Tag: Prajwal Pen Drive Case

  • ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

    ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

    – ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ
    – ಪೆನ್‌ಡ್ರೈವ್‌ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದ ವಕೀಲ

    ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ವಕೀಲ ದೇವರಾಜೇಗೌಡ ಭೇಟಿಯಾಗಿ ಪೆನ್‌ಡ್ರೈವ್‌ ಪ್ರಕರಣ (Pen Drive ) ಸಂಬಂಧ ಮಾತುಕತೆ ನಡೆಸಿದ್ದಾರೆ.

    ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ದೇವರಾಜೇಗೌಡ ಮೊದಲ ಬಾರಿಗೆ ಹೆಚ್‌ಡಿಕೆ (H.D.Kumaraswamy) ಭೇಟಿಯಾಗಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ – ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌

    ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ. ರೇವಣ್ಣ ವಿರುದ್ಧ ಅಲ್ಲ, ಬದಲಿಗೆ ಅವರ ಕೆಟ್ಟ ಗುಣಗಳ ವಿರುದ್ಧ ಹೋರಾಟ ಮಾಡಿದ್ದೆ. ಈಗ ರೇವಣ್ಣ ಅವರಿಗೂ ಪಶ್ಚತಾಪ ಆಗಿದೆ. ಸಾರ್ವಜನಿಕವಾಗಿ ಮರ್ಯಾದೆ ಹೋಗಿದೆ ಎಂದಿದ್ದಾರೆ. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ

    ಎಸ್‌ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಯಾರು ಪನ್‌ಡ್ರೈವ್ ಹಂಚಿಕೆ ಮಾಡಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಇದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಖಾಸಗಿ ತನಿಖೆಯೂ ಆಗಿದೆ, ಅದರಲ್ಲಿ ಪೆನ್‌ಡ್ರೈವ್ ಹಂಚಿಕೆಯಲ್ಲಿ ಯಾರ ಪಾತ್ರ ಇದೆ ಎಂದು ತಿಳಿದಿದೆ ಎಂದು ವಿವರಿಸಿದ್ದಾರೆ.

  • ಪೊಲೀಸರನ್ನೇ ಮುಂದಿಟ್ಟುಕೊಂಡು 25,000 ಪೆನ್‌ಡ್ರೈವ್‌ ಹಂಚಿದ್ದಾರೆ: ಹೆಚ್‌ಡಿಕೆ ಬಾಂಬ್‌

    ಪೊಲೀಸರನ್ನೇ ಮುಂದಿಟ್ಟುಕೊಂಡು 25,000 ಪೆನ್‌ಡ್ರೈವ್‌ ಹಂಚಿದ್ದಾರೆ: ಹೆಚ್‌ಡಿಕೆ ಬಾಂಬ್‌

    ಬೆಂಗಳೂರು: ಹಾಸನ (Hassan) ಜಿಲ್ಲೆ ಮಾತ್ರವಲ್ಲ, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳೂ ಸೇರಿದಂತೆ ರಾಜ್ಯಾದ್ಯಂತ 25,000 ಪೆನ್‌ಡ್ರೈವ್‌ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಬಾಂಬ್‌ ಸಿಡಿಸಿದ್ದಾರೆ.

    ಪ್ರಜ್ವಲ್‌ ಅಶ್ಲೀಲ ವೀಡಿಯೋ ಪ್ರಕರಣಕ್ಕೆ (Prajwal Pendrive Case) ಸಂಬಂಧಿಸಿದಂತೆ, ಪ್ರಮುಖ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಮೊದಲ ಹಂತದ ಚುನಾವಣೆ ನಡೆಯುವ ಮುನ್ನವೇ ಹಾಸನ ಮಾತ್ರವಲ್ಲ ರಾಜ್ಯಾದ್ಯಂತ 25,000 ಪೆನ್‌ಡ್ರೈವ್‌ಗಳನ್ನ ಹಂಚಿಕೆ ಮಾಡಿದ್ದಾರೆ. ಪೊಲೀಸರನ್ನೇ (Karnataka Police) ಮುಂದಿಟ್ಟುಕೊಂಡು, ಹೆದರಿಸಿ ಪೆನ್‌ಡ್ರೈವ್‌ಗಳನ್ನ ಹಂಚಿಕೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಪ್ರಕರಣದಿಂದ ಬಿಜೆಪಿಗೆ ಮುಜುಗರ ಆಗುತ್ತೆ ಅನ್ನೋದಾದ್ರೆ ನಮ್ಮ ವಿರೋಧವೇನಿಲ್ಲ: ಹೆಚ್‌ಡಿಕೆ

    ನಮ್ಮ ಅಭ್ಯರ್ಥಿಯ ಪೋಲಿಂಗ್‌ ಏಜೆಂಟ್‌ ಪೂರ್ಣಚಂದ್ರ ತೇಜಸ್ವಿ ಅವರು, ಹಾಸನದ ಸೆಂಟ್‌ ಪೊಲೀಸ್‌ ಠಾಣೆಯಲ್ಲಿ ನವೀನ್‌ ಗೌಡ, ಕಾರ್ತಿಕ್‌ ಗೌಡ, ಚೇತನ್‌, ಪುಟ್ಟಿ @ ಪುಟ್ಟರಾಜು ಅನ್ನುವವರ ವಿರುದ್ಧ ಏಪ್ರಿಲ್‌ 21ರಂದೇ ದೂರು ಕೊಟ್ಟಿದ್ದಾರೆ. ಆದ್ರೆ ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿ ಕಾರಿದ್ದಾರೆ.

    ಯಾರೇ ಆದರೂ ರಕ್ಷಿಸುವ ಮಾತೇ ಇಲ್ಲ:
    ಇದೇ ವೇಳೆ ಇಂತಹ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಸಂಬಂಧಿಕನಾಗಲಿ, ಯಾರೇ ಆಗಲಿ ರಕ್ಷಣೆ ಮಾಡುವ ಮಾತೇ ಇಲ್ಲ ಎಂದೂ ಸಹ ನುಡಿದಿದ್ದಾರೆ. ಇದನ್ನೂ ಓದಿ: ಡಿಸಿಎಂ ಡಿಕೆಶಿಯನ್ನು ಕೂಡಲೇ ಕ್ಯಾಬಿನೆಟ್‌ನಿಂದ ಕೈಬಿಡಬೇಕು : ಹೆಚ್‌ಡಿಕೆ ಆಗ್ರಹ

    ಡಿಕೆ ಶಿವಕುಮಾರ್ ಇತಿಹಾಸ ತೆಗೆದರೆ ಯಾವುದರಲ್ಲಿ ಎಕ್ಸ್‌ಪರ್ಟ್‌ ಅನ್ನೋದು ಎಲ್ಲರಿಗೆ ಗೊತ್ತಿದೆ. ರೇವಣ್ಣ ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ್ದಾರಾ? ಸತ್ಯ ಎಲ್ಲವೂ ಹೊರಗೆ ಬರಲಿ. ಪೆನ್ ಡ್ರೈವ್‌ ರಿಲೀಸ್‌ ಮಾಡಿದವರ ಬಗ್ಗೆ ಮುಖ್ಯಮಂತ್ರಿ ಇನ್ನೂ ಏನು ಮಾತನಾಡುತ್ತಿಲ್ಲ ಯಾಕೆ? ಡಿಕೆಶಿವಕುಮಾರ್ ಯಾವ ತರಹ ಬಂದಿದ್ದೀರ? ನಿನ್ನೆಯ ಮೊದಲು ಹೇಳಿಕೆ, ಅಮೇಲೆ ವಿಡಿಯೋ, ಬಳಿಕ ಬೈಟ್ ಕೊಟ್ಟಿದ್ದೀರಿ. ಡಿಕೆಶಿ ನಿಮ್ಮ ಮುಖ ನೋಡಿದ್ರೆ ಗೊತ್ತಾಗುತ್ತದೆ. ಬಾಲ ಸುಟ್ಟ ಬೆಕ್ಕಿನ ರೀತಿ ಡಿಕೆ ಶಿವಕುಮಾರ್ ಮುಖ ಆಗಿತ್ತು ಎಂದು ವ್ಯಂಗ್ಯವಾಡಿದರು.

     

  • ಪ್ರಜ್ವಲ್ ಪ್ರಕರಣದಿಂದ ಬಿಜೆಪಿಗೆ ಮುಜುಗರ ಆಗುತ್ತೆ ಅನ್ನೋದಾದ್ರೆ ನಮ್ಮ ವಿರೋಧವೇನಿಲ್ಲ: ಹೆಚ್‌ಡಿಕೆ

    ಪ್ರಜ್ವಲ್ ಪ್ರಕರಣದಿಂದ ಬಿಜೆಪಿಗೆ ಮುಜುಗರ ಆಗುತ್ತೆ ಅನ್ನೋದಾದ್ರೆ ನಮ್ಮ ವಿರೋಧವೇನಿಲ್ಲ: ಹೆಚ್‌ಡಿಕೆ

    – ಮೈತ್ರಿ ಇರುತ್ತೋ ಇಲ್ಲವೋ ಮುಂದೆ ನೋಡೋಣ
    – ಮೈತ್ರಿ ಮಾಡಿಕೊಂಡಿರೋದು ದೀರ್ಘ ಅವಧಿಗೆ ಎಂದ ಮಾಜಿ ಸಿಎಂ

    ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ (BJP JDS Alliance) ಆಗಿರೋದು ಸುದೀರ್ಘ ಅವಧಿಗೆ. ಈ ಪ್ರಕರಣದಿಂದ ಬಿಜೆಪಿ ಅವರಿಗೆ ಮುಜುಗರ ಆಗುತ್ತದೆ ಅನ್ನೋದಾದ್ರೆ, ಅವರು ತೀರ್ಮಾನ ಮಾಡಲಿ. ನಮ್ಮದೇನು ವಿರೋಧ ಇಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಪೆನ್‌ಡ್ರೈವ್ ಪ್ರಕರಣಕ್ಕೆ (Prajwal Pendrive Case) ಸಂಬಂಧಿಸಿದಂತೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಅವರು, ಮೈತ್ರಿ ಮುಂದುವರಿಸುವ ಬಗ್ಗೆ ಆರ್.ಅಶೋಕ್ ಹೇಳಿಕೆ ಪ್ರಸ್ತಾಪಿಸಿ ಮಾತನಾಡಿದರು. ಇದನ್ನೂ ಓದಿ: ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಮೊದಲ ವೋಟ್‌ ಮಾಡಿದ ವಿದ್ಯಾರ್ಥಿನಿ

    ರಾಷ್ಟ್ರೀಯ ಪಕ್ಷ ಅವರದ್ದು. ಅವರು ಏನ್ ತೀರ್ಮಾನ ಮಾಡ್ತಾರೋ ಮಾಡಲಿ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳೊಲ್ಲ. ಮೈತ್ರಿ ಇರೋತ್ತೋ ಇಲ್ಲವೋ ಮುಂದೆ ನೋಡೋಣ. ತನಿಖೆ ಆಗಿ ಸತ್ಯ ಹೊರಬರಲಿದೆ. ಮೈತ್ರಿ ಆಗಿರೋದು ದೀರ್ಘ ಅವಧಿಗೆ. ಈ ಪ್ರಕರಣದಿಂದ ಬಿಜೆಪಿ ಅವರಿಗೆ ಮುಜುಗರ ಆಗುತ್ತದೆ ಅನ್ನೋದಾದ್ರೆ, ಅವರು ತೀರ್ಮಾನ ಮಾಡಲಿ. ನಮ್ಮದೇನು ವಿರೋಧ ಇಲ್ಲ ಎಂದು ಹೇಳಿದ್ದಾರೆ.

    ಬಿಜೆಪಿ ಜೊತೆಗೆ ಮೈತ್ರಿ ಆಗಿದ್ದೇ ತಡೆಯೋಕೆ ಆಗ್ತಿಲ್ಲ. ಅದಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ನಮ್ಮ ಹೆಸರನ್ನ ಪದೇ ಪದೇ ಬಳಕೆ ಮಾಡಿಕೊಳ್ಳುತ್ತಿದ್ದರು, ಅದಕ್ಕೆ ನಾನೇ ಸ್ಟೇ ತಂದಿದ್ದೆ. ನಮ್ಮ ಒತ್ತಾಯ ಪಾರದರ್ಶಕ ತನಿಖೆ ಆಗಬೇಕು ಎಂಬುದು ಅಷ್ಟೇ. ಈ ಸರ್ಕಾರ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಅಂತ ರಾಜ್ಯಪಾಲರಿಗೂ ದೂರು ಕೊಡ್ತೀವಿ ಎಂದು ಅವರು ಹೇಳಿದ್ದಾರೆ.

    ಈ ಎಸ್‌ಐಟಿ ತನಿಖೆಯಿಂದ (SIT Investigation) ಸಂತ್ರಸ್ತರಾದ ಮಹಿಳೆಯರಿಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ(CBI) ನೀಡಬೇಕು. ಸಿಬಿಐಗೆ ನೀಡಲು ಸಾಧ್ಯವಾಗದೇ ಇದ್ದರೆ ನ್ಯಾಯಾಂಗ ತನಿಖೆ ನಡೆಸಬೇಕು. ಈ ತನಿಖೆ ಪೂರ್ಣಗೊಳ್ಳುವವರೆಗೂ ಡಿಕೆಶಿಯನ್ನು ಕ್ಯಾಬಿನೆಟ್‌ನಿಂದ ವಜಾಮಾಡಬೇಕು. ಈ ಪ್ರಕರಣವನ್ನು ನಾವು ಸುಲಭಕ್ಕೆ ಬಿಡುವುದಿಲ್ಲ. ತಪ್ಪು ಮಾಡಿರುವವರು ಶಿಕ್ಷೆ ಅನುಭವಿಸಲೇಬೇಕು ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಭರ್ಜರಿ ಪ್ರತಿಕ್ರಿಯೆ, ಕಲಬುರಗಿಯಲ್ಲಿ ಕಡಿಮೆ ಮತದಾನ : ಎಲ್ಲಿ ಎಷ್ಟು ವೋಟಿಂಗ್‌ ನಡೆದಿದೆ?

    ಡಿಕೆ ಶಿವಕುಮಾರ್ ಇತಿಹಾಸ ತೆಗೆದರೆ ಯಾವುದರಲ್ಲಿ ಎಕ್ಸ್‌ಪರ್ಟ್‌ ಅನ್ನೋದು ಎಲ್ಲರಿಗೆ ಗೊತ್ತಿದೆ. ರೇವಣ್ಣ ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ್ದಾರಾ? ಸತ್ಯ ಎಲ್ಲವೂ ಹೊರಗೆ ಬರಲಿ. ಪೆನ್ ಡ್ರೈವ್‌ ರಿಲೀಸ್‌ ಮಾಡಿದವರ ಬಗ್ಗೆ ಮುಖ್ಯಮಂತ್ರಿ ಇನ್ನೂ ಏನು ಮಾತನಾಡುತ್ತಿಲ್ಲ ಯಾಕೆ? ಡಿಕೆಶಿವಕುಮಾರ್ ಯಾವ ತರಹ ಬಂದಿದ್ದೀರ? ನಿನ್ನೆಯ ಮೊದಲು ಹೇಳಿಕೆ, ಅಮೇಲೆ ವಿಡಿಯೋ, ಬಳಿಕ ಬೈಟ್ ಕೊಟ್ಟಿದ್ದೀರಿ. ಡಿಕೆಶಿ ನಿಮ್ಮ ಮುಖ ನೋಡಿದ್ರೆ ಗೊತ್ತಾಗುತ್ತದೆ. ಬಾಲ ಸುಟ್ಟ ಬೆಕ್ಕಿನ ರೀತಿ ಡಿಕೆ ಶಿವಕುಮಾರ್ ಮುಖ ಆಗಿತ್ತು ಎಂದು ವ್ಯಂಗ್ಯವಾಡಿದರು.