Tag: Prachar

  • ನಾನೂ ಕೂಡ ಶಿವಣ್ಣನ ಅಭಿಮಾನಿ : ಉಲ್ಟಾ ಹೊಡೆದ ಸಂಸದ ಸಿಂಹ

    ನಾನೂ ಕೂಡ ಶಿವಣ್ಣನ ಅಭಿಮಾನಿ : ಉಲ್ಟಾ ಹೊಡೆದ ಸಂಸದ ಸಿಂಹ

    ಟ ಶಿವರಾಜ್ ಕುಮಾರ್ ವಿರುದ್ಧ ನಿನ್ನೆಯಷ್ಟೇ ಪ್ರತಾಪ್ ಸಿಂಹ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದರು ಎನ್ನುವ ಕಾರಣಕ್ಕಾಗಿ ಪುನೀತ್ ರಾಜ್ ಕುಮಾರ್ ಹೆಸರನ್ನೂ ಅವರು ಎಳೆತಂದಿದ್ದರು. ಈ ನಡೆ ಡಾ.ರಾಜ್ ಕುಟುಂಬದ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಸ್ವತಃ ಶಿವರಾಜ್ ಕುಮಾರ್ ಕೂಡ ಪ್ರತಿಕ್ರಿಯಿಸಿದ್ದರು. ಇದೀಗ ಪ್ರತಾಪ್ ಸಿಂಹ ಮಾತು ಬದಲಾಯಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಂಹ, ‘ನನಗೆ ಡಾ.ರಾಜ್ ಕುಮಾರ್ ಕುಟುಂಬದ ಬಗ್ಗೆ ಗೌರವವಿದೆ. ನಾನೂ ಕೂಡ ಶಿವರಾಜ್ ಕುಮಾರ್ ಅಭಿಮಾನಿ. ಅವರ ಕುಟುಂಬವನ್ನು ನಾವು ರಾಜಕೀಯ ಹೊರತಾಗಿ ನೋಡುತ್ತೇವೆ. ಶಿವಣ್ಣ ಕೂಡ ಅದಕ್ಕೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಧನ್ಯವಾದಗಳನ್ನು ಹೇಳುತ್ತೇನೆ’ ಎಂದಿದ್ದಾರೆ.

    ಇದೇ ವಿಷಯವಾಗಿ ಶಿವರಾಜ್ ಕುಮಾರ್ ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದರು. ಪರೋಕ್ಷವಾಗಿಯೇ ಅಸಮಾಧಾನ ಹೊರಹಾಕಿದ್ದರು. ‘ಪ್ರತಾಪ್ ಸಿಂಹ ಮತ್ತು ಸೋಮಣ್ಣ ಇಬ್ಬರೂ ನನ್ನ ಆತ್ಮೀಯರು. ಹಾಗೆ ಹೇಳಬಾರದಿತ್ತು. ಅಲ್ಲದೇ, ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನನಗೆ ಗೊತ್ತೇ ಇರಲಿಲ್ಲ’ ಎಂದಿದ್ದರು. ಇದನ್ನೂ ಓದಿ:ಬಣ್ಣದ ಲೋಕಕ್ಕೆ ಡಾ ಬ್ರೋ- ‘ಡೇರ್ ಡೆವಿಲ್ ಮುಸ್ತಾಫಾ’ಗೆ ಬೆಂಬಲ

    ವರುಣಾ ಕ್ಷೇತ್ರದಲ್ಲಿ ನಿನ್ನೆ ಶಿವಣ್ಣ ಪ್ರಚಾರದಲ್ಲಿ ತೊಡಗಿದ್ದರ ಕುರಿತು ಪ್ರತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದಿದ್ದರು.

    ಕಳೆದ ಮೂರು ದಿನಗಳಿಂದ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ, ನಿಶ್ವಿಕಾ ನಾಯ್ಡು, ದುನಿಯಾ ವಿಜಯ್ ಸೇರಿದಂತೆ ಹಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

    ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.

  • ನಾಳೆ ಗದಗ ಜಿಲ್ಲೆಯಲ್ಲಿ ಕಿಚ್ಚ ಸುದೀಪ್ ಪ್ರಚಾರ

    ನಾಳೆ ಗದಗ ಜಿಲ್ಲೆಯಲ್ಲಿ ಕಿಚ್ಚ ಸುದೀಪ್ ಪ್ರಚಾರ

    ಳೆದ ಎರಡು ದಿನಗಳಿಂದ ಬಿಟ್ಟೂ ಬಿಡದೇ ಬಿಜೆಪಿ (BJP) ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ ಕಿಚ್ಚ (Kiccha) ಸುದೀಪ್. ಇಂದು ಹಾವೇರಿ ಜಿಲ್ಲೆಯ ಹಿರೇಕೆರೂರು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದರು. ಮೊನ್ನೆ ಚಿತ್ರದುರ್ಗ, ದಾವಣೆಗೆರೆ ಸೇರಿದಂತೆ ಐದು ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗಿದ್ದರು. ನಾಳೆ ಗದಗ (Gadag) ಜಿಲ್ಲೆಯ ಹಲವು ಕ್ಷೇತ್ರಗಳ ಪ್ರಚಾರದಲ್ಲಿ ತೊಡಗಲಿದ್ದಾರಂತೆ.

    ನೆಚ್ಚಿನ ನಟನನ್ನು ಬರಮಾಡಿಕೊಳ್ಳಲು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ, ಕಿಚ್ಚನ ಅಭಿಮಾನಿಗಳು ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಗದಗ ತುಂಬಾ ಕಿಚ್ಚನ ಕಟೌಟ್ ಮತ್ತು ಬ್ಯಾನರ್ಸ್ ರಾರಾಜಿಸುತ್ತಿವೆ. ಗದಗ ಬಿಜೆಪಿ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವು ಅಭ್ಯರ್ಥಿಗಳ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮೇಲಿನ ಪ್ರೀತಿಯಿಂದಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿರುವ ಸುದೀಪ್ (Sudeep), ಇನ್ನೂ ಐದಾರು ದಿನಗಳ ಕಾಲ ಇದೇ ಕೆಲಸದಲ್ಲಿ ನಿರತರಾಗಲಿದ್ದಾರೆ. ಅವರ ಜೊತೆ ನಿರ್ಮಾಪಕ ಜಾಕ್ ಮಂಜು ಪ್ರಯಾಣ ಬೆಳೆಸಿದ್ದಾರೆ. ಸುದೀಪ್ ಹೋದ ಕಡೆಗೆಲ್ಲ ಸಾವಿರ ಸಾವಿರ ಅಭಿಮಾನಿಗಳು ಸೇರುತ್ತಿದ್ದಾರೆ.

  • ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಟ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದು ಒಂದು ತಿಂಗಳು ಕಳೆದಿದೆ. ಅವರು ದೂರು ದಾಖಲಿಸಿ 25 ದಿನಕ್ಕೂ ಹೆಚ್ಚು ದಿನಗಳು ಉರುಳಿವೆ. ಪತ್ರ ಬರೆದವರ ಬೆನ್ನತ್ತಿರುವ ಸಿಸಿಬಿಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ, ತಮ್ಮ ಪ್ರಯತ್ನವನ್ನು ಅವರು ನಿಲ್ಲಿಸಿಲ್ಲ. ಈ ಕುರಿತು ಇದೇ ಮೊದಲ ಬಾರಿಗೆ ಕಿಚ್ಚು ಸುದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆ ಹೊರಡುತ್ತಿರುವ ಸಂದರ್ಭದಲ್ಲಿ ಬೆದರಿಕೆ ಪತ್ರದ ಬಗ್ಗೆ ಮಾತನಾಡಿದ್ದಾರೆ.

    ಬೆದರಿಕೆಯ ಪತ್ರದ (Threat letter) ಬಗ್ಗೆ ಮಾತನಾಡಿದ ಸುದೀಪ್, ‘ನಂಗೆ ತುಂಬಾ ಲವ್ ಲೇಟರ್ ಗಳು ಬರ್ತಾ ಇರ್ತಾವೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ’ ಎಂದು ಚುಟುಕಾಗಿ ಉತ್ತರಿಸಿದ್ದಾರೆ. ಈ ಮೂಲಕ ಪತ್ರ ಬರೆದವರ ಬಗ್ಗೆ ಕೇರ್ ಮಾಡುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಆ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ನನ್ನ ಪಾಡಿಗೆ ನಾನು ಇವತ್ತಿನಿಂದ ಪ್ರಚಾರಕ್ಕೆ ಹೋಗ್ತಾ ಇದೀನಿ’ ಎಂದಿದ್ದಾರೆ.

    ಇಂದಿನಿಂದ ಸುದೀಪ್ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ (Campaign) ಮಾಡುತ್ತಿದ್ದಾರೆ.  ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ.

    ಜಗಳೂರು (Jagaluru) ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ನಾಳೆ ಸುದೀಪ್ ಎಲ್ಲೆಲ್ಲಿ ಸಿಗ್ತಾರೆ? ಪ್ರಚಾರದ ರೂಟ್ ಮ್ಯಾಪ್ ರಿಲೀಸ್

    ಳೆದ ವಾರವಷ್ಟೇ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಶಿಗ್ಗಾಂವಿಗೆ ತೆರಳಿದ್ದ ನಟ ಕಿಚ್ಚ ಸುದೀಪ್ (Sudeep) ನಾಳೆ ಹಲವು ಊರುಗಳಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬೊಮ್ಮಾಯಿ ಮಾಮ ಸೂಚಿಸಿದ ಊರುಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದಿದ್ದ ಕಿಚ್ಚ ಕೊಟ್ಟ ಮಾತಿನಂತೆ ನಾಳೆಯಿಂದ ಭರ್ಜರಿ ಪ್ರಚಾರ (campaign) ಮಾಡಲಿದ್ದಾರೆ. ಕಿಚ್ಚನಿಗಾಗಿಯೇ ಹೆಲಿಕಾಪ್ಟರ್ ಸಿದ್ಧಗೊಂಡಿದೆ.

    ನಾಳೆ ಸುದೀಪ್ ಯಾವೆಲ್ಲ ಊರಿಗೆ ಹೋಗಬೇಕು ಮತ್ತು ಯಾರ ಪರವಾಗಿ ಪ್ರಚಾರ ಮಾಡಬೇಕು ಎನ್ನುವುದರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಬೆಂಗಳೂರಿನಿಂದ ಹೊರಡುವ ಕಿಚ್ಚ, ನಾಳೆಯೇ ಐದು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು (Molakalmuru) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು (Jagaluru) ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ. ಇದನ್ನೂ ಓದಿ:ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಜಗಳೂರು ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

    ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

    ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿನ್ನೆಯಷ್ಟೇ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನದ ಕಲೆಕ್ಷನ್ 35 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಸಹಿಸಲಾಗದ ಕೆಲವರು ಸಿನಿಮಾದ ಬಗ್ಗೆ ಅಪಪ್ರಚಾರ ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಕಾಮೆಂಟ್ ಮಾಡುತ್ತಿದ್ದಾರೆ. ಹಾಗಾಗಿ ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ.

    ಸುದೀಪ್ ಸಿನಿಮಾಗಳು ರಿಲೀಸ್ ಆದಾಗ ಇಂತಹ ಅಪಪ್ರಚಾರ ನಡೆಯುತ್ತಲೇ ಬಂದಿದೆ. ಪೈಲ್ವಾನ್ ಸಿನಿಮಾ ರಿಲೀಸ್ ಆದಾಗ ಅದನ್ನು ಪೈರಸಿ ಕೂಡ ಮಾಡಲಾಗಿತ್ತು. ಪೈರಸಿ ಮಾಡಿ, ಹಂಚಿದವನನ್ನು ಅರೆಸ್ಟ್ ಮಾಡಿದಾಗ, ಆತ ಕನ್ನಡದ ಮತ್ತೋರ್ವ ನಟನ ಅಭಿಮಾನಿ ಎಂದು ಗುರುತಿಸಲಾಗಿತ್ತು. ಇದೇ ವಿಚಾರವಾಗಿ ಆ ನಟನ ಅಭಿಮಾನಿಗಳು ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ಜಗಳ ಶುರುವಾಗಿತ್ತು. ಈಗ ಮತ್ತದೇ ವಾತಾವರಣ ಉಂಟಾಗಿದೆ. ಇದನ್ನೂ ಓದಿ:ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿಗೆ ಸೀರೆ ಉಡೋದು ಕಷ್ಟವಂತೆ

    ಕೆಲ ಕಿಡಿಗೇಡಿಗಳು ವಿಕ್ರಾಂತ್ ರೋಣ ಚೆನ್ನಾಗಿಲ್ಲ, ಅದೊಂದು ಡಬ್ಬಾ ಸಿನಿಮಾ ಹೀಗೆ ನಾನಾ ರೀತಿಯ ಗಾಸಿಪ್ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ವಿಮರ್ಶೆಯ ಹೆಸರಿನಲ್ಲಿ ಸಿನಿಮಾ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡಿ, ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ ಶುರುವಾಗಿದೆ. ಅಂತಹ ನೆಗೆಟಿವ್ ಮಾಡುವವರ ವಿರುದ್ಧ ಕಿಚ್ಚನ ಅಭಿಮಾನಿಗಳು ಕೂಡ ಗರಂ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]