ನಟ, ನಿರ್ದೇಶಕ ಪ್ರಭುದೇವ್ (Prabhudev) ಮತ್ತು ಬಾಲಿವುಡ್ ನಟಿ ಕಾಜೋಲ್ (Kajol) ಬರೋಬ್ಬರಿ 27 ವರ್ಷಗಳ ನಂತರ ಜೊತೆಯಾಗಿ ನಟಿಸಿದ್ದಾರೆ. ಎರಡುವರೆ ದಶಕಗಳ ಹಿಂದೆ ತೆರೆಕಂಡ ‘ಮಿನ್ಸರ್ ಕನವು’ ಸಿನಿಮಾದಲ್ಲಿ ಈ ಜೋಡಿ ಒಂದಾಗಿ ನಟಿಸಿತ್ತು. ಆನಂತರ ಜೊತೆಯಾಗಿ ಕಾಣಿಸಿಕೊಳ್ಳುವಂಥ ಅವಕಾಶವೇ ಸಿಕ್ಕಿರಲಿಲ್ಲ.
ಮಿನ್ಸರ್ ಕನವು ಸಿನಿಮಾದಲ್ಲಿ ಪ್ರೇಮಿಗಳಾಗಿ ಈ ಜೋಡಿ ಕಾಣಿಸಿಕೊಂಡಿತ್ತು. ಅದರಲ್ಲೂ ಈ ಸಿನಿಮಾದ ವೆನ್ನಿಲ್ಲವೇ ವಿನ್ನಿಲ್ಲವೇ ಸೂಪರ್ ಹಿಟ್ ಗೀತೆ. ರೆಹಮಾನ್ ಸಂಗೀತ ಸಂಯೋಜನೆಯ ಈ ಹಾಡು ಪ್ರೇಮಿಗಳ ಮನಸ್ಸು ಕದ್ದಿತ್ತು. ಈ ಬಾರಿ ಕಾಜೋಲ್ ಮತ್ತು ಪ್ರಭುದೇವ್ ಡ್ಯುಯೆಟ್ ಹಾಡುತ್ತಿಲ್ಲ. ಥ್ರಿಲ್ಲರ್ ಸಿನಿಮಾಗಾಗಿ ಒಂದಾಗಿದ್ದಾರೆ.
ತೆಲುಗಿನ ನಿರ್ದೇಶಕ ಚರಣ್ ತೇಜ್ ಉಪ್ಪಲಪಟ್ಟಿ ಇದೀಗ ಬಾಲಿವುಡ್ ಗೆ ಹಾರಿದ್ದಾರೆ. ಹಿಂದಿಯಲ್ಲಿ ಅವರು ಮಹಾರಾಗ್ನಿ (Maharagni) ಹೆಸರಿನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲೇ ಪ್ರಭುದೇವ್ ಮತ್ತು ಕಾಜೋಲ್ ಜೊತೆಯಾಗಿ ಸ್ಕ್ರೀನ್ ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದ ಟೀಸರ್ ಈಗಾಗಲೇ ರಿಲೀಸ್ ಆಗಿದೆ.
ಖ್ಯಾತ ನೃತ್ಯ ನಿರ್ದೇಶಕ, ನಟ ಪ್ರಭುದೇವ್ ಮತ್ತು ಖ್ಯಾತ ನಟ ದಳಪತಿ ವಿಜಯ್ (Vijay) ಕಾಂಬಿನೇಷನ್ ನ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಸಿನಿಮಾದ ಹಾಡೊಂದು ರಿಲೀಸ್ ಆಗಿದ್ದು, ಈ ಜೋಡಿ ಸಖತ್ ಸ್ಟೆಪ್ ಹಾಕಿದೆ. ವಿಸಿಲ್ ಪೋಡು (Visil Podu) ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಪೈಪೋಟಿಗೆ ಬಿದ್ದವರಂತೆ ನಟರು ನೃತ್ಯ ಮಾಡಿದ್ದಾರೆ.
ಈ ನಡುವೆ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ (The greatest of all time) ಸಿನಿಮಾ ಟೀಮ್ ನಿಂದ ಮಹತ್ವದ ವಿಷಯವೊಂದು ಆಚೆ ಬಂದಿದೆ. ಈ ಸಿನಿಮಾವನ್ನು ಸೆಪ್ಟೆಂಬರ್ 5ರಂದು ಬಿಡುಗಡೆ ಮಾಡುವುದಾಗಿ ತಿಳಿದು ಬಂದಿದೆ. ಎಲ್ಲ ಸಿನಿಮಾಗಳನ್ನು ಮುಗಿಸಿ, ತಮಿಳು ನಾಡು ಚುನಾವಣೆ ವಿಜಯ್ ಸಿದ್ಧರಾಗಬೇಕಾಗಿದ್ದರಿಂದ ಸಿನಿಮಾ ಸಂಬಂಧಿ ಬಹುತೇಕ ಕೆಲಸವನ್ನು ಮುಗಿಸುತ್ತಿದ್ದಾರಂತೆ ನಟ.
ಈ ಸಿನಿಮಾದ ಶೂಟಿಂಗ್ ಗಾಗಿ ಮೊನ್ನೆಯಷ್ಟೇ ವಿಜಯ್ ಕೇರಳಕ್ಕೆ ಬಂದಿದ್ದು, ತಮಿಳಿಗಿಂತಲೂ ಕೇರಳದಲ್ಲಿ ವಿಜಯ್ ಅವರಿಗೆ ಹೆಚ್ಚು ಅಭಿಮಾನಿಗಳು ಇದ್ದಾರೆ. ವಿಜಯ್ ಸಿನಿಮಾ ರಿಲೀಸ್ ಆದಾಗೆಲ್ಲ ಕೇರಳಾದ್ಯಂತ ವಿಜಯ್ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಆದರೂ, 14 ವರ್ಷಗಳ ಕಾಲ ಅವರು ಕೇರಳಕ್ಕೆ ಕಾಲಿಟ್ಟಿರಲಿಲ್ಲ. ಈ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಬಂದಿದ್ದರು.
ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿತ್ತು.
ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಮುಹೂರ್ತ ಕಾರ್ಯಕ್ರಮದಲ್ಲಿಯೂ ಅವರೆಲ್ಲ ಭಾಗಿಯಾಗಿದ್ದರು.
ಕರನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಕರಟಕ ದಮನಕ’ ಚಿತ್ರದ ಎರಡನೇ ಗೀತೆ ಡೀಗ ಡಿಗರಿ ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಸಹಸ್ರಾರು ಕನ್ನಡಿಗರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಹಾಡು ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.
ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ಅವರನ್ನು ಕರಟಕ ದಮನಕ ಎನ್ನುತ್ತಾರೆ. ಅಬುದಾಬಿಯಲ್ಲಿ ನಮ್ಮ ಚಿತ್ರಕ್ಕಾಗಿ ನಾನೇ ಬರೆದಿರುವ ಎರಡನೇ ಹಾಡು ಡೀಗ ಡಿಗರಿ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ಇದು ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಚಿತ್ರ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ ಎಂದರು ನಿರ್ದೇಶಕ ಯೋಗರಾಜ್ ಭಟ್.
ಎಲ್ಲರಿಗೂ ಒಂದು ಊರು ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಇನ್ನು ಪ್ರಭುದೇವ ಅವರ ಜೊತೆ ಮೊದಲ ಬಾರಿ ನಟಿಸಿರುವುದು ಖುಷಿಯಾಗಿದೆ ಎಂದು ಶಿವರಾಜಕುಮಾರ್ ತಿಳಿಸಿದರು.
ಚಿತ್ರ ಹಾಗೂ ಹಾಡುಗಳು ಚೆನ್ನಾಗಿದೆ. ಶಿವರಾಜಕುಮಾರ್ ಅವರೊಟ್ಟಿಗೆ ನಟಿಸಿರುವುದು ತುಂಬಾ ಸಂತೋಷ ತಂದಿದೆ. ರಾಕ್ ಲೈನ್ ವೆಂಕಟೇಶ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಯೋಗರಾಜ್ ಭಟ್ ಅವರ ನಿರ್ದೇಶನ ಕೂಡ ಉತ್ತಮವಾಗಿದೆ ಎಂದು ಪ್ರಭುದೇವ ತಿಳಿಸಿದರು. ಚಿತ್ರತಂಡದ ಸಹಕಾರದಿಂದ ಕರಟಕ ದಮನಕ ಚೆನ್ನಾಗಿ ಬಂದಿದೆ. ಶಿವರಾತ್ರಿ ಹಬ್ಬಕ್ಕೆ ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.
ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಡೀಗ ಡಿಗರಿ ಹಾಡಿಗೆ ಶಿವರಾಜಕುಮಾರ್ ಹಾಗೂ ಪ್ರಭುದೇವ ಅವರು ಒಟ್ಟಿಗೆ ಹೆಜ್ಜೆ ಹಾಕಿದರು.
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಕರಟಕ ದಮನಕ ಚಿತ್ರದ ‘ಡೀಗ ಡಿಗರಿ’ (Deega Digari) ಹಾಡಿನ ಬಿಡುಗಡೆ ಅಬುದಾಬಿಯಲ್ಲಿ ನಡೆಯಲಿದೆ. ಹಾಡು ಬಿಡುಗಡೆಗೂ ಮುನ್ನ ಚಿತ್ರತಂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಲಿದೆ. ಶಿವರಾಜಕುಮಾರ್, ಪ್ರಭುದೇವ, ರಾಕ್ ಲೈನ್ ವೆಂಕಟೇಶ್, ಯೋಗರಾಜ್ ಭಟ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಭಾಗವಹಿಸುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕರಟಕ ದಮನಕ (Karataka Damanaka) ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ (Release)ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಶಿವರಾತ್ರಿಗೆ ಶಿವಣ್ಣನ ಚಿತ್ರದ ಅಬ್ಬರ ಕೇಳಿ ಬರಲಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಈ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.
ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದರು.
ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸಿದ್ದು ವಿಶೇಷ.
ಸಂದೇಶ್ ಪ್ರೊಡಕ್ಷನ್ (Sandesh Nagaraj) ನಿರ್ಮಾಣದ 30ನೇ ಚಿತ್ರವಾದ ಮತ್ತು ತಮಿಳು, ಕನ್ನಡ, ಹಿಂದಿ, ತೆಲುಗು ಭಾಷೆಯಲ್ಲಿ ತಯಾರಾಗಿರುವ ‘ವುಲ್ಫ್’ (Wolf) ಚಿತ್ರದ ಟೀಸರ್ (Teaser) ರಿಲೀಸ್ ಆಗಿದೆ. ಡಾನ್ಸಿಂಗ್ ಸ್ಟಾರ್ ಪ್ರಭುದೇವ (Prabhudev), ಅನುಸೂಯ ಭಾರದ್ವಾಜ್, ಲಕ್ಷ್ಮಿ ರೈ, ವಸಿಷ್ಠ ಸಿಂಹ, ಅಂಜು ಕುರಿಯನ್ ಮುಂತಾದ ಖ್ಯಾತ ತಾರಾ ಬಳಗವನ್ನು ಹೊಂದಿರುವ ಸಿನಿಮಾ ಇದಾಗಿದೆ.
ವುಲ್ಫ್ ಚಿತ್ರ ತಾಂತ್ರಿಕ ಕೆಲಸಗಳನ್ನು ಮುಗಿಸಿ ಇದೀಗ ಮೊದಲ ಹಂತವಾಗಿ ಆಗಸ್ಟ್ 3ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದೆ ಚಿತ್ರತಂಡ. ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ವಿಭಿನ್ನವಾದ ಕಥಾ ಹಂದರವನ್ನು ಮೊದಲ ಬಾರಿಗೆ ಪ್ರೇಕ್ಷಕರ ಮುಂದೆ ಇಡಲು ಚಿತ್ರ ತಂಡ ತಯಾರಾಗಿದೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ
ಇದೇ ತಿಂಗಳು 16 ರಂದು ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ ಜನುಮದಿನ ಅಂದು ತಮಿಳುನಟ ವಿಜಯ ಸೇತುಪತಿ (Vijay Sethupathi) ಹಾಡಿರುವ ಚಿತ್ರದ ಮೊದಲ ಲಿರಿಕಲ್ ವೀಡಿಯೋ ಸಹ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ವಿನು ವೆಂಕಟೇಶ್ ನಿರ್ದೇಶನ ಮಾಡಿದ್ದು, ಖ್ಯಾತ ಛಾಯಾಗ್ರಾಹಕ ಅರುಳ್ ವಿನ್ಸೆಂಟ್ ಛಾಯಾಗ್ರಹಣ, ಖ್ಯಾತ ತಾರೆ ಜಯಸುಧಾ ಅವರ ಪುತ್ರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅಮರೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಪ್ರಸಾದ್ ಬಿ ಏನ್ ಮತ್ತು ಕಾಮರಾಜು ಕಾರ್ಯ ನಿರ್ವಹಿಸಿರುವ ಈ ಚಿತ್ರವನ್ನು ಸಂದೇಶ ನಾಗರಾಜ್ ಅವರು ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ.
ನಟ, ನಿರ್ದೇಶಕ ಪ್ರಭುದೇವ್ (Prabhudev) ನಿನ್ನೆ ತಿರುಪತಿಗೆ ಆಗಮಿಸಿ ತಿಮ್ಮಪ್ಪನ ದರ್ಶನ (Tirupati Thimmappa) ಮಾಡಿದ್ದಾರೆ. ಮೊದಲ ಬಾರಿಗೆ ಮಗಳು ಹಾಗೂ ಪತ್ನಿಯೊಂದಿಗೆ ತಿಮ್ಮಪ್ಪನ ಸನ್ನಿಧಿಗೆ ಆಗಮಿಸಿದ್ದ ಪ್ರಭುದೇವ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ. ಪತ್ನಿ ಹಿಮಾನಿ ಸಿಂಗ್ (Himani Sing) ಮತ್ತು ಪ್ರಭುದೇವ್ ಪುತ್ರಿ ಈ ಸಂದರ್ಭದಲ್ಲಿ ಜೊತೆಯಾಗಿದ್ದರು.
ಮಗಳು ಹುಟ್ಟಿದ ನಂತರ ಪ್ರಭುದೇವ್ ಈವರೆಗೂ ಸಾರ್ವಜನಿಕವಾಗಿ ಮಗಳನ್ನು ತೋರಿಸಿರಲಿಲ್ಲ. ಇದೇ ಮೊದಲ ಬಾರಿಗೆ ಪುತ್ರಿಯು ಕ್ಯಾಮೆರಾಗಳ ಕಣ್ಣಿಗೆ ಬಿದಿದ್ದಾರೆ. ಪ್ರಭುದೇವ್ ತಿರುಪತಿಗೆ ಬಂದ ಸುದ್ದಿ ಕೇಳಿ, ಅನೇಕ ಅಭಿಮಾನಿಗಳು ಕೂಡ ಜಮಾಯಿಸಿದ್ದರು. ನೆಚ್ಚಿನ ನಟನನ್ನು ನೋಡಿ ಕಣ್ತುಂಬಿಕೊಂಡರು. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್
ಪ್ರಭುದೇವ್ ಸದ್ಯ ಕನ್ನಡದಲ್ಲೂ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ಶಿವರಾಜ್ ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಒಂದಷ್ಟು ದಿನ ಪ್ರಭುದೇವ್ ಬೆಂಗಳೂರಿನಲ್ಲೇ ಇದ್ದುಕೊಂಡು ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು.
ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಆ ಸಿನಿಮಾಗೆ ಕರಟಕ ದಮನಕ ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದೆ ಎಂದು ಹೇಳಲಾಗುತ್ತಿದೆ.
ನಿರ್ದೇಶಕ ಯೋಗರಾಜ್ ಭಟ್ ಮೊನ್ನೆಯಷ್ಟೇ ತಮ್ಮ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದರು. ನಾನಾ ಕಾರಣಗಳಿಂದಾಗಿ ಆ ಫಸ್ಟ್ ಲುಕ್ ಪೋಸ್ಟರ್ ಕುತೂಹಲ ಮೂಡಿಸಿತ್ತು. ಭಟ್ಟರ ಡಿಸೈನ್ ಮತ್ತು ಅದರಲ್ಲಿ ಬರೆಯಲಾದ ಅಕ್ಷರಗಳು ಇಂಟ್ರಸ್ಟಿಂಗ್ ಆಗಿದ್ದರಿಂದ ಫಸ್ಟ್ ಲುಕ್ ವೈರಲ್ ಆಗಿದೆ. ಸಿಲೆಬ್ರಿಟಿಗಳು ಸೇರಿದಂತೆ ಅನೇಕರು ಆ ಪೋಸ್ಟರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಕೂಡ ಮಾಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಹೊಸ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ತಮ್ಮ ಹೊಸ ಸಿನಿಮಾಗೆ ತಲೆಯಲ್ಲಿ ಹುಳು ಬಿಡುವಂತಹ ಟೈಟಲ್ ಇಟ್ಟಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.
ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಶೂಟಿಂಗ್ ನಡುವೆಯೇ ಚಿತ್ರಕ್ಕೆ ‘K ಕರಟಕ D ದಮನಕ’ (Karataka Damanaka) ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಮೊದಲ ಬಾರಿಗೆ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದಾರೆ. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಪೋಸ್ಟ್ ಮಾಡಿದ್ದಾರೆ.
ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸುತ್ತಿರುವುದು ವಿಶೇಷ. ಈ ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಹೊಸ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ತಮ್ಮ ಹೊಸ ಸಿನಿಮಾಗೆ ತಲೆಯಲ್ಲಿ ಹುಳು ಬಿಡುವಂತಹ ಟೈಟಲ್ ಇಟ್ಟಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.
ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಶೂಟಿಂಗ್ ನಡುವೆಯೇ ಚಿತ್ರಕ್ಕೆ ‘K ಕರಟಕ D ದಮನಕ’ (Karataka Damanaka) ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಮೊದಲ ಬಾರಿಗೆ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದಾರೆ. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದಾರೆ.
ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸುತ್ತಿರುವುದು ವಿಶೇಷ. ಈ ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ.
ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಸಿನಿಮಾಗಳಿಗೆ ಸಹಿ ಮಾಡಿದ ಹೆಗ್ಗಳಿಕೆ ಶಿವರಾಜ್ ಕುಮಾರ್ (Shivaraj Kumar) ಅವರಿಗೆ ಸಲ್ಲಬೇಕು. ಶಿವಣ್ಣ ಅವರ ಆಪ್ತರೇ ಹೇಳುವಂತೆ ಇನ್ನೂ ಹತ್ತು ವರ್ಷಕ್ಕೆ ಆಗುವಷ್ಟು ಸಿನಿಮಾಗಳು ಅವರ ಕೈಯಲ್ಲಿವೆಯಂತೆ. ತಮಿಳಿನಲ್ಲೇ ಶಿವರಾಜ್ ಕುಮಾರ್ ಇದೀಗ ಎರಡು ಚಿತ್ರಗಳನ್ನು ಮಾಡಿದ್ದಾರೆ. ತೆಲುಗು ಚಿತ್ರೋದ್ಯಮದಿಂದಲೂ ಅವರಿಗೆ ಬೇಡಿಕೆಯಿದೆ. ಈ ನಡುವೆ ಒಟ್ಟು ಏಳು ಮಲ್ಟಿಸ್ಟಾರ್ ಸಿನಿಮಾಗಳಲ್ಲಿ (Multistar Movie) ಶಿವಣ್ಣ ಅಭಿನಯಿಸಲಿದ್ದಾರೆ.
ಅರ್ಜುನ್ ಜನ್ಯ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಿನಿಮಾದಲ್ಲಿ ಉಪೇಂದ್ರ (Upendra) ಮತ್ತು ರಾಜ್ ಬಿ ಶೆಟ್ಟಿ ಜೊತೆ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಈಗಾಗಲೇ ಅದ್ಧೂರಿಯಾಗಿ ಈ ಸಿನಿಮಾದ ಟೈಟಲ್ ಮತ್ತು ಮುಹೂರ್ತ ಕಾರ್ಯಕ್ರಮ ನಡೆದಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ. ಗಾಳಿಪಟ 2, ಪಡ್ಡೆಹುಲಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮೇಶ್ ರೆಡ್ಡಿ ಈ ಸಿನಿಮಾದ ನಿರ್ಮಾಪಕರು.
ತಮಿಳಿನಲ್ಲಿ ಏಕಕಾಲಕ್ಕೆ ಎರಡು ಚಿತ್ರಗಳನ್ನು ಒಪ್ಪಿಕೊಂಡು ಅವುಗಳ ಶೂಟಿಂಗ್ ಕೂಡ ಮುಗಿಸಿದ್ದಾರೆ ಶಿವರಾಜ್ ಕುಮಾರ್. ಜೈಲರ್ ಹೆಸರಿನ ಚಿತ್ರದಲ್ಲಿ ರಜನಿಕಾಂತ್ (Rajinikanth) ನಾಯಕನಾದರೆ, ಮತ್ತೊಂದು ಚಿತ್ರದಲ್ಲಿ ಧನುಷ್ (Dhanush) ಹೀರೋ. ಈ ಇಬ್ಬರೂ ಹೀರೋಗಳ ಜೊತೆ ಶಿವಣ್ಣ ಅಪರೂಪದ ಪಾತ್ರಗಳನ್ನು ಮಾಡಿದ್ದಾರೆ. ಈ ಎರಡೂ ಚಿತ್ರಗಳು ಈಗಾಗಲೇ ನಿರೀಕ್ಷೆ ಮೂಡಿಸಿವೆ. ಇದನ್ನೂ ಓದಿ:ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಬರ್ತ್‌ಡೇಗೆ ಸಿದ್ಧತೆ ಹೇಗಿದೆ ಗೊತ್ತಾ?
ಶಿವರಾಜ್ ಕುಮಾರ್ ಜೊತೆ ಇದೇ ಮೊದಲ ಬಾರಿಗೆ ಗೋಲ್ಡನ್ ಸ್ಟಾರ್ ಗಣೇಶ್ (Ganesh) ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಕೆ.ಎಸ್ ರವಿಕುಮಾರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕೆ ಇನ್ನೂ ಯಾವುದೇ ಶೀರ್ಷಿಕೆ ಇಟ್ಟಿಲ್ಲ. ಸೂರಪ್ಪ ಬಾಬು ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.
ಖ್ಯಾತ ಡಾನ್ಸರ್, ನಿರ್ದೇಶಕ, ನಟ ಪ್ರಭುದೇವ (Prabhudev) ಜೊತೆ ಕೂಡ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಸಿನಿಮಾದ ನಿರ್ಮಾಪಕರು. ಶಿವಣ್ಣ ಹುಟ್ಟು ಹಬ್ಬದ ದಿನದಂದು ಚಿತ್ರದ ಹೆಸರು ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ಶಿವರಾಜ್ ಕುಮಾರ್ ಜೊತೆ ಅಜಯ್ ರಾವ್ (Ajay Rao) ಕೂಡ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ಇಂದು ರಿಲೀಸ್ ಆಗಿದೆ. ಬಾಹುಬಲಿ ಎಸ್.ಕೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಕಿರಣ್ ಎನ್ನುವವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಕೂಡ ಇನ್ನೂ ರಿವೀಲ್ ಆಗಿಲ್ಲ.
ಆರು ದಿನಗಳು ಕಳೆದರೆ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ನೆಚ್ಚಿನ ನಟ, ನಟಿಯ ಮದುವೆಯಲ್ಲಿ ಭಾಗಿಯಾಗಲು ಇಬ್ಬರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಅಭಿಮಾನಿಗಳಿಗೆ ವಸಿಷ್ಠ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಈ ಮೂಲಕ ಮೂರು ಭಾಷೆಗಳಲ್ಲಿ ನಟಿಸಿದ ಕಲಾವಿದ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.
ತಮಿಳಿನ ಖ್ಯಾತ ನಟ ಪ್ರಭುದೇವ (Prabhudev) ನಟನೆಯ 60ನೇ ಸಿನಿಮಾದಲ್ಲಿ ವಸಿಷ್ಠ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾ ಮೂಲಕ ತಮಿಳು ಚಿತ್ರೋದ್ಯಮಕ್ಕೆ ಅವರು ಅಧಿಕೃತವಾಗಿ ಕಾಲಿಡುತ್ತಿದ್ದಾರೆ. ಕನ್ನಡದ ಮತ್ತೋರ್ವ ಕಲಾವಿದ ಕಾಲಿವುಡ್ ಪ್ರವೇಶಿಸಿದಂತಾಗಿದೆ. ಈ ಸಿನಿಮಾ ‘ವೂಲ್ಫ್’ ಎಂದು ಹೆಸರಿಡಲಾಗಿದ್ದು, ಟೈಟಲ್ ಕೂಡ ನಿನ್ನೆಯಷ್ಟೇ ರಿವಿಲ್ ಆಗಿದೆ. ಇದನ್ನೂ ಓದಿ: ದುಬೈಗೆ ಹಾರಿದ ರಿಷಬ್ ಶೆಟ್ಟಿ ಫ್ಯಾಮಿಲಿ: ಶೆಟ್ರ ಅಡ್ವೆಂಚರ್ ಹೇಗಿದೆ ಗೊತ್ತಾ?
ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾವಾಗಿದ್ದು, ವಿನೂ ವೆಂಕಟೇಶ್ ಈ ಚಿತ್ರದ ನಿರ್ದೇಶಕರು. ವಿನೂ ಈ ಹಿಂದೆ ಲಕ್ಷ್ಮೀ ರೈ ನಟನೆಯ ಸಿಂಡರೆಲ್ಲಾ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದು ಅವರ ಚೊಚ್ಚಲ ಸಿನಿಮಾ ಕೂಡ ಆಗಿತ್ತು. ಮತ್ತೊಂದು ಅಚ್ಚರಿ ಸಂಗತಿ ಎಂದರೆ, ವೂಲ್ಫ್ ಸಿನಿಮಾ ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ.
ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದ್ದು, ಬೆಂಗಳೂರು, ಅಂಡಮಾನ್ ಮತ್ತು ನಿಕೋಬಾರ್ ಸೇರಿದಂತೆ ಹಲವಾರು ಕಡೆ ಚಿತ್ರೀಕರಣ ಮಾಡಲಾಗಿದೆ. ಅಂದುಕೊಂಡಂತೆ ಆಗಿದ್ದರೆ ಮಾರ್ಚ್ ವೇಳೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಲಕ್ಷ್ಮೀ ರೈ, ಅಂಜು ಕುರಿಯನ್ ಸೇರಿದಂತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿ ಇದೆ. ಇದೇ ಮೊದಲ ಬಾರಿಗೆ ಪ್ರಭುದೇವ್ ಜೊತೆ ವಸಿಷ್ಠ ಸಿಂಹ ತೆರೆ ಹಂಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]