿತಾಂಶ ಒಂದು ದಿನ ಮುಂದಕ್ಕೆ: ಅಶ್ವಥ್ ನಾರಾಯಣ್

    ಬೆಂಗಳೂರು: ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

    ಕಳೆದ ಜುಲೈ 30 ಮತ್ತು 31ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಆಗಸ್ಟ್ 21 ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    http://karresults.nic.in ಲಿಂಕ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

  • ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ

    ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ

    ಬೆಂಗಳೂರು: ದೇಶದಲ್ಲಿ ಕೊರೊನಾ ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

    ಏಪ್ರಿಲ್ 22 ರಿಂದ 24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

    ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಇದರಲ್ಲಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಿದೆ. ಜೊತೆಗೆ ಈ ಸಿಇಟಿ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದೆ ನಿಗದಿ ಮಾಡಲಾಗುತ್ತದೆ ಎಂದು ಕೆಇಎ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

  • ಮಹದಾಯಿ ಬಂದ್- ಬುಧವಾರದ ವಿಟಿಯು ಪರೀಕ್ಷೆಗಳು ಮುಂದೂಡಿಕೆ

    ಮಹದಾಯಿ ಬಂದ್- ಬುಧವಾರದ ವಿಟಿಯು ಪರೀಕ್ಷೆಗಳು ಮುಂದೂಡಿಕೆ

    ಬೆಂಗಳೂರು: ಮಹದಾಯಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ನಾಳೆ ಉತ್ತರ ಕರ್ನಾಟಕ ಬಂದ್ ಹೋರಾಟಗಾರರು ಕರೆ ನೀಡಿದ ಪರಿಣಾಮವಾಗಿ ಬುಧವಾರ ನಡೆಯ ಬೇಕಿದ್ದ, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ.

    ಈ ಕುರಿತು ವಿಟಿಯು ಕುಲಪತಿ ಕರಿಸಿದ್ದಪ್ಪ ಹೇಳಿಕೆ ನೀಡಿದ್ದು, ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಡಿಸೆಂಬರ್ 29 ಹಾಗೂ ಜನವರಿ 8 ಕ್ಕೆ ಮುಂದೂಡಿರುವುದಾಗಿ ತಿಳಿಸಿದ್ದಾರೆ.