Tag: potholes

  • Video | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

    Video | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

    ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಮಹದೇವಪುರದ ಗುಂಜೂರಿನ ಡೀನ್ಸ್ ಅಕಾಡಮಿ ಬಳಿ ದುರ್ಘಟನೆ ನಡೆದಿದೆ. ಬೈಕ್‌ವೊಂದಕ್ಕೆ ಸ್ಕೂಲ್‌ ಬಸ್‌ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತ ವಿಡಿಯೋ ಇಲ್ಲಿದೆ

  • ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಳೆ ಬಂತು ಅಂದ್ರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು. ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಬಳಿಕೆ ಹಲವು ರಸ್ತೆಗಳು ಜಲಾವೃತಗೊಂಡಿವೆ.

    ಗುಂಡಿ ಬಿದ್ದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಕಟ್ಟಿಕೊಂಡಿದ್ದು, ಅಲ್ಲಲ್ಲಿ ವಾಹನಗಳು ಕೆಟ್ಟುನಿಲ್ಲುವಂತಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯಗಳಲ್ಲೂ ಮಳೆಯಾಗುತ್ತಿದೆ.

    ಗುಂಡಿಬಿದ್ದ ರಸ್ತೆಗಳಲ್ಲಿ ಕಟ್ಟಿಕೊಂಡ ನೀರು
    ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಅನ್ನೋದೇ ತಿಳಿಯದಾಗಿದೆ. ಫುಟ್ಬಾತ್‌ಗಳ ಮೇಲೂ ನೀರು ತಂಬಿಕೊಂಡಿದೆ. ಹಲವೆಡೆ ಗುಡುಗು ಸಹಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
    ನಗರದ ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ಮಲ್ಲೇಶ್ವರ, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ವಿಪ್ರೋ ಗೇಟ್, ಸರ್ಜಾಪುರ, ಯಶವಂತಪುರ, ಕಾರ್ಪೋರೇಷನ್, ಬಿಟಿಎಂ ಲೇಔಟ್, ವರ್ತೂರು ಬಳಗೆರೆ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ವಾಹನ ಸವಾರರು ಪರದಾಡಿದ್ದಾರೆ. ಸರ್ಜಾಪುರದಲ್ಲಿ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರು ಹಿಡೀ ಶಾಪ ಹಾಕಿದ್ದಾರೆ.

    ಬೆಂಗಳೂರಲ್ಲಿ ಮುಂದಿನ 3 ಗಂಟೆ ಆರೇಂಜ್ ಅಲರ್ಟ್
    ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆಯಿಂದ ಮಳೆಯ‌ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

  • ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ

    ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ

    ಬೆಂಗಳೂರು: ನಗರದಲ್ಲಿ ಗುಂಡಿ ಗಂಡಾಂತರ ಮುಂದುವರೆದಿದ್ದು, ಗುಂಡಿಯಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ದಿಢೀರ್ ಸಿಟಿ ರೌಂಡ್ಸ್ ಮಾಡಿ, ಗುಂಡಿ ಮುಚ್ಚಿರುವ ರಸ್ತೆಗಳನ್ನ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಚಾಲುಕ್ಯ ಸರ್ಕಲ್, ಚಿನ್ನಸ್ವಾಮಿ ಮೈದಾನ ರಸ್ತೆ, ಶಾಂತಿನಗರ ರಸ್ತೆಯಲ್ಲಿ ರಸ್ತೆಗೆ ಹಾಕಿದ್ದ ಡಾಂಬರು ಗುಣಮಟ್ಟ ಪರಿಶೀಲಿಸಿದರು. ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಕಾಮಗಾರಿಯನ್ನ ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

    ಬನಶಂಕರಿ ಮೆಟ್ರೋ ಸಮೀಪದ ಬಿಬಿಎಂಪಿಯ ಖಾಲಿ ಜಾಗವನ್ನೂ ಡಿಸಿಎಂ ಪರಿಶೀಲನೆ ಮಾಡಿದರು. ಈ ಜಾಗ ಪಾಲಿಕೆಯದ್ದಾಗಿದ್ದು, ಬೆಂಗಳೂರು ದಕ್ಷಿಣ ಪಾಲಿಕೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಇಲ್ಲಿ ಪ್ಲ್ಯಾನ್ ಮಾಡಲಾಗ್ತಿದೆ. ಜಾಗದ ವಿಸ್ತೀರ್ಣ ಹಾಗೂ ಅನುಕೂಲತೆಗಳ ಬಗ್ಗೆ ಡಿಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದರು.

    ಬನ್ನೇರುಘಟ್ಟ ಬಳಿಯೂ ಮತ್ತೊಂದು ಜಾಗವಿದ್ದು, ಈ ಜಾಗ ಲಿಟಿಗೇಷನ್‌ನಲ್ಲಿದೆ. ಹೀಗಾಗಿ ಬನಶಂಕರಿ ಬಳಿಯ ಜಾಗದಲ್ಲೇ ಬೆಂಗಳೂರು ದಕ್ಷಿಣ ಪಾಲಿಕೆ ಕಚೇರಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗ್ತಿದೆ.

    ಗುಂಡಿಗಳನ್ನ ಮುಚ್ಚುವಂತೆ ಅಧಿಕಾರಿಗಳಿಗೆ ಟಾಸ್ಕ್ ನೀಡಲಾಗಿತ್ತು. ಅದರಂತೆ ನಗರದ ಹಲವೆಡೆ ಗುಂಡಿಗಳನ್ನ ಮುಚ್ಚಲಾಗಿತ್ತು. ಇನ್ನೂ ಹಲವು ಕಡೆ ಗುಂಡಿಗಳಿದ್ದು, ಅವುಗಳನ್ನು ತ್ವರಿತವಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ ನೀಡಿದ್ದಾರೆ.

  • ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

    ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

    – ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತೀಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು; ಸಿಎಂ ಫುಲ್‌ ಗರಂ
    – ಒಟ್ಟು 14,795 ರಸ್ತೆ ಗುಂಡಿಗಳ ಗುರುತು; 8,046 ಗುಂಡಿಗಳು ಮುಚ್ಚಲು ಬಾಕಿ

    ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ (Bengaluru City Roads) ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದಂದು ಮಹತ್ವದ ಸಭೆ ನಡೆಯಿತು. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ಎಂಜಿನಿಯರ್‌ಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

    ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಂದ ಮಾಹಿತಿ ಪಡೆದ ಸಿಎಂ, ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ (Potholes) ಜನ ಹೈರಾಣಾಗಿದ್ದಾರೆಂದು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

    ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಠ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು, ನಾಚಿಕೆ ಆಗುವುದಲ್ಲವೇ ನಿಮ್ಗೆ? ಮಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯಋಗಳು ಏನ್‌ ಮಾಡ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಯಾರ ಮುಖವನ್ನೂ ನೋಡಲ್ಲ. ಗುಂಡಿ ಮುಚ್ಚದಿದ್ದರೇ ಎಲ್ಲ ಚೀಫ್ ಎಂಜಿನಿಯರ್‌ಗಳನ್ನ ಸಸ್ಪೆಂಡ್‌ ಮಾಡಿ ಮನೆಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಿ. ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ? ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು ಎಂದು ತಾಕೀತು ಮಾಡಿದರು.

    ಬಿಡಿಎ, ಬಿಎಂಆರ್ ಸಿಎಲ್, ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯವೇ ಇರುವುದಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮುಖ್ಯ ಆಯುಕ್ತರು ಪ್ರತಿ ವಾರ 5 ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು. ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತೆ ಮೇರೆಗೆ ಕ್ರಮ ವಹಿಸಿ. ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು ಎಂದು ಹೇಳಿದರು ಸಿಎಂ

    14,795 ರಸ್ತೆ ಗುಂಡಿಗಳ ಗುರುತು
    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ 1,648.43 ಕಿ.ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61 ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ. ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರಪಾಲಿಕೆಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು 8,046 ಗುಂಡಿಗಳು ಮುಚ್ಚಲು ಬಾಕಿ ಇವೆ. ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌ 143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. 401.63 ಕಿ. ಮೀ ರಸ್ತೆಗಳು ಡಾಂಬರೀಕರಣ ಗೊಂಡಿದ್ದು, 440.92 ಕಿ.ಮೀ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ  ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.

    * ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26ರ ಆಯವ್ಯಯದಲ್ಲಿ 18 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ.
    * ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿ ಕೈಗೊಳ್ಳಲು 25 ಕೋಟಿ ರೂ.ಗಳ ಹಣ ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
    * ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು 2.50 ಕೋಟಿ ರೂ.ಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
    * ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ.
    * ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್‌ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು 400 ಕೋಟಿ ರೂ.ಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ತಿಳಿಸಿದರು.

  • ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    – ನನಗೆ ಪೇಪರ್, ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ ಎಂದ ಡಿಕೆಶಿ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ರಸ್ತೆ ಗುಂಡಿ (Bengaluru Road Potholes) ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು.

    ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ʻಪಬ್ಲಿಕ್‌ ಟಿವಿʼ ನಿರಂತರ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ (BBMP) ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

    ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ ನಡೆಸಿದರು. ಖುದ್ದು ರಸ್ತೆಗಿಳಿದ ಡಿಸಿಎಂ, ಜಯಮಹಲ್ ರಸ್ತೆಯ ಪ್ಯಾಚ್ ವರ್ಕ್ ವೀಕ್ಷಣೆ ವೇಳೆ ಆರೆಯಿಂದ ನೆಲಕ್ಕೆ ಗುದ್ದಿ ಪರಿಶೀಲನೆ ನಡೆಸಿದರು. ನಂತರ ಟ್ರಿನಿಟಿ ಜಂಕ್ಷನ್‌ನಲ್ಲಿ ಡಾಂಬರೀಕರಣಕ್ಕೂ ಮುನ್ನ ಮಾಡುವ ಮಿಲ್ಲಿಂಗ್ ಕಾಮಗಾರಿಗಳ ಪರಿಶೀಲಿಸಿದರು. ರಸ್ತೆಯ ಹದಗೆಟ್ಟಿರುವ ಭಾಗವನ್ನು ಮಿಲ್ಲಿಂಗ್ ಮಾಡಿ ಡಾಂಬರೀಕರಣ ಮಾಡುವಂತೆ ಸೂಚಿಸಿದರು. ಬಳಿಕ ಬನಶಂಕರಿ ಮೇಟ್ರೋ ಬಳಿಯ ಬನಶಂಕರಿ ರಸ್ತೆ ಕಾಮಗಾರಿಯನ್ನೂ ಪರಿಶೀಲಿಸಿದರು. ಜೊತೆಗೆ ಪಾಲಿಕೆ ಆಯುಕ್ತರಿಗೆ ರಸ್ತೆ ಬದಿಯಲ್ಲಿ ಅಂಗಡಿ ಹಾಕಿರೋದನ್ನ ತೆಗೆಸಬೇಕು ಅಂತ ಸೂಚನೆ ನೀಡಿದರು. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

    14,307 ಗುಂಡಿಗಳನ್ನು ಮುಚ್ಚಿಸಿದ್ದಾರೆ:
    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗುಂಡಿಬಿದ್ದ ರಸ್ತೆಗಳ ಬಗ್ಗೆ ಮಾಹಿತಿ ಬಂದಿತ್ತು, ಹಾಗಾಗಿ ಗುಂಡಿ ಮುಚ್ಚೋದಕ್ಕೆ ಎಲ್ಲರಿಗೂ ಹೇಳಿದ್ದೆ. ಯಾವುದೇ ಸಮಾಧಾನಕರವಾದ ಕೆಲಸ ನನ್ನ ಗಮನಕ್ಕೆ ಬಂದಿರಲಿಲ್ಲ. 15 ದಿನದ ಹಿಂದೆ ಮೀಟಿಂಗ್ ಮಾಡಿ ಡೆಡ್ ಲೈನ್ ನೀಡಿದ್ದೆ. ಆಯುಕ್ತರು, ಜಂಟಿ ಆಯುಕ್ತರು ಎಲ್ಲರಿಗೂ ಮಾಹಿತಿ ನೀಡಿದ್ದೆ. ಕೆಲಸದ ವಿಡಿಯೋ ಮಾಡಿ ಪೋಸ್ಟ್ ಮಾಡೋದಕ್ಕೆ ಹೇಳಿದ್ದೆ. ಇದುವರೆಗೆ 14,307 ಗುಂಡಿಗಳನ್ನ ಅಧಿಕಾರಿಗಳು ಮುಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

    ಅಧಿಕಾರಿಗಳ ಮಾತಿನ ಮೇಲೆ ನಂಬಿಕೆಯಿಲ್ಲ:
    ಎಲ್ಲಾ ವಿಡಿಯೋಗಳು ನನ್ನ ಮೊಬೈಲ್ ಫೋನ್‌ಗೆ ಬಂದಿವೆ. ಸದ್ಯದ ಮಟ್ಟಿಗೆ ಎಲ್ಲವೂ ಸಮಾಧಾನಕರವಾಗಿ ಕಾಣ್ತಾ ಇದೆ. ಆದರೂ ಒಮ್ಮೆ ನಾನು ಪರಿಶೀಲನೆ ಮಾಡಿ ನೋಡಬೇಕು. ಮಳೆ ಕಾರಣದಿಂದ ಕ್ವಾಲಿಟಿ ಮೆಂಟೇನ್ ಮಾಡೋದು ಸ್ವಲ್ಪ ಕಷ್ಟ. ಸರಿಯಾಗಿ ಕೆಲಸ ಆಗದೇ ಇದ್ದರೆ ಖಂಡಿತಾ ತಲೆದಂಡ ಎದುರಿಸಬೇಕಾಗುತ್ತೆ. ನಾಗರೀಕರಿಗೆ ಒಳ್ಳೆದಾಗ್ಬೇಕು, ಗುಂಡಿಯಿಂದ ಯಾರ ಪ್ರಾಣವೂ ಹೋಗಬಾರದು, ನನಗೆ ಪೇಪರ್ ಮತ್ತು ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ. ಎಲ್ಲಾ ನಾನೇ ನನ್ನ ಕಣ್ಣಾರೆ ನೋಡಿ ಸಮಾಧಾನ ಆಗಬೇಕು ಅಂತ ರೌಂಡ್ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

  • ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ

    ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ

    ಬೆಂಗಳೂರು: ಬಿಬಿಎಂಪಿ (BBMP) ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡುತ್ತಿದ್ದಾರೆ. ಗುಂಡಿ ಮುಚ್ಚೋದು ನಮ್ಮ ಬದ್ಧತೆ. ನಮ್ಮ ಕರ್ತವ್ಯ ಇದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಡೆಡ್ ಲೈನ್ ಮುಗಿದರೂ ಬಿಬಿಎಂಪಿಯಿಂದ ಗುಂಡಿ ಮುಚ್ಚದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪಾಲಿಕೆ ಅಧಿಕಾರಿಗಳು ನಾನು ಹೇಳಿದ ಮೇಲೆ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತೀ ಗುಂಡಿ ಲೆಕ್ಕ ನನ್ನ ಬಳಿ ಇದೆ. ನನ್ನ ಫೋನ್‌ನಲ್ಲಿ ಇದೆ. 2-3 ದಿನಗಳಲ್ಲಿ ನಾನು ರಾತ್ರಿ ರೌಂಡ್ಸ್ ಮಾಡುತ್ತಿದ್ದೇನೆ. ದೊಡ್ಡ ಅಭಿಯಾನದ ರೀತಿ ಗುಂಡಿ ಮುಚ್ಚೋ ಕೆಲಸ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ 

    ಇದೊಂದು ದೊಡ್ಡ ಸಾಧನೆ ಅಂತ ನಾನು ಹೇಳುತ್ತಿಲ್ಲ. ಆದರೆ ಒಂದು ಪ್ರಯತ್ನ ಎಂದು ಮಾಡಿದ್ದೇವೆ. ಕ್ವಾಲಿಟಿ ಹೇಗಿದೆ ಅಂತ ನಾನೇ ಪರಿಶೀಲನೆ ಮಾಡುತ್ತೇನೆ. ಕೆಲಸ ಆಗುತ್ತಿದೆ. ಒಂದೇ ದಿನಕ್ಕೆ ಆಗಲ್ಲ. ಮಳೆ, ಬೇರೆ ವಿಚಾರ ಎಲ್ಲಾ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕಿದೆ. ನಮ್ಮ ಬದ್ಧತೆ ಇದೆ. ನಮ್ಮ ಕರ್ತವ್ಯ ಇದು. ನಾಗರೀಕರಿಗೆ ಜನರಿಗೆ ಅನುಕೂಲ ಮಾಡೋ ಕೆಲಸ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ನಾನು ಹೋಗಿದ್ದೇನೆ. ದೆಹಲಿಯಲ್ಲಿ ಹೋಗಿದ್ದೇನೆ. ಆ ವಿಡಿಯೋ ನಾನು ಹಾಕಿದರೆ ಅವರ ರಾಜ್ಯಕ್ಕೆ ಅವಮಾನ ಆಗುತ್ತದೆ. ಅದಕ್ಕಿಂತ ನಮ್ಮವರು ಚೆನ್ನಾಗಿ ಪರಿವರ್ತನೆ ಮಾಡಬೇಕು ಎಂದು ಪ್ರಯತ್ನ ಮಾಡಿದ್ದೇನೆ. ಯಶಸ್ವಿ ಆಗುತ್ತಿದ್ದೇವೆ ಎಂದು ಬಿಬಿಎಂಪಿ ಗುಂಡಿ ಮುಚ್ಚುವ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

  • ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ಟಿ ಕಾರುಣ್ಯ ರಾಮ್ (Karunya Ram) ಜನ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ತಮ್ಮ ರಾಜರಾಜೇಶ್ವರಿ ನಗರ (Rajarajeshwari Nagar) ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು (Potholes) ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದಾರೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕಾರುಣ್ಯ, ‘ಎರಡು ಘಟನೆಗಳಿಂದಾಗಿ ನಾನು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಲು ಹೊರಟೆ. ನನ್ನ ಸ್ನೇಹಿತರೊಬ್ಬರ ತಂದೆ ತಾಯಿ ವಾಹನ ಓಡಿಸುವಾಗ ರಸ್ತೆಗುಂಡಿಗೆ ಬಿದ್ದು ಆಸ್ಪತ್ರೆ ಸೇರಿದರು. ಅದರಲ್ಲಿ ಒಬ್ಬರು ಮೃತರಾದರು. ಅಲ್ಲದೇ, ನನ್ನ ಕಣ್ಣಾರೆ ಹುಡುಗಿಯೊಬ್ಬಳು ರಸ್ತೆ ಗುಂಡಿಯಲ್ಲಿ ಬಿದ್ದದ್ದು ನೋಡಿದೆ. ಹಣಕ್ಕಿಂತಲೂ ಜೀವ ಅಮೂಲ್ಯ. ಈ ರೀತಿಯಲ್ಲಿ ಪ್ರಾಣ ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕೆ ಗುಂಡಿ ಮುಚ್ಚಲು ಮುಂದಾದೆ’ ಎನ್ನುತ್ತಾರೆ.

    ‘ಸರಕಾರ ಅಥವಾ ಜನಪ್ರತಿನಿಧಿಗಳನ್ನು ಬೈಯುತ್ತಾ ಕೂರುವ ಬದಲು, ನಮ್ಮ ಮನೆ, ಏರಿಯಾ ಸುತ್ತಲೂ ಇರುವ ಒಂದೊಂದು ಗುಂಡಿಯನ್ನು ಮುಚ್ಚಿದರೆ ಸಾಕು. ಗುಂಡಿ ಮುಕ್ತ ಬೆಂಗಳೂರು ಮಾಡಬಹುದು. ಜನರು ಮನಸ್ಸು ಮಾಡಬೇಕು ಅಷ್ಟೆ. ಜೀವ ನಮ್ಮದೆ. ಹಾಗಾಗಿ ನಮ್ಮ ಜೀವವನ್ನು ನಾವೇ ಕಾಪಾಡಿಕೊಳ್ಳಬೇಕು. ಇದು ನಾನು ಕಂಡುಕೊಂಡ ಸತ್ಯ. ಈ ಸೂತ್ರವೇ ನನ್ನನ್ನು ಪ್ರೇರೇಪಿಸಿತು’ ಎನ್ನುವುದು ಕಾರುಣ್ಯ ಮಾತು.

    ರಾತ್ರಿ ಹನ್ನೊಂದರ ಹೊತ್ತಿಗೆ ಗುಂಡಿಗಳನ್ನು ಮುಚ್ಚುವುದಕ್ಕೆ ಶುರು ಮಾಡಿದ ಕಾರುಣ್ಯ ಮತ್ತು ಟೀಮ್ ಗೆ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಅಭಿನಂದನೆ ಸಲ್ಲಿಸಿದ್ದಾರೆ. ‘ಆ ರಸ್ತೆಯಲ್ಲಿ ಹೋಗುತ್ತಿದ್ದವರು ವಾಹನ ನಿಲ್ಲಿಸಿ, ನಮ್ಮನ್ನು ಮಾತನಾಡಿಸುತ್ತಿದ್ದರು. ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಬೆನ್ನುತಟ್ಟಿದರು. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದಕ್ಕಿಂತ ಬೇರೆ ಮೆಚ್ಚುಗೆ ಬೇಕಿಲ್ಲ’ ಎನ್ನುತ್ತಾರೆ ಕಾರುಣ್ಯ. ಇದನ್ನೂ ಓದಿ: ಅನುಷ್ಕಾಳೇ ನನ್ನ ಸ್ಫೂರ್ತಿ ಎಂದು ಪತ್ನಿಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ

    ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಸಂಸ್ಕಾರ ಟ್ರಸ್ಟ್ (Sanskara Trust) ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.

  • ಬೆಂಗ್ಳೂರು ರಸ್ತೆ ಗುಂಡಿಗೆ 3 ವರ್ಷದಲ್ಲಿ 7 ಸಾವಿರ ಕೋಟಿ

    ಬೆಂಗ್ಳೂರು ರಸ್ತೆ ಗುಂಡಿಗೆ 3 ವರ್ಷದಲ್ಲಿ 7 ಸಾವಿರ ಕೋಟಿ

    ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಬರೋಬ್ಬರಿ 7121 ಕೋಟಿ ರೂಪಾಯಿ ವೆಚ್ಚ ಮಾಡಿದೆ.

    ಈ ಮೂರು ವರ್ಷಗಳಲ್ಲಿ 23 ಸಾವಿರದಿಂದ 25 ಸಾವಿರ ಗುಂಡಿಗಳನ್ನು 7,121 ಕೋಟಿ ವೆಚ್ಚದಲ್ಲಿ ಮುಚ್ಚಿದ್ದೇವೆ ಎಂದು ಬಿಬಿಎಂಪಿ (BBMP) ಹೇಳಿಕೊಂಡಿದೆ. 2019ರಲ್ಲಿ 4,297 ಕೋಟಿ, 2020ರಲ್ಲಿ 1,547 ಕೋಟಿ, 2021ರಲ್ಲಿ 1,277 ಕೋಟಿ ಹಣವನ್ನು ಬಿಬಿಎಂಪಿ ವೆಚ್ಚ ಮಾಡಿದೆ. ಮಹಾದೇವಪುರ ವಲಯದಲ್ಲಿ ಗರಿಷ್ಠ 1,456 ಕೋಟಿ ವ್ಯಯಿಸಲಾಗಿದೆ. ಇದನ್ನೂ ಓದಿ: ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

    ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ (Congress) ಮಾಜಿ ಮಂತ್ರಿ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು 40 ಪರ್ಸೆಂಟ್ ಕಮೀಷನ್ ಜಾತ್ರೆ, ಎಲೆಕ್ಷನ್ ರೋಡ್ ಎಂದು ಜರೆದಿದ್ದಾರೆ. ಈ ಕುರಿತ ಪ್ರಶ್ನೆಗೆ ಉತ್ತರಿಸದೇ ಕೇಂದ್ರ ಮಂತ್ರಿ ಪಿಯೂಶ್ ಗೋಯೆಲ್ (Piyush Goyal) ಜಾರಿಕೊಳ್ಳಲು ನೋಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ ಆಗದಿದ್ರೆ ಇಂಜಿನಿಯರ್‌ಗಳ ಸಂಬಳ ಕಟ್: BBMP ಕಮಿಷನರ್ ವಾರ್ನಿಂಗ್

    ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ ಆಗದಿದ್ರೆ ಇಂಜಿನಿಯರ್‌ಗಳ ಸಂಬಳ ಕಟ್: BBMP ಕಮಿಷನರ್ ವಾರ್ನಿಂಗ್

    ಬೆಂಗಳೂರು: ಬಿಬಿಎಂಪಿಗೆ (BBMP) ರಸ್ತೆಗುಂಡಿಗಳನ್ನು (Road) ಇಷ್ಟು ದಿನಗಳಲ್ಲಿ ಮುಚ್ಚುತ್ತೇವೆ ಎನ್ನುವ ಡೆಡ್‍ಲೈನ್ ಕಾಮನ್ ಆಗಿದೆ. ಇದೀಗ ಕಮೀಷನರ್ ಹೊಸವರ್ಷಕ್ಕೆ (New Year) ಮತ್ತೊಂದು ಹೊಸ ಡೆಡ್‍ಲೈನ್ ನೀಡಿದ್ದಾರೆ. ಒಂದು ವೇಳೆ ಅಧಿಕಾರಿಗಳು ಗುಂಡಿ (Potholes) ಮುಚ್ಚಿಲ್ಲ ಅಂದ್ರೇ ಸಂಬಳ (Salary)  ಕಟ್ ಮಾಡುವ ಶಿಕ್ಷೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    BBMP

    ಬೆಂಗಳೂರು (Bengaluru) ನಗರದಲ್ಲಿರುವ ಗುಂಡಿ ಮುಚ್ತೀವಿ ಮುಚ್ತೀವಿ ಅಂತ ಬಿಬಿಎಂಪಿ ಹೇಳಿದ್ದೆ ಬಂತು. ಜನರ ತೆರಿಗೆ ದುಡ್ಡು ನೀರಲ್ಲಿ ಹೋಮ ಮಾಡಿದ್ದೆ ಬಂತು. ಗುಂಡಿಗಳಿಗೆ ಮಾತ್ರ ಕಡಿವಾಣವೇ ಬೀಳ್ತಿಲ್ಲ. ಈ ಮಧ್ಯೆ ಕಮಿಷನರ್ ಹೊಸ ವರ್ಷಕ್ಕೆ ನೂತನ ಡೆಡ್‍ಲೈನ್ ಕೊಟ್ಟಿದ್ದಾರೆ. ಡಿ.31ರ ಒಳಗೆ ಎಲ್ಲಾ ಗುಂಡಿ ಮುಚ್ಚುವಂತೆ ಸೂಚಿಸಿದ್ದಾರೆ. ಹೊಸ ವರ್ಷಕ್ಕೆ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಮೂಲಕ ಜನರಿಗೆ ಹೊಸ ವರ್ಷದ ಮೊದಲ ಗಿಫ್ಟ್ ನೀಡೋಕೆ ಮುಂದಾಗಿದ್ದಾರೆ. ಇದನ್ನೂ ಓದಿ: 5 ಲಕ್ಷದ ವಾಚ್‌ ವಿವಾದ: ದೇಶಭಕ್ತಿಯ ಟ್ವಿಸ್ಟ್‌ ನೀಡಿ ಸವಾಲೆಸೆದ ಅಣ್ಣಾಮಲೈ

    ಗುಂಡಿ ಗಂಡಾಂತರಕ್ಕೆ ಮೂಲ ಕಾರಣವೇ BWSSB, BESCOM ಎಂದು ಬಿಬಿಎಂಪಿ ದೂರುತ್ತಿದೆ. ನಾವೆಲ್ಲಾ ಕಾಮಗಾರಿ ಮಾಡ್ತಾ ಕಂಪ್ಲೀಟ್ ಮಾಡ್ತಿದ್ರೆ, ಈ ಎರಡೂ ಸಂಸ್ಥೆಗಳು ಕಾಮಗಾರಿ ನೆಪದಲ್ಲಿ ರಸ್ತೆಗಳನ್ನು ಅಗೆದು ಹಾಳು ಮಾಡುತ್ತಿದ್ದಾರೆ. ಈ ಸಂಸ್ಥೆಗಳಿಗೆ ನಮ್ಮ ಬಿಬಿಎಂಪಿ ಇಂಜಿಯರ್‌ಗಳೇ ಅನುಮತಿ ಕೊಡಬೇಕು. ಕೊಟ್ಟ ಬಳಿಕ ಕಾಮಗಾರಿ ಮುಗಿದ ಮೇಲೆ ನಮ್ಮ ಅಧಿಕಾರಿಗಳೇ ರಸ್ತೆಗಳನ್ನು ಮುಂದೆ ನಿಂತು, ಆ ಸಂಸ್ಥೆಗಳಿಂದಲೇ ಅಗೆದ ರಸ್ತೆಗಳನ್ನು ದುರಸ್ತಿ ಮಾಡಿಸಬೇಕು. ಹಾಗೇನಾದ್ರು ಮಾಡಲಿಲ್ಲ ಅಂದ್ರೆ ನಮ್ಮ ವಾರ್ಡ್ ಹಾಗೂ ಮೇಜರ್ ರೋಡ್ ಇಂಜಿನಿಯರ್‌ಗಳ ಸಂಬಳವನ್ನು ಕಡಿತ ಮಾಡಿ ರಸ್ತೆ ದುರಸ್ತಿ ಮಾಡ್ತೇವೆ ಎಂದು ಕಮಿಷನರ್ ತುಷಾರ್ ಗಿರಿನಾಥ್ (Tushar Girinath) ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಅವರ ಭಾಷೆಯಲ್ಲೇ ಉತ್ತರಿಸಿ: NCP ನಾಯಕ

    ಆಗುವ ಕೆಲಸವನ್ನು ಮಾಡೋದು ಬಿಟ್ಟು, ಕಮಿಷನರ್ ಬರಿ ಶಿಸ್ತು ಕ್ರಮ, ಸಂಬಳ ಕಡಿತ, ಡೆಡ್‍ಲೈನ್ ಅಂತ ಹೇಳಿಕೆ ಕೊಡ್ತಾರೆ. ಪಾಲಿಕೆ ಇಂಜಿನಿಯರ್‌ಗಳು ಕಮಿಷನರ್ ಅವರ ಮಾತನ್ನೇ ಕೇಳೋಲ್ಲ. ಇವರೇನಾದ್ರೂ ಇಂಜಿನಿಯರ್‌ಗಳ ಸಂಬಳ ಕಡಿತ ಮಾಡಿದ್ರೆ, ಅವರೆಲ್ಲಾ ಸೇರಿ ಇವರ ವರ್ಗಾವಣೆಯನ್ನೇ ಮಾಡಿಸಿ ಬಿಡ್ತಾರೆ. ಇದು ಬಿಬಿಎಂಪಿಯಲ್ಲಿರೋ ವ್ಯವಸ್ಥೆ ಎಂದು ಸಾಮಾಜಿಕ ಹೋರಾಟಗಾರರು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗಾಯಾಳು ಸಂದೀಪ್‍ಗೆ ಉತ್ತಮ ಚಿಕಿತ್ಸೆ ನೀಡುವಂತೆ ಸುಧಾಕರ್ ಸೂಚನೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗಾಯಾಳು ಸಂದೀಪ್‍ಗೆ ಉತ್ತಮ ಚಿಕಿತ್ಸೆ ನೀಡುವಂತೆ ಸುಧಾಕರ್ ಸೂಚನೆ

    ಬೆಂಗಳೂರು: ರಸ್ತೆ ಗುಂಡಿ (Potholes) ತಪ್ಪಿಸೋಕೆ ಹೋಗಿ ಗಂಭೀರ ಗಾಯಗೊಂಡು ಸದ್ಯ ಚೇರತಿಸಿಕೊಳ್ಳುತ್ತಿರುವ ಸಂದೀಪ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಡೀನ್ ಗೆ ಸೂಚನೆ ಕೊಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ (K Sudhakar) ಭರವಸೆ ನೀಡಿದರು.

    ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಸಿಗದ ವಿಚಾರದ ಕುರಿತು ಇಂದು ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಈ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯಿಸಿ, ಈಗಾಗಲೇ ರೋಗಿಗೆ ವಿಕ್ಟೋರಿಯಾದಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದೆ. ಉತ್ತಮ ಚಿಕಿತ್ಸೆ ನೀಡುವಂತೆ ಡೀನ್ ಗೆ ಸೂಚನೆ ಕೊಡ್ತೀನಿ. ರೋಗಿ ಆದಷ್ಟು ಬೇಗ ಹುಷಾರಾಗಲಿ ಎಂದು ಶುಭ ಹಾರೈಸಿದರು.

    ಕೆಲ ಸರ್ಕಾರಿ ಆಸ್ಪತ್ರೆ (Government Hospital) ಗಳಲ್ಲಿ ಕೆಲ ಅಧಿಕಾರಿಗಳಿಂದ ಸಮಸ್ಯೆ ಆಗುತ್ತಿದೆ. ಆ ವ್ಯವಸ್ಥೆಯನ್ನ ಸರಿ ಮಾಡೋ ಕೆಲಸ ಮಾಡುತ್ತಿದ್ದೇವೆ. ಅತ್ಯುತ್ತಮವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿದೆ. ಇದನ್ನ ಮತ್ತಷ್ಟು ಉತ್ತಮ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸುಧಾಕರ್ ಪಬ್ಲಿಕ್ ಟಿವಿಗೆ ತಿಳಿಸಿದರು. ಇದನ್ನೂ ಓದಿ: ಗುಂಡಿಗೆ ಬಿದ್ದು ಕೋಮಾಗೆ ಜಾರಿದ್ದ ಸಂದೀಪ್- ಪ್ರಜ್ಞಾವಸ್ಥೆಗೆ ಬಂದ ಸವಾರನಿಗೆ ಸಿಗ್ತಿಲ್ಲ ಆಸ್ಪತ್ರೆ ಬೆಡ್

    ಏನಿದು ಘಟನೆ..?: ಕೆಲವು ದಿನಗಳ ಹಿಂದೆಯಷ್ಟೇ ವಿದ್ಯಾರಣ್ಯಪುರದ ನಿವಾಸಿ ಸಂದೀಪ್ ಫ್ರೆಂಡ್ಸ್ ಗಳ ಜೊತೆ ಕ್ರಿಕೆಟ್ ಆಡಿಕೊಂಡು ಜಾಲಹಳ್ಳಿಯ ಗಂಗಮ್ಮ ರಸ್ತೆ ಮಾರ್ಗವಾಗಿ ಬೈಕ್‍ನಲ್ಲಿ ಬರುತ್ತಿದ್ದರು. ಆದರೆ ಅದೇ ದಾರಿಯಲ್ಲಿ ಯಮವಾಗಿದ್ದ ಗುಂಡಿಯೊಂದನ್ನ ತಪ್ಪಿಸಲು ಹೋದ ಸಂದೀಪ್ (Sandeep), ಕೆಳಗೆ ಬಿದ್ದು ಗಂಭೀರ ಗಾಯವಾಗಿ ಹತ್ತಿರದ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಾದರು. ಸಂದೀಪ್ ಪತ್ನಿ ಸೀಮಾ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿರುದ್ಧ ದೂರು ಕೂಡ ನೀಡಿದ್ದರು.

    ಇತ್ತ ಚಿಂತಾಜನಕ ಸ್ಥಿತಿ ತಲುಪಿ ಸಾವು-ಬದುಕು ನಡುವೆ ಹೋರಾಡ್ತಿದ್ದ ಸಂದೀಪ್ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾಡಿರೋ ಬೇಜವಾಬ್ದಾರಿ ಕೆಲಸಕ್ಕೆ ಬೈಕ್ ಸವಾರ ಸಂದೀಪ್ ಆಸ್ಪತ್ರಗೆ ಕಟ್ಟಿದ್ದು ಬರೋಬ್ಬರಿ 14 ಲಕ್ಷ ಹಣ. ಮಧ್ಯಮ ವರ್ಗ ಕುಟುಂಬದವರಾಗಿರೋ ಸಂದೀಪ್ ಕುಟುಂಬ ಈಗ ಹೆಚ್ಚಿನ ಚಿಕಿತ್ಸೆಗೆ ಹಣ ಇಲ್ಲದೆ ಪರದಾಡ್ತಿದ್ದಾರೆ.

    ಸಂದೀಪ್ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನೇನೋ ಗೆದ್ದಿದ್ದಾರೆ. ಆದರೆ ಸಂದೀಪ್‍ಗಾಗಿ ಪರಿತಪಿಸ್ತಿರುವ ಪತ್ನಿ ಸೀಮಾ ಇನ್ನೂ ಕಂಗಾಲಾಗಿದ್ದಾರೆ. ಸಂದೀಪ್ ಪತ್ನಿ ಸೀಮಾ ಗೋಳಾಡ್ತಾ ಮಾತನಾಡಿ, ಒಂದೆಡೆ ನಿಮ್ಹಾನ್ಸ್‍ಗೆ ಶಿಫ್ಟ್ ಮಾಡೋಣ ಅಂದ್ರೆ ಅಲ್ಲಿ ಬೆಡ್ ಇಲ್ಲ. ಇಎಸ್‍ಐ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ವಂತೆ. ನಮಗೆ ಏನ್ ಮಾಡ್ಬೇಕು ಅಂತ ಗೊತ್ತಾಗ್ತಿಲ್ಲ. ಬಿಬಿಎಂಪಿ ಅಧಿಕಾರಿಗಳು ನಮ್ಮ ಸಹಾಯಕ್ಕೆ ಬರ್ತಿಲ್ಲ ಅಂತ ತಮ್ಮ ನೋವನ್ನ ಪಬ್ಲಿಕ್ ಟಿವಿ ಮುಂದೆ ತೋಡಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]