ಕನ್ನಡಿಗ, ಬಹುಭಾಷಾ ನಟ ಪ್ರಭುದೇವ (Prabhudeva) ಅವರ ಅಜ್ಜಿ (Grand Mother) ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಜು.9ರಂದು ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ:ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಭುದೇವ ಅಜ್ಜಿ 97ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಜು.9ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೂರ ಗ್ರಾಮದಲ್ಲಿ ಅಜ್ಜಿ ನಿಧನರಾಗಿದ್ದಾರೆ. ದೂರ ಗ್ರಾಮದಲ್ಲಿ ಇಂದು (ಜು.10) ಸಂಜೆ ಅಜ್ಜಿ ಪುಟ್ಟಮ್ಮಣ್ಣಿ ಅಂತ್ಯಕ್ರಿಯೆ ನಡೆಯಲಿದೆ.
ಅಂದಹಾಗೆ, ಪುಟ್ಟಮ್ಮಣ್ಣಿ ಅವರು ಪ್ರಭುದೇವ ತಾಯಿ ಮಹಾದೇವಮ್ಮ ಅವರ ತಾಯಿ. ಅವರ ನಿಧನದಿಂದ ಕುಟುಂಬಕ್ಕೆ ಆಘಾತವಾಗಿದೆ.
ನಟ, ನಿರ್ದೇಶಕ ಪ್ರಭುದೇವ (Prabhudeva) ಮತ್ತು ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಬರೋಬ್ಬರಿ 25 ವರ್ಷಗಳ ನಂತರ ಒಂದಾಗಿ ಕೆಲಸ ಮಾಡಲಿದ್ದಾರೆ. ಎಆರ್.ಆರ್.ಪಿಡಿ 6 ಎನ್ನುವ ಹೆಸರಿನ ಚಿತ್ರದಲ್ಲಿ ಈ ಜೋಡಿ ಒಂದಾಗಿದ್ದಾರೆ. ಮನೋಜ್ ಎಂ.ಎಸ್ ನಿರ್ದೇಶನದ ಈ ಚಿತ್ರದ ಮೊದಲ ಪೋಸ್ಟರ್ ಕೂಡ ರಿಲೀಸ್ ಆಗಿದೆ.
ಈ ಕುರಿತಂತೆ ನಟ ಪ್ರಭುದೇವ ಕೂಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯೋಗಿ ಬಾಬು, ಅಜು ವರ್ಗೀಸ್, ಸಿಂಗಂ ಪುಲಿ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಅನೂಪ್ ಶೈಲಜಾ ಸಿನಿಮಾಟೋಗ್ರಫಿಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ರೇಮಂಡ್ ಡೆರಿಕ್ ಕ್ರಿಸ್ಟಾ ಅವರ ಸಂಕಲನ ಚಿತ್ರಕ್ಕಿದೆ.
ಜಂಟಲ್ ಮನ್ ಸಿನಿಮಾದಲ್ಲಿ ಈ ಜೋಡಿ ಒಂದಾಗಿತ್ತು. ಈ ಸಿನಿಮಾದ ಚಿಕ್ಕು ಬುಕ್ಕು ರೈಲೇ ಹಾಡು ಫೇಮಸ್ ಆಗಿತ್ತು. ಆನಂತರ ಈ ಜೋಡಿ ಮತ್ತೆ ಜೊತೆಯಾಲಿ ಕೆಲಸ ಮಾಡಲೇ ಇಲ್ಲ. ಈಗ ಮತ್ತೆ ಅಂಥದ್ದೊಂದು ಅವಕಾಶ ಒದಗಿ ಬಂದಿದೆ.
ಬಹುಭಾಷಾ ನಟ ಪ್ರಭುದೇವ (Actor Prabhudeva) ಅವರು ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಇಂದು (ಮಾ.21) ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದಾರೆ. ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಿಂಪಲ್ ಆಗಿ ಬಂದ ನಟ ಪ್ರಭುದೇವ ಕಂಡ ಅಭಿಮಾನಿಗಳು ಕೆಲಕಾಲ ದಂಗಾಗಿದ್ದಾರೆ.
ಯಾರಿಗೂ ತಿಳಿಯದಂತೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ ಪ್ರಭುದೇವ ಸಹಿ ಮಾಡಿ, ಫೋಟೋ ಕೊಟ್ಟು ತೆರಳಿದ್ದಾರೆ. ತಾಲ್ಲೂಕು ಕಚೇರಿ ಎದುರು ಕಾರ್‌ನಲ್ಲಿ ಇಳಿದ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದರು. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಫೋಟೊ ಕೊಟ್ಟು, ಸಹಿ ಮಾಡಿ ತೆರಳಿದ್ದಾರೆ.
ಇನ್ನೂ ಪ್ರಭುದೇವ (Prabhudeva) ಬರೋದರ ಕುರಿತು ಮೊದಲೇ ಅಧಿಕಾರಿಗಳಿಗೆ ಗೌಪ್ಯತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ ನಟ ಬರೋದನ್ನು ಕಾದು ಕುಳಿತಿದ್ದ ಕೆಲ ಅಭಿಮಾನಿಗಳು ಅವರ ಫೋಟೋ ತೆಗೆದುಕೊಂಡು ಖುಷಿಪಟ್ಟಿದ್ದಾರೆ. ಇನ್ನೂ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನಿ ಗಾಲ್ಫ್ ಕೋರ್ಸ್‌ನಲ್ಲಿ ದುಬಾರಿ ಬೆಲೆಯ ಐಷಾರಾಮಿ ವಿಲ್ಲಾ ಖರೀದಿ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ:ಮೊದಲ ಗರ್ಲ್‌ಫ್ರೆಂಡ್ ಬಗ್ಗೆ ರಿವೀಲ್ ಮಾಡಿದ ಟೈಗರ್ ಶ್ರಾಫ್
ನಟ ಪ್ರಭುದೇವ ಅವರು ಕನ್ನಡ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಶಿವಣ್ಣ- ಪ್ರಭುದೇವ ನಟನೆಯ ‘ಕರಟಕ ದಮನಕ’ ರಿಲೀಸ್ ಆಗಿತ್ತು. ಅಭಿಮಾನಿಗಳ ಮೆಚ್ಚುಗೆ ಪಡೆದಿತ್ತು.
ಖ್ಯಾತ ನಟ, ನಿರ್ದೇಶಕ, ಡಾನ್ಸರ್ ಪ್ರಭುದೇವ (Prabhudeva) ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಜೊತೆ ತೆರೆಹಂಚಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಕರಟಕ ದಮನಕ ಸಿನಿಮಾದಲ್ಲಿ ಅವರು ಶಿವಣ್ಣ ಜೊತೆ ನಟಿಸಿದ್ದಾರೆ. ಈ ಕುರಿತಂತೆ ಅವರು ಮಾತನಾಡಿದ್ದಾರೆ. ಅಂದು ಅಪ್ಪು (Puneeth) ಜೊತೆ ಡಾನ್ಸ್ ಮಾಡಿದ್ದೆ. ಇಂದು ಶಿವಣ್ಣ ಜೊತೆ ಡಾನ್ಸ್ ಮಾಡಿದ್ದು ಖುಷಿ ತಂದಿದೆ ಎಂದಿದ್ದಾರೆ. ಶಿವಣ್ಣ ಎನರ್ಜಿಗೆ ಫಿದಾ ಆಗಿದ್ದಾರೆ.
ಈಗಾಗಲೇ ಚಿತ್ರತಂಡ ಪ್ರಚಾರವನ್ನು ಆರಂಭಿಸಿದ್ದು ಕರಟಕ ದಮನಕ (Karataka Damanaka) ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ (Release)ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಶಿವರಾತ್ರಿಗೆ ಶಿವಣ್ಣನ ಚಿತ್ರದ ಅಬ್ಬರ ಕೇಳಿ ಬರಲಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಈ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.
ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಪೋಸ್ಟ್ ಮಾಡಿದ್ದರು.
ಇದೇ ಮೊದಲ ಬಾರಿಗೆ ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕರಟಕ ದಮನಕ (Karataka Damanaka) ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ (Release)ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಶಿವರಾತ್ರಿಗೆ ಶಿವಣ್ಣನ ಚಿತ್ರದ ಅಬ್ಬರ ಕೇಳಿ ಬರಲಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಈ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.
ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದರು.
ದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸಿದ್ದು ವಿಶೇಷ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivaraj Kumar) , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅಭಿನಯದ, ರಾಕ್ ಲೈನ್ ವೆಂಕಟೇಶ್ (Rock Line Venkatesh) ನಿರ್ಮಾಣದ ಹಾಗೂ ಯೋಗರಾಜ್ ಭಟ್ (Yogaraj Bhatt) ನಿರ್ದೇಶನದ ‘ಕರಟಕ ದಮನಕ’ (Karataka Damanaka) ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು.
ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು. ಇದನ್ನೂ ಓದಿ:ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್
ರಾಕ್ ಲೈನ್ ಪ್ರೊಡಕ್ಷನ್ಸ್ ನನ್ನ ಕುಟುಂಬವಿದಂತೆ. ಇನ್ನು ಯೋಗರಾಜ್ ಭಟ್ ಅವರ ಚಿತ್ರಗಳು ನನಗೆ ಇಷ್ಟ. ಅವರ ಎಷ್ಟೋ ಚಿತ್ರಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿದ್ದೇನೆ. ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಸಂತೋಷ. ಗೆಳೆಯ ಪ್ರಭುದೇವ ಹಾಗೂ ನಾನು ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದೇವೆ. ಈ ಚಿತ್ರದಲ್ಲೂ ನಾವಿಬ್ಬರು ಸ್ನೇಹಿತರಾಗಿಯೇ ನಟಿಸುತ್ತಿದ್ದೇವೆ ಎಂದು ಶಿವರಾಜಕುಮಾರ್ ತಿಳಿಸಿದರು.
ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ. ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.
ಪ್ರಭುದೇವ…ಕನ್ನಡದವರೇ ಆಗಿದ್ದರೂ ಕನ್ನಡಿಗರಿಗೆ ಬಲು ಅಪರೂಪ. ವಿಶ್ವಾದ್ಯಂತ ಹೆಸರು ಮಾಡಿರೋ ಡ್ಯಾನ್ಸ್ ಕಿಂಗ್ ಪ್ರಭುದೇವ (Prabhudeva) ಕೆಲ ತಿಂಗಳ ಹಿಂದೆ ವೀಕೇಂಡ್ ವಿತ್ ರಮೇಶ್ (Weekend With Ramesh) ಕಾರ್ಯಕ್ರಮದಲ್ಲಿ ಜೀವನತೆರೆದಿಟ್ಟಿದ್ರು. ಇದೀಗ ಅದೇ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲೂ ಕಾಣಿಸ್ಕೊಂಡು ಮಕ್ಕಳ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಭಾರತದ ಮೈಕಲ್ ಜಾಕ್ಸನ್…ಆಲ್‌ರೌಂಡರ್ ಪ್ರಭುದೇವ ಭಾರತೀಯ ಸಿನಿಮೋದ್ಯಮದ ಅದ್ಭುತ ಕಲಾವಿದ. ವಿಶ್ವವ್ಯಾಪಿ ಅಭಿಮಾನಿಗಳನ್ನ ಹೊಂದಿರೋ ಪ್ರಭುದೇವ ಇದೀಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಅತಿಥಿಯಾಗಿ ಆಗಮಿಸಿದ್ರು.
ಡಾನ್ಸ್ ಕಿಂಗ್ ಆಗಮನದಿಂದ ಡಿಕೆಡಿ ವೇದಿಕೆಯಲ್ಲಿ ಅದ್ದೂರಿ ಕಳೆ ಬಂದಿತ್ತು…ಸ್ಪರ್ಧಿಗಳೆಲ್ಲಾ ಅವರ ಆರಾಧ್ಯದೈವ ಪ್ರಭುದೇವ ಮುಂದೆ ಡಾನ್ಸ್ ಪ್ರದರ್ಶನ ಮಾಡಿ ಖುಷಿಯಿಂದ ಕುಣಿದ್ರು. ಓರ್ವ ಸ್ಪರ್ಧಿಯಂತೂ ಪ್ರಭುದೇವ ಆಶೀರ್ವಾದ ಸದಾ ತನ್ನೊಂದಿಗೆ ಇರಲೆಂದು ಕಾಲಿನ ಅಚ್ಚನ್ನೇ ಪಡೆದ. ಮಕ್ಕಳ ನೃತ್ಯವೆಂದ್ರೆ ಯಾರಿಗ್ ತಾನೇ ಇಷ್ಟವಿಲ್ಲ…ಹಾಗೇನೇ ಪ್ರಭುದೇವಾಗೂ ಇಷ್ಟ…ತಮ್ಮೆದುರು ಕುಣಿದ ಮಕ್ಕಳ ನೃತ್ಯಕ್ಕೆ ಮನಸೋತು ತಾವೂ ವೇದಿಕೆಗೆ ಹೋಗಿ ಕುಣಿದ್ರು. ಹೊಸ ಹೊಸ ಸ್ಟೆಪ್‌ಗಳ ಸೃಷ್ಟಿಕರ್ತ ಪ್ರಭುದೇವ. ಎಷ್ಟೋ ಹಾಡುಗಳು ಇಂದಿಗೂ ಎವರ್‌ಗ್ರೀನ್, ಅದರಲ್ಲೊಂದು ಚಂದಾರೇ ಹಾಡು…ಇದೇ ಹಾಡಿಗೆ ಪ್ರಭು , ಆ್ಯಂಕರ್ ಅನುಶ್ರೀ (Anushee) ಜೊತೆ ಹೆಜ್ಜೆ ಹಾಕಿದ್ರು. ಇದನ್ನೂ ಓದಿ:ಪವನ್ ಒಡೆಯರ್ ನಿರ್ದೇಶನದ ಬಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್
ಶಿವಣ್ಣ (Shivanna) ಹಾಗೂ ಪ್ರಭುದೇವ ಬೆಸ್ಟ್ ಫ್ರೆಂಡ್ಸ್. ಡಿಕೆಡಿ ಜಡ್ಜ್ ಆಗಿರೋ ಶಿವರಾಜ್‌ಕುಮಾರ್ (Shivarajkumar) ಜೊತೆಯೂ ಪ್ರಭುದೇವ ಸ್ಟೆಪ್ ಹಾಕಿದ್ರು. ಡ್ಯಾನ್ಸ್ ಕಿಂಗ್ ಸಿಗ್ನೇಚರ್ ಸ್ಟೆಪ್‌ನ್ನ ಇಡೀ ವೇದಿಕೆ ಮಾಡಿ ಖುಷಿ ಪಡ್ತು. ಭಾರತದಲ್ಲಿ ಡ್ಯಾನ್ಸ್ ಕಿಂಗ್‌ಗಳ ಕಿಂಗ್ ಅಂದ್ರೆ ಪ್ರಭುದೇವ, ಇಂಥಹ ಪ್ರಭುದೇವ ಆಗಮನದಿಂದ ಡಿಕೆಡಿ ವೇದಿಕೆ ಇನ್ನಷ್ಟು ರಂಗೇರಿದೆ. ಬ್ಯುಸಿ ಶೆಡ್ಯೂಲ್‌ನಲ್ಲೂ ಕನ್ನಡದ ಮೇಲಿನ ಪ್ರೀತಿಯಿಂದ ಪ್ರಭುದೇವ ಆಗಮನ ಇಂಟ್ರೆಸ್ಟಿಂಗ್.
ನಟ ಪ್ರಭುದೇವ (Prabhudeva) ಅವರು ಸೋಮವಾರ (ಜೂನ್ 12)ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Ghati Subramanya Temple) ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಭುದೇವ ನೋಡಲು ದೇವಾಲಯಕ್ಕೆ ಆಗಮಿಸಿದ್ದ ಭಕ್ತರು ಮುಗಿಬಿದ್ದಿದ್ದು, ಕೆಲ ಅಭಿಮಾನಿಗಳು ಪ್ರಭುದೇವ ಜೊತೆ ಸೆಲ್ಫಿ ಪೋಟೋ ತೆಗೆದುಕೊಂಡು ಖುಷಿಪಟ್ರು, ಬಳಿಕ ದೇವಾಲಯದ ವತಿಯಿಂದ ಪ್ರಭುದೇವ ಅವರಿಗೆ ಸನ್ಮಾನ ಮಾಡಲಾಯಿತು.
ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತಿಗಳಿಸಿರುವ ನಟ, ನಿರ್ದೇಶಕ, ಡಾನ್ಸರ್ ಪ್ರಭುದೇವ ಮತ್ತೆ ತಂದೆಯಾಗಿದ್ದಾರೆ. 50 ವರ್ಷದ ಪ್ರಭುದೇವ 3ನೇ ಬಾರಿಗೆ ತಂದೆಯಾಗಿದ್ದಾರೆ. ಪ್ರಭುದೇವ ಎರಡನೇ ಪತ್ನಿ ಹಿಮಾನಿ ಸಿಂಗ್ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪ್ರಭುದೇವ ಕುಟುಂಬಕ್ಕೆ ಮೊದಲ ಹೆಣ್ಣು ಮಗು ಆಗಮಿಸಿದ್ದು ಇಡೀ ಕುಟುಂಬ ಸಂಭ್ರಮದಲ್ಲಿದೆ. ಮೂರನೇ ಮಗು ಕಳೆದುಕೊಂಡಿದ್ದ ಪ್ರಭುದೇವ ಅವರಿಗೆ ಮಗಳು ಬೆಳಕಾಗಿ ಬಂದಿದ್ದಾಳೆ. ಇದನ್ನೂ ಓದಿ:ಬಾಲಿವುಡ್ ಚಿತ್ರಗಳ ಫ್ಲಾಪ್ ಬಳಿಕ ರಶ್ಮಿಕಾ ನಟನೆ 3ನೇ ಚಿತ್ರದ ಟೀಸರ್ ರಿಲೀಸ್
ಈ ಬಗ್ಗೆ ಸ್ವತಃ ಪ್ರಭುದೇವ ಅವರೇ ಅಧಿಕೃತಗೊಳಿಸಿದ್ದಾರೆ. ಎಸ್ ಇದು ನಿಜ. ನಾನು ಮತ್ತೆ ತಂದೆ ಆಗಿದ್ದೀನಿ 50ನೇ ವಯಸ್ಸಿಗೆ. ನನಗೆ ತುಂಬಾ ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಭುದೇವ ಅವರಿಗೆ ಈಗ ಮೂವರು ಮಕ್ಕಳು.
ಪ್ರಭುದೇವ 1995ರಲ್ಲಿ ರಾಮಲತಾ ಜೊತೆ ಮದುವೆಯಾದರು. ಪ್ರಭುದೇವ ಮತ್ತು ರಾಮಲತಾ ದಂಪತಿಗೆ ಮೂವರು ಮಕ್ಕಳು. ಮೊದಲ ಮಗ ವಿಶಾಲ್, 2ನೇ ಮಗ ರಿಷಿ ರಾಘವೇಂದ್ರ ದೇವ ಮತ್ತು ಅದಿತ್ ದೇವ. ಆದರೆ ಮೊದಲ ಮಗ ದುರದೃಷ್ಟವಶಾತ್ ವಿಶಾಲ್‌ನನ್ನು ಕಳೆದುಕೊಂಡರು ಪ್ರಭುದೇವ. ಪುಟ್ಟ ಬಾಲಕ ವಿಶಾಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ವಿಶಾಲ್ ನಿಧನದ ಮುಂಚೆ ಮೊದಲು 6 ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸಿ 2008ರಲ್ಲಿ ವಿಶಾಲ್ ಕೊನೆಯುಸಿರೆಳೆದರು. ಇದೀಗ ಪ್ರಭುದೇವ- ಹಿಮಾನಿ ಸಿಂಗ್ ದಂಪತಿಯ ಬದುಕಿಗೆ ಮುದ್ದು ಮಗಳ ಆಗಮನವಾಗಿದೆ. ಇದೇ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ವಿಶೇಷ ಸಲ್ಲಿಸಿದ್ದಾರೆ.
ನಟ, ನಿರ್ದೇಶಕ ಪ್ರಭುದೇವ (Prabhudeva) ಹೆಣ್ಣು ಮಗುವಿನ ತಂದೆಯಾಗಿದ್ದಾರೆ (Father). ಪ್ರಭುದೇವ ಅವರ ಎರಡನೇ ಪತ್ನಿ ಹಿಮಾನಿ ಸಿಂಗ್ ಗೆ ಇಂದು ಹೆರಿಗೆ ಆಗಿದ್ದು, ಈ ಮೂಲಕ 50 ವಯಸ್ಸಿನಲ್ಲಿ ಪ್ರಭುದೇವ ತಂದೆಯಾಗಿದ್ದಾರೆ. ಈವರೆಗೂ ಪ್ರಭುದೇವ ಅವರ ಮನೆಯಲ್ಲಿ ಹೆಣ್ಣು ಮಗು ಜನಿಸಿರಲಿಲ್ಲವಂತೆ ಹಾಗಾಗಿ ಸಹಜವಾಗಿಯೇ ಕುಟುಂಬಕ್ಕೆ ಸಂಭ್ರಮ ತಂದಿದೆ.
ಪ್ರಭುದೇವ ಮೊದಲ ಪತ್ನಿಯಿಂದ ಗಂಡು ಮಗು (Child) ಪಡೆದಿದ್ದರು. ಆದರೆ, ಮಗು ಅಕಾಲಿಕ ಮರಣಕ್ಕೆ ತುತ್ತಾಗಿತ್ತು. ಮೊದಲ ಪತ್ನಿ ಜೊತೆಗಿನ ಹೊಂದಾಣಿಕೆಯ ಕೊರತೆಯಿಂದಾಗಿ ಡಿವೋರ್ಸ್ ಪಡೆದರು. ಕೋವಿಡ್ ಸಂದರ್ಭದಲ್ಲಿ ವೃತ್ತಿಯಲ್ಲಿ ವೈದ್ಯಯಾಗಿರುವ ಹಿಮಾನಿ ಸಿಂಗ್ (Himani Singh) ಜೊತೆ ಡೇಟ್ ಮಾಡಿದ್ದರು. ಆನಂತರ ಗುಟ್ಟಾಗಿಯೇ ಮದುವೆಯಾಗಿದ್ದರು. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ
ಇತ್ತೀಚೆಗಷ್ಟೇ ಹಿಮಾನಿ ಸಿಂಗ್ ಜೊತೆ ಪ್ರಭುದೇವ ಮದುವೆ ಆಗಿರುವ ವಿಚಾರ ಬಹಿರಂಗವಾಗಿತ್ತು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದಿದ್ದ ಪ್ರಭುದೇವ ಎರಡನೇ ಮದುವೆ ವಿಚಾರವನ್ನು ಹಂಚಿಕೊಂಡಿದ್ದರು. ಹಿಮಾನಿ ಜೊತೆಗಿನ ಪರಿಚಯ, ಪ್ರೀತಿ-ಪ್ರೇಮ, ಮದುವೆ ಎಲ್ಲವನ್ನೂ ಜನರೆದುರು ತೆರೆದಿಟ್ಟಿದ್ದರು. ಇದೀಗ ಹಿಮಾನಿ ಮತ್ತು ಪ್ರಭುದೇವ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅವರು ಇದೀಗ ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಮೊದಲ ಬಾರಿಗೆ 2ನೇ ಪತ್ನಿ ಜೊತೆ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಕ್ಯಾರಾವ್ಯಾನ್ ಡ್ರೈವರ್ ಇದೀಗ ಹೀರೋ : ‘ಲಕ್’ ಮೇಲೆ ಲಕ್
ಕನ್ನಡದ ಪ್ರತಿಭೆ ಸ್ಟಾರ್ ನಟ ಪ್ರಭುದೇವ ಅವರು ಭಾರತೀಯ ಚಿತ್ರರಂಗದಲ್ಲಿ ಬೇಡಿಕೆ ಕಲಾವಿದರಲ್ಲಿ ಒಬ್ಬರಾಗಿದ್ದಾರೆ. ಸಿನಿಮಾ ರಂಗದಲ್ಲಿ ಅದೆಷ್ಟೇ ನೇಮು ಫೇಮು ಇದ್ದರೂ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಎಲ್ಲೂ ಕೂಡ ರಿವೀಲ್ ಮಾಡಿರಲಿಲ್ಲ. ಇತ್ತೀಚಿಗೆ ವೀಕೆಂಡ್ ವಿತ್ ರಮೇಶ್ (Weekend With Ramesh) ಕಾರ್ಯಕ್ರಮದಲ್ಲಿ ಪ್ರಭುದೇವ ಅವರ 2ನೇ ಮದುವೆ ಬಗ್ಗೆ ರಿವೀಲ್ ಆಗಿತ್ತು.
ಹಿಮಾನಿ ಸಿಂಗ್ (Himani Singh) ಎನ್ನುವ ವೈದ್ಯೆಯನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದರು. 2020ರಲ್ಲಿ ಇವರಿಬ್ಬರ ವಿವಾಹ ರಹಸ್ಯವಾಗಿ ನಡೆದಿತ್ತು. ಲಾಕ್‌ಡೌನ್‌ನಲ್ಲಿ ಈ ಮದುವೆ ನಡೆದ ಕಾರಣ ಈ ಮದುವೆ ರಹಸ್ಯವಾಗಿಯೇ ಉಳಿಯಿತು. ನಟ ಪ್ರಭುದೇವ ಅವರು ಪತ್ನಿ ಸಮೇತರಾಗಿ ಮೊದಲ ಬಾರಿಗೆ ತಿರುಪತಿ ಬಾಲಾಜಿ ದೇವಸ್ಥಾನಕ್ಕೆ (Balaji Temple) ಭೇಟಿ ಕೊಟ್ಟರು. ಪ್ರಭುದೇವ ಅವರ ತಮ್ಮ ಪತ್ನಿಯ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಜನಸಂದಣಿಗೆ ಇದ್ದಂತಹ ದೇವಸ್ಥಾನದಲ್ಲಿ ಪತ್ನಿಯ ಸುರಕ್ಷತೆಗಾಗಿ ಪತ್ನಿಯ ಕೈಯನ್ನು ಬಲವಾಗಿ ಹಿಡಿದುಕೊಂಡಿದ್ದರು. ಈ ಜೋಡಿಯ ಫೋಟೋ ವೈರಲ್ ಆಗಿದ್ದು, ಅವರಿಬ್ಬರನ್ನೂ ಜೊತೆಯಲ್ಲಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಅಂದಹಾಗೆ, ಪ್ರಭುದೇವ ಅವರು ರಮಾಲತಾ ಎಂಬುವವರನ್ನ ಮದುವೆಯಾಗಿದ್ದರು. ಈ ದಂಪತಿಗೆ 3ವರು ಮಕ್ಕಳಿದ್ದರು. ಮೊದಲ ಮಗ ವಿಶಾಲ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಬಳಿಕ ವೈಯಕ್ತಿಕ ಕಾರಣಗಳಿಂದ 2010ರಲ್ಲಿ 16 ವರ್ಷಗಳ ದಾಂಪತ್ಯ ಜೀವನಕ್ಕೆ ಡಿವೋರ್ಸ್ (Divorce) ಮೂಲಕ ಅಂತ್ಯ ಹಾಡಿದ್ದರು.