Tag: Power Outage

  • ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

    ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಂಗಳವಾರ (ಸೆ.16) ಹಾಗೂ ಬುಧವಾರ (ಸೆ.17) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಮಂಗಳವಾರ (ಸೆ.16) ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಣೆ, ಬೆಂಗಳೂರು ಡೈರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್‌ಜಿ ನಗರ, ಶಾಮಣ್ಣ ಗಾರ್ಡನ್, ಎನ್‌ಡಿಆರ್‌ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ವಾಲ್ಮೀಕಿ ಹಗರಣ| ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

    ಇನ್ನೂ ಬುಧವಾರ (ಸೆ.17) 66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ರ‍್ಲಾಪುರ, ಕೆಎಂಎಫ್, ಇಟಗಲ್ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

  • ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಕಟ್?

    ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಕಟ್?

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ (ಸೆ.14) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ಬೆಂಗಳೂರು | ನಗರದ ಹಲವೆಡೆ ಶನಿವಾರ ವಿದ್ಯುತ್ ವ್ಯತ್ಯಯ

    ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ, ವೈಷ್ಣವಿ ಮಾಲ್, ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ ಜುಲೈ 21 (ಸೋಮವಾರ), ಜು.22 (ಮಂಗಳವಾರ) ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ (Power Outage) ಆಗಲಿದೆ.

    ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ (Electricity) ಪೂರೈಕೆಯಲ್ಲಿ ವ್ಯತ್ತಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

    ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?
    ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್‌ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

  • ಸ್ಪೇನ್, ಪೋರ್ಚುಗಲ್‌, ಫ್ರಾನ್ಸ್‌ನ ಬಹುತೇಕ ಕಡೆ ವಿದ್ಯುತ್ ಕಡಿತ – ರೈಲು ಸಂಚಾರದಲ್ಲಿ ವ್ಯತ್ಯಯ

    ಸ್ಪೇನ್, ಪೋರ್ಚುಗಲ್‌, ಫ್ರಾನ್ಸ್‌ನ ಬಹುತೇಕ ಕಡೆ ವಿದ್ಯುತ್ ಕಡಿತ – ರೈಲು ಸಂಚಾರದಲ್ಲಿ ವ್ಯತ್ಯಯ

    – ವಿಮಾನಗಳ ಹಾರಾಟಕ್ಕೂ ಸಮಸ್ಯೆ
    – ಮ್ಯಾಡ್ರಿಡ್ ಓಪನ್ ಟೆನಿಸ್ ಟೂರ್ನಿ ತಾತ್ಕಾಲಿಕ ಸ್ಥಗಿತ

    ಮ್ಯಾಡ್ರಿಡ್: ಫ್ರಾನ್ಸ್‌, ಪೋರ್ಚುಗಲ್‌ ಹಾಗೂ ದಕ್ಷಿಣ ಫ್ರಾನ್ಸ್‌ನಲ್ಲಿಂದು (Spain, Portugal, France) ಏಕಕಾಲಕ್ಕೆ ವಿದ್ಯುತ್‌ ಕಡಿತಗೊಂಡಿದ್ದು (Power Outage), ಲಕ್ಷಾಂತರ ಜನರು ಪರದಾಡುವಂತಾಗಿದೆ. ಅಲ್ಲದೇ ಈ ವಿದ್ಯುತ್‌ ಕಡಿತವು ರೈಲು (Train) ಸಂಚಾರ ಹಾಗೂ ವಿಮಾನ ಹಾರಾಟದ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

    ಮೂರು ಯೂರೋಪಿಯನ್‌ ದೇಶಗಳಲ್ಲಿ (European countries) ವಿದ್ಯುತ್‌ ಕಡಿತ ಸಂಭವಿಸಿದ್ದು, ಲಕ್ಷಾಂತರ ಜನಕ್ಕೆ ಸಮಸ್ಯೆ ತಂದೊಡ್ಡಿದೆ. ಆದ್ರೆ ವಿದ್ಯುತ್‌ ಕಡಿತಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಸ್ಪ್ಯಾನಿಷ್‌ ಪ್ರಧಾನಿ ಪೆಡ್ರೋ ಸ್ಯಾಂಚೆಜ್‌ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಲು ಗ್ರಿಡ್‌ ಆಪರೇಟರ್‌ ತುರ್ತು ಸಭೆ ಕರೆದಿದ್ದಾರೆ. ಇಂಧನ ಸಚಿವೆ ಸಾರಾ ಆಗೆಸೆನ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಫ್ಲೋರಿಡಾದಲ್ಲಿ 2 ದೋಣಿಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ

    ಸದ್ಯ ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪನಿ ರೆಡ್ ಎಲೆಕ್ಟ್ರಿಕಾ, ಶೀಘ್ರದಲ್ಲೇ ಸಮಸ್ಯೆ ಪರಿಹರಿಸಲು ನಮ್ಮ ತಂಡ ಕೆಲಸ ಮಾಡುತ್ತಿದೆ. ಜೊತೆಗೆ ವಿದ್ಯುತ್‌ ಕಡಿತಕ್ಕೆ ನಿಖರ ಕಾರಣವನ್ನೂ ಪರಿಶೀಲಿಸಲಾಗುತ್ತಿದೆ, ಅದಕ್ಕಾಗಿ ಯುರೋಪಿಯನ್ ನೆಟ್‌ವರ್ಕ್ ಆಫ್ ಟ್ರಾನ್ಸ್‌ಮಿಷನ್ ಸಿಸ್ಟಮ್ ಆಪರೇಟರ್‌ಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ರೈಲು ಸಂಚಾರ, ವಿಮಾನ ಹಾರಾಟದಲ್ಲಿ ವ್ಯತ್ಯಯ:
    ಏಕಕಾಲಕ್ಕೆ ದೇಶದ ವಿವಿಧೆಡೆ ವಿದ್ಯುತ್‌ ಕಡಿತಗೊಂಡ ಪರಿಣಾಮ ಸ್ಪೇನ್‌ನಾದ್ಯಂತ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮ್ಯಾಡ್ರಿಡ್‌ನ ವಿಮಾನಗಳ ಹಾರಟದಲ್ಲೂ ಸಮಸ್ಯೆ ಉಂಟಾಗಿದೆ. ಪರಿಸ್ಥಿತಿ ಕುರಿತು ಬಜೆಟ್ ವಿಮಾನಯಾನ ಸಂಸ್ಥೆ ರಯಾನ್ಏರ್ ಮೇಲ್ವಿಚಾರಣೆ ನಡೆಸುತ್ತಿದೆ. ಅಲ್ಲದೇ ವಿದ್ಯುತ್ ಕಡಿತದಿಂದಾಗಿ ಮ್ಯಾಡ್ರಿಡ್ ಓಪನ್ ಟೆನಿಸ್ ಟೂರ್ನಿಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್

  • ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ – ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ – ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಕೆಲವೆಡೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ-01, 66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ ಹಾಗೂ 66/11 ಕೆ.ವಿ ರಾಜರಾಜೇಶ್ವರಿ ನಗರ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

    ಯಾವ್ಯಾವ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ?
    ಹೆಚ್‌ಜಿ ಶೀಲಾ ಬಿಲ್ಡಿಂಗ್ ಔಟರ್ ರಿಂಗ್ ರೋಡ್, ಬ್ರಿಗೇಡ್ ಮೆಟ್ರೋಪೋಲಿಸ್ ಡೆಫ್ ಬ್ಲಾಕ್, ದೇವಸಂದ್ರ ಇಂಡಸ್ಟ್ರಿಯಲ್ ಎಸ್ಟೇಟ್, ಬ್ರಿಗೇಡ್ ನಲ್ಪಾಡ್ ಬಿಲ್ಡಿಂಗ್, ಡಬ್ಲ್ಯುಎಫ್‌ಡಿ ಮುಖ್ಯ ರಸ್ತೆ, ಮಾಲ್, ಬ್ರಿಗೇಡ್ ಮೆಟ್ರೋಪೋಲಿಸ್ ಎಬಿಸಿ ಬ್ಲಾಕ್, ನೆಟಾಪ್ ಇಂಡಿಯಾ ಪ್ರೈ ಲಿಮಿಟೆಡ್, ದರ್ಗಾ ಪೆಟಲ್ಸ್ ಅಪಾರ್ಟ್ಮೆಂಟ್, ಔಟರ್ ರಿಂಗ್ ರೋಡ್, ಬ್ಯಾಗ್‌ಮನೆ ಐಟಿ ಪಿ, ಶೋಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊಜ್ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್ರರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಥಣಿಸಂದ್ರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಐಡಿಯಲ್ ಹೋಮ್ಸ್, ಉತ್ತರಹಳ್ಳಿ, ಸಚ್ಚಿದಾನಂದ ನಗರ, ವಡ್ಡರ ಪಾಳ್ಯ, ಗಾಮಕಲ್ಲು, ಬೆಮಲ್ ಲೇಔಟ್, ಬಿಹೆಚ್‌ಸಿಎಸ್ ಲೇಔಟ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

  • ಬೆಂಗಳೂರು| ಬೆಸ್ಕಾಂ ವ್ಯಾಪ್ತಿಯ ಕೆಲವೆಡೆ ಇಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?

    ಬೆಂಗಳೂರು| ಬೆಸ್ಕಾಂ ವ್ಯಾಪ್ತಿಯ ಕೆಲವೆಡೆ ಇಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?

    ಬೆಂಗಳೂರು: ಕೆಪಿಟಿಸಿಎಲ್‌ನ (KPTCL) ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ಕೆಲವೆಡೆ ಇಂದು (ಗುರುವಾರ) ವಿದ್ಯುತ್‌ ವ್ಯತ್ಯಯ (Power Outage) ಆಗಲಿದೆ.

    ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕೆಪಿಟಿಸಿಎಲ್ ದುರಸ್ತಿ ಕಾರ್ಯ ನಡೆಯಲಿದೆ. ಹೀಗಾಗಿ ಕೆಲವೆಡೆ ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ

    ಯಾವ್ಯಾವ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ವ್ಯತ್ಯಯ?

    ಬೆಂಗಳೂರು ನಗರ
    * ಶಾಂತಿನಗರ ಬಿಎಂಟಿಸಿ
    * ಬನ್ನೇರುಘಟ್ಟ
    * ಪೋಯೆಟ್ರಿ ರೋಡ್
    * ಸೇಂಟ್‌ ಜಾನ್ಸ್‌ವುಡ್

    ಬೆಂಗಳೂರು ನಗರದ ಹೊರವಲಯ
    * ದೊಡ್ಡಬಳ್ಳಾಪುರದ ಭಾಗಶಃ
    * ಕುಂದಾಣ
    * ದೇವನಹಳ್ಳಿ
    * ಡಿ ಕ್ರಾಸ್- ಡಿಬಿ ಪುರ ಇದನ್ನೂ ಓದಿ: ಬಿಗ್‌ಬಾಸ್‌ ಸ್ಪರ್ಧಿಗೆ ಸಂಕಷ್ಟ – ಡ್ರೋನ್‌ ಪ್ರತಾಪ್‌ ವಿರುದ್ಧ 2.50 ಕೋಟಿ ರೂ. ಮಾನನಷ್ಟ ಕೇಸ್‌!

  • ವಿದ್ಯುತ್ ಕಡಿತ : ಮಂದ ಬೆಳಕಿನಲ್ಲೇ ಭಾಷಣ ಮಾಡಿದ ರಾಷ್ಟ್ರಪತಿ ಮುರ್ಮು

    ವಿದ್ಯುತ್ ಕಡಿತ : ಮಂದ ಬೆಳಕಿನಲ್ಲೇ ಭಾಷಣ ಮಾಡಿದ ರಾಷ್ಟ್ರಪತಿ ಮುರ್ಮು

    ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಷಣ ಮಾಡುತ್ತಿದ್ದಾಗ ವಿದ್ಯುತ್ ಕಡಿತಗೊಂಡ (Power Outage) ಘಟನೆ ಓಡಿಶಾದ (Odisha) ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದಲ್ಲಿ ನಡೆದಿದೆ.

    ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಈ ಘಟನೆ ನಡೆದಿದೆ. ರಾಜ್ಯಪಾಲ ಗಣೇಶಿ ಲಾಲ್ ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಇದಾದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಕಡಿತಗೊಂಡಿದೆ.

    ಇದರಿಂದಾಗಿ ವಿದ್ಯುತ್ ಕಡಿತದಿಂದಾಗಿ ರಾಷ್ಟ್ರಪತಿ ಮುರ್ಮು ಮಂದ ಬೆಳಕಿನಲ್ಲೇ ಭಾಷಣವನ್ನು ಮಾಡಬೇಕಾದ ಪರಿಸ್ಥಿತಿ ಉಂಟಾಯಿತು. ಘಟನೆಯಿಂದಾಗಿ ರಾಷ್ಟ್ರಪತಿಯ ಭದ್ರತಾ ಸಿಬ್ಬಂದಿಗೆ ವಿದ್ಯುತ್ ವೈಫಲ್ಯದಿಂದಾಗಿ 9 ನಿಮಿಷಗಳ ಕಾಲ ಭದ್ರತೆ ಒದಗಿಸಲು ಸಮಸ್ಯೆ ಎದುರಾಯಿತು. ಇದರಿಂದಾಗಿ ಓಡಿಶಾ ಸರ್ಕಾರ ಮುಜುಗರಕ್ಕೆ ಒಳಗಾಗಿದೆ. ಇದನ್ನೂ ಓದಿ: ಕರ್ನಾಟಕ ಚುನಾವಣೆ – ಡಿಜಿಟಲ್‌ ಮೀಡಿಯಾ ಹವಾ ಹೇಗಿದೆ?

    ಪ್ರಾಥಮಿಕ ತನಿಖೆಯ ಪ್ರಕಾರ ಕಾರ್ಯಕ್ರಮಕ್ಕೆ ಬ್ಯಾಕಪ್ ಜನರೆಟರ್‍ಗಳನ್ನು ಬಳಸಲಾಗಿತ್ತು. ಆದರೆ ಭಾಷಣ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆ ಉಂಟಾಗಿ ಈ ರೀತಿಯಾಗಿದೆ. ಸಂಪೂರ್ಣ ವೈಫಲ್ಯಕ್ಕಾಗಿ ವಿಶ್ವವಿದ್ಯಾನಿಲಯದ ಸಿಬ್ಬಂದಿಗೆ ಸಮನ್ಸ್ ನೀಡಲಾಗಿದೆ ಎಂದು ಮಯೂಭರ್ಂಜ್ ಕಲೆಕ್ಟರ್ ವಿನೀತ್ ಭಾರದ್ವಾಜ್ ಹೇಳಿದ್ದಾರೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು