Tag: Pragati Shetty

  • ಪತಿ ರಿಷಬ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಪತ್ನಿ ಕೊಟ್ಟ ಗಿಫ್ಟ್ : ಭಾವುಕರಾದ ಫ್ಯಾನ್ಸ್

    ಪತಿ ರಿಷಬ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಪತ್ನಿ ಕೊಟ್ಟ ಗಿಫ್ಟ್ : ಭಾವುಕರಾದ ಫ್ಯಾನ್ಸ್

    ಟ, ನಿರ್ಮಾಪಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ತಮ್ಮ ಹುಟ್ಟುಹಬ್ಬವನ್ನು (Birthday) ನಿನ್ನೆ ಬೆಂಗಳೂರಿನ ನಂದಿಲಿಂಕ್ ಗ್ರೌಂಡ್ಸ್ ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಕಂಡು ರಿಷಬ್ ಶೆಟ್ಟಿ ಭಾವುಕರಾದರು.

    ನನ್ನಂತ ಸಣ್ಣ ಹಳ್ಳಿಯಿಂದ ಬಂದ ಮಧ್ಯಮ ಕುಟುಂಬದ ಹುಡುಗ ಸಿನಿಮಾ ಕನಸು ಕಂಡು ನಿಮ್ಮ ಮನದಲ್ಲಿ ಜಾಗ ಮಾಡಿಕೊಳ್ಳಬಹುದೆಂದು ನೀವು ಸಾಬೀತುಪಡಿಸಿದ್ದೀರಾ.  “ಕಾಂತಾರ” ಸಿನಿಮಾಕ್ಕೆ ಕನ್ನಡಿಗರು ತೋರಿಸಿದ ಪ್ರೀತಿಯಿಂದ ಇವತ್ತು ಅದು ಜಗತ್ತಿನ ಸಿನಿಮಾವಾಗಿದೆ, ಅದ್ದರಿಂದ ನಿಮ್ಮನ್ನು ಭೇಟಿಯಾಗಿ  ಕೃತಜ್ಞತೆ ಸಲ್ಲಿಸಬೇಕೆಂದು ಬಹಳ ದಿನಗಳಿಂದ ಕಾಯುತ್ತಿದ್ದೆ, ಆ ದಿನ ಇವತ್ತು ನನ್ನ ಹುಟ್ಟುಹಬ್ಬದ ಮೂಲಕ ಒದಗಿ ಬಂದಿದೆ. ಮಳೆ ಬಂದರು ತಾವೆಲ್ಲ ಇಲ್ಲಿಗೆ ಬಂದು ತೋರಿಸುತ್ತಿರುವ  ಪ್ರಿತಿಯ ಋಣವನ್ನು ನಾನು ಸಾಯುವವರೆಗೂ ನನ್ನ ಸಿನಿಮಾ ಮತ್ತು ಕೆಲಸದ ಮೂಲಕ ತೀರುಸುತ್ತಲೆ ಇರುತ್ತೇನೆ ಎಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಭಾವುಕರಾಗಿ ರಿಷಬ್ ಶೆಟ್ಟಿ ನುಡಿದರು. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಈ ಕಾರ್ಯಕ್ರಮವನ್ನು ಅಯೋಜಿಸಿದ ಅಭಿಮಾನಿಗಳಿಗೆ, ಸ್ನೇಹಿತರಿಗೆ, ತಮ್ಮ ಮಡದಿ ಪ್ರಗತಿ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿಗೆ ಅವರಿಗೆ ರಿಷಬ್ ಶೆಟ್ಟಿ ಧನ್ಯವಾದ ತಿಳಿಸಿದರು. ರಿಷಬ್ ಶೆಟ್ಟಿ ಸ್ನೇಹಿತ ಪ್ರಮೋದ್ ಶೆಟ್ಟಿ ಮಾತನಾಡುತ್ತಾ,  ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಜವಾಬ್ದಾರಿಯನ್ನು ರಿಷಬ್ ವಹಿಸುತ್ತಿದ್ದರು, ಆದರೆ ಯಾರಿಗೂ ಬಹಿರಂಗ ಪಡಿಸಿರಲಿಲ್ಲ’ ಎಂದು ರಿಷಬ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ವಿವರಣೆ ನೀಡಿದರು.

    ಯಾವುದೇ ಉಡಗೊರೆಯನ್ನ ಇಷ್ಟ ಪಡದ ತಮ್ಮ ಗಂಡನಿಗೆ, ಹುಟ್ಟುಹಬ್ಬದ ಉಡುಗೊರೆಯಾಗಿ  ‘ರಿಷಬ್ ಶೆಟ್ಟಿ ಫೌಂಡೇಶನ್’ ಎಂಬ ಶಿಕ್ಷಣ ಕ್ಷೇತ್ರಕ್ಕೆ ಸಹಾಯ ನೀಡುವ ಸಂಸ್ಥೆಯನ್ನು ರಿಷಬ್ ಅವರ ಹುಟ್ಟುಹಬ್ಬದ ದಿನದಿಂದಲೇ ಆರಂಭಿಸುವುದಾಗಿ ಪ್ರಗತಿ ರಿಷಬ್  ಶೆಟ್ಟಿ (Pragati Shetty) ತಿಳಿಸಿದರು.

    ಕರ್ನಾಟಕವಲ್ಲದೆ ಬೇರೆ ರಾಜ್ಯಗಳಿಂದಲೂ ರಿಷಬ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮಳೆಯನ್ನ ಲೆಕ್ಕಿಸದೆ ಆಗಮಿಸಿದ್ದರು. ಎಲ್ಲಾ ನಟರ ಅಭಿಮಾನಿಗಳು  ರಿಷಬ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಹುಲಿ ವೇಷ ಮತ್ತು ಚಂಡೆ ಕಾರ್ಯಕ್ರಮ ಸಮಾರಂಭದ ಮೆರಗನ್ನು ಮತ್ತಷ್ಟು ಹೆಚ್ಚಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ

    ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ

    ಕಾಂತಾರ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಸಮೇತ ಅಮೆರಿಕಾದ ವಾಷಿಂಗ್ಟನ್ (Washington) ನ ಸಿಯಾಟಲ್‌ ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ (Vishwa Shrestha Kannadiga) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ (Rishab Shetty) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಹಾಟ್‌ ಆಗಿ ಕಾಣಿಸಿಕೊಂಡ ‘ಕೆಜಿಎಫ್‌’ ನಟಿ

    ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೆರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

     

    ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ‘ಕಾಂತಾರ 2’ ಚಿತ್ರದಲ್ಲಿ ಪತ್ನಿಗೆ ರಿಷಬ್ ಅವಕಾಶ ಕೊಡ್ತಾರಾ?

    ‘ಕಾಂತಾರ 2’ ಚಿತ್ರದಲ್ಲಿ ಪತ್ನಿಗೆ ರಿಷಬ್ ಅವಕಾಶ ಕೊಡ್ತಾರಾ?

    ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದ ಕಾಂತಾರ (Kantara) ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ  (Rishabh Shetty) ಅವರ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಪಾತ್ರವೊಂದನ್ನು ನಿರ್ವಹಿಸಿದ್ದರು. ಅಲ್ಲದೇ, ಕಾಸ್ಟ್ಯೂಮ್ ಡಿಸೈನ್ ಕೂಡ ಮಾಡಿದ್ದರು. ಇದೀಗ ರಿಷಬ್ ಶೆಟ್ಟಿ ‘ಕಾಂತಾರ 2’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಪ್ರಗತಿ ನಟಿಸಲಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ ರಿಷಬ್ ಅಭಿಮಾನಿಗಳು.

    ಕಾಂತಾರ ಸಿನಿಮಾದಲ್ಲಿ ಪ್ರಗತಿ ರಾಣಿಯ ಪಾತ್ರ ಮಾಡಿದ್ದರು. ಕಾಂತಾರ ಚಿತ್ರ ಶುರುವಾಗುವುದೇ ರಾಜನೊಬ್ಬನ ಕಥೆಯಿಂದ. ಈ ರಾಜನ ಪತ್ನಿಯಾಗಿ ಪ್ರಗತಿ ನಟಿಸಿದ್ದರು. ಜೊತೆಗೆ ರಿಷಬ್ ಅವರ ಪುತ್ರ ಕೂಡ ಇದೇ ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಈ ವಿಷಯವನ್ನು ಪ್ರಗತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಫೋಟೋಗಳನ್ನೂ ಶೇರ್ ಮಾಡಿದ್ದಾರೆ. ಅವು ವೈರಲ್ ಕೂಡ ಆಗಿವೆ.

    ಕಾಂತಾರ ಸಿನಿಮಾದಲ್ಲಿನ ತಮ್ಮ ಪಾತ್ರದ ಫೋಟೋವನ್ನು ಪ್ರಗತಿ ಹಂಚಿಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳು ಶುಭ ಕೋರಿದ್ದಾರೆ. ನಮಗೆ ಗೊತ್ತೇ ಆಗಲಿಲ್ಲ ಎಂದೂ ಹಲವರು ಕಾಮೆಂಟ್ ಮಾಡಿದ್ದಾರೆ. ಜೊತೆಗೆ ಈ ಬಾರಿ ಯಾವ ಪಾತ್ರದಲ್ಲಿ ನಿಮ್ಮನ್ನು ನೋಡಬಹುದು ಎಂದೂ ಹಲವರು ಕೇಳಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ರಾಜಮನೆತನದ ಕಥೆಯನ್ನು ಹೇಳುವ ಮೂಲಕ ಕಾಂತಾರ ಶುರು ಮಾಡಿದ್ದರು ರಿಷಬ್. ಹಾಗಾಗಿ ಪತ್ನಿಗೆ ಪಾತ್ರ ನೀಡಿದ್ದರು. ಈ ಬಾರಿ ಯಾವ ರೀತಿಯಲ್ಲಿ ಕಥೆ ಶುರು ಮಾಡುತ್ತಾರೆ ಎನ್ನುವುದು ಸಸ್ಪನ್ಸ್‍. ಹಾಗಾಗಿ ಪತ್ನಿಗೆ ಪಾತ್ರ ಕೊಡುತ್ತಾರಾ? ಅಥವಾ ಬೇರೆ ಜವಾಬ್ದಾರಿಯನ್ನು ನೀಡುತ್ತಾರೆ ಎಂದು ಕಾದು ನೋಡಬೇಕು.

  • ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಕಾಂತಾರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಧರ್ಮಸ್ಥಳಕ್ಕೆ (Dharmasthala,) ಭೇಟಿ ನೀಡಿ ಮಂಜುನಾಥ ದರ್ಶನ ಪಡೆದಿದ್ದಾರೆ. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ರಿಷಬ್ ದಂಪತಿ, ಕೆಲ ಕಾಲ ಸಿನಿಮಾ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ಸಿನಿಮಾ ಮಾಡುವ ಮುನ್ನವೂ ರಿಷಬ್ ಇಲ್ಲಿಗೆ ಭೇಟಿ ನೀಡಿ ವೀರೇಂದ್ರ ಹೆಗ್ಗಡೆಯವರನ್ನು ಸಿನಿಮಾ ಕುರಿತು ಸಲಹೆ ಪಡೆದಿದ್ದರು. ಇದೀಗ ಮತ್ತೆ ಅವರನ್ನು ಭೇಟಿ ಮಾಡಿ, ಸಿನಿಮಾದ ಯಶಸ್ಸಿನ ಕುರಿತು ಖುಷಿಯನ್ನು ಹಂಚಿಕೊಂಡಿದ್ದಾರೆ.

    ಕಾಂತಾರ (Kantara) ಸಿನಿಮಾ ಆಗಲು ಪರೋಕ್ಷವಾಗಿ ವೀರೇಂದ್ರ ಹೆಗ್ಗಡೆಯವರೂ (Virendra Heggade) ಕಾರಣ ಎಂದು ಈ ಹಿಂದೆಯೇ ರಿಷಬ್ ಹೇಳಿದ್ದರು. ಈ ಚಿತ್ರಕ್ಕಾಗಿ ಹೆಗ್ಗಡೆ ಅವರು ಕೆಲವು ಸಲಹೆಗಳನ್ನೂ ನೀಡಿದ್ದರು ಎಂದೂ ತಿಳಿಸಿದ್ದರು. ಸಿನಿಮಾದ ಟ್ರೇಲರ್ ಬಿಡುಗಡೆ ಸೇರಿದಂತೆ ಹಲವು ಬಾರಿ ಈ ಕ್ಷೇತ್ರಕ್ಕೆ ರಿಷಬ್ ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ವೀರೇಂದ್ರ ಹೆಗ್ಗಡೆ ಅವರು ಕೂಡ ಕುಟುಂಬ ಸಮೇತ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದರು. ಮತ್ತು ಚಿತ್ರದ ಕುರಿತು ಮೆಚ್ಚುಗೆಯನ್ನೂ ಸೂಚಿಸಿದ್ದರು. ಹಾಗಾಗಿ ರಿಷಬ್ ಮತ್ತೆ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:ಅನುಪಮಾ ಗೌಡ ವಿರುದ್ಧ ಸಿಡಿದೆದ್ದ ರೂಪೇಶ್‌ ರಾಜಣ್ಣ

    ಕಾಂತಾರ ಸಿನಿಮಾ ರಿಲೀಸ್ ಆದ ಬಹುತೇಕ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅನೇಕ ಗಣ್ಯರು ಈ ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು. ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ಕಾಂತಾರ (Kantara) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿದ್ದರೆ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಹಾಗಾಗಿ ಈ ಗೆಲುವನ್ನು ಮತ್ತು ತಮ್ಮ ಸಾಧನೆಯನ್ನು ಪತ್ನಿಗೆ ಅರ್ಪಿಸಿದ್ದಾರೆ ರಿಷಬ್. ತಮ್ಮ ಸಾಧನೆಯ ಬೆನ್ನೆಲುಬಾಗಿ ನಿಂತಿರುವ ಪತ್ನಿಯ ಜೊತೆಗಿನ ಫೋಟೋ ಕೂಡ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪ್ರಗತಿ ಶೆಟ್ಟಿ (Pragati Shetty) ಅವರನ್ನು ಮೊದಲ ಬಾರಿಗೆ ಭೇಟಿಯಾದ ಫೋಟೋ ಮತ್ತು ಇಂದು ಕಾಂತಾರ ಸಕ್ಸಸ್ ವೇಳೆಯಲ್ಲಿ ವಿಮಾನದಲ್ಲಿ ಹಾರಾಟ ಮಾಡುತ್ತಿರುವ ಫೋಟೋ ಎರಡನ್ನೂ ಹಂಚಿಕೊಂಡಿರುವ ರಿಷಬ್, ತಮ್ಮ ಗೆಲುವಿಗೆ ಪ್ರಗತಿ ಕೂಡ ಕಾರಣವೆಂದು ಹೆಂಡತಿಯನ್ನು ಹಾಡಿ ಹೊಗಳಿದ್ದಾರೆ. ಪತ್ನಿಯ ಸಹಾಯವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ:ದಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಬಾಲಿವುಡ್ ನಲ್ಲಿ ಕಾಂತಾರ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸಿನಲ್ಲೂ (Box Office) ಕೂಡ ಅದು ಹಿಂದೆ ಬಿದ್ದಿಲ್ಲ. ಈವರೆಗೂ ಚಿತ್ರದಿಂದ ಅಂದಾಜು 50 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಲ್ಲೂ 45 ರಿಂದ 50 ಕೋಟಿ ಬಂದಿರಬಹುದು ಎನ್ನಲಾಗುತ್ತಿದೆ. ಆದರೆ, ನಿರ್ಮಾಪಕರಾಗಲಿ ಅಥವಾ ವಿತರಕರಾಗಲಿ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

    ಕನ್ನಡದಲ್ಲೂ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಹಂಚಿಕೊಂಡಿದೆ.

    ಇತ್ತೀಚೆಗಷ್ಟೇ ರಿಷಬ್ (Rishabh Shetty) ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]

  • ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ಬೆಂಗಳೂರು: ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಬೆಲ್ ಬಾಟಂ’ ಸಿನಿಮಾದ ಯಶಸ್ವಿನ ಸಂತಸದಲ್ಲಿದ್ದರು. ಈಗ ಯುಗಾದಿ ಹಬ್ಬದಲ್ಲೇ ಅವರ ಪತ್ನಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಈ ಮೂಲಕ ತಂದೆಯಾದ ಖುಷಿಯಲ್ಲಿ ರಿಷಬ್ ಶೆಟ್ಟಿ ಇದ್ದಾರೆ.

    ನಟ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರಿಗ ಗಂಡು ಮಗು ಜನಿಸಿದೆ. ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ರಿಷಬ್ ಶೆಟ್ಟಿ ಅವರು, “Yes…… it’s a Hero” ಎಂದು ಬರೆದ ಹುಡುಗನ ಎಮೋಜಿ ಹಾಕಿದ್ದಾರೆ. ಜೊತೆಗೆ ಆಸ್ಪತ್ರೆಯ ಬೆಡ್ ಮೇಲಿರುವ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ಸದ್ಯಕ್ಕೆ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಂ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿ ಕಾಣುತ್ತಿದೆ.