Tag: Potion Poster

  • ದರ್ಶನ್‍ನ ಹೊಸ ರಗಡ್ ಲುಕ್‍ಗೆ ಫ್ಯಾನ್ಸ್ ಫಿದಾ

    ದರ್ಶನ್‍ನ ಹೊಸ ರಗಡ್ ಲುಕ್‍ಗೆ ಫ್ಯಾನ್ಸ್ ಫಿದಾ

    ಬೆಂಗಳೂರು: ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ರಾಬರ್ಟ್’ ಸಿನಿಮಾದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

    ನಟ ದರ್ಶನ್ ಈ ಹಿಂದೆಯೇ ಕ್ರಿಸ್‍ಮಸ್ ಹಬ್ಬಕ್ಕೆ ‘ರಾಬರ್ಟ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಅದರಂತೆಯೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಪೋಸ್ಟರ್ ಬಿಡುಗಡೆಯಾಗಿದೆ.

    ರಿಲೀಸ್ ಆಗಿರುವ ಮೋಷನ್ ಪೋಸ್ಟರ್ 1 ನಿಮಿಷ 17 ಸೆಕೆಂಡ್‍ಗಳಿದ್ದು, ದರ್ಶನ್ ಖಡಕ್ ಆದ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬ್ಲಾಕ್ ಬಣ್ಣದಿಂದ ಮೂಡಿ ಬಂದಿದ್ದು, ಕಪ್ಪು ಬಣ್ಣದ ಜಾಕೆಟ್, ಕತ್ತಿನಲ್ಲಿ ಶಿಲುಬೆಯ ಚೈನ್, ಗಡ್ಡಧಾರಿಯಾಗಿ ಕೈಯಲ್ಲಿ ಗನ್ ಹಿಡಿದುಕೊಂಡು ದರ್ಶನ್ ರಗಡ್ ಪೋಸ್ ಕೊಟ್ಟಿದ್ದಾರೆ. ಪೋಸ್ಟರಿನಲ್ಲಿ ಲಾಂಗ್ ಹೇರಿನಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ.

    ಪೋಸ್ಟರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ 2 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದ್ದು, 43ಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದಾರೆ. ಅಲ್ಲದೇ ಅಭಿಮಾನಿಗಳು ದರ್ಶನ್ ಅವರ ಹೊಸ ಅವತಾರಕ್ಕೆ ಫಿದಾ ಆಗಿದ್ದು, ಪೋಸ್ಟರ್‌ಗೆ ಮೆಚ್ಚುಗೆಯ ಸುರಿಮಳೆ ಹರಿದು ಬರುತ್ತಿದೆ.

    ‘ರಾಬರ್ಟ್’ ಸಿನಿಮಾ ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಮಾಡುತ್ತಿದ್ದು, ಇತ್ತೀಚೆಗಷ್ಟೆ ಚಿತ್ರದ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ. ಚಿತ್ರದಲ್ಲಿ ದರ್ಶನ್ ಅವರಿಗೆ ನಟಿ ಆಶಾ ಭಟ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.