Tag: prabhas

  • ಪ್ರಭಾಸ್ ಸಿನಿಮಾದಲ್ಲಿ ನಯನತಾರಾ ಐಟಂ ಡ್ಯಾನ್ಸ್?

    ಪ್ರಭಾಸ್ ಸಿನಿಮಾದಲ್ಲಿ ನಯನತಾರಾ ಐಟಂ ಡ್ಯಾನ್ಸ್?

    ಮಿಳಿನ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಟಿ, ನಿರ್ಮಾಪಕಿಯಾಗಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪ್ರಭಾಸ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ‘ಜವಾನ್’ (Jawan) ಬೆಡಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಾಯಕಿಯಾಗಿ ಅಲ್ಲ, ಬದಲಾಗಿ ಐಟಂ ಹಾಡಿಗೆ ಹೆಜ್ಜೆ ಹಾಕಲು ರೆಡಿಯಾಗಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

    ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ (The Raaja Saab) ಸಿನಿಮಾದಲ್ಲಿ ನಯನತಾರಾ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲು ಚಿತ್ರತಂಡ ನಟಿಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ನಟಿ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡದ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ.

    ಇನ್ನೂ ಈ ಚಿತ್ರದಲ್ಲಿ ಪ್ರಭಾಸ್ ಜೊತೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮುಂದಿನ ವರ್ಷ ಏ.10ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ಅಲ್ಲು ಅರ್ಜುನ್‌ಗೆ ಮತ್ತೆ ಸಂಕಷ್ಟ – ಜಾಮೀನು ಪ್ರಶ್ನಿಸಿ ತೆಲಂಗಾಣ ಪೊಲೀಸರು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ

  • ಪ್ರಭಾಸ್ ಫೋಟೋ ವಿರುದ್ಧ ‘ಕಣ್ಣಪ್ಪ’ ಟೀಮ್ ಗರಂ

    ಪ್ರಭಾಸ್ ಫೋಟೋ ವಿರುದ್ಧ ‘ಕಣ್ಣಪ್ಪ’ ಟೀಮ್ ಗರಂ

    ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಗೌಪ್ಯತೆಯನ್ನು ಕಾಪಾಡಿಕೊಂಡರೂ, ದುರುಳರ ಕಾರಣದಿಂದಾಗಿ ಸಿಕ್ರೇಟ್ ಆಚೆ ಬರುತ್ತಿವೆ. ಕಣ್ಣಪ್ಪ ಸಿನಿಮಾ ಟೀಮ್ ನಲ್ಲೂ ಅಂಥದ್ದೊಂದು ಅಚಾತುರ್ಯ ನಡೆದಿದೆ. ಹಾಗಾಗಿ ಕಣ್ಣಪ್ಪ ಟೀಮ್ ಗರಂ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದು, ಪ್ರಭಾಸ್ (Prabhas) ಅವರ ಲುಕ್ ನ ಫೋಟೋವನ್ನು ಲೀಕ್ ಮಾಡಲಾಗಿದೆ. ಲೀಕ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಟೀಮ್ ಮುಂದಾಗಿದೆ.

    ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ (Kannappa)  ಸಿನಿಮಾ ಇದೀಗ ವಿಶೇಷ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದೆ. ಹಿರಿಯ ನಟ ಮೋಹನ್ ಬಾಬು, ವಿಷ್ಣು ಮಂಚು (Vishnu Manchu) ಮತ್ತು ಕಣ್ಣಪ್ಪ ಸಿನಿಮಾ ತಂಡ, ಕೇದಾರನಾಥ (Kedarnath), ಬದರಿನಾಥ್ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಮುಂದಾಗಿದ್ದಾರೆ.

    ನಟ ಮೋಹನ್ ಬಾಬು, ಅವರ ಪುತ್ರ ವಿಷ್ಣು ಮಂಚು, ನಿರ್ಮಾಪಕ ಮುಖೇಶ್ ಕುಮಾರ್ ಮತ್ತು ನಟ ಅರ್ಪಿತ್ ರಂಕಾ ಅವರ ಜತೆಗೆ ಕೇದಾರನಾಥ, ಬದರಿನಾಥ್ ಮತ್ತು ಋಷಿಕೇಶದ ಶಿವನ ದೇವಾಲಯಗಳಿಗೆ ಭೇಟಿ ನೀಡಿ, ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡರು. ಭವ್ಯವಾದ ಹಿಮಾಲಯದ ನಡುವೆ ನೆಲೆಸಿರುವ ಶಿವನಿಗೆ ಸಮರ್ಪಿತವಾದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥಕ್ಕೆ ತಂಡವು ಭೇಟಿ ನೀಡಿತು. ಬಳಿಕ ಬದರಿನಾಥದಲ್ಲಿ ಪ್ರಾರ್ಥನೆ ಸಲ್ಲಿಸಿ, ಋಷಿಕೇಶಕ್ಕೆ ಭೇಟಿ ನೀಡಿದರು.

    ಈ ಯಾತ್ರೆಯ ಬಗ್ಗೆ ಮಾತನಾಡಿರುವ ವಿಷ್ಣು ಮಂಚು, “ಕಣ್ಣಪ್ಪ ಸಿನಿಮಾ ಬಿಡುಗಡೆಗೂ ಮುನ್ನ ಎಲ್ಲ 12 ಜ್ಯೋತಿರ್ಲಿಂಗ ಪುಣ್ಯ ಕ್ಷೇತ್ರಗಳಿಗೆ ತೆರಳುವುದು ನಮ್ಮ ಗುರಿ. ಅದರಂತೆ ಮೊದಲಿಗೆ  ಕೇದಾರನಾಥನ ದರ್ಶನ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನುಳಿದ 10 ಜ್ಯೋತಿರ್ಲಿಂಗಗಳನ್ನು ದರ್ಶನ ಮಾಡಲಿದ್ದೇವೆ. ಅದೇ ರೀತಿ ಶೀಘ್ರದಲ್ಲಿಯೇ ಈ ನಮ್ಮ ಸಿನಿಮಾ ರಿಲೀಸ್‌ ಆಗಲಿದೆ. ದಿ ಲಾರ್ಡ್ ಆಫ್ ದಿ ರಿಂಗ್ಸ್‌ನಂತಹ ಮಹಾಕಾವ್ಯ ಕಥೆಗಳಿಂದ ಸ್ಫೂರ್ತಿ ಪಡೆದ ಈ ಸಿನಿಮಾ, ದೃಶ್ಯವೈಭವದ ಮೂಲಕವೇ ಎಲ್ಲರನ್ನು ಬೆರಗುಗೊಳಿಸುತ್ತದೆ. ಹೆಸರಾಂತ ಹಾಲಿವುಡ್ ಛಾಯಾಗ್ರಾಹಕ ಶೆಲ್ಡನ್ ಚೌ ಅವರು ನ್ಯೂಜಿಲೆಂಡ್‌ನ ರಮಣೀಯ ಪ್ರದೇಶಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

     

    ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

  • ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale Fims) ಇದೀಗ ಸಲಾರ್‌ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.

    ಈ ಹಿಂದೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by Hombale Films (@hombalefilms)

    ರೆಬಲ್ ಸ್ಟಾರ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾದ ಸಾರವನ್ನು ಸಂಭ್ರಮಿಸುವ ಹಾಗೂ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಕೈಜೋಡಿಸುವಿಕೆ ಅತ್ಯಂತ ಮಹತ್ವದ್ದಾಗಲಿದೆ. ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ಸಿನಿಮಾ ಅನುಭವವನ್ನು ಕೊಡುವುದು ನಮ್ಮ ಘೋಷಣೆಯಾಗಿದೆ. ವೇದಿಕೆ ಸಜ್ಜಾಗಿದೆ, ಮುಂದಿನ ಹಾದಿ ಮಿತಿಯಿಲ್ಲದ್ದಾಗಿದೆ. ‘ಸಲಾರ್ 2’ (Salaar 2) ಸಿನಿಮಾದ ಜೊತೆಗೆ ನಮ್ಮ ಈ ಪಯಣ ಪ್ರಾರಂಭ ಆಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಗುಡ್ ನ್ಯೂಸ್ ಹಂಚಿಕೊಂಡಿದೆ.

  • ಹೊಸ ಗೆಟಪ್‌ನಲ್ಲಿ ಪ್ರಭಾಸ್- ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್

    ಹೊಸ ಗೆಟಪ್‌ನಲ್ಲಿ ಪ್ರಭಾಸ್- ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್

    ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರದ ಸಕ್ಸಸ್ ನಂತರ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೂಲಕ ಪ್ರಭಾಸ್ ಗಮನ ಸೆಳೆಯುತ್ತಿದ್ದಾರೆ. ಇಂದು (ಅ.23) ನಟನ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಪ್ರಭಾಸ್ ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.

    ಪ್ರಭಾಸ್ ಹುಟ್ಟುಹಬ್ಬದ ದಿನವೇ ಮುಂದಿನ ಸಿನಿಮಾದ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಸಿಗಾರ್ ಬಾಯಲ್ಲಿ ಇಟ್ಟುಕೊಂಡು ರಾಯಲ್ ಆಗಿ ಪ್ರಭಾಸ್ ಪೋಸ್ ಕೊಟ್ಟಿದ್ದಾರೆ. ನಟನ ಖಡಕ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ನಟಿ ಮಾನಸ ಮನೋಹರ್‌

     

    View this post on Instagram

     

    A post shared by Prabhas (@actorprabhas)

    ಇನ್ನೂ ಇತ್ತೀಚೆಗೆ ‘ದಿ ರಾಜಾ ಸಾಬ್’ ಸಿನಿಮಾ ಮೊದಲ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಅದರಲ್ಲಿ ಪ್ರಭಾಸ್ ಲವರ್ ಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ಬಿಟ್ಟಿರುವ ಪೋಸ್ಟರ್‌ನಲ್ಲಿ ನಟ ಖಡಕ್ ಆಗಿ ಕಾಣಿಸಿಕೊಂಡಿರೋದು ಫ್ಯಾನ್ಸ್‌ಗೆ ಚಿತ್ರದ ಕುರಿತು ಕುತೂಹಲ ಮೂಡಿಸಿದೆ.

    ಇನ್ನೂ ಈ ಚಿತ್ರದಲ್ಲಿ ಪ್ರಭಾಸ್ ಜೊತೆ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿದ್ಧಿ ಕುಮಾರ್ ನಟಿಸಿದ್ದಾರೆ. ಸಂಜಯ್ ದತ್, ಅನುಪಮ್ ಖೇರ್, ವರಲಕ್ಷ್ಮಿ ಶರತ್‌ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರಕ್ಕೆ ಮಾರುತಿ ನಿರ್ದೇಶನ ಮಾಡಿದ್ದಾರೆ.

  • ಪ್ರಭಾಸ್ ನಟನೆಯ ‘ಸ್ಪಿರಿಟ್’ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ಪ್ರಭಾಸ್ ನಟನೆಯ ‘ಸ್ಪಿರಿಟ್’ ಬಗ್ಗೆ ಹೊರಬಿತ್ತು ಇಂಟರೆಸ್ಟಿಂಗ್ ಅಪ್‌ಡೇಟ್

    ಸಾಲು ಸಾಲು ಸಿನಿಮಾಗಳ ಸೋಲಿನಿಂದ ತತ್ತರಿಸಿದ್ದ ಪ್ರಭಾಸ್‌ಗೆ (Prabhas) ‘ಕಲ್ಕಿ 2898 ಎಡಿ’ ಚಿತ್ರದ ಯಶಸ್ಸಿನಿಂದ ವೃತ್ತಿರಂಗದಲ್ಲಿ ಟರ್ನಿಂಗ್ ಪಾಯಿಂಟ್ ಸಿಕ್ಕಿದೆ. ಸದ್ಯ ಸಂದೀಪ್ ರೆಡ್ಡಿ ವಂಗಾ ಜೊತೆ ‘ಸ್ಪಿರಿಟ್’ (Spirit) ಸಿನಿಮಾ ಮಾಡಲು ಪ್ರಭಾಸ್ ಸಜ್ಜಾಗಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಅಚ್ಚರಿಪಡುವಂತಹ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ.

    ಸ್ಟಾರ್ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಹೊಸ ಸಿನಿಮಾದಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ. ತೆರೆಮರೆಯಲ್ಲಿ ಚಿತ್ರದ ತಯಾರಿ ನಡೆಯುತ್ತಿದೆ. ಕಲಾವಿದರ ಆಯ್ಕೆ ಕೂಡ ನಡೆಯುತ್ತಿದೆ. ಇನ್ನೂ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ, ರಣಬೀರ್ ಕಪೂರ್ ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಈಗಾಗಲೇ ಬ್ಯಾಕ್ ಟು ಬ್ಯಾಕ್ 3 ಹಿಟ್ ಸಿನಿಮಾಗಳನ್ನು ಸಂದೀಪ್ ನೀಡಿದ್ದಾರೆ. ಅರ್ಜುನ್ ರೆಡ್ಡಿ, ಅನಿಮಲ್, ಕಬೀರ್ ಸಿಂಗ್ ಚಿತ್ರಗಳು ಯಶಸ್ಸು ಕಂಡಿದೆ. ಅದರಲ್ಲಿ ಅರ್ಜುನ್ ರೆಡ್ಡಿ ನಟ ವಿಜಯ್, ಅನಿಮಲ್ ಹೀರೋ ರಣಬೀರ್ ಕಪೂರ್‌ಗೆ ‘ಸ್ಪಿರಿಟ್’ ಚಿತ್ರದಲ್ಲಿ ನಟಿಸಲು ಸಂದೀಪ್‌ ಅಪ್ರೋಚ್‌ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರದ್ದು ಸಣ್ಣ ಅತಿಥಿಯ ಪಾತ್ರ ಆಗಿರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಕಾದುನೋಡಬೇಕಿದೆ.

    ಇನ್ನೂ ದಿ ರಾಜ ಸಾಬ್, ಸಲಾರ್‌ 2, ಹನು ರಾಘವಪುಡಿ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಪ್ರಭಾಸ್ ಕೈಯಲ್ಲಿವೆ.

  • ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ’ (Bahubali) ಪಾರ್ಟ್‌ 1 ಮತ್ತು 2ರ ಮೂಲಕ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಪ್ರಭಾಸ್ ಮತ್ತು ರಾಜಮೌಳಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ‘ಬಾಹುಬಲಿ 3’ ಕುರಿತು ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಇದನ್ನೂ ಓದಿ:ಖಡಕ್ ಲುಕ್‌ನಲ್ಲಿ ಬಂದ ಪುಷ್ಪರಾಜ್- ‘ಪುಷ್ಪ 2’ ಪೋಸ್ಟರ್ ಔಟ್

    ಇತ್ತೀಚೆಗೆ ‘ಕಂಗುವ’ (Kanguva) ಚಿತ್ರದ ನಿರ್ಮಾಪಕ ಕೆ.ಇ ಜ್ಞಾನವೇಲ್ ರಾಜ ಸಂದರ್ಶನವೊಂದರಲ್ಲಿ ಮಾತನಾಡಿ, ‘ಬಾಹುಬಲಿ 3’ (Bahubali 3) ಚಿತ್ರ ಮಾಡುವ ಕುರಿತು ಪ್ಲ್ಯಾನ್ ನಡೆಯುತ್ತಿದೆ ಎಂದಿದ್ದಾರೆ. ಬಾಹುಬಲಿ 1 ಮತ್ತು 2 ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿದರು. ಈಗ ಗ್ಯಾಪ್ ನಂತರ ಬಾಹುಬಲಿ ಪಾರ್ಟ್ 3ಗಾಗಿ ಪ್ಲ್ಯಾನಿಂಗ್ ನಡೆಯುತ್ತಿದೆ ಎಂದಿದ್ದಾರೆ.

    ‘ಬಾಹುಬಲಿ 3’ ಮಾಡುವ ಕುರಿತು ರಾಜಮೌಳಿ (Rajamouli) ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಬಾಹುಬಲಿ 3’ಗಾಗಿ ಪ್ರಭಾಸ್ (Prabhas) ಮತ್ತು ರಾಜಮೌಳಿ ಜೊತೆಯಾಗಿ ಮತ್ತೆ ಕೆಲಸ ಮಾಡುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದಿದೆ.

    ಇನ್ನೂ ರಾಜಮೌಳಿ ಸದ್ಯ ಮಹೇಶ್ ಬಾಬು ಜೊತೆಗಿನ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಪ್ರಭಾಸ್ ಅವರು ‘ಕಣ್ಣಪ್ಪ’ ಮತ್ತು ‘ದಿ ರಾಜ ಸಾಬ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಬಾಹುಬಲಿ ಸೀಕ್ವೆಲ್ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಗುತ್ತಾ? ಎಂಬುದನ್ನು ಕಾದುನೋಡಬೇಕಿದೆ.

  • ಪ್ರಭಾಸ್ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಲು ಸೈಫ್ ಅಲಿ ಖಾನ್ ದಂಪತಿಗೆ ಆಫರ್

    ಪ್ರಭಾಸ್ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಲು ಸೈಫ್ ಅಲಿ ಖಾನ್ ದಂಪತಿಗೆ ಆಫರ್

    ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಈಗಾಗಲೇ ಜ್ಯೂ.ಎನ್‌ಟಿಆರ್‌ಗೆ ವಿಲನ್ ಆಗಿ ನಟಿಸಿದ್ದಾರೆ. ಈ ಬೆನ್ನಲ್ಲೇ ಪ್ರಭಾಸ್ ಮುಂದೆ ವಿಲನ್ ಆಗಿ ಅಬ್ಬರಿಸಲು ಸೈಫ್ ಮತ್ತು ಕರೀನಾ ಕಪೂರ್ (Kareena Kapoor) ದಂಪತಿಗೆ ಆಫರ್ ನೀಡಲಾಗಿದೆ ಎಂಬ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ‘ದೇವರ’ (Devara) ಸಿನಿಮಾ ರಿಲೀಸ್‌ಗೂ ಮುನ್ನ ಸೌತ್‌ನ ಮತ್ತೊಬ್ಬ ಸೂಪರ್ ಸ್ಟಾರ್ ಪ್ರಭಾಸ್ (Prabhas) ಚಿತ್ರದಲ್ಲಿ ನಟಿಸಲು ಬುಲಾವ್ ಬಂದಿದೆ. ಸೈಫ್ ಮಾತ್ರವಲ್ಲ ಕರೀನಾ ಕಪೂರ್ ಕೂಡ ಸಿನಿಮಾದಲ್ಲಿ ನಟಿಸಲು ಕೇಳಲಾಗಿದೆಯಂತೆ. ಸೈಫ್ ಮತ್ತು ಕರೀನಾ ಇಬ್ಬರೂ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದಲ್ಲಿ ವಿಲನ್ ನಟಿಸ್ತಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ.

    ಚಿತ್ರತಂಡ ಸೈಫ್ ದಂಪತಿಯನ್ನು ಭೇಟಿ ಮಾಡಿ ಕಥೆ ಹೇಳಿದ್ದಾರೆ ಎನ್ನಲಾಗಿದೆ. ಅವರು ಕೂಡ ನಟಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ ಇದರ ಬಗ್ಗೆ ಅಧಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡ ಈ ಕುರಿತು ಘೋಷಣೆ ಮಾಡುವವರೆಗೂ ಕಾದುನೋಡಬೇಕಿದೆ.ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ- ತಂದೆಯಾದ ಖುಷಿಯಲ್ಲಿ ಚಂದನ್

    ಇನ್ನೂ ಕರೀನಾ ಕಪೂರ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 25 ವರ್ಷಗಳಾಗಿವೆ. ಹೊಸ ಬಗೆಯ ಪಾತ್ರ ಮಾಡೋಕೆ ನಟಿ ನಿರ್ಧರಿಸಿದ್ದಾರೆ. ‘ಕ್ರಿವ್’ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹಲವು ಸಿನಿಮಾಗಳ ಆಫರ್‌ಗಳು ಅವರನ್ನು ಅರಸಿ ಬರುತ್ತಿವೆ. ಇದರ ಸ್ಪಿರಿಟ್‌ ಸಿನಿಮಾದ ಲೇಟೆಸ್ಟ್‌ ಅಪ್‌ಡೇಟ್‌ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ‘ಕಲ್ಕಿ’ (Kalki 2898 AD) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಪ್ರಭಾಸ್ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರ ನಡುವೆ ಪ್ರಭಾಸ್ (Prabhas) ಮುಂಬರುವ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಪ್ರಭಾಸ್‌ಗೆ ವಿಲನ್ ಆಗಿ ನಟಿ ತ್ರಿಷಾ ಕಾಣಿಸಿಕೊಳ್ಳಲಿದ್ದಾರೆ.

    ತ್ರಿಷಾಗೆ (Trisha) ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ನಟಿ ಆಯ್ಕೆ ಮಾಡಿಕೊಳ್ತಿದ್ದಾರೆ. ‘ಸ್ಪಿರಿಟ್’ (Spirit) ಸಿನಿಮಾದಲ್ಲಿ ಪ್ರಭಾಸ್ ಡಬಲ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಹೀರೋ ಮತ್ತು ವಿಲನ್ ಎರಡು ಪಾತ್ರಕ್ಕೆ ಪ್ರಭಾಸ್ ಜೀವ ತುಂಬಲಿದ್ದಾರೆ. ಇದನ್ನೂ ಓದಿ:‘ಸ್ತ್ರೀ 2’ ಚಿತ್ರದಿಂದ ಗೆಲುವಿನ ಟ್ರ್ಯಾಕ್‌ಗೆ ಮರಳಿದ ಶ್ರದ್ಧಾ ಕಪೂರ್

    ವಿಲನ್ ಪ್ರಭಾಸ್ ಪಾತ್ರಕ್ಕೆ ತ್ರಿಷಾ ಜೋಡಿಯಾಗ್ತಿದ್ದಾರಂತೆ. ಅವರು ಕೂಡ ಲೇಡಿ ವಿಲನ್ ಆಗಿ ಮಿಂಚಲಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಈ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಇದನ್ನೂ ಓದಿ:ಜೀವಂತ ಇದ್ದಾಗಲೇ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್- ಮೌನ ಮುರಿದ ನಟ

    ಇನ್ನೂ ತ್ರಿಷಾರನ್ನು ಈಗಾಗಲೇ ‘ಅನಿಮಲ್’ (Animal) ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿಯಾಗಿ ಸಿನಿಮಾದ ಕಥೆ ಹೇಳಿದ್ದಾರೆ. ಸಿನಿಮಾ ಕುರಿತು ಮಾತುಕತೆಯಾಗಿದ್ದು, ಸದ್ಯದಲ್ಲೇ ಚಿತ್ರತಂಡ ಈ ಕುರಿತು ಘೋಷಣೆ ಮಾಡಬೇಕಿದೆ. ಸದ್ಯ ‘ಸ್ಪಿರಿಟ್’ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ.

    ಪ್ರಭಾಸ್ ಮತ್ತು ತ್ರಿಷಾ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. `ದಿ ರಾಜಾ ಸಾಬ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಜೊತೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಪ್ರಭಾಸ್. ಸದ್ಯ ಈ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ರೀಲ್ಸ್ ರಾಣಿ ಈಗ ಪ್ರಭಾಸ್‌ಗೆ ನಾಯಕಿ

    ರೀಲ್ಸ್ ರಾಣಿ ಈಗ ಪ್ರಭಾಸ್‌ಗೆ ನಾಯಕಿ

    ‘ಕಲ್ಕಿ’ ಸಿನಿಮಾದ ಸಕ್ಸಸ್ ನಂತರ ‘ಸೀತಾರಾಮಂ’ (Seetharamam) ಡೈರೆಕ್ಟರ್ ಹನು ರಾಘವಪುಡಿ ಜೊತೆ ಪ್ರಭಾಸ್ (Prabhas) ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ನಾಯಕಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಆಗಿರುವ ಇಮಾನ್ ಅವರು ಪ್ರಭಾಸ್‌ಗೆ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ.

     

    View this post on Instagram

     

    A post shared by Imanvi (@iman1013)

    ಹೈದರಾಬಾದ್ ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಈ ವೇಳೆ, ಇಮಾನ್ವಿ (Imanvi) ಎಂದೇ ಫೇಮಸ್ ಆಗಿರುವ ರೀಲ್ಸ್ ರಾಣಿ ಕೂಡ ಭಾಗಿಯಾಗಿದ್ದರು. ಇದು ಅನೇಕರ ಗಮನ ಸೆಳೆದಿದೆ. ರೀಲ್ಸ್ ರಾಣಿ ಇಮಾನ್ವಿ ಮೊದಲ ಸಿನಿಮಾನೇ ಪ್ರಭಾಸ್ ಜೊತೆ ನಟಿಸುತ್ತಿರುವ ಬಗ್ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಈಕೆಯ ಹಿನ್ನೆಲೆ ಬಗ್ಗೆಯೂ ಆಸಕ್ತಿ ತೋರಿಸುತ್ತಿದ್ದಾರೆ.

     

    View this post on Instagram

     

    A post shared by Imanvi (@iman1013)

    ಇನ್ನೂ ಇನ್ಸ್ಟಾಗ್ರಾಂನಲ್ಲಿ 70 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ನಟಿ, ತನ್ನ ಡ್ಯಾನ್ಸ್ ವಿಡಿಯೋಗಳಿಂದ ಸದಾ ಗಮನ ಸೆಳೆಯುತ್ತಾರೆ. ಆಕೆಯ ಡ್ಯಾನ್ಸ್ ಮೂವ್ಸ್‌ಗೆ ಮರುಳಾಗದವರಿಲ್ಲ. ಕೆಲ ಸಣ್ಣ ಪುಟ್ಟ ಚಿತ್ರಗಳಲ್ಲಿ ನಟಿಸಿರುವ ಇಮಾನ್ವಿ ಹೆಚ್ಚು ಡ್ಯಾನ್ಸರ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಚಿರಪರಿಚಿತ. ದೆಹಲಿ ಮೂಲದ ಈ ಚೆಲುವೆ ಯೂಟ್ಯೂಬ್ ಚಾನೆಲ್‌ನಲ್ಲಿ 1.81 ಮಿಲಿಯನ್ ಸಬ್‌ಸ್ಕೈಬರ್ ಹೊಂದಿದ್ದಾರೆ. ಇನ್ನೂ ತಂದೆಯ ಪ್ರೋತ್ಸಾಹದೊಂದಿಗೆ ಕೆಲಸ ಬಿಟ್ಟು ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಈಗ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

    ಅಂದಹಾಗೆ, ಪ್ರಭುತ್ವಕ್ಕಾಗಿ ಯುದ್ಧ ನಡೆದಾಗ ಒಬ್ಬ ಯೋಧ ಯಾವುದಕ್ಕಾಗಿ ತಾವು ಹೋರಾಡಬೇಕು ಎಂಬ ಎಂಬರ್ಥದ ಶೀರ್ಷಿಕೆಯೊಂದಿಗೆ ಈ ಪೋಸ್ಟ್ ಅನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಹಂಚಿಕೊಂಡಿದೆ. 1940ರ ದಶಕದ ಕಥೆಯನ್ನು ಆಧರಿಸಿರುವ ಐತಿಹಾಸಿಕ ಕಾಲ್ಪನಿಕ ಚಿತ್ರ ಇದು ಎನ್ನಲಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ.

  • ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ತೆಲುಗು ನಟ ಪ್ರಭಾಸ್ (Prabhas) ಇದೀಗ ‘ಸಲಾರ್’ ನಿರ್ದೇಶಕ ಪ್ರಶಾಂತ್ ನೀಲ್‌ರನ್ನು ಹಾಡಿ ಹೊಗಳಿದ್ದಾರೆ. ನೀವು ಹೀರೋನೇ ಎಂದು ನಿರ್ದೇಶಕ ಪ್ರಶಾಂತ್ ನೀಲ್‌ ಸ್ಟೈಲೀಶ್‌ ಲುಕ್‌ಗೆ (Prashanth Neel) ಪ್ರಭಾಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ

    ಹೈದರಾಬಾದ್‌ನಲ್ಲಿ ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದ ಮುಹೂರ್ತ ನಡೆದಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪ್ರಶಾಂತ್ ನೀಲ್‌ ಕೂಡ ಭಾಗಿಯಾಗಿದ್ದರು. ಈ ವೇಳೆ, ಬ್ಲ್ಯಾಕ್ ಔಟ್ ಫಿಟ್‌ನಲ್ಲಿ ಸ್ಟೈಲೀಶ್‌ ಆಗಿ ಎಂಟ್ರಿ ಕೊಟ್ಟ ನಿರ್ದೇಶಕನನ್ನು ನೋಡಿ ಆ ಕ್ಷಣವೇ ‘ಲುಕ್ ಲೈಕ್ ಹೀರೋ’ ಅಂತ ಪ್ರಭಾಸ್ ಮೆಚ್ಚುಗೆ ಸೂಚಿಸಿದ್ದರು. ಆಗ ನಗು ನಗುತ್ತಲೇ ನಟನನ್ನು ಪ್ರಶಾಂತ್ ನೀಲ್ ತಬ್ಬಿಕೊಂಡರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಇಬ್ಬರ ಸ್ನೇಹ ಕಂಡು ಫ್ಯಾನ್ಸ್‌ ಖುಷಿಪಟ್ಟಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಅಂದಹಾಗೆ, ಇಂದಿಗೂ ಇಬ್ಬರ ಒಡನಾಟ ಚೆನ್ನಾಗಿದೆ ಎಂಬುದಕ್ಕೆ ಈ ಸಂದರ್ಭ ಸಾಕ್ಷಿಯಾಗಿದೆ. ಈ ಹಿಂದೆ ಇಬ್ಬರ ಬಾಂಧವ್ಯ ಚೆನ್ನಾಗಿಲ್ಲ. ‘ಸಲಾರ್ 2’ (Salaar 2)  ಸೆಟ್ಟೇರಲ್ಲ ಎಂದೆಲ್ಲಾ ಕಿಡಿಗೇಡಿಗಳು ಸುದ್ದಿ ಹಬ್ಬಿಸಿದ್ದರು. ಅದಕ್ಕೆ, ಪ್ರಶಾಂತ್ ನೀಲ್ ಪತ್ನಿ ಪರೋಕ್ಷವಾಗಿ ಟೀಕೆಗಳಿಗೆ ಉತ್ತರ ಕೊಟ್ಟಿದ್ದರು. ಈಗ ಮತ್ತೊಮ್ಮೆ ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾಗಿರೋದು ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತಕ್ಕ ಉತ್ತರ ಸಿಕ್ಕಿದೆ.

    ಪ್ರಭಾಸ್ ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿದ ಬಳಿಕ ‘ಸಲಾರ್ 2’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಇನ್ನೂ ಕಳೆದ ವಾರ ‘ಕೆಜಿಎಫ್ 2’ (KGF 2) ನಿರ್ದೇಶಕನ ಜೊತೆಗಿನ ಜ್ಯೂ.ಎನ್‌ಟಿಆರ್ ಹೊಸ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಸೆಪ್ಟೆಂಬರ್‌ನಿಂದ ಶೂಟಿಂಗ್ ಆರಂಭವಾಗಲಿದೆ. ಈ ಸಿನಿಮಾದ ಬಳಿಕ ಪ್ರಭಾಸ್ ಜೊತೆ ಪ್ರಶಾಂತ್ ನೀಲ್ ಕೈಜೋಡಿಸಲಿದ್ದಾರೆ.