Tag: Pragya Thakur

  • ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

    ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

    ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣ (Malegaon Blast Case) ನನ್ನ ಜೀವನವನ್ನೇ ಹಾಳು ಮಾಡಿದೆ ಎಂದು ಬಿಜೆಪಿಯ (BJP) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ (Pragya Thakur) ಹೇಳಿದ್ದಾರೆ. ಎನ್‌ಐಎ ವಿಶೇಷ ನ್ಯಾಯಾಲಯ ಆರೋಪಗಳಿಂದ ಖುಲಾಸೆಗೊಳಿಸಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.

    ತೀರ್ಪು ಪ್ರಕಟವಾದಾಗ ಅವರು ನ್ಯಾಯಾಲಯದಲ್ಲಿದ್ದರು. ಈ ವೇಳೆ, ನ್ಯಾಯಾಲಯವನ್ನು ಉದ್ದೇಶಿಸಿ, ಈ ಹಿಂದೆ ತನಿಖೆಗಾಗಿ ನನ್ನನ್ನು ಕರೆಸಿ, ಬಂಧಿಸಿ, ಚಿತ್ರಹಿಂಸೆ ನೀಡಲಾಯಿತು. ಇದರಿಂದ ನನ್ನ ಇಡೀ ಜೀವನವೇ ಹಾಳಾಯ್ತು. ನಾನು ಸಾಧ್ವಿ ಜೀವನವನ್ನು ನಡೆಸುತ್ತಿದ್ದೆ. ಆದರೆ ನನ್ನನ್ನು ಆರೋಪಿಯನ್ನಾಗಿ ಮಾಡಲಾಯಿತು. ಪಿತೂರಿಯಿಂದ ಕೇಸರಿಯನ್ನೂ ದೂಷಿಸಿದರು. ಇಂದು ಕೇಸರಿ, ಹಿಂದುತ್ವ ಗೆದ್ದಿದೆ. ತಪ್ಪಿತಸ್ಥರನ್ನು ದೇವರು ಶಿಕ್ಷಿಸುತ್ತಾನೆ. ನಾನು ಸನ್ಯಾಸಿಯಾಗಿರುವುದರಿಂದ ನಾನು ಜೀವಂತವಾಗಿದ್ದೇನೆ ಎಂದರು. ಇದನ್ನೂ ಓದಿ: Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    ಈ ಹಿಂದೆ ಪ್ರಕರಣದಲ್ಲಿ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಲ್ಲಿ ತನಿಖೆಗೆ ಆದೇಶಿಸಿತ್ತು. ಆದರೆ ಅವರ ಆರೋಪಗಳನ್ನು ಸಾಭೀತುಪಡಿಸಲು ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ.

    ಸೆಪ್ಟೆಂಬರ್ 29, 2008 ರಂದು ನಡೆದ ಮಾಲೆಗಾಂವ್ ಸ್ಫೋಟ ಬೈಕ್‌ನಲ್ಲಿ ಅಳವಡಿಸಲಾದ ಸ್ಫೋಟಕಗಳಿಂದ ಸಂಭವಿಸಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಮುಂಬೈ ಭಯೋತ್ಪಾದನಾ ನಿಗ್ರಹ ದಳದ ತನಿಖೆಯ ಸಮಯದಲ್ಲಿ ಬೈಕ್‌ನ ಬಿಡಿ ಭಾಗಗಳನ್ನು ವಿಧಿವಿಜ್ಞಾನ ಪರೀಕ್ಷೆಗಳಿಗೆ ಕಳುಹಿಸಿ, ಎಂಜಿನ್ ಸಂಖ್ಯೆಯನ್ನು ಪುನಃಸ್ಥಾಪಿಸಿದ್ದವು. ಬೈಕ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅವರನ್ನು ಅ.23, 2008 ರಂದು ಬಂಧಿಸಲಾಗಿತ್ತು.‌ ಇದೀಗ ಪ್ರಜ್ಞಾ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇದನ್ನೂ ಓದಿ: ಭಯೋತ್ಪಾದಕರನ್ನು ಬೆಳೆಸಿದ ಕಾಂಗ್ರೆಸ್, ಹಿಂದೂ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ: ಯೋಗಿ

  • ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

    ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

    ಭೋಪಾಲ್: ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ (Pragya Thakur) ಅವರೊಂದಿಗೆ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ವೀಕ್ಷಿಸಿದ ಯುವತಿ (Woman) ಕೆಲವೇ ದಿನಗಳ ಬಳಿಕ ನಾಪತ್ತೆಯಾಗಿರುವ ಘಟನೆ ಮಧ್ಯ ಪ್ರದೇಶದಲ್ಲಿ (Madhya Pradesh) ನಡೆದಿದೆ.

    20 ವರ್ಷದ ಯುವತಿ ಮುಸ್ಲಿಂ ಯುವಕನೊಂದಿಗೆ ಓಡಿಹೋಗಿದ್ದಾಳೆಂದು ಆಕೆಯ ಕುಟುಂಬದವರು ಶಂಕಿಸಿದ್ದಾರೆ. ಆಕೆ ಮನೆಯಿಂದ 70,000 ರೂ. ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾಳೆ ಎಂದು ಆರೋಪಿಸಿದ್ದಾರೆ.

    ಈ ನಡುವೆ ಯುವತಿ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ನಾನು ವಯಸ್ಕಳಾಗಿದ್ದೇನೆ ಹಾಗೂ ತನಗೆ ಏನು ಮಾಡಬೇಕೆಂಬ ತಿಳುವಳಿಕೆ ಇದೆ ಎಂದು ಆಕೆ ವೀಡಿಯೋದಲ್ಲಿ ಹೇಳಿರುವುದು ಕಂಡುಬಂದಿದೆ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ಳನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿದ!

    ಈ ಹಿಂದೆಯೂ ಯುವತಿ ಒಂದು ಬಾರಿ ನಾಪತ್ತೆಯಾಗಿದ್ದಳು. ಆ ಸಂದರ್ಭ ಆಕೆಯ ಕುಟುಂಬ ಸಂಸದೆ ಪ್ರಜ್ಞಾ ಠಾಕೂರ್ ಅವರ ಸಹಾಯ ಕೋರಿತ್ತು. ಈ ಹಿನ್ನೆಲೆ ಪ್ರಜ್ಞಾ ಸಿಂಗ್ ಠಾಕೂರ್ ಮೇ 11 ರಂದು ಹಿಂದೂ ಯುವತಿಯರನ್ನು ಇಸ್ಲಾಂಗೆ ಪರಿವರ್ತಿಸುವ ವಿವಾದಿತ ಚಿತ್ರವಾಗಿರುವ ದಿ ಕೇರಳ ಸ್ಟೋರಿಯನ್ನು ವೀಕ್ಷಿಸಲು ಮಹಿಳೆಯರ ಗುಂಪೊಂದನ್ನು ಕರೆದುಕೊಂಡು ಹೋಗಿದ್ದರು. ಆ ಗುಂಪಿನಲ್ಲಿ ನಾಪತ್ತೆಯಾಗಿರುವ ಯುವತಿಯೂ ಸೇರಿದ್ದಳು. ಇದಾದ ಬಳಿಕ ಯುವತಿ ಮೇ 15 ರಂದು ಮತ್ತೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಎಚ್ಚರಗೊಂಡ ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಅವರು ಈ ಕೇಸ್‌ನಲ್ಲಿ ಸಹಕರಿಸಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ವರದಿಗಳ ಪ್ರಕಾರ ಯುವತಿಗೆ ನರ್ಸಿಂಗ್ ಶಾಲೆಯಲ್ಲಿ ಸ್ನೇಹಿತೆಯಾಗಿದ್ದಾಕೆಯ ಸಹೋದರ ಯೂಸುಫ್ ಖಾನ್ ಅವನೊಂದಿಗೆ ಓಡಿಹೋಗಿರುವುದಾಗಿ ಶಂಕಿಸಲಾಗಿದೆ. ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಮೊದಲೇ ಹಲ್ಲೆ, ಕಳ್ಳತನ, ಬೆಂಕಿ ಹಚ್ಚಿರುವಂತಹ ಕ್ರಿಮಿನಲ್ ಕೇಸ್‌ಗಳು ದಾಖಲಾಗಿವೆ.

    ಇದೀಗ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ಸಾಧ್ಯವಿರುವ ಎಲ್ಲಾ ವಿಧಾನಗಳಿಂದಲೂ ಆಕೆಯನ್ನು ಹುಡುಕುವ ಪ್ರಯತ್ನ ಮಾಡುತ್ತೇವೆ. ಆಕೆಯ ಹೇಳಿಕೆ ಆಧಾರದ ಮೇಲೆ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಥಳೀಯ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಬಾಜ್‌ಪೇಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

  • ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್

    ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್

    ನವದೆಹಲಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಬಿಜೆಪಿ (BJP) ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (Pragya Thakur) ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಕಟುವಾಗಿ ಟೀಕಿಸಿದ್ದಾರೆ.

    ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ನೀಡಿರುವ ಕೆಲವು ಹೇಳಿಕೆಗಳಿಗೆ ಪ್ರಜ್ಞಾ ಠಾಕೂರ್, ರಾಹುಲ್ ಅವರನ್ನು ದೇಶದಿಂದ ಹೊರಹಾಕಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿದೇಶಿ ಮಹಿಳೆಗೆ ಹುಟ್ಟಿದ ಮಗು ದೇಶಭಕ್ತನಾಗಲು ಸಾಧ್ಯವಿಲ್ಲ ಎಂಬ ಚಾಣಕ್ಯನ ಮಾತು ಸಾಬೀತಾಗಿದೆ. ರಾಹುಲ್ ವಿದೇಶಿ ನೆಲದಲ್ಲಿ ನೀಡಿರುವ ಹೇಳಿಕೆಗಳು ಇದನ್ನು ಸಾಬೀತುಪಡಿಸಿದೆ. ಈ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷನನ್ನು ದೇಶದಿಂದ ಹೊರ ಹಾಕಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉದ್ಘಾಟನೆಗೂ ಮುನ್ನವೇ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ರೈಲ್ವೆ ನಿಲ್ದಾಣ ಗಿನ್ನಿಸ್ ದಾಖಲೆ

    ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಾತನಾಡುವ ವೇಳೆ ಹೆಚ್ಚಾಗಿ ಎಲ್ಲಾ ಮೈಕ್‌ಗಳು ಮೌನವಾಗಿರುತ್ತವೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ ಎಂದು ಟೀಕಿಸಿ ರಾಹುಲ್ ಗಾಂಧಿ ಲಂಡನ್‌ನಲ್ಲಿ ಬ್ರಿಟಿಷ್ ಸಂಸದರಿಗೆ ತಿಳಿಸಿದ್ದರು.

    ಈ ಹಿನ್ನೆಲೆ ವಾಗ್ದಾಳಿ ನಡೆಸಿರುವ ಪ್ರಜ್ಞಾ ಠಾಕೂರ್, ನಿಮ್ಮ ತಾಯಿ (ಸೋನಿಯಾ ಗಾಂಧಿ) ಇಟಲಿಯಿಂದ ಬಂದವರಾಗಿರುವುದರಿAದ ನೀವು ಭಾರತದವರಲ್ಲ ಎಂದು ನಾವು ಭಾವಿಸಿದ್ದೇವೆ. ಕಾಂಗ್ರೆಸ್ ಅಸ್ತಿತ್ವ ಕೊನೆಗೊಳ್ಳುವ ಹಂತದಲ್ಲಿದೆ. ಈಗ ಅವರ ಮನಸ್ಸು ಕೂಡಾ ಭ್ರಷ್ಟವಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

  • ನಾನು ಕಬಡ್ಡಿಯಾಡಿದ್ದನ್ನು ರಾವಣರು ವೀಡಿಯೋ ಮಾಡಿದ್ದಾರೆ: ಪ್ರಜ್ಞಾ ಠಾಕೂರ್

    ನಾನು ಕಬಡ್ಡಿಯಾಡಿದ್ದನ್ನು ರಾವಣರು ವೀಡಿಯೋ ಮಾಡಿದ್ದಾರೆ: ಪ್ರಜ್ಞಾ ಠಾಕೂರ್

    ಭೋಪಾಲ್: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಮೈದಾನದಲ್ಲಿ ಕಬಡ್ಡಿ ಆಡುತ್ತಿರುವ ವೀಡಿಯೊವೊಂದು ವೈರಲ್ ಆಗಿತ್ತು. ಈ ವೀಡಿಯೋ ಮೂಲಕವಾಗಿ ಇದೀಗ ಪ್ರಜ್ಞಾ ಸಿಂಗ್ ಠಾಕೂರ್ ಸುದ್ದಿಯಾಗುತ್ತಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಬಡ್ಡಿ ಆಡಿರುವ ವೀಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡಿದವರು ರಾವಣರು. ದುರ್ಗಾ ಪೂಜೆಯ ವೇಳೆ ಆರತಿ ಬೆಳಗಲು ಹೋಗಿದ್ದೆ. ಮೈದಾನದಲ್ಲಿ ಆಟವಾಡುತ್ತಿದ್ದ ಕೆಲವು ಕ್ರೀಡಾಪಟುಗಳು ನನಗೆ ಕಬಡ್ಡಿ ಆಡುವಂತೆ ಕೇಳಿಕೊಂಡರು. ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಸಿಂಧಿಗಳಲ್ಲಿ ಯಾರೋ ರಾವಣನ ವ್ಯಕ್ತಿತ್ವದವರು ಇದ್ದಾರೆ. ಅವರು ನನ್ನನ್ನು ದೊಡ್ಡ ಶತ್ರುವಿನಂತೆ ನೋಡುತ್ತಿದ್ದಾರೆ. ದೇಶಭಕ್ತರು, ಕ್ರಾಂತಿಕಾರಿಗಳು, ನನ್ನ ರೀತಿಯ ಸಂತರೊಡನೆ ಸಂಘರ್ಷಕ್ಕಿಳಿದರೆ ನಿಮ್ಮ ವೃದ್ಧಾಪ್ಯ ಮತ್ತು ಮುಂದಿನ ಜನ್ಮವೂ ಹಾಳಾಗಿ ಹೋಗುತ್ತದೆ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಕಿಡಿ ಕಾರಿದ್ದಾರೆ. ಇದನ್ನೂ ಓದಿ:  ಗೋಮೂತ್ರದಿಂದ ನನ್ನ ಸ್ತನಕ್ಯಾನ್ಸರ್ ವಾಸಿಯಾಯ್ತು- ಸಾಧ್ವಿ ಪ್ರಜ್ಞಾಸಿಂಗ್

    ಪ್ರಜ್ಞಾ ಸಿಂಗ್  ಮಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿತ್ತು. ಸಾಕಷ್ಟು ಸಮಯದಿಂದ ವ್ಹೀಲ್ ಚೇರ್ ಮೇಲೆ ಕುಳಿತೇ ಸಂಚರಿಸುತ್ತಿದ್ದರು. ಆದರೆ ಮೈದಾನದಲ್ಲಿ ಅವರು ಕಬಡ್ಡಿ ಆಡುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಠಾಕೂರ್ ಕಬಡ್ಡಿ ಆಡುತ್ತಿರುವ ವೀಡಿಯೋ ನೋಡಿದವರು ಆಶ್ಚರ್ಯ ಹೊರಹಾಕಿದ್ದಾರೆ. ಜೈಲು ವಾಸದಿಂದ ತಪ್ಪಿಸಿಕೊಳ್ಳಲು ಅವರು ಅನಾರೋಗ್ಯದ ಕಾರಣವೊಡ್ಡಿದ್ದಾರೆ. ವೈದ್ಯಕೀಯ ಕಾರಣ ನೀಡಿ ಜಾಮೀನು ಪಡೆದಿದ್ದ ಪ್ರಜ್ಞಾ ಸಿಂಗ್ ಠಾಕೂರ್ ಕಬಡ್ಡಿ ಆಡುವಷ್ಟು ದೈಹಿಕವಾಗಿ ಫಿಟ್ ಇದ್ದಾರೆ ಎಂದ ಮೇಲೆ ಜಾಮೀನು ಪಡೆದಿದ್ದೇಕೆ? ಎಂದು ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ:   EXCLUSIVE: ಸಿನಿಮಾಗೂ ಸಿಗದೇ ಇರುವ ಪಬ್ಲಿಸಿಟಿ ರಿಲೀಸ್ ಆಗದ ದಿನ ಸಿಕ್ತು: ಕಿಚ್ಚ

  • ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ: ನಿತೀಶ್ ಕುಮಾರ್

    ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ: ನಿತೀಶ್ ಕುಮಾರ್

    ಪಾಟ್ನಾ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ ಎಂದು ಎನ್‍ಡಿಎ ಮೈತ್ರಿ ಪಕ್ಷದ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.

    ಬಿಹಾರದ ಪಾಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ರಾಜ್‍ಭವನ್‍ನಲ್ಲಿ ಮತದಾನ ಮಾಡಿ ಬಳಿಕ ಮಾತನಾಡಿದ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಪ್ರಜ್ಞಾಸಿಂಗ್ ಹೇಳಿಕೆ ಖಂಡನೀಯ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿರುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಆದರೆ ಪ್ರಜ್ಞಾಸಿಂಗ್ ವಿರುದ್ಧ ಬಿಜೆಪಿ ಕಠಿಣ ಕ್ರಮಕೈಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದವರು ಯಾರೇ ಆಗಿದ್ದರೂ ನಾವು ಸಹಿಸುವುದಿಲ್ಲ. ಸಾಧ್ವಿ ಪ್ರಜ್ಞಾಸಿಂಗ್ ಬಿಜೆಪಿ ನಾಯಕರು ಏನು ಕ್ರಮಕೈಗೊಳ್ಳಲಿದೆ ಎಂದು ಕಾದು ನೋಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ಸುದೀರ್ಘ ಚುನಾವಣೆಯನ್ನು ಬೇಸಿಗೆ ಕಾಲದಲ್ಲಿ ನಡೆಸುವುದು ಸೂಕ್ತವಲ್ಲ. ಚುನಾವಣೆ ನಡೆಸಲು ಇದು ಅನುಕೂಲಕರ ವಾತಾರಣವಲ್ಲ. ಫೆಬ್ರವರಿ-ಮಾರ್ಚ್ ಇಲ್ಲವೇ ಅಕ್ಟೋಬರ್-ನವೆಂಬರ್ ನಲ್ಲಿ ಎರಡರಿಂದ ಮೂರು ಹಂತಗಳಲ್ಲಿ ಚುನಾಚವಣೆ ನಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಬಿಜೆಪಿಯ ತುಮಕೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತರಾಜು ತಮ್ಮ ಫೇಸ್‍ಬುಕ್‍ನಲ್ಲಿ ನಾಥೂರಾಮ್ ಗೋಡ್ಸೆ ಅಪ್ರತಿಮ ದೇಶಭಕ್ತ ಎಂದು ಶುಕ್ರವಾರ ಪೋಸ್ಟ್ ಹಾಕಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಹನುಮಂತರಾಜು ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿ, ಆದೇಶ ಹೊರಡಿಸಿದ್ದರು.

  • ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

    ನ್ಯೂಸ್ 24 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ, ಸಾಧ್ವಿ ಪ್ರಜ್ಞಾಸಿಂಗ್ ಅವರು ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿದ್ದಾರೆ. ಈ ಮೂಲಕ ಬಾಪು ಅವರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು. ಇತ್ತ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರು, ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೆ ಹೊರತು ಭಾರತಕ್ಕಲ್ಲ ಎಂದು ಹೇಳಿದ್ದಾರೆ.

    ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ತಿಳಿಸಿದ್ದಾರೆ.

    ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

    10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖವಾಗಿ ಟಾರ್ಗೆಟ್ ಮಾಡಿದ್ದ ರಾಜೀವ್ ಗಾಂಧಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗೋಡ್ಸೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇತ್ತ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಟ್ವಿಟ್ಟರ್ ಖಾತೆಯಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರಿನ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಂ ಗೋಡ್ಸೆ ಈ ಚರ್ಚೆ ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

  • ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

    ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

    ಕಮಲ್ ಹಾಸನ್ ಹೇಳಿದ್ದೇನು?:
    ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

    ತಮಿಳುನಾಡಿನ ತಿರುಪ್ಪರಂಕುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಚಪ್ಪಲಿ ತೂರಿದ್ದಾರೆ. ಅದೃಷ್ಟವಶಾತ್ ಕಮಲ್ ಹಾಸನ್ ಇದ್ದ ವೇದಿಕೆಯವರೆಗೂ ಚಪ್ಪಲಿ ತೂರಿ ಬರದೇ ಅಲ್ಲೇ ಜನರ ಮೇಲೆ ಬಿದ್ದಿದೆ ಎಂದು ವರದಿಯಾಗಿತ್ತು.

    ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

    ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

  • ಪ್ರಜ್ಞಾಸಿಂಗ್ ಬಿಜೆಪಿಯ ರತ್ನ : ಮಾಯಾವತಿ

    ಪ್ರಜ್ಞಾಸಿಂಗ್ ಬಿಜೆಪಿಯ ರತ್ನ : ಮಾಯಾವತಿ

    – ಚುನಾವಣಾ ಆಯೋಗದ ವಿರುದ್ಧ ಕಿಡಿ

    ಲಕ್ನೋ: ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರನ್ನು ಬಿಜೆಪಿಯ ರತ್ನ ಎಂದು ಕರೆದು ವ್ಯಂಗ್ಯವಾಡಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ವಿರುದ್ಧ ಯಾಕೆ ಕ್ರಮಕೈಗೊಳ್ಳಲಿಲ್ಲ ಎಂದು ಮಾಯಾವತಿ ಅವರು ಟ್ವೀಟ್ ಮೂಲಕ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿವಾದಾತ್ಮಕ ಹೇಳಿಕೆಯಿಂದಾಗಿ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಚುನಾವಣಾ ಆಯೋಗವು ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದೆ.

    ಟ್ವೀಟ್‍ನಲ್ಲಿ ಏನಿದೆ?:
    ಮಹಾರಾಷ್ಟ್ರದ ಮಾಲೆಗಾಂವ್ ಸ್ಫೋಟ ಪ್ರಕರಣ ಆರೋಪಿ ಹಾಗೂ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು, ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಈಗ ಧರ್ಮಯುದ್ಧ ನಡೆಯುತ್ತಿದೆ ಎಂದು ಹೇಳಿದ್ದಾರೆ. ನಿರಂತರವಾಗಿ ಬಹಿರಂಗವಾಗುತ್ತಿರುವ ಆರ್‍ಎಸ್‍ಎಸ್ ಹಾಗೂ ಬಿಜೆಪಿಯ ಮುಖಗಳಿವು. ಬಿಜೆಪಿಯ ರತ್ನ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಚುನಾವಣಾ ಆಯೋಗವು ಕೇವಲ ನೋಟಿಸ್ ನೀಡುತ್ತಿದೆ. ನಾಮಪತ್ರವನ್ನು ಯಾಕೆ ರದ್ದು ಮಾಡುತ್ತಿಲ್ಲ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ 49 ವರ್ಷದವರಾಗಿದ್ದು, ಇತ್ತೀಚೆಗೆ ಬಿಜೆಪಿ ಸೇರಿಕೊಂಡಿದ್ದಾರೆ. ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

    ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಚುನಾವಣಾ ಆಯೋಗವು ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿತ್ತು. ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಕೋರುವುದಾಗಿ ತಿಳಿಸಿದ್ದರು.

    ಹೇಮಂತ್ ಕರ್ಕರೆ ಅವರ ಸಾವಿನ ಕುರಿತಾದ ಹೇಳಿಕೆ ಬೆನ್ನಲ್ಲೇ ಬಾಬರಿ ಮಸೀದಿ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಾಬರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ ನಾವು ಯಾಕೆ ವಿಷಾದ ವ್ಯಕ್ತಪಡಿಸಬೇಕು? ನಮಗೆ ಆ ಬಗ್ಗೆ ಹೆಮ್ಮೆ ಇದೆ. ಈ ಸುವರ್ಣ ಅವಕಾಶ ನೀಡಿದ್ದಕ್ಕೆ ದೇವರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಆ ಘಟನೆ ದೇಶದ ಸ್ವಾಭಿಮಾನವನ್ನು ಜಾಗೃತಗೊಳಿಸಿದೆ. ಬಾಬ್ರಿ ಮಸೀದಿಯ ತುದಿಗೆ ಏರಿ ಮಸೀದಿ ಕೆಡವಲು ನಾನೂ ನೆರವಾಗಿದ್ದೆ ಎಂದಿದ್ದರು. ಈ ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಈ ಮೂಲಕ ಚುನಾವಣಾ ಆಯೋಗವು ಒಟ್ಟು ಎರಡು ಬಾರಿ ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ನೋಟಿಸ್ ನೀಡಿದೆ.